Site icon Vistara News

Chamarajanagar Election Result 2024 : ಚಾಮರಾಜನಗರದಲ್ಲಿ ಸುನೀಲ್ ಬೋಸ್​ಗೆ ಗೆಲುವು

Chamarajanagar Election Result 2024

ಬೆಂಗಳೂರು: ಮೀಸಲು ಕ್ಷೇತ್ರವಾದ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಪಕ್ಷದ ಸುನೀಲ್​ ಬೋಸ್​​ (7,51,671 ಮತಗಳು) ಗೆಲುವು ಸಾಧಿಸಿದ್ದಾರೆ (Chamarajanagar Election Result 2024). ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಬಾಲರಾಜ್ (5,62,965 ಮತಗಳು)​ ವಿರುದ್ಧ 1,63,460ಮತಗಳ ಅಂತರದ ಅಂತರದ ವಿಜಯ ಸಾಧಿಸಿದ್ದಾರೆ.

ಸುನೀಲ್​ ಬೋಸ್​​ (ಕಾಂಗ್ರೆಸ್​​)- 7,51,671 ಮತಗಳು
ಎಸ್​ ಬಾಲರಾಜ್​ (ಬಿಜೆಪಿ)- 5,62,965 ಮತಗಳು
ಗೆಲುವಿನ ಅಂತರ-1,63,460

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ವಿ .ಶ್ರೀನಿವಾಸ್ ಪ್ರಸಾದ್ ಅವರು ಕಾಂಗ್ರೆಸ್​ನ ಆರ್. ಧ್ರುವನಾರಾಯಣ ಅವರನ್ನು 1,817 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.44.74ರಷ್ಟು ಮತಗಳನ್ನು ಪಡೆದಿತ್ತು.

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್​ನ ಆರ್.ಧ್ರುವನಾರಾಯಣ ಅವರು ಬಿಜೆಪಿಯ ಎ.ಆರ್.ಕೃಷ್ಣಮೂರ್ತಿ ಅವರನ್ನು 1,41,182 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ ಈ ಕ್ಷೇತ್ರದಲ್ಲಿ 50.11% ಮತಗಳನ್ನು ಗಳಿಸಿತ್ತು.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಆರ್.ಧ್ರುವನಾರಾಯಣ ಅವರು ಬಿಜೆಪಿಯ ಎ.ಆರ್.ಕೃಷ್ಣಮೂರ್ತಿ ಅವರನ್ನು 4,002 ಮತಗಳ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ 37.99% ಮತಗಳನ್ನು ಪಡೆದಿತ್ತು.

ರಾಜ್ಯದ ಮೂರನೇ ಅತಿದೊಡ್ಡ ಕ್ಷೇತ್ರ

ಚಾಮರಾಜನಗರ ಲೋಕಸಭಾ ಕ್ಷೇತ್ರವು (Chamarajanagar Lok Sabha Constituency) ಜನಸಂಖ್ಯೆಯ ದೃಷ್ಟಿಯಿಂದ ಜಿಲ್ಲೆಯು ರಾಜ್ಯದ ಮೂರನೇ ಅತಿದೊಡ್ಡ ಕ್ಷೇತ್ರ. ಈ ಜಿಲ್ಲೆಗೆ ಮೈಸೂರು ರಾಜ ಚಾಮರಾಜ ಒಡೆಯರ್ ಅವರ ಹೆಸರನ್ನು ಇಡಲಾಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರವು ಕರ್ನಾಟಕದ ದಕ್ಷಿಣ ಭಾಗದಲ್ಲಿದೆ ಮತ್ತು ಪ್ರಸ್ತುತ ಬಿಜೆಪಿಯ ದಿ. ವಿ ಶ್ರೀನಿವಾಸ್ ಪ್ರಸಾದ್ ಪ್ರತಿನಿಧಿಸುತ್ತಿದ್ದರು.

ಭಾರತದ ಚುನಾವಣಾ ಆಯೋಗದ ಪ್ರಕಾರ 2019 ರಲ್ಲಿ ಒಟ್ಟು ಮತದಾರರ ಸಂಖ್ಯೆ 16,86,333. ಕೊಳ್ಳೇಗಾಲದ ಮಾಜಿ ಶಾಸಕ ಎಸ್. ಬಾಲರಾಜ್ ಬಿಜೆಪಿಯಿಂದ ಹಾಗೂ ಸಚಿವ ಎಚ್.ಸಿ.ಮಹದೇವಪ್ಪ ಅವರ ಪುತ್ರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಕಾಂಗ್ರೆಸ್​​ನಿಂದ ಸ್ಪರ್ಧಿಸಲಿದ್ದಾರೆ.

ಇದನ್ನೂ ಓದಿ: Mandya Election Result 2024 : ಮಂಡ್ಯದಲ್ಲಿ ಕುಮಾರ ಸ್ವಾಮಿಗೆ ಭರ್ಜರಿ ಗೆಲುವು

ಚಾಮರಾಜನಗರ ಕ್ಷೇತ್ರವು ಮೈಸೂರು ರಾಜ್ಯದ ಭಾಗವಾಗಿತ್ತು. 1977 ರಿಂದ ಇದನ್ನು ಕರ್ನಾಟಕಕ್ಕೆ ಸೇರಿಸಲಾಗಿದೆ. ಈ ಕ್ಷೇತ್ರದಲ್ಲಿ ಈವರೆಗೆ ಒಟ್ಟು 17 ಚುನಾವಣೆಗಳು ನಡೆದಿದ್ದು, ಅದರಲ್ಲಿ ಕಾಂಗ್ರೆಸ್ 12 ಬಾರಿ ಗೆದ್ದಿದೆ. ಇದಲ್ಲದೆ, ಜನತಾದಳ ಎರಡು ಬಾರಿ ಗೆದ್ದಿದ್ದರೆ ಜೆಡಿಎಸ್ ಮತ್ತು ಜೆಡಿಯು ಅಭ್ಯರ್ಥಿಗಳು ತಲಾ ಒಂದು ಬಾರಿ ಗೆದ್ದಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೆಗ್ಗಡದೇವನಕೋಟೆ, ನಂಜನಗೂಡು, ವರುಣಾ, ಟಿ.ನರಸೀಪುರ, ಹನೂರು, ಕೊಳ್ಳೇಗಾಲ, ಚಾಮರಾಜನಗರ ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ 7 ಸ್ಥಾನಗಳು ಕಾಂಗ್ರೆಸ್, 1 ಜೆಡಿಎಸ್ ಪಾಲಾಗಿವೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಶ್ರೀನಿವಾಸ್​ ಪ್ರಸಾದ್ ಮೂಲಕ ಮೊದಲ ಬಾರಿಗೆ ಬಿಜೆಪಿ ಜಯಭೇರಿ ಬಾರಿಸಿತ್ತು. ಅದನ್ನು ಉಳಿಸಿಕೊಳ್ಳಲು ಎಲ್ಲ ರೀತಿಯಲ್ಲೂ ಸಜ್ಜಾಗಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೊಂದಿದೆ. ಜನತಾದಳವು ಮೊದಲು ಈ ಕಾಂಗ್ರೆಸ್ ಭದ್ರಕೋಟೆಯನ್ನು ಮುರಿದಿತ್ತು. 1999ರಲ್ಲಿ ಶ್ರೀನಿವಾಸ್ ಪ್ರಸಾದ್ ಜನತಾದಳ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ನಂತರ ಕಾಂಗ್ರೆಸ್ ನ ಆರ್.ಧ್ರುವನಾರಾಯಣ ಅವರು ಕ್ಷೇತ್ರವನ್ನು ಕಸಿದುಕೊಂಡಿದ್ದರು.

ಹೇಗಿದೆ ಮತದಾರರ ಸ್ಥಿತಿ

2011ರ ರ ಜನಗಣತಿಯ ಪ್ರಕಾರ ಚಾಮರಾಜನಗರವು 1020791 ಜನಸಂಖ್ಯೆಯನ್ನು ಹೊಂದಿತ್ತು. ಸರಾಸರಿ ಸಾಕ್ಷರತಾ ಪ್ರಮಾಣವು 61.43% – ಮಹಿಳೆಯರಲ್ಲಿ 54.92% ಮತ್ತು ಪುರುಷರಲ್ಲಿ 67.93% ಆಗಿತ್ತು. ಕ್ಷೇತ್ರದ ಒಟ್ಟು ಮತದಾರರಲ್ಲಿ ಸುಮಾರು 1436492 ಗ್ರಾಮೀಣ ಮತದಾರರು ಸುಮಾರು 85.1% ರಷ್ಟಿದ್ದಾರೆ. ಎಸ್ಸಿ ಮತ್ತು ಎಸ್ಟಿ ಮತದಾರರು ಕ್ರಮವಾಗಿ 25.2% ಮತ್ತು 13.9% ರಷ್ಟಿದ್ದಾರೆ.

Exit mobile version