ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ವಿರುದ್ಧ ಯಾವಾಗಲೂ ಕಿಡಿ ಕಾರುತ್ತಿದ್ದ ನಟ ಚೇತನ್ ಅಹಿಂಸಾ (Chetan Ahimsa), ಇದೀಗ ಮೋದಿಯವರ ಪರ ಸೋಶಿಯಲ್ ಮೀಡಿಯಾ (Social Media) ಪೋಸ್ಟ್ ಮಾಡಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಜೊತೆಗೆ, ವಿನೇಶ್ ಫೋಗಟ್ (Vinesh Phogat) ಪ್ರಕರಣದಲ್ಲಿ ಸಹನಟ ಪ್ರಕಾಶ್ ರೈ (Prakash raj) ನಿಲುವಿನ ವಿರುದ್ಧ ಕಿಡಿ ಕಾರಿದ್ದಾರೆ.
50 ಕಿಲೋಗಿಂತ 100 ಗ್ರಾಂ ತೂಕ ಹೆಚ್ಚಳವಾದ ಹಿನ್ನೆಲೆ ಪ್ಯಾರಿಸ್ ಒಲಿಂಪಿಕ್ಸ್-2024ರ ಫೈನಲ್ ಕುಸ್ತಿ ಪಂದ್ಯದಿಂದ ಹೊರ ಬಿದ್ದ ವಿನೇಶ್ ಫೋಗಟ್ ಪರ, ಮೋದಿ ವಿರುದ್ಧ ಪೋಸ್ಟ್ ಹಾಕಿದ್ದ ಪ್ರಕಾಶ್ ರೈ ನಡೆಯನ್ನು ಚೇತನ್ ಟೀಕಿಸಿದ್ದಾರೆ. ಅದರಲ್ಲೂ ಮೋದಿ ಪರ ನಿಂತ ಅಹಿಂಸಾ ಚೇತನ್ ನಿಲುವು ನೋಡಿ ತುಂಬಾ ಮಂದಿ ಅಚ್ಚರಿಪಟ್ಟಿದ್ದಾರೆ.
‘Prakash Rai— who blames Modi for every wrong under the sun— is ignorant & a bad activist’: Ahimsa Chetanhttps://t.co/jXfHV9pREl pic.twitter.com/Z5fAhlMq4X
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) August 8, 2024
ಸೋಶಿಯಲ್ ಮೀಡಿಯಾದಲ್ಲಿ ನಿನ್ನೆ ಪ್ರಕಾಶ್ ರಾಜ್ ಕಾರ್ಟೂನ್ ಶೇರ್ ಮಾಡಿಕೊಂಡಿದ್ದರು. ಇದರಲ್ಲಿ ಕುಸ್ತಿಪಟು ವಿನೇಶ್ ಫೋಗಟ್ ಅವರು ನಿಂತಿರುವ ತೂಕದ ಯಂತ್ರದ ಮೇಲೆ ನಿಂತಿದ್ದು, ಅವರ ಹಿಂಭಾಗದಲ್ಲಿ ಮತ್ತೊಬ್ಬರು ಕಾಲಿನ ಒಂದು ಬೆರಳನ್ನಿಟ್ಟು 100 ಗ್ರಾಮ್ ತೂಕ ಹೆಚ್ಚಾಗುವಂತೆ ಮಾಡಿದ್ದಾರೆ. ಹಿಂದಿರುವ ವ್ಯಕ್ತಿ ಪ್ರಧಾನಿ ಮೋದಿ ಎಂದು ಚಿತ್ರ ಸೂಚಿಸುವಂತಿದೆ. ಮೋದಿಯೇ ವಿನೇಶ್ ಫೋಗಟ್ ಕುಸ್ತಿ ಚಿನ್ನದ ಪದಕದಿಂದ ವಂಚಿತರಾಗಲು ಕಾರಣವಾಗಿದ್ದಾರೆ ಎಂದು ಅರ್ಥ ಬರುವಂತೆ ಈ ಟ್ವೀಟ್ ಶೇರ್ ಮಾಡಿದ್ದರು.
ಇದಕ್ಕೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಅಹಿಂಸಾ ಚೇತನ್ ಕಿಡಿಕಾರಿದ್ದಾರೆ. ʼವಿನೇಶ್ ಫೋಗಟ್ ಅನರ್ಹತೆಗೆ ಪ್ರಧಾನಿ ಮೋದಿ ಕಾರಣ ಎಂದು ಪ್ರಕಾಶ್ ರೈ ಪೋಸ್ಟ್ ಸಜೆಸ್ಟ್ ಮಾಡುತ್ತದೆ. ಇದು ಸಣ್ಣತನ. ಭಾರತದ ಎಲ್ಲಾ ಲಾಭಗಳಿಗೆ ಮೋದಿಯನ್ನು ಕುರುಡಾಗಿ ಹೊಗಳುವವರು ಹೇಗೆ ಅಜ್ಞಾನಿಗಳೋ, ಹಾಗೆಯೇ ಭಾರತದ ಎಲ್ಲಾ ಸಮಸ್ಯೆಗಳನ್ನು ಮೋದಿಯ ಮೇಲೆ ದೂಷಿಸುವ ರೈ ಅವರಂತಹವರೂ ಅಜ್ಞಾನಿಗಳಾಗಿದ್ದಾರೆ. ಪ್ರಕಾಶ್ ರೈ ಒಳ್ಳೆಯ ನಟ, ಆದರೆ ಕೆಟ್ಟ ಹೋರಾಟಗಾರʼ ಎಂದು ಟ್ವೀಟ್‌ನಲ್ಲಿ ಚೇತನ್ ಬರೆದಿದ್ದಾರೆ.
What do you think …. #justasking pic.twitter.com/Ttf7wDUGIo
— Prakash Raj (@prakashraaj) August 7, 2024
ಇಬ್ಬರು ನಟರ ಈ ಟ್ವೀಟ್ಟ್‌ಗಳು ಇದೀಗ ವೈರಲ್ ಆಗುತ್ತಿವೆ. ನೆಟ್ಟಿಗರು ಚೇತನ್ ಕಮೆಂಟ್ಗೂ ಪರ-ವಿರೋಧ ಕಮೆಂಟ್ ಮಾಡುತ್ತಿದ್ದಾರೆ. ಪ್ರಕಾಶ್ ರಾಜ್ ಕೆಟ್ಟ ಹೋರಾಟಗಾರ ಎನ್ನುವುದು ಸರಿಯಲ್ಲ ಎಂದಿದ್ದಾರೆ. ವಿನೇಶ್ ಫೋಗಟ್ ಅನರ್ಹತೆಗೆ ಪ್ರಕಾಶ್ ರಾಜ್ ಎಲ್ಲಿಯೂ ಮೋದಿ ಹೆಸರನ್ನು ಮೆನ್ಷನ್ ಮಾಡಿಲ್ಲ. ಆದರೆ ನೀವೇ ಮೋದಿ ಎಳೆದು ತಂದಿದ್ದೀರಿ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.
ಕುಸ್ತಿ ಪಂದ್ಯಾಟದ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ 100 ಗ್ರಾಮ್‌ಗಳ ಹೆಚ್ಚುವರಿ ತೂಕದಿಂದಾಗಿ ಪ್ಯಾರಿಸ್ ಒಲಿಂಪಿಕ್‌ನಲ್ಲಿ ಕುಸ್ತಿಪಟು ವಿನೇಶ್ ಫೋಗಟ್ ಪದಕ ಗೆಲ್ಲುವ ಅವಕಾಶವನ್ನು ಕಳೆದುಕೊಂಡಿದ್ದರು. ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿದ್ದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯಲ್ಲಿ ತಮ್ಮ ಅರ್ಧ ವರ್ಷದ ತರಬೇತಿಯನ್ನು ಕಳೆದುಕೊಂಡಿದ್ದ ವಿನೇಶ್, ತಮಗೆ ದೊರಕಿದ್ದ ಅತ್ಯಲ್ಪ ಸಮಯದಲ್ಲಿಯೇ ತರಬೇತಿ ಪಡೆದುಕೊಂಡು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದರು. ಜೊತೆಗೆ ದೇಶಕ್ಕಾಗಿ ಪದಕ ಗೆಲ್ಲುವ ಮಹದಾಸೆ ಇರಿಸಿಕೊಂಡಿದ್ದರು.
ಇದನ್ನೂ ಓದಿ: Prakash Raj: ವಿನೇಶ್ ಫೋಗಟ್ ಅನರ್ಹತೆಗೆ ಮೋದಿ ಕಾರಣ ಎಂಬಂತೆ ಪ್ರಕಾಶ್ ರಾಜ್ ಪೋಸ್ಟ್; ಜನರಿಂದ ರೋಸ್ಟ್!