ಚಿಕ್ಕಬಳ್ಳಾಪುರ: ಇಲ್ಲಿನ ಶಾಸಕ ಪ್ರದೀಪ್ ಈಶ್ವರ್ ನಿವಾಸದ ಮೇಲೆ ಮಂಗಳವಾರ ರಾತ್ರಿ (ಜೂ4ರಂದು) ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಮನೆಗೆ ಹಾಕಲಾಗಿದ್ದ ಗಾಜುಗಳು ಪುಡಿಪುಡಿಯಾಗಿವೆ. ರಾಜಕೀಯ ದ್ವೇಷ ಹಿನ್ನೆಲೆಯಲ್ಲಿ ಕಿಡಿಗೇಡಿಗಳು ಈ ಕೃತ್ಯ ನಡೆಸಿರಬಹುದು ಎಂದು ಅಂದಾಜಿಸಲಾಗಿದೆ. ರಾಜಕೀಯ ವಿರೋಧಿಗಳ ವಿರುದ್ಧ ಭಯಂಕರ ಭಾಷಣ ಮಾಡುವ ಪ್ರದೀಪ್ ಈಶ್ವರ್ ವಿರುದ್ಧ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಕಲ್ಲು ಎಸೆದಿರಬಹುದು ಎಂದು ಹೇಳಲಾಗಿದೆ.
ಮಂಗಳವಾರ ಪ್ರಕಟವಾದ ಲೋಕ ಸಭಾ ಚುನಾವಣೆಯ ಫಲಿತಾಂಶದಲ್ಲಿ ಪ್ರದೀಪ್ ಈಶ್ವರ್ ಅವರ ರಾಜಕೀಯ ಪ್ರತಿಸ್ಪರ್ಧಿ ಡಾ. ಸುಧಾಕರ್ ಗೆಲುವ ಸಾಧಿಸಿದ್ದಾರೆ. ಆ ಬಳಿಕ ಸುಧಾಕರ್ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದರು. ಅಲ್ಲದೆ ಸುಧಾಕರ್ ಒಂದೇ ಒಂದು ಓಟ್ ರಕ್ಷಾ ರಾಮಯ್ಯ ಅವರಿಗಿಂತ ಹೆಚ್ಚು ಪಡೆದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿಕೆ ನೀಡಿದ್ದನ್ನು ಖಂಡಿಸಿದ್ದರು.
ರಾತ್ರಿ 10ರಿಂದ 11 ಗಂಟೆಯ ನಡುವೆ ಸುಧಾಕರ್ ಅವರ ಗೃಹಕಚೇರಿಯ ನಿವಾಸದ ಮೇಲೆ ಕಲ್ಲು ತೂರಾಟ ನಡೆದಿದೆ. ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿ ಅವರ ಗೃಹಕಚೇರಿ ಇದ್ದು ಅಲ್ಲಿಗೆ ಕಲ್ಲು ತೂರಲಾಗಿದೆ. ತಡರಾತ್ರಿ ಮನೆಯ ಹಿಂಭಾಗದ ಮೂಲಕ ಕಲ್ಲು ತೂರಾಟ ಮಾಡಿರುವ ಕಿಡಿಗೇಡಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.
ಕಲ್ಲುಗಳ ಆಘಾತಕ್ಕೆ ಹಿಂಭಾಗದಲ್ಲಿರುವ ಬೃಹತ್ ಗಾತ್ರದ ಕಿಟಕಿಯ ಗಾಜು ಪುಡಿ ಪುಡಿಯಾಗಿದೆ. ಘಟನೆ ವರದಿಯಾದ ಬಳಿಕ ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುಧಾಕರ್ ಭರ್ಜರಿ ಗೆಲುವು; ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ ಘೋಷಣೆ?
ಚಿಕ್ಕಬಳ್ಳಾಪುರ: ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಡಾ.ಕೆ.ಸುಧಾಕರ್ ಭರ್ಜರಿ ಗೆಲುವು ದಾಖಲಿಸಿದ್ದರಿಂದ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರ ರಾಜೀನಾಮೆಗೆ ಒತ್ತಾಯ ಕೇಳಿಬಂದಿದೆ. ಈ ಹಿಂದೆ ಚುನಾವಣೆ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಒಂದು ಮತದ ಲೀಡ್‌ನಿಂದ (Karnataka election results 2024) ಗೆದ್ದರೂ ರಾಜೀನಾಮೆ ನೀಡುವುದಾಗಿ ಶಾಸಕ ಪ್ರದೀಪ್ ಈಶ್ವರ್ ಸವಾಲು ಹಾಕಿದ್ದರು. ಹೀಗಾಗಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ (Chikballapur Election Result 2024) ಬಿಜೆಪಿಯ ಡಾ.ಕೆ. ಸುಧಾಕರ್ (Dr K Sudhakar) ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ 1,62,099 ಮತಗಳ ಅಂತರದಿಂದ ಜಯಭೇರಿ ಮೊಳಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಮಾಜಿ ಸಚಿವ ಸುಧಾಕರ್ ಅವರು ಈ ಬಾರಿ ಲೋಕಸಭಾ ಟಿಕೆಟ್ ಪಡೆದು ಗೆದ್ದು ಬೀಗಿದ್ದಾರೆ. ಹೀಗಾಗಿ ಶಾಸಕ ಪ್ರದೀಪ್ ಈಶ್ವರ್ ಈ ಹಿಂದೆ ಹೇಳಿದ್ದ ಮಾತುಗಳನ್ನು ಉಲ್ಲೇಖಿಸಿ ಬಿಜೆಪಿ ಕಾರ್ಯಕರ್ತರು ಟ್ರೋಲ್ ಮಾಡುತ್ತಿದ್ದಾರೆ.