Site icon Vistara News

CM Siddaramaiah : ತಮ್ಮ ಮೇಲೆ ತನಿಖೆಗೆ ಆದೇಶಿಸಿದ ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಸಿಎಂ

CM Siddaramaiah

ಬೆಂಗಳೂರು : ಮೈಸೂರಿನ ಮುಡಾ ಸೈಟ್​ ಹಂಚಿಕೆ ಹಗರಣದಲ್ಲಿ ತಮ್ಮ ವಿರುದ್ಧ ತನಿಖಾಸಂಸ್ಥೆಗೆ ದೂರು ನೀಡಲು ಅನುಮತಿ ಕೊಟ್ಟಿರುವ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ (Thawarchand Gehlot) ಅವರ ನಿರ್ಧಾರನ್ನು ವಿರುದ್ಧ ಸಿಎಂ ಸಿದ್ದರಾಮಯ್ಯ (CM Siddaramaiah) ಆಕ್ಷೇಪಿಸಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ. ಅವರದ್ದ ಸರ್ಕಾರವನ್ನು ಅಸ್ಥಿರಗೊಳಿಸುವ ಕ್ರಮ ಎಂಬುದಾಗಿ ಅವರು ಹೇಳಿದ್ದಾರೆ.

ಗೌರವಾನ್ವಿತ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ನನ್ನ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವುದು ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಟ್ಟ ಪಿತೂರಿಯಲ್ಲದೆ ಬೇರೇನೂ ಅಲ್ಲ. ಇದು ಪ್ರಜಾಪ್ರಭುತ್ವಕ್ಕೆ ನೇರ ಬೆದರಿಕೆ ಎಂಬುದಾಗಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ರಾಜ್ಯಪಾಲರನ್ನು ಬಿಜೆಪಿ ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ನನ್ನ ರಾಜೀನಾಮೆಗೆ ಒತ್ತಾಯಿಸಲು ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ. ನಮ್ಮ ಯಶಸ್ಸನ್ನು ಬಿಜೆಪಿ ಸಹಿಸುವುದಿಲ್ಲ. ರಾಜ್ಯ ಕಾಂಗ್ರೆಸ್​ ಸಾಮಾನ್ಯ ಜನರಿಗೆ ಪ್ರಯೋಜನವಾಗುವ ಸರ್ಕಾರ ಮತ್ತು ಖಾತರಿ ಯೋಜನೆಗಳನ್ನು ನೀಡುತ್ತಿದೆ. ಈ ರಾಜಕೀಯ ದುರುದ್ದೇಶದ ವಿರುದ್ಧ ನಾವು ಬಲವಾಗಿ ಮತ್ತು ಒಗ್ಗಟ್ಟಾಗಿ ನಿಲ್ಲುತ್ತೇವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ನನ್ನ ವಿರುದ್ಧ ಯಾವುದೇ ಪ್ರಕರಣಗಳಿಲ್ಲ ಮತ್ತು ರಾಜ್ಯಪಾಲರ ನಿರ್ಧಾರವು ಅಸಂವಿಧಾನಿಕವಾಗಿದೆ. ಈ ಕಾನೂನುಬಾಹಿರ ಅನುಮತಿಯನ್ನು ನಾವು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ನನ್ನ ವಿರುದ್ಧ ದೂರು ದಾಖಲಾದ ದಿನದಿಂದಲೇ ಶೋಕಾಸ್ ನೋಟಿಸ್ ನೀಡಲಾಗಿದೆ. ರಾಜ್ಯಪಾಲರ ಈ ನಡೆಯನ್ನು ಮೊದಲೇ ನಿರೀಕ್ಷಿಸಲಾಗಿತ್ತು ಎಂಬುದಾಗಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಏನಿದು ಪ್ರಕರಣ?‘

ಏನಿದು ಮುಡಾ ಅಕ್ರಮ ಪ್ರಕರಣ: ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 50-50 ಅನುಪಾತದಲ್ಲಿ 14 ಮುಡಾ ಸೈಟ್​ಗಳನ್ನು ಹಂಚಿಕೆ ಮಾಡಲಾಗಿದೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಈ ಸೈಟು ಹಂಚಿಕೆಯಾಗಿದೆ ಎಂಬ ಕಾರಣಕ್ಕೆ ವಿವಾದ ಉಂಟಾಯಿತು. ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಎಂಬುವವರು ಅಕ್ರಮ ಮಂಜೂರಾಗಿದೆ ಎಂದು ಆರೋಪ ಮಾಡಿದ್ದರು. ಸಿಎಂ ಪತ್ನಿಗೆ 14 ನಿವೇಶನ ಮಂಜೂರಾದ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.

ಇದನ್ನೂ ಓದಿ: CM Siddaramaiah: ರಾಜ್ಯಪಾಲರ ನಡೆ ಖಂಡಿಸಿ ಸೋಮವಾರ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಬದಲಿ ನಿವೇಶನ ನೀಡಿ ಲಾಭ ಮಾಡಿಕೊಡಲಾಗಿದೆ ಎಂಬುದೇ ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಅವರು ಆರೋಪವಾಗಿದೆ. ಮೈಸೂರಿನ ಕೆಸರೆ ಸರ್ವೇ ನಂಬರ್ 464 ವ್ಯಾಪ್ತಿಯಲ್ಲಿ 3.16 ಗುಂಟೆ ಜಮೀನನ್ನು ಸ್ವಾಧೀನ ಮಾಡಿಕೊಂಡಿರುವುದಕ್ಕೆ ಪರ್ಯಾಯವಾಗಿದೆ ವಿಜಯನಗರದ ಬಡಾವಣೆಯಲ್ಲಿ 14 ನಿವೇಶನವನ್ನು ಸಿಎಂ ಪತ್ನಿಯ ಹೆಸರಿಗೆ ನೀಡಿದ್ದಾರೆ. ಈ ಮೂಲಕ ಸಿಎಂ ತಮ್ಮ ಪ್ರಭಾವ ಬಳಸಿ ಲಾಭ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಪರ್ಯಾಯವಾಗಿ ನೀಡಲು ದೇವನೂರು ಬಡಾವಣೆಯಲ್ಲಿ ಸಾವಿರಾರು ಸೈಟ್ ಇದ್ದರೂ ವಿಜಯನಗರದಲ್ಲಿ ಕೊಟ್ಟಿರುವುದು ಯಾಕೆ ಎಂಬುದು ಆರ್​ಟಿಐ ಕಾರ್ಯಕರ್ತರ ಪ್ರಶ್ನೆಯಾಗಿದೆ. ಇದು ಲಾಭದ ಉದ್ದೇಶ. ಹಿಂದಿನ ಮುಡಾ ಆಯುಕ್ತ ನಟೇಶ್ ಈ ಆದೇಶ ಮಾಡಿದ್ದು ಸಿಎಂ ಪತ್ನಿ ಆರ್ಥಿಕ ಲಾಭ ಮಾಡಿಕೊಟ್ಟಿದ್ದಾರೆ. ಹೀಗಾಗಿ ಮುಡಾದ 50:50 ಹಗರಣದಲ್ಲಿ ಅವರು ಸಿಎಂ ಪತ್ನಿಯು ಭಾಗಿಯಾಗಿದ್ದಾರೆ ಎಂದು ಗಂಗರಾಜು ಆರೋಪಿಸಿದ್ದರು.

Exit mobile version