CM Siddaramaiah: ಸರ್ಕಾರಿ ನೌಕರರ ಹಿತಾಸಕ್ತಿ ಕಾಯಲು ನಾನು ಸದಾ ಸಿದ್ಧ: ಸಿಎಂ ಸಿದ್ದರಾಮಯ್ಯ - Vistara News

ಪ್ರಮುಖ ಸುದ್ದಿ

CM Siddaramaiah: ಸರ್ಕಾರಿ ನೌಕರರ ಹಿತಾಸಕ್ತಿ ಕಾಯಲು ನಾನು ಸದಾ ಸಿದ್ಧ: ಸಿಎಂ ಸಿದ್ದರಾಮಯ್ಯ

CM Siddaramaiah: ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ʼಮುಖ್ಯಮಂತ್ರಿಗಳಿಗೆ ನಮ್ಮ‌ ಅಭಿನಂದನೆʼ ಕಾರ್ಯಕ್ರಮದಲ್ಲಿ ಬೃಹತ್ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಇದು ನಿಮ್ಮೆಲ್ಲರ ಸರ್ಕಾರ.‌ ಸರ್ಕಾರಿ ನೌಕರರ ಹಿತ ಕಾಯಲು ನಾನು ಮತ್ತು ನಮ್ಮ ಸಚಿವ ಸಂಪುಟ ಸದಾ ಸಿದ್ಧವಿದೆ ಎಂದರು.

VISTARANEWS.COM


on

cm siddaramaiah 1
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ (Pay Commission) ಶಿಫಾರಸ್ಸುಗಳನ್ನು ಜಾರಿ ಮಾಡಿದ್ದು, ಸರ್ಕಾರಿ ನೌಕರರ (Govt Employees) ಹಿತಾಸಕ್ತಿಯನ್ನು ಕಾಯಲು ಸದಾ ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ನುಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ʼಮುಖ್ಯಮಂತ್ರಿಗಳಿಗೆ ನಮ್ಮ‌ ಅಭಿನಂದನೆʼ ಕಾರ್ಯಕ್ರಮದಲ್ಲಿ ಬೃಹತ್ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಇದು ನಿಮ್ಮೆಲ್ಲರ ಸರ್ಕಾರ.‌ ಸರ್ಕಾರಿ ನೌಕರರ ಹಿತ ಕಾಯಲು ನಾನು ಮತ್ತು ನಮ್ಮ ಸಚಿವ ಸಂಪುಟ ಸದಾ ಸಿದ್ಧವಿದೆ ಎಂದರು.

ಸರ್ಕಾರ ಅಂದ್ರೆ ಎಲ್ಲಾ ಸರ್ಕಾರಿ ನೌಕರರೂ ಸೇರಿರ್ತಾರೆ. ನೀವೆಲ್ಲಾ ಒಟ್ಟು ಸೇರಿದರೆನೇ ಸರ್ಕಾರ. ಅಂಬೇಡ್ಕರ್, ಗಾಂಧಿ, ಬಸವಾದಿ ಶರಣರು ಸಮ‌ ಸಮಾಜದ ಕನಸು ಕಂಡಿದ್ದರು‌. ಇವರೆಲ್ಲರ ಕನಸನ್ನು ನನಸು ಮಾಡುವ ಜವಾಬ್ದಾರಿ ನಿಮ್ಮೆಲ್ಲರ ಮೇಲೂ ಇದೆ. ಇದಕ್ಕಾಗಿ ಶ್ರಮಿಸೋಣ ಎಂದು ಅವರು ಕರೆ ನೀಡಿದರು.

ಸಮ ಸಮಾಜದ ಆಶಯದಿಂದ ಸರ್ಕಾರ ಜಾರಿ ಮಾಡುವ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ನಿಮ್ಮಗಳ ಮೇಲಿದೆ. ಶೋಷಿತ ಸಮುದಾಯಗಳ ಮನೆ ಬಾಗಿಲಿಗೆ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸಿದಾಗ ಮಾತ್ರ ನಮ್ಮ ನಿಮ್ಮ ಶ್ರಮ ಸಾರ್ಥಕವಾಗುತ್ತದೆ. ಹೀಗೆ ನಾವು ನೀವು ಸೇರಿ ಸ್ವಾಸ್ಥ್ಯ ಸಮಾಜ ರೂಪಿಸಬೇಕಿದೆ ಎಂದರು.

ನಿಮ್ಮೆಲ್ಲರ ಬೇಡಿಕೆಯಂತೆ OPS ಮತ್ತು ಆರೋಗ್ಯ ಸಂಜೀವಿನಿ ಕಾರ್ಯಕ್ರಮದ ಬಗ್ಗೆಯೂ ಸರ್ಕಾರ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುತ್ತದೆ. ಇದು ನಿಮ್ಮೆಲ್ಲರ ಸರ್ಕಾರ. ನಾನು ನಿಮ್ಮ ಜೊತೆ ಇರ್ತೇನೆ. ನಾವು-ನೀವು ಒಟ್ಟಾಗಿ ಜನರ ಜೊತೆ ಇದ್ದು, ಜನರ ಋಣ ತೀರಿಸೋಣ ಎಂದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಶಾಸಕರಾದ ಪ್ರಕಾಶ್ ರಾಥೋಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿ ರಾಜ್ಯ ಸರ್ಕಾರಿ ನೌಕರರ ಸಂಘದ ನಾನಾ ವಿಭಾಗಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಾಕ್ಷರಿ ಅವರು ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: CM Siddaramaiah: ಆಪಲ್‌ ಫೋನ್‌ ಬಿಡಿಭಾಗ ತಯಾರಕ ಫಾಕ್ಸ್‌ಕಾನ್ ಸಂಸ್ಥೆ ಅಧ್ಯಕ್ಷರೊಂದಿಗೆ ಸಿದ್ದರಾಮಯ್ಯ ಚರ್ಚೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Tungabhadra Dam: ಮುರಿದುಹೋದ 19ನೇ ಗೇಟ್‌ಗೆ ಸ್ಟಾಪ್‌ ಲಾಗ್‌ ಅಳವಡಿಕೆ ಯಶಸ್ವಿ, ಪೋಲಾಗುತ್ತಿದ್ದ ನೀರು ಬಂದ್!

Tungabhadra Dam: ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್‌ಗೆ 3 ಸ್ಟಾಪ್ ಲಾಗ್ ಅಳವಡಿಸುವಲ್ಲಿ ತಂಡ ಯಶಸ್ವಿಯಾಗಿದ್ದು, ಮೂರು ಸ್ಟಾಪ್ ಲಾಗ್ ಅಳವಡಿಸಿದ್ದರಿಂದಾಗಿ ಹೊರ ಹರಿಯುವ ನೀರು ಸ್ಟಾಪ್ ಆಗಿದೆ. 19ನೇ ಗೇಟ್‌ ಸುರಕ್ಷಿತವಾದ ಪರಿಣಾಮ, ಡ್ಯಾಂನಿಂದ ನೀರು ಹೊರಬಿಡಲಾಗಿದ್ದ ಎಲ್ಲ 33 ಗೇಟ್‌ಗಳನ್ನು ಮುಚ್ಚಿ ಆ ಮೂಲಕ ಪೋಲಾಗುತ್ತಿದ್ದ ನೀರನ್ನು ಟಿಬಿ ಡ್ಯಾಂ ಮಂಡಳಿ ತಡೆದಿದೆ.

VISTARANEWS.COM


on

tungabhadra dam gate
Koo

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ (Tungabhadra Dam) ಮುರಿದುಹೋದ 19ನೇ ಗೇಟ್‌ನಿಂದ ಹೊರಹರಿಯುತ್ತಿದ್ದ ನೀರನ್ನು ಸಂಪೂರ್ಣವಾಗಿ ನಿಲ್ಲಿಸಲು ತಜ್ಞರ ತಂಡ ಸಫಲವಾಗಿದೆ. ಮೂರು ದಿನಗಳಿಂದ ನಡೆಯುತ್ತಿದ್ದ ಕಾರ್ಯಾಚರಣೆಗೆ ಯಶಸ್ಸು ದೊರೆತಿದ್ದು, ಪೋಲಾಗಲಿದ್ದ ನೀರನ್ನು ಉಳಿಸುವಲ್ಲಿ ತಜ್ಞ ಕನ್ನಯ್ಯ ನಾಯ್ಡು ತಂಡ ಸಫಲವಾಗಿದೆ.

ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್‌ಗೆ 3 ಸ್ಟಾಪ್ ಲಾಗ್ ಅಳವಡಿಸುವಲ್ಲಿ ತಂಡ ಯಶಸ್ವಿಯಾಗಿದ್ದು, ಮೂರು ಸ್ಟಾಪ್ ಲಾಗ್ ಅಳವಡಿಸಿದ್ದರಿಂದಾಗಿ ಹೊರ ಹರಿಯುವ ನೀರು ಸ್ಟಾಪ್ ಆಗಿದೆ. 19ನೇ ಗೇಟ್‌ ಸುರಕ್ಷಿತವಾದ ಪರಿಣಾಮ, ಡ್ಯಾಂನಿಂದ ನೀರು ಹೊರಬಿಡಲಾಗಿದ್ದ ಎಲ್ಲ 33 ಗೇಟ್‌ಗಳನ್ನು ಮುಚ್ಚಿ ಆ ಮೂಲಕ ಪೋಲಾಗುತ್ತಿದ್ದ ನೀರನ್ನು ಟಿಬಿ ಡ್ಯಾಂ ಮಂಡಳಿ ತಡೆದಿದೆ.

ಚೈನ್ ಲಿಂಕ್ ಕಟ್ ಆಗಿ ಮುರಿದುಬಿದ್ದಿದ್ದ 19 ನಂಬರ್‌ ಕ್ರಸ್ಟ್ ಗೇಟ್ ಅನ್ನು ಕೂಡಿಸಲು ಮೂರು ದಿನಗಳಿಂದ ತಜ್ಞರ ತಂಡ ಪ್ರಯತ್ನಿಸುತ್ತಿತ್ತು. ನಿನ್ನೆ ರಾತ್ರಿ ಮೊದಲ ಸ್ಟಾಪ್ ಲಾಗ್ ಗೇಟ್‌ನ ಮೊದಲ ಎಲಿಮೆಂಟ್ ಕೂಡಿಸುವಲ್ಲಿ ಯಶಸ್ವಿಯಾಗಿತ್ತು. ಇಂದು ಬೆಳಗ್ಗಿನಿಂದ ಇನ್ನೆರಡು ಎಲಿಮೆಂಟ್‌ಗಳುನ್ನು ಕನ್ನಯ್ಯ ನಾಯ್ಡು ನೇತೃತ್ವದ ತಜ್ಞರ ತಂಡ ಕೂರಿಸಿದೆ.

ಹೀಗಾಗಿ 70 ಟಿಎಂಸಿಯಷ್ಟು ನೀರು ಉಳಿಸಲು ಟಿಬಿ ಬೋರ್ಡ್ ಯಶಸ್ವಿಯಾಗಿದೆ. ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಇದುವರೆಗೆ ಪೋಲಾದ ನೀರು ಮತ್ತೆ ತುಂಬಿಕೊಳ್ಳುವ ವಿಶ್ವಾಸ ಮೂಡಿದೆ. ಸದ್ಯ ಜಲಾಶಯಕ್ಕೆ 41 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ನಿನ್ನೆ 80 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿತ್ತು.

ಸದ್ಯ ಜಲಾಶಯದಲ್ಲಿ 70.759 ಟಿಎಂಸಿ ನೀರು ಸಂಗ್ರಹವಿದೆ. ಒಳಹರಿವು ಹೀಗೇ ಇದ್ದರೆ ವಾರದಲ್ಲಿ ಮತ್ತೆ ಜಲಾಶಯ ಭರ್ತಿಯಾಗಲಿದೆ. ಹೀಗಾಗಿ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಆಶಾಭಾವನೆ ಮೂಡಿದ್ದು, ಎರಡು ಬೆಳೆಗೆ ನೀರು ಸಿಗುವ ವಿಶ್ವಾಸವನ್ನು ಜಲಾನಯನ ಪ್ರದೇಶದ ಜನರು ಹೊಂದಿದ್ದಾರೆ.

ಇಂದು ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿದ್ದ ತಜ್ಞ ಕನ್ಹಯ್ಯ ನಾಯ್ಡು, ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿದ್ದರು. ʼಸಿಎ ಸಿದ್ದರಾಮಯ್ಯ ಬಂದಿದ್ದರು. ನನಗೆ ಕೈಮುಗಿದು ಒಂದೇ ಕೇಳಿಕೊಂಡರು. ನೀರು ಹೋದರೆ ಜನರಿಗೆ ಊಟ ಸಿಗಲ್ಲ. ಹೇಗಾದರೂ ಮಾಡಿ ನೀರು ಉಳಿಸಿ ಅಂತ ಕೇಳಿಕೊಂಡರು. ನಾನು ಅದಕ್ಕೇ ಬಂದಿದ್ದೇನೆ ಅಂತ ಹೇಳಿದೆʼ ಎಂದು ಹೇಳಿದ್ದರು.

“70 ವರ್ಷದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಗೇಟ್ ಒಡೆದಿದೆ. ನೀರಿನ ರಭಸಕ್ಕೆ ಗೇಟ್ ಕೊಚ್ಚಿ ಹೋಗಿದೆ. ಇದನ್ನು ಆಗಲೇ ತಯಾರು ಮಾಡಲಾಗ್ತಿದೆ. ನಾಳೆಯಿಂದ ಗೇಟ್ ಕೂಡಿಸೋ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ. ಕನ್ನಯ್ಯ ನಾಯ್ಡು ಮತ್ತವರ ತಂಡದಿಂದ ಕಾರ್ಯ ನಡೆಯುತ್ತಿದೆ. ಬಹಳ ಅನುಭವಿ ಅವರು, ಅವರ ನೇತೃತ್ವದಲ್ಲಿ ನಾಳೆಯಿಂದ ತಾತ್ಕಾಲಿಕ ಗೇಟ್ ಕೂಡಿಸಲಾಗ್ತದೆ. ತಜ್ಞರ ಪ್ರಕಾರ 50 ವರ್ಷಕ್ಕೊಮ್ಮೆ ಗೇಟ್ ಬದಲಿಸಬೇಕು. ಇನ್ಮುಂದೆ ತಜ್ಞರು ಹೇಳಿದಂತೆ, ಜಲಾಶಯ ನಿರ್ವಹಣೆ ಮಾಡಲಾಗುತ್ತದೆ” ಎಂದು ಸಿಎಂ ಸಿದ್ದರಾಮಯ್ಯ ಅಣೆಕಟ್ಟಿಗೆ ಭೇಟಿ ನೀಡಿದ ಬಳಿಕ ಹೇಳಿದ್ದರು.

ಇದನ್ನೂ ಓದಿ: Tungabhadra Dam: ತುಂಗಭದ್ರಾ ಡ್ಯಾಂಗೆ ತಾತ್ಕಾಲಿಕ ಗೇಟ್ ಅಳವಡಿಕೆ ಕಾರ್ಯ ಚುರುಕು

Continue Reading

ಪ್ರಮುಖ ಸುದ್ದಿ

CM Siddaramaiah : ಸಿಎಂ ಸಿದ್ದರಾಮಯ್ಯಗೆ ಉರುಳಾಗಿರುವ ಮುಡಾ ಹಗರಣ ಏನು? ಇಲ್ಲಿದೆ ಎಲ್ಲ ಮಾಹಿತಿ

CM Siddaramaiah : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಡಿಯಲ್ಲಿ ಸಿಎಂ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಮೊದಲ ದೂರುದಾರ ಪ್ರದೀಪ್ ಕುಮಾರ್ ಅವರು ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಮಧ್ಯಂತರ ಆದೇಶ ನೀಡದಂತೆ ಹೈಕೋರ್ಟ್‌ಗೆ ಕೇವಿಯಟ್​ ಕೂಡ ಸಲ್ಲಿಸಿದ್ದಾರೆ. ಹಾಗಾದರೆ ಮುಡಾ ಪ್ರಕರಣ ಎಂದರೇನು? ಸಿದ್ದರಾಮಯ್ಯ ಅವರಿಗೆ ಅದು ಉರುಳಾಗಿದ್ದು ಯಾಕೆ ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.

VISTARANEWS.COM


on

CM Siddaramaiah
Koo

ಬೆಂಗಳೂರು: ಮೈಸೂರು ನಗರಾಭಿವೃದ್ಧಿಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಆರೋಪದ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ದ ಬಗ್ಗೆ ತನಿಖೆ ನಡೆಸಲು ಕರ್ನಾಟಕದ ರಾಜ್ಯಪಾಲರಾದ ಥಾವರ್​ಚಂದ್ ಗೆಹ್ಲೋಟ್​ (Karnataka Governer) ಅನುಮತಿ ನೀಡಿದ್ದಾರೆ. ತಕ್ಷಣವೇ ಸಿದ್ದರಾಮಯ್ಯ ಅವರು ಈ ತನಿಖೆಗೆ ಕೋರ್ಟ್​ನಿಂದ ತಡೆ ತರದಂತೆ ದೂರುದಾರ ಪ್ರದೀಪ್​ ಅವರು ಕೇವಿಯಟ್‌ ಅರ್ಜಿ ಹಾಕಿದ್ದಾರೆ. ತನಿಖೆ ನಡೆಸಲು ಅನುಮತಿ ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ (TJ Abraham) ರಾಜ್ಯಪಾಲರ ಅನುಮತಿ ಕೇಳಿದ್ದರು. ಅವರನ್ನು ಇಂದು ರಾಜಭವನಕ್ಕೆ ಕರೆಸಿಕೊಂಡ ರಾಜ್ಯಪಾಲರು ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot), ಪ್ರಾಸಿಕ್ಯೂಶನ್‌ಗೆ ದೂರು ದಾಖಲಿಸಲು ಅನುಮತಿ ನೀಡಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಡಿಯಲ್ಲಿ ಸಿಎಂ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಮೊದಲ ದೂರುದಾರ ಪ್ರದೀಪ್ ಕುಮಾರ್ ಅವರು ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಮಧ್ಯಂತರ ಆದೇಶ ನೀಡದಂತೆ ಹೈಕೋರ್ಟ್‌ಗೆ ಕೇವಿಯಟ್​ ಕೂಡ ಸಲ್ಲಿಸಿದ್ದಾರೆ. ಹಾಗಾದರೆ ಮುಡಾ ಪ್ರಕರಣ ಎಂದರೇನು? ಸಿದ್ದರಾಮಯ್ಯ ಅವರಿಗೆ ಅದು ಉರುಳಾಗಿದ್ದು ಯಾಕೆ ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.

ಏನಿದು ಮುಡಾ ಅಕ್ರಮ ಪ್ರಕರಣ: ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 50-50 ಅನುಪಾತದಲ್ಲಿ 14 ಮುಡಾ ಸೈಟ್​ಗಳನ್ನು ಹಂಚಿಕೆ ಮಾಡಲಾಗಿದೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಈ ಸೈಟು ಹಂಚಿಕೆಯಾಗಿದೆ ಎಂಬ ಕಾರಣಕ್ಕೆ ವಿವಾದ ಉಂಟಾಯಿತು. ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಎಂಬುವವರು ಅಕ್ರಮ ಮಂಜೂರಾಗಿದೆ ಎಂದು ಆರೋಪ ಮಾಡಿದ್ದರು. ಸಿಎಂ ಪತ್ನಿಗೆ 14 ನಿವೇಶನ ಮಂಜೂರಾದ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.

ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಬದಲಿ ನಿವೇಶನ ನೀಡಿ ಲಾಭ ಮಾಡಿಕೊಡಲಾಗಿದೆ ಎಂಬುದೇ ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಅವರು ಆರೋಪವಾಗಿದೆ. ಮೈಸೂರಿನ ಕೆಸರೆ ಸರ್ವೇ ನಂಬರ್ 464 ವ್ಯಾಪ್ತಿಯಲ್ಲಿ 3.16 ಗುಂಟೆ ಜಮೀನನ್ನು ಸ್ವಾಧೀನ ಮಾಡಿಕೊಂಡಿರುವುದಕ್ಕೆ ಪರ್ಯಾಯವಾಗಿದೆ ವಿಜಯನಗರದ ಬಡಾವಣೆಯಲ್ಲಿ 14 ನಿವೇಶನವನ್ನು ಸಿಎಂ ಪತ್ನಿಯ ಹೆಸರಿಗೆ ನೀಡಿದ್ದಾರೆ. ಈ ಮೂಲಕ ಸಿಎಂ ತಮ್ಮ ಪ್ರಭಾವ ಬಳಸಿ ಲಾಭ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಪರ್ಯಾಯವಾಗಿ ನೀಡಲು ದೇವನೂರು ಬಡಾವಣೆಯಲ್ಲಿ ಸಾವಿರಾರು ಸೈಟ್ ಇದ್ದರೂ ವಿಜಯನಗರದಲ್ಲಿ ಕೊಟ್ಟಿರುವುದು ಯಾಕೆ ಎಂಬುದು ಆರ್​ಟಿಐ ಕಾರ್ಯಕರ್ತರ ಪ್ರಶ್ನೆಯಾಗಿದೆ. ಇದು ಲಾಭದ ಉದ್ದೇಶ. ಹಿಂದಿನ ಮುಡಾ ಆಯುಕ್ತ ನಟೇಶ್ ಈ ಆದೇಶ ಮಾಡಿದ್ದು ಸಿಎಂ ಪತ್ನಿ ಆರ್ಥಿಕ ಲಾಭ ಮಾಡಿಕೊಟ್ಟಿದ್ದಾರೆ. ಹೀಗಾಗಿ ಮುಡಾದ 50:50 ಹಗರಣದಲ್ಲಿ ಅವರು ಸಿಎಂ ಪತ್ನಿಯು ಭಾಗಿಯಾಗಿದ್ದಾರೆ ಎಂದು ಗಂಗರಾಜು ಆರೋಪಿಸಿದ್ದರು.

ಲಾಭ ಮಾಡಿಕೊಟ್ಟಿರುವುದು ಹೇಗೆ ? : ಭೂಮಿ ವಶಪಡಿಸಿಕೊಂಡ ಜಾಗ ಬಿಟ್ಟು ಅಥವಾ ಸಮಾನಾಗಿರುವ ಪ್ರದೇಶ ಬಿಟ್ಟು ವಿಜಯನಗರದಲ್ಲಿ ಅಭಿವೃದ್ಧಿ ಆಗಿರುವ ಲೇಔಟ್​ನಲ್ಲಿ 38 ಸಾವಿರದ 284 ಚದರಡಿ ಭೂಮಿ ಹಂಚಿಕೆ ಮಾಡಲಾಗಿದೆ. ಇದು ಲಾಭ ಮಾಡಿಕೊಡುವ ಉದ್ದೇಶ ಹೊಂದಿದೆ. 1998ರಲ್ಲಿ ಸ್ವಾಧೀನಕ್ಕೆ ಒಳಪಟ್ಟ ಭೂಮಿಗೆ ಪರ್ಯಾಯವಾಗಿ 2021ರಲ್ಲಿ ಪರಿಹಾರ ನೀಡಲಾಗಿದೆ ಎಂಬುದು ಆರ್​​ಟಿಐ ಕಾರ್ಯಕರ್ತರ ಆರೋಪವಾಗಿದೆ.

ಸಿಎಂ ಪತ್ನಿಗೆ ದೇವನೂರು ಬಡಾವಣೆಯಲ್ಲಿ ಸೈಟ್​ ಕೊಡಲ ಸಾವಿರಾರು ಸೈಟ್​ಗಳು ಇದ್ದವು. ಆದಾಗ್ಯೂ ವಿಜಯನಗರದಲ್ಲಿ ಕೊಟ್ಟಿರುವುದು ಯಾಕೆ? ಇದು ಲಾಭದ ಉದ್ದೇಶ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: CM Siddaramaiah: ರಾಜ್ಯಪಾಲರ ನಡೆ ಖಂಡಿಸಿ ಸೋಮವಾರ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಪ್ರಾಸಿಕ್ಯೂಷನ್​​​ಗೆ ಅನುಮತಿ ಕೋರಿ ಟಿ. ಜೆ. ಅಬ್ರಾಹಂ ಜುಲೈ 26ರಂದು ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು. ಮರುದಿನವೇ ರಾಜ್ಯಪಾಲರು ಮುಖ್ಯಮಂತ್ರಿಗಳಿಗೆ ನೋಟಿಸ್ ಕೊಟ್ಟಿದ್ದರ. ಸಿಎಂ ಪತ್ನಿಗೆ 1998ರ ಜಾಗಕ್ಕೆ 2021ರಲ್ಲಿ ಪರಿಹಾರ ಸಿಕ್ಕಿರುವುದು, ಬೇರೆ ಕಡೆ ಭೂಮಿ ಕೊಟ್ಟಿರುವುದು, 50-50 ಅನುಪಾತ ದುರ್ಬಳಕೆ ಮಾಡಿರೋದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡಿರುವ ನೋಟಿಸ್​ ಮುಖ್ಯ ಕಾರ್ಯದರ್ಶಿ ಶಾಲಿನ್ ರಜನೀಸ್ ಅವರಿಗೆ ರವಾನೆ ಮಾಡಲಾಗಿದೆ. ಜತೆಗೆ ಮುಡಾ ಪ್ರಕರಣದ ಮೂವರು ದೂರುದಾರರಾದ ಟಿಜೆಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್​​ ಅವರಿಗೂ ನೋಟಿಸ್​ ಜಾರಿ ಮಾಡಲಾಗಿದೆ.

ಇದೀಗ ಸಿಎಂ ಸಿದ್ದರಾಮಯ್ಯನವರು ಕಾನೂನು ಹೋರಾಟಕ್ಕೆ ನಿರ್ಧರಿಸಿದ್ದಾರೆ. ಸಿದ್ದರಾಮಯ್ಯನವರ ಕಾನೂನು ಪರಿಣಿತರ ತಂಡ. ರಾಜಕೀಯ ದುರುದ್ದೇಶದಿಂದ ಈ ಅನುಮತಿ ನೀಡಲಾಗಿದೆ ಎನ್ನುವುದರ ಜೊತೆಗೆ ಕಾನೂನಿನ ಮಾನ್ಯತೆ ಪ್ರಶ್ನಿಸಿ ಹೈಕೋರ್ಟ್​​​ ಅರ್ಜಿ ಸಲ್ಲಿಸಲು ಸಜ್ಜಾಗಿದೆ.

Continue Reading

ಪ್ರಮುಖ ಸುದ್ದಿ

CM Siddaramaiah: ರಾಜ್ಯಪಾಲರ ನಡೆ ಖಂಡಿಸಿ ಸೋಮವಾರ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

CM Siddaramaiah: ಶನಿವಾರ ರಾಜ್ಯಪಾಲರು ಪ್ರಾಸಿಕ್ಯೂಶನ್‌ ಅನುಮತಿ ನೀಡಿದ ಕೂಡಲೇ ರಾಜ್ಯದ ನಾನಾ ಕಡೆ ಪ್ರತಿಭಟನೆಗಳು ಆರಂಭವಾಗಿವೆ. ರಾಜ್ಯಪಾಲರ ನಡೆ ಸಂವಿಧಾನವಿರೋಧಿ, ಕಾನೂನುಬಾಹಿರ ಹಾಗೂ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದಾರೆ. ಕೆಲವೆಡೆ ರಾಜ್ಯಪಾಲರಿಗೆ ʼಗೋ ಬ್ಯಾಕ್‌ʼ ಚಳವಳಿ ಕೂಡ ನಡೆದಿದೆ.

VISTARANEWS.COM


on

cm siddaramaiah congress protest
Koo

ಬೆಂಗಳೂರು: ಮುಡಾ ಹಗರಣದಲ್ಲಿ (MUDA Scam) ಸಿಎಂ ಸಿದ್ದರಾಮಯ್ಯ (CM Siddaramaih) ವಿರುದ್ಧ ಪ್ರಾಸಿಕ್ಯೂಶನ್‌ಗೆ (Prosecution) ಅನುಮತಿ ನೀಡಿರುವ ರಾಜ್ಯಪಾಲರ (Governor Thawar Chand Gehlot) ನಡೆಯ ವಿರುದ್ಧ ಕಾಂಗ್ರೆಸ್‌ ಸಿಟ್ಟು ಭುಗಿಲೆದ್ದಿದ್ದು, ಗವರ್ನರ್‌ ಕ್ರಮವನ್ನು ಖಂಡಿಸಿ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕೈ ಪಡೆ ಮುಂದಾಗಿದೆ.

ರಾಜ್ಯದ ಎಲ್ಲಾ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ಕಾಂಗ್ರೆಸ್‌ ಪ್ರತಿಭಟನೆ ಹಮ್ಮಿಕೊಂಡಿದ್ದು, ಜಿಲ್ಲಾಧಿಕಾರಿಗಳಿಗೆ ಪ್ರತಿಭಟನಾ ಪತ್ರ ನೀಡಲು ತೀರ್ಮಾನಿಸಿದೆ. ರಾಷ್ಟ್ರಪತಿಗಳಿಗೆ ಡಿಸಿಗಳ ಮೂಲಕ ಪ್ರತಿಭಟನಾ ಪತ್ರ ನೀಡಲಾಗುತ್ತದೆ. ಈಗಾಗಲೇ ಎಲ್ಲಾ ಶಾಸಕರಿಗೂ ಈ ಬಗ್ಗೆ ಸೂಚನೆ ನೀಡಲಾಗಿದ್ದು, ಕನಿಷ್ಠ ಅರ್ಧ ಕಿಲೋಮೀಟರ್ ನಡೆದು ಹೋಗಿ ಮನವಿ ಸಲ್ಲಿಕೆ ಮಾಡಲಾಗುತ್ತದೆ.

ಶನಿವಾರ ರಾಜ್ಯಪಾಲರು ಪ್ರಾಸಿಕ್ಯೂಶನ್‌ ಅನುಮತಿ ನೀಡಿದ ಕೂಡಲೇ ರಾಜ್ಯದ ನಾನಾ ಕಡೆ ಪ್ರತಿಭಟನೆಗಳು ಆರಂಭವಾಗಿವೆ. ರಾಜ್ಯಪಾಲರ ನಡೆ ಸಂವಿಧಾನವಿರೋಧಿ, ಕಾನೂನುಬಾಹಿರ ಹಾಗೂ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದಾರೆ. ಕೆಲವೆಡೆ ರಾಜ್ಯಪಾಲರಿಗೆ ʼಗೋ ಬ್ಯಾಕ್‌ʼ ಚಳವಳಿ ಕೂಡ ನಡೆದಿದೆ.

ಕೇಂದ್ರ ಸರ್ಕಾರದ ವಿರುದ್ಧ ಅಹಿಂದ ಹಾಗೂ ಕನ್ನಡ ಅಸ್ಮಿತೆ ಅಸ್ತ್ರವನ್ನು ಕಾಂಗ್ರೆಸ್ ಪ್ರಯೋಗಿಸಿದೆ. ದೇಶಾದ್ಯಂತ ಇದೇ ವಿಚಾರವನ್ನು ಚರ್ಚೆಯ ಮುನ್ನೆಲೆಗೆ ತಂದು ಹೋರಾಡಲು ಕಾಂಗ್ರೆಸ್‌ ಮುಂದಾಗಿದೆ. ದೇಶದಲ್ಲಿ ಮುಂದೆ ಬರುತ್ತಿರುವ ಚುನಾವಣೆಗಳ ಲಾಭ ಪಡೆಯಲು ಈ ಪ್ರಕರಣ ಬಳಸಿಕೊಳ್ಳಲು ತೀರ್ಮಾನಿಸಿದೆ.

ಹಿಂದುಳಿದ ವರ್ಗಗಳ ನಾಯಕನನ್ನು ಕೆಳಗಿಳಿಸಲು ಬಿಜೆಪಿ ಸಂಚು ಹೂಡಿದೆ. ರಾಜ್ಯದ ಪರ ಕೇಂದ್ರದ ವಿರುದ್ಧ ಧ್ವನಿ ಎತ್ತಿದ್ದರಿಂದಲೇ ಬಿಜೆಪಿ ನಾಯಕರು ರಾಜ್ಯ ನಾಯಕರಿಗೆ ಸಮಸ್ಯೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕರು ಆಪಾದಿಸಿದ್ದು, ಈ ಎರಡು ಭಾವನಾತ್ಮಕ ಅಸ್ತ್ರಗಳ ಮೂಲಕ ಹೋರಾಡಲು ಮುಂದಾಗಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿತಾರೆ: ಡಿಕೆ ಶಿವಕುಮಾರ್

ಬೆಂಗಳೂರು: ಮುಡಾ ಹಗರಣ ವಿಚಾರದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದರೂ, ಸಿದ್ದರಾಮಯ್ಯ ಅವರು ಸಿಎಂ ಆಗಿ ಮುಂದುವರಿಯಲಿದ್ದಾರೆ. ಇಡೀ ಸಚಿವ ಸಂಪುಟ ಹಾಗೂ ಕಾಂಗ್ರೆಸ್‌ ಪಕ್ಷ ಸಿಎಂ ಅವರ ಹಿಂದೆ ನಿಂತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ನಡೆಸಲಾದ ಹತ್ತು ಜನ ಸಚಿವರ ಸಾಮೂಹಿಕ ಸುದ್ದಿಗೋಷ್ಠಿಯ ನೇತೃತ್ವ ವಹಿಸಿ ಅವರು ಮಾತನಾಡಿದರು. ರಾಜ್ಯಪಾಲರ ಕ್ರಮ ಪ್ರಜಾಪ್ರಭುತ್ವಕ್ಕೆ ಮಾರಕ‌ವಾದ ನಡೆ. ಸಂವಿಧಾನ ವಿರೋಧಿ ಪತ್ರವನ್ನು ರಾಜ್ಯಪಾಲರು ಕಳುಹಿಸಿಕೊಟ್ಟಿದ್ದಾರೆ ಎಂದು ಅವರು ಆಪಾದಿಸಿದರು.

ದ್ವೇಷದ ಪಿತೂರಿ ಒಳಗೊಂಡ ಪ್ರಾಸಿಕ್ಯೂಶನ್ ಕೋರಿ ಸಲ್ಲಿಸಿರುವ ಅರ್ಜಿ ತಿರಸ್ಕರಿಸುವಂತೆ ಮನವರಿಕೆ ಮಾಡಿಕೊಡುವ ಕೆಲಸವನ್ನು ನಾವು ಮಾಡಿದ್ದೆವು. ಇವು ರಾಜಕೀಯ ಪ್ರೇರಿತ ದೂರುಗಳು ಎಂದು ಹೇಳಿದ್ದೆವು. ನಮ್ಮ ಸಿಎಂ ಅವಧಿಯಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ. ಹೀಗಾಗಿ ಪ್ರಾಸಿಕ್ಯೂಶನ್ ಕೋರಿ ಸಲ್ಲಿಸಿರುವ ಅರ್ಜಿ ತಿರಸ್ಕರಿಸಬೇಕು ಎಂದು ಮನವಿ ಮಾಡಿದ್ದೆವು. ಸಾಮಾನ್ಯ ತನಿಖೆ ನಡೆಸಿ ಪ್ರಾಸಿಕ್ಯೂಶನ್‌ಗೆ ಕೇಳಿದರೆ ಕೊಡುವುದು ನೋಡಿದ್ದೇವೆ. ಆದರೆ ಈ ಪ್ರಕರಣದಲ್ಲಿ ಯಾವುದೇ ತನಿಖೆ ಆಗಿಲ್ಲ. ಆದರೂ ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಟ್ಟಿದ್ದಾರೆ ಎಂದು ಅವರು ಆಪಾದಿಸಿದರು.

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಗಣಿಗಾರಿಕೆಗೆ ಅನುಮತಿ ನೀಡಿದ ಪ್ರಕರಣದಲ್ಲಿ ಲೋಕಾಯುಕ್ತದವರೇ ಪ್ರಾಸಿಕ್ಯೂಶನ್‌ಗೆ ಅನುಮತಿ ಕೇಳಿದರೂ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ. ಮುರುಗೇಶ ನಿರಾಣಿ, ಜನಾರ್ದನ ರೆಡ್ಡಿ ವಿರುದ್ಧದ ಪ್ರಕರಣದಲ್ಲೂ ಅನುಮತಿ ತೀರ್ಮಾನ ಮಾಡಿಲ್ಲ. ಆದರೆ ಸಿದ್ದರಾಮಯ್ಯ ಕೇಸ್ ಅನ್ನು ತ್ವರಿತವಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಇದು ಪ್ರಜಾಪ್ರಭುತ್ವ ಸರ್ಕಾರದ ವಿರುದ್ಧ ತೆಗೆದುಕೊಂಡ ತೀರ್ಮಾನ ಎಂದು ಅವರು ಆರೋಪಿಸಿದರು.

ಇದನ್ನೂ ಓದಿ: CM Siddaramaiah: ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ 6 ಪುಟಗಳ ಪತ್ರದಲ್ಲಿ ಏನೇನಿದೆ? ಕೊಟ್ಟ ಸಮರ್ಥನೆಗಳು ಹೀಗಿವೆ

Continue Reading

ಪ್ರಮುಖ ಸುದ್ದಿ

CM Siddaramaiah: ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ 6 ಪುಟಗಳ ಪತ್ರದಲ್ಲಿ ಏನೇನಿದೆ? ಕೊಟ್ಟ ಸಮರ್ಥನೆಗಳು ಹೀಗಿವೆ

CM Siddaramaiah: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರದ ಕುರಿತು ತಟಸ್ಥ, ವಸ್ತುನಿಷ್ಠ ಮತ್ತು ನಿಷ್ಪಕ್ಷಪಾತ ತನಿಖೆ ಅಗತ್ಯ ಎಂದು ಆರು ಪುಟಗಳ ಆದೇಶದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ತಿಳಿಸಿದ್ದಾರೆ.

VISTARANEWS.COM


on

governor Thawarchand gehlot and CM Siddaramaiah
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ಮುಡಾ ನಿವೇಶನ ಹಂಚಿಕೆ (MUDA Scam) ಪ್ರಕರಣದಲ್ಲಿ ಪ್ರಾಸಿಕ್ಯೂಶನ್‌ಗೆ (Prosecution) ಅನುಮತಿ ನೀಡಿರುವ ರಾಜ್ಯಪಾಲರು‌, ಈ ಕುರಿತು ಸಿಎಂ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಕಳಿಸಿರುವ ಸ್ಯಾಂಕ್ಷನ್‌ ಪತ್ರದಲ್ಲಿ, ಸಿಎಂ ಮೇಲಿರುವ ಆರೋಪಗಳನ್ನು ಉಲ್ಲೇಖಿಸಿದ್ದಾರೆ. ಜೊತೆಗೆ, ಯಾವ ಕಾರಣಕ್ಕಾಗಿ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಲಾಗುತ್ತಿದೆ ಎಂಬುದನ್ನು ವಿವರಿಸಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರದ ಕುರಿತು ತಟಸ್ಥ, ವಸ್ತುನಿಷ್ಠ ಮತ್ತು ನಿಷ್ಪಕ್ಷಪಾತ ತನಿಖೆ ಅಗತ್ಯ ಎಂದು ಮುಖ್ಯಮಂತ್ರಿಯವರ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಪ್ರದೀಪ್ ಕುಮಾರ್ ಎಸ್.ಪಿ., ಟಿ.ಜೆ. ಅಬ್ರಹಾಂ ಮತ್ತು ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿರುವ ಆರು ಪುಟಗಳ ಆದೇಶದಲ್ಲಿ ಹೇಳಿದ್ದಾರೆ.

ರಾಜ್ಯಪಾಲರು ನೀಡಿರುವ ಸಮರ್ಥನೆಗಳು:

1) ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಸೆಕ್ಷನ್ 218ರ ಅಡಿಯಲ್ಲಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಲಾಗಿದೆ.

2) ಸಿಎಂ ಕುಟುಂಬದ ಪ್ರಭಾವದ ಎರಡು ಅಂಶಗಳನ್ನು ರಾಜ್ಯಪಾಲರು ಉಲ್ಲೇಖಿಸಿದ್ದಾರೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ, ಪುತ್ರ ಯತೀಂದ್ರ ಸಿದ್ದರಾಮಯ್ಯ ಪ್ರಭಾವದ ಬಗ್ಗೆ ಉಲ್ಲೇಖವಾಗಿದೆ. ಸಿದ್ದರಾಮಯ್ಯ ಸಿಎಂ ಆಗುವ ತನಕ ಪಾರ್ವತಿ ಕಾದು, ಆ ಬಳಿಕ ಅರ್ಜಿ ಹಾಕಿದ್ದಾರೆ. 2010ರಲ್ಲಿ ಪಾರ್ವತಿ ಜಮೀನು ಮಾಲೀಕರಾದರೂ ಪರಿಹಾರಕ್ಕೆ ಅರ್ಜಿ ಹಾಕಲು 4 ವರ್ಷ ಕಾಯುತ್ತಾರೆ. ಸಿದ್ದರಾಮಯ್ಯ ಸಿಎಂ ಆದ ಮೇಲೆ 40:60 ಸೈಟ್ ಪರಿಹಾರ ಅನುಪಾತ, 50:50 ಆಯ್ತು. ಪಾಲಿಸಿ ಬದಲಾವಣೆಗೆ ಆಗಿನ ಸಿದ್ದರಾಮಯ್ಯ ಕ್ಯಾಬಿನೆಟ್ ಅನುಮತಿ ನೀಡಿತ್ತು. ಸಿದ್ದರಾಮಯ್ಯ ಪತ್ನಿ ಕೊಟ್ಟ ಅರ್ಜಿಯ ಆಧಾರದ ಮೇಲೆ ಪಾಲಿಸಿ ಬದಲಾವಣೆ ಮಾಡಿದರು. ಆ ನಂತರ ಪರಿಹಾರ ನೀಡುವ ಸಂಬಂಧ ನಡೆದ ಮುಡಾ ಸಭೆಯಲ್ಲಿ ಶಾಸಕರಾಗಿದ್ದ ಯತೀಂದ್ರ ಇದ್ದರು.

3) ಮುಖ್ಯಮಂತ್ರಿಯವರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ದೂರುಗಳು, ಕಾನೂನು ತಜ್ಞರ ಅಭಿಪ್ರಾಯ ಮತ್ತು ಸಂಪುಟದ ನಿರ್ಣಯವನ್ನು ಪರಿಶೀಲಿಸಲಾಗಿದೆ. ಮುಖ್ಯಮಂತ್ರಿಯವರ ವಿರುದ್ಧದ ಆರೋಪಗಳ ವಿಚಾರದಲ್ಲಿ ಎರಡು ಬಗೆಯ ಅಭಿಪ್ರಾಯಗಳಿವೆ. ದೂರಿನಲ್ಲಿರುವ ಆರೋಪಗಳನ್ನು ಮೇಲ್ನೋಟಕ್ಕೆ ಪುಷ್ಟೀಕರಿಸುವ ದಾಖಲೆಗಳೂ ಇವೆ. ಆದ್ದರಿಂದ ಸಿದ್ದರಾಮಯ್ಯ ಅವರ ವಿರುದ್ಧದ ಆರೋಪಗಳ ಕುರಿತು ತಟಸ್ಥ, ವಸ್ತುನಿಷ್ಠ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವ ಅಗತ್ಯವಿದೆ.

4) ಮುಖ್ಯಮಂತ್ರಿಯವರ ವಿರುದ್ಧದ ವಿಚಾರಣೆಗೆ ಅನುಮತಿ ನೀಡುವಂತೆ ಕೋರಿ ಮೂರು ಅರ್ಜಿಗಳು ಸಲ್ಲಿಕೆಯಾಗಿದ್ದವು. ಜುಲೈ 26ರಂದು ಮುಖ್ಯಮಂತ್ರಿಯವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿ ವಿವರಣೆ ಕೇಳಲಾಗಿತ್ತು. ಆ.1ರಂದು ಸಂಪುಟದ ನಿರ್ಣಯವು ತಮ್ಮ ಕಚೇರಿಗೆ ತಲುಪಿತು. ಆ.3ರಂದು ಮುಖ್ಯಮಂತ್ರಿಯವರ ಪ್ರತಿಕ್ರಿಯೆ ತಲುಪಿತು. ಅದರೊಂದಿಗೆ ಕೆಲವು ದಾಖಲೆಗಳನ್ನೂ ಸಲ್ಲಿಸಲಾಗಿತ್ತು.

5) ಮುಡಾದಲ್ಲಿನ ಅಕ್ರಮಗಳ ಕುರಿತು ಐಎಎಸ್ ಅಧಿಕಾರಿ ವೆಂಕಟಾಚಲಪತಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಆ ಬಳಿಕ ಏಕಸದಸ್ಯ ಆಯೋಗವನ್ನು ನೇಮಿಸಲಾಗಿದೆ. ಯಾರ ವಿರುದ್ಧ ಆರೋಪಗಳು ಕೇಳಿಬಂದಿವೆಯೋ ಅದೇ ವ್ಯಕ್ತಿ ತನಿಖೆ ಹೇಗಿರಬೇಕು ಎಂಬುದನ್ನು ನಿರ್ಧರಿಸುವುದು ಕಾನೂನು ಸಮ್ಮತವಲ್ಲ. ಆದ್ದರಿಂದ ಸಂಪುಟದ ನಿರ್ಧಾರವು ಕಾನೂನುಬಾಹಿರ.

6) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಮುಖ್ಯ ಕಾರ್ಯದರ್ಶಿಯವರು ಆ.1ರಂದು ಸಂಪುಟ ಸಭೆ ಕರೆದಿದ್ದರು. ಅಲ್ಲಿ ತಾವು ನೀಡಿದ್ದ ಶೋಕಾಸ್ ನೋಟೀಸ್ ಅನ್ನು ಮಂಡಿಸಿ ಚರ್ಚಿಸಲಾಗಿದೆ. ವಿಚಾರಣೆಗೆ ಅನುಮತಿ ಕೋರಿರುವ ಅರ್ಜಿಗಳನ್ನು ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಸಲಹೆ ನೀಡುವ ನಿರ್ಣಯವನ್ನು ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಸಿದ್ದರಾಮಯ್ಯ ಅವರ ಸಲಹೆಯಂತೆ ರಚನೆಯಾದ ಸಂಪುಟವು ಅವರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ ದೂರುಗಳನ್ನು ತಿರಸ್ಕರಿಸುವಂತೆ ಸಲಹೆ ನೀಡುವ ನಿರ್ಣಯ ಕೈಗೊಂಡಿದೆ. ಈ ನಿರ್ಣಯವು ವಿಶ್ವಾಸಾರ್ಹವಲ್ಲ.

7) ಮಧ್ಯಪ್ರದೇಶ ವಿಶೇಷ ಪೊಲೀಸ್ ಘಟಕ ಮತ್ತು ಮಧ್ಯಪ್ರದೇಶ ಸರ್ಕಾರದ ನಡುವಿನ ವ್ಯಾಜ್ಯದಲ್ಲಿ ಸುಪ್ರೀಂ ಕೋರ್ಟ್ 2004ರಲ್ಲಿ ನೀಡಿದ್ದ ತೀರ್ಪನ್ನು ತಮ್ಮ ಆದೇಶದಲ್ಲಿ ಉಲ್ಲೇಖಿಸಿರುವ ರಾಜ್ಯಪಾಲರು, ಕೆಲವು ವಿಶೇಷ ಸಂದರ್ಭಗಳಲ್ಲಿ ಸಂಪುಟದ ಸಲಹೆಯನ್ನು ಸ್ವೀಕರಿಸುವುದು ರಾಜ್ಯಪಾಲರ ವಿವೇಚನೆಗೆ ಬಿಟ್ಟದ್ದು ಎಂದಿದ್ದಾರೆ.

8) ಇಂತಹ ಪ್ರಕರಣಗಳಲ್ಲಿ ದಾಖಲೆಗಳು ಲಭ್ಯವಿದ್ದಾಗಲೂ ರಾಜ್ಯಪಾಲರು ವಿವೇಚನಾ ಅಧಿಕಾರ ಬಳಸಲು ಅವಕಾಶ ನೀಡದೆ ಸರ್ಕಾರಕ್ಕೆ ಅನುಮತಿ ನಿರಾಕರಿಸುವ ಅಧಿಕಾರ ನೀಡಿದಲ್ಲಿ ಕಾನೂನಿನ ಆಡಳಿತವು ಕುಸಿದುಬೀಳುತ್ತದೆ. ಅಧಿಕಾರದಲ್ಲಿರುವ ಪ್ರಭಾವಿ ವ್ಯಕ್ತಿಗಳ ವಿರುದ್ಧ ಮೇಲ್ನೋಟಕ್ಕೆ ಸಾಕ್ಷ್ಯಗಳು ಲಭ್ಯವಿದ್ದಾಗಲೂ ತನಿಖೆಗೆ ಅನುಮತಿ ನಿರಾಕರಿಸಿದರೆ ಅದರಿಂದ ಪ್ರಜಾಪ್ರಭುತ್ವ ಅಪಾಯಕ್ಕೆ ಸಿಲುಕುತ್ತದೆ. ತಮ್ಮ ವಿರುದ್ಧ ತನಿಖೆ ನಡೆಸಲು ಅವಕಾಶವೇ ಇಲ್ಲ ಎಂಬ ಭಾವನೆಯಿಂದ ಅಧಿಕಾರದಲ್ಲಿರುವ ವ್ಯಕ್ತಿಗಳು ಕಾನೂನು ಉಲ್ಲಂಘಿಸಲು ಪ್ರೇರಣೆ ದೊರೆಯುತ್ತದೆ ಎಂದು ಸುಪ್ರೀಂ ಕೋರ್ಟ್ 2004ರ ತೀರ್ಪಿನಲ್ಲಿ ಹೇಳಿದೆ.

ಇದನ್ನೂ ಓದಿ: CM Siddaramaiah: ರಾಜ್ಯಪಾಲರ ಆದೇಶ ಬಿಜೆಪಿ ಪಾದಯಾತ್ರೆಗೆ ದೊರೆತ ಯಶಸ್ಸು, ಮುಡಾ ತನಿಖೆ ಸಿಬಿಐಗೆ ಕೊಡಲಿ: ಆರ್‌. ಅಶೋಕ್

Continue Reading
Advertisement
tungabhadra dam gate
ಪ್ರಮುಖ ಸುದ್ದಿ20 mins ago

Tungabhadra Dam: ಮುರಿದುಹೋದ 19ನೇ ಗೇಟ್‌ಗೆ ಸ್ಟಾಪ್‌ ಲಾಗ್‌ ಅಳವಡಿಕೆ ಯಶಸ್ವಿ, ಪೋಲಾಗುತ್ತಿದ್ದ ನೀರು ಬಂದ್!

CM Siddaramaiah
ಪ್ರಮುಖ ಸುದ್ದಿ30 mins ago

CM Siddaramaiah : ಸಿಎಂ ಸಿದ್ದರಾಮಯ್ಯಗೆ ಉರುಳಾಗಿರುವ ಮುಡಾ ಹಗರಣ ಏನು? ಇಲ್ಲಿದೆ ಎಲ್ಲ ಮಾಹಿತಿ

Murder Case
Latest40 mins ago

Murder Case: ಮಮತಾ ರಾಜ್ಯದಲ್ಲಿ ಕೊಲೆ ಸರಣಿ; ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವತಿಯ ರುಂಡ ಕಡಿದು ಕೊಲೆ!

cm siddaramaiah congress protest
ಪ್ರಮುಖ ಸುದ್ದಿ48 mins ago

CM Siddaramaiah: ರಾಜ್ಯಪಾಲರ ನಡೆ ಖಂಡಿಸಿ ಸೋಮವಾರ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

Mohammed Shami comeback
ಕ್ರಿಕೆಟ್52 mins ago

Mohammed Shami Comeback: ಟೀಮ್​ ಇಂಡಿಯಾಕ್ಕೆ ಮರಳುವ ಸೂಚನೆ ನೀಡಿದ ಶಮಿ; ಎನ್​ಸಿಎಯಲ್ಲಿ ಕಠಿಣ ಅಭ್ಯಾಸ

ಕಾಲಿವುಡ್58 mins ago

Thangalaan Movie: ಸೀಕ್ವೆಲ್ ಆಗಿ ಬರಲಿದೆ ‘ತಂಗಲಾನ್ʼ; ಹೊಸ ದಾಖಲೆ ಬರೆದ ಚಿಯಾನ್ ವಿಕ್ರಮ್‍!

Dengue Vaccine
ಆರೋಗ್ಯ1 hour ago

Dengue Vaccine: ಭಾರತದ ಮೊದಲ ಡೆಂಗ್ಯೂ ಲಸಿಕೆ; 3ನೇ ಹಂತದ ಪ್ರಯೋಗ ಪ್ರಾರಂಭ

ಫ್ಯಾಷನ್1 hour ago

Nail Extension Beauty Trend: ಬ್ಯೂಟಿ ಲೋಕದಲ್ಲಿ ಟ್ರೆಂಡಿಯಾದ ನೇಲ್ ಎಕ್ಸ್‌ಟೆನ್ಷನ್ ಕಾನ್ಸೆಪ್ಟ್

governor Thawarchand gehlot and CM Siddaramaiah
ಪ್ರಮುಖ ಸುದ್ದಿ1 hour ago

CM Siddaramaiah: ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ 6 ಪುಟಗಳ ಪತ್ರದಲ್ಲಿ ಏನೇನಿದೆ? ಕೊಟ್ಟ ಸಮರ್ಥನೆಗಳು ಹೀಗಿವೆ

Rakshit Shetty Copyright Infringement 20 lakhs for Delhi High Court orders deposit
ಸ್ಯಾಂಡಲ್ ವುಡ್1 hour ago

Rakshit Shetty: ಕಾಪಿ ರೈಟ್ ಉಲ್ಲಂಘನೆ; ರಕ್ಷಿತ್ ಶೆಟ್ಟಿಗೆ 20 ಲಕ್ಷ ರೂ. ಠೇವಣಿ ಇಡುವಂತೆ ದೆಹಲಿ ಹೈಕೋರ್ಟ್ ಆದೇಶ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌