Site icon Vistara News

CM Siddaramaiah : ಮುಡಾ ಆಘಾತದ ನಡುವೆ ಸಿಎಂ ಸಿದ್ದರಾಮಯ್ಯ ನಾಳೆ ಮಂತ್ರಾಲಯಕ್ಕೆ ಭೇಟಿ

CM Siddaramaiah

ರಾಯಚೂರು : ಮುಡಾ ಸೈಟ್ ಹಗರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುತ್ತಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ತನಿಖಾ ಸಂಸ್ಥೆಗಳಿಗೆ ದೂರು ನೀಡಲು ರಾಜ್ಯಪಾಲರಾದ ತಾವರ್​​ಚಂದ್ ಗೆಹ್ಲೋಟ್​ ಅನುಮತಿ ನೀಡುವುದರೊಂದಿಗೆ ವಿಷಯ ಇನ್ನಷ್ಟು ಗಂಭೀರವಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮದೇನೂ ತಪ್ಪಿಲ್ಲ ಎಂದು ಹೇಳುವ ಜತೆಗೆ ಪ್ರತಿಪಕ್ಷಗಳ ಪಟ್ಟು ಜೋರಾಗಿದೆ. ಈ ಎಲ್ಲದರ ನಡುವೆ ಸಿದ್ದರಾಮಯ್ಯ ಅವರು ಸೋಮವಾರ (ಆಗಸ್ಟ್​​19ರಂದು) ಮಂತ್ರಾಲಯಕ್ಕೆ (mantralayam) ಭೇಟಿ ನೀಡಲಿದ್ದಾರೆ.

ಸಿದ್ದರಾಮಯ್ಯ ಅವರು 365ನೇ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಮಾಡಲಿದ್ದಾರೆ. ಇದೇ ವೇಳೆ ಅವರು ಆರಾಧನಾ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11.20 ಕ್ಕೆ ಜಿಂದಾಲ್ ಏರ್ಪೋರ್ಟ್ ಅವರು ಆಗಮಿಸಲಿದ್ದು ಅಲ್ಲಿಂದ ಅವರು ಬಳಿಕ ವಿಶೇಷ ಹೆಲಿಕಾಪ್ಟರ್ ಮೂಲಕ ಮಂತ್ರಾಲಯಕ್ಕೆ ಬಂದು ಇಳಿಯಲಿದ್ದಾರೆ. 12. 05 ಮಂತ್ರಾಲಯದ ಹೆಲಿಪ್ಯಾಡ್ ಬಂದು ಇಳಿಯಲಿದ್ದಾರೆ. ಬಳಿಕ ರಾಯರ ಮೂಲಬೃಂದಾವನಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಆ ಬಳಿಕ ಅವರು ವಿವಿಧ ಕಾಮಗಾರಿ ಗಳಿಗೆ ಚಾಲನೆ ನೀಡಲಿದ್ದಾರೆ.

ರಾಜ್ಯಪಾಲರ ನಡೆಗೆ ಕೆರಳಿದ ಕಾಂಗ್ರೆಸ್ ಪಡೆ; ನಾಳೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಸನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ರಾಜ್ಯಪಾಲರ ವಿರುದ್ಧ ಕೆರಳಿದ ಕಾಂಗ್ರೆಸ್ ಪಡೆ, ನಾಳೆ(ಆ.19) ಬೆಳಗ್ಗೆ 11 ಗಂಟೆಗೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನೆಗೆ (Congress Protest) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದು, ಪ್ರತಿಭಟನೆಯಲ್ಲಿ ಸಚಿವರು ಸ್ಥಳೀಯ ಶಾಸಕರು ಕೆಪಿಸಿಸಿ ಪದಾಧಿಕಾರಿಗಳು ಕಾರ್ಯಕರ್ತರು ಭಾಗಿಯಾಗುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: V Somanna : ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದು ಸಂಸದರ ಕಚೇರಿ ಉದ್ಘಾಟಿಸಿದ ವಿ ಸೋಮಣ್ಣ

ನಾಳೆ ಪ್ರತಿಭಟನೆ ವಿಚಾರ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ಮಾಡಲು ಕರೆ ಕೊಟ್ಟಿದ್ದೇವೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಇಲ್ಲಸಲ್ಲದ ಆರೋಪ ಮಾಡಲು ಹೊರಟಿದ್ದಾರೆ. ಹಾಗಾಗಿ ಮುಖಂಡರಿಗೆ ಪ್ರತಿಭಟನೆ ಮಾಡಲು ಕರೆ ಕೊಟ್ಟಿದ್ದೇವೆ. ಇದು ಶಾಂತಿಯುತ ಪ್ರತಿಭಟನೆ ಅಗಿದ್ದು, ಕೆಲ ಕಿಡಿಗೇಡಿಗಳು ಕಲ್ಲೊಡೆಯುವ ಕೆಲಸ ಮಾಡುತ್ತಾರೆ. ಹಾಗಾಗಿ ಸ್ವಲ್ಪ ಹುಷಾರಾಗಿ ಪ್ರತಿಭಟನೆ ಮಾಡಿ ಅಂತ ಹೇಳಿದ್ದೇನೆ. ನಮ್ಮದು ಗಾಂಧಿ ತತ್ವ, ಈ ದೇಶಕ್ಕೆ ಒಂದು ಸಂದೇಶ ಕೊಡಬೇಕು. ಎಐಸಿಸಿಗೆ ಪ್ರತಿಭಟನೆ ಬಗ್ಗೆ ಗೊತ್ತಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ವರದಿ ಕೊಡಬೇಕು, ಹಾಗಾಗಿ ಭೇಟಿ ಮಾಡಿದ್ದೆ ಎಂದರು.

ತುಂಗಭದ್ರಾ ಡ್ಯಾಂ ಗೇಟ್ ಅಳವಡಿಕೆ ಬಗ್ಗೆ ಪ್ರತಿಕ್ರಿಯಿಸಿ, ಗೇಟ್ ಚೆನ್ನಾಗಿ ಅಳವಡಿಕೆ ಮಾಡಿದ್ದಾರೆ. ಬಿಜೆಪಿಯವರಿಗೆ ಇದು ಉತ್ತರವಾಗಿದೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಕಾರಜೋಳ, ಅಶೋಕ್, ಕುಮಾರಸ್ವಾಮಿ ಏನು ಮಾತಾಡಿದರೋ ಗೊತ್ತಿದೆ ಎಂದರು.

ಸಿದ್ದರಾಮಯ್ಯ ಬೆನ್ನಿಗೆ ನಿಂತ ಕಾಂಗ್ರೆಸ್ ಹೈಕಮಾಂಡ್

ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರಿಂದ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಕಾಂಗ್ರೆಸ್ ಹೈಕಮಾಂಡ್ ನಿಂತಿದೆ. ಸಿದ್ದರಾಮಯ್ಯಗೆ ಕರೆ ಮಾಡಿ, ನಾವು ನಿಮ್ಮ ಜೊತೆಗಿದ್ದೇವೆ. ಕಾನೂನಿನ ಹೋರಾಟ ಮುಂದುವರಿಸಿ ಎಂದು ಹೈಕಮಾಂಡ್ ಧೈರ್ಯ ತುಂಬಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೂಚನೆ ಮೇರೆಗೆ ಕರೆ ಕೇಂದ್ರದ ನಾಯಕರು ಕರೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಆತ್ಮವಿಶ್ವಾಸದಿಂದ ಕಾನೂನು ಹೋರಾಟಕ್ಕೆ ಸಿಎಂ ಸಜ್ಜಾಗಿದ್ದಾರೆ.

Exit mobile version