Site icon Vistara News

CM Siddaramaiah: ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಮೇಲೆ ಪ್ರಕರಣ, ಇಂದು ಕೋರ್ಟ್‌ ತೀರ್ಮಾನ

CM Siddaramaiah 1

ಬೆಂಗಳೂರು : ಮುಡಾ ಹಗರಣ (MUDA Scam) ಸಂಬಂಧ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ದಾಖಲಾದ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಮಾನಿಸಲಿದೆ.

ಕೋರ್ಟ್‌ನ ಈ ಆದೇಶವನ್ನು ಆಧರಿಸಿ ಸಿಎಂ ಸಿದ್ದರಾಮಯ್ಯ ಅವರು ವಿಚಾರಣೆ ಎದುರಿಸಲಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಗೊತ್ತಾಗಲಿದೆ. ಕೋರ್ಟ್ ನೀಡುವ ಆದೇಶವನ್ನು ನೋಡಿಕೊಂಡು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಂ ನೀಡಿರುವ ದೂರನ್ನು ಪರಿಗಣಿಸಿ ಅಭಿಯೋಜನೆಗೆ ಅನುಮತಿ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ರಾಜ್ಯಪಾಲರು ನಿರ್ಧರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಟಿಜೆ ಅಬ್ರಹಾಂ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ. ಈಗಾಗಲೇ ಸ್ನೇಹಮಯಿ ಕೃಷ್ಣ ಎನ್ನುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದಾರೆ. ನಾಳೆ ಖಾಸಗಿ ದೂರು ವಿಚಾರಣೆಗೆ ಸ್ವೀಕರಿಸುವ ಸಂಬಂಧ ನ್ಯಾಯಾಲಯವು ಆದೇಶ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣ ಒಂದು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ. ಅಲ್ಲದೆ ಇತ್ತೀಚಿಗೆ ಬಿಜೆಪಿ ಮತ್ತು ಜೆಡಿಎಸ್ ಈ ಒಂದು ಹಗರಣವನ್ನು ಖಂಡಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬೆಂಗಳೂರಿನಿಂದ ಮೈಸೂರಿನವರೆಗೆ ಮೈಸೂರು ಚಲೋ ಪಾದಯಾತ್ರೆ ಕೂಡ ಮಾಡಿತ್ತು. ಇದಕ್ಕೆ ಕೌಂಟರ್ ಕೊಡಲು ಕಾಂಗ್ರೆಸ್ ಸಹ ಜನಾಂದೋಲನ ಸಭೆಯನ್ನು ಸಹ ಮಾಡಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಟಿಜೆ ಅಬ್ರಹಾಂ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ.

6000ಕ್ಕೂ ಹೆಚ್ಚು ಗ್ರಂಥಾಲಯ ಮೇಲ್ಚಿಚಾರಕರು ಕನಿಷ್ಠ ವೇತನ ವ್ಯಾಪ್ತಿಗೆ;

ಬೆಂಗಳೂರು: ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ 6000ಕ್ಕೂ ಹೆಚ್ಚು ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಘೋಷಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಗ್ರಂಥ ಪಾಲಕರ ದಿನಾಚರಣೆ ಮತ್ತು ಮೇಲ್ವಿಚಾರಕರ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ, ರಾಜ್ಯದಲ್ಲಿ 6599 ಹೊಸ ಗ್ರಾಮ ಗ್ರಂಥಾಲಯ ಕಾರ್ಯಕ್ರಮ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಪುಸ್ತಕಗಳು ಒಳ್ಳೆಯ ಸ್ನೇಹಿತನಿದ್ದಂತೆ. ಗ್ರಂಥಾಲಯಗಳಿಗೆ ಹೋಗುವುದು ಅತ್ಯಂತ ಉತ್ತಮ ಹವ್ಯಾಸ. ಗ್ರಾಮಗಳಲ್ಲಿ 6599 ಗ್ರಾಮ‌ಮಟ್ಟದ ಗ್ರಂಥಾಲಯಗಳನ್ಮು ತೆರೆಯುವ ನಿರ್ಧಾರ ಮಾಡಿ ಘೋಷಣೆ ಮಾಡಿದ್ದೇವೆ ಎಂದರು.

ಜ್ಞಾನ ವಿಕಾಸ ಕೇವಲ ಶಾಲಾ ಶಿಕ್ಷಣದಿಂದ ಮಾತ್ರ ಸಾಧ್ಯವಿಲ್ಲ. ಶಾಲೆಗಳ ಹೊರಗೂ ಕಲಿಕೆ ಅಗತ್ಯ. ಸಾವಿರಾರು ವರ್ಷಗಳ ಕಾಲ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಸಮುದಾಯಗಳಿಗೆ ಅಂಬೇಡ್ಕರ್ ಅವರ ಸಂವಿಧಾನದ ಕಾರಣದಿಂದ ಶಿಕ್ಷಣ ಪಡೆಯುವ ಅವಕಾಶ ಸಿಕ್ಕಿದೆ. ನಾವು 78 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಸ್ವಾತಂತ್ರ್ಯ ಬಂದು ಇಷ್ಡು ವರ್ಷಗಳಾದರೂ ನೂರಕ್ಕೆ ನೂರು ಸಾಕ್ಷರತೆ ಸಾಧ್ಯವಾಗಿಲ್ಲ. ಇದನ್ನು ಸಾಧಿಸುವ ದಿಕ್ಕಿನಲ್ಲಿ ನಾವು ಶ್ರಮಿಸಬೇಕಿದೆ ಎಂದರು.

ಇದನ್ನೂ ಓದಿ: Part Time Lecturers: ಅರೆಕಾಲಿಕ ಉಪನ್ಯಾಸಕರಿಗೆ ಗುಡ್ ನ್ಯೂಸ್; ಗೌರವಧನದಲ್ಲಿ ಭಾರಿ ಹೆಚ್ಚಳ

Exit mobile version