ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ರಾಜ್ಯಪಾಲರ (CM vs Governor) ವಿರುದ್ಧ ಹೋರಾಟ ತೀವ್ರಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯಪಾಲರ ನಡೆ ಖಂಡಿಸಿ ರಾಜ್ಯಾದ್ಯಂತ ಸೋಮವಾರ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್, ಇದೀಗ ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲು, ದೂರು ಕೊಡಲು ಚಿಂತನೆ ನಡೆಸಿದೆ.
ಸಿಎಂ ವಿರುದ್ಧ ಸಂವಿಧಾನಬಾಹಿರವಾಗಿ ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. ರಾಜ್ಯಪಾಲರು ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ದೂರು ನೀಡಲು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ. ಇದರಿಂದ ರಾಜ್ಯ ಸರ್ಕಾರ ವರ್ಸಸ್ ರಾಜ್ಯಪಾಲರ ಜಟಾಪಟಿ ರಾಷ್ಟ್ರಪತಿಗಳ ಅಂಗಳ ತಲುಪುವ ಸಾಧ್ಯತೆ ಇದೆ.
ನೆನ್ನೆ ಪ್ರತಿಭಟನೆ ಬಳಿಕ ಡಿಸಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ರವಾನಿಸಲಾಗಿತ್ತು. ಇದೀಗ ರಾಜ್ಯಪಾಲರ ಕಚೇರಿ ದುರ್ಬಳಕೆ ಕುರಿತು ದೆಹಲಿಯಲ್ಲಿ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ದೂರು ನೀಡಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಚರ್ಚೆ ಸಿಎಂ, ಡಿಸಿಎಂ ಸೇರಿ ಹಿರಿಯ ಸಚಿವರು ಚರ್ಚೆ ನಡೆಸಿದ್ದಾರೆ.
ಇದನ್ನೂ ಓದಿ | Electricity Theft : ಸರ್ಕಾರ ಫ್ರೀ ಕೊಡುತ್ತಿದ್ದರೂ ಮತ್ತಷ್ಟು ಕರೆಂಟ್ ಕದ್ದು ಸಿಕ್ಕಿಬಿದ್ದ ಕಾಂಗ್ರೆಸ್ ನಾಯಕಿ!
ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ: ಸಿದ್ದರಾಮಯ್ಯ
ಬೆಂಗಳೂರು: ನ್ಯಾಯಾಲಯದ ಈ ಆದೇಶವನ್ನು ವಿನಮ್ರವಾಗಿ ಸ್ವೀಕರಿಸುತ್ತ ನನ್ನ ಧನ್ಯವಾದ ಸಲ್ಲಿಸುತ್ತೇನೆ. ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ ಎಂಬುದು ನನ್ನ ದೃಢ ನಂಬಿಕೆಯಾಗಿದೆ. ಸತ್ಯಮೇವಜಯತೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಹೈ ಕೋರ್ಟ್ ಮಧ್ಯಂತರ ಆದೇಶ ಕುರಿತು ಎಕ್ಸ್ ಖಾತೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆಯಿಟ್ಟಿರುವ, ಈ ನೆಲದ ಕಾನೂನನ್ನು ಗೌರವಿಸುವ ಓರ್ವ ಪ್ರಜೆಯಾಗಿ ಸುಳ್ಳು ಪ್ರಕರಣದಲ್ಲಿ ನನ್ನ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ರಾಜಕೀಯ ಪ್ರೇರಿತ ನಿರ್ಣಯದ ವಿರುದ್ಧ ಘನ ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದೇನೆ ಉಚ್ಚ ನ್ಯಾಯಾಲಯವು ಈ ವಿಚಾರವನ್ನು ಆಲಿಸಿ, ಮುಂದಿನ ವಿಚಾರಣೆಯ ವರೆಗೆ ವಿಶೇಷ ನ್ಯಾಯಾಲಯಗಳು ವಿಚಾರಣೆ ಮುಂದೂಡಬೇಕು. ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂಬ ಮಧ್ಯಂತರ ಆದೇಶವನ್ನು ನೀಡಿದೆ.ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ ಎಂಬುದು ನನ್ನ ದೃಢ ನಂಬಿಕೆಯಾಗಿದೆ ಎಂದು ತಿಳಿಸಿದ್ದಾರೆ.