Site icon Vistara News

COMEDK UGET 2024 : ಇಂದು ಮಧ್ಯಾಹ್ನ ಕಾಮೆಡ್‌ – ಕೆ ಫಲಿತಾಂಶ; ರಿಸಲ್ಟ್​ ನೋಡೋದು, ಡೌನ್‌ಲೋಡ್‌ ಮಾಡಿಕೊಳ್ಳೋದು ಹೇಗೆ?

COMEDK UGET 2024

ಬೆಂಗಳೂರು: ಕರ್ನಾಟಕದ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (COMEDK) ನಡೆಸಿರುವ 2024ರ ವರ್ಷದ ಪ್ರವೇಶ ಪರೀಕ್ಷೆಯ (UGET) ಫಲಿತಾಂಶವನ್ನು ಶುಕ್ರವಾರ (ಮೇ 24) ಮಧ್ಯಾಹ್ನ 2 ಗಂಟೆಗೆ ಪ್ರಕಟಗೊಳ್ಳಲಿದೆ . COMEDK UGET 2024ರ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್​​ನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದ್ದು, ಡೌನ್‌ಲೋಡ್ ಮಾಡಿಕೊಳ್ಳುವ ಅವಕಾಶವನ್ನೂ ಕಲ್ಪಿಸಲಾಗಿದೆ.

ಕರ್ನಾಟಕದ 150 ಪ್ರೈವೇಟ್‌ ಎಂಜಿನಿಯರಿಂಗ್ ಕಾಲೇಜು, ದೇಶದ ಕೆಲವು ಕಡೆ ಇರುವ 40 ಖಾಸಗಿ ವಿವಿಗಳಲ್ಲಿನ ಸುಮಾರು 22 ಸಾವಿರ ಎಂಜಿನಿಯರಿಂಗ್ ಸೀಟುಗಳ ಪ್ರವೇಶಾತಿಗಾಗಿ ಈ ಅರ್ಹತಾ ಪರೀಕ್ಷೆಯನ್ನು ನಡೆಸಲಾಗಿತ್ತು. ದೇಶದ 1,03,799 (ಶೇಕಡಾ 87.96) ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ಶುಕ್ರವಾರ ಅವರ ಭವಿಷ್ಯ ನಿರ್ಧಾರ ಆಗಲಿದೆ. ವಿದ್ಯಾರ್ಥಿಗಳು ತಮ್ಮ ಶ್ರೇಯಾಂಕದ ಪಟ್ಟಿಯನ್ನು ಪರಿಶೀಲಿಸಿಕೊಂಡು ಸ್ಕೋರ್‌ ಕಾರ್ಡ್‌ ಅನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

COMEDK UGET ಫಲಿತಾಂಶ 2024 ಪರಿಶೀಲನೆ ಹೇಗೆ?

ವಾರದಲ್ಲಿ ಕೌನ್ಸೆಲಿಂಗ್‌ ನೋಂದಣಿ ಆರಂಭ

ಮೇ 24ರಂದು ಕಾಮೆಡ್‌ಕೆ ರಿಸಲ್ಟ್‌ ಪ್ರಕಟವಾಗಿ ವಾರದಲ್ಲಿ ಕೌನ್ಸೆಲಿಂಗ್‌ ನೋಂದಣಿ ಆರಂಭವಾಗಲಿದೆ. ಕರ್ನಾಟಕದಲ್ಲಿರುವ 150 ಖಾಸಗಿ ಎಂಜಿನಿಯರಿಂಗ್ ಕಾಲೇಜು ಮತ್ತು ದೇಶದ ವಿವಿಧ ಕಡೆ ಇರುವ 40 ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಯಾವ ಕಡೆಯಲ್ಲಾದರೂ ಪ್ರವೇಶ ಪಡೆಯಬೇಕೆಂದರೆ ಇಲ್ಲಿ ನೋಂದಣಿಯನ್ನು ಮಾಡಿಕೊಂಡಿರಬೇಕು.

ಇದನ್ನೂ ಓದಿ: Share Market: ಸೆನ್ಸೆಕ್ಸ್‌ ನೆಗೆತ, ನಿಫ್ಟಿ ಜಿಗಿತ; ಮೋದಿ ಭವಿಷ್ಯ ನಿಜವಾಗುತ್ತಾ? ಇಂದಿನ ಏರಿಕೆಗೆ ಕಾರಣಗಳು ಗೊತ್ತಾ?

ಪ್ರತಿ ವರ್ಷ ಮೇ ತಿಂಗಳಲ್ಲಿ ಕಾಮೆಡ್‌-ಕೆ ಪರೀಕ್ಷೆ

ಕಾಮೆಡ್‌ – ಕೆ ಪರೀಕ್ಷೆಯನ್ನು ದೇಶಾದ್ಯಂತ ನಡೆಸಲಾಗಿದ್ದು, 200ಕ್ಕೂ ಹೆಚ್ಚು ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಯುವ ಈ ಪ್ರವೇಶ ಪರೀಕ್ಷೆಯು ಪದವಿ ಪೂರ್ವ ಮೆಡಿಕಲ್, ಎಂಜಿನಿಯರಿಂಗ್, ಡೆಂಟಲ್‌ ಕೋರ್ಸ್‌ಗಳ ಪ್ರವೇಶಕ್ಕೆ ಬುನಾದಿಯಾಗಲಿದೆ.

Exit mobile version