Site icon Vistara News

Communal tension: ಅಯೋಧ್ಯೆಧಾಮ ರೈಲಿನಲ್ಲಿ ಅನ್ಯಕೋಮಿನ ವ್ಯಕ್ತಿಯಿಂದ ಪ್ರಚೋದನೆ, ಶ್ರೀರಾಮಭಕ್ತರಿಂದ ಪ್ರತಿಭಟನೆ

hospet communal tension

ವಿಜಯನಗರ: ಅಯೋಧ್ಯೆ ರಾಮ ಮಂದಿರಕ್ಕೆ (Ayodhya Ram Mandir) ಭೇಟಿ ನೀಡಿ ಮರಳುತ್ತಿದ್ದ ಭಕ್ತರು ಇದ್ದ ಅಯೋಧ್ಯೆಧಾಮ (Ayodhya Dham) ರೈಲಿನಲ್ಲಿ ಅನ್ಯಕೋಮಿನ ವ್ಯಕ್ತಿಯೊಬ್ಬ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರಿಂದ ಶ್ರೀರಾಮಭಕ್ತರು ಕೆರಳಿದ, ಪ್ರತಿಭಟನೆ ನಡೆಸಿದ ಪ್ರಸಂಗ (Communal tension) ಹೊಸಪೇಟೆಯಲ್ಲಿ (hospet) ನಡೆದಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಯೋಧ್ಯೆಯಿಂದ ಮೈಸೂರಿನತ್ತ ಬರುತ್ತಿದ್ದ ಅಯೋಧ್ಯೆಧಾಮ ರೈಲಿನಲ್ಲಿ ಸಾವಿರಾರು ಶ್ರೀರಾಮ ಭಕ್ತರು ಅಯೋಧ್ಯೆಯತ್ತ ಪ್ರಯಾಣಿಸುತ್ತಿದ್ದು, ಅನ್ಯಕೋಮಿನ ವ್ಯಕ್ತಿಯೊಬ್ಬ ಆಕ್ಷೇಪಾರ್ಹ ಮಾತು ಆಡಿದ್ದಾನೆ. ಇದರಿಂದ ಕೆರಳಿದ ಶ್ರೀರಾಮಭಕ್ತರು ರೈಲು ನಿಲ್ಲಿಸಿ ಪ್ರತಿಭಟನೆ ನಡೆಸಿದರು.

ಹೊಸಪೇಟೆ ಪಟ್ಟಣದ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ರಾಮ ಭಕ್ತರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪಿ, ಗಲಾಟೆ ಪ್ರಾರಂಭ ಆಗುತ್ತಿದ್ದಂತೆ ಸ್ಥಳದಿಂದ ಕಾಲು ಕಿತ್ತಿದ್ದಾನೆ. ಅಯೋಧ್ಯೆಧಾಮ ಟ್ರೈನ್ ಇಳಿದು ಪಕ್ಕಕ್ಕೆ ನಿಂತಿದ್ದ ಲಿಂಕ್ ಟ್ರೈನ್‌ಗೆ ಹತ್ತಿ ಹುಬ್ಬಳ್ಳಿಯತ್ತ ಪ್ರಯಾಣ ಬೆಳೆಸಿದ್ದ. ಲಿಂಕ್ ಟ್ರೈನ್ ಗದಗಕ್ಕೆ ಬರುತ್ತಿದ್ದಂತೆ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳ್ಳಾರಿ ರೈಲ್ವೇ ಪೊಲೀಸ್ ಠಾಣೆಯಲ್ಲಿ FIR ದಾಖಲು ಆಗಿದೆ.

ಪ್ರಚೋದನಕಾರಿ ಹೇಳಿಕೆ ನೀಡಿದ ವ್ಯಕ್ತಿಯನ್ನು ಬಂಧಿಸಬೇಕೆಂದು ಪಟ್ಟು ಹಿಡಿದು ಶ್ರೀರಾಮಭಕ್ತರು ಪ್ರತಿಭಟನೆ ಮಾಡಿದರು. ಇದರಿಂದಾಗಿ 8.15ಕ್ಕೆ ಹೊಸಪೇಟೆಗೆ ಬಂದಿದ್ದ ರೈಲು, 10 ಗಂಟೆಯವರೆಗೂ ಬಳ್ಳಾರಿಯಲ್ಲಿ ಬಾಕಿಯಾಯಿತು. ಎರಡು ತಾಸುಗಳ ಕಾಲ ಹೊಸಪೇಟೆ ರೈಲ್ವೇ ನಿಲ್ದಾಣದಲ್ಲಿ ಅಯೋಧ್ಯೆ ಧಾಮ ರೈಲನ್ನು ತಡೆಯಲಾಯಿತು.

ಘಟನೆ ನಡೆದ ಕ್ಷಣಾರ್ಧದಲ್ಲೇ ಹೊಸಪೇಟೆ ರೈಲು ನಿಲ್ದಾಣ ರಣರಂಗ ಆಗಿಬಿಟ್ಟಿತು. ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ಸ್ಥಳಕ್ಕೆ ದೌಡಾಯಿಸಿ, ಶ್ರೀರಾಮ ಭಕ್ತರ ಮನವೊಲಿಸಲು ಪ್ರಯತ್ನಪಟ್ಟರು. ವಿಜಯನಗರ ಎಸ್ಪಿ ಶ್ರೀಹರಿಬಾಬು, ಹೊಸಪೇಟೆಯ ಪೊಲೀಸರಿಂದಲೂ ಮನವೊಲಿಕೆಗೆ ಪ್ರಯತ್ನ ನಡೆಯಿತು. ಹಿಂದೂಪರ, ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ಪ್ರಯತ್ನದಿಂದ ಕೊನೆಗೂ ಎರಡು ಗಂಟೆಗಳ ಬಳಿಕ ರೈಲು ಮೈಸೂರು ಕಡೆಗೆ ಪ್ರಯಾಣ ಬೆಳೆಸಿತು. ಮುಂಜಾಗ್ರತಾ ಕ್ರಮವಾಗಿ ಟ್ರೈನ್‌ನೊಳಗೆ ರೈಲ್ವೇ ಪೊಲೀಸರು, ಸ್ಥಳೀಯ ಪೊಲೀಸರು ಬಳ್ಳಾರಿಯವರೆಗೆ ಸಂಚಾರ ಮಾಡಿದರು.

ಇದನ್ನೂ ಓದಿ: Amit Shah: ಅಯೋಧ್ಯೆಯಲ್ಲಿ ಸುತ್ತೂರು ಮಠ ಶಾಖೆ; ಅಮಿತ್ ಶಾ ಸಂತಸ

Exit mobile version