Site icon Vistara News

Lok Sabha Election : ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಇಲ್ಲಿದೆ ಪೂರ್ಣ ವಿವರ

Congress Party

ನವದೆಹಲಿ: ಕರ್ನಾಟಕ, ತೆಲಂಗಾಣ, ಕೇರಳ, ಛತ್ತೀಸ್​ಗಢ, ಮೇಘಾಲಯ, ನಾಗಾಲ್ಯಾಂಡ್ ಮತ್ತು ಸಿಕ್ಕಿಂ ರಾಜ್ಯಗಳ 39 ಲೋಕಸಭಾ ಕ್ಷೇತ್ರಗಳಿಗೆ ಅಖಿಲ ಭಾರತ ಕಾಂಗ್ರೆಸ್​ ಸಮಿತಿ ಶುಕ್ರವಾರ ಅಭ್ಯರ್ಥಿಗಳ (Lok Sabha Election) ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಕರ್ನಾಟಕದಲ್ಲಿ ಏಳು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ್ದು ಶಿವಮೊಗ್ಗದಲ್ಲಿ ನಟ ಶಿವರಾಜ್​ಕುಮಾರ್​ ಪತ್ನಿ ಗೀತಾ ಶಿವರಾಜ್​ಕುಮಾರ್ ಅವರು ಸ್ಪರ್ಧಿಸಲಿದ್ದಾರೆ. ಇದಲ್ಲದೆ, ತುಮಕೂರು, ಮಂಡ್ಯ, ಹಾಸನ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಹಾಗೂ ಹಾವೇರಿ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ.

ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಎರಡನೇ ಬಾರಿಗೆ ಕೇರಳದ ವಯನಾಡ್ ನಿಂದ ಸ್ಪರ್ಧಿಸಲಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ರಾಜ್ಯದ ಅಲಪ್ಪುಳದಿಂದ ಕಣಕ್ಕಿಳಿಸಲಾಗಿದೆ. ಹಾಲಿ ಸಂಸದ ಶಶಿ ತರೂರ್ ಅವರು ಕೇರಳದ ತಿರುವನಂತಪುರಂನಿಂದ ಸತತ ನಾಲ್ಕನೇ ಬಾರಿಗೆ ಸ್ಪರ್ಧಿಸಲಿದ್ದಾರೆ. ಮಾಜಿ ಕೇಂದ್ರ ಸಚಿವ 2009 ರಿಂದ ತಿರುವನಂತಪುರಂ ಸ್ಥಾನವನ್ನು ಗೆಲ್ಲುತ್ತಿದ್ದಾರೆ.

ಛತ್ತೀಸ್​ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ರಾಜನಂದಗಾಂವ್ ಕ್ಷೇತ್ರದಿಂದ ಮತ್ತು ಮಾಜಿ ಸಚಿವ ತಮರ್ಧ್ವಜ್ ಸಾಹು ಅವರನ್ನು ಮಹಾಸಮುಂದ್ ನಿಂದ ಮತ್ತು ಜೋತ್ಸ್ನಾ ಮಹಂತ್ ಅವರನ್ನು ಛತ್ತೀಸ್​ಗಢದ ಕೊರ್ಬಾದಿಂದ ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ.

ಕೇರಳ, ಕರ್ನಾಟಕ, ತೆಲಂಗಾಣ, ದೆಹಲಿ ಮತ್ತು ಛತ್ತೀಸ್ ಗಢ ಸೇರಿದಂತೆ 10 ರಾಜ್ಯಗಳ 60 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಕಾಂಗ್ರೆಸ್ ಚುನಾವಣಾ ಸಮಿತಿ ಗುರುವಾರ ಸಭೆ ಸೇರಿತ್ತು.

ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ

ಕೇರಳದ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ

ಛತ್ತಿಸ್​ಗಢದ ಅಭ್ಯರ್ಥಿಗಳ ಪಟ್ಟಿ

ಲಕ್ಷದ್ವೀಪ

ಮೇಘಾಲಯ

ನಾಗಾಲ್ಯಾಂಡ್

ಸಿಕ್ಕಿಂ

ತೆಲಂಗಾಣ

ತ್ರಿಪುರಾ

ಇಂಡಿಯಾ ಬಣದೊಳಗಿನ ಸೀಟು ಹಂಚಿಕೆ ಮಾತುಕತೆಯ ನಂತರ ಇತರ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇದನ್ನೂ ಓದಿ : Lok Sabha Election 2024: ಕಾಂಗ್ರೆಸ್‌ ಅಧಿಕೃತ ಪಟ್ಟಿ ಬಿಡುಗಡೆ; ಜಯಪ್ರಕಾಶ್‌ ಹೆಗ್ಡೆ, ಚಂದ್ರಪ್ಪ ಮಿಸ್!

2024 ರ ಲೋಕಸಭಾ ಚುನಾವಣೆಗೆ 16 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ (ಯುಟಿ) 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಕಳೆದ ವಾರ ಬಿಡುಗಡೆ ಮಾಡಿತ್ತು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಉತ್ತರ ಪ್ರದೇಶದ ವಾರಣಾಸಿಯಿಂದ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಗುಜರಾತ್ ನ ಗಾಂಧಿನಗರದಿಂದ ಕಣಕ್ಕಿಳಿಸಲಾಗಿದೆ. ಬಿಜೆಪಿ ಪಟ್ಟಿಯಲ್ಲಿ 34 ಕೇಂದ್ರ ಸಚಿವರು ಮತ್ತು ಇಬ್ಬರು ಮಾಜಿ ಮುಖ್ಯಮಂತ್ರಿಗಳು ಸೇರಿದ್ದಾರೆ. ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಉಪಸ್ಥಿತರಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೂಮ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.

Exit mobile version