Site icon Vistara News

Kanthesh : ಅಶ್ಲೀಲ ವಿಡಿಯೊ ಪ್ರಕಟಿಸದಂತೆ ಕೋರ್ಟ್​​ನಿಂದ ನಿರ್ಬಂಧ ತಂದ ಈಶ್ವರಪ್ಪ ಪುತ್ರ ಕಾಂತೇಶ್​​

Kantesh

ಬೆಂಗಳೂರು: ಕರ್ನಾಟkದಲ್ಲಿ ಈಗ ಮಹಿಳೆಯರ ಮೇಲಿನ ದೌರ್ಜನ್ಯದ ಕುರಿತ ಚರ್ಚೆ ಜೋರಾಗಿ ನಡೆಯುತ್ತಿದೆ. ಲೈಂಗಿಕ ಹಗರಣವೊಂದು ಬಯಲಾದ ಬಳಿಕ ಈ ವಿಷಯ ಗಂಭೀರ ಎನಿಸಿದೆ. ಪ್ರಜ್ವಲ್ ರೇವಣ್ಣ ಅವರದ್ದು ಎಂದು ಹೇಳಲಾದ ಅಶ್ಲೀಲ ವಿಡಿಯೊ ಹರಿದಾಡಿ ಕೇಸು ದಾಖಲಾಗಿ, ತನಿಖಾ ತಂಡ ರಚನೆಯಾದ ಬಳಿಕ ಚರ್ಚೆಗೆ ಸಾಕಷ್ಟು ವಿಷಯಗಳು ಸಿಕ್ಕಿವೆ. ಇವೆಲ್ಲದರ ನಡುವೆ ಬಿಜೆಪಿಯ ರಾಷ್ಟ್ರೀಯ ನಾಯಕರ ಮಾತಿಗೆ ಸೊಪ್ಪು ಹಾಕದೇ ಪಕ್ಷೇತರರಾಗಿ ಶಿವಮೊಗ್ಗ ಚುನಾವಣಾ ಕಣಕ್ಕೆ ಇಳಿದಿರುವ ಮಾಜಿ ಸಚಿವ ಈಶ್ವರಪ್ಪ ಅವರ ಪುತ್ರ ಕಾಂತೇಶ್ (Kanthesh )​ ಕೂಡ ತಮಗೆ ಸಂಬಂಧಿಸಿದ ತಮ್ಮ ಮಾನ ಹಾನಿ ಮಾಡುವ ಯಾವುದೇ ಸುದ್ದಿಗಳನ್ನು ಪ್ರಕಟಿಸದಂತೆ ಕೋರ್ಟ್​​ನಿಂದ ನಿರ್ಬಂಧ ತಂದಿದ್ದಾರೆ. ಕಾಂತೇಶ್, ಮಾಧ್ಯಮಗಳಿಗೆ ನಿರ್ಬಂಧ ಕೋರಿ ಸಲ್ಲಿಸಿದ ಅರ್ಜಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಾನ್ಯ ಮಾಡಿದ್ದು, ಯಾವುದೇ ಮಾನಹಾನಿಕರ ದೃಶ್ಯ ಪ್ರಸಾರ ಮಾಡದಂತೆ ಮಧ್ಯಂತರ ನಿರ್ಬಂಧಕಾಜ್ಞೆ ಹೊರಡಿಸಿದೆ.

ಲೋಕಸಭೆ ಚುನಾವಣೆ ವೇಳೆ ತಮ್ಮ ಹೆಸರಿಗೆ ಮಸಿ ಬಳಿಯುವ ಸಾಧ್ಯತೆಗಳಿವೆ. ದುರುದ್ದೇಶಪೂರಿತ ವಿಡಿಯೊ ಅಥವಾ ಇನ್ಯಾವುದೇ ಮಾಹಿತಿಗಳನ್ನು ಭಿತ್ತರಿಸುವ ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಕಾಂತೇಶ್​ ಅವರು ದೃಶ್ಯಗಳ ಪ್ರಸಾರಕ್ಕೆ ನಿರ್ಬಂಧ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಕೋರ್ಟ್​ ಪರಿಗಣಿಸಿದೆ.

ಅರ್ಜಿಯಲ್ಲಿ ಏನಿದೆ?:

ಲೋಕಸಭೆ ಚುನಾವಣೆ ನಡೆಯುತ್ತಿರುವ ಈ ಸಮಯದಲ್ಲಿ ಕೆಲ ಮಾಧ್ಯಮಗಳು ನನ್ನ ಘನತೆ, ಗೌರವ ಮತ್ತು ಮಾನಹಾನಿ ಮಾಡಲು ಪ್ರಯತ್ನಿಸುತ್ತಿವೆ ಎಂಬ ಅನುಮಾನಗಳಿವೆ. ನನ್ನನ್ನೇ ನಕಲು ಮಾಡಿದ ಅಶ್ಲೀಲ ಪೋಟೊ, ವಿಡಿಯೊ ಮತ್ತು ಅಡಿಯೊಗಳನ್ನು ಪ್ರಸಾರ ಮಾಡಲು ಯತ್ನಿಸುತ್ತಿವೆ. ಒಂದೊಮ್ಮೆ ಅಂತಹ ಅಕ್ಷೇಪಾರ್ಹ ವಿಡಿಯೊ. ಫೋಟೊಗಳು ಪ್ರಸಾರಗೊಂಡರೆ ಅಥವಾ ಪ್ರಕಟವಾದರೆ ನನ್ನ ಮಾನಹಾನಿಯಾಗುತ್ತದೆ. ಆದ್ದರಿಂದ ಮಾಧ್ಯಮಗಳ ವಿರುದ್ಧ ಮಧ್ಯಂತರ ನಿರ್ಬಂಧಕಾಜ್ಞೆ ಆದೇಶ ನೀಡಬೇಕು’ ಎಂದು ಕಾಂತೇಶ್ ದಾವೆಯಲ್ಲಿ ಕೋರಿದ್ದಾರೆ.

ಯಡಿಯೂರಪ್ಪ ವಿರುದ್ಧ ಬಂಡೆದ್ದ ಅಪ್ಪ, ಮಗ

ಮಾಜಿ ಸಚಿವ ಹಾಗೂ ಬಿಜೆಪಿ ಕಟ್ಟಾಳು ಕೆಎಸ್​ ಈಶ್ವರಪ್ಪ ಪುತ್ರ ಕಾಂತೇಶ್ ಅವರು ಈ ಬಾರಿ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಹೈಕಮಾಂಡ್​ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಿದೆ. ಆಕ್ರೋಶಗೊಂಡಿರುವ ಕೆಎಸ್ ಈಶ್ವರಪ್ಪ ಯಡಿಯೂರಪ್ಪ ಹಾಗೂ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಸಿಡಿದೆದ್ದಿದ್ದಾರೆ. ಕುಟುಂಬ ರಾಜಕಾರಣ ಎಂದು ಹೇಳಿದ್ದಾರೆ. ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಲು ಶಿವಮೊಗ್ಗದಲ್ಲಿ ಬಿಎಸ್​ವೈ ಪುತ್ರ ರಾಘವೇಂದ್ರ ವಿರುದ್ಧ ಸ್ಪರ್ಧೆಗಿಳಿದಿದ್ದಾರೆ.

ಇದನ್ನೂಓದಿ: Hassan Pen Drive Case: ಪೆನ್‌ಡ್ರೈವ್‌ನಲ್ಲಿ ಅಶ್ಲೀಲ ವಿಡಿಯೊ ಅಪ್‌ಲೋಡ್‌ ಆಗಿದ್ದು ವಿದೇಶದಲ್ಲಿ! ದುಬೈನಲ್ಲಿ ನಡೆದಿದ್ದೇನು?

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರಿಂದ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿದೆ. ಇದೀಗ ಪಕ್ಷೇತರವಾಗಿ ಕಣಕ್ಕಿಳಿದಿರುವ ಈಶ್ವರಪ್ಪ ರಾಘವೇಂದ್ರ ಅವರನ್ನು ಸೋಲಿಸಬೇಕೆಂದು ಪಣತೊಟ್ಟಿದ್ದಾರೆ.

Exit mobile version