ಕಲಬುರಗಿ: ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಆರು ಗೋವುಗಳ ರಕ್ಷಣೆ ಮಾಡಲು(Cow Smuggling) ಮುಂದಾದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ಹಲ್ಲೆ ನಡೆದ ಪ್ರಕರಣ ಗುರುವಾರ ರಾತ್ರಿ ನಡೆದಿದೆ. ಗೋವುಗಳನ್ನು ಸಾಗಿಸುತ್ತಿದ್ದನ್ನು ತಡೆದಿದ್ದಕ್ಕೆ 30ರಿಂದ 35 ಮುಸ್ಲಿಂ ಯುವಕರು ಹಿಂದೂ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ ಮಾಡಿ ಗಾಯಗೊಳಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕಲಬುರಗಿ ನಗರದ ಖಾದ್ರಿ ಚೌಕ್ ಬಳಿ ಘಟನೆ. ನಡೆದಿದ್ದು, ರಾಮ ಸೇನೆ ಕಾರ್ಯಕರ್ತರು ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಕಲ್ಲು ತೂರಾಟ ನಡೆದಿದೆ ಎಂಬುದಾಗಿ ದೂರಿನಲ್ಲಿ ದಾಖಲಾಗಿದೆ. ಬಕ್ರಿದ್ ಹಬ್ಬದ ಹಿನ್ನಲೆಯಲ್ಲಿ ಖಾದ್ರಿ ಚೌಕ್ ಬಳಿ ಕಸಾಯಿ ಖಾನೆಗೆ ಗೋವುಗಳನ್ನು ಸಾಗಿಸುತ್ತಿದ್ದರು. ಆಳಂದ ಕಾಲೋನಿ ಬಳಿ ಒಂದು ಟಂ ಟಂ ಹಾಗೂ ಪಿಕ್ ವಾಹನದ ಮೂಲಕ ಸಾಗಿಸಲಾಗುತ್ತಿದ್ದ ಗೋವುಗಳನ್ನು ಹಿಂದೂಪರ ಸಂಘಟನೆ ಕಾರ್ಯಕರ್ತರು ತಡೆದಿದ್ದಾರೆ. ಈ ವೇಳೆ ಅವರ ಮೇಲೆ ಕಲ್ಲುಗಳನ್ನು ತೂರಿದ್ದಾರೆ. ಘಟನೆಯಲ್ಲಿ ರಮೇಶ್ ದೇಸಾಯಿ, ಹಾಗೂ ಮಹಾದೇವ್ ಎನ್ನುವರಿಗೆ ಗಾಯವಾಗಿದೆ. ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ. ನೀಡಲಾಗುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಚೌಕ್ ಪೊಲೀಸ್ ಠಾಣಾವ್ಯಾಪ್ತಿ ಪ್ರಕರಣ ದಾಖಲಾಗಿದೆ.
ಧಾರವಾಡದಲ್ಲೂ ಹಲ್ಲೆ, ಪ್ರತಿಭಟನೆ
ಗೋವು ಸಾಗಿಸುತ್ತಿದ್ದನ್ನು ಪ್ರಶ್ನಿಸಿದ ಬಜರಂಗ ದಳ ಕಾರ್ಯಕರ್ತನ ಮೇಲೆ ಮುಸ್ಲಿಮರು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಘಟನೆ ಬಳಿಕೆ ಇಲ್ಲಿನ ಉಪನಗರ ಠಾಣೆಗೆ ಹಿಂದೂಪರ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಸೋಮಶೇಖರ ಚೆನ್ನಶೆಟ್ಟಿ ಹಲ್ಲೆಗೊಳಗಾದ ಯುವಕ. ಗೋ ರಕ್ಷಣೆ ಮಾಡಲು ಹೋದಾಗ ಆತನ ಮೇಲೆ ಹಲ್ಲೆ ನಡೆಸಲಾಗಿದೆ. ನಗರದ ಹಳೆ ಎಪಿಎಂಸಿ ಬಳಿ ಘಟನೆ ನಡೆದಿದ್ದು, ಪ್ರಾಣಿ ರಕ್ಷಕನೂ ಆಗಿರೋ ಸೋಮಶೇಖರನ ಮೇಲಿನ ಹಲ್ಲೆಯನ್ನು ಖಂಡಿಸಲಾಗಿದೆ. ಉರಗ ರಕ್ಷಕನೂ ಆಗಿರೋ ಸೋಮಶೇಖರ ಮೇಲೆ ಹಲ್ಲೆ ಮಾಡಿರುವುದು ತಪ್ಪು ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.
ಇದನ್ನೂ ಓದಿ: Road Accident : ಚಿತ್ರದುರ್ಗದಲ್ಲಿ ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ ಸ್ಥಳದಲ್ಲೇ ನಾಲ್ಕು ಮಂದಿ ಸಾವು
ಪ್ರತಿಭಟನೆ ಬಳಿಕ ವಿಧಾನ ಸಭೆ ವಿಪಕ್ಷ ಉಪನಾಯಕರ ಅರವಿಂದ ಬೆಲ್ಲದ್ ಮಾತನಾಡಿ, ಶಾಂತ ಧಾರವಾಡದಲ್ಲಿ ಇವತ್ತು ಇನ್ನೊಂದು ದುರ್ಘಟನೆ ಆಗಿದೆ. ಬಕ್ರೀದ್ ಸಮಯದಲ್ಲಿ ಹಸುಗಳನ್ನು ಕಡಿಯಲು ಉದ್ದೇಶಿಸಿದ್ದರು. ಇಂತಿಷ್ಟು ವಯಸ್ಸಾದ್ರೆ ಮಾತ್ರ ವಧೆ ಮಾಡುವ ಅವಕಾಶವಿದೆ. ಆದರೆ, ಚಿಕ್ಕವಯಸ್ಸಿನ ಹಸು ಸಾಗಿಸುತ್ತಿರುವ ಬಗ್ಗೆ ಪ್ರಶ್ನಿಸಿದ್ದಕ್ಕೆ ಯುವಕ ಹಲ್ಲೆ ಮಾಡಿದ್ದಾರೆ.
ಸೋಮಶೇಖರ್ ಚನ್ನಶಟ್ಟಿ ಎಲ್ಲ ಪ್ರಾಣಿ, ಜೀವಿಗಳ ರಕ್ಷಣೆ ಮಾಡುತ್ತಾರೆ. ಪ್ರಾಣಿ ಪಕ್ಷಿಗಳಿಗೆ ತೊಂದರೆಯಾದರೆ ಚಿಕಿತ್ಸೆ ಕೊಡಿಸುತ್ತಾರೆ. ಬೇಫಾರಿ ಎಂಬ ಕಸಾಯಿಖಾನೆ ಮಾಲೀಕ ಹಲ್ಲೆ ಮಾಡಿದ್ದಾನೆ. ಅವನ ಜೊತೆಗೆ 50-60 ಜನ ಸೇರಿ ಹಲ್ಲೆ ಮಾಡಿದ್ದಾರೆ. ಕಿವಿ ಕತ್ತರಿಸುವಂತೆ ಹೊಡೆದಿದ್ದಾರೆ. ಘಟನೆ ಆಗಿ ಮೂರುವರೆ ಗಂಟೆಯಾದರೂ ಪೊಲೀಸರಿಂದ ಯಾವುದೇ ಕ್ರಮ ಆಗಿರಲಿಲ್ಲ. ಹೀಗಾಗಿ ಠಾಣೆಗೆ ಮುತ್ತಿಗೆ ಹಾಕಲಾಗಿದೆ. ಈಗ ಪೊಲೀಸ್ ಆಯುಕ್ತರು ಕ್ರಮದ ಭರವಸೆ ನೀಡಿದ್ದಾರೆ. ಅರ್ಧ ತಾಸಿನಲ್ಲಿ ಎಫ್.ಐಆರ್ ಮಾಡುತ್ತೇವೆ ಎಂದಿದ್ದಾರೆ. ಹೀಗಾಗಿ ಈಗ ಪ್ರತಿಭಟನೆ ವಾಪಸ್ ಪಡೆಯುತ್ತಿದ್ದೇವೆ ಎಂದು ಹೇಳಿದ್ದಾಎ.
ಹು-ಧಾ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಹೇಳಿಕೆ ನೀಡಿ, ಜಾನುವಾರು ವಿಚಾರವಾಗಿ ಎರಡು ಕೋಮಿನವರ ಮಧ್ಯೆ ಗಲಾಟೆಯಾಗಿದೆ. ಒಂದು ಕೋಮಿನವರು ದೂರು ಕೊಟ್ಟಿದ್ದಾರೆ. ಗಂಭೀರ ಹಲ್ಲೆಯ ದೂರು ಕೊಟ್ಟಿದ್ದಾರೆ. ಇದರ ಪ್ರಕಾರ ಎಫ್ಐಆರ್ ದಾಖಲಿಸಲಾಗಿದೆ. ದೂರಿನಲ್ಲಿ ಇಬ್ಬರು ಮತ್ತು ಒಂದಷ್ಟು ಹತ್ತು ಜನರು ಹಲ್ಲೆ ಮಾಡಿದ್ದಾರೆಂದು ತಿಳಿಸಿದ್ದಾರೆ. ಹಲ್ಲೆಯಾದ ಏರಿಯಾದಲ್ಲಿ ಸಿಸಿಟಿವಿಗಳಿವೆ. ಅದು ಎಪಿಎಂಸಿ ಯಾರ್ಡ್ ಇದೆ. ಅದನ್ನೆಲ್ಲ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.