Site icon Vistara News

Cyber Crime : ಹೆಣ್ಣು ಮಕ್ಕಳ ಫೋಟೋ ಅಶ್ಲೀಲಗೊಳಿಸಿ ಪೋಸ್ಟ್​ ಮಾಡುತ್ತಿದ್ದವನ ಬಂಧನ

Cyber Crime

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಫೋಟೊಗಳನ್ನು ಮಾರ್ಫ್ ಮಾಡಿ ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್​ ಮಾಡಿದ್ದ (Cyber Crime) ಆರೋಪಿಯನ್ನು ಬೆಂಗಳೂರು ನಗರದ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂದಿಸಿದ್ದಾರೆ. ಈತ ಅಪ್ರಾಪ್ತ ಬಾಲಕಿಯರ ಫೋಟೋಗಳನ್ನು ಬಿಟ್ಟ ಹಿನ್ನೆಲೆಯಲ್ಲಿ ದಾಖಲಾದ ದೂರಿನ ಪ್ರಕಾರ ಜೈಲು ಸೇರಿದ್ದಾನೆ.

ಆರೋಪಿ ಫೋಟೋಗಳನ್ನು ಮಾರ್ಫ್ ಮಾಡಿ ಇನ್ಸ್ ಸ್ಟಾಗ್ರಾಮ್ ಮೂಲಕ ಶೇರ್ ಮಾಡ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆತ ಇತ್ತೀಚೆಗೆ ಹದಿನೈದು ವರ್ಷದ ಬಾಲಕಿಯೊಬ್ಬಳ ಫೋಟೋ ಮಾರ್ಫ್ ಮಾಡಿ ಹರಿಯಬಿಟ್ಟಿದ್ದ.. ಪೋಷಕರು ಈಶಾನ್ಯ ವಿಭಾಗದ ಸೈಬರ್ ಕ್ರೈಮ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನ ಜತೆಗೆ ಇಬ್ಬರು ಕಾನೂನು ಸಂಘರ್ಷಕ್ಕೆ‌ ಒಳಗಾದ ಬಾಲಕರನ್ನೂ ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿತನಿಂದ ಮೂರು ಮೊಬೈಲ್ ಗಳು ವಶಪಡಿಸಿಕೊಳ್ಳಲಾಗಿದೆ.

ಬೆಳ್ಳೂರು ಹಿಂದು ಯುವಕನ ಮೇಲೆ ಹಲ್ಲೆ; 11ಕ್ಕೂ ಹೆಚ್ಚು ಮಂದಿ ಮೇಲೆ ಕೇಸ್‌

ಮಂಡ್ಯ: ಜಿಲ್ಲೆಯ ಬೆಳ್ಳೂರು ಪಟ್ಟಣದಲ್ಲಿ (Mandya News) ಹಿಂದು ಯುವಕನ ಮೇಲೆ ಹಲ್ಲೆ ಪ್ರಕರಣ ಸಂಬಂಧ 11ಕ್ಕೂ ಹೆಚ್ಚು ಆರೋಪಿಗಳ ಮೇಲೆ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ ರಾತ್ರಿ ಬೆಳ್ಳೂರಿನ ಅಭಿಲಾಷ್ ಎಂಬಾತನ ಮೇಲೆ ಹಲ್ಲೆ ಅನ್ಯಕೋಮಿನ ಯುವಕರು ಚೇರ್, ಮಾರಕಾಸ್ತ್ರಗಳಿಂದ ಹಲ್ಲೆ (Assault case) ಮಾಡಿದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಅಭಿಲಾಷ್ ತಂದೆ ರಾಮು ನೀಡಿದ ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿದೆ.

ಇದನ್ನೂ ಓದಿ: Acid attack: ಮನೆ ಬಾಗಿಲು ತೆರೆಯದ ಹಿನ್ನೆಲೆ ವಿವಾಹಿತ ಪ್ರಿಯತಮೆಗೆ ಆ್ಯಸಿಡ್ ಎರಚಿದ ಪ್ರಿಯಕರ!

ನವೀದ್, ಸೂಫಿಯಾನ್, ಇಮ್ರಾನ್, ಸಮೀರ್, ಮುದಾಸೀರ್ ಸೇರಿ 11 ಕ್ಕೂ ಹೆಚ್ಚು ಮಂದಿ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 341, 307, 504, 506 ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Exit mobile version