ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ವಾತಾವರಣವೇ ಹಾಗೆ. ಮಳೆಗಾಲದಲ್ಲಿ ವಿಪರೀತ ಮಳೆ, ಬೇಸಿಗೆಯಲ್ಲಿ ವಿಪರೀತ ಬಿಸಿಲು ಹಾಗೂ ಚಳಿಗಾಲದಲ್ಲಿ ಮೈ ಕೊರೆಯುವ ಚಳಿ ಇರುತ್ತದೆ. ಮೂರು ಸೀಸನ್‌ಗಳು ಕೂಡ ಜನರಿಗೆ ಮಾರಣಾಂತಿಕವಾಗಿರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ದೆಹಲಿಯಲ್ಲೀಗ ಭಾರಿ ಮಳೆ (Rain In Delhi) ಸುರಿಯುತ್ತಿದೆ. ಇನ್ನು, ದೆಹಲಿಯ ಹಲವೆಡೆ ಪ್ರವಾಹದ ಸ್ಥಿತಿ (Delhi Floods) ಉಂಟಾಗಿದ್ದು, ರಾವ್ ಐಎಎಸ್ ಕೋಚಿಂಗ್ ಸೆಂಟರ್‌ಗೆ (Rao IAS Coaching Institute) ನೀರು ನುಗ್ಗಿವೆ. ನೆಲಮಹಡಿ ತುಂಬ ನೀರುತ್ತಿದ್ದು, ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ. ವಿದ್ಯಾರ್ಥಿಯೊಬ್ಬರು ಕಾಣೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ರಾಜೇಂದ್ರ ನಗರದಲ್ಲಿ ಭಾರಿ ಪ್ರವಾಹದ ಸ್ಥಿತಿ ಉಂಟಾಗಿದೆ. ಇದರಿಂದಾಗಿ, ರಾಜೇಂದ್ರ ನಗರದಲ್ಲಿರುವ ರಾವ್ ಐಎಎಸ್ ಸ್ಟಡಿ ಸರ್ಕಲ್‌ನ ನೆಲಮಹಡಿಗೆ ನೀರು ನುಗ್ಗಿದೆ. ಸಂಜೆ 7.19ಕ್ಕೆ ಏಕಾಏಕಿ ನೀರು ನುಗ್ಗಿದ ಕಾರಣ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಇವರಲ್ಲಿ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ಶವ ಪತ್ತೆಯಾಗಿವೆ. ಈಗ ಮತ್ತೊಬ್ಬ ವಿದ್ಯಾರ್ಥಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿದುಬಂದಿದೆ.
UNBELIEVABLE. One IAS aspirant dead and 2 others still missing after basement of IAS coaching centre in Delhi's Karol Bagh floods with after heavy rainfall. pic.twitter.com/LLiuOckPTN
— Shiv Aroor (@ShivAroor) July 27, 2024
ಮೂವರು ವಿದ್ಯಾರ್ಥಿಗಳು ಕೂಡ ಐಎಎಸ್ ಅಧಿಕಾರಿಯಾಗುವ ಕನಸು ಕಂಡಿದ್ದರು. ಮೃತಪಟ್ಟಿರುವ ಇಬ್ಬರು ವಿದ್ಯಾರ್ಥಿನಿಯರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಯು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ತಡರಾತ್ರಿಯಾದರೂ ಮತ್ತೊಬ್ಬ ವಿದ್ಯಾರ್ಥಿಯ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇಬ್ಬರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
“ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಕೋಚಿಂಗ್ ಸೆಂಟರ್‌ನ ಬೇಸ್‌ಮೆಂಟ್‌ಗೆ ನೀರು ನುಗ್ಗಿದೆ. ನೆಲಮಹಡಿಯಲ್ಲಿದ್ದ ಮೂವರು ವಿದ್ಯಾರ್ಥಿಗಳು ಹೊರಬರಲು ಆಗದೆ, ಮೇಲಿನ ಮಹಡಿಗೂ ಹೋಗಲು ಆಗದೆ ನೀರಿನಲ್ಲೇ ಸಿಲುಕಿರುವ ಸಾಧ್ಯತೆ ಇದೆ. ಇದರಿಂದಾಗಿ ಇಬ್ಬರು ವಿದ್ಯಾರ್ಥಿನಿಯರ ಸಾವುಂಟಾಗಿದೆ. ಕೂಡಲೇ ಎನ್‌ಡಿಆರ್‌ಎಫ್ ಸಿಬ್ಬಂದಿಯು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಈಗಲೂ ಕಾರ್ಯಾಚರಣೆ ಮುಂದುವರಿದಿದೆ” ಎಂಬುದಾಗಿ ಸೆಂಟ್ರಲ್ ದೆಹಲಿ ಡಿಸಿಪಿ ಎಂ. ಹರ್ಷವರ್ಧನ್ ತಿಳಿಸಿದ್ದಾರೆ.
ಇದನ್ನೂ ಓದಿ: Accident News : ಭಾರಿ ಮಳೆಗೆ ಉರುಳಿ ಬಿದ್ದ ಮರ; ಬೈಕ್‌ನಲ್ಲಿ ತೆರಳುತ್ತಿದ್ದ ಹೆಸ್ಕಾಂ ನೌಕರರ ದುರ್ಮರಣ