Site icon Vistara News

Dengue Fever: ಡೆಂಗ್ಯು ಜ್ವರಕ್ಕೆ ಮೈಸೂರು ಜಿಲ್ಲೆಯಲ್ಲಿ ಆರೋಗ್ಯಾಧಿಕಾರಿಯೇ ಮೊದಲ ಬಲಿ!

dengue fever mysore death

ಮೈಸೂರು: ಮೈಸೂರು ಜಿಲ್ಲೆಯಲ್ಲಿ (Mysore news) ಡೆಂಗ್ಯು ಜ್ವರ (Dengue fever) ವ್ಯಾಪಕವಾಗಿದ್ದು, ಮೊದಲ ಬಲಿ (Dengue Death) ತೆಗೆದುಕೊಂಡಿದೆ. ಸಮುದಾಯ ಆರೋಗ್ಯಾಧಿಕಾರಿಯೇ (Health Officer) ಡೆಂಗ್ಯು ಜ್ವರದಿಂದ ಮೃತಪಟ್ಟಿದ್ದಾರೆ. ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗೇಂದ್ರ (32) ಮೃತ ಸಮುದಾಯ ಆರೋಗ್ಯ ಅಧಿಕಾರಿಯಾಗಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಇದುವರೆಗೆ ಡೆಂಗ್ಯುವಿಗೆ ಸಂಬಂಧಿಸಿ 3489 ಪರೀಕ್ಷೆ ನಡೆಸಲಾಗಿದ್ದು, 479 ಡೆಂಗ್ಯು ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. 162 ಆ್ಯಕ್ಟೀವ್ ಪ್ರಕರಣಗಳಿವೆ.

ಡೆಂಗ್ಯು ಜ್ವರದಿಂದ ಇದುವರೆಗೆ ರಾಜ್ಯದಲ್ಲಿ 6 ಮಂದಿ ಸತ್ತಿದ್ದಾರೆ ಎಂದು ಮಂಗಳವಾರ ರಾಜ್ಯ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದರು. ನಿನ್ನೆ ಹಾಸನ ಜಿಲ್ಲೆಯಲ್ಲಿ ಒಬ್ಬಳು ಬಾಲಕಿ ಡೆಂಗ್ಯುವಿನಿಂದ ಮೃತಪಟ್ಟಿದ್ದು, ಡೆಂಗ್ಯು ಖಚಿತವಾಗಬೇಕಿದೆ. ಬೆಂಗಳೂರಿನಲ್ಲಿ ಒಬ್ಬರು ಡೆಂಗ್ಯುವಿನಿಂದ ಮೃತಪಟ್ಟಿದ್ದಾರೆ. ಹೀಗಾಗಿ ಇದುವರೆಗೂ 7 ಮಂದಿ ಡೆಂಗ್ಯುವಿಗೆ ಬಲಿಯಾಗಿದ್ದಾರೆ ಎಂದು ಅಂದಾಜಿಸಲಾಗಿದೆ.

ಡೆಂಗ್ಯು ಜ್ವರ ಪರೀಕ್ಷೆಗೆ ದರ ನಿಗದಿ

ಬೆಂಗಳೂರು: ಡೆಂಗ್ಯೂ ಪರೀಕ್ಷೆಗೆ ದರ ನಿಗದಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಡೆಂಗ್ಯೂ ಜ್ವರ ಪತ್ತೆಗೆ ಎರಡು ರೀತಿಯ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಈ ಪರೀಕ್ಷೆಗಳಿಗೆ ಒಟ್ಟು 600 ರೂ. ನಿಗದಿಪಡಿಸಲು ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲೇ ಈ ಸಂಬಂಧ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ.

ಡೆಂಗ್ಯೂ ಜ್ವರ ಪತ್ತೆಗೆ ಎರಡು ಮಾದರಿಯ ಪರೀಕ್ಷೆ ನಡೆಸಲಾಗುತ್ತದೆ. ತಲಾ 300 ರೂ.ನಂತೆ ಒಟ್ಟು 600 ರೂ. ದರವನ್ನು ನಿಗದಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಈ ಸಂದರ್ಭವನ್ನು ಬಳಸಿಕೊಂಡು ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಪರೀಕ್ಷೆಗೆ ದುಪ್ಪಟ್ಟು ಹಣ ವಸೂಲಿಯಾಗುತ್ತಿದೆ ಎಂಬ ಬಗ್ಗೆ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಪರೀಕ್ಷೆಗೆ ರಾಜ್ಯ ಸರ್ಕಾರ ದರ ನಿಗದಿ ಮಾಡಲು ಮುಂದಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ಬಾರಿ ಪ್ರಕರಣಗಳು ಡಬಲ್ ಆಗಿವೆ. ಜನವರಿಯಿಂದ ಜುಲೈ 1ರ ತನಕ ಒಟ್ಟು 6187 ಕೇಸ್ ಪಾಸಿಟಿವ್ ಇದೆ. ಕಳೆದ ವರ್ಷ 2903 ಇತ್ತು. ಇಷ್ಟೇ ಅಲ್ಲ ರಾಜ್ಯದಲ್ಲಿ ಮತ್ತಷ್ಟು ಡೆಂಗ್ಯು ಕೇಸ್ ಇರಬಹುದು. 47% ಟೆಸ್ಟಿಂಗ್ ರೇಟ್ ಹೆಚ್ಚಳ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದರು.

ಡೆಂಗ್ಯು ಜ್ವರ ಇನ್ನಷ್ಟು ಹೆಚ್ಚಾಗಬಹುದು. ಸೆಪ್ಟಂಬರ್‌ನಲ್ಲಿ ಮತ್ತೆ ಹೆಚ್ಚಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಕ್ಕೆ ಸೂಚಿಸಿದ್ದಾರೆ. ಟೆಸ್ಟಿಂಗ್ ಕಿಟ್ ಹೆಚ್ಚುವರಿ ಇರಿಸಲಾಗಿದೆ. ಪ್ಲೇಟ್‌ಲೆಟ್ಸ್‌ ಕೊಡುವುದಕ್ಕೆ ತಿಳಿಸಿದ್ದೇವೆ. ಡೆಂಗ್ಯುವಿಗೆ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಪ್ಲೇಟ್ ಲೆಟ್ಸ್ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೇವೆ. ಬ್ಲಡ್ ಯೂನಿಟ್‌ಗಳ ಜತೆ ಮಾತುಕತೆ ಮಾಡಲಾಗಿದೆ. ಐವಿ ಫ್ಲೂವಿಡ್‌ಗಳನ್ನು ಕೊಡಲಾಗುತ್ತದೆ. ಇದು ನಮ್ಮ ಬಳಿ ಸಾಕಷ್ಟು ಇದೆ. ಆರಂಭದಲ್ಲಿ ಪ್ಯಾರಸಿಟಮಲ್ ಕೊಟ್ಟರೆ ಸಾಕಾಗುತ್ತದೆ ಎಂದು ಸಚಿವರು ತಿಳಿಸಿದ್ದರು.

ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ

ಖಾಸಗಿ ಆಸ್ಪತ್ರೆಗಳು ಡೆಂಗ್ಯು ಕೇಸ್ ರಿಪೋರ್ಟ್ ಮಾಡುತ್ತಿಲ್ಲ. ಕೆಪಿಎಂ ಆಕ್ಟ್ ಪ್ರಕಾರ ಖಾಸಗಿ ಆಸ್ಪತ್ರೆಗಳು ಡೆಂಗ್ಯು ಕೇಸ್ ರಿಪೋರ್ಟ್ ಮಾಡುವುದು ಕಡ್ಡಾಯ. IHIPಯಲ್ಲಿ ಅನೇಕ ಖಾಸಗಿ ಆಸ್ಪತ್ರೆಗಳು ಅಪ್ಲೋಡ್ ಮಾಡುತ್ತಿಲ್ಲ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು. ಖಾಸಗಿ ಆಸ್ಪತ್ರೆಯಲ್ಲಿ ಡೆಂಗ್ಯು ತಪಾಸಣೆಗೆ ದರ ನಿಗದಿ ಮಾಡುವ ಬಗ್ಗೆ ಚರ್ಚೆ ಮಾಡಿಲ್ಲ. ಆ ಬಗ್ಗೆ ಮುಂದೆ ಚರ್ಚೆ ಮಾಡುತ್ತೇವೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Dengue Fever In Children: ಮಗುವಿನ ಮೈ ಬಿಸಿ ಆಗಿದೆಯೇ? ಡೆಂಗ್ಯು ಜ್ವರದ ಲಕ್ಷಣಗಳನ್ನು ತಿಳಿದುಕೊಳ್ಳಿ

Exit mobile version