Dina Bhavishya: ಈ ರಾಶಿಯವರು ತಮಗೆ ಸಂಬಂಧಪಡದ ವಿಷಯದಲ್ಲಿ ಮೂಗು ತೂರಿಸುವುದು ಬೇಡ! - Vistara News

ಪ್ರಮುಖ ಸುದ್ದಿ

Dina Bhavishya: ಈ ರಾಶಿಯವರು ತಮಗೆ ಸಂಬಂಧಪಡದ ವಿಷಯದಲ್ಲಿ ಮೂಗು ತೂರಿಸುವುದು ಬೇಡ!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ಷಷ್ಠಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಕುಂಭ ರಾಶಿಯಿಂದ ಮೀನ ರಾಶಿಯನ್ನು ಬುಧವಾರ ಮುಂಜಾನೆ 2:07ಕ್ಕೆ ಪ್ರವೇಶಿಸಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ಕನ್ಯಾ, ಧನಸ್ಸು, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮಕರ ರಾಶಿಯವರು ತಮಗೆ ಸಂಬಂಧಪಡದೆ ಇರುವ ವಿಷಯದ ಕುರಿತು ಮೂಗು ತೂರಿಸಬಾರದು, ಇಲ್ಲದಿದ್ದರೆ ಟೀಕೆಗಳನ್ನು ಎದುರಿಸಬೇಕಾಬಹುದು. ಇನ್ನು ಮೀನ ರಾಶಿಯ ಉದ್ಯೋಗಿಗಳಿಗೆ ಅಭದ್ರತೆಯ ಭಾವನೆ ಕಾಡಲಿದ್ದು, ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (27-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ಷಷ್ಠಿ 18:38 ವಾರ: ಗುರುವಾರ
ನಕ್ಷತ್ರ: ಶತಭಿಷಾ 11:35 ಯೋಗ: ಆಯುಷ್ಮಾನ್ 24:26
ಕರಣ: ಗರಜ 07:46 ಅಮೃತಕಾಲ: ಬೆಳಗ್ಗೆ 02:39 ರಿಂದ 04:09 ರವರೆಗೆ
ದಿನದ ವಿಶೇಷ: ಕೆಂಪೇಗೌಡ ಜಯಂತಿ, ಉಟ್ಲು ಉತ್ಸವ

ಸೂರ್ಯೋದಯ : 05:44   ಸೂರ್ಯಾಸ್ತ : 07:15

ರಾಹುಕಾಲ: ಮಧ್ಯಾಹ್ನ 1:30 ರಿಂದ 03:00
ಗುಳಿಕಕಾಲ: ಬೆಳಗ್ಗೆ 9:00 ರಿಂದ 10:30
ಯಮಗಂಡಕಾಲ: ಬೆಳಗ್ಗೆ 06:00 ರಿಂದ 07:30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಆಪ್ತರು ಸಮಸ್ಯೆಯನ್ನು ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸ, ಅಗತ್ಯ ವಸ್ತುಗಳ ಖರೀದಿ ಯಿಂದ ಖರ್ಚು. ಅನಗತ್ಯ ಒತ್ತಡ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ. ಸಂಗಾತಿಯ ಮಧುರ ಮಾತುಗಳು ಹಿತವೆನಿಸುಬಹುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ದೀರ್ಘಕಾಲದ ಪ್ರಯತ್ನ ನಿಮಗೆ ಯಶಸ್ಸು ತಂದು ಕೊಡಲಿದೆ. ಈ ಹಿಂದೆ ನೀವು ಮಾಡಿದ ಸಹಾಯ ಇಂದು ಫಲ ನೀಡಲಿದೆ. ಹಿರಿಯರಿಂದ ಪ್ರಶಂಸೆ ವ್ಯಕ್ತವಾಗಲಿದೆ. ಉದ್ಯೋಗದಲ್ಲಿ ಯಶಸ್ಸು. ವ್ಯಾಪಾರ ಅಭಿವೃದ್ಧಿ ಕಾಣಲಿದೆ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಹತಾಶೆಯ ಭಾವನೆಯಿಂದ ಮನಸ್ಸಿನ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಲಾಭ ಸಿಗುವ ಸಾಧ್ಯತೆ. ಪ್ರೀತಿ ಪಾತ್ರರ ಜೊತೆ ವಾದಗಳಿಗೆ ಕಾರಣವಾಗಬಹುದಾದ ವಿವಾದಾತ್ಮಕ ವಿಷಯಗಳನ್ನು ತಪ್ಪಿಸಿ, ಎಚ್ಚರಿಕೆಯಿಂದ ಮಾತನಾಡಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಸದೃಢ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕಟಕ: ಮಾನಸಿಕವಾಗಿ ದೈಹಿಕವಾಗಿ ಆರೋಗ್ಯ ಪರಿಪೂರ್ಣ. ಹರ್ಷ ತುಂಬಿದ ಮನಸ್ಸು ನಿಮ್ಮ
ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಹಳೆಯ ಬಾಕಿ ಮರುಪಾವತಿ ಮಾಡುವ ಸಾಧ್ಯತೆ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯಮಿಗಳಿಗೆ ಒಳ್ಳೆಯ ದಿನ. ವ್ಯಾಪಾರದ ಉದ್ದೇಶಕ್ಕಾಗಿ ಕೈಗೊಂಡ ಪ್ರವಾಸ ಸಕಾರಾತ್ಮಕ ಫಲಿತಾಂಶವನ್ನು ನೀಡುತ್ತದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಬಹಳ ದಿನಗಳಿಂದ ಕಾಡುತ್ತಿರುವ ಸಮಸ್ಯೆಗೆ ಪರಿಹಾರ ಸಿಗಲಿದೆ. ಭವಿಷ್ಯದ ಹೂಡಿಕೆ ವ್ಯವಹಾರದ ಕುರಿತಾಗಿ ಆಲೋಚನೆ. ನಿಮ್ಮ ಹಿಂದೆ ನಿಮಗೆ ಆಗದವರು ಪಿತೂರಿ ನಡೆಸುವ ಸಾಧ್ಯತೆ ಅಂತವರಿಂದ ಎಚ್ಚರಿಕೆ ಇರಲಿ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ಸೃಜನಾತ್ಮಕ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಯಶಸ್ವಿ ದಿನ. ಭೂಮಿ ಸಂಬಂಧಿ ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ದಿನಕ್ಕಿಂತ ಹೆಚ್ಚಿನ ಸಂತೋಷ. ಆರ್ಥಿಕ ಚಟುವಟಿಕೆಗೆ ಗರಿಗೆದರಲಿದೆ. ದಿನದ ಕೊನೆಯಲ್ಲಿ ಕೌಟುಂಬಿಕ ಕಲಹಗಳು ನಡೆಯುವ ಸಾಧ್ಯತೆ, ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಒತ್ತಡ ತುಂಬಿದ ವಾತಾವರಣ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ವ್ಯಾಪಾರ ವ್ಯವಹಾರದಲ್ಲಿ ತೊಡಗಿರುವವರಿಗೆ ದಿನದ ಮಟ್ಟಿಗೆ ಹೆಚ್ಚಿನ ಲಾಭ ಸಿಗಲಿದೆ. ಕುಟುಂಬ ಸಹಿತರಾಗಿ ಪ್ರಯಾಣ ಬೆಳೆಸುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಆರ್ಥಿಕವಾಗಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ : ವ್ಯಾಪಾರಿಗಳಿಗೆ ಹೆಚ್ಚಿನ ಲಾಭವಾಗಲಿದೆ. ನಿಮ್ಮ ಸಂತೋಷದ ಸಂಗತಿಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಅಗತ್ಯ ವಸ್ತುಗಳ ಖರೀದಿಯಿಂದ ಆರ್ಥಿಕವಾಗಿ ಸಾಧಾರಣ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಧನಸ್ಸು: ಕೆಲವು ಪ್ರಮುಖ ನಿರ್ಧಾರಗಳು ನಿಮ್ಮ ಮೇಲೆ ಪರಿಣಾಮ ಬೀರಬಹುದು. ಅದರ ಹೊರತಾಗಿ ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ಕುಟುಂಬ ಸದಸ್ಯರ ಮಾತುಗಳು ನಿಮ್ಮನ್ನು ಘಾಸಿಗೊಳಿಸಬಹುದು.
ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಮಿಶ್ರ ಫಲ. ಆರ್ಥಿಕ ಪ್ರಗತಿ ಸಾಧಾರಣ.
ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ಮಕರ: ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಅದರಲ್ಲಿಯೂ
ಗರ್ಭಿಣಿಯರು ಹೆಚ್ಚಿನ ಮುತುವರ್ಜಿ ವಹಿಸಬೇಕು. ಅನಾವಶ್ಯಕ ಖರ್ಚುಗಳಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ. ಸಂಬಂಧ ಪಡದೆ ಇರುವ ವಿಷಯದ ಕುರಿತು ಮೂಗು ತೂರಿಸುವುದು ಬೇಡ. ಟೀಕೆಗಳನ್ನು ಎದುರಿಸಬೇಕಾದೀತು, ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಒತ್ತಡ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕುಂಭ: ವಿವಾದಾತ್ಮಕ ವಿಷಯಗಳಿಂದ ದೂರ ಇರಿ. ಮಾತಿನಲ್ಲಿ ಹಿಡಿತವಿರಲಿ. ತಮ್ಮ ಬಳಿ ಯಾರಾದರೂ ಹಣದ ಸಹಾಯ ಬೇಡುವ ಸಾಧ್ಯತೆ, ಆಲೋಚಿಸಿ ಹೆಜ್ಜೆ ಇಡಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಮೀನ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆ ಮಾರ್ಗಸೂಚಿಯಾಗುವುದು. ಆರೋಗ್ಯ ಪರಿಪೂರ್ಣ. ಕೆಲಸ ಕಾರ್ಯಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಸದೃಢ. ಉದ್ಯೋಗಿಗಳಿಗೆ ಅಭದ್ರತೆಯ ಭಾವನೆ ಕಾಡಲಿದೆ. ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Virat Kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ ವಿರಾಟ್​​ ಕೊಹ್ಲಿ

VIrat Kohli: ವಿರಾಟ್​ ಕೊಹ್ಲಿ ಕೇವಲ ಟಿ20 ಮಾತ್ರ ಎಂದು ಹೇಳಿರುವ ಕಾರಣ ಅವರು ಏಕ ದಿನ ಹಾಗೂ ಟೆಸ್ಟ್​ ಪಂದ್ಯಗಳಲ್ಲಿ ಆಡಲಿದ್ದಾರೆ. ಅದೇ ರೀತಿ ಅವರು ಅತಿ ಹೆಚ್ಚು ಆರಾಧಿಸಲ್ಪಡುವ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ತಮ್ಮ ಸೇವೆ ಮುಂದುವರಿಸಲಿದ್ದಾರೆ.

VISTARANEWS.COM


on

Virat Kohli
Koo

ಬೆಂಗಳೂರು: ಆಧುನಿಕ ಯುಗದ ಅತ್ಯಂತ ಪ್ರಭಾವಿ ಕ್ರಿಕೆಟಿಗ, ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್​ ಕೊಹ್ಲಿ (Virat Kohli) ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದಾರೆ. ಟಿ20 ವಿಶ್ವ ಕಪ್​ನ ಫೈನಲ್​​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್ ಬಾರಿಸಿ ಗೆಲುವಿನ ಸೂತ್ರಧಾರ ಎನಿಸಿಕೊಳ್ಳುವ ಜತೆಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಅವರು ಈ ಘೋಷಣೆಯನ್ನು ಮಾಡಿದರು. ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡ ಬಳಿಕ ಮಾತನಾಡಿದ ಅವರು ಇದು ನನ್ನ ಕೊನೆಯ ಟಿ20 ಅಂತಾರಾಷ್ಟ್ರೀಯ ಪಂದ್ಯ ಹಾಗೂ ಕೊನೇ ಟಿ20 ವಿಶ್ವ ಕಪ್ ಎಂದು ಹೇಳಿದರು. ಈ ಮೂಲಕ ಅವರು ದೀರ್ಘ ಕಾಲದ ಟಿ20 ಅಂತಾರಾಷ್ಟ್ರೀಯ ಅಭಿಯಾನವನ್ನು ಕೊನೆಗೊಳಿಸಿದ್ದಾರೆ.

ವಿರಾಟ್​ ಕೊಹ್ಲಿ ಕೇವಲ ಟಿ20 ಮಾತ್ರ ಎಂದು ಹೇಳಿರುವ ಕಾರಣ ಅವರು ಏಕ ದಿನ ಹಾಗೂ ಟೆಸ್ಟ್​ ಪಂದ್ಯಗಳಲ್ಲಿ ಆಡಲಿದ್ದಾರೆ. ಅದೇ ರೀತಿ ಅವರು ಅತಿ ಹೆಚ್ಚು ಆರಾಧಿಸಲ್ಪಡುವ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ತಮ್ಮ ಸೇವೆ ಮುಂದುವರಿಸಲಿದ್ದಾರೆ.

ಇದು ನನ್ನ ಕೊನೇ ಟಿ20 ಅಂತಾರಾಷ್ಟ್ರಿಯ ಪಂದ್ಯ. ಅದೇ ರೀತಿ ನನ್ನ ಟಿ20 ಅಂತಾರಾಷ್ಟ್ರೀಯ ಪಂದ್ಯ. ಇದು ಎಲ್ಲರಿಗೂ ಗೊತ್ತಿದ್ದ ಗುಟ್ಟಾಗಿತ್ತು. ನಾನು ಈ ಪಂದ್ಯದಲ್ಲಿ ಸೋತು ಟ್ರೋಫಿ ಗೆಲ್ಲದೇ ಹೋಗಿದ್ದರೂ ಕೊನೇ ಅಂತಾರಾಷ್ಟ್ರೀಯ ಪಂದ್ಯವಾಗಿತ್ತು. ಆದರೆ ಈ ಗೆದ್ದಿದ್ದೇನೆ . ಈ ಸಂತೋಷಕ್ಕೆ ಪಾರವೇ ಇಲ್ಲ. ಹೊಸ ಪೀಳಿಗೆಯ ಆಟಗಾರರಿಗೆ ನಾನು ಸ್ಥಳಾವಕಾಶ ಮಾಡಿಕೊಡಲೇಬೇಕು ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

ಕೊಹ್ಲಿಯ ಭರ್ಜರಿ ಬ್ಯಾಟಿಂಗ್​

ಫೈನಲ್ ಪಂದ್ಯದಲ್ಲ ವಿರಾಟ್ ಕೊಹ್ಲಿ ಭಾರತ ತಂಡಕ್ಕೆ ಆಧಾರವಾಗಿದ್ದರು. ಈ ಮೂಲಕ ಅವರು ಕೊನೇ ಪಂದ್ಯವನ್ನು ಸ್ಮರಣೀಯಗೊಳಿಸಿದರು. ಇಡೀ ಟೂರ್ನಿಯಲ್ಲಿ ವೈಫಲ್ಯ ಕಂಡಿದ್ದ ಅವರು ಫೈನಲ್​ನಲ್ಲಿ 59 ಎಸೆತಕ್ಕೆ 76 ರನ್ ಮಿಂಚಿದರು. ಅವರ ಕೊಡುಗೆಯಿಂದಾಗಿ ಭಾರತ 176 ರನ್​ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿತು ಹಾಗೂ ಕೊನೇ ಹಂತದ ಬೌಲರ್​ಗಳ ಹೋರಾಟದಿಂದ ಗೆದ್ದಿತು.

Continue Reading

ಪ್ರಮುಖ ಸುದ್ದಿ

T20 World Cup 2024 : 13 ವರ್ಷಗಳ ಕಾಯುವಿಕೆ ಅಂತ್ಯ, ಕೊನೆಗೂ ವಿಶ್ವ ಕಪ್​ ಗೆದ್ದ ಭಾರತ

VISTARANEWS.COM


on

T20 World Cup
Koo

ಬಾರ್ಬಡೋಸ್​: ಕಿಂಗ್ ಕೊಹ್ಲಿಯ ಅಬ್ಬರದ ಅರ್ಧ ಶತಕ (76 ರನ್​) ರನ್ ಹಾಗೂ ಆಲ್​ರೌಂಡರ್ ಅಕ್ಷರ್ ಪಟೇಲ್​ ಅವರ ಸ್ಫೋಟಕ ಬ್ಯಾಟಿಂಗ್​ (47 ರನ್​, 31 ಎಸೆತ, 4 ಸಿಕ್ಸರ್​, 1 ಫೋರ್​) ನೆರವು ಹಾಗೂ ಕೊನೇ ಕ್ಷಣದ ರೋಚಕ ಹೋರಾಟ ಫಲವಾಗಿ ಭಾರತ ತಂಡ ವಿಶ್ವ ಕಪ್​ ಗೆದ್ದುಕೊಂಡಿತು. ಫೈನಲ್​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್​ಗಳ ರೋಚಕ ಗೆಲುವು ದಾಖಲಿಸಿ ಟ್ರೋಫಿ ಮುಡಿಗೇರಿಸಿಕೊಂಡಿತು. ಭಾರತದ ಪಾಲಿಗೆ ಇದು ಸ್ಮರಣೀಯ ಟ್ರೋಫಿ. ಹಿರಿಯ ಆಟಗಾರರಾದ ರೋಹಿತ್​ ಶರ್ಮಾ ಹಾಗೂ ವಿರಾಟ್​ ಕೊಹ್ಲಿಗೆ ಅಪೇಕ್ಷಿತ ಚಾಂಪಿಯನ್ ಪಟ್ಟ. ಅತ್ತ ದಕ್ಷಿಣ ಆಫ್ರಿಕಾ ತಂಡ ತನ್ನ ಚೋಕರ್ಸ್​ ಹಣೆಪಟ್ಟಿಯನ್ನು ಮತ್ತಷ್ಟು ದಿನ ಕಟ್ಟಿಕೊಳ್ಳುವಂತಾಯಿತು. 4 ದಶಕಗಳ ತನ್ನ ವಿಶ್ವ ಕಪ್​ ಅಭಿಯಾನದಲ್ಲಿ ಒಂದೇ ಒಂದು ಟ್ರೋಫಿ ಗೆಲ್ಲಲು ಸಾಧ್ಯವಾಗದೇ ನಿರಾಸೆ ಎದುರಿಸಿತು.

ಇದು ಭಾರತ ತಂಡಕ್ಕೆ 13 ವರ್ಷಗಳ ಬಳಿಕ ಸಿಕ್ಕ ವಿಶ್ವ ಕಪ್​ ಹಾಗೂ 17 ವರ್ಷಗಳ ಬಳಿಕ ದೊರೆತ ಟಿ20 ವಿಶ್ವ ಕಪ್​. ಭಾರತ ತಂಡ 2007ರ ಉದ್ಘಾಟನಾ ಆವೃತ್ತಿಯ ಟಿ20 ವಿಶ್ವ ಕಪ್​ ಗೆದ್ದಿದ್ದರೆ 2011ರ ಏಕ ದಿನ ವಿಶ್ವ ಕಪ್ ಗೆದ್ದುಕೊಂಡಿದೆ.

ಇಲ್ಲಿನ ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ ತಂಡ ನಾಯಕ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಅಂತೆಯೇ ನಿಗದಿತ 20 ಓವರ್​ಗಳು ಮುಕ್ತಾಯಗೊಳ್ಳುವಾಗ 7 ವಿಕೆಟ್​ ನಷ್ಟ ಮಾಡಿಕೊಂಡು 176 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ಗೆ 169 ರನ್ ಬಾರಿಸಿ ಸೋಲೊಪ್ಪಿಕೊಂಡಿತು

ಸ್ಥಳೀಯವಾಗಿ ಬೆಳಗಿನ ಅವಧಿಯಾಗಿದ್ದ ಕಾರಣ ಸ್ವಲ್ಪ ಮಟ್ಟಿನ ತೇವಾಂಶ ಪಿಚ್​ ಮೇಲೆ ಇತ್ತು .ಅದರ ಲಾಭ ಪಡೆಯಲು ರೋಹಿತ್ ಮುಂದಾದರು. ಆದರೆ, ದಕ್ಷಿಣ ಆಫ್ರಿಕಾ ಬೌಲರ್​​ಗಳು ಅದಕ್ಕೆ ಆಸ್ಪದ ಕೊಡಲಿಲ್ಲ .ಮೊದಲ ಓವರ್​ನಲ್ಲಿ ಭಾರತಕ್ಕೆ ಉತ್ತಮ ರನ್ ಬಂದ ಹೊರತಾಗಿಯೂ ಕಳೆದ ಎರಡು ಪಂಂದ್ಯಗಳ ಹೀರೋ ರೋಹಿತ್ ಶರ್ಮಾ 9 ರನ್​ಗೆ ಔಟಾದರು. ಅವರು ಅದಕ್ಕೆ ಮೊದಲು ಸತತ 2 ಫೋರ್​ ಬಾರಿಸಿದ್ದರು. ಆದರೆ, ನಾಯಕ ಮಾರ್ಕ್ರಮ್​ ಹಿಡಿದ ಅದ್ಭುತ ಕ್ಯಾಚ್​ಗೆ ಬಲಿಯಾದು. ರೋಹಿತ್ ಔಟಾದ ತಕ್ಷಣವೇ ಭಾರತಕ್ಕೆ ಆಘಾತ ಉಂಟಾಯಿತು. ಆದರೆ ರಿಷಭ್ ಪಂತ್ ಸರಿಪಡಿಸುವರೆಂಬ ವಿಶ್ವಾಸ ಇತ್ತು. ಆದರೆ, ಅವರು ಶೂನ್ಯಕ್ಕೆ ನಿರ್ಗಮಿಸಿದರು. 2 ಎಸೆತ ಎದುರಿಸಿದ ಅವರು ಸ್ವೀಪ್​ ಮಾಡಲು ಹೋಗಿ ಅನಗತ್ಯ ಕ್ಯಾಚ್ ನೀಡಿ ಔಟಾದರು.

ನಾಲ್ಕನೇ ಕ್ರಮಾಂಕದಲ್ಲಿ ಆಡಲು ಬಂದ ಸೂರ್ಯಕುಮಾರ್ 4 ಎಸೆತ ಎದುರಿಸಿ 3 ರನ್​ಗೆ ಔಟಾದ ತಕ್ಷಣ ಭಾರತಕ್ಕೆ ಆಘಾತ ಉಂಟಾಯಿತು. ಹೆನ್ರಿಚ್ ಕ್ಲಾಸೆನ್ ಬೌಂಡರಿ ಲೈನ್​ನಲ್ಲಿ ಹಿಡಿದ ಅದ್ಭುತ ಕ್ಯಾಚ್ ಗೆ ಅವರು ಔಟಾದರು. ಈ ವೇಳೆ 4.3 ಓವರ್​ಗಳಲ್ಲಿ ಭಾರತ 3 ವಿಕೆಟ್ ಕಳೆದುಕೊಂಡಿತು.

ಮಿಂಚಿದ ಕೊಹ್ಲಿ

ಭಾರತ ತಂಡದ ವಿಕೆಟ್​ಗಳು ಪತನಗೊಳ್ಳುತ್ತಿದ್ದಂತೆ ವಿರಾಟ್ ಕೊಹ್ಲಿ ಜಾಗೃತರಾದರು. ಅವರು ನಿಧಾನಗತಿಯ ಆಟಕ್ಕೆ ಮೊರೆ ಹೋಗಿ ಇನಿಂಗ್ಸ್ ಕಟ್ಟಲು ಆರಂಭಿಸಿದರು. ಆದರೆ, ಮುಂಬಡ್ತಿ ಪಡೆದುಕೊಂಡು ಕ್ರೀಸ್​ಗೆ ಬಂದ ಅಕ್ಷರ್ ಪಟೇಲ್ ಇದೇ ತಕ್ಕ ಸಮಯ ಎಂಬಂತೆ ಆಡಿದರು. ಅಗತ್ಯ ಸಂದರ್ಭದಲ್ಲಿ ಬಿಡುಬೀಸಿನ ಆಟವಾಡಿದರು. ಹೀಗಾಗಿ ಭಾರತ ತಂಡದ ಸ್ಕೋರ್​ ಪಟ್ಟಿ ಬೆಳೆಯಲು ಆರಂಭಗೊಂಡಿತು. ಕೊಹ್ಲಿ ಜತೆ ಉತ್ತಮ ಜತೆಯಾಟವಾಡಿದ ಅಕ್ಷರ್​ ತಂಡದ ಮೊತ್ತವನ್ನು 100ರ ಗಡಿ ದಾಟಿಸಿದರು. ಆದರೆ, ರನ್​ಗಾಗಿ ಓಡುವ ವೇಳೆ ಯಾಮಾರಿ ಔಟಾದರು. ಅವರು 3 ರನ್ ಕೊರತೆಯಿಂದ ಅರ್ಧ ಶತಕದ ಅವಕಾಶ ಕಳೆದುಕೊಂಡರು.

ಇದನ್ನೂ ಓದಿ: Hardik Pandya : ಕಪಿಲ್​ ದೇವ್​ ರೀತಿ ಮೀಸೆ ಬಿಟ್ಟುಕೊಂಡು ಫೈನಲ್ ಪಂದ್ಯ ಆಡಲು ಬಂದ ಹಾರ್ದಿಕ್ ಪಾಂಡ್ಯ

ಶಿವಂ ದುಬೆ ಹಿಂಬಡ್ತಿ ಪಡೆದುಕೊಂಡು ಬಂದು ತಮ್ಮ ಪಾತ್ರವನ್ನು ಯಶಸ್ವಿಯಾಗಿ ನಿರ್ವಹಿಸಿದರು. ಅವರು 16 ಎಸೆತಕ್ಕೆ 27 ರನ್ ಬಾರಿಸಿದರು. ಏತನ್ಮಧ್ಯೆ, 48 ಎಸೆತಕ್ಕೆ ಅರ್ಧ ಶತಕ ಪೂರೈಸಿದ ವಿರಾಟ್ ಕೊಹ್ಲಿ ಅಬ್ಬರಿಸಲು ಆರಂಭಿಸಿದರು. ಬೌಂಡರಿ ಸಿಕ್ಸರ್​ಗಳನ್ನು ಬಾರಿಸುವ ಮೂಲಕ ಬೆದರಿಕೆ ಹುಟ್ಟಿಸಿದರು. ಇದು ಫೈನಲ್​ ಪಂದ್ಯದಲ್ಲಿ ಅವರ ಪಾಲಿಗೆ ಸ್ಮರಣೀಯ ಇನಿಂಗ್ಸ್ ಎನಿಸಿತು.

ದಕ್ಷಿಣ ಆಫ್ರಿಕಾ ತಂಡಕ್ಕೆ ನಿರಾಸೆ

ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ ಆರಂಭದಲ್ಲಿ ಬೇಗನೆ ವಿಕೆಟ್ ಕಳೆದುಕೊಂಡಿತು. ಆದರೆ, ನಂತರದಲ್ಲಿ ಚೇತರಿಸಿಕೊಂಡು ಪೈಪೋಟಿ ಒಡ್ಡಿತು. ಒಂದು ಹಂತದಲ್ಲಿ ಭಾರತದ ಗೆಲುವು ನಷ್ಟವಾಯಿತು ಎಂದು ಅಂದುಕೊಳ್ಳಲಾಯಿತು. ಆದರೆ ಕೊನೇ ಹಂತದಲ್ಲಿ ಮ್ಯಾಜಿಕ್ ಮಾಡಿದ ಹಾರ್ದಿಕ್ ಪಾಂಡ್ಯ, ಜಸ್​ಪ್ರಿತ್​ ಬುಮ್ರಾ ಹಾಗೂ ಅರ್ಶ್​ ದೀಪ್​ ಗೆಲುವು ತಂದುಕೊಟ್ಟರು. ದಕ್ಷಿಣ ಆಫ್ರಿಕಾ ಪರ ಕ್ವಿಂಟನ್ ಡಿ ಕಾಕ್​, 39 ರನ್ , ಟ್ರಿಸ್ಟಾನ್ಸ್ ಸ್ಟಬ್ಸ್​ 31 ರನ್​, ಬಾರಿಸಿದರೆ ಕೊನೆಯಲ್ಲಿ ಹೆನ್ರಿಚ್ ಕ್ಲಾಸೆನ್​ 52 ರನ್ ಬಾರಿಸಿ ಭಾರತಕ್ಕೆ ಭಯ ಹುಟ್ಟಿಸಿದರು. ಕೊನೆಯಲ್ಲಿ ಡೇವಿಡ್​ ಮಿಲ್ಲರ್​ 21 ರನ್ ಬಾರಿಸಿದರೂ ಭಾರತದ ಕೊನೇ ಹಂತದ ಪ್ರಯತ್ನಕ್ಕೆ ಅವರ ಹೋರಾಟ ಮಂಕಾಯಿತು.

Continue Reading

ಪ್ರಮುಖ ಸುದ್ದಿ

DK Shivakumar: ರಾಜ್ಯಕ್ಕೊಂದು ಗಿಫ್ಟ್‌ ಸಿಟಿಗೆ ಪ್ರಧಾನಿ ಮುಂದೆ ಬೇಡಿಕೆ: ಡಿಸಿಎಂ ಡಿ‌.ಕೆ.ಶಿವಕುಮಾರ್

ಗುಜರಾತಿನಲ್ಲಿ ಇರುವಂತೆ ಕರ್ನಾಟಕಕ್ಕೂ ಗಿಫ್ಟ್ ಸಿಟಿ ಅವಕಾಶ ಮಾಡಿಕೊಡಬೇಕು ಎಂದು ಮನವಿ ಸಲ್ಲಿಸಲಾಯಿತು. ದೇಶದಲ್ಲಿ ಒಂದು ಕಡೆ ಮಾತ್ರ ಮಾಡಲು ಅವಕಾಶವಿದೆ. ಇದರ ಬಗ್ಗೆ ಆಲೋಚನೆ ಮಾಡಲಾಗುವುದು ಎಂದು ಪ್ರಧಾನಿಯವರು ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Shivakumar) ತಿಳಿಸಿದರು.

VISTARANEWS.COM


on

narendra modi dk shivakumar siddaramaiah
Koo

ಬೆಂಗಳೂರು: ರಾಜ್ಯಕ್ಕೆ ಒಂದು ಗಿಫ್ಟ್‌ ಸಿಟಿ (GIFT City) ಮಾದರಿಯ ಹಬ್‌ ನೀಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರಲ್ಲಿ ಮನವಿ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Shivakumar) ಅವರು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಬಳಿಕ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

ಗುಜರಾತಿನಲ್ಲಿ ಇರುವಂತೆ ಕರ್ನಾಟಕಕ್ಕೂ ಗಿಫ್ಟ್ ಸಿಟಿ ಅವಕಾಶ ಮಾಡಿಕೊಡಬೇಕು ಎಂದು ಮನವಿ ಸಲ್ಲಿಸಲಾಯಿತು. ದೇಶದಲ್ಲಿ ಒಂದು ಕಡೆ ಮಾತ್ರ ಮಾಡಲು ಅವಕಾಶವಿದೆ. ಇದರ ಬಗ್ಗೆ ಆಲೋಚನೆ ಮಾಡಲಾಗುವುದು ಎಂದು ಪ್ರಧಾನಿಯವರು ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು. ಕರ್ನಾಟಕದ ತೆರಿಗೆ ಪಾವತಿಗೆ ಅನುಗುಣವಾಗಿ ಅನುದಾನ ನೀಡಬೇಕೆಂಬ ಬೇಡಿಕೆಯನ್ನು ಕೂಲಂಕುಷವಾಗಿ ಪರಿಶೀಲಿಸುವ ಭರವಸೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದಾರೆ ಎಂದರು.

ಅತ್ಯಂತ ಸೌಹಾರ್ದಯುತ ಭೇಟಿ ಇದಾಗಿತ್ತು. ಸುಮಾರು 40 ನಿಮಿಷಗಳ ಕಾಲ ನಾನು, ಸಿಎಂ ಸಿದ್ದರಾಮಯ್ಯ (CM Siddaramaiah) ಅವರು, ಸಚಿವರಾದ ಪರಮೇಶ್ವರ, ಮಹದೇವಪ್ಪ ಅವರು ಪ್ರಧಾನಿ ಮೋದಿ ಅವರ ಜೊತೆ ಚರ್ಚೆ ನಡೆಸಿದೆವು. ರಾಜ್ಯದ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು. ಭದ್ರಾ ಮೇಲ್ದಂಡೆ, ಮೇಕೆದಾಟು, ಮಹದಾಯಿ, ಬೆಂಗಳೂರಿನ ಮೆಟ್ರೋ, ಪೆರಿಫೆರಲ್ ರಿಂಗ್ ರಸ್ತೆ, ಟನಲ್ ರಸ್ತೆ ಸೇರಿದಂತೆ ರಾಜ್ಯದಲ್ಲಿ ಬಾಕಿ ಇರುವ ಯೋಜನೆಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಯಿತು ಎಂದು ಡಿಕೆಶಿ ನುಡಿದರು.

ಬೆಂಗಳೂರಿನ ಅಭಿವೃದ್ಧಿಗಾಗಿ ಮನವಿ

ಬೆಂಗಳೂರಿನ ಜಲಸಂಪನ್ಮೂಲ, ನಗರಾಭಿವೃದ್ಧಿ, ಫೆರಿಫೆರಲ್ ರಿಂಗ್ ರಸ್ತೆ, ಮೆಟ್ರೋ ಬಗ್ಗೆ ಪ್ರಸ್ತಾಪ ಮಾಡಿದ್ದೇವೆ. ಇನ್ನೊಮ್ಮೆ ಕೆಲವು ಮಾಹಿತಿಗಳ ಜತೆ ಬನ್ನಿ ಎಂದು ತಿಳಿಸಿದ್ದಾರೆ‌. ಮಂತ್ರಿಗಳು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಲಾಗುವುದು. ಒಟ್ಟಾರೆ ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ನಾವೆಲ್ಲಾ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ, ನೀವು ಅವಕಾಶ ಕೊಡಿ ಎಂದು ಮನವಿ ಮಾಡಿದ್ದೇವೆ ಎಂದರು.

ಜುಲೈ 3ರ ನಂತರ ರಾಹುಲ್ ಗಾಂಧಿ ಭೇಟಿ

ರಾಹುಲ್ ಗಾಂಧಿ (Rahul Gandhi) ಅವರ ಭೇಟಿಯ ಬಗ್ಗೆ ಕೇಳಿದಾಗ “ಶನಿವಾರ ಸಂಜೆ ದೆಹಲಿಗೆ ಬಂದ ಕಾರಣ ಭೇಟಿ ಸಾಧ್ಯವಾಗಲಿಲ್ಲ. ಸಂಸತ್ ಅಧಿವೇಶನ ಮುಗಿದ ನಂತರ ಜುಲೈ 3 ರ ನಂತರ ಭೇಟಿ ಮಾಡಿ ಅನೇಕ ವಿಚಾರಗಳ ಬಗ್ಗೆ ಅವರ ಜತೆ ಚರ್ಚೆ ನಡೆಸಲಾಗುವುದು. ಶನಿವಾರ ಮಧ್ಯಾಹ್ನ ಕರ್ನಾಟಕದ ನಾಯಕರ ಭೇಟಿಗೆ ಸಮಯ ನಿಗದಿ ಆಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಭೇಟಿಯಾಗಲು ಆಗಲಿಲ್ಲ” ಎಂದು ತಿಳಿಸಿದರು.

ಇದನ್ನೂ ಓದಿ: Gujarat GIFT City: ಗುಜರಾತ್‌ನ ಗಿಫ್ಟ್‌ ಸಿಟಿಯಲ್ಲಿ ಮದ್ಯ ಸೇವನೆಗೆ ಅವಕಾಶ!

Continue Reading

ಪ್ರಮುಖ ಸುದ್ದಿ

T20 World Cup : ಘರ್ಜಿಸಿದ ಕಿಂಗ್ ಕೊಹ್ಲಿ, 176 ರನ್ ಬಾರಿಸಿದ ಭಾರತ, ಇದು ವಿಶ್ವ ಕಪ್​ ಫೈನಲ್​ನಲ್ಲಿ ಗರಿಷ್ಠ ಸ್ಕೋರ್​

T20 World Cup :ಇಲ್ಲಿನ ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ ತಂಡ ನಾಯಕ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಅಂತೆಯೇ ನಿಗದಿತ 20 ಓವರ್​ಗಳು ಮುಕ್ತಾಯಗೊಳ್ಳುವಾಗ 7 ವಿಕೆಟ್​ ನಷ್ಟ ಮಾಡಿಕೊಂಡು 176 ರನ್ ಬಾರಿಸಿತು. ಇದು ಟಿ20 ವಿಶ್ವ ಕಪ್ ಫೈನಲ್​ನಲ್ಲಿ ತಂಡವೊಂದು ಪೇರಿಸಿದ ಗರಿಷ್ಠ ಮೊತ್ತವಾಗಿದೆ.

VISTARANEWS.COM


on

T20 World Cup
Koo

ಬಾರ್ಬಡೋಸ್​: ಕಿಂಗ್ ಕೊಹ್ಲಿಯ ಅಬ್ಬರದ ಅರ್ಧ ಶತಕ (76 ರನ್​) ರನ್ ಹಾಗೂ ಆಲ್​ರೌಂಡರ್ ಅಕ್ಷರ್ ಪಟೇಲ್​ ಅವರ ಸ್ಫೋಟಕ ಬ್ಯಾಟಿಂಗ್​ (47 ರನ್​, 31 ಎಸೆತ, 4 ಸಿಕ್ಸರ್​, 1 ಫೋರ್​) ನೆರವು ಪಡೆದ ಭಾರತ ತಂಡ ವಿಶ್ವ ಕಪ್​ 2024ರ ಫೈನಲ್ (T20 World Cup) ಪಂದ್ಯದಲ್ಲಿ 176 ರನ್​ಗಳ ಸ್ಪರ್ಧಾತ್ಮಕ ಮೊತ್ತವನ್ನು ಪೇರಿಸಿದೆ. ಇದು ಕೆನ್ಸಿಂಗ್ಟನ್ ಓವಲ್​ನಲ್ಲಿ ಎದುರಾಳಿ ತಂಡಕ್ಕೆ ಗುರಿ ಮಟ್ಟಲು ಸ್ವಲ್ಪ ಕಷ್ಟ ಎಂದು ಎನಿಸಬಹುದು ಎಂಬುದು ಕಳೆದ 18 ದಿನಗಳ ಪಂದ್ಯಾವಳಿಯ ಫಲಿತಾಂಶದ ಹಿನ್ನೆಲೆಯಲ್ಲಿ ಹೇಳಬಹುದು. ಆದಾಗ್ಯೂ ಚೊಚ್ಚಲ ವಿಶ್ವ ಕಪ್​ ಕಡೆಗೆ ಗುರಿಯಿಟ್ಟಿರುವ ದಕ್ಷಿಣ ಆಫ್ರಿಕಾ ತಂಡ ಆ ಕಡೆಗೆ ಗಮನ ಹರಿಸುವ ಸಾಧ್ಯತೆಗಳನ್ನು ಅಲ್ಲಗೆಳೆಯುವಂತೆ ಇಲ್ಲ. ಎಲ್ಲದಿಕ್ಕಿಂತ ಹೆಚ್ಚಾಗಿ ಪವರ್​ ಪ್ಲೇ ಅವಧಿಯೊಳಗೆ ಮೂರು ವಿಕೆಟ್​ ಕಳೆದುಕೊಂಡು ಭಾರತ ಚೇತರಿಸಿಕೊಂಡು ಸ್ಪರ್ಧಾತ್ಮಕ ಮೊತ್ತವನ್ನು ಪೇರಿಸಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು.

ಇಲ್ಲಿನ ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ ತಂಡ ನಾಯಕ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಅಂತೆಯೇ ನಿಗದಿತ 20 ಓವರ್​ಗಳು ಮುಕ್ತಾಯಗೊಳ್ಳುವಾಗ 7 ವಿಕೆಟ್​ ನಷ್ಟ ಮಾಡಿಕೊಂಡು 176 ರನ್ ಬಾರಿಸಿತು. ಇದು ಟಿ20 ವಿಶ್ವ ಕಪ್ ಫೈನಲ್​ನಲ್ಲಿ ತಂಡವೊಂದು ಪೇರಿಸಿದ ಗರಿಷ್ಠ ಮೊತ್ತವಾಗಿದೆ. ಹೀಗಾಗಿ ಇದು ಉತ್ತಮ ಮೊತ್ತವಾಗಿದೆ.

ಸ್ಥಳೀಯವಾಗಿ ಬೆಳಗಿನ ಅವಧಿಯಾಗಿದ್ದ ಕಾರಣ ಸ್ವಲ್ಪ ಮಟ್ಟಿನ ತೇವಾಂಶ ಪಿಚ್​ ಮೇಲೆ ಇತ್ತು .ಅದರ ಲಾಭ ಪಡೆಯಲು ರೋಹಿತ್ ಮುಂದಾದರು. ಆದರೆ, ದಕ್ಷಿಣ ಆಫ್ರಿಕಾ ಬೌಲರ್​​ಗಳು ಅದಕ್ಕೆ ಆಸ್ಪದ ಕೊಡಲಿಲ್ಲ .ಮೊದಲ ಓವರ್​ನಲ್ಲಿ ಭಾರತಕ್ಕೆ ಉತ್ತಮ ರನ್ ಬಂದ ಹೊರತಾಗಿಯೂ ಕಳೆದ ಎರಡು ಪಂಂದ್ಯಗಳ ಹೀರೋ ರೋಹಿತ್ ಶರ್ಮಾ 9 ರನ್​ಗೆ ಔಟಾದರು. ಅವರು ಅದಕ್ಕೆ ಮೊದಲು ಸತತ 2 ಫೋರ್​ ಬಾರಿಸಿದ್ದರು. ಆದರೆ, ನಾಯಕ ಮಾರ್ಕ್ರಮ್​ ಹಿಡಿದ ಅದ್ಭುತ ಕ್ಯಾಚ್​ಗೆ ಬಲಿಯಾದು. ರೋಹಿತ್ ಔಟಾದ ತಕ್ಷಣವೇ ಭಾರತಕ್ಕೆ ಆಘಾತ ಉಂಟಾಯಿತು. ಆದರೆ ರಿಷಭ್ ಪಂತ್ ಸರಿಪಡಿಸುವರೆಂಬ ವಿಶ್ವಾಸ ಇತ್ತು. ಆದರೆ, ಅವರು ಶೂನ್ಯಕ್ಕೆ ನಿರ್ಗಮಿಸಿದರು. 2 ಎಸೆತ ಎದುರಿಸಿದ ಅವರು ಸ್ವೀಪ್​ ಮಾಡಲು ಹೋಗಿ ಅನಗತ್ಯ ಕ್ಯಾಚ್ ನೀಡಿ ಔಟಾದರು.

ನಾಲ್ಕನೇ ಕ್ರಮಾಂಕದಲ್ಲಿ ಆಡಲು ಬಂದ ಸೂರ್ಯಕುಮಾರ್ 4 ಎಸೆತ ಎದುರಿಸಿ 3 ರನ್​ಗೆ ಔಟಾದ ತಕ್ಷಣ ಭಾರತಕ್ಕೆ ಆಘಾತ ಉಂಟಾಯಿತು. ಹೆನ್ರಿಚ್ ಕ್ಲಾಸೆನ್ ಬೌಂಡರಿ ಲೈನ್​ನಲ್ಲಿ ಹಿಡಿದ ಅದ್ಭುತ ಕ್ಯಾಚ್ ಗೆ ಅವರು ಔಟಾದರು. ಈ ವೇಳೆ 4.3 ಓವರ್​ಗಳಲ್ಲಿ ಭಾರತ 3 ವಿಕೆಟ್ ಕಳೆದುಕೊಂಡಿತು.

ಮಿಂಚಿದ ಕೊಹ್ಲಿ

ಭಾರತ ತಂಡದ ವಿಕೆಟ್​ಗಳು ಪತನಗೊಳ್ಳುತ್ತಿದ್ದಂತೆ ವಿರಾಟ್ ಕೊಹ್ಲಿ ಜಾಗೃತರಾದರು. ಅವರು ನಿಧಾನಗತಿಯ ಆಟಕ್ಕೆ ಮೊರೆ ಹೋಗಿ ಇನಿಂಗ್ಸ್ ಕಟ್ಟಲು ಆರಂಭಿಸಿದರು. ಆದರೆ, ಮುಂಬಡ್ತಿ ಪಡೆದುಕೊಂಡು ಕ್ರೀಸ್​ಗೆ ಬಂದ ಅಕ್ಷರ್ ಪಟೇಲ್ ಇದೇ ತಕ್ಕ ಸಮಯ ಎಂಬಂತೆ ಆಡಿದರು. ಅಗತ್ಯ ಸಂದರ್ಭದಲ್ಲಿ ಬಿಡುಬೀಸಿನ ಆಟವಾಡಿದರು. ಹೀಗಾಗಿ ಭಾರತ ತಂಡದ ಸ್ಕೋರ್​ ಪಟ್ಟಿ ಬೆಳೆಯಲು ಆರಂಭಗೊಂಡಿತು. ಕೊಹ್ಲಿ ಜತೆ ಉತ್ತಮ ಜತೆಯಾಟವಾಡಿದ ಅಕ್ಷರ್​ ತಂಡದ ಮೊತ್ತವನ್ನು 100ರ ಗಡಿ ದಾಟಿಸಿದರು. ಆದರೆ, ರನ್​ಗಾಗಿ ಓಡುವ ವೇಳೆ ಯಾಮಾರಿ ಔಟಾದರು. ಅವರು 3 ರನ್ ಕೊರತೆಯಿಂದ ಅರ್ಧ ಶತಕದ ಅವಕಾಶ ಕಳೆದುಕೊಂಡರು.

ಇದನ್ನೂ ಓದಿ: Hardik Pandya : ಕಪಿಲ್​ ದೇವ್​ ರೀತಿ ಮೀಸೆ ಬಿಟ್ಟುಕೊಂಡು ಫೈನಲ್ ಪಂದ್ಯ ಆಡಲು ಬಂದ ಹಾರ್ದಿಕ್ ಪಾಂಡ್ಯ

ಶಿವಂ ದುಬೆ ಹಿಂಬಡ್ತಿ ಪಡೆದುಕೊಂಡು ಬಂದು ತಮ್ಮ ಪಾತ್ರವನ್ನು ಯಶಸ್ವಿಯಾಗಿ ನಿರ್ವಹಿಸಿದರು. ಅವರು 16 ಎಸೆತಕ್ಕೆ 27 ರನ್ ಬಾರಿಸಿದರು. ಏತನ್ಮಧ್ಯೆ, 48 ಎಸೆತಕ್ಕೆ ಅರ್ಧ ಶತಕ ಪೂರೈಸಿದ ವಿರಾಟ್ ಕೊಹ್ಲಿ ಅಬ್ಬರಿಸಲು ಆರಂಭಿಸಿದರು. ಬೌಂಡರಿ ಸಿಕ್ಸರ್​ಗಳನ್ನು ಬಾರಿಸುವ ಮೂಲಕ ಬೆದರಿಕೆ ಹುಟ್ಟಿಸಿದರು. ಇದು ಫೈನಲ್​ ಪಂದ್ಯದಲ್ಲಿ ಅವರ ಪಾಲಿಗೆ ಸ್ಮರಣೀಯ ಇನಿಂಗ್ಸ್ ಎನಿಸಿತು.

Continue Reading
Advertisement
Virat Kohli
ಪ್ರಮುಖ ಸುದ್ದಿ7 mins ago

Virat Kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ ವಿರಾಟ್​​ ಕೊಹ್ಲಿ

T20 World Cup
ಪ್ರಮುಖ ಸುದ್ದಿ34 mins ago

T20 World Cup 2024 : 13 ವರ್ಷಗಳ ಕಾಯುವಿಕೆ ಅಂತ್ಯ, ಕೊನೆಗೂ ವಿಶ್ವ ಕಪ್​ ಗೆದ್ದ ಭಾರತ

Progress review meeting at Karwar ZP office
ಉತ್ತರ ಕನ್ನಡ50 mins ago

Uttara Kannada News: ಕೂಸಿನ ಮನೆ ಯೋಜನೆ ಯಶಸ್ವಿಗೊಳಿಸಿ: ಉಮಾ ಮಹಾದೇವನ್

Tupolev fighter jet INS Chapel warship open for public viewing
ಉತ್ತರ ಕನ್ನಡ52 mins ago

Uttara Kannada News: ಟುಪಲೇವ್ ಯುದ್ಧ ವಿಮಾನ, ಐ.ಎನ್.ಎಸ್.ಚಾಪೆಲ್ ಯುದ್ಧನೌಕೆ ಸಾರ್ವಜನಿಕ ವೀಕ್ಷಣೆಗೆ ಮುಕ್ತ

narendra modi dk shivakumar siddaramaiah
ಪ್ರಮುಖ ಸುದ್ದಿ1 hour ago

DK Shivakumar: ರಾಜ್ಯಕ್ಕೊಂದು ಗಿಫ್ಟ್‌ ಸಿಟಿಗೆ ಪ್ರಧಾನಿ ಮುಂದೆ ಬೇಡಿಕೆ: ಡಿಸಿಎಂ ಡಿ‌.ಕೆ.ಶಿವಕುಮಾರ್

T20 World Cup
ಪ್ರಮುಖ ಸುದ್ದಿ2 hours ago

T20 World Cup : ಘರ್ಜಿಸಿದ ಕಿಂಗ್ ಕೊಹ್ಲಿ, 176 ರನ್ ಬಾರಿಸಿದ ಭಾರತ, ಇದು ವಿಶ್ವ ಕಪ್​ ಫೈನಲ್​ನಲ್ಲಿ ಗರಿಷ್ಠ ಸ್ಕೋರ್​

cm siddaramaiah T20 World Cup Final
ಪ್ರಮುಖ ಸುದ್ದಿ2 hours ago

T20 World Cup Final: ವಿಮಾನ ನಿಲ್ದಾಣದಲ್ಲೂ ಸಿದ್ದರಾಮಯ್ಯಗೆ ವಿಶ್ವಕಪ್‌ ಕ್ರಿಕೆಟ್‌ ಧ್ಯಾನ!

Hardik Pandya
ಪ್ರಮುಖ ಸುದ್ದಿ3 hours ago

Hardik Pandya : ಕಪಿಲ್​ ದೇವ್​ ರೀತಿ ಮೀಸೆ ಬಿಟ್ಟುಕೊಂಡು ಫೈನಲ್ ಪಂದ್ಯ ಆಡಲು ಬಂದ ಹಾರ್ದಿಕ್ ಪಾಂಡ್ಯ

CM Siddaramaiah pm narendra modi
ಪ್ರಮುಖ ಸುದ್ದಿ3 hours ago

Siddaramaiah: ಮೇಕೆದಾಟು ಕೂಡಲೇ ಕ್ಲಿಯರ್‌ ಮಾಡಿ: ಪ್ರಧಾನಿ ಮೋದಿ ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Indira Gandhi's Emergency
ದೇಶ3 hours ago

Lalu Prasad Yadav: “ಇಂದಿರಾ ಗಾಂಧಿ ನಮ್ಮನ್ನು ಜೈಲಿಗಟ್ಟಿದರು, ಆದರೆ…” ಎಮರ್ಜೆನ್ಸಿ ಬಗ್ಗೆ ಲಾಲೂ ಹೇಳಿದ್ದೇನು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ7 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ13 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ1 day ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌