Dina Bhavishya: ಈ ರಾಶಿಯವರಿಗೆ ಹೂಡಿಕೆ ವ್ಯವಹಾರದಲ್ಲಿ ನಷ್ಟ ಸಾಧ್ಯತೆ - Vistara News

ಪ್ರಮುಖ ಸುದ್ದಿ

Dina Bhavishya: ಈ ರಾಶಿಯವರಿಗೆ ಹೂಡಿಕೆ ವ್ಯವಹಾರದಲ್ಲಿ ನಷ್ಟ ಸಾಧ್ಯತೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ ದಶಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಮಧ್ಯಾಹ್ನ 01:51ಕ್ಕೆ ಧನಸ್ಸು ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ವೃಶ್ಚಿಕ ರಾಶಿಯವರು ಆತುರದಲ್ಲಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳುವುದು ಬೇಡ, ದಿನದ ಮಟ್ಟಿಗೆ ಯಾವುದೇ ಹೂಡಿಕೆ ವ್ಯವಹಾರದಲ್ಲಿ ತೊಡಗುವುದರಿಂದ ನಷ್ಟವಾಗುವ ಸಾಧ್ಯತೆ ಇದೆ. ಇನ್ನು ಕಟಕ ರಾಶಿಯವರಿಗೆ ಈ ಹಿಂದೆ ನೀಡಿದ ಹಣ ಮರಳುವ ಸಾಧ್ಯತೆಗಳಿದ್ದು, ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸಿ ಮಾರ್ಗದರ್ಶನ ಮಾಡುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (15-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ.
ತಿಥಿ: ದಶಮಿ 10:26 ವಾರ: ಗುರುವಾರ
ನಕ್ಷತ್ರ: ಜ್ಯೇಷ್ಠಾ 12:51 ಯೋಗ: ವೈಧೃತಿ 14:57
ಕರಣ: ಗರಜ 10:26 ಅಮೃತಕಾಲ: ಮಧ್ಯರಾತ್ರಿ 03:50 ರಿಂದ 05:29

ಸೂರ್ಯೋದಯ : 06:00   ಸೂರ್ಯಾಸ್ತ : 07:05

ರಾಹುಕಾಲ: ಮಧ್ಯಾಹ್ನ 1:30ರಿಂದ 3:00
ಗುಳಿಕಕಾಲ: ಬೆಳಗ್ಗೆ 09:00 ರಿಂದ 10:30
ಯಮಗಂಡಕಾಲ: ಬೆಳಗ್ಗೆ 06:00
ರಿಂದ 07:30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಾನಸಿಕವಾಗಿ ನೆಮ್ಮದಿ ಇರಲಿದ್ದು, ಅಗತ್ಯ ವಸ್ತುಗಳ ಖರೀದಿಗಾಗಿ ಖರ್ಚು, ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕಾರ್ಯಸ್ಥಳದಲ್ಲಿ ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪ. ಹಿರಿಯರಿಂದ ಮಾರ್ಗದರ್ಶನ. ಆರೋಗ್ಯ ಮಧ್ಯಮ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಆರೋಗ್ಯದ ಕುರಿತಾಗಿ ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ನಿಮ್ಮ ನಡವಳಿಕೆಯಿಂದಾಗಿ ಕುಟುಂಬದ ಸದಸ್ಯರಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ. ಕುಟುಂಬದ ಆಪ್ತರೊಂದಿಗೆ ಮಾತುಕತೆ. ಆರೋಗ್ಯ ಮಧ್ಯಮ. ಉದ್ಯೋಗಿಗಳಿಗೆ ಶುಭ ಫಲ.ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಆರ್ಥಿಕವಾಗಿ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರದಲ್ಲಿ ತೊಡಗುವ ಸಾಧ್ಯತೆ. ಬಿಡುವಿರದ ಕೆಲಸದ ಮಧ್ಯೆಯು ಆರೋಗ್ಯ ಪರಿಪೂರ್ಣ. ಆಪ್ತರೊಂದಿಗೆ ಮಾತುಕತೆ. ಆರ್ಥಿಕ ಪ್ರಗತಿ ಉತ್ತಮ. ಉದ್ಯೋಗಿಗಳಿಗೆ ಶುಭ ಫಲ. ವಿವಾಹಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಪ್ರಯಾಣವನ್ನು ಬೆಳೆಸುವ ಸಾಧ್ಯತೆ, ಇದರಿಂದ ನೀವು ದೈಹಿಕವಾಗಿ ಬಳಲಲಿದ್ದೀರಿ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ. ಈ ಹಿಂದೆ ನೀಡಿದ ಹಣ ಮರಳುವ ಸಾಧ್ಯತೆ. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸಿ ಮಾರ್ಗದರ್ಶನ ಮಾಡುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳಿವೆ. ಅನಾವಶ್ಯಕ ಕಾರಣಗಳಿಂದ ಖರ್ಚು. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವಿರಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಉತ್ಸಾಹದ ದಿನ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ ಪ್ರಗತಿ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಆರೋಗ್ಯ ಪರಿಪೂರ್ಣ. ಅನಗತ್ಯ ಖರ್ಚುಗಳ ಮೇಲೆ ನಿಯಂತ್ರಣ ಸಾಧಿಸುವಿರಿ. ಜೀವನದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಧ್ಯತೆ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ, ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳಿಂದ ಹೆಚ್ಚಿನ ಒತ್ತಡ, ಮನೆಯಲ್ಲಿನ ಭಿನ್ನಾಭಿಪ್ರಾಯಗಳು ನಿಮ್ಮ ಏಕಾಗ್ರತೆಗೆ ಧಕ್ಕೆ ತರುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಹಿರಿಯರಿಂದ ಮಾರ್ಗದರ್ಶನ. ದೈಹಿಕ ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಆತುರದಲ್ಲಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳುವುದು ಬೇಡ, ದಿನದ ಮಟ್ಟಿಗೆ ಯಾವುದೇ ಹೂಡಿಕೆ ವ್ಯವಹಾರದಲ್ಲಿ ತೊಡಗುವುದರಿಂದ ನಷ್ಟವಾಗುವ ಸಾಧ್ಯತೆ. ಕೆಲವು ರಹಸ್ಯ ಸುದ್ದಿಗಳಿಂದ ನಿಮಗೆ ಅಚ್ಚರಿ. ನಿಮ್ಮ ಅಚ್ಚು ಕಟ್ಟು ಕೆಲಸದಿಂದ ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಆರ್ಥಿಕ ಪ್ರಗತಿ ಸಾಧಾರಣವಾಗಿರುವುದರಿಂದ ಹೆಚ್ಚಿದ ಒತ್ತಡ. ಪ್ರಮುಖ ಕೆಲಸ ಕಾರ್ಯಗಳು ನಿಧಾನವಾಗಿ ಸಾಗುತ್ತವೆ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಾತುಕತೆ. ಉದ್ಯೋಗಿಗಳಿಗೆ ಶುಭ ಫಲ. ದೈಹಿಕ ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ಅನೇಕ ಕಾರಣಾಂತರಗಳಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ. ಆರ್ಥಿಕವಾಗಿ ಪ್ರಗತಿ ಕಂಡರು, ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆ ಉಂಟಾಗುವ ಸಾಧ್ಯತೆ. ಆಪ್ತರೊಂದಿಗೆ ಮಾತುಕತೆ. ವ್ಯಾಪಾರದ ಉದ್ದೇಶದಿಂದಾಗಿ ಕೈಕೊಂಡ ಪ್ರವಾಸದಲ್ಲಿ ಯಶಸ್ಸು. ಆರೋಗ್ಯ ಕೊಂಚಮಟ್ಟಿಗೆ ಹದಗೆಡುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಮನರಂಜನೆಗಾಗಿ ಸಮಯವನ್ನು ಕಳೆಯುವಿರಿ. ಸೃಜನಶೀಲ ಕಾರ್ಯಗಳಿಂದಾಗಿ ವ್ಯಕ್ತಿತ್ವ ಪ್ರಕಾಶಿಸುವ ಸಾಧ್ಯತೆ. ನಿಮ್ಮ ಅನುಭವಗಳನ್ನು ಇತರರೊಂದಿಗೆ ಹಂಚಿಕೊಳ್ಳುವಿರಿ. ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಪಡೆಯುವ ಸಾಧ್ಯತೆ. ಆರ್ಥಿಕ ಪ್ರಗತಿ ಉತ್ತಮ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮೀನ: ಆಹಾರದ ವ್ಯತ್ಯಾಸದ ಕ್ರಮದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರು, ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ಕುರಿತಾಗಿ ಆಲೋಚನೆ. ಅನಿವಾರ್ಯ ಕಾರಣಗಳಿಂದ ಖರ್ಚು. ಆಪ್ತರೊಂದಿಗೆ ಮಾತುಕತೆ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kolkata Doctor Murder Case: ಟ್ರೈನಿ ವೈದ್ಯೆಯ ಹತ್ಯೆ-ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಭಾರೀ ಲಾಠಿಚಾರ್ಜ್‌

Kolkata Doctor Murder Case: ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯ ಖಂಡಿಸಿ ಕಿರಿಯ ವೈದ್ಯರು ಅಹೋರಾತ್ರಿ ಪ್ರತಿಭಟನೆ ನಡುವೆ ದುಷ್ಕರ್ಮಿಗಳು ಮಧ್ಯರಾತ್ರಿ 12.40 ರ ಸುಮಾರಿಗೆ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ನುಗ್ಗಿ ಆಸ್ಪತ್ರೆಯ ಆಸ್ತಿ-ಪಾಸ್ತಿ ನಾಶಪಡಿಸಿದ್ದಾರೆ. ಅಲ್ಲದೇ ಆಸ್ಪತ್ರೆ ಮೇಲೆ ಕಲ್ಲು ತೂರಾಟವನ್ನು ನಡೆಸಿದ್ದಾರೆ.

VISTARANEWS.COM


on

Kolkata Doctor Murder Case
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳ(West Bengal)ದ ಕೋಲ್ಕತ್ತಾ(Kolkata)ದಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ(Kolkata Doctor Murder Case) ಪ್ರಕರಣ ಖಂಡಿಸಿ ಘಟನೆ ನಡೆದ ಆರ್‌ಜಿ ಕರ್‌(RG Kar Hospital) ಆಸ್ಪತ್ರೆ ಎದುರು ನಡೆಯುತ್ತಿದ್ದ ಅಹೋರಾತ್ರಿ ಧರಣಿ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆ ನಡೆವೆ ಜನ ದುಷ್ಕರ್ಮಿಗಳ ಗುಂಪೊಂದು ಆಸ್ಪತ್ರೆಗೆ ನುಗ್ಗಿ ಧ್ವಂಸ ಮಾಡಿದೆ.

ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯ ಖಂಡಿಸಿ ಕಿರಿಯ ವೈದ್ಯರು ಅಹೋರಾತ್ರಿ ಪ್ರತಿಭಟನೆ ನಡುವೆ ದುಷ್ಕರ್ಮಿಗಳು ಮಧ್ಯರಾತ್ರಿ 12.40 ರ ಸುಮಾರಿಗೆ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ನುಗ್ಗಿ ಆಸ್ಪತ್ರೆಯ ಆಸ್ತಿ-ಪಾಸ್ತಿ ನಾಶಪಡಿಸಿದ್ದಾರೆ. ಅಲ್ಲದೇ ಆಸ್ಪತ್ರೆ ಮೇಲೆ ಕಲ್ಲು ತೂರಾಟವನ್ನು ನಡೆಸಿದ್ದಾರೆ. ಇನ್ನು ಇದು ಹೊರಗಿನಿಂದ ಬಂದಿರುವ ತಂಡದಿಂದ ನಡೆದಿರುವ ಕೃತ್ಯ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಇನ್ನು ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದು, ಲಾಠಿಚಾರ್ಜ್‌ ನಡೆಸಿದ್ದಾರೆ.

ಪಶ್ಚಿಮ ಬಂಗಾಳ(West Bengal)ದ ಕೋಲ್ಕತ್ತಾ(Kolkata)ದಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ(Kolkata Doctor Murder Case) ಪ್ರಕರಣವನ್ನು ಹೈಕೋರ್ಟ್‌ ಸಿಬಿಐ(CBI Probe) ತನಿಖೆಗೆ ಆದೇಶಿಸಿರುವ ಬೆನ್ನಲ್ಲೇ ಸಿಬಿಐ ಆರೋಪಿಯನ್ನು ತನ್ನ ವಶಕ್ಕೆ ಪಡೆದಿದೆ. ಮತ್ತೊಂದೆಡೆ ಘಟನೆಯನ್ನು ಖಂಡಿಸಿ ಇಂದು ರಾತ್ರಿ ರಾಜಕೀಯ ನಾಯಕರು, ಸೆಲೆಬ್ರಿಟಿಗಳು ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಜನ ಪ್ರತಿಭಟನೆ ನಡೆಸಿದ್ದಾರೆ.

ಬುಧವಾರ ಮಧ್ಯಾಹ್ನ, ಮಣಿಪಾಲ, ಮೆಡಿಕಾ, ಪೀರ್‌ಲೆಸ್ ಮತ್ತು ಆರ್‌ಎನ್ ಟ್ಯಾಗೋರ್ ಸೇರಿದಂತೆ ಕೋಲ್ಕತ್ತಾದ ಪೂರ್ವ ಮೆಟ್ರೋಪಾಲಿಟನ್ ಬೈಪಾಸ್‌ನ ಎಲ್ಲಾ ಖಾಸಗಿ ಆಸ್ಪತ್ರೆಗಳ ವೈದ್ಯರು, ದಾದಿಯರು ಮತ್ತು ಇತರ ಸಿಬ್ಬಂದಿಗಳು ಮುಕುಂದಪುರದಿಂದ ಬೃಹತ್‌ ಮೆರವಣಿಗೆ ಕೈಗೊಂಡರು.

ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪುರಸ್ಕರಿಸಿದ ಕೋಲ್ಕತಾ ಹೈಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ. ಆರಂಭದಲ್ಲಿಯೇ ಕೊಲೆ ಪ್ರಕರಣವನ್ನು ಏಕೆ ದಾಖಲಿಸಲಿಲ್ಲ ಎಂದು ಪ್ರಶ್ನಿಸಿದ ಕೋರ್ಟ್‌, ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಗಿನ ಪ್ರಾಂಶುಪಾಲರಾದ ಡಾ ಸಂದೀಪ್ ಘೋಷ್ ಅವರನ್ನು ಮೊದಲು ವಿಚಾರಣೆಗೆ ಒಳಪಡಿಸಬೇಕಿತ್ತು ಎಂದು ಅಭಿಪ್ರಾಯ ಪಟ್ಟಿದೆ. ಅಲ್ಲದೇ ಘೋಷ್ ಅವರು ರಾಜೀನಾಮೆ ನೀಡಿದ ಗಂಟೆಗಳ ನಂತರ ಮತ್ತೊಂದು ಕಾಲೇಜಿನ ಪ್ರಾಂಶುಪಾಲರಾಗಿ ಏಕೆ ನೇಮಕಗೊಂಡರು ಎಂದು ಪೀಠವು ರಾಜ್ಯ ಸರ್ಕಾರದ ವಕೀಲರನ್ನು ಪ್ರಶ್ನಿಸಿತು.

ಏನಿದು ಘಟನೆ?

ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಶುಕ್ರವಾರ ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಗುರುವಾರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಶುಕ್ರವಾರ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು.
ಆಸ್ಪತ್ರೆಯ ವೈದ್ಯರೊಬ್ಬರು ಮಾಹಿತಿ ನೀಡಿ, ʼʼಸಂತ್ರಸ್ತೆ ಶುಕ್ರವಾರ ಮುಂಜಾನೆ 2 ಗಂಟೆ ಸುಮಾರಿಗೆ ತಮ್ಮ ಸಹೋದ್ಯೋಗಿಗಳೊಂದಿಗೆ ಊಟ ಮಾಡಿದ್ದಾರೆ. ಬಳಿಕ ಸೆಮಿನಾರ್ ಹಾಲ್‌ಗೆ ತೆರಳಿದ್ದರು. ನಂತರ ಸೆಮಿನಾರ್‌ ಹಾಲ್‌ನಲ್ಲಿ ಅವರ ಶವ ಪತ್ತೆಯಾಗಿತ್ತುʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Kolkata Doctor Murder Case: ದೇಹದಲ್ಲಿ 150 ಮಿಲಿ ಗ್ರಾಂ ವೀರ್ಯ ಪತ್ತೆ- ಟ್ರೈನಿ ವೈದ್ಯೆಯ ಮೇಲೆ ಗ್ಯಾಂಗ್‌ರೇಪ್‌ ಆಗಿತ್ತಾ?

Continue Reading

ಅಂಕಣ

ರಾಜಮಾರ್ಗ ಅಂಕಣ: ಸ್ವಾತಂತ್ರ್ಯದ ಕನವರಿಕೆಯಲ್ಲಿ ಮಿಂದೆದ್ದ ಭಾರತ

ರಾಜಮಾರ್ಗ ಅಂಕಣ: ಆ ಘಟನೆ ನಡೆದು 78 ವರ್ಷಗಳೇ ಕಳೆದುಹೋದವು. ಬ್ರಿಟಿಷ್ ಚಕ್ರಾಧಿಪತ್ಯವು ನಮ್ಮನ್ನು ತೊರೆದು ಸ್ವಾತಂತ್ರ್ಯದ ನಸುಕು ಹರಿದು ಅಷ್ಟೇ ವರ್ಷಗಳು ಪೂರ್ತಿಯಾದವು. ಆದರೆ ಆ ಸ್ವಾತಂತ್ರ್ಯವು ನಮಗೆ ಸುಲಭವಾಗಿ ದೊರೆಯಿತು ಎಂದು ಯಾರೂ ತಿಳಿಯುವುದು ಬೇಡ.

VISTARANEWS.COM


on

Rajamarga
Koo

ಸ್ವಾತಂತ್ರ್ಯ ಎಂಬ ಹೆರಿಗೆ ನೋವನ್ನು ದಾಟಿ!

ರಾಜಮಾರ್ಗ ಅಂಕಣ: ಮೊಘಲ್ ದೊರೆ ಶಹಜಾಹನ್ ಭಾರತಕ್ಕೆ ವ್ಯಾಪಾರಕ್ಕಾಗಿ ಬಂದ ಈಸ್ಟ್ ಇಂಡಿಯಾ ಕಂಪನಿಗೆ ಸತಾರಾ ನಗರದಲ್ಲಿ ವಸಾಹತು ಮಾಡಲು ಅನುಮತಿ ನೀಡಿದ್ದೇ ಆರಂಭ. ಆ ಕಂಪೆನಿಯ ಹಿಂದೆ ಬಂದದ್ದು ಇಂಗ್ಲೆಂಡಿನ ಪ್ರಭುತ್ವ. ಅದರ ಬೆನ್ನಿಗೆ ಬಂದದ್ದು ಮತಾಂತರದ ಆಮಿಷಗಳು. ಕೊನೆಯದಾಗಿ ಬಂದದ್ದು ಭಾರತದ ಅನರ್ಘ್ಯ ಸಂಪತ್ತನ್ನು ಲೂಟಿ ಮಾಡುವ, ಭಾರತದ ಒಂದೊಂದೇ ಪ್ರದೇಶವನ್ನು ಆಪೋಶನ ಮಾಡುವ ಹುನ್ನಾರಗಳು. ಅದಕ್ಕೆ ಪೂರಕವಾದ ಇಂಗ್ಲಿಷರ ಕುಟಿಲ ನೀತಿಗಳು ಮತ್ತು ಷಡ್ಯಂತ್ರಗಳು! ಆಗೊಮ್ಮೆ ಕೂತು ನನ್ನ ಮನಸ್ಸು ಯೋಚಿಸುತ್ತದೆ, 1757ರ ಕದನದಲ್ಲಿ ಬ್ರಿಟಿಷರ 3000 ಸೈನಿಕರ ಒಂದು ಪುಟಗೋಸಿ ಸೇನೆಯನ್ನು ಬಂಗಾಲದ ನವಾಬನ ಸಿರಾಜುದ್ದೌಲನ 30,000 ಸೈನಿಕರ ಬಲಿಷ್ಠ ಸೇನೆ ಸೋಲಿಸಿದ್ದರೆ? ಹಾಗೇನಾದರೂ ಆಗಿದ್ದರೆ ಆಗಲೇ ಬ್ರಿಟಿಷ್ ಸಾಮ್ರಾಜ್ಯ ಭಾರತದಿಂದ ಗಂಟು ಮೂಟೆ ಕಟ್ಟಬೇಕಿತ್ತು. ಯಾಕೆ ಹಾಗಾಗಲಿಲ್ಲ ಎಂದರೆ ಭಾರತದ ಹೊರಗಿನ ಶತ್ರುಗಳಿಗಿಂತ ಒಳಗಿನ ಶತ್ರುಗಳೇ ಹೆಚ್ಚು ಬಲಿಷ್ಠರಾಗಿದ್ದರು!

223 ವರ್ಷಗಳ ಸುದೀರ್ಘ ಸ್ವಾತಂತ್ರ್ಯದ ಹೋರಾಟ!

ನೂರಾರು ವಿದೇಶಿ ಆಕ್ರಮಣಕಾರರು ಭಾರತದ ಮೇಲೆ ದಂಡೆತ್ತಿಕೊಂಡು ಬಂದರು ಎಂದು ನಮಗೆ ಇತಿಹಾಸ ಪಠ್ಯಗಳು ಹೇಳುತ್ತಿದ್ದವು. ಆದರೆ ಯಾಕೆ ಬಂದರು ಎಂದು ನಮಗೆ ಅರ್ಥವಾದದ್ದು ನಾವು ಮುಂದೆ ಭಾರತದ ನೈಜ ಇತಿಹಾಸವನ್ನು ಓದಿದ ನಂತರವೇ! ಬ್ರಿಟಿಷರು ಭಾರತಕ್ಕೆ ಬರುವ ಮೊದಲು ನಮ್ಮ ದೇಶವು ಜಗತ್ತಿನ ಅತ್ಯಂತ ಬಲಿಷ್ಠ ರಾಷ್ಟ್ರವಾಗಿತ್ತು. ಸಂಪತ್ತಿನಲ್ಲಿಯೂ ಮತ್ತು ಜ್ಞಾನದಲ್ಲಿಯೂ! ಅದೇ ಆಕರ್ಷಣೆ ಈ ಬ್ರಿಟಿಷರಿಗೆ ಕೂಡ. ಆಗ ಭಾರತದಲಿದ್ದ ಸಣ್ಣ ಸಣ್ಣ ರಾಜ್ಯಗಳ ನಡುವೆ ಒಮ್ಮತವಿರಲಿಲ್ಲ. ಸ್ವಾರ್ಥ ತುಂಬಿದ್ದ ಆ ರಾಜಮಹಾರಾಜರು ಏನಾದರೂ ಒಟ್ಟಾಗಿ ನಿಂತಿದ್ದರೆ ನಮಗೆ 100 ವರ್ಷಗಳ ಹಿಂದೆಯೇ ಸ್ವಾತಂತ್ರ್ಯವು ದೊರೆಯುತ್ತಿತ್ತು! ಆಗಲೂ ಭಾರತದ ಸ್ವಾತಂತ್ರ್ಯಕ್ಕೆ ಗೋಡೆಯಾಗಿ ನಿಂತವರು ಈ ಒಳಗಿನ ಶತ್ರುಗಳೇ! ಹಿಂದೂ ಮತ್ತು ಮುಸಲ್ಮಾನರು ಒಟ್ಟಾಗಿ ಸ್ವಾತಂತ್ರ್ಯಕ್ಕೆ ಹೋರಾಡುವುದನ್ನು ಬ್ರಿಟಿಷರು ಸಹಿಸಿಕೊಳ್ಳಲೇ ಇಲ್ಲ. ಈ ಒಡೆದು ಆಳುವ ನೀತಿಯಿಂದಾಗಿ ಭಾರತದ ಸ್ವಾತಂತ್ರ್ಯ ಹೋರಾಟವು ಬೇರೆ ರಾಷ್ಟ್ರಗಳ ಹೋರಾಟಕ್ಕಿಂತ ದೀರ್ಘ ಆಯಿತು.

ಸ್ವಾತಂತ್ರ್ಯದ ಕನವರಿಕೆಯಲ್ಲಿ ದೇಶ ಇಬ್ಭಾಗವಾಯಿತು!

ಜಗತ್ತಿನ ಯಾವ ರಾಷ್ಟ್ರವು ಕೂಡ ಸ್ವಾತಂತ್ರ್ಯವನ್ನು ಪಡೆದಾಗ ಎರಡಾಗಿ ಒಡೆದು ಹೋದ ನಿದರ್ಶನ ದೊರೆಯುವುದಿಲ್ಲ! ಆದರೆ ಆಗಸ್ಟ್ 14ರ ಮಧ್ಯರಾತ್ರಿ ಪ್ರಧಾನಿ ನೆಹರೂ ಯುನಿಯನ್ ಜ್ಯಾಕನ್ನು ಕೆಳಗೆ ಇಳಿಸಿ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೊದಲೇ ಭಾರತವು ಎರಡು ಭಾಗವಾಗಿ ಪಾಕಿಸ್ಥಾನದ ಉದಯ ಆಗಿತ್ತು! ಆ ಕ್ಷಣದಲ್ಲಿ ಬ್ರಿಟಿಷ್ ಪ್ರಭುತ್ವ ಮೀಸೆ ತಿರುವಿ ನಗುತ್ತಿತ್ತು. ಏಕೆಂದರೆ ಅಖಂಡ ಭಾರತವು ಮುಂದೆ ವಿಶ್ವದ ಬಲಿಷ್ಠ ಶಕ್ತಿಯಾಗಿ ಹೊಮ್ಮುವ ಕನಸಿಗೆ ಅಂದೇ ಅವರು ಕೊಳ್ಳಿಯಿಟ್ಟಾಗಿತ್ತು! ಭಾರತೀಯರ ಆ ಒಂದು ಸಂಭ್ರಮದ ಮೈಮರೆತವು ಪಾಕಿಸ್ತಾನದ ರೂಪದಲ್ಲಿ ಇಂದಿಗೂ ನಮಗೆ ಮಗ್ಗುಲ ಮುಳ್ಳಾಗಿ ನಿಂತದ್ದು ವಿಪರ್ಯಾಸ!

ರಾವಿ ನದಿಯನ್ನು ದಾಟಿ ರೈಲು ತುಂಬ ಭಾರತಕ್ಕೆ ಬಂದ ರಕ್ತಸಿಕ್ತ ಹೆಣಗಳು ಭಾರತದ ಸ್ವಾತಂತ್ರ್ಯದ ಕನವರಿಕೆಯಲ್ಲಿ ಮುಳುಗಿದ್ದ ಆಗಿನ ಕೆಲವು ನಾಯಕರಿಗೆ ದ್ರೋಹ ಎಂದು ಅನ್ನಿಸಲೇ ಇಲ್ಲ. ಭೀಷ್ಮ ಸಾಹನಿ ಬರೆದ ಹಿಂದೀ ಕಾದಂಬರಿ
‘ತಮಸ್ ‘ಇದನ್ನುಒಮ್ಮೆ ಓದಿದಾಗ ನಮ್ಮ ರಕ್ತ ಕುದಿಯದೆ ಹೋದರೆ ನಾವು ಭಾರತೀಯರೇ ಅಲ್ಲ ಬಿಡಿ! ಆಗಲೂ ಭಾರತವನ್ನು ಕಾಡಿದ್ದು ಒಳಗಿನ ಶತ್ರುಗಳೇ! ಭಾರತಕ್ಕೆ ಸ್ವಾತಂತ್ರ್ಯವನ್ನು ಕೊಟ್ಟೆವು ಎಂದು ಹೊರಗಿಂದ ಶೋ ಮಾಡಿ ಒಳಗೊಳಗೆ ‘ಡೊಮಿನಿಯನ್ ರಿಪಬ್ಲಿಕ್ ‘ ಎಂಬ ಢೋಂಗಿ ಒಪ್ಪಂದಕ್ಕೆ ನಮ್ಮ ವರಿಷ್ಟರಿಂದ ಸಹಿಮಾಡಿಸಿದ, ಮತ್ತೆ ಮೂರು ವರ್ಷಗಳ ಕಾಲ ಭಾರತವನ್ನು ಕಾಡಿದ ಈಸ್ಟ್ ಇಂಡಿಯಾ ಕಂಪೆನಿಯ ವರಿಷ್ಠರಿಗೆ ಅದೇ ತಾನೇ ಬೇಕಾಗಿತ್ತು!

ಸ್ವಾತಂತ್ರ್ಯದ ನಂತರದ 78 ವರ್ಷಗಳು!

1945ರ ಹಿರೋಶಿಮಾ ಬಾಂಬ್ ಸ್ಫೋಟದ ನಂತರ ಜಪಾನ್ ಮತ್ತೆ ಎದ್ದು ಬಂದದ್ದು ದೇಶಪ್ರೇಮದ ಜಾಗೃತಿಯಿಂದ. ಭಾರತಕ್ಕೂ ಅಂತಹದ್ದೇ ಅವಕಾಶ ಇತ್ತು. 223 ವರ್ಷಗಳ ಸುದೀರ್ಘ ಸ್ವಾತಂತ್ರ್ಯದ ಹೋರಾಟದ ಕಾವು ಕಣ್ಣ ಮುಂದೆ ಇತ್ತು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳು ಇದ್ದವು. ಕ್ರಾಂತಿಕಾರಿಗಳ ರಕ್ತಸಿಕ್ತ ಹೋರಾಟದ ಘಟನೆಗಳು ಇದ್ದವು. ನೇತಾಜಿ ಸುಭಾಸರ ‘ನನಗೆ ರಕ್ತ ಕೊಡಿ, ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ!’ ಮೊದಲಾದ ಘೋಷಣೆಗಳು ಇದ್ದವು. ಬಂಕಿಮ ಚಂದ್ರರ ಕ್ಷಾತ್ರತೇಜಸ್ಸಿನ ವಂದೇ ಮಾತರಂ ಗೀತೆ ಇತ್ತು. ಒಡೆದು ಹೋದ ಭಾರತವನ್ನು ಮತ್ತೆ ಏಕೀಕರಣ ಮಾಡಿದ ಸರ್ದಾರ್ ಪಟೇಲ್ ಅವರ ನೇತೃತ್ವ ಇತ್ತು. ಇದನ್ನೆಲ್ಲ ಬಂಡವಾಳವಾಗಿ ತೆಗೆದುಕೊಂಡಿದ್ದರೆ ಭಾರತವು ಯಾವಾಗಲೋ ‘ವಿಶ್ವಗುರು’ ಆಗುತ್ತಿತ್ತು. ಇನ್ನೂ ಪೂರ್ತಿ ಆಗಲಿಲ್ಲ ಅಂದರೆ ಅದಕ್ಕೂ ಕಾರಣ ಒಳಗಿನ ಶತ್ರುಗಳು.

ಭಾರತದ ಕ್ಷಾತ್ರತೇಜಸ್ಸು ಮತ್ತೆ ಎದ್ದು ಬರಬೇಕಾಗಿದೆ.

ನಾನು ಈವರೆಗೆ ಪಟ್ಟಿ ಮಾಡಿದ ಯಾವ ದೋಷವೂ ತಾಯಿ ಭಾರತಿಯದ್ದು ಅಲ್ಲ. ಆಕೆ ಹಿಂದೆಯೂ, ಇಂದಿಗೂ, ಮುಂದೆಯೂ ಸ್ವಯಂಭೂ ಸುವರ್ಣಗರ್ಭೆ! ಮಾತೃ ಸ್ವರೂಪಿಣಿ! ಜಗತ್ತಿನ ಬೇರೆ ಯಾವ ರಾಷ್ಟ್ರಕ್ಕೂ 10,000 ವರ್ಷಗಳ ಬರೆದಿಟ್ಟ ಇತಿಹಾಸ ಇಲ್ಲ, ಅದು ಭಾರತಕ್ಕಿದೆ ಎಂಬಲ್ಲಿಗೆ ಭಾರತವು ಫೀನಿಕ್ಸ್ ಪಕ್ಷಿಯಂತೆ ಮತ್ತೆ ಎದ್ದುಬರುವ ಸಾಧ್ಯತೆಗಳು ನಮ್ಮ ಕಣ್ಣ ಮುಂದಿವೆ. ಭಾರತವು ಜಗತ್ತಿನ ಐದನೇ ಅತೀ ದೊಡ್ಡ ಆರ್ಥಿಕ ಶಕ್ತಿ ಆಗ್ತಾ ಇದೆ. ಜಾಗತಿಕ ವೇದಿಕೆಗಳಲ್ಲಿ ಭಾರತದ ಇಮೇಜ್ ಹೆಚ್ಚಾಗ್ತಾ ಇದೆ. ನಮ್ಮ ಸುತ್ತಮುತ್ತಲಿನ ಪಾಕಿಸ್ತಾನ್, ಬಾಂಗ್ಲಾ ದೇಶ, ಶ್ರೀಲಂಕಾ, ಅಫ್ಘಾನಿಸ್ತಾನಗಳು ಆರ್ಥಿಕವಾಗಿ ನಡುಗಿದರೂ ಭಾರತದ ಆರ್ಥಿಕತೆಯ ಒಂದು ಇಟ್ಟಿಗೆ ಕೂಡ ಅಲುಗಾಡಿಲ್ಲ ಅನ್ನೋದು ನಮ್ಮ ಭರವಸೆಯ ಕಾರಣ. ಕೊರಾನಾ ಮಹಾಮಾರಿಯನ್ನು ಹೇಗೆ ಲಸಿಕೆಗಳ ಅಭಿಯಾನದ ಮೂಲಕ ಭಾರತವು ಗೆದ್ದಿತು ಎನ್ನುವ ನಿದರ್ಶನ ನಮ್ಮ ಮುಂದಿದೆ. ಇಸ್ರೋ ಕೈಗೊಳ್ಳುತ್ತಿರುವ ವ್ಯೋಮ ಕಾರ್ಯಕ್ರಮಗಳನ್ನು ಜಗತ್ತು ಬೆರಗುಗಣ್ಣಿಂದ ನೋಡುತ್ತಿದೆ. ಸ್ವಾತಂತ್ರ್ಯದ ನಂತರ ನಡೆದ ಪ್ರತೀಯೊಂದು ಯುದ್ಧವನ್ನು
(ಒಂದನ್ನು ಬಿಟ್ಟು) ಭಾರತವು ದೊಡ್ಡಮಟ್ಟದಲ್ಲಿ ಗೆದ್ದಿದೆ. ವಿಶ್ವದ ಬಲಿಷ್ಠ ರಾಷ್ಟ್ರಗಳು ಈಗ ಭಾರತದ ಗೆಳೆತನಕ್ಕಾಗಿ ಕಾಯುತ್ತಿವೆ ಅಂದರೆ ಅದು ಎಷ್ಟೊಂದು ಅದ್ಭುತವಾದ ಪರಿವರ್ತನೆ.

2047ರ ಹೊತ್ತಿಗೆ ಭಾರತವು ವಿಕಸಿತ ರಾಷ್ಟ್ರವಾಗುವ ಭರವಸೆ ನಮ್ಮೆಲ್ಲರನ್ನೂ ಸದ್ಯಕ್ಕೆ ಕೈ ಹಿಡಿದು ಮುನ್ನಡೆಸಲಿ.

ಜೈ ಹಿಂದ್!

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೃಷ್ಟಿ ವಿಕಲತೆಯನ್ನು ಮೆಟ್ಟಿ ನಿಂತು ಐಎಎಸ್ ಅಧಿಕಾರಿ ಆದ ಪ್ರಾಂಜಲ್ ಪಾಟೀಲ್!

Continue Reading

ದೇಶ

Independence day 2024: ಕೆಂಪು ಕೋಟೆ ಮೇಲೆ ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವದ ಭಾಷಣದ Live ಇಲ್ಲಿ ವೀಕ್ಷಿಸಿ

Independence day 2024:ಕೆಂಪು ಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ನೇರ ಪ್ರಸಾರ ಕಾರ್ಯಕ್ರಮವನ್ನು ದೂರದರ್ಶನದಲ್ಲಿ ಪ್ರಸಾರ ಮಾಡಲಾಗುತ್ತದೆ. ವಿಸ್ತಾರ ನ್ಯೂಸ್‌ ಟಿವಿ ಮತ್ತು ವಿಸ್ತಾರ ನ್ಯೂಸ್‌ ಯುಟ್ಯೂಬ್‌ ಚಾನೆಲ್‌ ಮೂಲಕವೂ ಮೋದಿಯವರ ಭಾಷಣ ನೇರ ಪ್ರಸಾರ ನೋಡಬಹುದು. ಅಲ್ಲದೇ ಕಾರ್ಯಕ್ರಮವನ್ನು ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (PIB) ಯೂಟ್ಯೂಬ್ ಚಾನೆಲ್‌ ಜೊತೆಗೆ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಾದ ಎಕ್ಸ್‌ನಲ್ಲಿ @PIB_India ಮತ್ತು PMO ಟ್ವಿಟರ್ ಹ್ಯಾಂಡಲ್ ಮೂಲಕವೂ ಪ್ರಸಾರ ಮಾಡಲಾಗುತ್ತದೆ

VISTARANEWS.COM


on

Independence day 2024
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ಇಂದು ಬೆಳಗ್ಗೆ 7.30ಕ್ಕೆ ದಿಲ್ಲಿಯ ಕೆಂಪುಕೋಟೆಯ (Red Fort) ಮೇಲೆ 78ನೇ ಸ್ವಾತಂತ್ರ್ಯೋತ್ಸವದ ಭಾಷಣ (Independence day 2024) ಮಾಡಲಿದ್ದಾರೆ. ಧ್ವಜಾರೋಹಣದ ಬಳಿಕ ಸತತ 11ನೇ ಬಾರಿ ಭಾಷಣ ಮಾಡುವ ಮೂಲಕ ಮಾಜಿ ಪ್ರಧಾನಿಗಳಾದ ಜವಾಹರಲಾಲ್‌ ನೆಹರೂ ಮತ್ತು ಇಂದಿರಾ ಗಾಂಧಿ ಅವರ ದಾಖಲೆಯನ್ನು ಪ್ರಧಾನಿ ಮೋದಿ ಸರಿಗಟ್ಟಲಿದ್ದಾರೆ. ಮತ್ತು ಮನಮೋಹನ್‌ ಸಿಂಗ್‌ ಅವರ ದಾಖಲೆ ಮುರಿಯಲಿದ್ದಾರೆ.

ಸ್ವಾತಂತ್ರ್ಯ ದಿನದ ನೇರ ಪ್ರಸಾರ ಎಲ್ಲಿ?

ಕೆಂಪು ಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ನೇರ ಪ್ರಸಾರ ಕಾರ್ಯಕ್ರಮವನ್ನು ದೂರದರ್ಶನದಲ್ಲಿ ಪ್ರಸಾರ ಮಾಡಲಾಗುತ್ತದೆ. ವಿಸ್ತಾರ ನ್ಯೂಸ್‌ ಟಿವಿ ಮತ್ತು ವಿಸ್ತಾರ ನ್ಯೂಸ್‌ ಯುಟ್ಯೂಬ್‌ ಚಾನೆಲ್‌ ಮೂಲಕವೂ ಮೋದಿಯವರ ಭಾಷಣ ನೇರ ಪ್ರಸಾರ ನೋಡಬಹುದು.

ಅಲ್ಲದೇ ಕಾರ್ಯಕ್ರಮವನ್ನು ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (PIB) ಯೂಟ್ಯೂಬ್ ಚಾನೆಲ್‌ ಜೊತೆಗೆ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಾದ ಎಕ್ಸ್‌ನಲ್ಲಿ @PIB_India ಮತ್ತು PMO ಟ್ವಿಟರ್ ಹ್ಯಾಂಡಲ್ ಮೂಲಕವೂ ಪ್ರಸಾರ ಮಾಡಲಾಗುತ್ತದೆ

2014ರಲ್ಲಿ ಮೊದಲ ಬಾರಿಗೆ ದಿಲ್ಲಿಯ ಕೆಂಪುಕೋಟೆಯಲ್ಲಿ ಆಗಸ್ಟ್ 15ರಂದು ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ್ ಮತ್ತು ಜನ್ ಧನ್ ಬ್ಯಾಂಕ್ ಖಾತೆಗಳ ಕುರಿತು ಹೇಳಿದ್ದರು. ಅಲ್ಲಿಂದ ಇಲ್ಲಿಯ ತನಕವು ಪ್ರತಿ ವರ್ಷವೂ ಅವರು ಹೊಸ ಹೊಸ ಅಭಿಯಾನಗಳ ಬಗ್ಗೆ ಮಾತನಾಡುತ್ತಾರೆ. ಈ ವರ್ಷವೂ ಯಾವ ಹೊಸ ವಿಚಾರದ ಬಗ್ಗೆ ಪ್ರಧಾನಿ ಮೋದಿ ಮಾತನಾಡುತ್ತಾರೆ ಎಂಬ ಬಗ್ಗೆ ಬಹಳ ಕುತೂಹಲ ಇದೆ.

ಸತತ ಮೂರನೇ ಬಾರಿ ಪ್ರಧಾನಿಯಾಗಿ ಗದ್ದುಗೆ ಏರಿರುವ ಮೋದಿ ತಮ್ಮ ನಾಳೆಯ ಭಾಷಣದ ವೇಳೆ ತಮ್ಮ ಸರ್ಕಾರದ ಸಾಧನೆಗಳು, ಕಾರ್ಯಕ್ರಮಗಳು ಮತ್ತು ದೇಶದ ಪ್ರಗತಿಗೆ ತಮ್ಮ ದೂರದೃಷ್ಟಿಯ ಸಂಗತಿಗಳ ಬಗ್ಗೆ ಬೆಳಕು ಚೆಲ್ಲುವ ಸಾಧ್ಯತೆಗಳಿವೆ. ಹೀಗಾಗಿ ಅವರ ಭಾಷಣವನ್ನು ಕೇಳಲು ದೇಶದ ಮೂಲೆಮೂಲೆಯಲ್ಲೂ ಜನರು ಕಾತರರಾಗಿರುತ್ತಾರೆ.

ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ದಾಖಲೆ ಬರೆದಿರುವ ಅವರು, ಈ ಅವಧಿಯ ಮೊದಲ ಸ್ವಾತಂತ್ರ್ಯ ದಿನದ ಭಾಷಣವಾಗಿದೆ. ಈ ಭಾಷಣದೊಂದಿಗೆ ಪ್ರಧಾನಿ ಮೋದಿ ಅವರು ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿಯವರ ಅನಂತರ ಕೆಂಪು ಕೋಟೆಯಲ್ಲಿ ಸತತ 11 ಸ್ವಾತಂತ್ರ್ಯ ದಿನದ ಭಾಷಣ ಮಾಡುವ ಮೂರನೇ ಭಾರತೀಯ ಪ್ರಧಾನಿಯಾಗಲಿದ್ದಾರೆ.

ಇನ್ನು ಪ್ರಧಾನಿಯವರ ಸ್ವಾತಂತ್ರ್ಯ ದಿನದ ಭಾಷಣದ ಅವಧಿಗೆ ಹೋಲಿಸಿದರೆ ಮೋದಿಯವರೇ ಅತಿ ಉದ್ದದ ಭಾಷಣ ಮಾಡಿರುವ ಪ್ರಧಾನಿಯಾಗಿದ್ದರೆ. ಪ್ರಧಾನಿ ಮೋದಿಯವರು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರತಿ ಭಾಷಣವನ್ನೂ ಸರಾಸರಿ 82 ನಿಮಿಷಗಳ ಕಾಲ ನಡೆಸಿದ್ದಾರೆ. ಇದು ಭಾರತದ ಇತಿಹಾಸದಲ್ಲೇ ಪ್ರಧಾನಿಯವರ ಅತಿ ಉದ್ದದ ಭಾಷಣವಾಗಿದೆ.

ಈ ಬಾರಿಯ ಥೀಮ್ ಏನು?

ಈ ಬಾರಿ ಸ್ವಾತಂತ್ರ್ಯ ದಿನದ ಥೀಮ್ “ವಿಕಸಿತ ಭಾರತ”. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತಿಸುವ ಸರ್ಕಾರದ ದೃಷ್ಟಿಕೋನವನ್ನು ಇದು ಸಾರುತ್ತದೆ. ಈ ವಿಷಯವು ಶಿಕ್ಷಣ, ಆರೋಗ್ಯ ರಕ್ಷಣೆ, ಮೂಲಸೌಕರ್ಯ ಮತ್ತು ತಂತ್ರಜ್ಞಾನದಲ್ಲಿ ಸಮಗ್ರ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸುತ್ತದೆ. ಆರ್ಥಿಕ ಬೆಳವಣಿಗೆ, ಸಾಮಾಜಿಕ ಪ್ರಗತಿ ಮತ್ತು ಸುಸ್ಥಿರ ಅಭಿವೃದ್ಧಿಯ ಮೂಲಕ ಭಾರತದ ಜಾಗತಿಕ ಸ್ಥಾನಮಾನವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: Droupadi Murmu: ಹೊಸ ಕ್ರಿಮಿನಲ್‌ ಕಾನೂನು ಸ್ವಾತಂತ್ರ್ಯ ಹೋರಾಟಗಾರರಿಗೆ ಸಂದ ಗೌರವ; ರಾಷ್ಟ್ರಪತಿ ಮುರ್ಮು

Continue Reading

ಕರ್ನಾಟಕ

Karnataka Weather: ಇಂದು ಕೊಡಗು, ಹಾಸನ, ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ

Karnataka Weather: ಆ.16ರಂದು ಕೂಡ ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

Karnataka Weather
Koo

ಬೆಂಗಳೂರು: ಆಗಸ್ಟ್ 15ರಂದು ಗುರುವಾರ ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಮಂಡ್ಯ, ಮೈಸೂರು, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ.

ಇನ್ನು ಉತ್ತರ ಕನ್ನಡ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಮತ್ತು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಅದೇ ರೀತಿ ಆ.16ರಂದು ಕೂಡ ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಹಾವೇರಿ, ಕಲಬುರ್ಗಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆ.17ರವರೆಗೆ ರಾಜ್ಯದ ಬಹುತೇಕ ಕಡೆ ಇದೇ ರೀತಿಯ ಹವಾಮಾನ ಇರಲಿದೆ.

ಮೀನುಗಾರರಿಗೆ ಎಚ್ಚರಿಕೆ

ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 35 ಕಿ.ಮೀ ನಿಂದ 45 ಕಿಮೀ ವೇಗದಲ್ಲಿ 55 ಕಿಮೀ ವೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಇದನ್ನೂ ಓದಿ | Multivitamins: ನಮಗೆ ವಿಟಮಿನ್‌ ಪೂರಕಗಳು ಅಗತ್ಯವೆಂದು ತಿಳಿಯುವುದು ಹೇಗೆ?

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30° C ಮತ್ತು 22° C ಆಗಿರಬಹುದು.

Continue Reading
Advertisement
Kolkata Doctor Murder Case
ದೇಶ24 mins ago

Kolkata Doctor Murder Case: ಟ್ರೈನಿ ವೈದ್ಯೆಯ ಹತ್ಯೆ-ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಭಾರೀ ಲಾಠಿಚಾರ್ಜ್‌

Rajamarga
ಅಂಕಣ26 mins ago

ರಾಜಮಾರ್ಗ ಅಂಕಣ: ಸ್ವಾತಂತ್ರ್ಯದ ಕನವರಿಕೆಯಲ್ಲಿ ಮಿಂದೆದ್ದ ಭಾರತ

apple eating
ಆರೋಗ್ಯ48 mins ago

How safe are apples to eat: ನೀವು ತಿನ್ನುವ ಸೇಬು ಎಷ್ಟು ಸುರಕ್ಷಿತ? ಸೇಬು ಬಾಯಿಗಿಡುವ ಮುನ್ನ ಯೋಚಿಸಿ!

Vastu Tips
ಧಾರ್ಮಿಕ2 hours ago

Vastu Tips: ಮನಸ್ಸಿಗೆ ನೆಮ್ಮದಿ, ಮನೆಯಲ್ಲಿ ಸಮೃದ್ಧಿಗಾಗಿ ಇಲ್ಲಿದೆ ಸರಳ ವಾಸ್ತು ಸೂತ್ರ

Karnataka Weather
ಕರ್ನಾಟಕ2 hours ago

Karnataka Weather: ಇಂದು ಕೊಡಗು, ಹಾಸನ, ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ

Independence day 2024
ದೇಶ2 hours ago

Independence day 2024: ಕೆಂಪು ಕೋಟೆ ಮೇಲೆ ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವದ ಭಾಷಣದ Live ಇಲ್ಲಿ ವೀಕ್ಷಿಸಿ

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya: ಈ ರಾಶಿಯವರಿಗೆ ಹೂಡಿಕೆ ವ್ಯವಹಾರದಲ್ಲಿ ನಷ್ಟ ಸಾಧ್ಯತೆ

Gallantry awards
ಪ್ರಮುಖ ಸುದ್ದಿ9 hours ago

Gallantry Awards: 103 ಶೌರ್ಯ ಪ್ರಶಸ್ತಿ ಪಟ್ಟಿ ಪ್ರಕಟ; ಪಟ್ಟಿಯಲ್ಲಿವೆ 4 ಕೀರ್ತಿ ಚಕ್ರಗಳು

Vinesh Phogat
ಪ್ರಮುಖ ಸುದ್ದಿ10 hours ago

Vinesh Phogat: ವಿನೇಶ್‌ ಪೋಗಟ್‌ಗೆ ಭಾರೀ ಹಿನ್ನಡೆ; ಬೆಳ್ಳಿ ಪದಕ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

duleep trophy
ಕ್ರೀಡೆ10 hours ago

Duleep Trophy: ದುಲೀಪ್‌ ಟ್ರೋಫಿ ತಂಡ ಪ್ರಕಟ; ಪಟ್ಟಿಯಲ್ಲಿಲ್ಲ ಕೊಹ್ಲಿ, ಶರ್ಮಾ ಹೆಸರು- ನಾಲ್ಕು ಟೀಮ್‌ಗಳ ನಾಯಕರು ಇವರೇ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ7 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ7 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ7 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌