Dina Bhavishya: ಇಂದು ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಸಿಗಲಿದೆ ಶುಭ ಸುದ್ದಿ - Vistara News

ಪ್ರಮುಖ ಸುದ್ದಿ

Dina Bhavishya: ಇಂದು ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಸಿಗಲಿದೆ ಶುಭ ಸುದ್ದಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷದ ತದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಗುರುವಾರ ಮೇಷ ರಾಶಿಯಲ್ಲೇ ನೆಲೆಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಸಿಂಹ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಇನ್ನು ತುಲಾ ರಾಶಿಯವರ ಕಾರ್ಯಗಳನ್ನು ಪ್ರಶಂಸೆ ಸಿಗಲಿದೆ. ಹಣಕಾಸಿನ ಹರಿವು ಹೆಚ್ಚಾಗಲಿದ್ದು, ವ್ಯಾಪಾರ ವ್ಯವಹಾರ ಪ್ರಗತಿ ಕಾಣಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (22-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ತದಿಗೆ 13:45 ವಾರ: ಗುರುವಾರ
ನಕ್ಷತ್ರ: ಉತ್ತರ ಭಾದ್ರಪದ 22:04 ಯೋಗ: ಧೃತಿ 13:09
ಕರಣ: ವಿಷ್ಠಿ (ಭದ್ರ) 13:09 ಅಮೃತಕಾಲ: ಸಂಜೆ 05:47 ರಿಂದ 07:13
ದಿನದ ವಿಶೇಷ: ಸಂಕಷ್ಟಹರ ಗಣಪತಿ ವ್ರತ

ಸೂರ್ಯೋದಯ : 06:06   ಸೂರ್ಯಾಸ್ತ : 06:53

ರಾಹುಕಾಲ: ಮಧ್ಯಾಹ್ನ 1:30 ರಿಂದ 03:00
ಗುಳಿಕಕಾಲ: ಬೆಳಗ್ಗೆ 09:00 ರಿಂದ 10:30
ಯಮಗಂಡಕಾಲ: ಬೆಳಗ್ಗೆ 06:00 ರಿಂದ 07:30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಸ್ನೇಹಿತರು ಅಥವಾ ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಸಾಧ್ಯತೆ. ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಾಸದಿಂದ ಖರ್ಚು. ಹಿರಿಯರ ಮಾರ್ಗದರ್ಶನ ಸಿಗಲಿದೆ. ಅತಿಥಿಗಳ ಆಗಮನದಿಂದ ನಿಮ್ಮ ಯೋಜಿತ ಕಾರ್ಯ ವಿಳಂಬವಾಗುವ ಸಾಧ್ಯತೆ. ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ, ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಪ್ರಶಂಸೆ ಸಿಗುವುದು. ದಿನದ ಮಟ್ಟಿಗೆ ಖರ್ಚು. ಸಂಬಂಧವಿರದ ವಿಷಯಗಳಿಗೆ ಕಿವಿಗೊಡುವುದು ಬೇಡ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಹಳೆಯ ವಿಚಾರಗಳನ್ನು ಕೆರಳಿಸಿ ಗಾಯ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ಮಿಥುನ: ನಿಮ್ಮ ಅಭಿಪ್ರಾಯಗಳಿಗೆ ವಿರೋಧ ವ್ಯಕ್ತವಾಗುವ ಸಾಧ್ಯತೆ. ಇದರಿಂದ ಆತುರದಲ್ಲಿ ಮಾತನಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಖರ್ಚು. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕಟಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಗೃಹಬಳಕೆ ಸಾಧನಗಳ ಖರೀದಿ ಸಾಧ್ಯತೆಯಿಂದ ಖರ್ಚು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಅತಿಥಿಗಳ ಆಗಮನ ಹರ್ಷ ತರಲಿದೆ. ಆರೋಗ್ಯ ಉತ್ತಮ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ನಿಮ್ಮ ಆಕರ್ಷಕ ಮಾತುಗಳಿಂದ ಇತರರನ್ನು ಆಕರ್ಷಿಸುವಿರಿ. ನಾಲಿಗೆಯ ರುಚಿಗೆ ಮಾರು ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ, ಮಿತಿಯಿರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಸಂಗಾತಿಯ ಮಾತುಗಳು ಮಧುರವೇನಿಸುವವು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ನಿಮ್ಮ ತ್ಯಾಗದ ಮನೋಭಾವ ನಿಮಗೆ ಸಂತಸ ತರುವುದು. ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ, ವಿನಾಕಾರಣ ವಿವಾದವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದಲ್ಲಿ ಅನಾವಶ್ಯಕ ಮಾತುಗಳಿಂದ ಜಗಳವಾಗಬಹುದು, ಮೌನದಿಂದ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಇತರರು ನಿಮ್ಮ ಕಾರ್ಯಗಳನ್ನು ಪ್ರಶಂಸೆ ಮಾಡುವರು. ಹಣಕಾಸಿನ ಹರಿವು ಹೆಚ್ಚಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಸಹದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ, ಎಚ್ಚರಿಕೆ ಇರಲಿ. ವಿನಾಕಾರಣ ಜಗಳ ಮಾಡಿ ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ: ಇತರರನ್ನು ಟೀಕಿಸಲು ನಿಮ್ಮ ಅಮೂಲ್ಯ ಸಮಯ ವ್ಯರ್ಥ ಮಾಡುವುದು ಬೇಡ. ಅನಾವಶ್ಯಕ ವಿಚಾರ ಮಾಡಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಶುಭ. ಕುಟುಂಬದಲ್ಲಿ ಹಳೆಯ ವಿಚಾರಗಳು ಕಲಹ ಸೃಷ್ಟಿಸಬಹುದು, ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಕುಟುಂಬದ ಸದಸ್ಯರೊಂದಿಗೆ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ. ಅಮೂಲ್ಯ ವಸ್ತುಗಳ ಮೇಲೆ ಗಮನವಿರಲಿ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಹಣಕಾಸು ಪ್ರಗತಿ ಸಾಧಾರಣ. ವಿನಾಕಾರಣ ನಿಮ್ಮ ಸಿಟ್ಟು ಸಂಗಾತಿಯ ಮೇಲೆ ಹಾಕಿ, ಕುಟುಂಬದ ವಾತಾವರಣ ಕೆಡಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ನಿಮ್ಮ ಕೋಪದ ಸ್ವಭಾವದಿಂದ ಇತರರೊಂದಿಗೆ ವಾದಕ್ಕಿಳಿಯಬೇಡಿ. ಆತುರದಲ್ಲಿ ಅತಿರೇಕದ ಮಾತುಗಳು ಜಗಳ ತಂದೀತು. ಆರೋಗ್ಯದ ಕಡೆಗೆ ಗಮನವಿರಲಿ. ದಿನದ ಮಟ್ಟಿಗೆ ಖರ್ಚು ಇರಲಿದ್ದು, ಅತ್ಮೀಯರೊಂದಿಗೆ ಪ್ರಯಾಣಿಸುವ ಸಾಧ್ಯತೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ಕೆಲಸಕ್ಕೆ ಹಾಕಿದ ಶ್ರಮ ವ್ಯರ್ಥವಾಗದಂತೆ ಎಚ್ಚರಿಕೆ ವಹಿಸಿ. ಆತುರದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಸರಿಯಲ್ಲ, ತಾಳ್ಮೆಯಿಂದ ಮಾತನಾಡಿ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮೀನ: ರಹಸ್ಯ ಕಾರ್ಯಗಳು ಯಶಸ್ಸು ತಂದು ಕೊಡಲಿವೆ. ಕುಟುಂಬಕ್ಕೆ ಸಮಯವನ್ನು ನೀಡುವಿರಿ. ವಿನಾಕಾರಣ ಕೋಪಗೊಂಡು ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಖರ್ಚು ಹೆಚ್ಚಾಗಲಿದೆ. ಸಂಗಾತಿ ನಿಮ್ಮ ಮನಸ್ಸಿನ ಭಾವನೆಗಳಿಗೆ ಸ್ಪಂದಿಸುವಳು. ಮಧುರ ಪ್ರೇಮ ಅಂಕುರವಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Bomb Threat: ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ, ತಿರುವನಂತಪುರಂ ಏರ್‌ಪೋರ್ಟ್‌ನಲ್ಲಿ ತುರ್ತುಸ್ಥಿತಿ

Bomb Threat: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಹೊರಟ ಬಳಿಕ ಬಾಂಬ್‌ ಬೆದರಿಕೆ ಗೊತ್ತಾಗಿತ್ತು. ಏರ್ ಇಂಡಿಯಾದ ಮುಂಬೈ-ತಿರುವನಂತಪುರಂ ವಿಮಾನ ನಂ. AI657ರಲ್ಲಿ ಈ ಘಟನೆ ನಡೆದಿದೆ.

VISTARANEWS.COM


on

air india bomb threat
Koo

ತಿರುವನಂತಪುರಂ: ಮುಂಬೈನಿಂದ ಹೊರಟಿದ್ದ ಏರ್ ಇಂಡಿಯಾ (Air India) ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ (Bomb Threat) ಹಿನ್ನೆಲೆಯಲ್ಲಿ ಇಂದು ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Thiruvananthapuram Airport) ಸಂಪೂರ್ಣ ತುರ್ತು ಪರಿಸ್ಥಿತಿ (Emergency) ಘೋಷಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ವಿಮಾನವು ಬೆಳಿಗ್ಗೆ 8 ಗಂಟೆಯ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ಇಳಿಯಿತು ಮತ್ತು ಅದನ್ನು ಪ್ರತ್ಯೇಕ ವಿಭಾಗಕ್ಕೆ ಸ್ಥಳಾಂತರಿಸಲಾಯಿತು. ಪ್ರಯಾಣಿಕರನ್ನು ಶೀಘ್ರವಾಗಿ ವಿಮಾನದಿಂದ ಸ್ಥಳಾಂತರಿಸಲಾಯಿತು. ವಿಮಾನವು ತಿರುವನಂತಪುರಂ ವಿಮಾನ ನಿಲ್ದಾಣವನ್ನು ಸಮೀಪಿಸುತ್ತಿದ್ದಂತೆ ಪೈಲಟ್‌ನಿಂದ ಬಾಂಬ್ ಬೆದರಿಕೆ ಕರೆಯ ಬಗ್ಗೆ ಮಾಹಿತಿ ದೊರೆತಿದೆ.

ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಹೊರಟ ಬಳಿಕ ಬಾಂಬ್‌ ಬೆದರಿಕೆ ಗೊತ್ತಾಗಿತ್ತು. ಏರ್ ಇಂಡಿಯಾದ ಮುಂಬೈ-ತಿರುವನಂತಪುರಂ ವಿಮಾನ ನಂ. AI657ರಲ್ಲಿ ಈ ಘಟನೆ ನಡೆದಿದೆ. ವಿಮಾನದಲ್ಲಿ 135 ಪ್ರಯಾಣಿಕರಿದ್ದರು. ಬಾಂಬ್ ಬೆದರಿಕೆಯ ಮೂಲದ ವಿವರಗಳನ್ನು ಮತ್ತು ಇತರ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.‌

ಹೋಟೆಲ್‌ನಲ್ಲಿ ಏರ್‌ ಇಂಡಿಯಾ ಗಗನಸಖಿ ಮೇಲೆ ಹಲ್ಲೆ; ನೆಲಕ್ಕೆ ಕೆಡವಿ ಎಳೆದಾಡಿದ ದುಷ್ಕರ್ಮಿ

ಲಂಡನ್‌: ಏರ್‌ ಇಂಡಿಯಾ ವಿಮಾನದ ಗಗನಸಖಿ (Air India Hostess)ಯೊಬ್ಬರ ಮೇಲೆ ಇಂಗ್ಲೆಂಡ್‌ನ ಲಂಡನ್‌ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹಲ್ಲೆ ನಡೆದಿರುವ ಆಘಾತಕಾರಿ ಘಟನೆ ನಡೆದಿದೆ. ಗಗನಸಖಿ ತಂಗಿದ್ದ ಹೋಟೆಲ್‌ ರೂಮ್‌ಗೆ ನುಗ್ಗಿದ ಅಪರಿಚಿತನೊಬ್ಬ ಹಲ್ಲೆ ನಡೆಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಲಂಡನ್‌ನ ಹೀಥ್ರೂನಲ್ಲಿರುವ ರಾಡಿಸನ್ ರೆಡ್ ಹೋಟೆಲ್‌ನಲ್ಲಿ ಆಗಸ್ಟ್‌ 15ರಂದು ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಏರ್ ಇಂಡಿಯಾ ವಿಮಾನದ ಹಲವು ಸಿಬ್ಬಂದಿ ತಂಗಿರುವ ಈ ಹೋಟೆಲ್‌ಗೆ ನುಗ್ಗಿದ ದುಷ್ಕರ್ಮಿ ಏಕಾಏಕಿ ದಾಳಿ ನಡೆಸಿದ್ದಾನೆ. ಸದ್ಯ ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದ್ದು, ಹಲ್ಲೆಗೊಳಗಾದ ಗಗನಸಖಿಗೆ ಸೂಕ್ತ ಚಿಕಿತ್ಸೆ ನೀಡಿ ಭಾರತಕ್ಕರ ಕರೆತರಲಾಗುತ್ತಿದೆ ಎಂದು ವರದಿಯಾಗಿದೆ.

“ಪ್ರಮುಖ ಅಂತಾರಾಷ್ಟ್ರೀಯ ಹೋಟೆಲ್‌ನಲ್ಲಿ ನಡೆದ ಈ ಕಾನೂನುಬಾಹಿರ ಒಳನುಸುಳುವಿಕೆಯಿಂದ ಆಘಾತಕ್ಕೆ ಒಳಗಾಗಿದ್ದೇವೆ. ಇದು ನಮ್ಮ ಸಿಬ್ಬಂದಿಯೊಬ್ಬರ ಮೇಲೆ ಪರಿಣಾಮ ಬೀರಿದೆ. ಕೌನ್ಸಿಲಿಂಗ್‌ ಸೇರಿದಂತೆ ನಮ್ಮ ಸಹೋದ್ಯೋಗಿಗಳಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಿದ್ದೇವೆʼʼ ಎಂದು ಏರ್‌ ಇಂಡಿಯಾ ತಿಳಿಸಿದೆ.

ಏರ್‌ ಇಂಡಿಯಾ ವಿಮಾನದ ಸಿಬ್ಬಂದಿ ತಂಗಿರುವ ಹೋಟೆಲ್‌ನಲ್ಲಿ ಮಧ್ಯರಾತ್ರಿಯ ವೇಳೆಗೆ ಈ ಘಟನೆ ನಡೆದಿದೆ. ʼʼಗಗನಸಖಿ ತಮ್ಮ ರೂಮ್‌ನಲ್ಲಿ ನಿದ್ರಿಸುತ್ತಿದ್ದರು. ಮಧ್ಯರಾತ್ರಿ ಸುಮಾರು 1.30ರ ವೇಳೆಗೆ ಆಗಂತುಕನೊಬ್ಬ ಗಗನಸಖಿಯ ರೂಮ್‌ಗೆ ನುಗ್ಗಿದ. ಅನಿರೀಕ್ಷಿತ ಘಟನೆಯಿಂದ ಆಘಾತಕ್ಕೊಳಗಾದ ಆಕೆ ಕೂಡಲೇ ಸಹಾಯಕ್ಕಾಗಿ ಕೂಗಿಕೊಂಡರು. ಸಿಟ್ಟಿನಿಂದ ಆತ ಹ್ಯಾಂಗರ್‌ನಿಂದ ಹಲ್ಲೆ ನಡೆಸಿದ. ಅಲ್ಲದೆ ತಪ್ಪಿಸಿಕೊಳ್ಳಲು ಯತ್ನಿಸಿದ ಆಕೆಯನ್ನು ನೆಲಕ್ಕೆ ಕೆಡವಿ ಎಳೆದಾಡಿದ್ದಾನೆʼʼ ಎಂದು ಮೂಲಗಳು ತಿಳಿಸಿವೆ.

ಈ ದಾಳಿಯಿಂದ ಗಗನಸಖಿ ತೀವ್ರವಾಗಿ ಗಾಯಗೊಂಡಿದ್ದರು. ನಂತರ ಪೊಲೀಸರನ್ನು ಕರೆಸಿ ಆತನನ್ನು ಅವರ ವಶಕ್ಕೆ ಒಪ್ಪಿಸಲಾಯಿತು. ದಾಳಿಗೊಳಗಾದ ಗಗನಸಖಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಅವರೊಂದಿಗೆ ಸ್ನೇಹಿತರು ಉಳಿದುಕೊಂಡಿದ್ದರು. ಈ ಹಿಂದೆಯೂ ವಿಮಾನ ಸಿಬ್ಬಂದಿ ತಮಗಾಗುತ್ತಿರುವ ಕರಾಳ ಅನುಭವಗಳ ಬಗ್ಗೆ ದೂರು ನೀಡಿದ್ದರು. ಸೂಕ್ತ ದೀಪದ ವ್ಯವಸ್ಥೆ ಇಲ್ಲದಿರುವುದು, ಪದೇ ಪದೆ ಬಾಗಿಲು ತಟ್ಟುವುದು ಇತ್ಯಾದಿ ಅನುಭವಗಳ ಬಗ್ಗೆ ಮಾಹಿತಿ ನೀಡಿದ್ದರು. ಸದ್ಯ ದುಷ್ಕರ್ಮಿ ಯಾಕಾಗಿ ಈ ದಾಳಿ ನಡೆಸಿದ್ದಾನೆ ಎನ್ನುವ ಬಗ್ಗೆ ಮಾಹಿತಿ ಲಭಿಸಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಇದನ್ನೂ ಓದಿ: Air India Flight: 225 ಪ್ರಯಾಣಿಕರನ್ನು ಹೊತ್ತು ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ; ರಷ್ಯಾದಲ್ಲಿ ಲ್ಯಾಂಡಿಂಗ್‌

Continue Reading

ಪ್ರಮುಖ ಸುದ್ದಿ

Kamala Harris: ಕಮಲಾ ಹ್ಯಾರಿಸ್ ಪಕ್ಷದ ಭಾರಿ ಕಾರ್ಯಕ್ರಮದಲ್ಲಿ ಅಮೆರಿಕನ್ನರ ಮನ ಗೆದ್ದ ಉಡುಪಿಯ ಪುರೋಹಿತರ ಸಂಸ್ಕೃತ ಪ್ರಾರ್ಥನೆ!

Kamala Harris: ಡೆಮೊಕ್ರಾಟಿಕ್‌ ಪಕ್ಷದ ಭಾರಿ ಸಭೆಯಲ್ಲಿ ಸಂಸ್ಕೃತ ಪ್ರಾರ್ಥನೆ ಮಾಡಿದ ರಾಕೇಶ್ ಭಟ್ ಮೂಲತಃ ಕರ್ನಾಟಕದವರು. ಇವರು ತಮ್ಮ ಗುರುಗಳಾದ ಉಡುಪಿ ಅಷ್ಟಮಠದ ಪೇಜಾವರ ಸ್ವಾಮೀಜಿಯವರ ಬಳಿ ಋಗ್ವೇದ ಮತ್ತು ತಂತ್ರಸಾರ (ಮಾಧ್ವ) ಆಗಮದಲ್ಲಿ ತರಬೇತಿ ಪಡೆದಿದ್ದಾರೆ.

VISTARANEWS.COM


on

rakesh bhat kamala harris
Koo

ಚಿಕಾಗೋ: ಅಮೆರಿಕದ ಚಿಕಾಗೋದಲ್ಲಿ ಕಮಲಾ ಹ್ಯಾರಿಸ್‌ (Kamala Harris) ಅವರ ಡೆಮಾಕ್ರಟಿಕ್ ಪಕ್ಷದ ನ್ಯಾಷನಲ್ ಕನ್ವೆನ್ಶನ್‌ನ (Democratic National convention) 3ನೇ ದಿನದಂದು ಕರ್ನಾಟಕದ ಉಡುಪಿ ಮೂಲದ (Udupi Priest) ಅರ್ಚಕರೊಬ್ಬರು ಸಂಸ್ಕೃತ ಪ್ರಾರ್ಥನೆಯ (Sanskrit Prayer) ಮೂಲಕ ಕಲಾಪವನ್ನು ಪ್ರಾರಂಭಿಸಿದರು. ವೈದಿಕ ಪ್ರಾರ್ಥನೆ (Vedic Prayer) ಹಾಗೂ ಅದರ ಅರ್ಥವನ್ನು ಅವರು ವಿವರಿಸಿದ ಬಳಿಕ, ಸಭಾಂಗಣದಾದ್ಯಂತ “ಓಂ ಶಾಂತಿ ಶಾಂತಿ” ಘೋಷಣೆಗಳು ಪ್ರತಿಧ್ವನಿಸಿದವು.

ಮೇರಿಲ್ಯಾಂಡ್‌ನ ಶ್ರೀ ಶಿವ ವಿಷ್ಣು ದೇವಸ್ಥಾನದ ಅರ್ಚಕ ರಾಕೇಶ್ ಭಟ್ (Rakesh Bhat) ಅವರು ಅಖಂಡ ದೇಶಕ್ಕಾಗಿ ದೇವರ ಆಶೀರ್ವಾದ ಕೋರಿ ವೈದಿಕ ಪ್ರಾರ್ಥನೆ ಮಾಡಿದರು. ʼʼನಮ್ಮಲ್ಲಿ ಭಿನ್ನಾಭಿಪ್ರಾಯಗಳಿದ್ದರೂ, ರಾಷ್ಟ್ರದ ವಿಷಯಕ್ಕೆ ಬಂದಾಗ ನಾವು ಒಗ್ಗಟ್ಟಾಗಿರಬೇಕುʼʼ ಎಂದು ಭಟ್ ಹೇಳಿದರು. “ನಾವು ಒಗ್ಗಟ್ಟಿನಿಂದ ಇರಬೇಕು. ನಮ್ಮ ಮನಸ್ಸು ಒಟ್ಟಿಗೆ ಯೋಚಿಸಲಿ. ನಮ್ಮ ಹೃದಯಗಳು ಒಂದಾಗಿ ಮಿಡಿಯಲಿ. ಎಲ್ಲರೂ ಸಮಾಜದ ಒಳಿತಿಗಾಗಿ ದುಡಿಯಲಿ. ಇದು ನಮ್ಮನ್ನು ಶಕ್ತಿಯುತರನ್ನಾಗಿ ಮಾಡಲಿ. ನಾವು ಒಂದಾಗಬಹುದು ಮತ್ತು ನಮ್ಮ ರಾಷ್ಟ್ರದ ಬಗ್ಗೆ ಹೆಮ್ಮೆಪಡಬಹುದು” ಎಂದು ರಾಕೇಶ್‌ ಭಟ್‌ ಹೇಳಿದರು.

ಗುರುವಾರ ಕಮಲಾ ಹ್ಯಾರಿಸ್ ಅವರ ಪರ ಪಕ್ಷದ ಪ್ರಚಾರದ ಭಾರಿ ಸಭೆ ನಡೆಯಿತು. ಅಮೆರಿಕದ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಿರುವ ಕಮಲಾ ಹ್ಯಾರಿಸ್‌, ಭಾರತೀಯ ಮೂಲದವರಾಗಿದ್ದಾರೆ. ಪ್ರಾರ್ಥನೆ ಮಾಡಿದ ಭಟ್, ʼವಸುಧೈವ ಕುಟುಂಬಕಂ’ (ಇಡೀ ಜಗತ್ತು ಒಂದೇ ಕುಟುಂಬ) ಎಂಬ ವೈದಿಕ ಪರಿಕಲ್ಪನೆಯಲ್ಲಿ ನಂಬಿಕೆಯಿರುವ ನಾಯಕನನ್ನು ಆಯ್ಕೆ ಮಾಡುವಂತೆ ಅಮೆರಿಕವನ್ನು ಒತ್ತಾಯಿಸಿದರು.

“ನಾವು ಒಂದು ಸಾರ್ವತ್ರಿಕ ಕುಟುಂಬ. ಸತ್ಯವು ನಮ್ಮ ಅಡಿಪಾಯ ಮತ್ತು ಅದು ಯಾವಾಗಲೂ ಮೇಲುಗೈ ಸಾಧಿಸುತ್ತದೆ. ನಮ್ಮನ್ನು ಅವಾಸ್ತವದಿಂದ ವಾಸ್ತವಕ್ಕೆ, ಕತ್ತಲೆಯಿಂದ ಬೆಳಕಿನೆಡೆಗೆ ಮತ್ತು ಸಾವಿನಿಂದ ಅಮರತ್ವಕ್ಕೆ ಕರೆದೊಯ್ಯುತ್ತದೆ. ಓಂ ಶಾಂತಿ ಶಾಂತಿ ಶಾಂತಿ” ಎಂದು ಭಟ್ ಸಂಸ್ಕೃತದ ಶ್ಲೋಕವನ್ನು ನುಡಿದು ಅದರ ಅರ್ಥವನ್ನು ವಿವರಿಸಿದರು.

ರಾಕೇಶ್ ಭಟ್ ಮೂಲತಃ ಕರ್ನಾಟಕದವರು. ಇವರು ತಮ್ಮ ಗುರುಗಳಾದ ಉಡುಪಿ ಅಷ್ಟಮಠದ ಪೇಜಾವರ ಸ್ವಾಮೀಜಿಯವರ ಬಳಿ ಋಗ್ವೇದ ಮತ್ತು ತಂತ್ರಸಾರ (ಮಾಧ್ವ) ಆಗಮದಲ್ಲಿ ತರಬೇತಿ ಪಡೆದಿದ್ದಾರೆ. ಹಿಂದಿ, ಇಂಗ್ಲಿಷ್, ಸಂಸ್ಕೃತ, ತಮಿಳು, ತೆಲುಗು, ಕನ್ನಡ ಮತ್ತು ತುಳು ಭಾಷೆಗಳನ್ನು ನಿರರ್ಗಳವಾಗಿ ಮಾತನಾಡಬಲ್ಲರು. ಸಂಸ್ಕೃತ, ಇಂಗ್ಲಿಷ್ ಮತ್ತು ಕನ್ನಡ ಈ ಮೂರು ಭಾಷೆಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಹೊಂದಿದ್ದಾರೆ. ಇವರು ಬೆಂಗಳೂರಿನ ಒಸ್ಟೀನ್ ಕಾಲೇಜಿನಲ್ಲಿ ಇಂಗ್ಲಿಷ್ ಮತ್ತು ಕನ್ನಡ ಪದವಿಗಳನ್ನು ಪಡೆದವರು. ಜಯಚಾಮರಾಜೇಂದ್ರ ಕಾಲೇಜಿನಲ್ಲಿ ಸಂಸ್ಕೃತ ಪದವಿ ಪಡೆದರು. ಉಡುಪಿ ಅಷ್ಟಮಠದಲ್ಲಿ ಅಲ್ಪಾವಧಿ ಸೇವೆ ಸಲ್ಲಿಸಿದ ನಂತರ ಬದರಿನಾಥ, ಸೇಲಂ ರಾಘವೇಂದ್ರ ಸ್ವಾಮಿ ದೇವಾಲಯಗಳಲ್ಲಿ ಸೇವೆ ಸಲ್ಲಿಸಿ ಬಳಿಕ 2013 ಜುಲೈಯಲ್ಲಿ ಅಮೆರಿಕಕ್ಕೆ ತೆರಳಿ ಮೇರಿಲ್ಯಾಂಡ್‌ನಲ್ಲಿ ಶ್ರೀ ವಿಷ್ಣು ದೇವಸ್ಥಾನದ ಅರ್ಚಕರಾಗಿದ್ದಾರೆ.

ಡೆಮಾಕ್ರಟಿಕ್ ಪಾರ್ಟಿಯ ಡೆಪ್ಯುಟಿ ನ್ಯಾಷನಲ್ ಫೈನಾನ್ಸ್ ಚೇರ್ ಅಜಯ್ ಭುಟೋರಿಯಾ, “ಇಂದು ಡಿಎನ್‌ಸಿಯಲ್ಲಿ ರಾಕೇಶ್ ಭಟ್ ಅವರ ಹಿಂದೂ ಪ್ರಾರ್ಥನೆಯು ಮಹತ್ವದ ಕ್ಷಣವಾಗಿದೆ. ಇದು ಡೆಮಾಕ್ರಟಿಕ್ ಪಕ್ಷದ ಒಳಗೊಳ್ಳುವಿಕೆ ಮತ್ತು ವೈವಿಧ್ಯತೆಯ ಬದ್ಧತೆಯನ್ನು ಪ್ರದರ್ಶಿಸುತ್ತದೆ” ಎಂದರು. “ಭಾರತೀಯ ಅಮೆರಿಕನ್ ಸಮುದಾಯದ ಶ್ರೀಮಂತ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಸಂಪ್ರದಾಯಗಳನ್ನು ಇಂತಹ ಪ್ರಮುಖ ವೇದಿಕೆಯಲ್ಲಿ ಗೌರವಿಸುವುದು ಆತ್ಮೀಯ ಕ್ಷಣ. ಈ ಕ್ಷಣವು ಅಮೇರಿಕನ್ ಸಮಾಜದ ವಿನ್ಯಾಸದಲ್ಲಿ ನಮ್ಮ ಸಮುದಾಯದ ಬೆಳೆಯುತ್ತಿರುವ ಪ್ರಭಾವ ಮತ್ತು ಗುರುತಿಸುವಿಕೆಯನ್ನು ಪ್ರತಿಬಿಂಬಿಸುತ್ತದೆ” ಎಂದು ಭೂಟೋರಿಯಾ ಹೇಳಿದರು.

ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಸೋಲಿಸುವ ಭರವಸೆಯೊಂದಿಗೆ ಡೆಮೋಕ್ರಾಟ್‌ ಪಕ್ಷದ 59 ವರ್ಷದ ಕಮಲಾ ಹ್ಯಾರಿಸ್‌ ಸ್ಪರ್ಧಿಸುತ್ತಿದ್ದಾರೆ. ಸ್ಪರ್ಧೆಯಲ್ಲಿ ಹ್ಯಾರಿಸ್ ಸ್ವಲ್ಪ ಮುಂದಿದ್ದಾರೆ ಎನ್ನಲಾಗುತ್ತಿದೆ. ಕೇವಲ ಒಂದು ತಿಂಗಳ ಹಿಂದೆ ಜೋ ಬೈಡೆನ್ ವಿರುದ್ಧ ಟ್ರಂಪ್‌ ಹಿಡಿತ ಸಾಧಿಸಿದ್ದರು.

ಇದನ್ನೂ ಓದಿ: Kamala Harris: ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಕಮಲಾ ಹ್ಯಾರಿಸ್ ಹೆಸರು ಅಂತಿಮ

Continue Reading

ಕ್ರೀಡೆ

Lausanne Diamond League: ಇಂದು ಲಾಸಾನ್ನೆ ಡೈಮಂಡ್‌ ಲೀಗ್‌ನಲ್ಲಿ ನೀರಜ್‌ ಸ್ಪರ್ಧೆ

Lausanne Diamond League: ಪ್ಯಾರಿಸ್‌ನಲ್ಲಿ ಒಲಿಂಪಿಕ್ಸ್ ದಾಖಲೆಯೊಂದಿಗೆ ಚಿನ್ನದ ಪದಕ ಜಯಿಸಿ ಜಾಗತಿಕ ಮಟ್ಟದಲ್ಲಿ ಸಂಚಲನ ಮೂಡಿಸಿದ್ದ ಪಾಕಿಸ್ತಾನದ ಅರ್ಷದ್ ನದೀಮ್(Arshad Nadeem) ಈ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿಲ್ಲ.

VISTARANEWS.COM


on

Lausanne Diamond League:
Koo

ಲುಸಾನ್‌: 2 ವಾರಗಳ ಹಿಂದಷ್ಟೇ ಮುಕ್ತಾಯ ಕಂಡಿದ್ದ ಪ್ಯಾರಿಸ್ ಒಲಿಂಪಿಕ್ಸ್‌ ಕೂಟದಲ್ಲಿ ಐತಿಹಾಸಿಕ ಬೆಳ್ಳಿ ಪದಕ ಜಯಿಸಿದ್ದ ಭಾರತ ಸ್ಟಾರ್​ ಜಾವೆಲಿನ್​ ಎಸೆತಗಾರ ನೀರಜ್​ ಚೋಪ್ರಾ(Neeraj Chopra) ಅವರು ಮತ್ತೊಂದು ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಭಾಗವಹಿಸಲು ಸಜ್ಜಾಗಿದ್ದಾರೆ. ಇಂದು ತಡರಾತ್ರಿ ನಡೆಯುವ ಲಾಸನ್ ಡೈಮಂಡ್ ಲೀಗ್(Lausanne Diamond League)​ನಲ್ಲಿ ಸ್ಪರ್ಧಿಸಲಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ 2024ರ ಕಂಚಿನ ವಿಜೇತೆ ಆಂಡರ್ಸನ್ ಪೀಟರ್ಸ್ (ಗ್ರೆನಡಾ), ಜಾಕುಬ್ ವಡ್ಲೆಜ್ (ಜೆಕ್ ರಿಪಬ್ಲಿಕ್) ಮತ್ತು ಜೂಲಿಯಸ್ ಯೆಗೊ (ಕೀನ್ಯಾ) ಅವರಿಂದ ನೀರಜ್​ಗೆ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆ ಇದೆ. ಪ್ಯಾರಿಸ್‌ನಲ್ಲಿ ಒಲಿಂಪಿಕ್ಸ್ ದಾಖಲೆಯೊಂದಿಗೆ ಚಿನ್ನದ ಪದಕ ಜಯಿಸಿ ಜಾಗತಿಕ ಮಟ್ಟದಲ್ಲಿ ಸಂಚಲನ ಮೂಡಿಸಿದ್ದ ಪಾಕಿಸ್ತಾನದ ಅರ್ಷದ್ ನದೀಮ್(Arshad Nadeem) ಈ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿಲ್ಲ.

2022ರಲ್ಲಿ ಡೈಮಂಡ್ ಲೀಗ್ ಚಾಂಪಿಯನ್ ಆಗಿದ್ದ ಚೋಪ್ರಾ ಕಳೆದ ವರ್ಷದ ಪ್ರದರ್ಶನವನ್ನು ಉತ್ತಮಪಡಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ. 2023ರಲ್ಲಿ ಎವ್‌ಜಿನಿಯಲ್ಲಿ ನಡೆದಿದ್ದ ಫೈನಲ್‌ನಲ್ಲಿ ಚೋಪ್ರಾ ಎರಡನೇ ಸ್ಥಾನ ಪಡೆದಿದ್ದರು. ಝೆಕ್ ರಿಪಬ್ಲಿಕ್‌ನ ಜೇಕಬ್ ವಡ್ಲೆಚ್ ಮೊದಲ ಸ್ಥಾನ ಪಡೆದಿದ್ದರು. ಸದ್ಯ ಡೈಮಂಡ್ ಲೀಗ್ ಅಂಕಪಟ್ಟಿಯಲ್ಲಿ 7 ಅಂಕದೊಂದಿಗೆ 4ನೇ ಸ್ಥಾನದಲ್ಲಿರುವ ಚೋಪ್ರಾ ಅವರು ಫೈನಲ್‌ನಲ್ಲಿ ಸ್ಥಾನ ಗಿಟ್ಟಿಸಲು ಸರಣಿಯಲ್ಲಿ ಅಗ್ರ-6ರೊಳಗೆ ಸ್ಥಾನ ಪಡೆಯಬೇಕಾಗಿದೆ. ಗಾಯದ ಕಳವಳದ ಹೊರತಾಗಿಯೂ ಚೋಪ್ರಾ ಅವರು ಒಲಿಂಪಿಕ್ಸ್ ನಂತರ ಸ್ವಿಟ್ಸರ್‌ಲ್ಯಾಂಡ್‌ನಲ್ಲಿ ತರಬೇತಿ ಆರಂಭಿಸಿದ್ದರು.

ಇದನ್ನೂ ಓದಿ Manu Bhaker-Neeraj Chopra: ನೀರಜ್​ ಚೋಪ್ರಾ ಜತೆ ಮದುವೆ ವದಂತಿ; ಸ್ಪಷ್ಟನೆ ನೀಡಿದ ಮನು ಭಾಕರ್​ ತಂದೆ

ಗಾಯದ ಮಧ್ಯೆಯೂ 26ರ ಹರೆಯದ ಚೋಪ್ರಾ ಪ್ಯಾರಿಸ್ ಒಲಿಂಪಿಕ್ಸ್ ಫೈನಲ್‌ನಲ್ಲಿ 89.45 ಮೀ.ದೂರಕ್ಕೆ ಜಾವೆಲಿನ್ ಎಸೆದು ಬೆಳ್ಳಿ ಪದಕ ಗೆದ್ದಿದ್ದರು. ಇದು ನೀರಜ್ ಅವರ ವರ್ಷದ ಎರಡನೇ ಡೈಮಂಡ್ ಲೀಗ್ ಪ್ರದರ್ಶನವಾಗಿದೆ. ಮೇ ತಿಂಗಳಲ್ಲಿ ನಡೆದ ದೋಹಾ ಡೈಮಂಡ್ ಲೀಗ್‌ನಲ್ಲಿ ಅವರು ಎರಡನೇ ಸ್ಥಾನ ಗಳಿಸಿದ್ದರು.

ಹಲವು ವರ್ಷಗಳಿಂದ 90 ಮೀಟರ್‌ ದೂರಕ್ಕೆ ಜಾವೆಲಿನ್‌ ಎಸೆಯುವುದಕ್ಕೆ ಸತತ ಪ್ರಯತ್ನ ನಡೆಸುತ್ತಿರುವ ನೀರಜ್​ ಇನ್ನು ಮುಂದೆ 90 ಮೀ. ಗುರಿಯನ್ನು ದೇವರಿಗೆ ಬಿಡುತ್ತೇನೆ ಎಂದು ಹೇಳಿದ್ದರು. ನೀರಜ್​ರ ಇದುವರೆಗಿನ ಶ್ರೇಷ್ಠ ನಿರ್ವಹಣೆ 89.94 ಮೀ. ದೂರ ಎಸೆದಿರುವುದು. ಈ ಎಸೆತವನ್ನು 2022ರ ಸ್ಟಾಕ್​ಹೋಮ್​ ಡೈಮಂಡ್​ ಲೀಗ್​ನಲ್ಲಿ ಎಸೆದಿದ್ದರು. 

ಪ್ಯಾರಿಸ್‌ ಒಲಿಂಪಿಕ್ಸ್‌ ಬಳಿಕ ನೀರಜ್​ ಅವರು ಜರ್ಮನಿಯಲ್ಲಿ ತೊಡೆಸಂಧು ನೋವಿಗೆ ಚಿಕಿತ್ಸೆ ಪಡೆಯಲಿದ್ದಾರೆ ಎನ್ನಲಾಗಿತ್ತು. ಇದೀಗ ಅವರಿಗೆ ವೈದ್ಯರು ಸದ್ಯಕ್ಕೆ ಶಸ್ತ್ರಚಿಕಿತ್ಸೆಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ನೀರಜ್​ ಡೈಮಂಡ್‌ ಲೀಗ್‌ನಲ್ಲಿ ಪಾಲ್ಗೊಳ್ಳಲು ಮುಂದಾಗಿದ್ದಾರೆ. ಮುಂದಿನ ತಿಂಗಳು ಸೆಪ್ಟೆಂಬರ್ 13 ಮತ್ತು 14ರಂದು ಬ್ರಸೆಲ್ಸ್‌ನಲ್ಲಿ ಕೊನೆಯ ಡೈಮಂಡ್‌ ಲೀಗ್‌ ನಡೆಯಲಿದೆ. ಇದಾದ ಬಳಿಕ ನೀರಜ್​ ಮತ್ತೆ ವೈದ್ಯರನ್ನು ಸಂಪರ್ಕಿಸಿ ಶಸ್ತ್ರಚಿಕಿತ್ಸೆ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಲೈವ್ ಸ್ಟೀಮಿಂಗ್


ಡೈಮಂಡ್ ಲೀಗ್​ನ ನೇರಪ್ರಸಾರ ಇಂದು (ಗುರುವಾರ) ರಾತ್ರಿ 11.30ಕ್ಕೆ ಆರಂಭವಾಗಲಿದೆ. ಭಾರತೀಯ ಕಾಲಮಾನ ಆಗಸ್ಟ್ 23 ರಂದು (12:22 AM) ಪ್ರಸಾರಗೊಳ್ಳಲಿದೆ. ಜಿಯೋ ಸಿನೆಮಾ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ವಿಕ್ಷೀಸಬಹುದು. ಟಿವಿ ನೇರ ಪ್ರಸಾರ ಸ್ಪೋರ್ಟ್ಸ್​ 18-3 ಚಾನೆಲ್‌ನಲ್ಲಿ ಲಭ್ಯವಿರುತ್ತದೆ.

Continue Reading

ಪ್ರಮುಖ ಸುದ್ದಿ

PM Narendra Modi Poland visit: ಉಕ್ರೇನ್‌ನ ಹಾದಿಯಲ್ಲಿ ʼಯುದ್ಧʼದ ಕುರಿತು ನಿಲುವು ಪ್ರಕಟಿಸಿದ ಪ್ರಧಾನಿ ನರೇಂದ್ರ ಮೋದಿ

PM Narendra Modi Poland visit: ಉಕ್ರೇನ್‌ಗೆ ತಮ್ಮ ಬಹು ನಿರೀಕ್ಷಿತ ಭೇಟಿಗೆ ಎರಡು ದಿನಗಳ ಮೊದಲು, ಪೋಲೆಂಡ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಅವರು ಮಾತನಾಡಿದರು. ಅಲ್ಲಿ ಅವರು ರಷ್ಯಾದ ಆಕ್ರಮಣದ ಶಾಂತಿಯುತ ಪರಿಹಾರಕ್ಕಾಗಿ ಪ್ರಚಾರ ಮಾಡುವುದಾಗಿ ಶಪಥ ಮಾಡಿದ್ದಾರೆ.

VISTARANEWS.COM


on

PM Narendra Modi Poland visit
Koo

ವಾರ್ಸಾ: ಇದು ಯುದ್ಧದ ಯುಗವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಪುನರುಚ್ಚರಿಸಿದ್ದಾರೆ. ಈ ಹಿಂದೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ (Vladimir Putin) ಅವರಿಗೆ ಹೇಳಿದ್ದ ಮಾತನ್ನು ಮೋದಿಯವರು ಮತ್ತೆ ಹೇಳಿದ್ದು, ಪೋಲೆಂಡ್‌ಗೆ ಭೇಟಿ ನೀಡಿರುವ ಅವರು (PM Narendra Modi Poland visit) ಈ ಮಾತನ್ನು ಹೇಳಿದ್ದಾರೆ.

ಉಕ್ರೇನ್‌ಗೆ ತಮ್ಮ ಬಹು ನಿರೀಕ್ಷಿತ ಭೇಟಿಗೆ ಎರಡು ದಿನಗಳ ಮೊದಲು, ಪೋಲೆಂಡ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಅವರು ಮಾತನಾಡಿದರು. ಅಲ್ಲಿ ಅವರು ರಷ್ಯಾದ ಆಕ್ರಮಣದ ಶಾಂತಿಯುತ ಪರಿಹಾರಕ್ಕಾಗಿ ಪ್ರಚಾರ ಮಾಡುವುದಾಗಿ ಶಪಥ ಮಾಡಿದ್ದಾರೆ.

“ಭಾರತವು ಈ ಪ್ರದೇಶದಲ್ಲಿ ಶಾಶ್ವತ ಶಾಂತಿಯನ್ನು ಪ್ರತಿಪಾದಿಸುತ್ತದೆ. ನಮ್ಮ ನಿಲುವು ತುಂಬಾ ಸ್ಪಷ್ಟವಾಗಿದೆ- ಇದು ಯುದ್ಧದ ಯುಗವಲ್ಲ. ಇದು ಮಾನವೀಯತೆಗೆ ಬೆದರಿಕೆ ಹಾಕುವ ಸವಾಲುಗಳ ವಿರುದ್ಧ ಒಗ್ಗೂಡುವ ಸಮಯ. ಭಾರತವು ರಾಜತಾಂತ್ರಿಕತೆ ಮತ್ತು ಸಂವಾದಗಳಲ್ಲಿ ನಂಬಿಕೆ ಹೊಂದಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

73 ವರ್ಷ ವಯಸ್ಸಿನ ಪಿಎಂ ಮೋದಿ ಅವರು ಉಕ್ರೇನ್ ಪ್ರವಾಸ ಕೈಗೊಂಡ ಮೊದಲ ಭಾರತೀಯ ಪ್ರಧಾನಿ ಎನಿಸಿದ್ದಾರೆ. 45 ವರ್ಷಗಳಲ್ಲಿ ಪೋಲೆಂಡ್‌ಗೆ ಪ್ರಯಾಣಿಸುತ್ತಿರುವ ಮೊದಲ ಭಾರತೀಯ ಪ್ರಧಾನಿ ಕೂಡ ಹೌದು. ಪೋಲೆಂಡ್‌, ಉಕ್ರೇನ್‌ನ ನಿಕಟ ಮಿತ್ರ ಹಾಗೂ ಉಕ್ರೇನ್‌ಗೆ ತೆರಳುವ ವಿದೇಶಿ ನಾಯಕರಿಗೆ ಪೋಲೆಂಡ್‌ ಮುಖ್ಯ ಮಾರ್ಗವಾಗಿದೆ.

ಆಗಸ್ಟ್ 23ರಂದು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಆಹ್ವಾನದ ಮೇರೆಗೆ ಉಕ್ರೇನ್‌ಗೆ ಭೇಟಿ ನೀಡುತ್ತಿರುವ ಪ್ರಧಾನಿ ಮೋದಿ, ನಡೆಯುತ್ತಿರುವ ಸಂಘರ್ಷದ ಶಾಂತಿಯುತ ಪರಿಹಾರದ ಕುರಿತು ಉಕ್ರೇನ್ ನಾಯಕರೊಂದಿಗೆ ತಮ್ಮ ದೃಷ್ಟಿಕೋನಗಳನ್ನು ಹಂಚಿಕೊಳ್ಳುವುದಾಗಿ ಹೇಳಿದ್ದಾರೆ. ಇತ್ತೀಚೆಗೆ ಮಾಸ್ಕೋಗೆ ಕೂಡ ಮೋದಿ ಭೇಟಿ ನೀಡಿದ್ದರು. ಇದಾಗಿ ಆರು ವಾರಗಳ ನಂತರ, ರಷ್ಯದ ವೈರಿಯಾದ ಉಕ್ರೇನ್‌ಗೆ ಭೇಟಿ ಕೊಡುತ್ತಿದ್ದಾರೆ.

ಸೆಪ್ಟೆಂಬರ್ 2022ರಲ್ಲಿ, SCO ಶೃಂಗಸಭೆಯ ಸಂದರ್ಭದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತನಾಡುವಾಗ ಪ್ರಧಾನಿ ಮೊದಲ ಬಾರಿಗೆ “ಇದು ಯುದ್ಧದ ಯುಗವಲ್ಲ” ಎಂದಿದ್ದರು. ಸೆಪ್ಟೆಂಬರ್ 16ರಂದು ಸಮರ್‌ಕಂಡ್‌ನಲ್ಲಿ ನಡೆದ ಎಸ್‌ಸಿಒ ಶೃಂಗಸಭೆಯ ಸಂದರ್ಭದಲ್ಲಿ “ಇಂದಿನ ಯುಗವು ಯುದ್ಧಕ್ಕೆ ಹೇಳಿಸಿದ್ದಲ್ಲ” ಎಂದು ಮೋದಿ ಹೇಳಿದ್ದರು. ಆಹಾರ, ಇಂಧನ ಭದ್ರತೆ ಮತ್ತು ರಸಗೊಬ್ಬರಗಳ ಸಮಸ್ಯೆಗಳನ್ನು ಪರಿಹರಿಸಲು ಮಾರ್ಗಗಳನ್ನು ಕಂಡುಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು.

ಪೋಲೆಂಡ್‌ಗೆ ತೆರಳುವ ಮುನ್ನ ಪ್ರಧಾನಿ ಮೋದಿ, “ಸ್ನೇಹಿತ ಮತ್ತು ಪಾಲುದಾರನಾಗಿ, ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯ ಶೀಘ್ರ ಮರಳುವಿಕೆಯನ್ನು ನಾವು ಹಾರೈಸುತ್ತೇವೆ” ಎಂದು ಹೇಳಿದರು. ಎರಡು ದಿನಗಳ ಭೇಟಿಗಾಗಿ ಪೋಲೆಂಡ್‌ಗೆ ಆಗಮಿಸಿದ ಪ್ರಧಾನಿ ಮೋದಿ, ಭಾರತ ಮತ್ತು ಪೋಲೆಂಡ್ ನಡುವಿನ ಸಂಬಂಧದ ಇತಿಹಾಸವನ್ನು ಸ್ಮರಿಸುವ ಎರಡು ಸ್ಥಳಗಳಾದ ವಾರ್ಸಾದಲ್ಲಿನ ನವನಗರ ಸ್ಮಾರಕ ಮತ್ತು ಕೊಲ್ಹಾಪುರ್ ಸ್ಮಾರಕ ಜಾಮ್ ಸಾಹೇಬ್‌ಗೆ ಪುಷ್ಪಾರ್ಚನೆ ಮಾಡಿದರು.

ಇದನ್ನೂ ಓದಿ: PM Narendra Modi: ಅಧಿಕಾರದಿಂದ ಕೆಳಗಿಳಿಯುತ್ತಾರಾ ಪ್ರಧಾನಿ ಮೋದಿ? ಸಂಚಲನ ಮೂಡಿಸಿದ ಸುಬ್ರಮಣಿಯನ್‌ ಸ್ವಾಮಿ ಟ್ವೀಟ್‌

Continue Reading
Advertisement
Anushka Sharma
ಕ್ರೀಡೆ17 mins ago

Anushka Sharma: ಲಂಡನ್​ ಬಿಟ್ಟು ಮಗನ ಜತೆ ಮತ್ತೆ ಮುಂಬೈಗೆ ಮರಳಲಿದ್ದಾರೆ ಕೊಹ್ಲಿ ಪತ್ನಿ ಅನುಷ್ಕಾ!

air india bomb threat
ಪ್ರಮುಖ ಸುದ್ದಿ53 mins ago

Bomb Threat: ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ, ತಿರುವನಂತಪುರಂ ಏರ್‌ಪೋರ್ಟ್‌ನಲ್ಲಿ ತುರ್ತುಸ್ಥಿತಿ

R Sridhar
ಕ್ರೀಡೆ56 mins ago

R Sridhar: ಆಫ್ಘನ್ ಕ್ರಿಕೆಟ್​ ತಂಡದ ಸಹಾಯಕ ಕೋಚ್ ಆಗಿ ಶ್ರೀಧರ್ ನೇಮಕ

rakesh bhat kamala harris
ಪ್ರಮುಖ ಸುದ್ದಿ1 hour ago

Kamala Harris: ಕಮಲಾ ಹ್ಯಾರಿಸ್ ಪಕ್ಷದ ಭಾರಿ ಕಾರ್ಯಕ್ರಮದಲ್ಲಿ ಅಮೆರಿಕನ್ನರ ಮನ ಗೆದ್ದ ಉಡುಪಿಯ ಪುರೋಹಿತರ ಸಂಸ್ಕೃತ ಪ್ರಾರ್ಥನೆ!

Lausanne Diamond League:
ಕ್ರೀಡೆ1 hour ago

Lausanne Diamond League: ಇಂದು ಲಾಸಾನ್ನೆ ಡೈಮಂಡ್‌ ಲೀಗ್‌ನಲ್ಲಿ ನೀರಜ್‌ ಸ್ಪರ್ಧೆ

mandya murder case
ಕ್ರೈಂ2 hours ago

Murder Case: ಸ್ಕ್ರೂಡ್ರೈವರ್‌ನಿಂದ ಚುಚ್ಚಿ, ಕೊಡಲಿಯಿಂದ ಕೊಚ್ಚಿ ಪತ್ನಿಯ ಕೊಲೆಗೈದ ಪಾಪಿ

PM Narendra Modi Poland visit
ಪ್ರಮುಖ ಸುದ್ದಿ2 hours ago

PM Narendra Modi Poland visit: ಉಕ್ರೇನ್‌ನ ಹಾದಿಯಲ್ಲಿ ʼಯುದ್ಧʼದ ಕುರಿತು ನಿಲುವು ಪ್ರಕಟಿಸಿದ ಪ್ರಧಾನಿ ನರೇಂದ್ರ ಮೋದಿ

Honoring to the Ancestors
ವಿದೇಶ2 hours ago

Honoring to the Ancestors: ಈ ಸಮುದಾಯದ ಜನ ಪ್ರತಿ ವರ್ಷ ಸಮಾಧಿಯಿಂದ ಶವ ಹೊರತೆಗೆದು ಸ್ವಚ್ಛಗೊಳಿಸುತ್ತಾರೆ!

road rage murder case 1
ಬೆಂಗಳೂರು3 hours ago

Murder Case: ಟೀ ಕುಡಿಯಲು ಹೋದವ ಹಾಲು ತರಲು ಬಂದಿದ್ದವನಿಂದ ಹತ್ಯೆಯಾದ! ರೋಡ್‌ ರೇಜ್‌ ಕೊಲೆಯಲ್ಲಿ ಅಂತ್ಯ

Painkillers Side Effects
ಆರೋಗ್ಯ3 hours ago

Painkillers Side Effects: ನೋವು ನಿವಾರಕಗಳನ್ನು ನುಂಗುತ್ತೀರಾ? ಹಾಗಾದರೆ ಈ ಮಾಹಿತಿ ತಿಳಿದಿರಲಿ!

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌