ಚಂದ್ರನು ಮೀನ ರಾಶಿಯಿಂದ ಸೋಮವಾರ ಮೇಷ ರಾಶಿಯನ್ನು ಬೆಳಗ್ಗೆ 08:25ಕ್ಕೆ ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕಟಕ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳ ಬೆಂಬಲ ಸಿಗಲಿದೆ. ತುಲಾ ರಾಶಿಯವರು ಅತಿಯಾದ ಒತ್ತಡದ ಕಾರ್ಯ ಆಯಾಸವನ್ನುಂಟು ಮಾಡಲಿದೆ. ಆಲಸ್ಯದಿಂದ ಕೆಲಸ ಕಾರ್ಯಗಳನ್ನು ಮುಂದೂಡುವುದು ಬೇಡ. ಧನಸ್ಸು ರಾಶಿಯವರು ಕೆಲವು ಅನಿವಾರ್ಯ ಸಂದರ್ಭಗಳು ನಿಮಗೆ ಅಹಿತಕರವೆನಿಸಬಹುದು. ಆತುರದಲ್ಲಿ ಅತಿರೇಕದ ಮಾತುಗಳು ಬೇಡ. ಮೀನ ರಾಶಿಯವರು ಅನುಮಾನದಿಂದ ಕಾರ್ಯದಲ್ಲಿ ತೊಡಗುವುದು ಬೇಡ. ಹೊಸ ಅವಕಾಶಗಳು ಒದಗಿ ಬಂದಾವು. ಮಕ್ಕಳ ಆರೋಗ್ಯದ ಕಡೆಗೆ ಗಮನ ಇರಲಿ. ಕುಟುಂಬದಲ್ಲಿ ವ್ಯತಿರಿಕ್ತವಾದ ವಾತಾವರಣ ಸೃಷ್ಟಿಯಾಗುವ ಮುಂಚೆ ಎಚ್ಚರಿಕೆ ವಹಿಸಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (12-02-2024)
ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ
ತಿಥಿ: ತದಿಗೆ 17:43 ವಾರ: ಸೋಮವಾರ
ನಕ್ಷತ್ರ: ಪೂರ್ವ ಭಾದ್ರಪದ 14:55 ಯೋಗ: ಸಿದ್ಧಿ 26:35
ಕರಣ: ತೈತುಲ 07:23 ಅಮೃತ ಕಾಲ: ಬೆಳಗ್ಗೆ 07:51 ರಿಂದ 09:16 ರ ವರೆಗೆ
ದಿನದ ವಿಶೇಷ: ಮೌನಗೌರಿ ವ್ರತ, ಹಾವೇರಿಯ ಗ್ರಾಮದೇವಿ ಜಾತ್ರೆ
ಸೂರ್ಯೋದಯ : 6:43 ಸೂರ್ಯಾಸ್ತ : 06:24
ಮೇಷ: ಉತ್ಸಾಹದ ದಿನವಿದು. ಪ್ರಭಾವಿತ ವ್ಯಕ್ತಿಗಳ ಬೆಂಬಲ ಸಿಗಲಿದೆ. ಜೀವನದಲ್ಲಿ ಹೊಸ ತಿರುವು ಪಡೆದುಕೊಳ್ಳುವ ಸಾಧ್ಯತೆಯಿದೆ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕೌಟುಂಬಿಕ ಶುಭ ಫಲ.
ಅದೃಷ್ಟ ಸಂಖ್ಯೆ: 2
ವೃಷಭ: ನಿಮ್ಮ ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಆರ್ಥಿಕವಾಗಿ ಇಂದು ನೀವು ಸಾಕಷ್ಟು ಬಲವಾಗಿ ಕಾಣುವಿರಿ. ಸಂಗಾತಿಯೊಂದಿಗೆ ಮಾತಿಗೆ ಇಳಿಯುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1
ಮಿಥುನ: ಜನರ ಸಹಕಾರ ಸಿಗಲಿದೆ. ನಿಮ್ಮ ಕೋಪದಿಂದ ಇತರರ ಮೇಲೆ ಒತ್ತಡ ಹೇರಬೇಡಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ಕಟಕ: ಪ್ರಭಾವಿ ವ್ಯಕ್ತಿಗಳ ಬೆಂಬಲ ಸಿಗಲಿದೆ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಹೊಸ ಯೋಜನೆ, ಯೋಚನೆಗಳು ಫಲ ನೀಡಲಿವೆ. ಹಣಕಾಸು ವ್ಯವಹಾರದಲ್ಲಿ ಸಾಧಾರಣ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಕಾಳಜಿ ವಹಿಸಿ. ಕುಟುಂಬದ ಬೆಂಬಲ ಸಿಗಲಿದೆ. ಆತುರದ ತೀರ್ಮಾನ ಕೈಗೊಳ್ಳುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಕನ್ಯಾ: ನಕಾರಾತ್ಮಕ ಆಲೋಚನೆಗಳು ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಅತಿಯಾದ ಒತ್ತಡದ ಕಾರ್ಯ ಆಯಾಸವನ್ನುಂಟು ಮಾಡಲಿದೆ. ಆಲಸ್ಯದಿಂದ ಕೆಲಸ ಕಾರ್ಯಗಳನ್ನು ಮುಂದೂಡುವುದು ಬೇಡ. ಅತಿಥಿಗಳ ಆಗಮನ ಸಂತಸ ತಂದೀತು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ವೃಶ್ಚಿಕ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು. ಅನುಮಾನವು ಸಂಬಂಧಗಳನ್ನು ಹಾಳು ಮಾಡುವುದು. ಕುಟುಂಬದಲ್ಲಿ ಮಾತಿಗೆ ಮಾತು ಬೆಳೆಸುವುದು ಬೇಡ. ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4
ಧನಸ್ಸು: ಕೆಲವು ಅನಿವಾರ್ಯ ಸಂದರ್ಭಗಳು ನಿಮಗೆ ಅಹಿತಕರವೆನಿಸಬಹುದು. ಆತುರದಲ್ಲಿ ಅತಿರೇಕದ ಮಾತುಗಳು ಬೇಡ. ಹೂಡಿಕೆಯಲ್ಲಿ ತೊಡಗಿಸಿದ ಹಣ ಇಮ್ಮಡಿ ಲಾಭ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಮಕರ: ಜೀವನದಲ್ಲಿ ಭರವಸೆ ಸಿಗಲಿದೆ. ಅನಿರೀಕ್ಷಿತವಾಗಿ ಹಣ ಖರ್ಚು ಮಾಡುವಿರಿ. ಸಂಬಂಧಿಗಳಿಂದ ಕುಟುಂಬಕ್ಕೆ ಶುಭ ಸಿಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ದಿನದ ಕೊನೆಯ ಗಳಿಗೆಯಲ್ಲಿ ಸ್ವಲ್ಪ ಒತ್ತಡ ಉಂಟಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1
ಕುಂಭ: ಅನೇಕ ವಿಷಯಗಳು ನಿಮಗೆ ಸಂತಸ ತರುವುದು. ದೀರ್ಘಕಾಲದ ಕೆಲಸ ಇಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ಆರ್ಥಿಕ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಟೀಕಿಸುವವರ ಮಾತುಗಳಿಗೆ ಕಿವಿ ಕೊಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8
ಮೀನ: ಅನುಮಾನದಿಂದ ಕಾರ್ಯದಲ್ಲಿ ತೊಡಗುವುದು ಬೇಡ. ಹೊಸ ಅವಕಾಶಗಳು ಒದಗಿ ಬಂದಾವು. ಮಕ್ಕಳ ಆರೋಗ್ಯದ ಕಡೆಗೆ ಗಮನ ಇರಲಿ. ಕುಟುಂಬದಲ್ಲಿ ವ್ಯತಿರಿಕ್ತವಾದ ವಾತಾವರಣ ಸೃಷ್ಟಿಯಾಗುವ ಮುಂಚೆ ಎಚ್ಚರಿಕೆ ವಹಿಸಿ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com