Dina Bhavishya: ಈ ರಾಶಿಯವರ ಆರೋಗ್ಯ ಇಂದು ಕೊಂಚ ಹದಗೆಡಬಹುದು, ಇರಲಿ ಎಚ್ಚರ! - Vistara News

ಪ್ರಮುಖ ಸುದ್ದಿ

Dina Bhavishya: ಈ ರಾಶಿಯವರ ಆರೋಗ್ಯ ಇಂದು ಕೊಂಚ ಹದಗೆಡಬಹುದು, ಇರಲಿ ಎಚ್ಚರ!

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷದ ಚೌತಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your daily horoscope predictions for February 13 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಚಂದ್ರನು ಮೀನ ರಾಶಿಯಿಂದ ಮಂಗಳವಾರವೂ ಮೇಷ ರಾಶಿಯಲ್ಲಿಯೇ ನೆಲೆಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮಿಥುನ ರಾಶಿಯವರಿಗೆ ಅನಗತ್ಯ ಆಲೋಚನೆಗಳು ಮನಸ್ಸನ್ನು ಆವರಿಸಬಹುದು. ಹಣಕಾಸು ಯೋಜನೆಗಳ ಕುರಿತಾಗಿ ಆಲೋಚನೆ ಮಾಡುವಿರಿ. ನಿಮ್ಮ ಸಂಗಾತಿ ನಿಮ್ಮ ಬಗ್ಗೆ ಒಳ್ಳೆಯದನ್ನು ಯೋಚಿಸುತ್ತಾರೆ. ಆದ್ದರಿಂದ ಕೆಲವೊಮ್ಮೆ ನಿಮ್ಮ ಮೇಲೆ ಕೋಪವನ್ನು ಸಹ ತೋರಿಸಬಹುದು. ಆದರೆ, ನೀವೂ ಜಗಳಕ್ಕೆ ಬೀಳದೆ, ಅವರ ಮಾತುಗಳನ್ನು ನೀವು ಅರ್ಥಮಾಡಿಕೊಳ್ಳುವುದು ಉತ್ತಮ. ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (13-02-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ
ತಿಥಿ: ಚೌತಿ 14:41 ವಾರ: ಮಂಗಳವಾರ
ನಕ್ಷತ್ರ: ಉತ್ತರ ಭಾದ್ರಪದ 12:34 ಯೋಗ: ಸಾಧ್ಯ 23:03
ಕರಣ: ವಿಷ್ಟಿ (ಭದ್ರ) 14:41 ಅಮೃತ ಕಾಲ: ಬೆಳಗ್ಗೆ 08:15 ರಿಂದ 09:42ರ ವರೆಗೆ
ದಿನದ ವಿಶೇಷ: ಕುಂಭ ಸಂಕ್ರಾಂತಿ, ವಿನಾಯಕೀ ಚತುರ್ಥಿ, ಗಣೇಶ ಜಯಂತಿ

ಸೂರ್ಯೋದಯ : 6:43  ಸೂರ್ಯಾಸ್ತ : 06:25

ರಾಹುಕಾಲ : ಸಂಜೆ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕೆಲವು ಬಿಕ್ಕಟ್ಟುಗಳು ಮತ್ತು ಭಿನ್ನಾಭಿಪ್ರಾಯಗಳು ನಿಮಗೆ ಕಿರಿಕಿರಿ ಹಾಗೂ ಆತಂಕವನ್ನು ತರಬಹುದು. ಯಾರಾದರೂ ನಿಮ್ಮ ಸಹಾಯ ಕೇಳಬಹುದು. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು ಪಡೆಯಲು ಸಹಾಯ ಮಾಡುತ್ತದೆ. ಪ್ರೇಮಿಗಳಿಗೆ ಇಂದು ಹೊಸ ಆಶಾಭಾವನೆ ಮೂಡಿಸಲಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ನಿಮ್ಮ ಅಪಾರ ವಿಶ್ವಾಸ ಮತ್ತು ಸುಲಭದ ಕೆಲಸ ಇಂದು ವಿಶ್ರಾಂತಿಗೆ ಸಾಕಷ್ಟು ಸಮಯ ನೀಡುತ್ತದೆ. ಸಹೋದ್ಯೋಗಿಗಳೊಂದಿಗೆ ಸಂಯಮದಿಂದ ವರ್ತಿಸಿ, ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಸಾಮಾಜಿಕ ಕಾರ್ಯಗಳಲ್ಲಿ ಹಾಜರಾಗಲು ಅವಕಾಶಗಳು ಬರಬಹುದು ಹಾಗೂ ಇದು ನಿಮ್ಮನ್ನು ಪ್ರಭಾವಿ ವ್ಯಕ್ತಿಗಳ ಜತೆ ನಿಕಟ ಸಂಪರ್ಕ ಹೊಂದುವಂತೆ ಮಾಡಬಹುದು. ಇಂದು ನಿಮ್ಮ ಕಲಾತ್ಮಕ ಮತ್ತು ಸೃಜನಶೀಲ ಸಾಮರ್ಥ್ಯ ಬಹಳಷ್ಟು ಮೆಚ್ಚುಗೆ ತರುತ್ತದೆ. ನಿಮಗೆ ಅನಿರೀಕ್ಷಿತ ಪ್ರತಿಫಲಗಳನ್ನು ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದ್ದರೆ, ಹಣಕಾಸು ಪ್ರಗತಿ ಸಾಧಾರಣ ಇರಲಿದೆ. ಕೌಟುಂಬಿಕವಾಗಿ ಮಧ್ಯಮ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 3

Horoscope Today

ಮಿಥುನ: ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆವರಿಸಬಹುದು. ಹಣಕಾಸು ಯೋಜನೆಗಳ ಕುರಿತಾಗಿ ಆಲೋಚನೆ ಮಾಡುವಿರಿ. ನಿಮ್ಮ ಸಂಗಾತಿ ನಿಮ್ಮ ಬಗ್ಗೆ ಒಳ್ಳೆಯದನ್ನು ಯೋಚಿಸುತ್ತಾರೆ. ಆದ್ದರಿಂದ ಕೆಲವೊಮ್ಮೆ ನಿಮ್ಮ ಮೇಲೆ ಕೋಪವನ್ನು ಸಹ ತೋರಿಸಬಹುದು. ಆದರೆ, ನೀವೂ ಜಗಳಕ್ಕೆ ಬೀಳದೆ, ಅವರ ಮಾತುಗಳನ್ನು ನೀವು ಅರ್ಥಮಾಡಿಕೊಳ್ಳುವುದು ಉತ್ತಮ. ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭವಾಗಲಿದ್ದು, ಕೌಟುಂಬಿಕವಾಗಿ ಸಾಧಾರಣ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಅನಗತ್ಯ ಖರ್ಚಿನ ಹೊರತಾಗಿಯೂ ನಿಮ್ಮ ಆರ್ಥಿಕ ಭಾಗವು ಬಲವಾಗಿರುತ್ತದೆ. ನಿಮ್ಮ ಆಕರ್ಷಣೆ ಹಾಗೂ ವ್ಯಕ್ತಿತ್ವವು ಹೊಸ ಸ್ನೇಹಿತರನ್ನು ಗಳಿಸಿಕೊಡುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ವಾಹನ ಚಾಲನೆ ಮಾಡುವಾಗ ಜಾಗ್ರತೆ ಇರಲಿ. ಕಾರಣ ಅಪಘಾತವಾಗುವ ಸಂಭವ ಹೆಚ್ಚಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಹಾಗೂ ಕೌಟುಂಬಿಕವಾಗಿ ಶುಭ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ಭೂಮಿ ಸಂಬಂಧಿ ವ್ಯವಹಾರ ನಡೆಯುವ ಸಾಧ್ಯತೆ ಇದೆ. ಅದು ನಿಮಗೆ ಲಾಭದಾಯಕವಾಗಲಿದೆ. ನಿಮ್ಮ ಪ್ರೀತಿಪಾತ್ರರು ನಿಮಗೆ ಅಪಾರ ಸಂತೋಷವನ್ನು ತರುತ್ತಾರೆ. ಉದ್ಯೋಗಿಗಳಿಗೆ ಸ್ವಲ್ಪ ಒತ್ತಡ ಉಂಟಾಗುವ ಸಾಧ್ಯತೆ ಇದೆ. ಸಂಗಾತಿಯ ಮಾತುಗಳು ಹಿತವೆನಿಸುವುದು. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಒತ್ತಡ ಮುಕ್ತವಾಗಿ ಶಾಂತ ವಾತಾವರಣ ನಿರ್ಮಾಣವಾಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಲಾಭವಾಗಲಿದೆ. ಅನಿವಾರ್ಯ ಕಾರಣಗಳಿಂದ ನೀವು ಖರ್ಚು ಮಾಡುವ ಸಾಧ್ಯತೆ ಇದೆ. ಉದ್ಯೋಗ ಆಕಾಂಕ್ಷಿಗಳಿಗೆ ಇಂದು ಅದೃಷ್ಟದ ದಿನದಂತೆ ತೋರುತ್ತದೆ. ನಿಮಗೆ ಅಗತ್ಯವಿಲ್ಲದ ವಿಷಯಗಳ ಮೇಲೆ ಇಂದು ನಿಮ್ಮ ಹೆಚ್ಚಿನ ಸಮಯವನ್ನು ವ್ಯರ್ಥ ಮಾಡುವುದು ಬೇಡ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಂಗಾತಿಯ ಮಾತುಗಳು ಅಹಿತವೆನಿಬಹುದು. ಕಲಹಗಳಿಗೆ ಆಸ್ಪದ ಕೊಡಬೇಡಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಪ್ರೇಮ ಪ್ರಕರಣ ಹದಗೆಡುವ ಸಾಧ್ಯತೆ ಇದೆ. ಅನಿವಾರ್ಯ ಪ್ರಸಂಗಗಳಿಂದಾಗಿ ಪ್ರಯಾಣ ಬೆಳೆಸುವಿರಿ. ಸಂಬಂಧಿಕರ ಹಸ್ತಕ್ಷೇಪ ದಾಂಪತ್ಯ ಜೀವನದಲ್ಲಿ ವೈರತ್ವ ಮೂಡುವಂತೆ ಮಾಡಬಹುದು. ಅದಕ್ಕೆ ಅವಕಾಶ ಕೊಡಬೇಡಿ. ಆರೋಗ್ಯ ಪರಿಪೂರ್ಣ, ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಸ್ವಲ್ಪ ಆರ್ಥಿಕ ಲಾಭ ಮಾಡಲಿದೆ. ಇಂದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿಯಿಂದ ಅಚ್ಚರಿ ಕಾದಿರಲಿದೆ. ಭವಿಷ್ಯದ ಹೂಡಿಕೆ ಬಗೆಗೆ ಆಲೋಚನೆ ಮಾಡುವಿರಿ. ಆಪ್ತರ ಆಗಮನದಿಂದ ಕಾರ್ಯದಲ್ಲಿ ವಿಳಂಬವಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಹಣಕಾಸು ಹೂಡಿಕೆ ಬಗ್ಗೆ ಆಲೋಚನೆ ಮಾಡುವಿರಿ. ಉದ್ಯೋಗಿಗಳಿಗೆ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಮನೆಯಲ್ಲಿನ ವ್ಯತಿರಿಕ್ತ ವಾತಾವರಣ ನಿಮ್ಮ ಮನಸ್ಸಿಗೆ ನೋವುಂಟು ಮಾಡುವ ಸಾಧ್ಯತೆ ಇದೆ. ಅದರಿಂದ ದೂರ ಇರಿ. ದೈಹಿಕ ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಕರ: ನಿಮ್ಮ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ. ಇಂದು ನೀವು ಹಣಕ್ಕೆ ಸಂಬಂಧಿಸಿದ ಸಮಸ್ಯೆಯ ಕಾರಣದಿಂದ ತೊಂದರೆಗೊಳಗಾಗಬಹುದು. ಅತಿಥಿಗಳ ಆಗಮನ ಕೊಂಚ ಮಟ್ಟಿಗೆ ಸಮಾಧಾನ ತರಿಸಬಹುದು. ಉದ್ಯೋಗದ ಸ್ಥಳದಲ್ಲಿ ಮಾತಿನ ನಿಯಂತ್ರಣ ತಪ್ಪಿ ಅಪಾಯ ತಂದು ಕೊಳ್ಳುವುದು ಬೇಡ. ವಿದ್ಯಾರ್ಥಿಗಳು ಅಭ್ಯಾಸದ ಕಡೆ ಹೆಚ್ಚು ಗಮನ ಹರಿಸಬೇಕು. ವ್ಯಾಪಾರ – ವ್ಯವಹಾರಗಳಲ್ಲಿ ಸಾಧಾರಣ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ನಿಮ್ಮ ಅಪಾರ ವಿಶ್ವಾಸ ನಿಮಗೆ ಯಶಸ್ಸನ್ನು ತಂದುಕೊಡಲಿದೆ. ದಿನದ ಕೊನೆಯಲ್ಲಿ ಅನಿವಾರ್ಯ ಕಾರಣದಿಂದ ಮನಸ್ಸಿಗೆ ನೋವುಂಟಾಗುವ ಸಾಧ್ಯತೆ ಇದೆ. ನೀವು ಅತಿ ಉದಾರಿಯಾಗಿದ್ದಲ್ಲಿ – ನಿಮ್ಮ ನಿಕಟವರ್ತಿಗಳು ಅದರ ದುರುಪಯೋಗ ಪಡೆದುಕೊಳ್ಳಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಮೀನ: ಬೇಡದ ವಿಷಯದ ಬಗ್ಗೆ ಆಲೋಚನೆ ಮಾಡಬೇಡಿ. ಬದಲಿಗೆ ಅರ್ಥಪೂರ್ಣವಾದದ್ದನ್ನು ಮಾಡಲು ನಿಮ್ಮ ಶಕ್ತಿಯನ್ನು ವ್ಯಯಿಸಿ. ಆಪ್ತರೊಂದಿಗೆ ಅನಿವಾರ್ಯ ಕಾರಣದಿಂದ ಮುನಿಸಿಕೊಳ್ಳುವ ಸಾಧ್ಯತೆ ಇದೆ. ಇದಕ್ಕೆ ಅವಕಾಶ ಕೊಡದೆ ನಿಮ್ಮ ಹಾಸ್ಯ ಮನೋಭಾವನೆಯಿಂದ ಸಮಸ್ಯೆಯನ್ನು ಪರಿಹರಿಸಿಕೊಳ್ಳಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಸಂಗಾತಿಯ ಮಾತುಗಳು ಹಿತವೆನಿಸುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ .ಕೌಟುಂಬಿಕವಾಗಿ ಶುಭ ಫಲ
ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

VISTARANEWS.COM


on

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ದೀದಿ ಭದ್ರಕೋಟೆಯನ್ನು ಧೂಳೀಪಟಗೈದು ಅಧಿಕಾರಕ್ಕೇರಿದ ಸುವೇಂದು ಅಧಿಕಾರಿ ಮುಖ್ಯಮಂತ್ರಿ ಪಟ್ಟಕ್ಕೇರುತ್ತಿದ್ದಂತೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಆರೋಗ್ಯವಂತ ಜಾನುವಾರುಗಳ ಹತ್ಯೆ ಮಾಡಿದರೆ ಶಿಕ್ಷೆ ನೀಡಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಪಶುವೈದ್ಯರು ನೀಡುವ ಫಿಟ್‌ನೆಸ್‌‍ ಪ್ರಮಾಣಪತ್ರವಿಲ್ಲದೆ ಹಸು, ಹೋರಿ, ಎಮ್ಮೆ ಮತ್ತು ಕರು ಸೇರಿ ಯಾವುದೇ ಪ್ರಾಣಿಯನ್ನು ಹತ್ಯೆ ಮಾಡುವಂತಿಲ್ಲ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಹಸು 14 ವರ್ಷ ಮೇಲ್ಪಟ್ಟಿದ್ದು, ಕೆಲಸ ಮಾಡಲು ಅಥವಾ ಸಂತಾನೋತ್ಪತ್ತಿ ಮಾಡಲು ಯೋಗ್ಯವಿಲ್ಲದಿದ್ದರೆ ಅಥವಾ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿದ್ದು, ಶಾಶ್ವತವಾಗಿ ಗುಣಪಡಿಸಲು ಸಾಧ್ಯವಾಗದಿದ್ದರೆ ಮಾತ್ರ ಸ್ಥಳೀಯ ನಾಗರಿಕ ಅಧಿಕಾರಿಗಳು ಅಥವಾ ಪಶುವೈದ್ಯರು ಜಂಟಿಯಾಗಿ ಪ್ರಮಾಣ ಪತ್ರವನ್ನು ನೀಡಬಹುದಾಗಿದೆ.
ನಿಯಮಗಳನ್ನು ಜಾರಿಗೊಳಿಸಲು ಅಧಿಕಾರಿಗಳು ನಡೆಸುವ ಯಾವುದೇ ಪರಿಶೀಲನೆಯನ್ನು ವ್ಯಕ್ತಿಗಳು ತಡೆಯುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಯಾವುದೇ ರೀತಿಯ ಕಾನೂನು ಉಲ್ಲಂಘನೆಗಳಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 1 ಸಾವಿರ ರೂಪಾಯಿವರೆಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Continue Reading

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading

Latest

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

VISTARANEWS.COM


on

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಇಂದು ಈ ಕುರಿತು ಅಧಿಕೃತ ಘೋಷಣೆ ಮಾಡಿದೆ. ವಿ.ಡಿ. ಸತೀಶನ್‌ ಜೊತೆಗೆ ಕೆ.ಸಿ.ವೇಣುಗೋಪಾಲ್‌, ರಮೇಶ್‌ ಚೆನ್ನಿತಲ ಅವರು ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿದ್ದರು.
ಮೇ 4 ರಂದು ಕೇರಳಂ ವಿಧಾನಸಭಾ ಚುನಾವಣಾ ಫಲಿತಾಂಶ ಘೋಷಣೆಯಾದ್ರೂ ಸಿಎಂ ಸ್ಥಾನಕ್ಕೆ ಭಾರಿ ಪೈಪೋಟಿ ಇದ್ದ ಕಾರಣ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿತ್ತು.
ಇದೀಗ ಕೇರಳ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರ ಹೆಸರು ಘೋಷಣೆಯಾಗ್ತಿದ್ದಂತೆ ಅವರ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ವಿ.ಡಿ.ಸತೀಶನ್‌ ಪರವೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದೇ ಪರವೂರು ವಿಧಾನಸಭಾ ಕ್ಷೇತ್ರದಿಂದ ಸತೀಶನ್‌ 6 ಬಾರಿ ಗೆಲುವು ಸಾಧಿಸಿದ್ದಾರೆ. 2021 ರಲ್ಲಿ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

VISTARANEWS.COM


on

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್​ ವಿಧಾನಸಭೆಯಲ್ಲಿ ವಿಶ್ವಾಸ ಮತ ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡು ಅಸೆಂಬ್ಲಿಯಲ್ಲಿ ವಿಜಯ್​ ನೇತೃತ್ವದ ಟಿವಿಕೆಗೆ 144 ಸದಸ್ಯರ ಬೆಂಬಲ ಸಿಕ್ಕಿದೆ. 22 ಶಾಸಕರು ವಿಶ್ವಾಸ ಮತದ ವಿರುದ್ಧ ಮತ ಚಲಾಯಿಸಿದ್ದರು. ಐವರು ಶಾಸಕರು ಮತದಾನದಿಂದ ದೂರ ಉಳಿದಿದ್ದರು. ಎಐಡಿಎಂಕೆಯ ಒಂದು ಬಣ ಅಸೆಂಬ್ಲಿಯಲ್ಲಿ ಟಿವಿಕೆ ಪರ ಮತ ಚಲಾಯಿಸಿದೆ. ವಿರೋಧಪಕ್ಷ ಡಿಎಂಕೆ ಸಭಾತ್ಯಾಗ ಮಾಡಿತ್ತು. 108 ಸ್ಥಾನಗಳನ್ನು ಗೆಲ್ಲುವ ಮೂಲಕ ವಿಜಯ್ ನೇತೃತ್ವದ ಟಿವಿಕೆ ತಮಿಳುನಾಡಿನಲ್ಲಿ ಅತಿದೊಡ್ಡ ಪಕ್ಷವಾಗಿ ಹೊಮ್ಮಿತ್ತು. ವಿಜಯ್ ಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದ್ದರು.


ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ, 30 ಶಾಸಕರಿಂದ ಟಿವಿಕೆಗೆ ಮತ
ವಿಜಯ್ ವಿಶ್ವಾಸ ಮತ ಯಾಚನೆ ವೇಳೆ 30 ಎಐಎಡಿಎಂಕೆ ಶಾಸಕರು ಟಿವಿಕೆ ಪರ ಮತಚಲಾಯಿಸಿದ್ದು, ತಮಿಳುನಾಡಿನಲ್ಲಿ ಸಂಚಲನ ಮೂಡಿಸಿದೆ. ಇದರೊಂದಿಗೆ ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಡಿಎಂಕೆಯಲ್ಲಿ ಈಗ ಅತಿ ದೊಡ್ಡ ಆಂತರಿಕ ಸಂಘರ್ಷ ಏರ್ಪಟ್ಟಿದೆ. ತಮಿಳುನಾಡು ವಿಧಾನಸಭೆಯಲ್ಲಿ ಎಐಎಡಿಎಂಕೆ 47 ಶಾಸಕರನ್ನು ಹೊಂದಿದೆ. ಇದರಲ್ಲಿ 30 ಶಾಸಕರು ಟಿವಿಕೆ ಪರ ಮತ ಚಲಾಯಿಸಿದ್ದಾರೆ ಎನ್ನಲಾಗಿದೆ. ಪಕ್ಷದ ವಿಪ್​​ ಹೊರತಾಗಿಯೂ, ಈ ಶಾಸಕರು ವಿಜಯ್​​ಗೆ ಜೈ ಎಂದಿದ್ದಾರೆ. ವಿಜಯ್​ ಪರ ಮತ ಚಲಾಯಿಸಿದ ಎಐಎಡಿಎಂಕೆ ಶಾಸಕರು ಪಕ್ಷಾಂತರ ನಿಷೇಧ ಕಾಯಿದೆ ತೂಗು ಕತ್ತಿಯಿಂದ ಪಾರಾಗ್ತಾರಾ ಅನ್ನೋದು ಸದ್ಯದ ಕುತೂಹಲವಾಗಿದೆ.

Continue Reading
Advertisement
Latest15 hours ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest16 hours ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ16 hours ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest17 hours ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest18 hours ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest21 hours ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest2 days ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

ಅವಿಭಾಗೀಕೃತ2 days ago

ಬೆಂಗಳೂರಿಗೆ ʼಆರನೇ ಗ್ಯಾರಂಟಿʼ – ʼನನ್ನ ಖಾತೆ ನನ್ನ ಹಕ್ಕುʼ

ಪ್ರಮುಖ ಸುದ್ದಿ2 days ago

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

ಸಿನಿಮಾ2 days ago

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌