Dina Bhavishya : ಈ ರಾಶಿಯವರು ಇಂದು ಜಾಸ್ತಿ ಮಂಡೆ ಬಿಸಿ ಮಾಡಿಕೊಳ್ಳಬೇಡಿ! ಯಾವ ರಾಶಿಗಳಿಗೆ 9 ಲಕ್ಕಿ ನಂಬರ್? - Vistara News

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರು ಇಂದು ಜಾಸ್ತಿ ಮಂಡೆ ಬಿಸಿ ಮಾಡಿಕೊಳ್ಳಬೇಡಿ! ಯಾವ ರಾಶಿಗಳಿಗೆ 9 ಲಕ್ಕಿ ನಂಬರ್?

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷದ ಸಪ್ತಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Horoscope Today 17 January 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಚಂದ್ರನು ಗುರುವಾರದವರೆಗೆ ಮೇಷ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಕನ್ಯಾ ರಾಶಿಯವರು ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆಕ್ರಮಿಸಿಕೊಳ್ಳಲು ಬಿಡಬೇಡಿ. ಶಾಂತವಾಗಿ ಮತ್ತು ಒತ್ತಡ ಮುಕ್ತವಾಗಿ ಉಳಿಯಲು ಪ್ರಯತ್ನಿಸಿ ಹಾಗೂ ಅದು ನಿಮ್ಮ ಮಾನಸಿಕ ದೃಢತೆಯನ್ನು ಹೆಚ್ಚಿಸುತ್ತದೆ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತವಾಗಿರಲಿದೆ. ಕುಂಭ ರಾಶಿಯವರಿಗೆ ಈ ದಿನ ಲಾಭವನ್ನು ತಂದು ಕೊಡಲಿದೆ. ಇನ್ನು ಆರೋಗ್ಯದ ಬಗ್ಗೆ ನೋಡುವುದಾದರೆ ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ಮೂರನೇ ವ್ಯಕ್ತಿಯ ಹಸ್ತಕ್ಷೇಪ ಆಗುವ ಸಾಧ್ಯತೆ ಇದ್ದು, ಇದರಿಂದ ನಿಮ್ಮ ಪ್ರೀತಿಪಾತ್ರರ ಜತೆಗೆ ಕಂದಕ ಸೃಷ್ಟಿಯಾಗಬಹುದು. ಹೀಗಾಗಿ ಎಚ್ಚರಿಕೆ ವಹಿಸಿ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (17-01-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷ
ತಿಥಿ: ಸಪ್ತಮಿ 22:06 ವಾರ: ಬುಧವಾರ
ನಕ್ಷತ್ರ: ರೇವತಿ 27:32 ಯೋಗ: ಶಿವ 17:11
ಕರಣ: ಗರಜ 10:58 ಅಮೃತ ಕಾಲ: ಮಧ್ಯರಾತ್ರಿ 01:16 ರಿಂದ 02:48ರ ವರೆಗೆ
ದಿನದ ವಿಶೇಷ: ತುಳುವಷಷ್ಠಿ, ಬಿಳಿಗಿರಿ ರಂಗನಾಥಸ್ವಾಮಿ ರಥ, ಘಾಟಿ ಸುಬ್ರಮಣ್ಯ ಸ್ವಾಮಿ ಉತ್ಸವ

ಸೂರ್ಯೋದಯ : 06:46  ಸೂರ್ಯಾಸ್ತ : 06:13

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರೋಗ್ಯ ಸುಧಾರಣೆಗಾಗಿ ಮಾಡುವ ಪ್ರಯತ್ನಗಳು ಸಹಕಾರಿಯಾಗಲಿವೆ. ಆರ್ಥಿಕ ಭಾಗವು ಬಲಗೊಳ್ಳುವ ಪೂರ್ಣ ಸಾಧ್ಯತೆ ಇದೆ. ಸಾಲದ ಮರುಪಾವತಿ ಆಗಲಿದೆ. ಇತರರ ದೋಷಗಳನ್ನು ಹುಡುಕುತ್ತಾ ಸಮಯ ವ್ಯರ್ಥ ಮಾಡುವುದು ಬೇಡ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಇರಲಿದೆ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಅನಿವಾರ್ಯ ಕಾರಣಗಳಿಂದ ನೀವು ಯಾವುದಾದರೂ ಸಹಾಯ ಕೋರುವ ಸಾಧ್ಯತೆ ಇದೆ. ನಿಮ್ಮ ಪ್ರಯತ್ನಗಳು ಖಂಡಿತವಾಗಿಯೂ ಸಕಾರಾತ್ಮಕ ಫಲಿತಾಂಶವನ್ನು ತರುತ್ತವೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿ ಕಿರಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಮನೆಯ ಸದಸ್ಯರು ಇಂದು ನಿಮ್ಮೊಂದಿಗೆ ಅನೇಕ ಸಮಸ್ಯೆಗಳನ್ನು ಹಂಚಿಕೊಳ್ಳುತ್ತಾರೆ. ಹಿರಿಯರ ಸತತ ಮಾರ್ಗದರ್ಶನ ಸಿಗಲಿದೆ. ಅವಸರದಲ್ಲಿ ಮಾತನಾಡಿದ ಬಗ್ಗೆ ಪಶ್ಚಾತ್ತಾಪ ಉಂಟಾಗಲಿದೆ. ಆರ್ಥಿಕವಾಗಿ ಪ್ರಗತಿ ಸಾಧಾರಣವಾಗಿರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕುಟುಂಬದಲ್ಲಿ ಸಾಮರಸ್ಯ ಇರಲಿದೆ.
ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಗಾಳಿಯಲ್ಲಿ ಮನೆ ಕಟ್ಟುವ ವ್ಯರ್ಥ ಪ್ರಯತ್ನ ನಿಮ್ಮದಾಗದಿರಲಿ. ಬದಲಿಗೆ ಏನಾದರೂ ಅರ್ಥಪೂರ್ಣವಾದದ್ದನ್ನು ಮಾಡಲು ನಿಮ್ಮ ಶಕ್ತಿ ಮತ್ತು ಯುಕ್ತಿಯನ್ನು ವ್ಯಯಿಸಿ. ಇಂದು ನಿಮಗೆ ಹಣದ ಲಾಭವಾಗುವ ಪೂರ್ತಿ ಸಾಧ್ಯತೆ ಇದೆ. ಆದರೆ, ಇದರೊಂದಿಗೆ ನೀವು ದಾನವನ್ನು ಸಹ ಮಾಡಬೇಕು. ಏಕೆಂದರೆ ಇದರಿಂದ ನಿಮಗೆ ಮಾನಸಿಕ ಶಾಂತಿ ಸಿಗುತ್ತದೆ. ಆರೋಗ್ಯ ಕುರಿತಾಗಿ ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಸಂಶಯಾಸ್ಪದ ಹಣಕಾಸು ವ್ಯವಹಾರಗಳಲ್ಲಿ ಸಿಲುಕಿಕೊಳ್ಳದಂತೆ ಎಚ್ಚರಿಕೆ ವಹಿಸಿ. ನೀವು ಯಾವುದೇ ಬದ್ಧತೆಯನ್ನು ಮಾಡುವ ಮೊದಲು ಎಲ್ಲ ಸತ್ಯಾಸತ್ಯತೆಗಳನ್ನು ಅರಿತುಕೊಳ್ಳುವುದು ಅಗತ್ಯ. ಕುಟುಂಬದಲ್ಲಿ ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸಬೇಡಿ. ಮಾನಸಿಕ ಹಾಗೂ ದೈಹಿಕವಾಗಿ ಜರ್ಜರಿತರಾಗುವ ಬದಲು ಯೋಗ, ಧ್ಯಾನ ಮಾಡಿ. ಆಗ ಮನಸ್ಸಿನ ಮೂಲೆಯಲ್ಲಿ ಸಂತಸ ಚಿಗುರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿ ಕಿರಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆಕ್ರಮಿಸಿಕೊಳ್ಳಲು ಬಿಡಬೇಡಿ. ಶಾಂತವಾಗಿ ಮತ್ತು ಒತ್ತಡ ಮುಕ್ತವಾಗಿ ಉಳಿಯಲು ಪ್ರಯತ್ನಿಸಿ ಹಾಗೂ ಅದು ನಿಮ್ಮ ಮಾನಸಿಕ ದೃಢತೆಯನ್ನು ಹೆಚ್ಚಿಸುತ್ತದೆ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತವಾಗಿರಲಿದೆ. ಸಂಬಂಧಿಗಳ ಆಗಮನ ಸಂತಸ ತರಲಿದೆ. ಸಂಗಾತಿಯ ಹಸ್ತಕ್ಷೇಪ ಮುಜುಗರವನ್ನುಂಟು ಮಾಡಲಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಸಂತಸದ ಪ್ರಯಾಣ ಮತ್ತು ಸಾಮಾಜಿಕ ಕಾರ್ಯಕ್ರಮಗಳು ನಿಮಗೆ ಆರಾಮ ಮತ್ತು ಸಂತೋಷವನ್ನು ತರುತ್ತದೆ. ಈ ರಾಶಿಚಕ್ರದ ದೊಡ್ಡ ಉದ್ಯಮಿಗಳು ಇಂದು ಹೂಡಿಕೆ ಮಾಡಬೇಕಾದರೆ ತುಂಬಾ ಯೋಚಿಸಿ ತೀರ್ಮಾನಕ್ಕೆ ಬರಬೇಕು. ನಿಮ್ಮ ಸ್ಪರ್ಧಾತ್ಮಕ ಸ್ವಭಾವ ನೀವು ಪ್ರವೇಶಿಸುವ ಯಾವುದೇ ಸ್ಪರ್ಧೆಯಲ್ಲೂ ನಿಮ್ಮನ್ನು ಗೆಲ್ಲಿಸುತ್ತದೆ. ಪ್ರೇಮಿಗಳಿಗೆ ಮನೆಯಿಂದ ಹಸಿರು ನಿಶಾನೆ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಭಾವನಾತ್ಮಕ ನಿರ್ಧಾರ ಕೈಗೊಳ್ಳುವ ಭರದಲ್ಲಿ ಮನಸ್ಸಿನ ಸ್ಥಿಮಿತವನ್ನು ಕಳೆದುಕೊಳ್ಳುವುದು ಬೇಡ. ಅಜಾಗರೂಕತೆಯಿಂದ ಹೂಡಿಕೆ ಮಾಡಿದರೆ ನಿಮಗೆ ಆರ್ಥಿಕ ನಷ್ಟ ಉಂಟಾಗಬಹುದು. ಕಠಿಣ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಸಿದ್ಧರಾಗುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಹಿರಿಯ ಅಧಿಕಾರಿಗಳಿಂದ ಕಿರಿ ಕಿರಿ ಉಂಟಾಗಲಿದೆ. ಕುಟುಂಬದಲ್ಲಿ ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ನೀವು ದೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಸಣ್ಣ ಉದ್ಯೋಗವನ್ನು ಮಾಡುವ ಜನರು, ಇಂದು ತಮ್ಮ ಆಪ್ತರಿಂದ ಯಾವುದೇ ಸಲಹೆಯನ್ನು ಪಡೆಯಬಹುದು. ಇದರಿಂದ ಅವರಿಗೆ ಆರ್ಥಿಕವಾಗಿ ಲಾಭ ಆಗುವ ಸಾಧ್ಯತೆ ಇದೆ. ಇಂದು ಹಣದ ಬಗ್ಗೆ ಕುಟುಂಬ ಸದಸ್ಯರಲ್ಲಿ ಗೊಂದಲ ಉಂಟಾಗಬಹುದು. ಆದಷ್ಟು ಸಾಲ ಮಾಡದಂತೆ ಎಚ್ಚರಿಕೆ ವಹಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಮೇಲಧಿಕರಿಗಳು ನಿಮ್ಮ ಸಹನೆ ಪರೀಕ್ಷಿಸುವ ಸಾಧ್ಯತೆ ಇದೆ. ಹೀಗಾಗಿ ಆದಷ್ಟು ಮೌನದಿಂದ ಕೆಲಸವನ್ನು ಸಾಧಿಸಿಕೊಳ್ಳಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಮನಸ್ಸಿನ ಭಾವನೆಗಳನ್ನು ಹತೋಟಿಯಲ್ಲಿ ಇಟ್ಟುಕೊಳ್ಳಿ ಆ ಸಿಟ್ಟನ್ನು ಇತರರ ಮೇಲೆ ಹಾಕಿ ಪಶ್ಚಾತ್ತಾಪ ಪಡುವುದು ಬೇಡ. ಹಳೆಯ ಪ್ರೀತಿಯ ನೆನಪು ಮರುಕಳಿಸಲಿದೆ. ವ್ಯಾಪಾರ ವ್ಯವಹಾರದಲ್ಲಿ ಲಾಭ ಸಿಗಲಿದೆ. ಆರೋಗ್ಯದ ಕುರಿತು ಕೊಂಚ ಕಾಳಜಿ ವಹಿಸಬೇಕಿದೆ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಈ ದಿನ ಲಾಭವನ್ನು ತಂದು ಕೊಡಲಿದೆ. ಇನ್ನು ಆರೋಗ್ಯದ ಬಗ್ಗೆ ನೋಡುವುದಾದರೆ ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ಮೂರನೇ ವ್ಯಕ್ತಿಯ ಹಸ್ತಕ್ಷೇಪ ಆಗುವ ಸಾಧ್ಯತೆ ಇದ್ದು, ಇದರಿಂದ ನಿಮ್ಮ ಪ್ರೀತಿಪಾತ್ರರ ಜತೆಗೆ ಕಂದಕ ಸೃಷ್ಟಿಯಾಗಬಹುದು. ಹೀಗಾಗಿ ಎಚ್ಚರಿಕೆ ವಹಿಸಿ. ಆರೋಗ್ಯ ಪರಿಪೂರ್ಣ ಇರಲಿದೆ. ಉದ್ಯೋಗಿಗಳಿಗೆ ಕಿರಿ ಕಿರಿ ಆಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅಧ್ಯಾತ್ಮದ ಒಲವು ಹೆಚ್ಚಾಗಲಿದೆ. ನಿಮ್ಮ ಕನಸು ನನಸಾಗುವ ಕಾಲ ಇದು. ಆರೋಗ್ಯ ಪರಿಪೂರ್ಣವಾಗಿರಲಿದೆ. ನೀವು ಹಣಕಾಸಿನ ಲಾಭ ತರುವ ಅದ್ಭುತವಾದ ಹೊಸ ಕಲ್ಪನೆಗಳನ್ನು ಪ್ರಸ್ತುತಪಡಿಸುತ್ತೀರಿ. ಉದ್ಯೋಗಿಗಳಿಗೆ ಶುಭ ಫಲ ಉಂಟಾಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಆಗಸ್ಟ್‌ 31ರ ಒಳಗೆ GBA ಚುನಾವಣೆ ನಡೆಸಿ- ಸುಪ್ರೀಂ ಕೋರ್ಟ್‌

VISTARANEWS.COM


on

ಆಗಸ್ಟ್‌ 31ರ ಒಳಗೆ ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದೆ. ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗದ ಮನವಿಯನ್ನು ಪರಿಗಣಿಸಿದ ಸುಪ್ರೀಂಕೋರ್ಟ್‌, ಆಗಸ್ಟ್‌ 31ರವರೆಗೆ ಕಾಲಾವಕಾಶ ನೀಡಿದೆ. ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಇನ್ನೂ ಮೂರು ತಿಂಗಳ ಗಡುವು ವಿಸ್ತರಣೆ ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು.

ಈ ಹಿಂದೆ ಜೂನ್‌ 30ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿತ್ತು. ಆದರೆ ಇದೀಗ ಸರ್ಕಾರದ ಮನವಿ ಮೇರೆಗೆ ಚುನಾವಣಾ ಗಡುವನ್ನು ಆಗಸ್ಟ್‌ ಅಂತ್ಯದವರೆಗೆ ವಿಸ್ತರಿಸಲಾಗಿದೆ.

ಸೆಪ್ಟೆಂಬರ್‌ ಅಂತ್ಯದವರೆಗೆ ಕಾಲಾವಕಾಶ ನೀಡಬೇಕೆಂದು ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗದ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದವು. ಮನವಿಯನ್ನು ಆಲಿಸಿದ ಸಿಜೆಐ ಅವರನ್ನು ಒಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳಲ್ಲಿ, ರಾಜ್ಯದಲ್ಲಿ ಚುನಾವಣಾ ಸಿಬ್ಬಂದಿ ವರ್ಗ ಜನಗಣತಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ, ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಗಳಲ್ಲಿ ನಿರತರಾಗಿದ್ದಾರೆ. ಹೀಗಾಗಿ ಜಿಬಿಎ ಚುನಾವಣೆ ನಡೆಸಲು ಮೂರು ತಿಂಗಳ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದವು.

Continue Reading

Latest

ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ ಬಂದ್‌

VISTARANEWS.COM


on

ಇ-ಫಾರ್ಮಸಿ ಹಾಗೂ ಆನ್‌ಲೈನ್‌ ಮೂಲಕ ಔಷಧ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ಗಳು ಬಂದ್‌ ಆಗಿವೆ. ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಕರೆ ಮೇರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಮೆಡಿಕಲ್‌ ಸ್ಟೋರ್‌ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಆನ್‌ಲೈನ್‌ ಔಷಧ ವ್ಯಾಪಾರಕ್ಕೆ ಕಟ್ಟುನಿಟ್ಟಾದ ನಿಯಮ ಜಾರಿಗೊಳಿಸಬೇಕು, ಕಾರ್ಪೊರೇಟ್‌ ಸಂಸ್ಥೆಗಳ ಭಾರಿ ರಿಯಾಯಿತಿ ದರ ಸಮರಕ್ಕೆ ಬ್ರೇಕ್‌ ಹಾಕಬೇಕು ಹಾಗೂ ಎಲ್ಲಾ ವ್ಯಾಪಾರಿಗಳಿಗೆ ಸಮಾನ ಮುಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು ಎಂಬ ಬೇಡಿಕೆಗಳನ್ನು ಅಖಿಲ ಭಾರತ ಕೆಮಿಸ್ಟ್‌ ಮತ್ತು ಡ್ರಗ್ಗಿಸ್ಟ್‌ ಸಂಘ ಮುಂದಿಟ್ಟಿದೆ.

ಈ ಬಂದ್‌ನಿಂದ ಅನೇಕ ಕಡೆಗಳಲ್ಲಿ ಔಷಧ ಖರೀದಿಗೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ತುರ್ತು ಸೇವೆಗಳಿಗಾಗಿ ಕೆಲವು ಮೆಡಿಕಲ್‌ ಸ್ಟೋರ್‌ಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ.

Continue Reading

Latest

ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ ಬಂದ್‌

VISTARANEWS.COM


on

ಆನ್‌ಲೈನ್‌ನಲ್ಲಿ ಔಷಧ ಮಾರಾಟವನ್ನು ವಿರೋಧಿಸಿ ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳ ಬಂದ್‌ಗೆ ಕರೆ ನೀಡಲಾಗಿದೆ. ದೇಶದಾದ್ಯಂತ ಸುಮಾರು 9 ಲಕ್ಷ ಔಷಧ ಅಂಗಡಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.
ಕರ್ನಾಟಕದಲ್ಲೂ ಸುಮಾರು 26 ಸಾವಿರಕ್ಕೂ ಹೆಚ್ಚು ಮೆಡಿಕಲ್ ಶಾಪ್‌ಗಳು ಬಂದ್ ಆಗುವ ಸಾಧ್ಯತೆ ಇದ್ದು, ಗ್ರಾಹಕರು ಅಗತ್ಯ ಔಷಧಿಗಳನ್ನು ಮುಂಚಿತವಾಗಿ ಖರೀದಿಸಿಕೊಳ್ಳುವಂತೆ ಸಂಘಟನೆಗಳು ಮನವಿ ಮಾಡಿವೆ.

ಇ-ಫಾರ್ಮಸಿ ವೇದಿಕೆಗಳ ಮೂಲಕ ಭಾರಿ ರಿಯಾಯಿತಿಯಲ್ಲಿ ಔಷಧ ಮಾರಾಟವಾಗುತ್ತಿರುವುದು ಸಣ್ಣ ಹಾಗೂ ಮಧ್ಯಮ ಮಟ್ಟದ ಮೆಡಿಕಲ್ ಅಂಗಡಿಗಳಿಗೆ ಹೊಡೆತ ನೀಡುತ್ತಿದೆ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ. ಜೊತೆಗೆ ಆನ್‌ಲೈನ್ ಮೂಲಕ ನಿಯಂತ್ರಣವಿಲ್ಲದೆ ಔಷಧ ವಿತರಣೆ ನಡೆಯುತ್ತಿರುವುದರಿಂದ ರೋಗಿಗಳ ಆರೋಗ್ಯಕ್ಕೂ ಅಪಾಯ ಉಂಟಾಗಬಹುದು ಎಂದು ಎಚ್ಚರಿಸಿದ್ದಾರೆ.
ಆನ್‌ಲೈನ್ ಮೂಲಕ ಔಷಧ ಖರೀದಿ ವ್ಯವಸ್ಥೆಯನ್ನು ನಿಯಂತ್ರಿಸುವುದು ಹಾಗೂ ಇ-ಫಾರ್ಮಸಿ ಕಂಪನಿಗಳ ವಿರುದ್ಧ ಕಠಿಣ ನಿಯಮ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ.

Continue Reading

Latest

ಸಾರಿಗೆ ಮಷ್ಕರಕ್ಕೆ ಹೈಕೋರ್ಟ್‌ ಬ್ರೇಕ್‌

VISTARANEWS.COM


on

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್‌ ನಿರ್ಬಂಧ ವಿಧಿಸಿದೆ. ಸಾರಿಗೆ ನೌಕರರು ಮುಷ್ಕರವನ್ನು ನಡೆಸಬಾರದು ಎಂದು ಸಾರಿಗೆ ಸಂಘಟನೆಗಳಿಗೆ ಹೈಕೋರ್ಟ್‌ ಸೂಚನೆ ನೀಡಿದ್ದು, ಸರ್ಕಾರವು ಕೂಡಲೇ ಸಂಘಟನೆಗಳೊಂದಿಗೆ ಮಾತುಕತೆ ನಡೆಸಬೇಕು ಎಂದು ನಿರ್ದೇಶಿಸಿದೆ.

ಮೇ.20 ರಿಂದ ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದರು. ಮುಷ್ಕರಕ್ಕೆ ನಿರ್ಬಂಧ ವಿಧಿಸಿರುವ ಹೈಕೋರ್ಟ್‌, ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಸೂಚಿಸಿದೆ. ಇದೇ ವೇಳೆ ಸಾರಿಗೆ ಸಚಿವರೊಂದಿಗೆ ಸಂಘಟನೆಗಳು ಮಾತುಕತೆ ನಡೆಸುವಂತೆ ಸಲಹೆ ನೀಡಿದೆ.

ಈ ಸಂಬಂಧ ಸಾರಿಗೆ ಸಂಘಟನೆಗಳು, ರಾಜ್ಯ ಸರ್ಕಾರ ಹಾಗೂ ಸಾರಿಗೆ ಸಚಿವರಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಸಾರ್ವಜನಿಕರ ಸಂಚಾರಕ್ಕೆ ಯಾವುದೇ ಅಡಚಣೆ ಆಗದಂತೆ ತಕ್ಷಣ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಲಾಗಿದೆ.

Continue Reading
Advertisement
galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌