Site icon Vistara News

Dina Bhavishya: ಈ ರಾಶಿಯವರಿಗೆ ನಂಬಿದ ವ್ಯಕ್ತಿಗಳೇ ಮೋಸ ಮಾಡಬಹುದು!

Dina Bhavishya

ಚಂದ್ರನು ಗುರುವಾರ ರಾತ್ರಿ 10:06ಕ್ಕೆ ಕನ್ಯಾ ರಾಶಿಯಿಂದ ತುಲಾ ರಾಶಿಗೆ ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರಿಗೆ ಯಾವುದಾದರೂ ಮೂಲದಿಂದ ಆರ್ಥಿಕ ಲಾಭವಾಗಲಿದೆ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಸಾಧ್ಯತೆ. ಇನ್ನು ಕನ್ಯಾ ರಾಶಿಯವ ಉದ್ಯೋಗಿಗಳಿಗೆ ಕಿರಿಕಿರಿ ಇರಲಿದ್ದು, ನಂಬಿದ ವ್ಯಕ್ತಿಗಳು ಮೋಸಗೊಳಿಸಬಹುದು. ತಪ್ಪು ತಿಳಿವಳಿಕೆ ಉಂಟಾಗುವ ಸಾಧ್ಯತೆಯೂ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (11-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.
ತಿಥಿ: ಪಂಚಮಿ 10:02 ವಾರ: ಗುರುವಾರ
ನಕ್ಷತ್ರ: ಪೂರ್ವ ಪಾಲ್ಗುಣಿ 13:03 ಯೋಗ: ವರಿಯಾನ 28:07
ಕರಣ: ಬಾಲವ 10:02 ಅಮೃತಕಾಲ: ಬೆಳಗ್ಗೆ 05:55 ರಿಂದ 07:42
ದಿನದ ವಿಶೇಷ: ಅಮೃತ ಲಕ್ಷ್ಮಿ ವ್ರತ

ಸೂರ್ಯೋದಯ : 05:47   ಸೂರ್ಯಾಸ್ತ : 07:15

ರಾಹುಕಾಲ: ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

ಮೇಷ: ಅತಿರೇಕದ ಮಾತುಗಳು ಜಗಳ ಉಂಟುಮಾಡಬಹುದು. ಯಾವುದಾದರೂ ಮೂಲದಿಂದ ಆರ್ಥಿಕ ಲಾಭವಾಗಲಿದೆ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಸಾಧ್ಯತೆ. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಏರುಪೇರು ಉಂಟಾಗುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ವೃಷಭ: ಭಾವನಾತ್ಮಕ ವಿಷಯಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ. ದಿನದ ಮಟ್ಟಿಗೆ ಖರ್ಚು. ಕುಟುಂಬದ ಆಪ್ತರಿಂದ ಆಮಂತ್ರಣ. ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಮಿಥುನ: ಏಕಪಕ್ಷೀಯ ವ್ಯಾಮೋಹದಿಂದ ಒತ್ತಡ ಸಾಧ್ಯತೆ ಇದ್ದು, ಕಡಿಮೆ ಮಾಡಿಕೊಳ್ಳಿ. ಭರವಸೆಯ ಹೊಸ ಅವಕಾಶಗಳು ತಪ್ಪದಂತೆ ನೋಡಿಕೊಳ್ಳಿ.
ಆರ್ಥಿಕ ಪ್ರಗತಿ ಮಧ್ಯಮ. ಆರೋಗ್ಯದಲ್ಲಿ ಕೊಂಚ ಬದಲಾವಣೆ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

ಕಟಕ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದ್ದು, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಅತಿರೇಕದಲ್ಲಿ ಯಾವುದೇ ಮಾತುಗಳು ಅಪಾಯ ತರಬಹುದು. ಉದ್ಯೋಗಿಗಳಿಗೆ ಹೆಚ್ಚು ಒತ್ತಡ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

ಸಿಂಹ: ಶೀಘ್ರ ಕೋಪದಿಂದ ಕಾರ್ಯದಲ್ಲಿ ಹಾನಿ. ಆರ್ಥಿಕ ಪ್ರಗತಿ ಇರಲಿದ್ದು, ಸಂಬಂಧಿಗಳೊಂದಿಗೆ ಕಾಲ ಕಳೆಯುವ ಸಾಧ್ಯತೆ. ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣ ಕೆಡಿಸುವುದು ಎಚ್ಚರಿಕೆ ಇರಲಿ. ಸಹದ್ಯೋಗಿಗಳಿಂದ ಕಿರಿಕಿರಿ. ಆರೋಗ್ಯದ ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

ಕನ್ಯಾ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ. ಆಪ್ತರೊಂದಿಗೆ ಮಾತುಕತೆ. ಆರ್ಥಿಕ ಪ್ರಗತಿ ಸಾಧಾರಣ. ಪಾಲುದಾರಿಕೆ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಉದ್ಯೋಗಿಗಳಿಗೆ ಕಿರಿಕಿರಿ. ನಂಬಿದ ವ್ಯಕ್ತಿಗಳು ನಿಮ್ಮನ್ನು ಮೋಸಗೊಳಿಸಬಹುದು. ತಪ್ಪು ತಿಳಿವಳಿಕೆ ಉಂಟಾಗುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಸಕಾರಾತ್ಮಕ ಆಲೋಚನೆಗಳಿಂದ ಕಾರ್ಯದಲ್ಲಿ ಯಶಸ್ಸು. ಆರ್ಥಿಕ ಪ್ರಗತಿ ಸಾಧಾರಣ. ಹಳೆಯ ವಿಚಾರ ಕೆದಕಿ ಮನಸ್ಸಿಗೆ ಘಾಸಿ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ವೃಶ್ಚಿಕ : ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಅಮೂಲ್ಯ ವಸ್ತುಗಳು ಕೈಗೆ ಸಿಗುವುದರಿಂದ ಸಂತಸ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3

ಧನಸ್ಸು: ಭೂಮಿ ಸಂಬಂಧಿ ವ್ಯವಹಾರ, ಹಣಕಾಸು ವ್ಯವಹಾರದಲ್ಲಿ ಲಾಭ. ಪ್ರಯಾಣ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಸಹೋದ್ಯೋಗಿಗಳಿಂದ ಸಹಕಾರ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣ ಬಲ ಕೂಡಿಬರಲಿದೆ. ಕುಟುಂಬದಲ್ಲಿ ಹೊಸ ಭರವಸೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಮಕರ: ಭರವಸೆಯ ಹೊಸ ಜೀವನ ಶುರುವಾಗಲಿದೆ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ, ಆರ್ಥಿಕ ಪ್ರಗತಿ. ನೀವು ಮಾಡಿದ ಕೆಲಸ ಕಾರ್ಯಗಳ ಫಲಿತಾಂಶ ಬೇರೆಯವರು ತೆಗೆದುಕೊಂಡು ಪ್ರಶಂಸೆಗೊಳಪಡುವ ಸಾಧ್ಯತೆ, ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

ಕುಂಭ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗುತ್ತವೆ. ಅವಶ್ಯಕ ವಸ್ತುಗಳ ಖರೀದಿ. ಅಷ್ಟೇ ಆರ್ಥಿಕ ಲಾಭ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಮಾತು ಬೆಳೆಸುವುದು ಬೇಡ. ಸಾಮಾಜಿಕ ಕಾರ್ಯದಲ್ಲಿ ತೊಡಗುವ ಸಾಧ್ಯತೆ. ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

ಮೀನ: ಹಳೆಯ ನೋವು ಉಲ್ಬಣಗೊಳ್ಳವ ಸಾಧ್ಯತೆ, ಆರೋಗ್ಯದ ಕಡೆಗೆ ಗಮನ ಇರಲಿ. ಆರ್ಥಿಕ ಪ್ರಗತಿ ಸಾಧಾರಣ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು. ಸಂಬಂಧಿಗಳೊಂದಿಗೆ ಮಾತುಕತೆ. ಉದ್ಯೋಗಿಗಳಿಗೆ ಒತ್ತಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Exit mobile version