ಚಂದ್ರನು ಗುರುವಾರ ಮಧ್ಯಾಹ್ನ 04:51ಕ್ಕೆ ಮಿಥುನ ರಾಶಿಯಿಂದ ಕರ್ಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಕುಂಭ ರಾಶಿಯವರಿಗೆ ಇತರರೊಂದಿಗೆ ಅತಿಯಾದ ಸಲುಗೆ ಅಪಾಯ ತರುವ ಸಾಧ್ಯತೆ ಇರುತ್ತದೆ. ಇನ್ನು ವೃಶ್ಚಿಕ ರಾಶಿಯವರಿಗೆ ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದ್ದು, ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇರುತ್ತದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (4-07-2024)
ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ತ್ರಯೋದಶಿ 05:53 ವಾರ: ಗುರುವಾರ
ನಕ್ಷತ್ರ: ಮೃಗಶಿರಾ 27:53 ಯೋಗ: ಗಂಡ 06:58
ಕರಣ: ವಣಿಜ 05:53 ಅಮೃತಕಾಲ: ರಾತ್ರಿ 07:11 ರಿಂದ 08:46 ರವರೆಗೆ
ದಿನದ ವಿಶೇಷ: ಮಾಸ ಶಿವರಾತ್ರಿ
ಸೂರ್ಯೋದಯ : 05:47 ಸೂರ್ಯಾಸ್ತ : 07:15
ಮೇಷ: ಆರ್ಥಿಕವಾಗಿ ಬಲಿಷ್ಠತೆ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ ಕಾಣುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದ್ದು, ಉದ್ಯೋಗಿಗಳಿಗೆ ಒತ್ತಡ ಸ್ಥಿತಿ ಇರಲಿದೆ. ಹಳೆಯ ಸ್ನೇಹಿತರ ಜೊತೆ ಕಾಲ ಕಳೆಯುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3
ವೃಷಭ: ಪ್ರಯಾಣ ಮಾಡುವ ಸಾಧ್ಯತೆ ಇದ್ದು, ಅನಿರೀಕ್ಷಿತ ಲಾಭಗಳನ್ನು ಪಡೆಯುವಿರಿ. ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಸಾಮಾಜಿಕ ಕಾರ್ಯಗಳಲ್ಲಿ ತೊಡಗುವ ಸಾಧ್ಯತೆ ಇದ್ದು, ಉದ್ಯೋಗಿಗಳಿಗೆ ಒತ್ತಡವಿರಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2
ಮಿಥುನ: ಬಲವಂತವಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ. ಇಂದಿನ ದಿವಸ ಗಾಬರಿಯಿಂದ ಇರುವ ಸಾಧ್ಯತೆ. ಅವಘಡ ಸಂಭವ ನಿಧಾನವಾಗಿ ವಾಹನ ಚಾಲನೆ ಮಾಡಿ. ಕುಟುಂಬದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುವಿರಿ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8
ಕಟಕ: ಒತ್ತಡದ ಜೀವನಕ್ಕೆ ವಿಶ್ರಾಂತಿ ಸಿಗಲಿದೆ. ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ. ಅಗತ್ಯ ವಸ್ತುಗಳ ಖರೀದಿ. ಸಹದ್ಯೋಗಿಗಳ ಬೆಂಬಲ ಇರಲಿದ್ದು, ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4
ಸಿಂಹ: ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಮಾನಸಿಕ ಆರೋಗ್ಯ ಸದೃಢ. ಅತಿ ಅವಶ್ಯಕ ಕೆಲಸದ ಕಾರಣ ದೈಹಿಕ ಶ್ರಮ ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಸಹಕಾರ. ಆರೋಗ್ಯ ಉತ್ತಮ. ಕೌಟುಂಬಿಕ ಕಲಹಗಳಿಗೆ ಧ್ವನಿ ಆಗುವುದು ಬೇಡ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2
ಕನ್ಯಾ: ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು. ದೀರ್ಘಕಾಲದ ಪ್ರಯಾಣ. ನಿರೀಕ್ಷೆಗೆ ತಕ್ಕಂತೆ ಫಲ ಸಿಗಲಿದೆ. ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವ ಅವಕಾಶ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ:9
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಕುಟುಂಬದಲ್ಲಿನ ಹಿರಿಯರೊಂದಿಗೆ ವಾದಕ್ಕೆ ಇಳಿಯುವುದು ಬೇಡ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದ್ದು, ಹರಟೆಯಿಂದ ಕಾಲ ಹರಣ ಮಾಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3
ವೃಶ್ಚಿಕ : ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗುವುದು. ಸಕಾರಾತ್ಮಕ ಆಲೋಚನೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಆರೋಗ್ಯ ಉತ್ತಮ, ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5
ಧನಸ್ಸು: ಉತ್ತಮ ಫಲಿತಾಂಶ ದೊರೆಯಲಿದೆ. ಆತ್ಮವಿಶ್ವಾಸ ಹೆಚ್ಚಲಿದೆ. ಕುಟುಂಬದ ಸದಸ್ಯರ ಮೇಲೆ ಕೋಪಗೊಳ್ಳುವುದು ಬೇಡ. ಆರೋಗ್ಯ ಮಧ್ಯಮ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಉತ್ತಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಮಕರ: ಸಾಮಾಜಿಕ ಕಾರ್ಯಗಳಲ್ಲಿ ಭಾಗಿ. ಪ್ರಯಾಣ ಮಾಡುವ ಸಾಧ್ಯತೆ. ಆರ್ಥಿಕ ಪ್ರಗತಿ ಉತ್ತಮ. ಪ್ರಮುಖ ಯೋಜನೆ ಕೈಗೊಳ್ಳುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2
ಕುಂಭ: ನಿಮ್ಮ ವರ್ತನೆ ಇತರರಿಗೆ ಮುಜುಗರ ಉಂಟು ಮಾಡುವ ಸಾಧ್ಯತೆ. ಯಾರೊಂದಿಗೂ ಅತಿಯಾದ ಸಲುಗೆ ಬೇಡ. ಆತುರದ ಮಾತುಗಳು ಅಪಾಯ ತರುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8
ಮೀನ: ಒತ್ತಡದ ಕೆಲಸದಿಂದ ಮುಕ್ತಿ. ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವುದು. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com