Doctors Strike: ಕೋಲ್ಕತಾ ವೈದ್ಯೆ ಕೊಲೆಗೆ ಆಕ್ರೋಶ; ರಾಜ್ಯ ಸರಕಾರದ ವಿರುದ್ಧ ತಿರುಗಿದ ವೈದ್ಯರ ಪ್ರತಿಭಟನೆ - Vistara News

ಪ್ರಮುಖ ಸುದ್ದಿ

Doctors Strike: ಕೋಲ್ಕತಾ ವೈದ್ಯೆ ಕೊಲೆಗೆ ಆಕ್ರೋಶ; ರಾಜ್ಯ ಸರಕಾರದ ವಿರುದ್ಧ ತಿರುಗಿದ ವೈದ್ಯರ ಪ್ರತಿಭಟನೆ

Doctors Strike: ರಾಜಧಾನಿಯ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮಾಡುತ್ತಿರುವ ನೂರಾರು ವೈದ್ಯರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಮುಷ್ಕರಕ್ಕೆ ಇಳಿದಿದ್ದಾರೆ. ವೈದ್ಯರಿಗೆ ನ್ಯಾಯ ಕೊಡಿಸಿ ಎಂದು ಪ್ರತಿಭಟನೆ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಸರ್ಕಾರಗಳು ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

VISTARANEWS.COM


on

doctors strike bangalore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೋಲ್ಕತಾದಲ್ಲಿ ನಡೆದಿರುವ ವೈದ್ಯೆಯ ಬರ್ಬರ ಸಾಮೂಹಿಕ ಅತ್ಯಾಚಾರ ಹಾಗು ಕೊಲೆಯ (Kolkata Doctor murder case) ವಿರುದ್ಧ ಭುಗಿಲೆದ್ದಿರುವ ವೈದ್ಯರ ಸಮೂಹದ ಆಕ್ರೋಶ, ಇದೀಗ ರಾಜ್ಯ ಸರಕಾರದ ವಿರುದ್ಧ ತಿರುಗಿದೆ. ಸರ್ಕಾರಿ ಆಸ್ಪತ್ರೆಗಳ ವೈದ್ಯರು (Govt hospital doctors) ಸಿಲಿಕಾನ್‌ ಸಿಟಿಯಲ್ಲಿ ವೈದ್ಯರು ಪ್ರತಿಭಟನೆ (Doctors strike) ಆರಂಭಿಸಿದ್ದು, ತಮಗೆ ಭದ್ರತೆ ಹಾಗೂ ಸ್ಟೈಫಂಡ್‌ ಹೆಚ್ಚಿಸಬೇಕು ಎಂದು ಧರಣಿ ಕೂತಿದ್ದಾರೆ.

ರಾಜಧಾನಿಯ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮಾಡುತ್ತಿರುವ ನೂರಾರು ವೈದ್ಯರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಮುಷ್ಕರಕ್ಕೆ ಇಳಿದಿದ್ದಾರೆ. ವೈದ್ಯರಿಗೆ ನ್ಯಾಯ ಕೊಡಿಸಿ ಎಂದು ಪ್ರತಿಭಟನೆ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಸರ್ಕಾರಗಳು ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ʼಜಸ್ಟಿಸ್ ಫಾರ್ ಆರ್ ಜೆ ಕರ್ʼ ಎಂಬ ಬೋರ್ಡ್‌ಗಳನ್ನು ಹಿಡಿದುಕೊಂಡು ಪ್ರತಿಭಟಿಸುತ್ತಿದ್ದಾರೆ.

ನಮಗೆ ಸೆಕ್ಯೂರಿಟಿ ಹಾಗೂ ಸ್ಟೈಫಂಡ್ ಹೆಚ್ಚಿಗೆ ಮಾಡಬೇಕು. ಅಡ್ಮಿಶನ್ ಫೀಸ್ ಕಡಿಮೆ ಮಾಡಬೇಕು. ಪ್ರಸ್ತುತ 1.13 ಲಕ್ಷ ರೂಪಾಯಿ ವಾರ್ಷಿಕ ಫೀಸ್ ಇದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2.27 ಲಕ್ಷ ರೂ. ಫೀಸ್ ಕಟ್ಟಬೇಕು. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇರುವವರಿಗೆ ಪ್ರತಿ ತಿಂಗಳು 60 ಸಾವಿರ ಸ್ಟೈಫಂಡ್ ಇದೆ. ಆದರೆ ಸಾಮಾನ್ಯ ಆಸ್ಪತ್ರೆಯಲ್ಲಿ 40 ಸಾವಿರ ರೂಪಾಯಿ ಸ್ಟೈಫಂಡ್ ಇದೆ. ಬೇರೆ ರಾಜ್ಯಕ್ಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಕಡಿಮೆ ಸ್ಟೈಫಂಡ್ ಇದ್ದು, ನಮಗೆ ಬೇರೆ ರಾಜ್ಯದಲ್ಲಿ ಇರುವ ಸ್ಟೈಫಂಡ್ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ವೈದ್ಯರು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಕೆಸಿ ಜನರಲ್, ವಿಕ್ಟೋರಿಯಾ, ಜಯದೇವ, ಮಿಂಟೋ, ಬೌರಿಂಗ್ ಆಸ್ಪತ್ರೆಗಳ ವೈದ್ಯರು ಸೇರಿ ಪ್ರತಿಭಟನೆ ಮಾಡುತ್ತಿದ್ದಾರೆ. ಹಲವು ಸರ್ಕಾರಿ ಆಸ್ಪತ್ರೆ ವೈದ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಸಂಸದ ಮಂಜುನಾಥ್‌ ಭೇಟಿ

ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್ ಮಂಜುನಾಥ್ ಪ್ರತಿಭಟನೆ ನಡೆಯುತ್ತಿರುವ ಸ್ಥಳಕ್ಕೆ ಆಗಮಿಸಿ ಧರಣಿಗೆ ಸಾತ್ ನೀಡಿದರು. ʼವೈದ್ಯರು ನಾಳೆ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಅವರಿಗೆ ನಾನು ಬೆಂಬಲ ನೀಡುತ್ತಿದ್ದೇನೆ. ವೈದ್ಯರಿಗೆ ಇನ್ನೂ ಹಲವು ಬೇಡಿಕೆಗಳು ಇವೆ. ಅವುಗಳನ್ನು ಈಡೇರಿಸಬೇಕು. ಕೋಲ್ಕತಾದಲ್ಲಿ ಮಹಿಳಾ ವೈದ್ಯೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಇದು ಬರ್ಬರ ಘಟನೆ. ವೈದ್ಯರಿಗೆ ಸೂಕ್ತ ಭದ್ರತೆ ನೀಡಬೇಕು. ನಾಳೆ ಇಡೀ ದೇಶದ ಜನ ವೈದ್ಯರ ಪ್ರತಿಭಟನೆಗೆ ಬೆಂಬಲ ನೀಡುತ್ತಿದ್ದಾರೆʼ ಎಂದು ಸಂಸದ ಮಂಜುನಾಥ್‌ ಹೇಳಿದರು.

ನಾಳಿನ ಪ್ರತಿಭಟನೆಗೆ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಬೆಂಬಲ; ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆ ಬಂದ್

ಬೆಂಗಳೂರು: ಕೋಲ್ಕತ್ತಾದ ಆರ್.ಜಿ.ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕರ್ತವ್ಯ ನಿರತ ಯುವ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ತುರ್ತು ಸೇವೆಗಳನ್ನು ಹೊರತುಪಡಿಸಿ, ಇತರೆ ಎಲ್ಲಾ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲು ಭಾರತೀಯ ವೈದ್ಯಕೀಯ ಸಂಘವು ಆ.17ರಂದು ದೇಶಾದ್ಯಂತ ಹಮ್ಮಿಕೊಂಡಿರುವ ಪ್ರತಿಭಟನೆಗೆ (Doctors Protest) ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಬೆಂಬಲ ವ್ಯಕ್ತಪಡಿಸಿದೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಪತ್ರ ಬರೆದಿದೆ. ವೈದ್ಯಾಧಿಕಾರಿಗಳು ದಿನದ 24/7 ಗಂಟೆ ಬಡ ರೋಗಿಗಳಿಗೆ ತಪಾಸಣೆ ಮತ್ತು ಚಿಕಿತ್ಸೆ ನೀಡುತ್ತಿದ್ದು, ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ ಹಾಗೂ ಕೋವಿಡ್ -19 ನಂತಹ ಸಾಂಕ್ರಾಮಿಕ ರೋಗವು ಇಡೀ ಪ್ರಪಂಚವನ್ನೇ ಬಾಧಿಸಿದ ಸಂದರ್ಭದಲ್ಲಿ ವೈದ್ಯರು ಹಗಲಿರುಳು ಎನ್ನದೇ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಶ್ರಮಿಸಿದ್ದರು.

ಆದರೆ ಆ.9 ರಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದ ಆರ್.ಜಿ.ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಯುವ ವೈದ್ಯೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಘೋರ ಅಪರಾಧವಾಗಿದ್ದು, ಇದು ಕಾನೂನಿನ ವೈಫಲ್ಯವನ್ನು ಎತ್ತಿ ಹಿಡಿಯುತ್ತದೆ. ಅಲ್ಲದೇ ಈ ಪ್ರಕರಣವು ವೈದ್ಯರ ಮನೋಸ್ಥೈರ್ಯವನ್ನು ಕುಗ್ಗುವಂತೆ ಮಾಡಿದ್ದು, ಇದನ್ನು ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಗಂಭೀರವಾಗಿ ಪರಿಗಣಿಸಿದೆ.

ಇದನ್ನೂ ಓದಿ: Kolkata Doctor Murder Case: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರಿಗೆ ಮರಣದಂಡನೆ ವಿಧಿಸುವಂತೆ ಬಾಲಿವುಡ್ ತಾರೆಯರ ಆಗ್ರಹ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Bangladesh Unrest: ಪ್ರಧಾನಿ ಮೋದಿಗೆ ಬಾಂಗ್ಲಾದೇಶದ ಮೊಹಮ್ಮದ್‌ ಯೂನಸ್‌ ಕರೆ; ಹಿಂದೂಗಳ ರಕ್ಷಣೆ ಬಗ್ಗೆ ಭರವಸೆ

Bangladesh Unrest: ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದು, ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರಿಂದ ದೂರವಾಣಿ ಕರೆ ಸ್ವೀಕರಿಸಲಾಗಿದೆ, ಅವರು ಪ್ರಸ್ತುತ ತಲೆದೋರಿರುವ ಪರಿಸ್ಥಿತಿಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಪ್ರಜಾಸತ್ತಾತ್ಮಕ, ಸ್ಥಿರ, ಶಾಂತಿಯುತ ಮತ್ತು ಪ್ರಗತಿಪರ ಬಾಂಗ್ಲಾದೇಶಕ್ಕೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದರು. ಬಾಂಗ್ಲಾದೇಶದಲ್ಲಿರುವ ಹಿಂದೂಗಳು ಮತ್ತು ಎಲ್ಲಾ ಅಲ್ಪಸಂಖ್ಯಾತರ ರಕ್ಷಣೆ, ಸುರಕ್ಷತೆ ಮತ್ತು ಭದ್ರತೆಯನ್ನು ಅವರು ಭರವಸೆ ನೀಡಿದರು ಎಂದು ಹೇಳಿದ್ದಾರೆ.

VISTARANEWS.COM


on

bangladesh unrest
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Prime Minister Narendra Modi)ಗೆ ಬಾಂಗ್ಲಾದೇಶ ಸರ್ಕಾರದ ಹಂಗಾಮಿ ಮುಖ್ಯ ಸಲಹೆಗಾರ ಮೊಹಮ್ಮದ್‌ ಯೂನಸ್‌(Muhammad Yunus) ಕರೆ ಮಾಡಿ ಬಾಂಗ್ಲಾದೇಶ(Bangladesh Unrest)ದ ಪ್ರಸ್ತುತ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಿದ್ದಾರೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದು, ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರಿಂದ ದೂರವಾಣಿ ಕರೆ ಸ್ವೀಕರಿಸಲಾಗಿದೆ, ಅವರು ಪ್ರಸ್ತುತ ತಲೆದೋರಿರುವ ಪರಿಸ್ಥಿತಿಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಪ್ರಜಾಸತ್ತಾತ್ಮಕ, ಸ್ಥಿರ, ಶಾಂತಿಯುತ ಮತ್ತು ಪ್ರಗತಿಪರ ಬಾಂಗ್ಲಾದೇಶಕ್ಕೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದರು. ಬಾಂಗ್ಲಾದೇಶದಲ್ಲಿರುವ ಹಿಂದೂಗಳು ಮತ್ತು ಎಲ್ಲಾ ಅಲ್ಪಸಂಖ್ಯಾತರ ರಕ್ಷಣೆ, ಸುರಕ್ಷತೆ ಮತ್ತು ಭದ್ರತೆಯನ್ನು ಅವರು ಭರವಸೆ ನೀಡಿದರು ಎಂದು ಹೇಳಿದ್ದಾರೆ.

ಉದ್ಯೋಗ ಕೋಟಾಗಳ ವಿರುದ್ಧ ವಿದ್ಯಾರ್ಥಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ ನಂತರ ಢಾಕಾದಿಂದ ದೆಹಲಿಗೆ ಪಲಾಯನ ಮಾಡಿದ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಲಾಗಿತ್ತು. ಇದಾದ ನಂತರ ಬಾಂಗ್ಲಾದೇಶದ ಹಿಂದೂ ಸಮುದಾಯದವರ ಮೇಲೆ ದಾಳಿಗಳು ನಡೆಯುತ್ತಲೇ ಇದೆ.

ಬಾಂಗ್ಲಾದೇಶ (Bangladesh Unrest)ದಲ್ಲಿ ತಲೆದೋರಿರುವ ಅರಾಜಕತೆ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಜೀವಕ್ಕೆ ಅಪಾಯವನ್ನು ತಂದೊಡ್ಡಿದೆ. ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಮತ್ತೊಂದು ಹಿಂದೂ ದೇವಾಲಯ ಮತ್ತು ಮನೆಗೆ ಬೆಂಕಿ ಹಚ್ಚಲಾಗಿದೆ. ಮಂಗಳವಾರ (ಆಗಸ್ಟ್‌ 13) ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಕುರಿಗ್ರಾಮ್ ಜಿಲ್ಲೆಯ ಮುಕುಲ್ ಚಂದ್ರರಾಯ್ ಎಂಬವರ ಮನೆ ಮತ್ತು ದೇವಾಲಯದ ಮೇಲೆ ದಾಳಿ ನಡೆದಿದೆ. ರಾಯ್‌ ಅವರ ಮನೆ ಮತ್ತು ದೇವಸ್ಥಾನ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಎಂದು ಮೂಲಗಳು ತಿಳಿಸಿವೆ.

ದುಷ್ಕರ್ಮಿಗಳು ಬೆಂಕಿ ಹಚ್ಚಿದ ತಕ್ಷಣ ಸ್ಥಳೀಯರು ಧಾವಿಸಿ ಬಂದು ನಂದಿಸಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಅಷ್ಟೊತ್ತಿಗಾಗಲೇ ಎಲ್ಲವೂ ಹೊತ್ತಿ ಉರಿದಿತ್ತು. ಮನೆಯಲ್ಲಿದ್ದ ಎಲ್ಲವೂ ನಾಶವಾಗಿದೆ ಎಂದು ನೆರೆಹೊರೆಯವರು ತಿಳಿಸಿದ್ದಾರೆ. ಮುಕುಲ್ ಚಂದ್ರರಾಯ್ ಅವರು ಕುರಿಗ್ರಾಮ್ ಜಿಲ್ಲೆಯ ರಾಜರ್ಹತ್ ಉಪಜಿಲಾದ ಚಕೀರ್ ಪೋಷಾ ಯೂನಿಯನ್ ಅಡಿಯಲ್ಲಿ ಪಟೋವರಿ ಪ್ಯಾರಾ ಗ್ರಾಮದಲ್ಲಿ ವಾಸವಾಗಿದ್ದಾರೆ. ಅವರ ಪತ್ನಿ ಮತ್ತು ಮಗ ತಮ್ಮ ಸುಟ್ಟ ಮನೆ ಮತ್ತು ದೇವಾಲಯದ ಮುಂದೆ ಅಳುತ್ತಿರುವುದು ಕಂಡು ಬಂದಿದೆ.

ಇದನ್ನೂ ಓದಿ:Bangladesh Unrest: ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂದೂಗಳ ಮೇಲಿನ ದೌರ್ಜನ್ಯ; ಮತ್ತೊಂದು ದೇಗುಲ, ಮನೆಗೆ ಬೆಂಕಿ

Continue Reading

ದೇಶ

Assembly Election Date: ಹರಿಯಾಣ ವಿಧಾನಸಭೆ ಚುನಾವಣೆಗೂ ದಿನಾಂಕ ಘೋಷಣೆ; ಇಲ್ಲಿದೆ ಡಿಟೇಲ್ಸ್‌

Assembly Election Date:ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತನಾಡಿ, ಹರಿಯಾಣದಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳಿವೆ, ಅದರಲ್ಲಿ 73 ಸಾಮಾನ್ಯ, ಎಸ್ಸಿ -17 ಮತ್ತು ಎಸ್ಟಿ -0 ಆಗಿದೆ. ಹರಿಯಾಣದಲ್ಲಿ ಒಟ್ಟು 2.01 ಕೋಟಿ ಮತದಾರರಿದ್ದು, ಅವರಲ್ಲಿ 1.06 ಕೋಟಿ ಪುರುಷರು, 0.95 ಕೋಟಿ ಮಹಿಳೆಯರು, 4.52 ಲಕ್ಷ ಮೊದಲ ಬಾರಿಗೆ ಮತದಾರರು ಮತ್ತು 40.95 ಲಕ್ಷ ಯುವ ಮತದಾರರು ಇದ್ದಾರೆ.

VISTARANEWS.COM


on

Assembly election date
Koo

ನವದೆಹಲಿ: ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌(Rajiv Kumar) ಇಂದು ಪತ್ರಿಕಾಗೋಷ್ಠಿ ನಡೆಸಿ, ಜಮ್ಮು-ಕಾಶ್ಮೀರ ಮತ್ತು ಹರಿಯಾಣ(Haryana) ರಾಜ್ಯಗಳ ವಿಧಾನಸಭೆ ಚುನಾವಣಾ ದಿನಾಂಕ(Assembly Election Date) ಘೋಷಿಸಿದ್ದಾರೆ. ಹರಿಯಾಣದಲ್ಲಿ ಅ.1ರಿಂದ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಅ.4ರಂದೇ ಫಲಿತಾಂಶ ಪ್ರಕಟವಾಗಲಿದೆ. ಹರಿಯಾಣದಲ್ಲಿ 2 ಕೋಟಿ ಮತದಾರರು ಇದ್ದಾರೆ ಎಂದು ಅವರು ರಾಜೀವ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತನಾಡಿ, ಹರಿಯಾಣದಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳಿವೆ, ಅದರಲ್ಲಿ 73 ಸಾಮಾನ್ಯ, ಎಸ್ಸಿ -17 ಮತ್ತು ಎಸ್ಟಿ -0 ಆಗಿದೆ. ಹರಿಯಾಣದಲ್ಲಿ ಒಟ್ಟು 2.01 ಕೋಟಿ ಮತದಾರರಿದ್ದು, ಅವರಲ್ಲಿ 1.06 ಕೋಟಿ ಪುರುಷರು, 0.95 ಕೋಟಿ ಮಹಿಳೆಯರು, 4.52 ಲಕ್ಷ ಮೊದಲ ಬಾರಿಗೆ ಮತದಾರರು ಮತ್ತು 40.95 ಲಕ್ಷ ಯುವ ಮತದಾರರು ಇದ್ದಾರೆ. ಹರಿಯಾಣದ ಮತದಾರರ ಪಟ್ಟಿಯನ್ನು 2024 ರ ಆಗಸ್ಟ್ 27 ರಂದು ಪ್ರಕಟಿಸಲಾಗುವುದು ಎಂದರು.

ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆ ದಿನಾಂಕ ಘೋಷಣೆ ಆಗಿಲ್ಲ

ಸಿಇಸಿ ರಾಜೀವ್ ಕುಮಾರ್ ಮಾತನಾಡಿ, ಕಳೆದ ಬಾರಿ ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆ ಒಟ್ಟಿಗೆ ನಡೆದಿತ್ತು. ಆ ಸಮಯದಲ್ಲಿ, ಜಮ್ಮು ಮತ್ತು ಕಾಶ್ಮೀರ ಅಂಶವಾಗಿರಲಿಲ್ಲ. ಅಲ್ಲದೇ ಭದ್ರತಾ ಪಡೆಗಳ ಅಗತ್ಯವನ್ನು ಅವಲಂಬಿಸಿ, ನಾವು 2 ಚುನಾವಣೆಗಳನ್ನು ಒಟ್ಟಿಗೆ ನಡೆಸಲು ನಿರ್ಧರಿಸಿದ್ದೇವೆ. ಇನ್ನೊಂದು ಅಂಶವೆಂದರೆ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗಿದೆ ಮತ್ತು ಹಲವಾರು ಹಬ್ಬಗಳು ಕೂಡ ಸಾಲು ಸಾಲು ಇರುವುದರಿಂದ ಈ ಚುನಾವಣೆಗಳ ಜತೆ ಮಹಾರಾಷ್ಟ್ರ ಚುನಾವಣೆ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಸ್ಪಷ್ಟನೆ ನೀಡಿದರು. ಮತ್ತೊಂದೆಡೆ ಇದರ ಜೊತೆ ನಡೆಯಬೇಕಿದ್ದ ಜಾರ್ಖಂಡ್‌ ವಿಧಾನಸಭೆ ಚುನಾವಣಾ ದಿನಾಂಕವೂ ನಿಗದಿಯಾಗಿಲ್ಲ.

ಮಹಾರಾಷ್ಟ್ರದಲ್ಲಿ ಚುನಾವಣೆ ಘೋಷಣೆಯಾಗದಿರುವ ಬಗ್ಗೆ ಶಿವಸೇನೆ ಉದ್ಧವ್‌ ಠಾಕ್ರೆ ಬಣದ ನಾಯಕ ಆದಿತ್ಯಾ ಠಾಕ್ರೆ ಟ್ವೀಟ್‌ ಮಾಡಿ ಕಿಡಿಕಾರಿದ್ದಾರೆ. ಬಾಸ್‌ ಇನ್ನೂ ಅನುಮತಿ ಕೊಟ್ಟಿಲ್ಲವೇ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: Assembly Election Date: ಆರ್ಟಿಕಲ್‌ 370 ರದ್ಧತಿ ಬಳಿಕ ಜಮ್ಮು-ಕಾಶ್ಮೀರದಲ್ಲಿ ಮೊದಲ ಚುನಾವಣೆಗೆ ಮುಹೂರ್ತ ಫಿಕ್ಸ್‌; ದಿನಾಂಕ ಘೋಷಿಸಿದ EC

Continue Reading

ದೇಶ

Assembly Election Date: ಆರ್ಟಿಕಲ್‌ 370 ರದ್ಧತಿ ಬಳಿಕ ಜಮ್ಮು-ಕಾಶ್ಮೀರದಲ್ಲಿ ಮೊದಲ ಚುನಾವಣೆಗೆ ಮುಹೂರ್ತ ಫಿಕ್ಸ್‌; ದಿನಾಂಕ ಘೋಷಿಸಿದ EC

Assembly Election Date: ಜಮ್ಮು ಕಾಶ್ಮೀರದಲ್ಲಿ ಒಟ್ಟು 90 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಅಮರನಾಥ ಯಾತ್ರೆ ಮುಗಿದ ಮರುದಿನ ಆಗಸ್ಟ್ 20 ರೊಳಗೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು EC ಹೇಳಿದೆ. ಸುಮಾರು 87 ಲಕ್ಷ ಮತದಾರರು ಮತ ಚಲಾಯಿಸುವ ನಿರೀಕ್ಷೆಯಿದೆ ಎಂದರು. ಹರ್ಯಾಣದಲ್ಲಿ ಅ.1ರಿಂದ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಅ.4ರಂದೇ ಫಲಿತಾಂಶ ಪ್ರಕಟವಾಗಲಿದೆ. ಹರ್ಯಾಣದಲ್ಲಿ 2 ಕೋಟಿ ಮತದಾರರು ಇದ್ದಾರೆ ಎಂದು ಅವರು ರಾಜೀವ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

VISTARANEWS.COM


on

Assembly election Date
Koo

ನವದೆಹಲಿ: ಆರ್ಟಿಕಲ್‌ 370 ರದ್ದುಗೊಳಿಸಿದ ಬಳಿಕ ಅಂದರೆ ಬರೋಬ್ಬರಿ ಹತ್ತು ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರ(Jammu-Kashmir)ದಲ್ಲಿ ವಿಧಾನಸಭೆ ಚುನಾವಣೆ(Assembly Election Date) ನಡೆಯಲಿದ್ದು, ಇಂದು ದಿನಾಂಕ ಘೋಷಣೆಯಾಗಿದೆ. ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌(Rajiv Kumar) ಇಂದು ಪತ್ರಿಕಾಗೋಷ್ಠಿ ನಡೆಸಿ, ಜಮ್ಮು-ಕಾಶ್ಮೀರ ಮತ್ತು ಹರ್ಯಾಣ(Haryana) ರಾಜ್ಯಗಳ ವಿಧಾನಸಭೆ ಚುನಾವಣಾ ದಿನಾಂಕ(Election Date announced) ಘೋಷಿಸಿದ್ದಾರೆ. ಜಮ್ಮು-ಕಾಶ್ಮೀರ ಮೂರು ಹಂತಗಳಲ್ಲಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಸೆ. 18, ಸೆ.15 ಮತ್ತು ಅಕ್ಟೋಬರ್‌ 1 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್‌ 4 ಫಲಿತಾಂಶ ಪ್ರಕಟವಾಗಲಿದೆ.

ಜಮ್ಮು ಕಾಶ್ಮೀರದಲ್ಲಿ ಒಟ್ಟು 90 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಅಮರನಾಥ ಯಾತ್ರೆ ಮುಗಿದ ಮರುದಿನ ಆಗಸ್ಟ್ 20 ರೊಳಗೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು EC ಹೇಳಿದೆ. ಸುಮಾರು 87 ಲಕ್ಷ ಮತದಾರರು ಮತ ಚಲಾಯಿಸುವ ನಿರೀಕ್ಷೆಯಿದೆ ಎಂದರು. ಹರ್ಯಾಣದಲ್ಲಿ ಅ.1ರಿಂದ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಅ.4ರಂದೇ ಫಲಿತಾಂಶ ಪ್ರಕಟವಾಗಲಿದೆ. ಹರ್ಯಾಣದಲ್ಲಿ 2 ಕೋಟಿ ಮತದಾರರು ಇದ್ದಾರೆ ಎಂದು ಅವರು ರಾಜೀವ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳಿವೆ.

ಅದರಲ್ಲಿ 74 ಸಾಮಾನ್ಯ, ಎಸ್ಸಿ -7 ಮತ್ತು ಎಸ್ಟಿ -9 ಆಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 87.09 ಲಕ್ಷ ಮತದಾರರಿದ್ದು, ಅವರಲ್ಲಿ 44.46 ಲಕ್ಷ ಪುರುಷರು, 42.62 ಲಕ್ಷ ಮಹಿಳೆಯರು, 3.71 ಲಕ್ಷ ಮೊದಲ ಬಾರಿಗೆ ಮತದಾರರು ಮತ್ತು 20.7 ಲಕ್ಷ ಯುವ ಮತದಾರರು ಇದ್ದಾರೆ.

ಇದನ್ನೂ ಓದಿ: Terror Attacks: ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್‌: ಕ್ಯಾಪ್ಟನ್ ಹುತಾತ್ಮ

Continue Reading

ಪ್ರಮುಖ ಸುದ್ದಿ

70th National Film Awards : ಕನ್ನಡಿಗರಿಗೆ ಹೆಮ್ಮೆ ತಂದ ರಿಷಭ್​ ಶೆಟ್ಟಿ, ಕೆಜಿಎಫ್​​; ಮಲಯಾಳಂನ ‘ಆಟಂ’ ಅತ್ಯುತ್ತಮ ಸಿನೆಮಾ; ಸಂಪೂರ್ಣ ಲಿಸ್ಟ್‌ ಇಲ್ಲಿದೆ

70th National Film Award : ‘ತಿರುಚಿತ್ರಾಂಬಲಂ’ ಚಿತ್ರದ ಅಭಿನಯಕ್ಕಾಗಿ ಬಹುಭಾಷಾ ನಟಿ ನಿತ್ಯಾ ಮೆನನ್ ಹಾಗೂ ಕಚ್ ಎಕ್ಸ್ ಪ್ರೆಸ್ ಚಿತ್ರದ ಅಭಿನಯಕ್ಕಾಗಿ ಮಾನಸಿ ಪರೇಖ್ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ಉಂಚೈ’ ಚಿತ್ರದ ನಿರ್ದೇಶನಕ್ಕಾಗಿ ಸೂರಜ್ ಬರ್ಜಾತ್ಯ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪೊನ್ನಿಯಿನ್ ಸೆಲ್ವನ್ 1, ಕೆಜಿಎಫ್ 2, ಬ್ರಹ್ಮಾಸ್ತ್ರ ಮತ್ತು ಅಪರಾಜಿತೋ ಚಿತ್ರಗಳು ಸಮಾರಂಭದಲ್ಲಿ ಪ್ರಶಸ್ತಿಗಳನ್ನು ಗೆದ್ದ ಇತರ ಚಿತ್ರಗಳಾಗಿವೆ.

VISTARANEWS.COM


on

70th National Film Award
Koo

ಬೆಂಗಳೂರು: 70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2024 ಶುಕ್ರವಾರ ಘೋಷಣೆಯಾಗಿದ್ದು (70th National Film Awards) ಮಲಯಾಳಂ ಚಿತ್ರ ‘ಆಟಂ ಅತ್ಯುತ್ತಮ ಚಲನಚಿತ್ರವಾಗಿ ಹೊರಹೊಮ್ಮಿದೆ. ನವದೆಹಲಿಯ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ಶುಕ್ರವಾರ ಅತ್ಯುತ್ತಮ ಸಿನಿಮಾಗಳು ಹಾಗೂ ನಟ, ನಟಿಯರ ಹೆಸರನ್ನು ಪ್ರಕಟಿಸಲಾಯಿತು. ‘ಕಾಂತಾರಾ’ ಚಿತ್ರದ ಅಭಿನಯಕ್ಕಾಗಿ ರಿಷಬ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿರುವುದು ಕನ್ನಡಿಗರ ಹಾಗೂ ಸ್ಯಾಂಡಲ್​ವುಡ್​ ಪಾಲಿಗೆ ಹೆಮ್ಮೆಯ ವಿಚಾರವಾಗಿದೆ. ಇದೇ ವೇಳೆ ಕೆಜಿಎಫ್​ ಚಾಪ್ಟರ್-2 ಕೂಡ ಅತ್ಯುತ್ತಮ ಆ್ಯಕ್ಷನ್​ ಸಿನಿಮಾ ಪ್ರಶಸ್ತಿ ಪಡೆದುಕೊಂಡಿದೆ.

‘ತಿರುಚಿತ್ರಾಂಬಲಂ’ ಚಿತ್ರದ ಅಭಿನಯಕ್ಕಾಗಿ ಬಹುಭಾಷಾ ನಟಿ ನಿತ್ಯಾ ಮೆನನ್ ಹಾಗೂ ಕಚ್ ಎಕ್ಸ್ ಪ್ರೆಸ್ ಚಿತ್ರದ ಅಭಿನಯಕ್ಕಾಗಿ ಮಾನಸಿ ಪರೇಖ್ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ಉಂಚೈ’ ಚಿತ್ರದ ನಿರ್ದೇಶನಕ್ಕಾಗಿ ಸೂರಜ್ ಬರ್ಜಾತ್ಯ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ‘ಪೊನ್ನಿಯಿನ್ ಸೆಲ್ವನ್ 1’, ‘ಕೆಜಿಎಫ್ 2’, ‘ಬ್ರಹ್ಮಾಸ್ತ್ರ ‘ಮತ್ತು ‘ಅಪರಾಜಿತೋ’ ಚಿತ್ರಗಳು ಸಮಾರಂಭದಲ್ಲಿ ಪ್ರಶಸ್ತಿಗಳನ್ನು ಗೆದ್ದ ಇತರ ಚಿತ್ರಗಳಾಗಿವೆ.

ರಾಹುಲ್ ರಾವೈಲ್, ನೀಲಾ ಮಾಧವ್ ಪಾಂಡಾ ಹಾಗೂ ಗಂಗಾಧರ್ ಮೊದಲಿಯಾರ್​ ಪ್ರಶಸ್ತಿಗಳನ್ನು ಪ್ರಕಟಿಸಿದ್ದಾರೆ.

1954 ರಲ್ಲಿ ಮೊದಲ ಬಾರಿಗೆ ನೀಡಲು ಅರಂಭಿಸಿದ ಈ ಪ್ರಶಸ್ತಿ 70ನೇ ಆವೃತ್ತಿ ಇದಾಗಿದೆ. ಆ ವರ್ಷಗಳಲ್ಲಿ, ವಿವಿಧ ಪ್ರಾದೇಶಿಕ ಭಾಷೆಗಳ ಅತ್ಯುತ್ತಮ ಚಲನಚಿತ್ರಗಳನ್ನು ಮಾತ್ರ ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿತ್ತು. . ಚಲನಚಿತ್ರಗಳಲ್ಲಿ ಕೆಲಸ ಮಾಡುವ ನಟರು ಮತ್ತು ತಂತ್ರಜ್ಞರಿಗೆ ಪ್ರಶಸ್ತಿಗಳನ್ನು ಮೊದಲ ಬಾರಿಗೆ 1967 ರಲ್ಲಿ ನೀಡಲಾಯಿತು. ‘ರಾತ್ ಔರ್ ದಿನ್’ ಚಿತ್ರದಲ್ಲಿನ ಅಭಿನಯಕ್ಕಾಗಿ ನರ್ಗಿಸ್ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದ ಮೊದಲ ನಟಿಯಾಗಿದ್ದಾರೆ. ಅದೇ ವರ್ಷ ‘ಆಂಟನಿ ಫೈರಿಂಗ್’ ಮತ್ತು ‘ಚಿರಿಯಾಖಾನಾ’ ಚಿತ್ರಗಳಿಗಾಗಿ ಉತ್ತಮ್ ಕುಮಾರ್ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದರು.

ಇದನ್ನೂ ಓದಿ: 70th National Film Awards: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ರಿಷಬ್‌ ಶೆಟ್ಟಿ ಅತ್ಯುತ್ತಮ ನಟ, ಕೆಜಿಎಫ್‌ 2 ಅತ್ಯುತ್ತಮ ಕನ್ನಡ ಚಿತ್ರ

2023 ರಲ್ಲಿ, ಪುಷ್ಪಾ: ದಿ ರೈಸ್ ಚಿತ್ರಕ್ಕಾಗಿ ಅಲ್ಲು ಅರ್ಜುನ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಗೆದ್ದರೆ, ‘ಗಂಗೂಬಾಯಿ ಕಾಥಿಯಾವಾಡಿ’ ಮತ್ತು ‘ಮಿಮಿ’ ಚಿತ್ರಕ್ಕಾಗಿ ಆಲಿಯಾ ಭಟ್ ಮತ್ತು ಕೃತಿ ಸನೋನ್ ಅತ್ಯುತ್ತಮ ನಟಿ ಪ್ರಶಸ್ತಿ ಗೆದ್ದರು. ರಾಕೆಟ್ರಿ: ದಿ ನಂಬಿ ಎಫೆಕ್ಟ್ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.

2024 ರ ರಾಷ್ಟ್ರೀಯ ಪ್ರಶಸ್ತಿ ವಿಜೇತರ ಪಟ್ಟಿ ಈ ಕೆಳಗಿನಂತಿದೆ

  • ಅತ್ಯುತ್ತಮ ಚಲನಚಿತ್ರ: ಆಟಂ (ಮಲಯಾಳಂ)
  • ಅತ್ಯುತ್ತಮ ಜನಪ್ರಿಯ ಚಿತ್ರ: ಕಾಂತಾರ (ಕನ್ನಡ)
  • ಅತ್ಯುತ್ತಮ ನಟ: ರಿಷಬ್ ಶೆಟ್ಟಿ (ಕಾಂತಾರಾ)
  • ಅತ್ಯುತ್ತಮ ನಟಿ – ನಿತ್ಯಾ ಮೆನನ್ ಮತ್ತು ಮಾನಸಿ ಪರೇಖ್
  • ಅತ್ಯುತ್ತಮ ನಿರ್ದೇಶಕ – ಸೂರಜ್ ಬರ್ಜಾತ್ಯ
  • ಅತ್ಯುತ್ತಮ ಪೋಷಕ ನಟಿ – ನೀನಾ ಗುಪ್ತಾ
  • ಅತ್ಯುತ್ತಮ ಪೋಷಕ ನಟ – ಪವನ್ ಮಲ್ಹೋತ್ರಾ
  • ಅತ್ಯುತ್ತಮ ಚೊಚ್ಚಲ ಚಿತ್ರ- ಫೌಜಾ, ಪ್ರಮೋದ್ ಕುಮಾರ್
  • ಅತ್ಯುತ್ತಮ ತೆಲುಗು ಚಿತ್ರ – ಕಾರ್ತಿಕೇಯ 2
  • ಅತ್ಯುತ್ತಮ ತಮಿಳು ಚಿತ್ರ – ಪೊನ್ನಿಯಿನ್ ಸೆಲ್ವನ್ -ಭಾಗ 1
  • ಅತ್ಯುತ್ತಮ ಪಂಜಾಬಿ ಚಿತ್ರ – ಬಾಘಿ ದಿ ಧೀ
  • ಅತ್ಯುತ್ತಮ ಒಡಿಯಾ ಚಿತ್ರ – ದಮನ್
  • ಅತ್ಯುತ್ತಮ ಮಲಯಾಳಂ ಚಿತ್ರ – ಸೌದಿ ವೇಲಕ್ಕ ಸಿಸಿ.225/2009
  • ಅತ್ಯುತ್ತಮ ಮರಾಠಿ ಚಿತ್ರ – ವಾಲ್ವಿ
  • ಅತ್ಯುತ್ತಮ ಕನ್ನಡ ಚಿತ್ರ – ಕೆಜಿಎಫ್: ಚಾಪ್ಟರ್ 2
  • ಅತ್ಯುತ್ತಮ ಹಿಂದಿ ಚಿತ್ರ – ಗುಲ್​ಮೊಹರ್​
  • ವಿಶೇಷ ಪ್ರಶಸ್ತಿ ಗುಲ್ಮೋಹರ್ ನಲ್ಲಿ ಮನೋಜ್ ಬಾಜಪೇಯಿ ಮತ್ತು ಕಾಲಿಖಾನ್​​ನಲ್ಲಿ ಸಂಜೋಯ್ ಸಲಿಲ್ ಚೌಧರಿ
  • ಅತ್ಯುತ್ತಮ ಆಕ್ಷನ್ ನಿರ್ದೇಶನ – ಕೆಜಿಎಫ್: ಚಾಪ್ಟರ್ 2
  • ಅತ್ಯುತ್ತಮ ನೃತ್ಯ ಸಂಯೋಜನೆ – ತಿರುಚಿತ್ರಾಂಬಲಂ
  • ಅತ್ಯುತ್ತಮ ಸಾಹಿತ್ಯ – ಫೌಜಾ
  • ಅತ್ಯುತ್ತಮ ಸಂಗೀತ ನಿರ್ದೇಶಕ – ಪ್ರೀತಮ್ (ಹಾಡುಗಳು), ಎ.ಆರ್.ರೆಹಮಾನ್ (ಹಿನ್ನೆಲೆ ಸಂಗೀತ)
  • ಅತ್ಯುತ್ತಮ ಮೇಕಪ್ – ಅಪರಾಜಿತೋ
  • ಅತ್ಯುತ್ತಮ ಕಾಸ್ಟ್ಯೂಮ್ – ಕಛ್ ಎಕ್ಸ್ ಪ್ರೆಸ್
  • ಅತ್ಯುತ್ತಮ ಪ್ರೊಡಕ್ಷನ್ ಡಿಸೈನ್ – ಅಪರಾಜಿತೋ
  • ಅತ್ಯುತ್ತಮ ಸಂಕಲನ – ಆಟಂ
  • ಅತ್ಯುತ್ತಮ ಸೌಂಡ್ ಡಿಸೈನ್ – ಪೊನ್ನಿಯಿನ್ ಸೆಲ್ವನ್ -ಪಾರ್ಟ್ 1
  • ಅತ್ಯುತ್ತಮ ಚಿತ್ರಕಥೆ – ಆಟಂ
  • ಅತ್ಯುತ್ತಮ ಸಂಭಾಷಣೆ – ಗುಲ್​ಮೊಹರ್​
  • ಅತ್ಯುತ್ತಮ ಛಾಯಾಗ್ರಹಣ – ಪೊನ್ನಿಯಿನ್ ಸೆಲ್ವನ್ -ಭಾಗ 1
  • ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿ – ಸೌದಿ ವೇಲಕ್ಕ ಸಿಸಿ.225/2009
  • ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿ – ಬ್ರಹ್ಮಾಸ್ತ್ರ
Continue Reading
Advertisement
bangladesh unrest
ದೇಶ10 mins ago

Bangladesh Unrest: ಪ್ರಧಾನಿ ಮೋದಿಗೆ ಬಾಂಗ್ಲಾದೇಶದ ಮೊಹಮ್ಮದ್‌ ಯೂನಸ್‌ ಕರೆ; ಹಿಂದೂಗಳ ರಕ್ಷಣೆ ಬಗ್ಗೆ ಭರವಸೆ

WFI chief Sanjay Singh
ಕ್ರೀಡೆ15 mins ago

WFI Chief Sanjay Singh: ಪ್ರತಿಭಟನೆಯಿಂದಲೇ ಕುಸ್ತಿಯಲ್ಲಿ ಹೆಚ್ಚಿನ ಪದಕ ಗೆಲ್ಲಲು ಸಾಧ್ಯವಾಗಲಿಲ್ಲ; ಸಂಜಯ್​ ಸಿಂಗ್​ ಆರೋಪ

KGF Chapter 2
ಸಿನಿಮಾ16 mins ago

KGF Chapter 2: ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿರುವ ಕೆಜಿಎಫ್‌ 2 ಚಿತ್ರದ 6 ವಿಶೇಷ ಸಂಗತಿಗಳಿವು!

False Case
ಕರ್ನಾಟಕ23 mins ago

False Case: ಪಿಎಸ್ಐ ಮನೆಯಲ್ಲಿ 12 ಲಕ್ಷ ಕಳವು ಕೇಸ್; ತನಿಖೆ ವೇಳೆ ಬಯಲಾಯ್ತು ನಕಲಿ ದೂರಿನ‌ ಅಸಲಿ ಕತೆ!

Shimla For Honeymoon
Latest36 mins ago

Shimla For Honeymoon: ಹನಿಮೂನ್‍ ಜೋಡಿಗಳ ರೊಮ್ಯಾನ್ಸ್‌ ಹೆಚ್ಚಿಸುತ್ತವೆ ಶಿಮ್ಲಾದ ಈ ತಾಣಗಳು!

Kannada New Movie powder habba pre realease programme
ಸ್ಯಾಂಡಲ್ ವುಡ್58 mins ago

Kannada New Movie: ಅದ್ಧೂರಿಯಾಗಿ ನಡೆದ ʻಪೌಡರ್ ಹಬ್ಬʼ; ಪ್ರೀ ರಿಲೀಸ್ ಕಾರ್ಯಕ್ರಮ ಝಲಕ್‌ ಹೀಗಿದೆ!

Digital Arrest
ಕರ್ನಾಟಕ1 hour ago

Digital Arrest: ಡಿಜಿಟಲ್‌ ಅರೆಸ್ಟ್‌ ಮಾಡಿ 2.2 ಕೋಟಿ ರೂ. ವಂಚನೆ; ಐವರು ಸೈಬರ್‌ ಕಳ್ಳರ ಬಂಧನ

KGF 2
ಸಿನಿಮಾ1 hour ago

KGF 2: ರಾಷ್ಟ್ರ ಪ್ರಶಸ್ತಿ ವಿಜೇತ ಕೆಜಿಎಫ್‌ 2 ಹೀರೊ ಯಶ್ ಕುರಿತ 10 ಕುತೂಹಲಕರ ಸಂಗತಿಗಳಿವು

Mady Villiers
ಕ್ರಿಕೆಟ್1 hour ago

Mady Villiers: ಎಬಿಡಿ ವಿಲಿಯರ್ಸ್ ಶೈಲಿಯಲ್ಲೇ ಕ್ಯಾಚ್​ ಹಿಡಿದ ಇಂಗ್ಲೆಂಡ್​ ಆಟಗಾರ್ತಿ ಮ್ಯಾಡಿ ವಿಲಿಯರ್ಸ್; ವಿಡಿಯೊ ವೈರಲ್​

Koppala News
ಕೊಪ್ಪಳ1 hour ago

Koppala News: ಅವ್ಯವಹಾರ ನಡೆಸಿ ಕಿಮ್ಸ್ ಹೆಸರಿಗೆ ಮಸಿ ಬಳಿದರೆ ಮುಲಾಜಿಲ್ಲದೆ ಕ್ರಮ; ಶರಣಪ್ರಕಾಶ ಪಾಟೀಲ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌