Doda Attack: ಯೋಧನ ಶಿರಚ್ಛೇದಕ್ಕೆ ಯತ್ನಿಸಿದ ವಿಡಿಯೊ ಬಿಡುಗಡೆ ಮಾಡಿದ ಭಯೋತ್ಪಾದಕರು - Vistara News

ಪ್ರಮುಖ ಸುದ್ದಿ

Doda Attack: ಯೋಧನ ಶಿರಚ್ಛೇದಕ್ಕೆ ಯತ್ನಿಸಿದ ವಿಡಿಯೊ ಬಿಡುಗಡೆ ಮಾಡಿದ ಭಯೋತ್ಪಾದಕರು

Doda Attack: ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್‌ನ ‘ಕಾಶ್ಮೀರ ಟೈಗರ್ಸ್’ ಇತ್ತೀಚೆಗೆ ಜಮ್ಮುವಿನ ದೋಡಾದಲ್ಲಿ ನಡೆದ ದಾಳಿಯ ನಂತರದ ಘಟನೆಗಳನ್ನು ತೋರಿಸುವ ವಿಡಿಯೊವನ್ನು ಬಿಡುಗಡೆ ಮಾಡಿದೆ. ಈ ವಾರದ ಆರಂಭದಲ್ಲಿ ನಡೆದ ಈ ದಾಳಿಯಲ್ಲಿ ಸೇನಾಧಿಕಾರಿ ಮತ್ತು ಇತರ ಮೂವರು ಸೈನಿಕರು ಹುತಾತ್ಮರಾಗಿದ್ದರು. ವೈರಲ್ ಆಗುತ್ತಿರುವ ವಿಡಿಯೊದಲ್ಲಿ ಪಾಕಿಸ್ತಾನ ಮೂಲದವರು ಎನ್ನಲಾದ ಭಯೋತ್ಪಾದಕರು ಮೃತ ಸೈನಿಕನ ಶಿರಚ್ಛೇದ ಮಾಡಲು ಪ್ರಯತ್ನಿಸುತ್ತಿರುವುದನ್ನು ಕಂಡು ಬಂದಿದೆ ಎನ್ನಲಾಗಿದೆ.

VISTARANEWS.COM


on

Doda Attack
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶ್ರೀನಗರ: ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ (Jaish-e-Mohammed)ನ ‘ಕಾಶ್ಮೀರ ಟೈಗರ್ಸ್’ (Kashmir Tigers) ಇತ್ತೀಚೆಗೆ ಜಮ್ಮುವಿನ ದೋಡಾದಲ್ಲಿ ನಡೆದ ದಾಳಿಯ ನಂತರದ ಘಟನೆಗಳನ್ನು ತೋರಿಸುವ ವಿಡಿಯೊವನ್ನು ಬಿಡುಗಡೆ ಮಾಡಿದೆ ಎಂದು ʼದಿ ಪ್ರಿಂಟ್ʼ ವರದಿ ಮಾಡಿದೆ (Doda Attack). ಈ ವಾರದ ಆರಂಭದಲ್ಲಿ ನಡೆದ ಈ ದಾಳಿಯಲ್ಲಿ ಸೇನಾಧಿಕಾರಿ ಮತ್ತು ಇತರ ಮೂವರು ಸೈನಿಕರು ಹುತಾತ್ಮರಾಗಿದ್ದರು.

ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ವಿಡಿಯೊದಲ್ಲಿ ಪಾಕಿಸ್ತಾನ ಮೂಲದವರು ಎನ್ನಲಾದ ಭಯೋತ್ಪಾದಕರು ಮೃತ ಸೈನಿಕನ ಶಿರಚ್ಛೇದ ಮಾಡಲು ಪ್ರಯತ್ನಿಸುತ್ತಿರುವುದನ್ನು ಕಂಡು ಬಂದಿದೆ ಎಂದು ʼದಿ ಪ್ರಿಂಟ್ʼ ತಿಳಿಸಿದೆ. ಕೆಲವು ದಿನಗಳ ಹಿಂದೆ ನಡೆದ ಎನ್‌ಕೌಂಟರ್‌ನಲ್ಲಿ ಮೃತ ಭಯೋತ್ಪಾದಕನ ದೇಹವನ್ನು ಸೈನಿಕರು ಎಳೆದೊಯ್ದಿದ್ದಕ್ಕೆ ಪ್ರತಿಕಾರವಾಗಿ ಈ ಕೃತ್ಯ ಎಸಗಲಾಗಿದೆ ಎಂದು ಭಯೋತ್ಪಾದಕ ಗುಂಪು ಹೇಳಿಕೊಂಡಿದೆ. ಸೇನಾ ಮೂಲಗಳು ಪ್ರಸ್ತುತ ಈ ವಿಡಿಯೊ ತುಣಿಕಿನ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದೆ.

ಘಟನೆಯ ಸಮಯದಲ್ಲಿ ಸೈನಿಕರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಭಯೋತ್ಪಾದಕರು ಹೇಳಿಕೊಂಡಿರುವ ಎಕೆ – 47 ಅನ್ನು ಸಹ ವಿಡಿಯೊದಲ್ಲಿ ಕಂಡು ಬಂದಿದೆ ಎನ್ನಲಾಗಿದೆ.

ದೋಡಾ ಜಿಲ್ಲೆಯ ದೇಸಾ ಎಂಬ ಪ್ರದೇಶದ ಅರಣ್ಯದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿಯು ಜುಲೈ 16ರಂದು ರಾತ್ರಿಯೇ ಕಾರ್ಯಾಚರಣೆ ಆರಂಭಿಸಿದ್ದರು. ಉಗ್ರರಿಗಾಗಿ ನಡೆದ ಕಾರ್ಯಾಚರಣೆ ವೇಳೆ ಭಯೋತ್ಪಾದಕರು ಯೋಧರ ಮೇಲೆಯೇ ಗುಂಡಿನ ದಾಳಿ ನಡೆಸಿದ್ದರು. ಇದೇ ವೇಳೆ ಯೋಧರು ಕೂಡ ಗುಂಡಿನ ದಾಳಿ ಆರಂಭಿಸಿದ್ದರು. ರಾತ್ರೋರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದರು.

ಉಗ್ರರನ್ನು ಪತ್ತೆ ಹಚ್ಚಲು ಸೇನೆ ತನ್ನ ಕಾರ್ಯಾಚರಣೆಯನ್ನು ಗುರುವಾರ ತನಕ ಮುಂದುವರಿಸಿತ್ತು. ದೇಸಾ ಮತ್ತು ಸುತ್ತಮುತ್ತಲಿನ ಅರಣ್ಯ ಪ್ರದೇಶಗಳನ್ನು ಕೂಂಬಿಂಗ್ ಮಾಡಲಾಗಿದೆ. ಮಂಗಳವಾರ ರಾತ್ರಿ ಮತ್ತು ಬುಧವಾರ ಬೆಳಿಗ್ಗೆ ನಡುವೆ ದೇಸಾ ಕಾಡುಗಳಲ್ಲಿ ಎರಡು ಸಣ್ಣ ಗುಂಡಿನ ಚಕಮಕಿಗಳು ನಡೆದಿವೆ.

ದೋಡಾ ಜಿಲ್ಲೆಯನ್ನು 2005ರಲ್ಲಿ ಭಯೋತ್ಪಾದಕ ಚಟುವಟಿಕೆಗಳಿಂದ ಮುಕ್ತವೆಂದು ಘೋಷಿಸಿದ್ದರೂ ಇತ್ತೀಚೆಗೆ ಇಲ್ಲಿ ಮತ್ತೆ ಉಗ್ರ ಚಟುವಟಿಕೆ ಆರಂಭಗೊಂಡಿದೆ. ಜೂನ್ 12ರಂದು ಚಟರ್ಗಲಾ ಪಾಸ್‌ನಲ್ಲಿ ನಡೆದ ದಾಳಿಯೊಂದಿಗೆ ಮತ್ತೆ ಇಲ್ಲಿ ಹಿಂಸಾಚಾರ ಪ್ರಾರಂಭವಾಯಿತು. ಇದರಲ್ಲಿ ಆರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು. ಈ ವರ್ಷವೊಂದರಲ್ಲೇ ಇಲ್ಲಿ 11 ಸೈನಿಕರು ಹುತಾತ್ಮರಾಗಿದ್ದಾರೆ. ದೋಡಾದಲ್ಲಿ ನಾಲ್ವರು, ಜುಲೈ 8ರಂದು ಕಥುವಾದಲ್ಲಿ ಐವರು, ಮೇಯಲ್ಲಿ ಪೂಂಚ್‌ನಲ್ಲಿ ಓರ್ವ ಐಎಎಫ್ ಸಿಬ್ಬಂದಿ ಮತ್ತು ಜೂನ್‌ನಲ್ಲಿ ಓರ್ವ ಸಿಆರ್‌ಪಿಎಫ್‌ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಉಗ್ರರ ಉಪಟಳ ಜಾಸ್ತಿಯಾಗಿರುವ ಕಾರಣ ಭಾರತೀಯ ಸೇನೆ ಹಾಗೂ ಜಮ್ಮು-ಕಾಶ್ಮೀರ ಪೊಲೀಸರು ಕಾರ್ಯಾಚರಣೆಗಳನ್ನು ಕೈಗೊಳ್ಳುತ್ತಲೇ ಇರುತ್ತಾರೆ. ಜುಲೈ 6 ಮತ್ತು 7 ರಂದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ ಭದ್ರತಾ ಪಡೆಗಳು ಆರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದವು. 

ಇದನ್ನೂ ಓದಿ: Terror Attacks in India: ಭಾರತದೊಳಕ್ಕೆ ನುಸುಳಲು ಉಗ್ರರಿಗೆ ಪಾಕಿಸ್ತಾನ ಧನಸಹಾಯ: ಬೆಚ್ಚಿ ಬೀಳಿಸುವ ಮಾಹಿತಿ ಬಹಿರಂಗ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karnataka Assembly Live: 4ನೇ ದಿನದ ವಿಧಾನಮಂಡಲ ಕಲಾಪದಲ್ಲೂ ವಾಲ್ಮೀಕಿ ಹಗರಣದ ಕರಿನೆರಳು ನಿರೀಕ್ಷೆ; ಅಸೆಂಬ್ಲಿ ಲೈವ್‌ ಇಲ್ಲಿದೆ ನೋಡಿ

Karnataka Assembly Live: ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲು ಕಡ್ಡಾಯ ವಿಧೇಯಕದ ಕುರಿತ ಚರ್ಚೆಯೂ ಭುಗಿಲೆದ್ದಿದೆ. ವಾಲ್ಮೀಕಿ, ಮುಡಾ ಹಗರಣಗಳಿಂದ ಗಮನವನ್ನು ಬೇರೆಡೆಗೆ ಹರಿಸಲು ಸಿದ್ದರಾಮಯ್ಯ ಸರಕಾರ ಈ ಭಾವನಾತ್ಮಕ ವಿಷಯ ಎತ್ತಿಹಾಕಿದೆ ಎಂಬ ಆರೋಪ ಪ್ರತಿಪಕ್ಷಗಳದ್ದಾಗಿದೆ. ಪ್ರತಿಪಕ್ಷಗಳ ಆ ಆರೋಪದ ಬಿಸಿ ಕಲಾಪದಲ್ಲೂ ಪ್ರತಿಧ್ವನಿಸಬಹುದು.

VISTARANEWS.COM


on

CM Siddaramaiah and R Ashok karnataka assembly live
Koo

ಬೆಂಗಳೂರು: ವಿಧಾನ ಮಂಡಲದ ಮೂರನೇ ದಿನದ ಕಲಾಪ (Karnataka Assembly Live) ಗದ್ದಲದಲ್ಲೇ ಮುಗಿದಿದ್ದು, ನಾಲ್ಕನೇ ದಿನವೂ ಸರ್ಕಾರವನ್ನು ಇಕ್ಕಟ್ಟಿಗೆ ಸಿಕ್ಕಿಸಲು ಪ್ರತಿಪಕ್ಷಗಳು (Opposition parties) ಮುಂದಾಗಿವೆ. ವಾಲ್ಮೀಕಿ ನಿಗಮ ಹಗರಣದ (Valmiki Corporation Scam) ಕುರಿತ ವಿಪಕ್ಷಗಳ ಆರೋಪಗಳಿಗೆ ನಿನ್ನೆ ಉತ್ತರ ನೀಡಲು ಸಿಎಂ ಸಿದ್ದರಾಮಯ್ಯ (CM Siddaramaiah) ಆರಂಭಿಸಿದ್ದು, ಇಂದು ಕೂಡ ಮುಂದುವರಿಸಲಿದ್ದಾರೆ.

ನಿನ್ನೆ ಸಿಎಂ ವಿಧಾನಸಭೆ (Vidhan Sabha) ಕಲಾಪದಲ್ಲಿ ಉತ್ತರ ನೀಡಲು ಆರಂಭಿಸುತ್ತಿದ್ದಂತೆ ಆಕ್ಷೇಪ ತೆಗೆದಿದ್ದ ಪ್ರತಿಪಕ್ಷ ಬಿಜೆಪಿ ಸದಸ್ಯರು ಗದ್ದಲ ಆರಂಭಿಸಿದ್ದರು. ವಾಲ್ಮಿಕಿ ನಿಗಮದ ಹಗರಣ ಪ್ರಕರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರ್​ ಎಂಬವರ ಡೆತ್ ನೋಟ್​ ಓದುವಾಗ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೆಸರನ್ನೇ ಬಿಟ್ಟಿದ್ದಾರೆ ಎಂದು ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ (R Ashok) ಆರೋಪಿಸಿದರು. ಬಳಿಕ ಬಿಜೆಪಿ ಹಾಗೂ ಜೆಡಿಎಸ್​ ಕಾರ್ಯಕರ್ತರು ಸದನದ ಬಾವಿಗೆ ಇಳಿದ ಪ್ರತಿಭಟನೆ ನಡೆಸಿದರು.

ಸಿಎಂ ಸಿದ್ದರಾಮಯ್ಯ ಅವರು ಉತ್ತರ ಕೊಡುವಾಗ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸಿರುವ ಹಿನ್ನೆಲೆಯಲ್ಲಿಯ ಸ್ಪೀಕರ್​ ಯುಟಿ ಖಾದರ್ (Speaker UT Khader) ಸಂಧಾನ ಸಭೆ ಕರೆದರು. ಆಡಳಿತ ಪಕ್ಷದ ಕಡೆಯಿಂದ ಸಿದ್ದರಾಮಯ್ಯ, ಎಚ್ ಕೆ ಪಾಟೀಲ್, ಜಾರ್ಜ್ ಹಾಗೂ ವಿಪಕ್ಷಗಳಿಂದ ಆರ್ ಆಶೋಕ್, ವಿಜೇಯೇಂದ್ರ, ಸುರೇಶ್ ಬಾಬು ಇದ್ದರು. ಸಂಧಾನ ಸಭೆ ನಡೆಸಿದ ಬಳಿಕವೂ ವಿಪಕ್ಷಗಳ ಸದಸ್ಯರು ತಮ್ಮ ಹೋರಾಟ ಮುಂದುವರಿಸಿದ ಕಾರಣ ಕಲಾಪ ಬಹುತೇಕ ಗದ್ದಲದಲ್ಲಿಯೇ ಅಂತ್ಯಗೊಂಡಿತು.

ನಿಯಮ‌ 69ರ ಅಡಿಯಲ್ಲಿ ನಡೆದ ವಾಲ್ಮೀಕಿ ಅಭಿವೃದ್ಧಿ ನಿಗಮ ಕುರಿತಾದ ಚರ್ಚೆಗೆ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ನೀಡಿದ್ದಾರೆ. ಕಾಂಗ್ರೆಸ್ ಇರುವವರೆಗೂ, ನಾನು ಇರುವವರೆಗೂ ಸಾಮಾಜಿಕ ನ್ಯಾಯಕ್ಕೆ ನಾವು ಬದ್ದರು. ನಿಮ್ಮಿಂದ ಸಾಮಾಜಿಕ ನ್ಯಾಯದ ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ.

ಇದಕ್ಕೂ ಹಿಂದಿನ ದಿನ ಮಾತನಾಡಿದ್ದ ಪ್ರತಿಪಕ್ಷ ನಾಯಕ ಅಶೋಕ್‌, ಸರ್ಕಾರದ ತಪ್ಪು ನಡೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದರು. ಹೈಕಮಾಂಡ್‌ಗೆ ಕಪ್ಪಕಾಣಿಕೆ ಸಲ್ಲಿಸಲು ನಿಗಮದ ಹಣವನ್ನು ದುರುಪಯೋಗ ಮಾಡಲಾಗಿದೆ ಎಂದಿದ್ದ ಅಶೋಕ್‌, 187 ಕೋಟಿ ರೂಪಾಯಿ ಅವ್ಯವಹಾರದ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದರು. ಈ ಹಣ ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಹೇಗೆ ವಿನಿಯೋಗವಾಗಬೇಕಿತ್ತು, ಹೇಗೆ ಅಕ್ರಮವಾಗಿದೆ ಎಂಬುದನ್ನು ಎಳೆ ಎಳೆಯಾಗಿ ಬಿಡಿಸಿಟ್ಟಿದ್ದರು. ಆ ಮೂಲಕ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರು.

ಈ ನಡುವೆ, ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲು ಕಡ್ಡಾಯ ವಿಧೇಯಕದ ಕುರಿತ ಚರ್ಚೆಯೂ ಭುಗಿಲೆದ್ದಿದೆ. ವಿಧಾನಸಭೆಯಲ್ಲಿ ಈ ಬಗ್ಗೆ ಚರ್ಚೆಗೆ ಇನ್ನೂ ಪ್ರತಿಪಕ್ಷ ಅವಕಾಶ ಕೇಳಿಲ್ಲ ಹಾಗೂ ಸರಕಾರವೂ ಅದನ್ನು ಪ್ರಸ್ತಾಪಿಸಿಲ್ಲ. ಆದರೆ ವಾಲ್ಮೀಕಿ, ಮುಡಾ ಹಗರಣಗಳಿಂದ ಗಮನವನ್ನು ಬೇರೆಡೆಗೆ ಹರಿಸಲು ಸಿದ್ದರಾಮಯ್ಯ ಸರಕಾರ ಈ ಭಾವನಾತ್ಮಕ ವಿಷಯ ಎತ್ತಿಹಾಕಿದೆ ಎಂಬ ಆರೋಪ ಪ್ರತಿಪಕ್ಷಗಳದ್ದಾಗಿದೆ. ಪ್ರತಿಪಕ್ಷಗಳ ಆ ಆರೋಪದ ಬಿಸಿ ಕಲಾಪದಲ್ಲೂ ಪ್ರತಿಧ್ವನಿಸಬಹುದು.

ಇದಕ್ಕೂ ಮುನ್ನ, ಜಿಟಿ ಮಾಲ್‌ನಲ್ಲಿ ನಡೆದ ರೈತನಿಗೆ ಅವಮಾನ ಸಂಗತಿಯೂ ಸದನದಲ್ಲಿ ಪ್ರಸ್ತಾವವಾಗಿತ್ತು. ಈ ಘಟನೆಯ ಕುರಿತು ಸರ್ಕಾರದ ನಿಲುವು ಏನು ಎಂದು ಸ್ಪೀಕರ್‌ ಪ್ರಶ್ನಿಸಿದ್ದರು. ಮಾಲ್‌ ಅನ್ನು ಏಳು ದಿನ ಮುಚ್ಚಿಸಲಾಗುವುದು ಎಂದು ನಗರಾಭೀವೃದ್ಧಿ ಸಚಿವ ಬೈರತಿ ಸುರೇಶ್‌ ಹೇಳಿದ್ದರು. ಅದರಂತೆ ಇಂದಿನಿಂದ ಜಿಟಿ ಮಾಲ್‌ ಮುಚ್ಚಿ ಸೀಲ್‌ ಮಾಡಲಾಗಿದೆ.

ಇದನ್ನೂ ಓದಿ: Karnataka Assembly Live: ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ 7 ದಿನ ಬಂದ್: ವಿಧಾನಸಭೆಯಲ್ಲಿ ಘೋಷಣೆ, ವಿಸ್ತಾರ್‌ ನ್ಯೂಸ್‌ ಬಿಗ್‌ ಇಂಪ್ಯಾಕ್ಟ್

Continue Reading

ಬೆಂಗಳೂರು

Lokayukta Raid: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್‌, ರಾಜ್ಯಾದ್ಯಂತ ಲೋಕಾಯುಕ್ತ ದಾಳಿ

Lokayukta Raid: ರಾಜ್ಯದ ಒಟ್ಟು 54 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು, 100 ಜನ ಅಧಿಕಾರಿಗಳು ಸ್ಥಳೀಯ ಪೊಲೀಸರನ್ನು ಬಳಸಿಕೊಂಡು ದಾಳಿಯಲ್ಲಿ ಪಾಲ್ಗೊಂಡಿದ್ದಾರೆ. ಲೋಕಾಯುಕ್ತದಲ್ಲಿ 12 ಭ್ರಷ್ಟಾಚಾರ ಪ್ರಕರಣಗಳು ದಾಖಲಾಗಿದ್ದವು. ಬೆಂಗಳೂರು 3 ಪ್ರಕರಣ, ಮೈಸೂರು 2, ಶಿವಮೊಗ್ಗ 2, ಯಾದಗಿರಿ 1 ಸೇರಿ ಒಟ್ಟು 12 ಪ್ರಕರಣ ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಇಂದು ದಾಳಿಗಳು ನಡೆದಿವೆ.

VISTARANEWS.COM


on

lokayukta raid mysore
ಮೈಸೂರಿನ ಕಾರ್ಮಿಕ ಇಲಾಖೆ ಇನ್ಸ್‌ಪೆಕ್ಟರ್ ಚೇತನ್ ಮನೆ
Koo

ಬೆಂಗಳೂರು: ಇಂದು ಮುಂಜಾನೆ ರಾಜ್ಯದಾದ್ಯಂತ ಲೋಕಾಯುಕ್ತ ಅಧಿಕಾರಿಗಳು (Lokayukta Raid) ಭ್ರಷ್ಟಾಚಾರ ಆರೋಪ (Corruption) ದೂರು ದಾಖಲಾಗಿರುವ ಅಧಿಕಾರಿಗಳ ಮನೆಗಳು ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಅಧಿಕಾರಿಗಳು ನಿದ್ರೆಯಿಂದ ಏಳುವ ಮೊದಲೇ ದಾಳಿ ನಡೆದಿದೆ.

ರಾಜ್ಯದ ಒಟ್ಟು 54 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು, 100 ಜನ ಅಧಿಕಾರಿಗಳು ಸ್ಥಳೀಯ ಪೊಲೀಸರನ್ನು ಬಳಸಿಕೊಂಡು ದಾಳಿಯಲ್ಲಿ ಪಾಲ್ಗೊಂಡಿದ್ದಾರೆ. ಲೋಕಾಯುಕ್ತದಲ್ಲಿ 12 ಭ್ರಷ್ಟಾಚಾರ ಪ್ರಕರಣಗಳು ದಾಖಲಾಗಿದ್ದವು. ಬೆಂಗಳೂರು 3 ಪ್ರಕರಣ, ಮೈಸೂರು 2, ಶಿವಮೊಗ್ಗ 2, ಯಾದಗಿರಿ 1 ಸೇರಿ ಒಟ್ಟು 12 ಪ್ರಕರಣ ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಇಂದು ದಾಳಿಗಳು ನಡೆದಿವೆ.

ಮೈಸೂರು: ಮೈಸೂರಿನಲ್ಲಿ ಕಾರ್ಮಿಕ ಇಲಾಖೆ ಇನ್ಸ್‌ಪೆಕ್ಟರ್ ಚೇತನ್ ಮನೆ ಮೇಲೆ ಲೋಕಾಯುಕ್ತ ರೈಡ್ ಮಾಡಿದೆ. ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಹಿನ್ನೆಲೆಯಲ್ಲಿ ಮೈಸೂರಿನ ಶಾರದಾದೇವಿ ನಗರದಲ್ಲಿರುವ ಚೇತನ್‌ ಮನೆ ಮೇಲೆ ದಾಳಿ ನಡೆದಿದೆ.

ತುಮಕೂರು: ಕೆಐಎಡಿಬಿ ಅಪರ ನಿರ್ದೇಶಕ ಸಿ.ಟಿ ಮುದ್ದುಕುಮಾರ್ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರಿನ ನಾಗರಭಾವಿಯ 2ನೇ ಹಂತದಲ್ಲಿರುವ ವಾಸದ ಮನೆ, ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಖನಿಜ ಭವನದಲ್ಲಿರುವ ಕಚೇರಿ, ತುಮಕೂರು ನಗರದ ಬನಶಂಕರಿಯಲ್ಲಿರುವ ಮನೆ, ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿರುವ ಮನೆ, ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಹೋಬಳಿ ರಂಗನಾಥಪುರದಲ್ಲಿರುವ ಫಾರಂಹೌಸ್, ತುಮಕೂರಿನ ಅಂತರಸನಹಳ್ಳಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಫ್ಯಾಕ್ಟರಿ (ಪ್ಲಾಸ್ಟಿಕ್ ಬಾಟಲ್ ತಯಾರಿಕಾ ಘಟಕ) ಸೇರಿದಂತೆ ಒಟ್ಟು 7 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ತುಮಕೂರು ಲೋಕಾಯುಕ್ತ ಎಸ್.ಪಿ ಲಕ್ಷ್ಮೀ ಗಣೇಶ್ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಬಿ.ಉಮಾಶಂಕರ್, ರಾಮಕೃಷ್ಣಯ್ಯ, ಇನ್ಸ್ಪೆಕ್ಟರ್‌ಗಳಾದ ಶಿವರುದ್ರಪ್ಪ ಮೇಟಿ, ಮಹಮ್ಮದ್ ಸಲೀಂ ಇನ್ನಿತರ ಅಧಿಕಾರಿಗಳ ತಂಡಗಳಿಂದ ದಾಳಿ ನಡೆದಿದೆ.

ಯಾರ್ಯಾರ ಮೇಲೆ ದಾಳಿ?

ತುಮಕೂರು – ಮುದ್ದುಕುಮಾರ್ ಅಡಿಷನಲ್ ಡೈರೆಕ್ಟರ್ ಇಂಡಸ್ಟ್ರಿ ಆ್ಯಂಡ್ ಕಾಮರ್ಸ್ ಡಿಪಾರ್ಟ್ಮೆಂಟ್
ಯಾದಗಿರಿ – ಬಲವಂತ್ ಯೋಜನ ನಿರ್ದೇಶಕ , ಯಾದಗಿರಿ ಜಿಲ್ಲಾ ಪಂಚಾಯತ್
ಬೆಂಗಳೂರು ಗ್ರಾಮಾಂತರ – ಸಿದ್ದಪ್ಪ ಹಿರಿಯ ಪಶು ವೈದ್ಯ ದೊಡ್ಡಬಳ್ಳಾಪುರ
ಬೆಂಗಳೂರು ಗ್ರಾಮಾಂತರ ನರಸಿಂಹ ಮೂರ್ತಿ ಕೆ – ಮುನ್ಸಿಪಲ್ ಅಡ್ಮಿನಿಸ್ಟ್ರೇಷನ್ ಸರ್ವಿಸ್ ಕಮೀಷನರ್ ಹೆಬ್ಬಗೋಡಿ
ಬೆಂಗಳೂರು ಸಿಟಿ – ಬಿವಿ ರಾಜ ಎಫ್ ಡಿ ಎ ಕೆಐ ಎ ಡಿಬಿ
ಬೆಂಗಳೂರು ಸಿಟಿ – ರಮೇಶ್ ಕುಮಾರ್ ಜಂಟಿ ಆಯುಕ್ತ ವಾಣಿಜ್ಯ ತೆರಿಗೆ ಇಲಾಖೆ
ಬೆಂಗಳೂರು ಸಿಟಿ- ಅಕ್ತರ್ ಅಲಿ – ಡೆಪ್ಯೂಟಿ ಕಂಟ್ರೋಲರ್ ಮಾಪನಾ ಇಲಾಖೆ
ಶಿವಮೊಗ್ಗ – ಸಿ ನಾಗೇಶ್ – ಅಂತರಗಂಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಭದ್ರಾವತಿ
ಶಿವಮೊಗ್ಗ ಪ್ರಕಾಶ್ – ಡೆಪ್ಯೂಟಿ ಡೈರೆಕ್ಟರ್ – ತೋಟಗಾರಿಕಾ ಇಲಾಖೆ
ಬೆಂಗಳೂರು ಸಿಟಿ – ಚೇತನ್ ಕುಮಾರ್ – ಕಾರ್ಮಿಕ‌ಇಲಾಖೆ ಅಧಿಕಾರಿ ಮಂಡ್ಯ ವಿಭಾಗ
ಬೆಂಗಳೂರು ಸಿಟಿ – ಆನಂದ್ ಸಿ ಎಲ್ – ಕಮೀಷನರ್ ಮಂಗಳೂರು ಮಹಾನಗರ ಪಾಲಿಕೆ
ಬೆಂಗಳೂರು ಸಿಟಿ – ಮಂಜುನಾಥ್ ಟಿ ಆರ್ – ಎಫ್ ಡಿಎ ಬೆಂಗಳೂರು‌ ನಾರ್ತ್ ಸಬ್ ಡಿವಿಷನ್ ಆಫೀಸರ್

ಇದನ್ನೂ ಓದಿ: DK Shivakumar: `ಲೋಕಾಯುಕ್ತಕ್ಕೆ ಕೊಟ್ಟ ಮೇಲೆ ಸಿಬಿಐಗೇನು ಕೆಲಸ?’ ಅಕ್ರಮ ಆಸ್ತಿ ಕೇಸ್‌ ಬಗ್ಗೆ ಡಿಕೆ ಶಿವಕುಮಾರ್‌ ಪ್ರಶ್ನೆ

Continue Reading

ಪ್ರಮುಖ ಸುದ್ದಿ

GT World Mall: ಅನ್ನದಾತರಿಗೆ ಅವಮಾನ; ತೆರಿಗೆ ಪಾವತಿಸದ್ದಕ್ಕಾಗಿ ಜಿಟಿ ಮಾಲ್‌ ಸೀಲ್ ಮಾಡಿದ ಬಿಬಿಎಂಪಿ

GT World Mall: ಮಾಲ್‌ ಬಾಗಿಲಿಗೆ ಬೀಗ ಜಡಿಯಲಾಗಿದ್ದು, ʼಆಸ್ತಿ ತೆರಿಗೆ (Property Tax) ಪಾವತಿಸದ ಕಾರಣಕ್ಕಾಗಿ ಮಾಲ್ ಅನ್ನು ಸೀಲ್ ಮಾಡಲಾಗಿದೆʼ ಎಂದು ಬಾಗಿಲಿಗೆ ಅಂಟಿಸಲಾದ ನೋಟೀಸ್‌ನಲ್ಲಿ ತಿಳಿಸಲಾಗಿದೆ. ಬಿಬಿಎಂಪಿ ನೋಟಿಸ್‌ಗೆ ಲಿಖಿತ ಉತ್ತರ‌ ನೀಡಿರುವ ಜಿಟಿ ಮಾಲ್ ಮಾಲಿಕರು, ತಪ್ಪೆಸಗಿದ ಸಿಬ್ಬಂದಿ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

VISTARANEWS.COM


on

gt world mall bandh
Koo

ಬೆಂಗಳೂರು: ಪಂಚೆ ಧರಿಸಿ ಬಂದ ರೈತರಿಗೆ ಪ್ರವೇಶ ನಿರಾಕರಿಸಿ (Farmer humiliation) ಅವಮಾನ ಮಾಡಿದ ಹಿನ್ನೆಲೆಯಲ್ಲಿ ಜನತೆಯ, ಮಾಧ್ಯಮಗಳ ಹಾಗೂ ಸರಕಾರದ ಆಕ್ರೋಶ ಎದುರಿಸಿದ್ದ ಬೆಂಗಳೂರಿನ ಜಿಟಿ ವರ್ಲ್ಡ್‌ ಮಾಲ್‌ (GT World Mall), ಸ್ವಯಂಪ್ರೇರಿತವಾಗಿ ಬಂದ್‌ (GT World Mall Bandh) ಮಾಡಿದ ಕೆಲವೇ ಗಂಟೆಗಳಲ್ಲಿ ಬಿಬಿಎಂಪಿ ಅಧಿಕಾರಿಗಳು (BBMP Officers) ಮಾಲ್‌ ಅನ್ನು ಸೀಜ್‌ ಮಾಡಿದ್ದಾರೆ.

ಮಾಲ್‌ ಬಾಗಿಲಿಗೆ ಬೀಗ ಜಡಿಯಲಾಗಿದ್ದು, ʼಆಸ್ತಿ ತೆರಿಗೆ (Property Tax) ಪಾವತಿಸದ ಕಾರಣಕ್ಕಾಗಿ ಮಾಲ್ ಅನ್ನು ಸೀಲ್ ಮಾಡಲಾಗಿದೆʼ ಎಂದು ಬಾಗಿಲಿಗೆ ಅಂಟಿಸಲಾದ ನೋಟೀಸ್‌ನಲ್ಲಿ ತಿಳಿಸಲಾಗಿದೆ. 2023-24ನೇ ಸಾಲಿನ 1,78,23,560 ಕೋಟಿ ರೂ. ಆಸ್ತಿ ತೆರಿಗೆ ಬಾಕಿಯಿದ್ದು, ಪ್ರಸಕ್ತ ಸಾಲಿನಲ್ಲಿ 1,78,23,460 ಆಸ್ತಿ ತೆರಿಗೆ ಪಾವತಿಸಬೇಕಿದೆ. ತೆರಿಗೆ ಪಾವತಿಸಿಲ್ಲ ಅಂತ ಬಿಬಿಎಂಪಿ ಜಿಟಿ ಮಾಲ್ ಅನ್ನು ಬಂದ್ ಮಾಡಿದೆ. ಬಿಬಿಎಂಪಿಯ ಕಂದಾಯ ಇಲಾಖೆ ಅಧಿಕಾರಿಗಳು ಮಾಲ್‌ಗೆ ಬೀಗ ಹಾಕಿದ್ದು, ತೆರಿಗೆ ಕಟ್ಟುವಂತೆ ನೋಟೀಸ್ ಜಾರಿ ಮಾಡಿದ್ದಾರೆ. ತೆರಿಗೆ ಪಾವತಿಸಿದ ಮೇಲೆ ಮಾಲ್ ತೆರೆಯಲು ಒಪ್ಪಿಗೆ ನೀಡಲಿದ್ದಾರೆ.

ಉತ್ತರ ನೀಡಿದ ಜಿಟಿ ಮಾಲ್‌

ಬಿಬಿಎಂಪಿ ನೋಟಿಸ್‌ಗೆ ಲಿಖಿತ ಉತ್ತರ‌ ನೀಡಿರುವ ಜಿಟಿ ಮಾಲ್ ಮಾಲಿಕರು, ತಪ್ಪೆಸಗಿದ ಸಿಬ್ಬಂದಿ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ. ಪಂಚೆ ಉಟ್ಟು ಬಂದ ರೈತ ಮಾಲ್ ಎಂಟ್ರಿ ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ನೋಟೀಸ್‌ ನೀಡಿದ್ದು, ಅದಕ್ಕೆ ಉತ್ತರ ನೀಡಿ ಪತ್ರ ಬರೆದಿದ್ದಾರೆ.

ʼಪಂಚೆ ಧರಿಸಿದವರಿಗೆ ಮಾಲ್ ಒಳಗೆ ಪ್ರವೇಶ ಇಲ್ಲ ಎಂಬ ನಿಯಮ ನಮ್ಮಲ್ಲಿಲ್ಲ. ಜಿಟಿ ಮಾಲ್ 2017ರಲ್ಲಿ ಆರಂಭವಾಗಿದ್ದು, ಮಾಲ್‌ನಲ್ಲಿ ಅನೇಕ ಮಳಿಗೆಗಳಲ್ಲಿ ಪಂಚೆ ಮಾರಾಟವೂ ನಡೆದಿದೆ. ಪಂಚೆ ನಮ್ಮ ಸಂಸ್ಕೃತಿಯ ಸಂಕೇತ. ಪಂಚೆಯು‌ ನಮ್ಮ ನಾಡಿನ ಸಾಂಸ್ಕೃತಿಕ ಉಡುಗೆಯಾಗಿದೆ, ಇದಕ್ಕೆ ಹೆಮ್ಮೆಯೂ ಇದೆ. ಘಟನೆಯು ಸೆಕ್ಯುರಿಟಿಯ ಅಜಾಗರೂಕತೆಯಿಂದ ನಡೆದಿದೆ. ಪಂಚೆ ಉಟ್ಟು ಬಂದ ರೈತರನ್ನು ಮಾಲ್ ಒಳಗೆ ಬಿಡದೆ ಇದದ್ದು ಸರಿಯಾದ ಕ್ರಮವಲ್ಲ. ಈ ರೀತಿ ಮಾಡಿದ ನಮ್ಮ ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಲಾಗಿದೆʼ ಎಂದು ಜಿಟಿ ಮಾಲ್ ಸಿಇಓ ಪ್ರಶಾಂತ್ ಆನಂದ್ ತಿಳಿಸಿದ್ದಾರೆ.

ಈ ಹಿಂದೆ ಬೇರೆ ಬೇರೆ ದಿನ ಪಂಚೆ ಧರಿಸಿದವರು ಓಡಾಡುವ ಸಿಸಿಟಿವಿ ದೃಶ್ಯದೊಂದಿಗೆ ಸಿಇಒ ಉತ್ತರ ಸಲ್ಲಿಸಿದ್ದಾರೆ. ʼ2017ರಿಂದ ಇಲ್ಲಿಯವರೆಗೆ ಯಾವುದೇ ಅಹಿತಕರ ಘಟನೆ ನಡೆದಿರಲಿಲ್ಲ. ಮುಂದೆ ಇಂತಹ ಪ್ರಮಾದ ನಡೆಯಲು ಬಿಡುವುದಿಲ್ಲ. ಈ ಘಟನೆಯಿಂದ ನಮಗೆ ಬಹಳ ಬೇಸರವಾಗಿದ್ದು ನಾವು ವಿಷಾದ ವ್ಯಕ್ತಪಡಿಸುತ್ತೇವೆ. ನಮ್ಮ ಮಾಲ್‌ನಲ್ಲಿನ ಮಳಿಗೆಗಳಲ್ಲಿ ಪಂಚೆಯನ್ನು ಮುಕ್ತವಾಗಿ ಮಾರಾಟ ಮಾಡುತ್ತೇವೆ. ಈ ಹಿಂದೆ ನಮ್ಮ ಮಾಲ್ ಅನೇಕರು ಪಂಚೆ ತೊಟ್ಟು ಬಂದಿದ್ದು ಅವರ ಸಿಸಿ ಟಿವಿ ಚಿತ್ರಣಗಳನ್ನು ನಾವು ನೀಡಿದ್ದೇವೆ. ಈ ವರೆಗೆ ಸಾಮಾಜಿಕವಾಗಿ ಇನ್ಯಾವುದೇ ಅಹಿತಕರ ಘಟನೆ ನಡೆದಿರುವುದಿಲ್ಲ‌, ಮುಂದೆಯೂ ನಡೆಯದಂತೆ ಜಾಗೃತಿ ವಹಿಸುವುದಾಗಿ ಜಿಟಿ ಮಾಲ್ ನೋಟಿಸ್‌ಗೆ ಉತ್ತರ ನೀಡಿದೆ.

ಕಲಾಪದಲ್ಲಿ ಬಂದ್​ಗೆ ಸೂಚನೆ

ಗುರುವಾರ ಆರಂಭವಾದ ಮೂರನೇ ದಿನದ ವಿಧಾನಸಭೆ ಕಲಾಪ ಆರಂಭದಲ್ಲೇ ಈ ವಿಷಯ ಪ್ರಸ್ತಾಪವಾಯಿತು. ಹಲವರು ಸದಸ್ಯರು ರೈತರಿಗೆ ಅವಮಾನ ಆದ ವಿಷಯವನ್ನು ಪ್ರಸ್ತಾಪಿಸಿದರು. ವಿಸ್ತಾರ ನ್ಯೂಸ್‌ ನಿನ್ನೆ ಇಡೀ ದಿನ ಈ ಘಟನೆಯನ್ನು ಪ್ರಸಾರ ಮಾಡಿದ್ದಲ್ಲದೆ, ರೈತರನ್ನು ಮರಳಿ ಜಿಟಿ ಮಾಲ್‌ಗೆ ಕರೆದೊಯ್ದು ಪ್ರವೇಶ ಕೊಡಿಸಿತ್ತು. ಈ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು. ಕನ್ನಡ ಹಾಗೂ ರೈತಪರ ಸಂಘಟನೆಗಳು ಈ ವಿಚಾರದಲ್ಲಿ ವಿಸ್ತಾರ ನ್ಯೂಸ್‌ನೊಂದಿಗೆ ಕೈಜೋಡಿಸಿದ್ದವು. ನಂತರ ಸಚಿವ ಸಂತೋಷ್‌ ಲಾಡ್‌ (Santosh Lad) ಕೂಡ ಕೂಡ ಈ ವಿಚಾರದಲ್ಲಿ ಮಾಲ್‌ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು.

ವಿಧಾನಸಭೆ ಕಲಾಪದ ಆರಂಭದ ಹೊತ್ತಿಗೆ ಸ್ವತಃ ಸ್ಪೀಕರ್‌ ಯು.ಟಿ ಖಾದರ್‌ (Speaker UT Khader) ಅವರು ಈ ವಿಚಾರ ಎತ್ತಿದರು. ಈ ಬಗ್ಗೆ ಸರ್ಕಾರದ ನಿಲುವನ್ನು ತಿಳಿಸುವಂತೆ ಸೂಚಿಸಿದರು. ಸದಸ್ಯರು ಪಕ್ಷಾತೀತವಾಗಿ ಮಾಲ್‌ ನಡೆಯನ್ನು ತೀವ್ರವಾಗಿ ಖಂಡಿಸಿದರು. ಇದಕ್ಕೆ ಉತ್ತರಿಸಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ಇದೆ. 7 ದಿನಗಳ ವರೆಗೆ ಬಂದ್‌ ಮಾಡಿಸಬಹುದು. ಆದರೆ ಎಚ್ಚರಿಕೆ ನೀಡಿ ಮೂರು ದಿನಗಳ ಕಾಲ ಮಾಲ್ ಬಂದ್ ಮಾಡಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: GT World Mall : ಜಿಟಿ ಮಾಲ್​ ಏಳು ದಿನಗಳ ಕಾಲ ಬಂದ್​, ಮಾಲೀಕರಿಂದಲೇ ಸ್ವಯಂಪ್ರೇರಿತ ಕ್ರಮ

Continue Reading

ಭವಿಷ್ಯ

Dina Bhavishya : ಈ ದಿನ ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡವೇ ಬೇಡ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ ತ್ರಯೋದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಧನಸ್ಸು ರಾಶಿಯಿಂದ ಶುಕ್ರವಾರ ಬೆಳಗಿನ ಜಾವ 04:13ಕ್ಕೆ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ನಿಮ್ಮ ಹಾಸ್ಯದ ಮನೋಭಾವನೆ ಇತರರನ್ನು ಆಕರ್ಷಿಸುವುದು. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಧಾರ್ಮಿಕ ಸ್ಥಳಗಳಿಗೆ ಭೇಟಿ ಮಾಡುವಿರಿ. ಆಧ್ಯಾತ್ಮ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಮಿಥುನ ರಾಶಿಯವರು ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು, ಮುಂದಿನ ಆಗುವ ಕೆಲಸಗಳ ಬಗೆಗೆ ಕಾರ್ಯ ಪ್ರವೃತ್ತರಾಗಿ. ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅನೇಕ ವಿಚಾರಗಳಿಂದ ಒತ್ತಡಕ್ಕೆ ಒಳಾಗಾಗುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (19-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.
ತಿಥಿ: ತ್ರಯೋದಶಿ 19:40 ವಾರ: ಶುಕ್ರವಾರ
ನಕ್ಷತ್ರ: ಮೂಲಾ 26:54 ಯೋಗ: ಇಂದ್ರ 26:39
ಕರಣ: ಕೌಲವ 08:17 ಅಮೃತಕಾಲ: ರಾತ್ರಿ 08:39 ರಿಂದ 10:13
ದಿನದ ವಿಶೇಷ: ಸ್ವಾಮಿ ವಿವೇಕಾನಂದರ ಪುಣ್ಯದಿನ, ಆಷಾಢ ಶುಕ್ರವಾರ

ಸೂರ್ಯೋದಯ : 06:01   ಸೂರ್ಯಾಸ್ತ : 06:50

ರಾಹುಕಾಲ: ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಹಾಸ್ಯದ ಮನೋಭಾವನೆ ಇತರರನ್ನು ಆಕರ್ಷಿಸುವುದು. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಧಾರ್ಮಿಕ ಸ್ಥಳಗಳಿಗೆ ಭೇಟಿ ಮಾಡುವಿರಿ. ಆಧ್ಯಾತ್ಮ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಷಭ: ವ್ಯವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ ನಿಮಗೆ ಕೋಪ ತರಿಸಬಹುದು ತಾಳ್ಮೆಯಿಂದ ವರ್ತಿಸಿ. ಈ ಹಿಂದೆ ಕಾಡಿದ ವ್ಯಾಧಿ ಮರುಕಳಿಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಏತನ್ಮಧ್ಯೆ ಅತಿಥಿಗಳ ಆಗಮನ ಹರ್ಷ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು, ಮುಂದಿನ ಆಗುವ ಕೆಲಸಗಳ ಬಗೆಗೆ ಕಾರ್ಯ ಪ್ರವೃತ್ತರಾಗಿ. ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅನೇಕ ವಿಚಾರಗಳಿಂದ ಒತ್ತಡಕ್ಕೆ ಒಳಾಗಾಗುವ ಸಾಧ್ಯತೆ ಇದೆ. ಕೋಪದಿಂದ ಏನನ್ನು ಸಾಧಿಸಲಾಗದು. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕಟಕ:ಹಣದ ಹರಿವು ಹೆಚ್ಚಾಗಲಿದೆ. ಮಾನಸಿಕ ನೆಮ್ಮದಿ ಸಿಗುವುದು. ಹೊಸ ಭರವಸೆಯ ಅವಕಾಶಗಳು ಹುಡುಕಿಕೊಂಡು ಬರುವುದು. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಫಲ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಸಿಂಹ: ಕುಟುಂಬದ ಆಪ್ತ ಹಾಗೂ ಸ್ನೇಹಿತರ ಸೂಕ್ತ ಸಲಹೆ ಸಹಕಾರ ಸಿಗುವುದು. ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ವಿಶ್ರಾಂತಿ ಸಿಗಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ, ಅಗತ್ಯವಿದ್ದಷ್ಟೆ ಮಾತನಾಡಿ, ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆಪ್ತ ಸಂಬಂಧಿಕರಿಂದ ಸಹಾಯ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಣಕಾಸು ಪ್ರಗತಿ ಇರಲಿದೆ. ಹಳೆಯ ವಿಚಾರಗಳು ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಆರೋಗ್ಯ ಉತ್ತಮವಾಗಿರಲಿದೆ, ಉದ್ಯೋಗದಲ್ಲಿ ಸಾಧಾರಣವಾಗಿರಲಿದೆ. ಕುಟುಂಬದ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ : ವಾಹನ ಚಾಲನೆ ಮಾಡುವಾಗ ಆದಷ್ಟು ಎಚ್ಚರಿಕೆ ವಹಿಸಿ. ಆಪ್ತರ ಸಲಹೆಗಳನ್ನು ತಿರಸ್ಕಾರ ಭಾವದಿಂದ ನೋಡಬೇಡಿ, ವ್ಯತಿರಿಕ್ತವಾದ ಪರಿಣಾಮದಿಂದಾಗಿ ಸ್ನೇಹದಲ್ಲಿ ಬಿರುಕು ಮೂಡುವ ಸಾಧ್ಯತೆ ಇದೆ. ಅನಗತ್ಯ ಖರ್ಚು ಇರಲಿದೆ. ಆರೋಗ್ಯ ಸಾಧಾರಣ.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು: ಅನಿರೀಕ್ಷಿತ ಪ್ರಯಾಣ ಬೆಳೆಸಬೇಕಾಗಬಹುದು. ಆತುರದ ಭರದಲ್ಲಿ ಅತಿರೇಕದ ಮಾತುಗಳು ಜಗಳ ತರಬಹುದು, ಸಮಾಧಾನದಿಂದ ವರ್ತಿಸಿ. ಅಮೂಲ್ಯ ವಸ್ತುಗಳು ಕೈತಪ್ಪುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡದಂತೆ ವರ್ತಿಸಿ . ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮಕರ: ಆರೋಗ್ಯ ಉತ್ತಮವಾಗಿರಲಿದೆ. ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಭರವಸೆ ಇದೆ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಪ್ರಯತ್ನಿಸುವಿರಿ. ಸಮಾರಂಭದ ಆಮಂತ್ರಣ ಬರುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕುಂಭ: ಆಹಾರದ ಕ್ರಮದಿಂದಾಗಿ ಆರೋಗ್ಯದಲ್ಲಿ ವ್ಯತ್ಯಾಸ ಮೂಡಿಸಬಹುದು. ಅಮೂಲ್ಯ ವಸ್ತುಗಳ ಕುರಿತು ಕಾಳಜಿ ವಹಿಸಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸುವುದರಲ್ಲಿ ಯಶಸ್ಸು ಪಡೆಯುವಿರಿ. ಸಂಗಾತಿಯ ಹಸ್ತಕ್ಷೇಪ ನಿಮಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಭರವಸೆ ಮೂಡಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Sri Lanka Tour
ಕ್ರೀಡೆ14 mins ago

Sri Lanka Tour: ಸಂಜು, ಅಭಿಷೇಕ್​ಗೆ ಅವಕಾಶ ನೀಡದಕ್ಕೆ ಬಿಸಿಸಿಐ ವಿರುದ್ಧ ಕಿಡಿಕಾರಿದ ಸಂಸದ ​ತರೂರ್

Gold Rate Today
ಚಿನ್ನದ ದರ17 mins ago

Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಬಂಗಾರ ಇಂದು ಇಷ್ಟು ಅಗ್ಗ

Tharun Sudhir gives Darshan a wedding invitation card and visits Jail
ಟಾಲಿವುಡ್24 mins ago

Tharun Sudhir: ದರ್ಶನ್‌ಗೆ ಮದುವೆ ಇನ್ವಿಟೇಶನ್‌ ಕಾರ್ಡ್‌ ಕೊಟ್ಟು, ಆಶೀರ್ವಾದ ಪಡೆಯಲು ಜೈಲಿಗೆ ಭೇಟಿ ಕೊಡಲಿದ್ದಾರಂತೆ ತರುಣ್ ಸುಧೀರ್

Train services
ಬೆಂಗಳೂರು30 mins ago

Train services: ವಿವಿಧ ಕಾಮಗಾರಿ ಹಿನ್ನೆಲೆ ಈ ಮಾರ್ಗದ ರೈಲುಗಳು ಸಂಚಾರ ಭಾಗಶಃ ರದ್ದು

road accident mbbs student death
ಬೆಂಗಳೂರು41 mins ago

Road Accident: ನಿರ್ಲಕ್ಷ್ಯದಿಂದ ಓಡಿಸಿ ಎಂಬಿಬಿಎಸ್‌ ವಿದ್ಯಾರ್ಥಿಯ ಜೀವ ತೆಗೆದ ಟ್ಯಾಂಕರ್ ಚಾಲಕ

Narendra Modi
ರಾಜಕೀಯ1 hour ago

Narendra Modi: ಬಿಜೆಪಿ ಕಾರ್ಯಕರ್ತರೊಂದಿಗೆ ಮೋದಿ ಸ್ನೇಹ ಮಿಲನ; ನಾವೆಲ್ಲರೂ ಒಂದೇ ಕುಟುಂಬ ಎಂದು ಬಣ್ಣಿಸಿದ ಪ್ರಧಾನಿ

Hardik Pandya
ಕ್ರೀಡೆ1 hour ago

Hardik Pandya: ವಿಚ್ಛೇದಿತ ಪತ್ನಿ ನತಾಶಾಗೆ ಶೇ.70ರಷ್ಟು ಜೀವನಾಂಶ ನೀಡಲಿದ್ದಾರಾ ಹಾರ್ದಿಕ್​ ಪಾಂಡ್ಯ?

Doda Attack
ಪ್ರಮುಖ ಸುದ್ದಿ1 hour ago

Doda Attack: ಯೋಧನ ಶಿರಚ್ಛೇದಕ್ಕೆ ಯತ್ನಿಸಿದ ವಿಡಿಯೊ ಬಿಡುಗಡೆ ಮಾಡಿದ ಭಯೋತ್ಪಾದಕರು

Urvashi Rautela Conversation With Manager 'Leaked',
ಬಾಲಿವುಡ್2 hours ago

Urvashi Rautela: ಊರ್ವಶಿ ರೌಟೇಲಾ ಸ್ನಾನ ಮಾಡುವ ವಿಡಿಯೊ ಲೀಕ್‌ ಆದ ಬೆನ್ನಲ್ಲೇ ಮ್ಯಾನೇಜರ್‌ ಜತೆಗಿನ ಆಡಿಯೋನೂ ಬಹಿರಂಗ!

Kannadiga quota
ಕ್ರಿಕೆಟ್2 hours ago

Kannadiga quota: ಆರ್​ಸಿಬಿ ತಂಡದಲ್ಲೂ ಕನ್ನಡಿಗರಿಗೆ ಮೀಸಲಾತಿ ನೀಡಿ; ಅಭಿಮಾನಿಗಳಿಂದ ಆಗ್ರಹ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ18 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ20 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ5 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ5 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಟ್ರೆಂಡಿಂಗ್‌