Dog Meat Controversy: ಅಬ್ದುಲ್‌ ರಜಾಕ್‌ ತಂದಿರೋದು ಕುರಿ ಮಾಂಸ, ‌ಖಚಿತಪಡಿಸಿದ ಲ್ಯಾಬ್‌ ವರದಿ: ಆಹಾರ ಇಲಾಖೆ ಆಯುಕ್ತ - Vistara News

ಪ್ರಮುಖ ಸುದ್ದಿ

Dog Meat Controversy: ಅಬ್ದುಲ್‌ ರಜಾಕ್‌ ತಂದಿರೋದು ಕುರಿ ಮಾಂಸ, ‌ಖಚಿತಪಡಿಸಿದ ಲ್ಯಾಬ್‌ ವರದಿ: ಆಹಾರ ಇಲಾಖೆ ಆಯುಕ್ತ

Dog Meat Controversy: ಈ ಮಾಂಸವನ್ನು ನಾಯಿ ಮಾಂಸ ಎಂದು ಆರೋಪಿಸಿದವರ ಮೇಲೆ ಕ್ರಮ ನಾವು ತೆಗೆದುಕೊಳ್ಳುವುದಿಲ್ಲ. ಆಮದು ಮಾಡಿಕೊಂಡವರ ಬಳಿ ಎಲ್ಲಾ ಪರವಾನಗಿ ಇದೆ, ಅವರು ನಮಗೆ ದಾಖಲೆ ಕೊಟ್ಟಿದ್ದಾರೆ ಎಂದು ಶ್ರೀನಿವಾಸ್‌ ಹೇಳಿದ್ದಾರೆ.

VISTARANEWS.COM


on

dog meat controversy food department commissioner
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನ ಮೆಜೆಸ್ಟಿಕ್‌ ರೈಲು ನಿಲ್ದಾಣದಲ್ಲಿ (Majestic Railway Station) ಪತ್ತೆಯಾಗಿರುವುದು ಕುರಿ ಮಾಂಸವೇ (mutton) ಎಂದು ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್‌ ಹೇಳಿದ್ದಾರೆ. ಲ್ಯಾಬ್ ರಿಪೋರ್ಟ್‌ನಲ್ಲಿ (Lab Report) ಇದು ಕುರಿ ಮಾಂಸ ಎಂದು ಸಾಬೀತಾಗಿದೆ ಎಂದು ಅವರು ತಿಳಿಸಿದ್ದಾರೆ. ಆ ಮೂಲಕ ʼನಾಯಿ ಮಾಂಸ ವಿವಾದʼ (Dog Meat Controversy) ಎತ್ತಿರುವ ಪುನೀತ್‌ ಕೆರೆಹಳ್ಳಿ (Puneeth Kerehalli) ಬಳಗಕ್ಕೆ ಹಿನ್ನಡೆಯಾಗಿದೆ.

ಜುಲೈ 26ರಂದು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ 86 ಬಾಕ್ಸ್‌ಗಳಷ್ಟು ರಾಜಸ್ಥಾನದಿಂದ ತರಿಸಿದ ಮಾಂಸದ ಬಾಕ್ಸ್‌ಗಳು ಪತ್ತೆಯಾಗಿದ್ದವು. ಇವುಗಳನ್ನು ಹೈದರಾಬಾದ್‌ನ ICAR ನ್ಯಾಷನಲ್ ಮೀಟ್ ರಿಸರ್ಚ್ ಇನ್ಸ್ಟಿಟ್ಯೂಟ್‌ನಲ್ಲಿ ಪರೀಕ್ಷೆ ಮಾಡಿಸಲಾಗಿದೆ. ಅದರಲ್ಲಿ S Ovis Aries ಎಂದು ಲ್ಯಾಬ್ ವರದಿಯಲ್ಲಿ ಬಂದಿದೆ. ಹಾಗೆಂದರೆ ಅದು ಕುರಿಯ ವೈಜ್ಞಾನಿಕ ಹೆಸರು. ಹೀಗಾಗಿ ಇದು ಕುರಿ ಮಾಂಸ ಎಂದು ಇಲಾಖೆ ಆಯುಕ್ತ ಶ್ರೀನಿವಾಸ್ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.

ಈಗ ಡಿಎನ್‌ಎ ಪರೀಕ್ಷೆ ಮಾತ್ರ ಮಾಡಲಾಗಿದೆ. ಇದರ ಶುಚಿತ್ವದ ಬಗ್ಗೆ ಇನ್ನೊಂದು ಲ್ಯಾಬ್‌ನಲ್ಲಿ ಪರೀಕ್ಷೆ ನಡೆಯುತ್ತಿದೆ. ಈ ಶುಕ್ರವಾರ ಅದರ ವರದಿ ಕೂಡ ಬರುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ.

ಈ ಮಾಂಸವನ್ನು ನಾಯಿ ಮಾಂಸ ಎಂದು ಆರೋಪಿಸಿದವರ ಮೇಲೆ ಕ್ರಮ ನಾವು ತೆಗೆದುಕೊಳ್ಳುವುದಿಲ್ಲ. ನಾವು ಈಗ ಬಂದಿರುವ ವರದಿಯನ್ನು ಪೊಲೀಸರಿಗೆ ನೀಡುತ್ತೇವೆ. ಪೊಲೀಸರು ವರದಿ ಪಡೆದುಕೊಂಡು ಹೊಸ ದೂರು ದಾಖಲಿಸಿ ಕ್ರಮ‌ ತೆಗೆದುಕೊಳ್ಳಬಹುದು. ಅವರು ಮುಂದಿನ ಕಾನೂನಾತ್ಮಕ ಕ್ರಮ ಜರುಗಿಸುತ್ತಾರೆ. ಆಮದು ಮಾಡಿಕೊಂಡವರ ಬಳಿ ಎಲ್ಲಾ ಪರವಾನಗಿ ಇದೆ, ಅವರು ನಮಗೆ ದಾಖಲೆ ಕೊಟ್ಟಿದ್ದಾರೆ ಎಂದು ಶ್ರೀನಿವಾಸ್‌ ಹೇಳಿದ್ದಾರೆ.

FSSAI ಗೈಡ್‌ಲೈನ್ಸ್ ಪ್ರಕಾರ ಉದ್ಯಮಿ ರಜಾಕ್ ಕೊಟ್ಟ ದಾಖಲೆ ಎಲ್ಲವೂ ಸರಿಯಾಗಿಯೇ ಇದೆ. ಪಶ್ಚಿಮ ಬಂಗಾಳ, ಗುಜರಾತ್, ರಾಜಸ್ಥಾನ ಸೇರಿದಂತೆ ಹಲವು ಕಡೆಯಿಂದ ನಗರಕ್ಕೆ ಮಾಂಸ ಆಮದಾಗುತ್ತಿದೆ. ಮೀನು, ಕುರಿ ಸೇರಿದಂತೆ ವಿವಿಧ ರೀತಿಯ ಮಾಂಸ ಆಮದಾಗುತ್ತಿದೆ. ಎಲ್ಲವನ್ನೂ ಆಹಾರ ಗುಣಮಟ್ಟ ಇಲಾಖೆ ಪರೀಕ್ಷೆ ಮಾಡಿದೆ. ಮುಂದೆಯೂ ಮಾಡುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪೊಲೀಸರ ದೌರ್ಜನ್ಯ ಖಂಡಿಸಿ ಪ್ರತಿಭಟನೆ; ಪುನೀತ್‌ ಕೆರೆಹಳ್ಳಿ ಮತ್ತೆ ವಶಕ್ಕೆ, ಪ್ರತಾಪ್‌ ಸಿಂಹ ವಿರುದ್ಧ ದೂರು

ಬೆಂಗಳೂರು: ಪುನೀತ್‌ ಕೆರೆಹಳ್ಳಿ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ಪ್ರತಾಪ್‌ ಸಿಂಹ, ಶಾಸಕ ಹರೀಶ್‌ ಪೂಂಜಾ ನೇತೃತ್ವದಲ್ಲಿ ಬಿಜೆಪಿ ಹಾಗೂ ಹಿಂದು ಕಾರ್ಯಕರ್ತರು, ಬಸವೇಶ್ವರ ನಗರದ ಪೊಲೀಸ್‌ ಠಾಣೆ ಎದುರು ಬುಧವಾರ ಪ್ರತಿಭಟನೆ (BJP Protest) ನಡೆಸಿದರು. ಮಾಂಸ ಸಾಗಾಟಕ್ಕೆ ತಡೆ ಪ್ರಕರಣದಲ್ಲಿ ಬಂಧನವಾಗಿದ್ದ ಪುನೀತ್‌ ಕೆರೆಹಳ್ಳಿಗೆ ಲಾಕಪ್‌ನಲ್ಲಿ ಬಟ್ಟೆ ಬಿಚ್ಚಿಸಿ, ಹಿಂಸೆ ನೀಡಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಧನವಾಗಿದ್ದ ಪುನೀತ್ ಕೆರೆಹಳ್ಳಿ, ಜಾಮೀನು ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮತ್ತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಠಾಣೆಯಲ್ಲಿ ಬೆತ್ತಲುಗೊಳಿಸಿ ಹಿಂಸೆ ಕೊಟ್ಟಿದ್ದಾರೆ ಎಂದು ಎಸಿಪಿ ಚಂದನ್ ವಿರುದ್ಧ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಹೀಗಾಗಿ ಪ್ರತಿಭಟನೆ ನಿಯಂತ್ರಿಸಲು ಪುನೀತ್‌ ಕೆರೆಹಳ್ಳಿಯನ್ನು ಬಸವೇಶ್ವರನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Dog Meat Controversy: ಬೆಂಗಳೂರಿನಲ್ಲಿ ಸಿಕ್ಕಿರೋದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ: ಗೃಹ ಸಚಿವ ಪರಮೇಶ್ವರ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Krishna Byre Gowda: ರಾಜ್ಯಪಾಲರ ಅಧಿಕಾರ ದುರುಪಯೋಗಪಡಿಸಿಕೊಂಡರೆ ಕೋರ್ಟ್‌ಗೆ ಹೋಗುತ್ತೇವೆ: ಕೃಷ್ಣಭೈರೇಗೌಡ

Krishna Byre Gowda: ಬಿಜೆಪಿಯವರು ಇವತ್ತು ಹತಾಶರಾಗಿದ್ದಾರೆ. ಜೆಡಿಎಸ್‌ನವರು ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಜೆಡಿಎಸ್‌‌ನ ಒಬ್ಬರು, ಬಿಜೆಪಿಯ ಒಬ್ಬರು ದೆಹಲಿಯಲ್ಲಿ ಕುಳಿತುಕೊಂಡು ಕರ್ನಾಟಕಕ್ಕೆ ನ್ಯಾಯ ಕೊಡಿಸುವುದನ್ನು ಬಿಟ್ಟು ನಮ್ಮ ಸರ್ಕಾರ ಬೀಳಿಸಲು ಹೊಂಚು ಹಾಕುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

VISTARANEWS.COM


on

krishna byre gowda
Koo

ಹಾಸನ: ಕನ್ನಡಿಗರಿಂದ ಆಯ್ಕೆ ಆಗಿರುವ ಸರ್ಕಾರವನ್ನ ಬುಡಮೇಲು ಮಾಡಲು ಬಿಜೆಪಿ- ಜೆಡಿಎಸ್ (BJP- JDS) ಇಬ್ಬರೂ ಸೇರಿ ಏನಾದರೂ ಮಾಡಿ ಯತ್ನಿಸುತ್ತಿದ್ದಾರೆ. ಅದಕ್ಕಾಗಿ ರಾಜಭವನವನ್ನು (Rajbhavan) ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯಪಾಲರ (Governor) ಕಚೇರಿಯನ್ನು ದುರುಪಯೋಗಪಡಿಸಿಕೊಂಡು ನಮ್ಮ ಸರ್ಕಾರವನ್ನು ಬುಡಮೇಲು ಮಾಡಲು ಹೋದರೆ ನಾವು ಸುಪ್ರೀಂ ಕೋರ್ಟ್‌ಗೆ (Supreme Court) ಹೋಗಿ ಹೋರಾಟ ಮಾಡುತ್ತೇವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ (Revenue Minister Krishna Byre Gowda) ಎಚ್ಚರಿಸಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಲುವಿನಲ್ಲಿ ಭೂಕುಸಿತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಈ ಬಗ್ಗೆ ಮಾತನಾಡಿದರು. ಕೇಂದ್ರ ಸರಕಾರ ಹಾಗೂ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಅವರು ಕಿಡಿ ಕಾರಿದರು.

ಬಿಜೆಪಿ-ಜೆಡಿಎಸ್ ಇಬ್ಬರು ಸೇರಿ ಏನಾದರೂ ಮಾಡಿ ಕನ್ನಡಿಗರಿಂದ ಆಯ್ಕೆ ಆಗಿರುವ ಸರ್ಕಾರವನ್ನ ಬುಡಮೇಲು ಮಾಡಲು ಯತ್ನಿಸುತ್ತಿದ್ದಾರೆ. ಚುನಾಯಿತ ಸರ್ಕಾರವನ್ನು ಸಂವಿಧಾನ ವಿರುದ್ಧವಾಗಿ ಬುಡಮೇಲು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇಡಿ ಬಿಜೆಪಿಯ ಪೊಲಿಟಿಕಲ್ ವಿಂಗ್ ಆಗಿದೆ. ಇಡಿಯವರು ಬಂದು ತಪ್ಪು ಮಾಡಿರುವವರಿಗೆ ರಕ್ಷಣೆ ಕೊಡುತ್ತೇವೆ. ನೀವು ಸಿಎಂ ಮೇಲೆ ಹೇಳಿಕೆ ಕೊಡಿ ಅಂತಾರೆ. ತಪ್ಪು ಮಾಡಿರುವವರನ್ನು ರಕ್ಷಣೆ ಮಾಡಿ ಹಗರಣ ಮುಚ್ಚಿ ಹಾಕಿ ಸಿಎಂ ತಲೆಗೆ ಕಟ್ಟಬೇಕು ಎನ್ನುವುದು ಅವರ ಉದ್ದೇಶ ಎಂದು ಕೃಷ್ಣಭೈರೇಗೌಡ ಹೇಳಿದ್ದಾರೆ.

ಹಗರಣದ ಹಿಂದೆ ಇರುವವರನ್ನು ಪತ್ತೆ ಮಾಡಿ ಶಿಕ್ಷೆ ಕೊಡಲು ಅವರು ಬಂದಿಲ್ಲ. ಈ ಹಗರಣವನ್ನು ಉಪಯೋಗಿಸಿಕೊಂಡು ನಮ್ಮ ರಾಜ್ಯದಲ್ಲಿರುವ ಸರ್ಕಾರವನ್ನು ಬುಡಮೇಲು ಮಾಡಬೇಕು ಎನ್ನುವುದು ಅವರ ಉದ್ದೇಶ. ಬೇರೆ ರಾಜ್ಯಗಳಲ್ಲೂ ಇದೇ ರೀತಿ ಇಡಿ ಉಪಯೋಗಿಸಿಕೊಂಡು ಸರ್ಕಾರ ಅಸ್ಥಿರಗೊಳಿಸಿದ್ದಾರೆ. ಕರ್ನಾಟಕದಲ್ಲೂ ತನಿಖಾ ಸಂಸ್ಥೆಯನ್ನು ಉಪಯೋಗಿಸಿಕೊಂಡು ನಮ್ಮ ಸರ್ಕಾರವನ್ನು ಬುಡಮೇಲು ಮಾಡಲು ಕುತಂತ್ರದಿಂದ ಹೊರಟಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಚುನಾವಣೆ ಮುಗಿದ ಮೇಲೆ ಏನಾದರೂ ಮಾಡಿ ಸರ್ಕಾರ ಬೀಳಿಸಲು ಪ್ರಯತ್ನ ಮಾಡುತ್ತಿದ್ದಾರೆ. ಕಲ್ಲೇಶ್ ಎನ್ನುವ ಅಧಿಕಾರಿಗೆ ಸಿಎಂ ವಿರುದ್ಧ ಹೇಳಿಕೆ ಕೊಡು, ಕೊಡಲಿಲ್ಲ ಎಂದರೆ ಏಳು ವರ್ಷ ಜೈಲಿಗೆ ಹಾಕ್ತಿವಿ ಎಂದು ಹೆದರಿಸುತ್ತಿದ್ದಾರೆ. ನೀನು ಹೇಳಿಕೆ ಕೊಟ್ಟರೆ ನಾವೇ ರಕ್ಷಣೆ ಕೊಡುತ್ತೇವೆ ಎಂದು ಬಲವಂತದ ಮೇಲೆ ಹೇಳಿಕೆಗಳನ್ನು ಕೊಡಿಸುವ ಮೂಲಕ ಸರ್ಕಾರವನ್ನು ತಪ್ಪು ದಾರಿಗೆ ಎಳೆದು ಸರ್ಕಾರವನ್ನ ಬುಡಮೇಲು ಮಾಡಲು ಹೊರಟಿದ್ದಾರೆ. ಇಡಿ ಅಧಿಕಾರಿ ಮೇಲೆ ಎಫ್‌ಐಆರ್ ಕೂಡ ಆಗಿದೆ. ಅದನ್ನು ಅಲ್ಲಿಗೆ ಬಿಟ್ಟು ಈಗ ರಾಜಭವನವನ್ನು ದುರುಪಯೋಗ ಪಡಿಸಿಕೊಳ್ಳಲು ಹೊರಟಿದ್ದಾರೆ ಎಂದು ಅವರು ಟೀಕಿಸಿದರು.

ರಾಜ್ಯಪಾಲರಿಗೆ ಅರ್ಜಿಗಳನ್ನು ಕೊಟ್ಟು ರಾಜ್ಯಪಾಲರಿಂದ ಸರ್ಕಾರಕ್ಕೆ ಪತ್ರಗಳನ್ನು ಬರೆಸಿ ಏನಾದರೂ ಮಾಡಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿದ್ದಾರೆ. ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ಸರ್ಕಾರ ಬುಡಮೇಲು ಮಾಡಲು ಹೊರಟಿದ್ದಾರೆ. ನಮಗೂ ಸಂವಿಧಾನ ಇದೆ. ಈ ದೇಶದಲ್ಲಿ ಜನ ಸಂವಿಧಾನದ‌ ಪರವಾಗಿ ಮತ ಕೊಟ್ಟಿದ್ದಾರೆ. ಸಂವಿಧಾನದ ರಕ್ಷಣೆ ನಮಗೆ ಇದೆ ಎಂದವರು ಹೇಳಿದ್ದಾರೆ.

ರಾಜ್ಯಪಾಲರ ಕಚೇರಿಯನ್ನು ದುರುಪಯೋಗಪಡಿಸಿಕೊಂಡು ನಮ್ಮ ಸರ್ಕಾರವನ್ನು ಬುಡಮೇಲು ಮಾಡಲು ಹೋದರೆ ನಾವು ಕೋರ್ಟ್‌ಗೆ ಹೋಗಿ ಹೋರಾಟ ಮಾಡುತ್ತೇವೆ. ಹಲವು ರಾಜ್ಯಗಳಲ್ಲಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಷ್ಟೇ ಅಲ್ಲ ಪ್ರಜಾಪ್ರಭುತ್ವ ಉಳಿಸಲು ಬೀದಿಗಿಳಿದು ಹೋರಾಟ ಮಾಡುತ್ತೇವೆ. ಬಿಜೆಪಿಯವರು ಇವತ್ತು ಹತಾಶರಾಗಿದ್ದಾರೆ. ಜೆಡಿಎಸ್‌ನವರು ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಜೆಡಿಎಸ್‌‌ನ ಒಬ್ಬರು, ಬಿಜೆಪಿಯ ಒಬ್ಬರು ದೆಹಲಿಯಲ್ಲಿ ಕುಳಿತುಕೊಂಡು ಕರ್ನಾಟಕಕ್ಕೆ ನ್ಯಾಯ ಕೊಡಿಸುವುದನ್ನು ಬಿಟ್ಟು ನಮ್ಮ ಸರ್ಕಾರ ಬೀಳಿಸಲು ಹೊಂಚು ಹಾಕುತ್ತಿದ್ದಾರೆ. ಕೇಂದ್ರದಲ್ಲಿ ಮಂತ್ರಿಯಾಗಿರುವವರು ಮೇಕೆದಾಟು, ಕಳಸಾಬಂಡೂರಿ ಯೋಜನೆಗೆ ದುಡ್ಡು ಕೊಡಿಸುವುದು ಬಿಟ್ಟು ಅಲ್ಲಿ ಕುಳಿತುಕೊಂಡು ನಮ್ಮ ಸರ್ಕಾರ ಬೀಳಿಸುವುದು ಹೇಗೆಂದು ಸ್ಕೆಚ್ ಹಾಕುತ್ತಿದ್ದಾರೆ ಎಂದು ಅವರು ಟೀಕಿಸಿದರು.

ನಾವು ಕೈಕಟ್ಟಿ ಕುಳಿತು ಕೊಳ್ಳುವುದಿಲ್ಲ, ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ಎಲ್ಲಾ ಸವಾಲುಗಳನ್ನು ಎದುರಿಸಲು ತಯಾರಿದ್ದೇವೆ. ಅವರು ಏನು ಮಾಡ್ತಾರೆ ಮಾಡಲಿ. ಈಗ ಅವರವರಲ್ಲೇ ಜಗಳ ಶುರುವಾಗಿದೆ. ಪ್ರಜಾಪ್ರಭುತ್ವ ಉಳಿಯಬೇಕು ಅದಕ್ಕಾಗಿ ಬೀದಿ ಹೋರಾಟ ಹಾಗೂ ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ಈ ಸರ್ಕಾರ ಅಲ್ಲಾಡಿಸಬೇಕು ಎಂದು ಹಗಲುಗನಸು ಕಾಣುತ್ತಿದ್ದಾರೆ. ಇಡಿ ಆಯ್ತು, ಈಗ ರಾಜ್ಯಪಾಲರ ಕಚೇರಿ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಜನಗಳ ದೃಷ್ಟಿಯಲ್ಲಿ ಒಂದು ಕಲ್ಪನೆ ಕ್ರಿಯೇಟ್ ಮಾಡಲು ಎಲ್ಲಾ ಪಿತೂರಿ ಮಾಡುತ್ತಿದ್ದಾರೆ ಎಂದರು.

ನಾವು ಆಯೋಗ ರಚನೆ ಮಾಡಿದ್ದೇವೆ. ಅವರು ತನಿಖೆ ಮಾಡಲಿ. ಮೈಸೂರು ಮುಡಾದಲ್ಲಿ ಹೆಚ್ಚು ಸೈಟ್‌ಗಳನ್ನು ತೆಗೆದುಕೊಂಡಿರುವುದು ಬಿಜೆಪಿ, ಜೆಡಿಎಸ್‌ನವರು. ಸಾವಿರಾರು ಸೈಟ್‌ಗಳು, ಸಾವಿರಾರು ಬದಲಿ ಜಮೀನುಗಳನ್ನು ತೆಗೆದುಕೊಂಡಿದ್ದಾರೆ. ಅವರೇ ಮಾಡಬಾರದ್ದು ಮಾಡಿ ನಮ್ಮ ಕಡೆಗೆ ಬೆರಳು ತೋರಿಸುತ್ತಿದ್ದಾರೆ. ಅವರ ಉದ್ದೇಶ ಯಾವ ಹಗರಣವೂ ಅಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಕೊಡುವುದೂ ಅಲ್ಲ. ಅವರಿಗೆ ಅಧಿಕಾರದ ದಾಹ. ಬಡವರ ಪರವಾಗಿ ಇರುವ ಕಾಂಗ್ರೆಸ್ ಸರ್ಕಾರವನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಏನಾದರೂ ಮಾಡಿ ಬಡವರ ಪರ ಇರುವ ಸರ್ಕಾರವನ್ನು ಬುಡಮೇಲು ಮಾಡಲು ಯತ್ನ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ವಾಲ್ಮೀಕಿ ಹಗರಣ ಮುಚ್ಚಿ ಹಾಕಿದರು ಎಂದು ಯತ್ನಾಳ್ ಅವರು ಹೇಳಿದ್ದಾರೆ. ಇನ್ನೊಂದು ಕಡೆ ಪಾದಯಾತ್ರೆ ಬೇಕಾಗಿಲ್ಲ ಎಂದು ಜೆಡಿಎಸ್‌ನವರು ಹೇಳುತ್ತಿದ್ದಾರೆ. ಏಕೆಂದರೆ ಅವರೇ ಹೆಚ್ಚು ಫಲಾನುಭವಿಗಳು. ತನಿಖೆ ಮಾಡಿದರೆ ಹೆಚ್ಚು ಹೊರಗೆ ಬರುವುದು ಅವರದ್ದೇ. ತಪ್ಪಿತಸ್ಥರಿಗೆ ಶಿಕ್ಷೆ ಕೊಡಲು ನಮ್ಮ ಸರ್ಕಾರ ದೃಢವಾಗಿದೆ. ಆ ದಿಕ್ಕಿನಲ್ಲಿ ನಾವು ಕೆಲಸವನ್ನು ಮಾಡ್ತೇವೆ ಎಂದು ಅವರು ಹೇಳಿದರು.

ಇದನ್ನೂ ಓದಿ: Wayanad Landslide: ಭೂಕುಸಿತದ ಬಗ್ಗೆ ಒಂದು ವಾರ ಮೊದಲೇ ನೀಡಲಾಗಿತ್ತಾ ಎಚ್ಚರಿಕೆ? ಕೇಂದ್ರದ ಸೂಚನೆ ನಿರ್ಲಕ್ಷಿಸಿತ್ತಾ ಕೇರಳ ಸರ್ಕಾರ?

Continue Reading

ದೇಶ

Anurag Thakur: ಅನುರಾಗ್‌ ಠಾಕೂರ್‌ ‘ಜಾತಿ’ ಅಸ್ತ್ರಕ್ಕೆ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ ಪ್ರತ್ಯಸ್ತ್ರ!

Anurag Thakur: ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌ ಅವರು ರಾಹುಲ್‌ ಗಾಂಧಿ ವಿರುದ್ಧ ಜಾತಿ ಅಸ್ತ್ರ ಪ್ರಯೋಗಿಸಿದ್ದಾರೆ. ಅವರ ಭಾಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ, ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್‌ ಹಕ್ಕುಚ್ಯುತಿ ಮಂಡಿಸಿದೆ.

VISTARANEWS.COM


on

Anurag Thakur
Koo

ನವದೆಹಲಿ: ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌ (Anurag Thakur) ಅವರು ರಾಹುಲ್‌ ಗಾಂಧಿ (Rahul Gandhi) ಅವರಿಗೆ ತಮ್ಮ ಜಾತಿ ಎಂಬುದೇ ಗೊತ್ತಿಲ್ಲ ಎಂಬುದಾಗಿ ಲೋಕಸಭೆಯಲ್ಲಿ ನೀಡಿದ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ಅನುರಾಗ್‌ ಠಾಕೂರ್‌ ವಿರುದ್ಧ ಪ್ರತಿಪಕ್ಷಗಳ ನಾಯಕರು ಮುಗಿಬಿದ್ದಿದ್ದಾರೆ. ಇದರ ಬೆನ್ನಲ್ಲೇ, ಕಾಂಗ್ರೆಸ್‌ ಸಂಸದ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರು ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ವಿರುದ್ಧ ಹಕ್ಕುಚ್ಯುತಿ (Privilege Motion) ಮಂಡಿಸಿದ್ದಾರೆ. ಸದನದಲ್ಲಿ ಕಾಂಗ್ರೆಸ್‌ ಸಂಸದರೂ ಆಗಿರುವ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಗೆ ಅವಮಾನ ಮಾಡಲಾಗಿದೆ ಎಂದು ಚರಣ್‌ಜಿತ್‌ ಸಿಂಗ್‌ ಚನ್ನಿ ಅವರು ಹಕ್ಕುಚ್ಯುತಿ ಮಂಡಿಸಿದ್ದಾರೆ.

ನರೇಂದ್ರ ಮೋದಿ ಅವರು ಅನುರಾಗ್‌ ಠಾಕೂರ್‌ ಅವರು ಸಂಸತ್‌ನಲ್ಲಿ ಮಾಡಿದ ಭಾಷಣಕ್ಕೆ ಮೆಚ್ಚುಗೆ ಸೂಚಿಸಿದ್ದರು. ಇಂಡಿಯಾ ಒಕ್ಕೂಟದ ಮುಖವಾಡವನ್ನು ಅನುರಾಗ್‌ ಠಾಕೂರ್‌ ಅವರು ಹೇಗೆ ಬಯಲಿಗೆಳೆದಿದ್ದಾರೆ ನೋಡಿ ಎಂದು ಕರೆ ನೀಡಿದ್ದ ಮೋದಿ, ಅನುರಾಗ್‌ ಠಾಕೂರ್‌ ಅವರ ಭಾಷಣದ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಹಾಗಾಗಿ, ಪ್ರಧಾನಿ ವಿರುದ್ಧ ಕಾಂಗ್ರೆಸ್‌ ಹಕ್ಕುಚ್ಯುತಿ ಮಂಡಿಸಿದೆ.

ಹಕ್ಕುಚ್ಯುತಿ ಎಂದರೇನು?

ದೇಶದ ಸಂಸದರು, ರಾಜ್ಯಸಭೆ ಸದಸ್ಯರು, ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರ ಹಕ್ಕುಗಳಿಗೆ ಧಕ್ಕೆಯುಂಟಾದಾಗ ಮಂಡಿಸುವ ವಿಶೇಷ ಅಧಿಕಾರವೇ ಹಕ್ಕುಚ್ಯುತಿಯಾಗಿದೆ. ಇದನ್ನು ವೈಯಕ್ತಿಕವಾಗಿ ಅಥವಾ ಸಾಮೂಹಿಕವಾಗಿ ಬಳಸಬಹುದಾಗಿದೆ. ಹಕ್ಕುಚ್ಯುತಿ ಮಂಡಿಸಿದ ಬಳಿಕ ಅದು ಸಾಬೀತಾದರೆ ಸಂಸತ್ತು ಹಾಗೂ ಶಾಸನಸಭೆಯ ಕಾನೂನಿನ ಅನ್ವಯ ಕ್ರಮ ತೆಗೆದುಕೊಳ್ಳುವ ಅವಕಾಶವಿದೆ.

ಅನುರಾಗ್‌ ಠಾಕೂರ್‌ ಹೇಳಿದ್ದೇನು?

ಸಂಸತ್‌ನಲ್ಲಿ ಮಾತನಾಡಿದ ಅನುರಾಗ್‌ ಠಾಕೂರ್‌, “ದೇಶದಲ್ಲಿ ಜಾತಿಗಣತಿ ಬಗ್ಗೆ ತುಂಬ ಮಾತನಾಡುತ್ತಾರೆ. ಜಾತಿಗಣತಿಯನ್ನು ಲೋಕಸಭೆಯಲ್ಲಿ ಮಂಡಿಸುತ್ತೇವೆ ಎನ್ನುತ್ತಾರೆ. ಆದರೆ, ಜಾತಿಗಣತಿ ಬಗ್ಗೆ ಮಾತನಾಡುವವರಿಗೇ ತಮ್ಮ ಜಾತಿ ಯಾವುದು ಎಂದು ಗೊತ್ತಿಲ್ಲ” ಎಂಬುದಾಗಿ ಅನುರಾಗ್‌ ಠಾಕೂರ್‌ ಟೀಕಿಸಿದ್ದರು. ಇದಕ್ಕೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ ಅವರು ತಿರುಗೇಟು ನೀಡಿದ್ದರು. “ಬೇರೆಯವರ ಜಾತಿಯನ್ನು ಕೇಳುವುದು ಎಷ್ಟು ಸರಿ” ಎಂದು ಹೇಳಿದ್ದರು.

ಅನುರಾಗ್‌ ಠಾಕೂರ್‌ ಹೇಳಿಕೆಗೆ ರಾಹುಲ್‌ ಗಾಂಧಿ ಪ್ರತ್ಯುತ್ತರ ನೀಡಿದರು. “ನೀವು ನನ್ನನ್ನು ಎಷ್ಟು ಅವಮಾನಿಸುತ್ತೀರೋ ಅವಮಾನಿಸಿ. ಆದರೆ, ನಾವು ಸಂಸತ್‌ನಲ್ಲಿ ಜಾತಿಗಣತಿ ವಿಧೇಯಕ ಮಂಡಿಸುತ್ತೇವೆ ಎಂಬುದನ್ನು ನೀವು ಮರೆಯದಿರಿ” ಎಂದರು. “ಅನುರಾಗ್‌ ಠಾಕೂರ್‌ ಅವರು ನನ್ನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ನನ್ನನ್ನು ಅವಮಾನಿಸಿದ್ದಾರೆ. ಆದರೆ, ನಾನು ಅವರು ಕ್ಷಮೆ ಕೇಳಿ ಎಂಬುದಾಗಿ ಆಗ್ರಹಿಸುವುದಿಲ್ಲ. ಎಷ್ಟು ಬೇಕಾದರೂ ಅವಮಾನ ಮಾಡಲಿ” ಎಂದ್ದಿದ್ದರು.

ಸಂಸತ್‌ನಲ್ಲಿ ಸೋಮವಾರ (ಜುಲೈ 29) ರಾಹುಲ್‌ ಗಾಂಧಿ ಅವರು ಕೇಂದ್ರದ ವಿರುದ್ಧ ಹರಿಹಾಯ್ದಿದ್ದರು. ದೇಶದ ಜನರ ಸುತ್ತ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹೆಣೆದ ಚಕ್ರವ್ಯೂಹವನ್ನು ನಾವು ಭೇದಿಸುತ್ತೇವೆ. ಚಕ್ರವ್ಯೂಹವನ್ನು ನಮಗೆ ಭೇದಿಸುವುದು ಗೊತ್ತಿದೆ. ಯಾವ ಜಾತಿಗಣತಿ ಎಂದರೆ ನೀವು (ಬಿಜೆಪಿ) ಹೆದರುತ್ತೀರೋ, ಅದೇ ಜಾತಿಗಣತಿಯನ್ನು ಇದೇ ಸದನದಲ್ಲಿ ನಾವು ಮಂಡಿಸುತ್ತೇವೆ. ನಿಮಗೆ ಇಷ್ಟ ಇದೆಯೋ ಇಲ್ಲವೋ, ನಾವು ಇದೇ ಸದನದಲ್ಲಿ ಜಾತಿಗಣತಿಯನ್ನು ಮಂಡಿಸುತ್ತೇವೆ. ದೇಶದ ಜನ ಅರ್ಜುನನ ರೀತಿ ಚಕ್ರವ್ಯೂಹವನ್ನು ಭೇದಿಸಲಿದ್ದಾರೆ ಎಂದು ರಾಹುಲ್‌ ಗಾಂಧಿ ಹೇಳಿದರು.

ಇದನ್ನೂ ಓದಿ: Anurag Thakur: ಇಂಡಿಯಾ ಕೂಟದ ಕೊಳಕು ರಾಜಕಾರಣ ತೆರೆದಿಟ್ಟ ಅನುರಾಗ್ ಠಾಕೂರ್; ಈ ವಿಡಿಯೊ ತಪ್ಪದೇ ನೋಡಿ ಎಂದ ಮೋದಿ!

Continue Reading

ಕ್ರೀಡೆ

Paris Olympic: ಪ್ರೀ ಕ್ವಾರ್ಟರ್​ಗೆ ಲಗ್ಗೆಯಿಟ್ಟ ಲಕ್ಷ್ಯ ಸೇನ್; ಜೊನಾಥನ್​ ಕ್ರಿಸ್ಟಿಗೆ ಆಘಾತಕಾರಿ ಸೋಲು

Paris Olympic: ಲಕ್ಷ್ಯ ಸೇನ್ ಅವರು ನಾಕೌಟ್​ ಹಂತಕ್ಕೇರುವ ಮೂಲಕ 2016ರ ರಿಯೊ ಗೇಮ್ಸ್‌ನ ಕಿಡಂಬಿ ಶ್ರೀಕಾಂತ್ ಬಳಿಕ ಒಲಿಂಪಿಕ್ಸ್‌ನಲ್ಲಿ ನಾಕೌಟ್ ಹಂತಕ್ಕೆ ಪ್ರವೇಶಿಸಿದ ಮೊದಲ ಭಾರತೀಯ ಪುರುಷ ಸಿಂಗಲ್ಸ್ ಶಟ್ಲರ್​ ಎನಿಸಿಕೊಂಡರು.

VISTARANEWS.COM


on

Paris Olympic
Koo

ಪ್ಯಾರಿಸ್​: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(Paris Olympic) ಲಕ್ಷ್ಯ ಸೇನ್(Lakshya Sen) ಅವರ ಗೆಲುವಿನ ಓಟ ಮುಂದುವರಿದಿದೆ. ಬುಧವಾರ ನಡೆದ ‘ಎಲ್’​ ಗುಂಪಿನ ಪುರುಷರ ಸಿಂಗಲ್ಸ್​ ವಿಭಾಗದ ಅಂತಿಮ ಪಂದ್ಯದಲ್ಲಿ ವಿಶ್ವ ನಂ.3 ಇಂಡೋನೇಷ್ಯಾದ ಜೊನಾಥನ್​ ಕ್ರಿಸ್ಟಿ(Jonatan Christie) ವಿರುದ್ಧ ​21-18, 21-12 ನೇರ ಗೇಮ್​ಗಳಿಂದ ಗೆದ್ದು ಪ್ರೀ ಕ್ವಾರ್ಟರ್​ ಫೈನಲ್​ ಹಂತಕ್ಕೆ ಪ್ರವೇಶಿಸಿದ್ದಾರೆ. ಇದೇ ವೇಳೆ ಲಕ್ಷ್ಯ ಸೇನ್​ 8 ವರ್ಷಗಳ ನಂತರ ಒಲಿಂಪಿಕ್ಸ್ ನಾಕೌಟ್‌ಗೆ ಅರ್ಹತೆ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

22 ವರ್ಷದ ಲಕ್ಷ್ಯ ಸೇನ್ ಮೊದಲ ಗೇಮ್​ನಲ್ಲಿ 2-8 ಅಂಕಗಳ ಹಿನ್ನಡೆ ಸಾಧಿಸಿದರೂ ಕೂಡ ತಕ್ಷಣ ಎಚ್ಚೆತ್ತುಕೊಂಡು ತೀವ್ರ ಹೋರಾಟ ನಡೆಸಿ ಮುನ್ನಡೆ ಕಾಯ್ದುಕೊಂಡು ಅಂತಿಮವಾಗಿ 21-18 ಅಂಕಗಳ ಅಂತರದಿಂದ ಗೆಲುವು ತನ್ನದಾಗಿಸಿಕೊಂಡರು. ದ್ವಿತೀಯ ಗೇಮ್​ನಲ್ಲಿ ಆರಂಭದಿಂದಲೇ ಆಕ್ರಮಣಕಾರಿ ಆಟವಾಡಿದ ಸೇನ್​ ಎದುರಾಳಿಗೆ ಚೇರಿಸಿಕೊಳ್ಳಲು ಕೂಡ ಸಮಯ ನೀಡಲಿಲ್ಲ. ಸತತವಾಗಿ ಅಂಕ ಗಳಿಸುತ್ತಲೇ ಸಾಗಿ ಮೇಲುಗೈ ಸಾಧಿಸಿ ನೇರ ಗೇಮ್​ಗಳ ಅಂತರದಿಂದ ಪಂದ್ಯವನ್ನು ಗೆದ್ದು ಬೀಗಿದರು. ಹಾಲಿ ಆಲ್-ಇಂಗ್ಲೆಂಡ್ ಚಾಂಪಿಯನ್ ಕ್ರಿಸ್ಟಿ ಆಘಾತಕಾರಿ ಸೋಲುಂಡರು.

ಇದನ್ನೂ ಓದಿ Paris Olympics: ಫೈನಲ್​ ಪ್ರವೇಶಿಸಿದ ಸ್ವಪ್ನಿಲ್‌ ಕುಸಾಲೆ; 16ರ ಸುತ್ತಿಗೇರಿದ ಸಿಂಧು

8 ವರ್ಷದ ಬಳಿಕ ನಾಕೌಟ್ ಪ್ರವೇಶ


ಲಕ್ಷ್ಯ ಸೇನ್ ಅವರು ನಾಕೌಟ್​ ಹಂತಕ್ಕೇರುವ ಮೂಲಕ 2016ರ ರಿಯೊ ಗೇಮ್ಸ್‌ನ ಕಿಡಂಬಿ ಶ್ರೀಕಾಂತ್ ಬಳಿಕ ಒಲಿಂಪಿಕ್ಸ್‌ನಲ್ಲಿ ನಾಕೌಟ್ ಹಂತಕ್ಕೆ ಪ್ರವೇಶಿಸಿದ ಮೊದಲ ಭಾರತೀಯ ಪುರುಷ ಸಿಂಗಲ್ಸ್ ಶಟ್ಲರ್​ ಎನಿಸಿಕೊಂಡರು. ಟೋಕಿಯೊದಲ್ಲಿ ಪುರುಷರ ಸಿಂಗಲ್ಸ್‌ನಲ್ಲಿ ಏಕೈಕ ಸ್ಪರ್ಧಿಯಾಗಿದ್ದ ಸಾಯಿ ಪ್ರಣೀತ್ ಗುಂಪು ಹಂತದಲ್ಲೇ ಸೋಲು ಕಂಡು ನಿರ್ಗಮಿಸಿದ್ದರು.

ಕ್ರಿಸ್ಟಿ ವಿರುದ್ಧ ಸೇನ್​ ಇದುವರೆಗೆ ಆಡಿದ್ದ 5 ಪಂದ್ಯಗಳಲ್ಲಿ 4ರಲ್ಲಿ ಸೋಲು ಕಂಡಿದ್ದರು. ಒಂದು ಪಂದ್ಯ ಮಾತ್ರ ಗೆದ್ದಿದ್ದರು. ಈ ವರ್ಷದ ಆರಂಭದಲ್ಲಿ ನಡೆದಿದ್ದ ಆಲ್ ಇಂಗ್ಲೆಂಡ್ ಓಪನ್‌ನ ಸೆಮಿಫೈನಲ್ ಸೇರಿದಂತೆ ಇಂಡೋನೇಷ್ಯಾದ ಎರಡು ಕೂಟಗಳಲ್ಲಿಯೂ ಲಕ್ಷ್ಯ ಕ್ರಿಸ್ಟಿ ವಿರುದ್ಧ ಸೋಲು ಕಂಡಿದ್ದರು. ಈ ಎಲ್ಲ ಸೋಲಿನ ಸೇಡನ್ನು ಇದೀಗ ಪ್ರತಿಷ್ಠಿತ ಒಲಿಂಪಿಕ್ಸ್​ ಟೂರ್ನಿಯಲ್ಲಿ ಸೇನ್​ ತೀರಿಸಿಕೊಂಡಿದ್ದಾರೆ. ಜತೆಗೆ ಭಾರತಕ್ಕೆ ಪದಕ ಭರವಸೆಯನ್ನು ಮೂಡಿಸಿದ್ದಾರೆ.

ಸಿಂಧುಗೆ ಭರ್ಜರಿ ಗೆಲುವು


ಇದಕ್ಕೂ ಮುನ್ನ ನಡೆದಿದ್ದ ಮಹಿಳಾ ಬ್ಯಾಡ್ಮಿಂಟನ್​ ಸಿಂಗಲ್ಸ್​ ವಿಭಾಗದ ‘ಎಂ’ ಗುಂಪಿನ ಪಂದ್ಯದಲ್ಲಿ ಅವಳಿ ಒಲಿಂಪಿಕ್ಸ್​ ಪದಕ ವಿಜೇತೆ, ಬ್ಯಾಡ್ಮಿಂಟನ್​ ಆಟಗಾರ್ತಿ ಪಿ.ವಿ ಸಿಂಧು(PV Sindhu) ಕೂಡ ಗೆಲುವು ಸಾಧಿಸಿ 16ನೇ ಸುತ್ತಿಗೆ ಪ್ರವೇಶ ಪಡೆದಿದ್ದರು.

73ನೇ ಶ್ರೇಯಾಂಕದ ಎಸ್ಟೋನಿಯಾದ ಕ್ರಿಸ್ಟಿನ್ ಕುಬಾ ವಿರುದ್ಧ 21-5, 21-10 ಸುಲಭ ಜಯ ಸಾಧಿಸಿ 16ರ(ಪ್ರೀ ಕ್ವಾರ್ಟರ್​) ಸುತ್ತಿಗೇರಿದ್ದಾರೆ. ಸಿಂಧು ಅವರ ಬಲಿಷ್ಠ ಹೊಡೆತಗಳ ಮುಂದೆ ಕ್ರಿಸ್ಟಿನ್ ಕುಬಾ ಸಂಪೂರ್ಣ ಮಂಕಾದರು. ಮೊದಲ ಗೇಮ್​ನಲ್ಲಿ ಕೇವಲ 5 ಅಂಕಕ್ಕೆ ಸೀಮಿತರಾದರು. ಈ ಪಂದ್ಯ ಕೇವಲ 34 ನಿಮಿಷಗಳಲ್ಲಿ ಅಂತ್ಯ ಕಂಡಿತ್ತು.

Continue Reading

ಕರ್ನಾಟಕ

DK Shivakumar: ಪ್ರಧಾನಿ ಮೋದಿ ಭೇಟಿಯಾದ ಡಿಕೆಶಿ; ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲು ಬೇಡಿಕೆ

DK Shivakumar: ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕದ ಪಾಲಿಗೆ ಅನುದಾನವೇ ಬಂದಿಲ್ಲ. ಅದರಲ್ಲೂ ನೀರಾವರಿಗೆ ಕೊಂಚವೂ ಅನುದಾನ ಬಂದಿಲ್ಲದ ಕಾರಣ, ಪ್ರಧಾನಿಗಳ ಗಮನಕ್ಕೆ ತರುವ ಸಲುವಾಗಿ ಭೇಟಿ ಮಾಡಲಾಗಿತ್ತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

DK Shivakumar
Koo

ನವ ದೆಹಲಿ: ಗಿಫ್ಟ್ ಸಿಟಿ ಮಾದರಿಯಲ್ಲಿ ಬೆಂಗಳೂರನ್ನು ಪರಿಗಣಿಸಬೇಕು ಎಂದು ಮನವಿ ಮಾಡಲಾಗಿತ್ತು. ಇದು ಸಾಧ್ಯವಾಗದ ಕಾರಣಕ್ಕೆ ಸುರಂಗ ರಸ್ತೆ, ಸಿಗ್ನಲ್ ಮುಕ್ತ ರಸ್ತೆ, ಪ್ರಮುಖ ರಸ್ತೆಗಳು ಮತ್ತು ಮಳೆ ನೀರುಗಾಲುವೆಗಳ ಅಭಿವೃದ್ಧಿ ಹಾಗೂ ನೀರಾವರಿಗೆ ಹೆಚ್ಚಿನ ಅನುದಾನ ನೀಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಬಳಿಕ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಅತಿ ಹೆಚ್ಚು ತೆರಿಗೆ ನೀಡುವ ನಗರವಾಗಿದೆ. ಈ ನಗರಕ್ಕೆ ಬಜೆಟ್‌ನಲ್ಲಿ ಏನೂ ದೊರೆತಿಲ್ಲ. ಮಹಾರಾಷ್ಟ್ರದಂತೆ ನಮ್ಮನ್ನು ಪರಿಗಣಿಸಬೇಕು. ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಜೆಎನ್ ನರ್ಮ್ ಯೋಜನೆ ಅಡಿ ಎಲೆಕ್ಟ್ರಾನಿಕ್ಸ್ ಸಿಟಿ, ಹೆಬ್ಬಾಳ, ನೆಲಮಂಗಲ ಮೇಲ್ಸೇತುವೆ ನಿರ್ಮಾಣಕ್ಕೆ ಅನುದಾನ ನೀಡಲಾಗಿತ್ತು ಎಂದರು.

ದೇಶಕ್ಕೆ ಒಂದೇ ಗಿಫ್ಟ್ ಸಿಟಿ ಮಾಡಲು ಸಾಧ್ಯ. ಎರಡು ಪ್ರದೇಶಗಳನ್ನು ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ತಿಳಿದರು. ರಾಜ್ಯ ರಾಜಧಾನಿಯಲ್ಲಿ ನೂತನವಾಗಿ ಒಂದಷ್ಟು ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ಯೋಜನೆ ರೂಪಿಸುತ್ತಿದೆ. ಆದ ಕಾರಣ ಈ ಯೋಜನೆಗಳಿಗೂ ಕೇಂದ್ರ ಸರ್ಕಾರ ನೇರವಾಗಬೇಕು ಎಂದು ಕೇಳಲಾಗಿದೆ. ಬೆಂಗಳೂರಿಗೆ ಹೊರಗಿನಿಂದ ಹೆಚ್ಚಿನ ಜನ ಬರುತ್ತಿದ್ದಾರೆ. ಜೊತೆಗೆ ನಗರದ ಮೂಲಸೌರ್ಕಯಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ಕೊಡಬೇಕಿದೆ, ಇದಕ್ಕೆ ಅನುದಾನದ ಅವಶ್ಯಕತೆಯಿದೆ ಎಂದು ಪ್ರಧಾನಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ | Wayanad Landslide: ವಯನಾಡು ಭೂಕುಸಿತ; ಮೃತ ಕನ್ನಡಿಗರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಭದ್ರಾ ಮೇಲ್ದಂಡೆ ಯೋಜನೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ

ಕಳೆದ ಬಜೆಟ್ ವೇಳೆ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿತ್ತು. ಈ ಬಾರಿಯ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಮಳೆ ವಿಚಾರ, ತಮಿಳುನಾಡಿಗೆ 40 ಟಿಎಂಸಿ ನೀರು ಬಿಡಬೇಕಿತ್ತು 84 ಟಿಎಂಸಿಗಿಂತ ಹೆಚ್ಚು ನೀರು ಬಿಡಲಾಗಿದೆ ಎಂದು ತಿಳಿಸಿದೆವು. ಒಂದು ಸಭೆ ನಡೆಸಿ ಮಹದಾಯಿ ಯೋಜನೆ ಸಮಸ್ಯೆ ಬಗೆಹರಿಸಬಹುದು ಎಂದು ಅವರ ಗಮನಕ್ಕೆ ತಂದೆವು. ಮೇಕೆದಾಟು ವಿಚಾರವಾಗಿ ನೀವುಗಳೇ ಸಮಸ್ಯೆಗಳನ್ನು ಬಗೆಹರಿಸಿಕೊಂಡರೆ ಉತ್ತಮ ಎಂದು ಸಲಹೆ ನೀಡಿದರು. ಈ ವಿಚಾರದಲ್ಲಿ ಕೇಂದ್ರ ಮಧ್ಯಸ್ಥಿಕೆ ವಹಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ” ಎಂದು ಹೇಳಿದರು.

ಈ ಬಾರಿಯ ಬಜೆಟ್ ಅಲ್ಲಿ ಕರ್ನಾಟಕದ ಪಾಲಿಗೆ ಅನುದಾನವೇ ಬಂದಿಲ್ಲ. ಅದರಲ್ಲೂ ನೀರಾವರಿಗೆ ಕೊಂಚವೂ ಅನುದಾನ ಬಂದಿಲ್ಲದ ಕಾರಣ ಇವುಗಳನ್ನು ಪ್ರಧಾನಿಗಳ ಗಮನಕ್ಕೆ ತರುವ ಸಲುವಾಗಿ ಭೇಟಿ ಮಾಡಲಾಯಿತು” ಎಂದು ತಿಳಿಸಿದರು.

“ಉತ್ತಮವಾಗಿ ಮಳೆ ಬಂದು ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಯುತ್ತಿರುವ ವಿಚಾರ ಕೇಂದ್ರ ಜಲಶಕ್ತಿ ಸಚಿವರ ಗಮನಕ್ಕೆ ಬಂದಿದೆ. ನಾವು ಸಹ ವಾಸ್ತವಾಂಶವನ್ನು ಸಚಿವರಿಗೆ ಅರ್ಥ ಮಾಡಿಸುತ್ತೇವೆ” ಎಂದು ತಿಳಿಸಿದರು.

ತಮಿಳುನಾಡಿಗೆ ಇತಿಹಾಸದಲ್ಲೇ ಹೆಚ್ಚಿನ ನೀರು ಬಿಡುಗಡೆ

2 ಲಕ್ಷದ 25 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಮಂಗಳವಾರದ ತನಕ ಹರಿಸಲಾಗಿದೆ. ಮೊದಲ ಬಾರಿಗೆ ಇಷ್ಟು ಪ್ರಮಾಣದ ನೀರನ್ನು ಹರಿಸಲಾಗಿದೆ. ಮಳೆ ಸ್ವಲ್ಪ ತಗ್ಗಿದ ಕಾರಣಕ್ಕೆ ಒಂದು ಮುಕ್ಕಾಲು ಲಕ್ಷ ಕ್ಯೂಸೆಕ್ ನೀರನ್ನು ಹರಿಸುತ್ತಿದ್ದೇವೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೇರಳದಲ್ಲೂ ಉತ್ತಮ ಮಳೆಯಾಗುತ್ತಿರುವ ಕಾರಣಕ್ಕೆ ಕಬಿನಿ ಹಾಗೂ ಕೆಆರ್‌ಎಸ್ ಅಣೆಕಟ್ಟೆಯಲ್ಲಿ ನೀರನ್ನು ಸಂಗ್ರಹ ಮಾಡದೆ ಬಿಡಲಾಗುತ್ತಿದೆ. ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು, ನದಿ ಹತ್ತಿರ ಹೋಗಬಾರದು. ಎಚ್ಚರಿಕೆಯಿಂದ ಇರಬೇಕು ಎಂದು ಜನರಲ್ಲಿ ಮನವಿ ಮಾಡಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ | Wayanad Landslide: ವೈನಾಡ್‌ ಭೂಕುಸಿತ ಪರಿಣಾಮ ಕರ್ನಾಟಕ- ಕೇರಳ ರಸ್ತೆ ಸಂಪರ್ಕ ಕಡಿತ, ಬಸ್‌ ಸಂಚಾರ ಸ್ಥಗಿತ

ಮುಡಾ ಪಾದಯಾತ್ರೆ; ನಾವು ತಯಾರಿ ಮಾಡಿಕೊಂಡಿದ್ದೇವೆ

ಮುಡಾ ಅಕ್ರಮ ವಿಚಾರವಾಗಿ ಬಿಜೆಪಿ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ನೀಡುವುದಿಲ್ಲ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಈ ವಿಚಾರ ನನಗೆ ತಿಳಿದಿಲ್ಲ. ಇದಕ್ಕೆ ನಾವು ಏನು ಸಿದ್ಧತೆ ಮಾಡಿಕೊಳ್ಳಬೇಕೊ ಅದನ್ನು ಮಾಡಿಕೊಂಡಿದ್ದೇವೆ. ಈ ವಿಷಯದ ಬಗ್ಗೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಮಾಡಿ ಮಾತನಾಡುತ್ತೇನೆ” ಎಂದರು.

Continue Reading
Advertisement
krishna byre gowda
ಪ್ರಮುಖ ಸುದ್ದಿ11 mins ago

Krishna Byre Gowda: ರಾಜ್ಯಪಾಲರ ಅಧಿಕಾರ ದುರುಪಯೋಗಪಡಿಸಿಕೊಂಡರೆ ಕೋರ್ಟ್‌ಗೆ ಹೋಗುತ್ತೇವೆ: ಕೃಷ್ಣಭೈರೇಗೌಡ

Money Guide
ಮನಿ-ಗೈಡ್16 mins ago

Money Guide: PPF v/s NPS Vatsalya ನಿಮ್ಮ ಮಕ್ಕಳಿಗೆ ಯಾವುದು ಉತ್ತಮ ಯೋಜನೆ? ಇಲ್ಲಿದೆ ವಿವರ

Vinay Guruji met by master anand brother
ಸ್ಯಾಂಡಲ್ ವುಡ್18 mins ago

Vinay Guruji: ಬೈಕೊಂಡು ವಿನಯ್ ಗುರೂಜಿ ಆಶ್ರಮಕ್ಕೆ ಹೋಗಿದ್ದೆ ಆದರೆ ನನ್ನ ಅಷ್ಟೂ ಜಾತಕ ಬಿಚ್ಚಿಟ್ರು ಎಂದ ಮಾಸ್ಟರ್ ಆನಂದ್ ಸಹೋದರ!

Anurag Thakur
ದೇಶ23 mins ago

Anurag Thakur: ಅನುರಾಗ್‌ ಠಾಕೂರ್‌ ‘ಜಾತಿ’ ಅಸ್ತ್ರಕ್ಕೆ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ ಪ್ರತ್ಯಸ್ತ್ರ!

Viral Video
Latest24 mins ago

Viral Video: ಮಹಿಳೆಯ ಎದೆ, ಕುತ್ತಿಗೆಗೆ ಭೀಕರವಾಗಿ ತಿವಿದ ಬೀದಿ ಹಸು; ಮೈ ನಡುಗಿಸುವ ವಿಡಿಯೊ

Paris Olympic
ಕ್ರೀಡೆ25 mins ago

Paris Olympic: ಪ್ರೀ ಕ್ವಾರ್ಟರ್​ಗೆ ಲಗ್ಗೆಯಿಟ್ಟ ಲಕ್ಷ್ಯ ಸೇನ್; ಜೊನಾಥನ್​ ಕ್ರಿಸ್ಟಿಗೆ ಆಘಾತಕಾರಿ ಸೋಲು

Wayanad Landslide
ದೇಶ28 mins ago

Wayanad Landslide: ಭೂಕುಸಿತದ ಬಗ್ಗೆ ಒಂದು ವಾರ ಮೊದಲೇ ನೀಡಲಾಗಿತ್ತಾ ಎಚ್ಚರಿಕೆ? ಕೇಂದ್ರದ ಸೂಚನೆ ನಿರ್ಲಕ್ಷಿಸಿತ್ತಾ ಕೇರಳ ಸರ್ಕಾರ?

DK Shivakumar
ಕರ್ನಾಟಕ33 mins ago

DK Shivakumar: ಪ್ರಧಾನಿ ಮೋದಿ ಭೇಟಿಯಾದ ಡಿಕೆಶಿ; ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲು ಬೇಡಿಕೆ

Viral Video
Latest35 mins ago

Viral Video: ಕೆಸರು ಗದ್ದೆಯಲ್ಲಿ ಹೊರಳಾಡಿದ ದಂಪತಿ; ವೈರಲ್ ಆಯ್ತು ಇವರಿಬ್ಬರ ನಾಗಿನಿ ಡ್ಯಾನ್ಸ್‌!

Actor Chiranjeevi gets flak for ‘rudely’ pushing IndiGo employee
ಟಾಲಿವುಡ್58 mins ago

Actor Chiranjeevi: ಸೆಲ್ಫಿ ತೆಗೆದುಕೊಳ್ಳಲು ಬಂದ ಇಂಡಿಗೋ ವಿಮಾನ ಸಿಬ್ಬಂದಿಯನ್ನು ತಳ್ಳಿದ ನಟ ಚಿರಂಜೀವಿ; ನೆಟ್ಟಿಗರಿಂದ ತರಾಟೆ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ22 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 day ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌