Dr HS Shetty: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನಿಂದ ಜುಲೈ 6ರಂದು 41 ಸಾವಿರ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ - Vistara News

ಪ್ರಮುಖ ಸುದ್ದಿ

Dr HS Shetty: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನಿಂದ ಜುಲೈ 6ರಂದು 41 ಸಾವಿರ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ

Dr HS Shetty: ಜುಲೈ 6ರಂದು ಬೈಂದೂರು ತಾಲೂಕಿನಲ್ಲಿ ಸಾಗುವ ರಾಷ್ಟ್ರೀಯ ಹೆದ್ದಾರಿ 66 ರ ಬಳಿಯಿರುವ ಜೆ.ಎನ್.ಆ‌ರ್. ಸಭಾ೦ಗಣದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಸಮೃದ್ಧ ಜನಸೇವಾ ಚಾರಿಟೇಬಲ್‌ ಟ್ರಸ್ಟ್ (ರಿ) ಬೈ೦ದೂರು ಹಾಗೂ ಉಡುಪಿ ಜಿಲ್ಲೆಯು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇಲಾಖೆ ಸಹಕಾರದೊಂದಿಗೆ ಈ ಬೃಹತ್​ ಸಮಾರಂಭವನ್ನು ಆಯೋಜಿಸಲಾಗಿದೆ.

VISTARANEWS.COM


on

Dr HS Shetty
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ನೋಂದಾಯಿತ) ಬೆಂಗಳೂರು ವತಿಯಿಂದ ಉಡುಪಿ ಜಿಲ್ಲೆಯ 350 ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಉಚಿತ 41,000 ಜೊತೆ ಶಾಲಾ ಸಮವಸ್ತ್ರಗಳ ವಿತರಣೆ ಕಾರ್ಯಕ್ರಮ ಆಯೋಜನೆಗೊಂಡಿದೆ. ಜುಲೈ 6ರಂದು ಬೈಂದೂರು ತಾಲೂಕಿನಲ್ಲಿ ಸಾಗುವ ರಾಷ್ಟ್ರೀಯ ಹೆದ್ದಾರಿ 66ರ ಬಳಿಯ ಜೆ.ಎನ್.ಆ‌ರ್. ಸಭಾ೦ಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಮೃದ್ಧ ಜನಸೇವಾ ಚಾರಿಟೇಬಲ್‌ ಟ್ರಸ್ಟ್ ಬೈಂದೂರು ಹಾಗೂ ಉಡುಪಿ ಜಿಲ್ಲೆಯು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇಲಾಖೆ ಸಹಯೋಗದೊಂದಿಗೆ ಈ ಬೃಹತ್​ ಸಮಾರಂಭ ನಡೆಯಲಿದೆ.

ವಿಧಾನ ಸಭೆ ಸ್ಪೀಕರ್​ ಯು. ಟಿ ಖಾದರ್​ ಕಾರ್ಯಕ್ರಮ ಉದ್ಘಾಟಿಸಲಿದ್ದು, ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್​​ನ ಅಧ್ಯಕ್ಷರಾದ ಡಾ. ಹೆಚ್.ಎಸ್.ಶೆಟ್ಟಿ (Dr HS Shetty ) ಅವರು ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಶುಭಾಂಶಸನೆ ಮಾಡಲಿದ್ದಾರೆ. ಮಾಜಿ ಸಚಿವರಾದ ವಿನಯಕುಮಾ‌ರ್ ಸೊರಕೆ ಸಮವಸ್ತ್ರ ವಿತರಣೆ ಮಾಡಲಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಗುರುರಾಜ್ ಗಂಟಿಹೊಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶಪಾಲ್ ಸುವರ್ಣ, ಸಮೃದ್ಧ ಜನಸೇವಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಬಿ.ಎಸ್. ಸುರೇಶ್ ಶೆಟ್ಟಿ, ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆಯ ಉಪ ನಿರ್ದೇಶಕ ಬೈಂದೂರು ಶ್ರೀ ಕೆ. ಗಣಪತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಪ್ರಶಸ್ತಿ ಪ್ರಧಾನ ಸಮಾರಂಭ

ಕಾರ್ಯಕ್ರಮದಲ್ಲಿ ‘ಹೆಗ್ಗು೦ಜೆ ರಾಜೀವ ಶೆಟ್ಟಿ ವಿದ್ಯಾ ಪೋಷಕ್‌ ಪ್ರಶಸ್ತಿ’ ಪ್ರಧಾನ ಸಮಾರಂಭ ನಡೆಯಲಿದೆ. ಹಿರಿಯ ಶಿಕ್ಷಕರು ಹಾಗೂ ಯಕ್ಷಗಾನ ಪ್ರಸಂಗಕರ್ತರಾದ ಕಂದಾವರ ರಘುರಾಮ ಶೆಟ್ಟಿ ಅವರಿಗೆ ಈ ಬಾರಿ ಪ್ರಶಸ್ತಿ ಪ್ರದಾನವಾಗಲಿದ್ದು, ಶಿವಮೊಗ್ಗ ಸಂಸದ ಬಿ. ವೈ ರಾಘವೇಂದ್ರ ಪ್ರಶಸ್ತಿ ನೀಡಿ ಸನ್ಮಾನಿಸಲಿದ್ದಾರೆ.

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್​​​ನ ಅಧ್ಯಕ್ಷರಾದ ಎಚ್​. ಎಸ್. ಶೆಟ್ಟಿ ,ಉಪಾಧ್ಯಕ್ಷರಾದ ಹಾಲಾಡಿ ನಾಗರಾಜ ಶೆಟ್ಟಿ, ಕಾರ್ಯದರ್ಶಿ ಡಾ. ಸುಮನಾ ಶೆಟ್ಟಿ ಅವರು ಬೃಹತ್​ ಕಾರ್ಯಕ್ರಮಕ್ಕೆ ಸರ್ವರಿಗೂ ಸ್ವಾಗತ ಕೋರಿದ್ದಾರೆ. ಮೈಸೂರು ಮರ್ಕಂಟೈಲ್ ಕಂಪನಿ ಲಿಮಿಟೆಡ್ ಬೆಂಗಳೂರು, ಮೈಸೂರು ಗ್ರೀನ್ ಕಂಪನಿ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಮೈಸೂರು ಸೈನ್ಸ್ & ಟಿಕ್ನಾಲಜಿ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಕಾರ್ಯಕ್ರಮದ ಪೋಷಕ ಸಂಸ್ಥೆಗಳಾಗಿವೆ.

ಕಾರ್ಯಕ್ರಮದ ರೂವಾರಿ ಡಾ.ಎಚ್‌.ಎಸ್‌.ಶೆಟ್ಟಿ

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಹಾಲಾಡಿಯಲ್ಲಿ ಜನಿಸಿದ ಡಾ.ಎಚ್‌.ಎಸ್‌.ಶೆಟ್ಟಿ ಅವರು ಹೋಟೆಲ್‌ ಉದ್ಯಮಿಯಾಗಿ ಹೆಸರು ಮಾಡಿದ್ದಾರೆ. ಜತೆಗೆ ಬಟ್ಟೆ ಮತ್ತು ಖಾದ್ಯ ತೈಲ ವಹಿವಾಟು, ಕೃಷಿ ಸಂಬಂಧಿ ಉತ್ಪನ್ನಗಳ ಮಾರಾಟ, ವಿದ್ಯುತ್‌ ಉತ್ಪಾದನೆ ಹೀಗೆ ಹಲವು ಕ್ಷೇತ್ರಗಳಲ್ಲಿ ಯಶಸ್ವೀ ಉದ್ಯಮಿ ಎನಿಸಿಕೊಂಡಿದ್ದಾರೆ.

ಇದನ್ನೂ ಓದಿ: Job Alert: 10ನೇ ತರಗತಿ ಪಾಸಾದವರಿಗೆ ಗುಡ್‌ನ್ಯೂಸ್‌; SSCಯಿಂದ ಬರೋಬ್ಬರಿ 8,326 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಮೈಸೂರು ಮರ್ಕೆಂಟೈಲ್‌ ಕಂಪನಿ ಲಿಮಿಟೆಡ್‌ ಸ್ಥಾಪಿಸಿ, ಕೃಷಿ ಉತ್ಪನ್ನಗಳನ್ನು ರಫ್ತು ಮಾಡುತ್ತ ರೈತರಿಗೆ ನೆರವಾಗುತ್ತಿರುವ ಇವರಿಗೆ ಆರು ಬಾರಿ ಬೆಸ್ಟ್‌ ಎಕ್ಸ್‌ಪೋರ್ಟ್‌ ಅವಾರ್ಡ್‌ ಲಭಿಸಿದೆ. ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್‌ ಟ್ರಸ್ಟ್‌ ಸ್ಥಾಪಿಸಿ, ಸರ್ಕಾರಿ ಶಾಲೆ ಮತ್ತು ಆಸ್ಪತ್ರೆಗಳ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿದ್ದಾರೆ. ಡಾ. ಎಚ್‌.ಎಸ್‌. ಶೆಟ್ಟಿ (Dr HS Shetty) ಅವರಿಗೆ ಇತ್ತೀಚೆಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 23ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ನನ್ನ ಕಣ್ಣಲ್ಲಿ ಕಣ್ಣಿಟ್ಟು ನೋಡಿ ಪ್ಲೀಸ್‌ ಎಂದ ಸಂಸದೆ; ಹೆಂಗಸರನ್ನು ನೋಡಲ್ಲ ಎಂದ ಸ್ಪೀಕರ್‌!

Viral Video: ಇತ್ತೀಚೆಗೆ ಪಾಕಿಸ್ತಾನದ ಪಾರ್ಲಿಮೆಂಟ್‌ನಲ್ಲಿ ಇಮ್ರಾನ್ ಖಾನ್ ಅವರ ಪಕ್ಷದ ಮುಖಂಡ ಜರ್ತಾಜ್ ಗುಲ್ ಅವರು ತಾವು ಮಾತನಾಡುವಾಗ ಯಾವುದೋ ಕಡೆ ನೋಡುತ್ತಿದ್ದ ವಿಧಾನಸಭಾ ಸ್ಪೀಕರ್ ಅಯಾಜ್ ಸಾದಿಕ್ ಅವರ ಕುರಿತು, ತಾನು ಮಾತನಾಡುವಾಗ ಕಣ್ಣಿನ ಸಂಪರ್ಕವನ್ನು ತಪ್ಪಿಸಬೇಡಿ ಎಂದು ಹೇಳಿದ್ದಾರೆ. ನೀವು ನನ್ನತ್ತ ನೋಡದಿದ್ದರೆ, ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ ಎಂದು ಸ್ಪೀಕರ್‌ಗೆ ಹೇಳುವ ಮೂಲಕ ಪಾಕಿಸ್ತಾನ ಸಂಸತ್ತಿನಲ್ಲಿ ವಿವಾದವನ್ನು ಹುಟ್ಟುಹಾಕಿದ್ದಾರೆ. ಈ ವಿಡಿಯೊ ಸಾಮಾಜಿಕ ಮಾಧ್ಯಮ ವೆಬ್‌ಸೈಟ್‌ಗಳಲ್ಲಿ ಹರಿದಾಡುತ್ತಿದ್ದು, ಸಖತ್ ವೈರಲ್ ಆಗಿದೆ.

VISTARANEWS.COM


on

Viral Video
Koo

ಸಾಮಾನ್ಯವಾಗಿ ಎಲ್ಲರೂ ಮಾತನಾಡುವಾಗ ಮುಂದೆ ಇರುವ ವ್ಯಕ್ತಿಗಳ ಕಣ್ಣುಗಳನ್ನು ನೋಡಿಕೊಂಡು ಮಾತನಾಡುತ್ತಾರೆ. ಆಗ ಅವರು ಯಾರ ಜೊತೆ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ಅರ್ಥವಾಗುತ್ತದೆ. ಆದರೆ ಕೆಲವು ಜನರು ಮಾತನಾಡುತ್ತಿರುವವರ ಕಣ್ಣುಗಳನ್ನು ನೋಡದೆ ಅತ್ತಿತ್ತ ನೋಡಿದರೆ ಮಾತನಾಡುವವರಿಗೆ ಅವರಿಗೆ ಈ ಬಗ್ಗೆ ಆಸಕ್ತಿ ಇಲ್ಲ ಎಂಬ ಭಾವನೆ ಮೂಡುತ್ತದೆ. ಇದು ಎಲ್ಲರಿಗೂ ಆಗುವುದು ಸಹಜ. ಇಂತಹದೊಂದು ವಿಚಾರದ ಬಗ್ಗೆ ಇತ್ತೀಚೆಗೆ ಪಾಕಿಸ್ತಾನದ ಪಾರ್ಲಿಮೆಂಟ್‌ನಲ್ಲಿ ಚರ್ಚೆಯಾಗಿದ್ದು, ವಿಡಿಯೊ ವೈರಲ್ (Viral Video) ಆಗಿದೆ.

Viral Video

ಇತ್ತೀಚೆಗೆ ಪಾಕಿಸ್ತಾನದ ಪಾರ್ಲಿಮೆಂಟ್‌ನಲ್ಲಿ ಇಮ್ರಾನ್ ಖಾನ್ ಅವರ ಪಕ್ಷದ ಮುಖಂಡ ಜರ್ತಾಜ್ ಗುಲ್ ಅವರು ತಾವು ಮಾತನಾಡುವಾಗ ಯಾವುದೋ ಕಡೆ ನೋಡುತ್ತಿದ್ದ ವಿಧಾನಸಭಾ ಸ್ಪೀಕರ್ ಅಯಾಜ್ ಸಾದಿಕ್ ಅವರ ಕುರಿತು, ತಾನು ಮಾತನಾಡುವಾಗ ಕಣ್ಣಿನ ಸಂಪರ್ಕವನ್ನು ತಪ್ಪಿಸಬೇಡಿ ಎಂದು ಹೇಳಿದ್ದಾರೆ.

ಜರ್ತಾಜ್ ಗುಲ್ ಅವರು ಸಭೆಯಲ್ಲಿ ಮಾತನಾಡುವಾಗ “ನೀವು ನನ್ನತ್ತ ನೋಡದಿದ್ದರೆ, ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ ಎಂದು ಸ್ಪೀಕರ್‌ಗೆ ಹೇಳುವ ಮೂಲಕ ಪಾಕಿಸ್ತಾನ ಸಂಸತ್ತಿನಲ್ಲಿ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ಈ ವಿಡಿಯೊ ಸಾಮಾಜಿಕ ಮಾಧ್ಯಮ ವೆಬ್‌ಸೈಟ್‌ಗಳಲ್ಲಿ ಹರಿದಾಡುತ್ತಿದ್ದು, ಸಖತ್ ವೈರಲ್ ಆಗಿದೆ.

Viral Video

ಪಾಕಿಸ್ತಾನ ವಿಧಾನಸಭೆಯಲ್ಲಿ ಇತ್ತೀಚೆಗೆ ನಡೆದ ಸಂಸತ್ತಿನ ಕಲಾಪಗಳಲ್ಲಿ ಈ ಘಟನೆ ನಡೆದಿದ್ದು, ಈ ವಿಡಿಯೊದಲ್ಲಿ ಸಚಿವೆ “ನನ್ನ ಪಕ್ಷದ ನಾಯಕರು ನನಗೆ ಕಣ್ಣುಗಳನ್ನು ನೋಡುತ್ತಾ ಮಾತನಾಡಲು ಕಲಿಸಿದ್ದಾರೆ. ನೀವು ಈ ರೀತಿಯ ಕಣ್ಣಿನ ಸಂಪರ್ಕವನ್ನು ತಪ್ಪಿಸಿದರೆ ನಾನು ಮಾತನಾಡುವುದನ್ನು ಮುಂದುವರಿಸಲು ಸಾಧ್ಯವಿಲ್ಲ. ನಿಮ್ಮ ಕನ್ನಡಕವನ್ನು ಧರಿಸಿ, ಸರ್” ಎಂದು ಜರ್ತಾಜ್ ಗುಲ್ ಸ್ಪೀಕರ್ ಅಯಾಜ್ ಸಾದಿಕ್ ಅವರಿಗೆ ಹೇಳಿದರು. ʼನಾನು ಒಬ್ಬಳು ಲೀಡರ್ʼ ನನಗೆ 1.5 ಲಕ್ಷ ಮತಗಳು ಬಂದಿವೆ. ನೀವು ನನ್ನ ಮಾತನ್ನು ಕೇಳದಿದ್ದರೆ, ನಾನು ನಿಮ್ಮೊಂದಿಗೆ ಮಾತನಾಡಲು ಸಾಧ್ಯವಾಗುವುದಿಲ್ಲ” ಎಂದು ಜರ್ತಾಜ್ ಗುಲ್ ಹೇಳಿದರು. ‌

ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ʼಮಹಿಳೆಯೊಂದಿಗೆ ಕಣ್ಣಿನ ಸಂಪರ್ಕ ಮಾಡುವುದು ಒಳ್ಳೆಯದಲ್ಲ ಎಂದು ನಾನು ಕೇಳಿದ್ದೇನೆ. ಆದಕಾರಣ ಹೆಣ್ಣಿನ ಕಣ್ಣಿನ ಸಂಪರ್ಕವನ್ನು ಮಾಡುವುದಿಲ್ಲʼ ಎಂದು ಪ್ರತಿಕ್ರಿಯಿಸಿದ್ದಾರೆ. ಇದಕ್ಕೆ ಮರು ಉತ್ತರಿಸಿದ ಸಚಿವೆ, ಈ ರೀತಿಯಲ್ಲಿ 52% ಮಹಿಳೆಯರನ್ನು ನೀವು ನಿರ್ಲಕ್ಷಿಸಿದರೆ, ಆಯ್ದ ಜನರು ಮಾತ್ರ ಇಲ್ಲಿಗೆ ಬರುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮೊಬೈಲ್ ಕದ್ದ ಕಳ್ಳನಿಗೆ ದೇವರು ಕೊಟ್ಟ ಶಿಕ್ಷೆ ಮಾತ್ರ ಘೋರ! ವಿಡಿಯೊ ನೋಡಿ

ಜರ್ತಾಜ್ ಗುಲ್ 2024ರಲ್ಲಿ ಡೇರಾ ಘಾಜಿಯಿಂದ ಮರು ಆಯ್ಕೆಯಾದವರು. ಗುಲ್ ಪಾಕಿಸ್ತಾನದ ರಾಜಕಾರಣಿಯಾಗಿದ್ದು, ಇಮ್ರಾನ್ ಖಾನ್ ಅವರ ಸಂಪುಟದಲ್ಲಿ ಹವಾಮಾನ ಬದಲಾವಣೆಯ ರಾಜ್ಯ ಸಚಿವರಾಗಿ ಅಕ್ಟೋಬರ್ 5 ,2018ರಿಂದ ಏಪ್ರಿಲ್ 10, 2022ರವರೆಗೆ ಸೇವೆ ಸಲ್ಲಿಸಿದರು.

Continue Reading

Latest

Viral Video: ಪ್ರೇಯಸಿಯ ಕಣ್ಮುಂದೆಯೇ ಆಕೆಯ ತಂದೆಯನ್ನು ಬರ್ಬರವಾಗಿ ಕೊಂದ ಪ್ರಿಯಕರ!

Viral Video: ಪ್ರೀತಿ ಮನಸ್ಸು ಮನಸ್ಸುಗಳನ್ನು ಬೆಸೆಯಬೇಕು ಎನ್ನುತ್ತಾರೆ. ಆದರೆ ಇಲ್ಲಿ ರಕ್ತದೋಕುಳಿಯನ್ನು ಹರಿಸಿದೆ. ಮಗಳ ಪ್ರೀತಿಯನ್ನು ನಿರಾಕರಿಸಿದ ತಂದೆಯನ್ನು ಆಕೆಯ ಪ್ರಿಯತಮ ಚಾಕುವಿನಿಂದ ಚುಚ್ಚಿ ಸಾಯಿಸಿದ ಘಟನೆ ನಡೆದಿದೆ. ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ದೈಹಿಕ ಶಿಕ್ಷಕನನ್ನು ಹುಡುಗಿಯೊಬ್ಬಳು ಪ್ರೀತಿಸಿದ್ದಳು. ಈ ವಿಚಾರ ತಿಳಿದ ಹುಡುಗಿ ತಂದೆ ಇವರ ಪ್ರೀತಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮತ್ತು ಆರೋಪಿಯ ಮನೆಯವರಿಗೆ ಈ ವಿಚಾರ ತಿಳಿಸಿದ್ದಾರೆ.ಇದರಿಂದ ಕೋಪಗೊಂಡ ಹುಡುಗ ಮಗಳು ಹಾಗೂ ತಂದೆ ಸ್ಕೂಟರ್‌ನಲ್ಲಿ ಬರುವ ವೇಳೆ ದಾರಿ ಮಧ್ಯೆ ತಡೆದು ಈ ಕೃತ್ಯ ಎಸಗಿದ್ದಾನೆ.

VISTARANEWS.COM


on

Viral Video
Koo

ವಿಜಯವಾಡ: ಪ್ರೀತಿ ಎಂದರೆ ಒಂದು ಮಾಯೆ ಎಂತ ಹೇಳಬಹುದು. ಯಾಕೆಂದರೆ ಪ್ರೀತಿಯಲ್ಲಿ ಬಿದ್ದ ಜನರು ಏನು ಬೇಕಾದರೂ ಮಾಡುತ್ತಾರೆ. ಆ ಬಗ್ಗೆ ಅವರಲ್ಲಿ ಭಯ ಇರುವುದಿಲ್ಲ. ಅದರಲ್ಲೂ ಯುವಕರು ಹೆಚ್ಚು ಇದರ ಪ್ರಭಾವಕ್ಕೆ ಒಳಗಾಗುವುದನ್ನು ನಾವು ಕೇಳಿರುತ್ತೇವೆ. ಅಂತಹದೊಂದು ಘಟನೆ ಇದೀಗ ಆಂಧ್ರಪ್ರದೇಶದ ವಿಜಯವಾಡದ ಬೃಂದಾವನ ಕಾಲೋನಿ ಬಳಿ ನಡೆದಿದೆ. ಯುವಕನೊಬ್ಬ ಪ್ರೀತಿಸಿದ ಹುಡುಗಿಗಾಗಿ ಆಕೆಯ ತಂದೆಯನ್ನೇ ಆಕೆಯ ಕಣ್ಣಮುಂದೆಯೇ ಬರ್ಬರವಾಗಿ ಕೊಂದಿದ್ದು, ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video )ಆಗಿದೆ. ಇದನ್ನು ಜನರು ಬೆಚ್ಚಿಬಿದ್ದಿದ್ದಾರೆ.

ಆರೋಪಿ ಶಿವ ಮಣಿಕಂಠ (26 ವರ್ಷ) ಈತ ಖಾಸಗಿ ಕಾಲೇಜಿನಲ್ಲಿ ದೈಹಿಕ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ಹಾಗೇ ಕೊಲೆಯಾದ ವ್ಯಕ್ತಿ ಕಿರಾಣಿ ಅಂಗಡಿ ಮಾಲೀಕ ಕೆ.ರಾಮಚಂದ್ರ ಪ್ರಸಾದ್ (56) ಎಂಬುದಾಗಿ ತಿಳಿದುಬಂದಿದೆ. ಹುಡುಗಿ ಇಂಜಿನಿಯರಿಂಗ್ ಓದುತ್ತಿದ್ದು, ಕಳೆದ ನಾಲ್ಕು ವರ್ಷಗಳಿಂದ ಈಕೆ ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಆರೋಪಿಯನ್ನು ಪ್ರೀತಿಸುತ್ತಿದ್ದಳು. ಈ ವಿಚಾರ ತಿಳಿದ ಹುಡುಗಿ ತಂದೆ ಇವರ ಪ್ರೀತಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮತ್ತು ಆರೋಪಿಯ ಮನೆಯವರಿಗೆ ಈ ವಿಚಾರ ತಿಳಿಸಿದ್ದಾರೆ.

ಇದರಿಂದ ಆರೋಪಿಯ ಮನೆಯಲ್ಲಿ ಗಲಾಟೆ ಶುರುವಾಗಿದೆ. ಇದರಿಂದ ಕೋಪಗೊಂಡ ಆರೋಪಿ ಜೂನ್ 27ರ ರಾತ್ರಿ ಮಗಳು ಹಾಗೂ ತಂದೆ ಸ್ಕೂಟರ್‌ನಲ್ಲಿ ಬರುವ ವೇಳೆ ದಾರಿ ಮಧ್ಯ ತಡೆದು ಹುಡುಗಿಯ ಮುಂದೆಯೇ ಆಕೆಯ ತಂದೆಯ ಕುತ್ತಿಗೆ ಮತ್ತು ಮುಖಕ್ಕೆ ಚಾಕುವಿನಿಂದ ಆರು ಬಾರಿ ಇರಿದು ಪರಾರಿಯಾಗಿದ್ದಾನೆ. ಹುಡುಗಿ ಈ ದೃಶ್ಯ ಕಂಡು ಕಿರುಚಿದಾಗ ಸ್ಥಳೀಯರು ಬಂದು ಪ್ರಸಾದ್ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರಸಾದ್ ಸಾವನಪ್ಪಿದ್ದಾರೆ.

ಇದನ್ನೂ ಓದಿ: ಮನೆಯ ಹೊರಗೆ ತಾಯಿಯ ಜೊತೆ ಆಡುತ್ತಿದ್ದ ಮಗುವಿನ ಮೇಲೆ ಕಾರು ಹತ್ತಿಸಿದ ಚಾಲಕ!

ಈ ಬಗ್ಗೆ ಕೃಷ್ಣಲಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಹಾಗೂ ಆರೋಪಿಯನ್ನು ಬಂಧಿಸಿದ ಪೊಲೀಸರು ಆತ ಕೊಲೆಗೆ ಬಳಸಿದ ಚಾಕುವನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ವಿಡಿಯೊದಲ್ಲಿ ಆರೋಪಿ ಪ್ರಸಾದ್ ಅವರಿಗೆ ಚಾಕುವಿನಿಂದ ಇರಿಯುತ್ತಿದ್ದು, ಹುಡುಗಿ ಕಿರುಚಾಡುತ್ತಿರುವ ದೃಶ್ಯ ಕಂಡುಬಂದಿದೆ. ನಂತರ ಅಲ್ಲಿಗೆ ಸ್ಥಳೀಯರು ಬಂದು ಸುತ್ತುವರಿದಿದ್ದಾರೆ. ಈ ವಿಡಿಯೊಗೆ ಸಾಕಷ್ಟು ವೀವ್ಸ್ ಬಂದಿದ್ದು, ಜನರು ಇದನ್ನು ನೋಡಿ ಬೆಚ್ಚಿಬಿದ್ದಿದ್ದಾರೆ.

Continue Reading

Latest

Dating Application: ಡೇಟಿಂಗ್‌ ನೆಪದಲ್ಲಿ ಕೆಫೆಗೆ ಕರೆದ ಮಹಿಳೆ ಹೀಗಾ ಮಾಡೋದು?

Dating Application: ಇತ್ತೀಚಿನ ದಿನಗಳಲ್ಲಿ ಡೇಟಿಂಗ್ ಅಪ್ಲಿಕೇಶನ್‌ಗಳ ಮೂಲಕ ತಮಗೆ ಬೇಕಾದ ಸಂಗಾತಿಯನ್ನು ಹುಡುಕಿಕೊಂಡು ಮದುವೆಯಾಗುತ್ತಾರೆ. ಆದರೆ ಈ ಡೇಟಿಂಗ್ ಅಪ್ಲಿಕೇಶನ್ ಮೂಲಕ ಪರಿಚಯವಾಗುವವರು ಎಲ್ಲರೂ ಒಳ್ಳೆಯವರೇ ಆಗಿರುವುದಿಲ್ಲ. ಕೆಲವರಿಗೆ ಇದರ ಕಹಿ ಅನುಭವವೂ ಆಗಿದೆ. ಈಗ ಈ ಡೇಟಿಂಗ್ ನೆಪದಲ್ಲಿ ಸುಲಿಗೆ ಮಾಡುವ ಪ್ರಕರಣವೂ ನಡೆಯುತ್ತಿದೆ.ಡೇಟಿಂಗ್ ನೆಪದಲ್ಲಿ ಕೆಫೆ ಅಥವಾ ಪಬ್‌ಗೆ ಕರೆದು ಮೆನುವಿನಲ್ಲಿ ಇಲ್ಲದ ಫುಡ್ ಆರ್ಡರ್ ಮಾಡಿ ಸಿಕ್ಕಾಪಟ್ಟೆ ದುಡ್ಡನ್ನು ಪೀಕುವ ಜಾಲವೊಂದು ಈಗ ಪೊಲೀಸ್ ಬಲೆಗೆ ಬಿದ್ದಿದೆ.

VISTARANEWS.COM


on

Dating Application
Koo

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಮದುವೆ ಸಂಬಂಧ ಕುದುರುವುದು ಡೇಟಿಂಗ್ ಅಪ್ಲಿಕೇಶನ್‌ಗಳ ಮೂಲಕ. ಇಲ್ಲಿ ಯುವಕ-ಯುವತಿಯರು ಒಬ್ಬರನ್ನೊಬ್ಬರು ಭೇಟಿಯಾಗಿ ಮದುವೆ ನಿಶ್ಚಯ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಕೆಲವು ಜನರು ತಮ್ಮ ಜೀವನ ಕಟ್ಟಿಕೊಂಡಿದ್ದರೆ, ಇನ್ನೂ ಕೆಲವರು ಈ ಅಪ್ಲಿಕೇಶನ್‌ನಲ್ಲಿ ಡೇಟಿಂಗ್ ಮಾಡಿ ಮೋಸ ಹೋಗಿದ್ದಾರೆ. ಇದಕ್ಕೆ ಸಂಬಂಧಪಟ್ಟಂತೆ ಇತ್ತೀಚೆಗೆ ಡೇಟಿಂಗ್ ಅಪ್ಲಿಕೇಶನ್‌ (Dating Application) ಮೋಸದ ಹಗರಣವೊಂದು ಬೆಳಕಿಗೆ ಬಂದಿದೆ.

ಅಪ್ಲಿಕೇಶನ್‌ನಲ್ಲಿ ಭೇಟಿಯಾದ ಮಹಿಳೆಯೊಂದಿಗೆ ಡೇಟಿಂಗ್ ಮಾಡಿದ ದೆಹಲಿಯ ನಾಗರಿಕ ಸೇವಾ ಆಕಾಂಕ್ಷಿಯೊಬ್ಬರು ಕೆಫೆಯಲ್ಲಿ 1.20 ಲಕ್ಷ ರೂ.ಗಳ ಬಿಲ್ ಕೊಟ್ಟು ಹಣವನ್ನು ಕಳೆದುಕೊಂಡಿದ್ದಾರೆ. ಇದು ಪ್ರಮುಖ ನಗರಗಳಲ್ಲಿ ವ್ಯಾಪಕವಾಗಿ ಹರಡಿರುವ ‘ಟಿಂಡರ್ ಹಗರಣ’ದ ಅನೇಕ ಪ್ರಕರಣಗಳಲ್ಲಿ ಒಂದಾಗಿದೆ.

ರೆಡ್ಡಿಟ್ ಎಂಬ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಅನೇಕ ಪೋಸ್ಟ್‌ಗಳಿದ್ದು ಅವುಗಳಲ್ಲಿ ಕೆಲವು ಒಂದು ವರ್ಷ ಹಳೆಯದಾಗಿವೆ. ಅದರಲ್ಲಿ ಡೇಟಿಂಗ್ ಅಪ್ಲಿಕೇಶನ್‌ಗಳಲ್ಲಿ ಮಹಿಳೆಯರೊಂದಿಗೆ ಡೇಟಿಂಗ್ ಮಾಡಿ ದುಬಾರಿ ಬಿಲ್ ತೆತ್ತು ಮೋಸಹೋದ ಜನರ ಖಾತೆಗಳ ಬಗ್ಗೆ ತಿಳಿಸುತ್ತದೆ. ಟಿಂಡರ್, ಬಂಬಲ್, ಹಿಂಜ್ ಮತ್ತು ಒಕ್ಯುಪಿಡ್‌ನಂತಹ ಡೇಟಿಂಗ್ ಅಪ್ಲಿಕೇಶನ್‌ನಲ್ಲಿ ಯಾರಾದರೂ ಪ್ರೊಫೈಲ್‌ ಮಹಿಳೆಯ ಪ್ರೊಫೈಲ್‌ಗೆ ಮ್ಯಾಚ್ ಆದಾಗ ಅವಳು ತನ್ನ ವಾಟ್ಸಾಪ್ ಸಂಖ್ಯೆಯನ್ನು ಶೇರ್‌ ಮಾಡಿಕೊಂಡು ಅವರ ಜೊತೆ ಮಾತನಾಡಲು ಶುರು ಮಾಡುತ್ತಾಳೆ. ನಂತರ ಮಹಿಳೆ ಕೆಫೆ ಮತ್ತು ಪಬ್‌ಗಳಲ್ಲಿ ಮೀಟ್‌ ಆಗುವ ಎಂದು ಒತ್ತಾಯ ಮಾಡುವುದಕ್ಕೆ ಶುರುಮಾಡುತ್ತಾಳೆ. ಮಹಿಳೆಯ ಮಾತಿಗೆ ಒಪ್ಪಿ ಭೇಟಿಯಾಗುವುದಕ್ಕೆ ರೆಡಿಯಾದರೆ ಅವನಿಗೆ ನಿರ್ದಿಷ್ಟ ಮೆಟ್ರೋ ನಿಲ್ದಾಣದಲ್ಲಿ ಭೇಟಿಯಾಗಲು ಹೇಳಿ ಅಲ್ಲಿಂದ ಕೆಫೆ ಅಥವಾ ಪಬ್‌ಗೆ ಹೋಗುತ್ತಾರೆ

ಇನ್ನು ಕೆಫೆಯಲ್ಲಿ, ಮಹಿಳೆಯೇ ಆರ್ಡರ್ ಮಾಡುತ್ತಾಳೆ. ಆದರೆ ಈ ಮೋಸದಾಟದ ಬಗ್ಗೆ ಅರಿವಿಲ್ಲದ ಪುರುಷರು ಸುಮ್ಮನಿರುತ್ತಾರೆ. ನಂತರ, ಮಹಿಳೆ ಮೆನುವಿನಲ್ಲಿ ಇಲ್ಲದಿರುವ ಏನನ್ನಾದರೂ ಆರ್ಡರ್ ಮಾಡಿ ತನಗೆ ಅರ್ಜೆಂಟ್ ಕೆಲಸವಿದೆ ಎಂದು ಹೇಳಿ ಅವಸರದಿಂದ ಅಲ್ಲಿಂದ ಹೋಗುತ್ತಾಳೆ. ಆದರೆ ಬಿಲ್ ಬಂದಾಗ, ಅದರ ಬೆಲೆ ನೋಡಿ ಬಲಿಪಶು ಶಾಕ್ ಆಗುವುದಂತೂ ಖಂಡಿತ. ಈ ಬಗ್ಗೆ ಪ್ರತಿಭಟಿಸಿದರೆ, ಕೆಫೆ ಸಿಬ್ಬಂದಿಗಳು ಅವನಿಗೆ ಬೆದರಿಕೆ ಹಾಕುತ್ತಾರೆ.

ಬೇರೆ ಆಯ್ಕೆಯಿಲ್ಲದೆ, ಅವನು ಬಿಲ್ ಪಾವತಿಸುತ್ತಾನೆ. ಇದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಜನರು ಪೊಲೀಸರನ್ನು ಸಂಪರ್ಕಿಸುವುದಿಲ್ಲ. ಏಕೆಂದರೆ ತನಿಖೆಯ ವೇಳೆ ಅವನು ಡೇಟಿಂಗ್ ಅಪ್ಲಿಕೇಶನ್ ಮೂಲಕ ಜನರನ್ನು ಭೇಟಿಯಾಗುತ್ತಿದ್ದಾನೆ ಎಂದು ಅವನ ಕುಟುಂಬಕ್ಕೆ ತಿಳಿಯಬಹುದೆಂದು ಹೆದರುತ್ತಾರೆ.

Dating Application

ಕೆಫೆ ಮಾಲೀಕರು, ವ್ಯವಸ್ಥಾಪಕರು ಮತ್ತು ಡೇಟಿಂಗ್ ಮಹಿಳೆಯರು ಸೇರಿದಂತೆ ಹಲವಾರು ಹೆಣೆದ ಬಲೆಯಾಗಿದೆ ಇದು ಎಂದು ಪೊಲೀಸರು ತಿಳಿಸಿದ್ದಾರೆ. ಐಎಎಸ್ ಆಕಾಂಕ್ಷಿಯನ್ನು ಗುರಿಯಾಗಿಸಿಕೊಂಡು ನಡೆದ ಇತ್ತೀಚಿನ ದೆಹಲಿ ಘಟನೆಯಲ್ಲಿ, ಕೆಫೆಯ ಮಾಲೀಕ ಅಕ್ಷಯ್ ಪಹ್ವಾ ಮತ್ತು ಸಂತ್ರಸ್ತೆಯ ‘ಡೇಟ್’ ಅಫ್ಸಾನ್ ಪರ್ವೀನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:ಗಂಡನ ಕುಡಿತ ನಿಲ್ಲಿಸಬೇಕೆ? ಹಾಗಾದ್ರೆ ಬಿಜೆಪಿ ಸಚಿವರೊಬ್ಬರ ಈ ಟಿಪ್ಸ್‌ ಟ್ರೈ ಮಾಡಿ ನೋಡಿ!

ಅಲ್ಲದೇ ಈ ಮೋಸದ ಆಟದಿಂದ ಬಂದ ಬಿಲ್ ಹಣದಲ್ಲಿ 15 ಪ್ರತಿಶತವನ್ನು ಮಹಿಳೆಗೆ, 45 ಪ್ರತಿಶತವನ್ನು ವ್ಯವಸ್ಥಾಪಕರಿಗೆ ಮತ್ತು ಉಳಿದ 40 ಪ್ರತಿಶತವನ್ನು ಮಾಲೀಕರಿಗೆ ಹಂಚಲಾಗುತ್ತದೆ ಎಂದು ಆರೋಪಿಗಳಲ್ಲಿ ಒಬ್ಬ ಪೊಲೀಸರಿಗೆ ತಿಳಿಸಿದ್ದಾರೆ.

Dating Application

ಈ ಪ್ರಕರಣ ದೆಹಲಿ ಮಾತ್ರವಲ್ಲ ದೆಹಲಿ-ಎನ್ಸಿಆರ್, ಮುಂಬೈ, ಬೆಂಗಳೂರು ಮತ್ತು ಹೈದರಾಬಾದ್ ಸೇರಿದಂತೆ ಪ್ರಮುಖ ನಗರಗಳಲ್ಲಿ ಈ ಹಗರಣ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಡೇಟಿಂಗ್ ಅಪ್ಲಿಕೇಶನ್‌ಗಳಲ್ಲಿ ಪುರುಷರು ಮಾತ್ರ ಗುರಿಯಾಗುತ್ತಿಲ್ಲ. ಈ ತಿಂಗಳ ಆರಂಭದಲ್ಲಿ, ಡೇಟಿಂಗ್ ಅಪ್ಲಿಕೇಶನ್‌ಗಳಲ್ಲಿ ಮಹಿಳೆಯರೊಂದಿಗೆ ಸ್ನೇಹ ಬೆಳೆಸಿದ ಮತ್ತು ಅವರ ಮನೆಗಳಲ್ಲಿ ದರೋಡೆ ಮಾಡಿದ ಆರೋಪದ ಮೇಲೆ ದೆಹಲಿ ಪೊಲೀಸರು ಇಬ್ಬರು ಪುರುಷರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

(ಇಲ್ಲಿ ಬಳಸಿರುವುದು ಸಾಂದರ್ಭಿಕ ಚಿತ್ರ)

Continue Reading

ಕರ್ನಾಟಕ

Monsoon session: ರಾಜ್ಯ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್‌; ದಿನಾಂಕ ಫೈನಲ್ ಮಾಡಿದ ಸಿಎಂ

Monsoon session: ಕಳೆದ ಕ್ಯಾಬಿನೆಟ್ ಸಭೆಯಲ್ಲಿ ಅಧಿವೇಶನದ ದಿನಾಂಕ ಅಂತಿಮಗೊಳಿಸಲು ಸಿಎಂ ವಿವೇಚನೆಗೆ ಬಿಡಲಾಗಿತ್ತು. ಅದರಂತೆ ಅಧಿವೇಶನದ ದಿನಾಂಕವನ್ನು ಸಿಎಂ ಸಿದ್ದರಾಮಯ್ಯ ಅಂತಿಮಗೊಳಿಸಿದ್ದಾರೆ.

VISTARANEWS.COM


on

Monsoon session
Koo

ಬೆಂಗಳೂರು: ಕರ್ನಾಟಕ ವಿಧಾನಮಂಡಲ ಅಧಿವೇಶನಕ್ಕೆ (ಮುಂಗಾರು ಅಧಿವೇಶನ) ಮುಹೂರ್ತ ಫಿಕ್ಸ್‌ ಆಗಿದೆ. ಜುಲೈ 15ರಿಂದ 26ರವರೆಗೆ ಹತ್ತು ದಿನಗಳ ಕಾಲ ಅಧಿವೇಶನ ಕರೆಯಲು ರಾಜ್ಯಪಾಲರಿಗೆ ಸಿಎಂ ಸಿದ್ದರಾಮಯ್ಯ ಅವರು ಶಿಫಾರಸು ಮಾಡಿದ್ದಾರೆ.

ಕಳೆದ ಕ್ಯಾಬಿನೆಟ್ ಸಭೆಯಲ್ಲಿ ಅಧಿವೇಶನದ ದಿನಾಂಕ ಅಂತಿಮಗೊಳಿಸಲು ಸಿಎಂ ವಿವೇಚನೆಗೆ ಬಿಡಲಾಗಿತ್ತು. ಅದರಂತೆ ಅಧಿವೇಶನದ ದಿನಾಂಕವನ್ನು ಸಿಎಂ ಸಿದ್ದರಾಮಯ್ಯ ಅಂತಿಮಗೊಳಿಸಿದ್ದಾರೆ.

ಇದನ್ನೂ ಓದಿ | Parliament Sessions: ಹಿಂದೂ ಹಿಂಸಾವಾದಿ ಹೇಳಿಕೆ; ಸಂಸತ್‌ನಲ್ಲಿ ರಾಹುಲ್‌-ಮೋದಿ ಜಟಾಪಟಿ

ವಾಣಿಜ್ಯ ತೆರಿಗೆ ಅಧಿಕಾರಿಗಳು ಉತ್ತಮ ಕೆಲಸ ಮಾಡಿದ್ದಾರೆ: ಸಿಎಂ

ರಾಜ್ಯದಲ್ಲಿ ಕಳೆದ ವರ್ಷ 2022-23ನೇ ಸಾಲಿನಲ್ಲಿ 1,22,821 ಕೋಟಿ, 2021- 22ರಲ್ಲಿ 1,45,266 ಕೋಟಿ ಜಿಎಸ್‌ಟಿ ಸಂಗ್ರಹಣೆ ಆಗಿತ್ತು. ವಾಣಿಜ್ಯ ತೆರಿಗೆ ಅಧಿಕಾರಿಗಳು ಉತ್ತಮ ಕೆಲಸ ಮಾಡಿದ್ದಾರೆ. 65 ಸಿಬ್ಬಂದಿಗೆ ಉತ್ತಮವಾಗಿ ತೆರಿಗೆ ಸಂಗ್ರಹ ಮಾಡಿದ್ದಕ್ಕೆ ಪ್ರಶಸ್ತಿ ಕೊಟ್ಟಿದ್ದೀವಿ. ನಮ್ಮಲ್ಲಿ 6 ಸಾವಿರ ವಾಣಿಜ್ಯ ಇಲಾಖೆ ಸಿಬ್ಬಂದಿ ಇದ್ದಾರೆ, ಅವರೆಲ್ಲರೂ ಪ್ರಶಸ್ತಿ ತಗೋಳೋಕೆ ಪ್ರಯತ್ನ ಮಾಡಬೇಕು. ನಮ್ಮ ರಾಜ್ಯದ ಅಧಿಕಾರಿಗಳು ಬೇರೆಯವರಿಗೆ ಪ್ರೇರಣೆಯಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿಎಸ್‌ಟಿ ದಿನಾಚರಣೆಯಲ್ಲಿ ಮಾತನಾಡಿದ ಅವರು, ಮುಂದಿನ ವರ್ಷ ಜಿಎಸ್‌ಟಿ ದಿನದ ವೇಳೆಗೆ ಹೆಚ್ಚು ತೆರಿಗೆ ವಸೂಲಿ ಮಾಡಿ, ಇನ್ನು ಹೆಚ್ಚು ನೌಕರರು ಪ್ರಶಸ್ತಿ ತೆಗೆದುಕೊಳ್ಳಬೇಕು ಎಂದರು.

ನಂತರ ಕರವೇ ನಾರಾಯಣಗೌಡ ನಿಯೋಗ ಭೇಟಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಕನ್ನಡಿಗರಿಗೆ ವಿಶೇಷ ಉದ್ಯೋಗ ಮೀಸಲಾತಿ ನೀಡಲು ಹೊಸ ಕಾನೂನು ಜಾರಿಗೆ ತರಬೇಕು ಅಂತ ಹೇಳಿದ್ದಾರೆ. ನಾನು ಅದನ್ನು ಸಂವಿಧಾನ ಹಿನ್ನೆಲೆಯಲ್ಲಿ ಎಜಿ ಜತೆಗೆ ಚರ್ಚೆ ಮಾಡುತ್ತೇನೆ. ಸರೋಜಿನಿ ಮಹಿಷಿ ವರದಿ ಜಾರಿ ಮಾಡುವುದು ಹಾಗೂ ಕಾನೂನು ಮಾಡುವುದು ಅವರ ಬೇಡಿಕೆಯಾಗಿದೆ. ಅದಕ್ಕೆ ಕಾನೂನು, ಸಂವಿಧಾನಾತ್ಮಕವಾಗಿ ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Continue Reading
Advertisement
Hyperpigmentation
ಆರೋಗ್ಯ39 seconds ago

Hyperpigmentation: ಕಾಡುವ ಈ ‘ಕಪ್ಪುಕಲೆ’ ಸಮಸ್ಯೆಗೆ ಇಲ್ಲಿದೆ ಪರಿಹಾರ

Viral Video
Latest6 mins ago

Viral Video: ನನ್ನ ಕಣ್ಣಲ್ಲಿ ಕಣ್ಣಿಟ್ಟು ನೋಡಿ ಪ್ಲೀಸ್‌ ಎಂದ ಸಂಸದೆ; ಹೆಂಗಸರನ್ನು ನೋಡಲ್ಲ ಎಂದ ಸ್ಪೀಕರ್‌!

Viral Video
Latest14 mins ago

Viral Video: ಪ್ರೇಯಸಿಯ ಕಣ್ಮುಂದೆಯೇ ಆಕೆಯ ತಂದೆಯನ್ನು ಬರ್ಬರವಾಗಿ ಕೊಂದ ಪ್ರಿಯಕರ!

Dating Application
Latest22 mins ago

Dating Application: ಡೇಟಿಂಗ್‌ ನೆಪದಲ್ಲಿ ಕೆಫೆಗೆ ಕರೆದ ಮಹಿಳೆ ಹೀಗಾ ಮಾಡೋದು?

Special awareness programme on drug abuse illegal trafficking
ಬೆಂಗಳೂರು27 mins ago

Bengaluru News: ಮಾದಕ ದ್ರವ್ಯ ಅಕ್ರಮ ಸಾಗಾಟ; ಜಾಗೃತಿ ಮೂಡಿಸಿದ ವಿದ್ಯಾರ್ಥಿಗಳು

Monsoon session
ಕರ್ನಾಟಕ28 mins ago

Monsoon session: ರಾಜ್ಯ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್‌; ದಿನಾಂಕ ಫೈನಲ್ ಮಾಡಿದ ಸಿಎಂ

UPSC 2024
ಪ್ರಮುಖ ಸುದ್ದಿ32 mins ago

UPSC 2024: ಯುಪಿಎಸ್ಸಿ ಸಿಎಸ್ಇ ಪ್ರಿಲಿಮ್ಸ್ ಫಲಿತಾಂಶ ಪ್ರಕಟ; ಪರಿಶೀಲಿಸುವುದು ಹೇಗೆ?

Kabzaa movie Appreciation Letter from Union Finance Ministry to Sri siddeshwar Enterprises
ಕರ್ನಾಟಕ1 hour ago

Kabzaa movie: ಅತಿ ಹೆಚ್ಚು ತೆರಿಗೆ ಪಾವತಿ; ಆರ್. ಚಂದ್ರು ನಿರ್ಮಾಣ ಸಂಸ್ಥೆಗೆ ಕೇಂದ್ರದಿಂದ ಪ್ರಶಂಸಾ ಪತ್ರ!

Parliament Sessions
ಪ್ರಮುಖ ಸುದ್ದಿ1 hour ago

Parliament Sessions : ರಾಹುಲ್ ಗಾಂಧಿಯಿಂದ ಹಿಂದೂಗಳಿಗೆ ಅವಮಾನ: ಬಿಜೆಪಿ ಆರೋಪ

Reliance Jio
ಕರ್ನಾಟಕ1 hour ago

Reliance Jio: ಮೊಬೈಲ್‌ ಶುಲ್ಕ ಏರಿಕೆ; ಯಾವ ಕಂಪನಿಯ ಪ್ಲ್ಯಾನ್‌ ಸೂಕ್ತ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ1 day ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌