Water Price Hike: ಬೆಂಗಳೂರಿನಲ್ಲಿ ನೀರಿನ ದರ ಏರಿಕೆಗೆ ವೇಗ; ನಿಮಗೆ ಎಷ್ಟಾಗುತ್ತೆ ಚೆಕ್‌ ಮಾಡಿ - Vistara News

ಪ್ರಮುಖ ಸುದ್ದಿ

Water Price Hike: ಬೆಂಗಳೂರಿನಲ್ಲಿ ನೀರಿನ ದರ ಏರಿಕೆಗೆ ವೇಗ; ನಿಮಗೆ ಎಷ್ಟಾಗುತ್ತೆ ಚೆಕ್‌ ಮಾಡಿ

bwssb water price hike: 2014ರಲ್ಲಿ ಬಿಡಬ್ಲ್ಯುಎಸ್‌ಎಸ್‌ಬಿ ಅಲ್ಪಪ್ರಮಾಣದ ದರ ಏರಿಕೆ ಮಾಡಿದ ಬಳಿಕ, ನಗರದಲ್ಲಿ ನೀರಿನ ದರ ಏರಿಕೆ ಮಾಡಿಲ್ಲ. ಇದೀಗ ಹತ್ತು ವರ್ಷದ ನಂತರ ದರ ಏರಿಕೆಗೆ ಪ್ರಸ್ತಾವನೆ ಸಿದ್ಧವಾಗುತ್ತಿದೆ. ಶೀಘ್ರದಲ್ಲೇ ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಕೆಯಾಗಲಿದೆ.

VISTARANEWS.COM


on

bwssb water price hike
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ʼಯಾರು ಎಷ್ಟೇ ವಿರೋಧಿಸಿದರೂ ನಾನು ಬೆಂಗಳೂರಿನಲ್ಲಿ (Bangalore) ಕುಡಿಯುವ ನೀರಿನ ದರ (Drinking Water price hike) ಏರಿಸುವವನೇʼ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ನಿನ್ನೆ ಹೇಳಿದ ಬೆನ್ನಲ್ಲೇ, ನೀರಿನ ದರ ಏರಿಕೆ ಪ್ರಕ್ರಿಯೆಗೆ ಬೆಂಗಳೂರು ಜಲಮಂಡಳಿ (BWSSB) ವೇಗ ನೀಡಿದೆ.

2014ರಲ್ಲಿ ಬಿಡಬ್ಲ್ಯುಎಸ್‌ಎಸ್‌ಬಿ ಅಲ್ಪಪ್ರಮಾಣದ ದರ ಏರಿಕೆ ಮಾಡಿದ ಬಳಿಕ, ನಗರದಲ್ಲಿ ನೀರಿನ ದರ ಏರಿಕೆ ಮಾಡಿಲ್ಲ. ಇದೀಗ ಹತ್ತು ವರ್ಷದ ನಂತರ ದರ ಏರಿಕೆಗೆ ಪ್ರಸ್ತಾವನೆ ಸಿದ್ಧವಾಗುತ್ತಿದೆ. ಶೀಘ್ರದಲ್ಲೇ ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಕೆಯಾಗಲಿದೆ.

ಹಾಲಿ ನೀರಿನ ದರ

ಪ್ರಸ್ತುತ ನೀರಿನ ದರಗಳು ಹೀಗಿವೆ. 0- 8000 ಸಾವಿರ ಲೀಟರ್ ನೀರು ಬಳಕೆ ಮಾಡುವವರಿಗೆ ಒಂದು‌ ಸಾವಿರ ಲೀಟರ್‌ಗೆ 7 ರೂಪಾಯಿ. 8000-25000 ಸಾವಿರ ಲೀಟರ್ ನೀರು ಬಳಕೆ ಮಾಡುವವರಿಗೆ ಒಂದು ಸಾವಿರ ಲೀಟರ್‌ಗೆ 11 ರೂಪಾಯಿ. 25,000 – 50000 ಸಾವಿರ ಲೀಟರ್ ನೀರು ಬಳಕೆ ಮಾಡುವವರಿಗೆ ಒಂದು ಸಾವಿರ ಲೀಟರ್‌ಗೆ 26 ರೂಪಾಯಿ ಶುಲ್ಕ ಬೀಳುತ್ತಿದೆ.

ಪರಿಷ್ಕರಣೆ ಮಾಡಲು ಯೋಚಿಸಿರುವ ದರ

8000 ಸಾವಿರ ನೀರು ಬಳಕೆ ದರ ಏರಿಕೆ ಮಾಡದಿರಲು ಶಿಫಾರಸು ಮಾಡಲಾಗಿದೆ. 8000-25000 ಸಾವಿರ ಲೀಟರ್ ನೀರು ಬಳಕೆ ಮಾಡುವವರಿಗೆ ಒಂದು ಸಾವಿರ ಲೀಟರ್‌ಗೆ 11 ರೂ. ಯಿಂದ 15 ರೂ. ಏರಿಕೆ. 25,000 – 50000 ಸಾವಿರ ಲೀಟರ್ ನೀರು ಬಳಕೆ ಮಾಡುವವರಿಗೆ 1 ಸಾವಿರ ಲೀಟರ್ ಗೆ 26 ರೂ. ಯಿಂದ 30 ರೂ.ಗೆ ಏರಿಕೆ. ನಾನ್ ಡೊಮೆಸ್ಟಿಕ್ ಬಳಕೆದಾರರಿಗೆ ಶೇ.25%ರಷ್ಟು ನೀರಿನ ದರ ಏರಿಕೆಗೆ ಪ್ರಸ್ತಾವನೆ ಮಾಡಲಾಗಿದೆ.

ಎಷ್ಟೇ ವಿರೋಧ ಬಂದರೂ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಖಚಿತ; ಡಿ.ಕೆ.ಶಿವಕುಮಾರ್

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ 12-13 ವರ್ಷಗಳಿಂದ ನೀರಿನ ದರ ಹೆಚ್ಚಳ ಮಾಡಿಲ್ಲ. ಆದರೂ ಬಿಡಬ್ಲ್ಯೂ ಎಸ್‌ಎಸ್‌ಬಿ ಕಷ್ಟಪಟ್ಟು ನಿರ್ವಹಣೆ ಮಾಡುತ್ತಿದೆ. ಯಾರೇ ಆಕ್ಷೇಪ ವ್ಯಕ್ತಪಡಿಸಿದರೂ ನೀರಿನ ದರ ಏರಿಕೆ (Water Price Hike) ಅನಿವಾರ್ಯ. ಅದನ್ನು ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ವಿಧಾನಸೌಧದ ಆವರಣದಲ್ಲಿ ಗುರುವಾರ ನಡೆದ “ಬಾಗಿಲಿಗೆ ಬರಲಿದೆ ಕಾವೇರಿ ಸಂಪರ್ಕ, 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ” ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜಧಾನಿಯ 1.40 ಕೋಟಿ ಜನಸಂಖ್ಯೆಗೆ ನೀರನ್ನು ಒದಗಿಸಲೇ ಬೇಕು. ಇದಕ್ಕಾಗಿ ಸಾಲ ಮಾಡಿ, ಸಂಪರ್ಕ ಜಾಲವನ್ನು ಹೆಚ್ಚಿಸದ ಹೊರತು ನೀರು ಕೊಡಲು ಕಷ್ಟವಾಗುತ್ತದೆ. ದರ ಹೆಚ್ಚಳ ಮಾಡದಿದ್ದರೇ ನೀರು ಸರಬರಾಜು ಕಂಪನಿ ಉಳಿಯುವುದಿಲ್ಲ, ನೌಕರರು ಬದುಕಲು ಆಗುವುದಿಲ್ಲ. ಸಂಸ್ಥೆಗೆ ವಿದ್ಯುತ್ ಬಿಲ್ ಕಟ್ಟಲು ಆಗುತ್ತಿಲ್ಲ. ಎಲ್ಲರಿಗೂ ನೀರಿನ ದರ ಹೆಚ್ಚಳ ಮಾಡುವುದಿಲ್ಲ. ಎಷ್ಟು ಏರಿಕೆ ಮಾಡಬೇಕು ಎಂದು ಇನ್ನೂ ನಿರ್ಧರಿಸಿಲ್ಲ. ಚರ್ಚೆ ಮಾಡಲಿ. ಧರಣಿ ಮಾಡಲಿ ನಾನು ಇದಕ್ಕೆ ಬದ್ಧವಾಗಿದ್ದೇನೆ ಎಂದು ಹೇಳಿದರು.

ಇಲಾಖೆಗೆ ಪ್ರತ್ಯೇಕ ವಿದ್ಯುತ್ ತಯಾರಿಕಾ ಕಂಪನಿ

14 ವರ್ಷಗಳಲ್ಲಿ ಸಾಕಷ್ಟು ಬಾರಿ ವಿದ್ಯುತ್ ಬಿಲ್ ಹೆಚ್ಚಳವಾಗಿದೆ. ಇದಕ್ಕಾಗಿ ಇಲಾಖೆಯದ್ದೇ ಪ್ರತ್ಯೇಕ ಕಂಪನಿ ಸ್ಥಾಪಿಸಿ ನೀವೇ ಸೋಲಾರ್ ಸೇರಿದಂತೆ ಇತರೇ ಮೂಲಗಳಿಂದ ವಿದ್ಯುತ್ ತಯಾರಿಸಿದರೆ ಹಣ ಉಳಿತಾಯವಾಗುತ್ತದೆ. ಬೆಂಗಳೂರಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಜಂಟಿಯಾಗಿ ಈ ಕಾರ್ಯಕ್ರಮ ರೂಪಿಸಬಹುದು. ದೂರಾಲೋಚನೆ ಇಟ್ಟುಕೊಂಡು ಈಗಾಗಲೇ ಕಂಪನಿ ಸಿದ್ಧಪಡಿಸಲಾಗಿದೆ. ಪಾವಗಡದಲ್ಲಿ ಸೋಲಾರ್ ಪಾರ್ಕ್ ಮಾಡಿದ ಕಾರಣಕ್ಕೆ ಮೂರುವರೆ ರೂಪಾಯಿಗೆ ವಿದ್ಯುತ್ ಸಿಗುತ್ತಿದೆ. ಆಗ ಹಲವರು ತಲೆಕೆಟ್ಟಿದೆಯಾ ಎಂದು ಆಡಿಕೊಂಡರು. ಇದರಿಂದ ಸರಬರಾಜು ಮಾಡುವ ಖರ್ಚು ಉಳಿತಾಯವಾಗಿದೆ ಎಂದು ಹೇಳಿದರು.

ನಾನಿರುವ ತನಕ ಖಾಸಗೀಕರಣ ಆಗುವುದಿಲ್ಲ

ಬಿಡಬ್ಲ್ಯೂ ಎಸ್‌ಎಸ್‌ಬಿ ನನ್ನ ಬಳಿಯೇ ಇರುವ ಕಾರಣ ಅನೇಕರು ನೂತನ ಯೋಜನೆ ಕುರಿತು ಚರ್ಚೆ ನಡೆಸಲು ಬಂದರು. ಈ ಹಿಂದೆ ಇಂಧನ ಇಲಾಖೆಯಲ್ಲಿ ಇದ್ದಾಗಲು ಇದೇ ಪ್ರಸ್ತಾವನೆ ಬಂದಿತ್ತು. ಮುಂಬೈ ಸೇರಿದಂತೆ ಇತರೆಡೆ ಅದಾನಿ ಹಾಗೂ ಇತರೆ ಕಂಪೆನಿಗಳು ವಿದ್ಯುತ್ ಸರಬರಾಜು ಮಾಡುತ್ತಿವೆ. ನಾನು ಇರುವ ತನಕ ಇದೆಲ್ಲವೂ ಸಾಧ್ಯವಿಲ್ಲ. ಈ ವಿಚಾರ ಇಲ್ಲಿಗೆ ಬಿಟ್ಟುಬಿಡಿ, ಇದರ ಸುದ್ದಿಗೆ ಬರಬೇಡಿ ಎಂದು ವಾಪಸ್ ಕಳುಹಿಸಿದೆ ಎಂದರು.

ಜಲ ಹಾಗೂ ಇಂಧನ ಇವೆರಡೂ ಬಹಳ ಮುಖ್ಯವಾದವುಗಳು. ಈ ಹಿಂದೆ ನಾನು ಇಂಧನ ಸಚಿವನಾಗಿದ್ದೆ. ಈಗ ನೀರಾವರಿ ಸಚಿವನಾಗಿದ್ದೇನೆ. ಜೆ.ಎಚ್. ಪಟೇಲ್ ಅವರ ಕಾಲದಲ್ಲಿ ನೀರು ಸರಬರಾಜನ್ನು ಖಾಸಗಿಯವರಿಗೆ ನೀಡಬೇಕು ಎನ್ನುವ ಪ್ರಸ್ತಾವನೆ ಬಂದಿತ್ತು. ನಂತರ ಎಸ್.ಎಂ ಕೃಷ್ಣ ಅವರ ಸರ್ಕಾರದಲ್ಲಿ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗಲೂ ಈ ಬಗ್ಗೆ ದೊಡ್ಡ ಚರ್ಚೆಯಾಯಿತು ಎಂದರು.

ಇದನ್ನೂ ಓದಿ: CLP Meeting: ಮುಡಾ ಹಗರಣ; ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಪರ ನಿಂತ ಶಾಸಕರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

DK Shivakumar: ಬಿಜೆಪಿಯವರ ಮಾತು ಕೇಳಿ 15 ಬಿಲ್ ವಾಪಸ್ ಕಳುಹಿಸಿದ ರಾಜ್ಯಪಾಲರು: ಕಿಡಿಕಾರಿದ ಡಿಕೆಶಿ

ಬಿಜೆಪಿಯವರ ಮಾತನ್ನೇ ಕೇಳುವುದಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಏಕಿರಬೇಕು? ಏನಾದರೂ ಸ್ಪಷ್ಟನೆ ಕೇಳಿದರೆ ನೀಡೋಣ. ಅದನ್ನು ತಪ್ಪು ಎಂದು ಹೇಳಲಾಗುವುದಿಲ್ಲ. ರಾಜ್ಯಪಾಲರಿಗೆ ದೇವರು ಒಳ್ಳೆ ಬುದ್ಧಿ ಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಡಿಕೆ ಶಿವಕುಮಾರ್‌ (DK Shivakumar) ಹೇಳಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: ಬಿಜೆಪಿಯ (BJP) ಶಾಸಕರುಗಳ ಮಾತು ಕೇಳಿ ರಾಜ್ಯ ಸರ್ಕಾರ ಕಳಿಸಿದ 15 ವಿಧೇಯಕಗಳನ್ನು (Bills) ರಾಜ್ಯಪಾಲರು (Governor Thawar Chand gehlot) ವಾಪಸ್ ಕಳುಹಿಸಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಅವರು ಕಿಡಿ ಕಾರಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು “ಬಿಜೆಪಿಯವರ ಮಾತನ್ನೇ ಕೇಳುವುದಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಏಕಿರಬೇಕು? ಏನಾದರೂ ಸ್ಪಷ್ಟನೆ ಕೇಳಿದರೆ ನೀಡೋಣ. ಅದನ್ನು ತಪ್ಪು ಎಂದು ಹೇಳಲಾಗುವುದಿಲ್ಲ. ರಾಜ್ಯಪಾಲರಿಗೆ ದೇವರು ಒಳ್ಳೆ ಬುದ್ಧಿ ಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ” ಎಂದರು.

ಸರ್ಕಾರ ಬೀಳಿಸುವ ಪ್ರಯತ್ನ ನಡೆಯುತ್ತಿದೆಯೇ ಎಂದು ಕೇಳಿದಾಗ “ಸರ್ಕಾರ ಬೀಳಿಸಲು ಯಾವ ಪ್ರಯತ್ನ ಮಾಡಿದರೂ ಏನು ಆಗುವುದಿಲ್ಲ. ನಾವೂ ಸಹ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ನಾವು ನಮ್ಮ ಕೆಲಸ ಮಾಡುತ್ತೇವೆ” ಎಂದು ಉತ್ತರಿಸಿದರು.

ಜಿಂದಾಲ್‌ಗೆ ಭೂಮಿ ಮಾರಾಟ ಮಾಡಿದ್ದನ್ನು ಈ ಹಿಂದೆ ವಿರೋಧಿಸಿದ್ದ ಕಾಂಗ್ರೆಸ್ ಅದೇ ಜಿಂದಾಲ್‌ಗೆ ಭೂಮಿ ಮಾರಾಟ ಮಾಡಿದೆ ಎಂದು ಕೇಳಿದಾಗ, “ಉದ್ಯೋಗ ಸೃಷ್ಟಿಯಾಗಬೇಕು. ರಾಜ್ಯಕ್ಕೆ ಕೈಗಾರಿಕೆಗಳು ಬರಬೇಕು. ಕರ್ನಾಟಕದಲ್ಲಿ ಇರುವ ಕೈಗಾರಿಕಾ ಕಾನೂನಿಗೆ ತಕ್ಕಂತೆ ಅವರಿಗೆ ಭೂಮಿ ನೀಡಿದ್ದೇವೆ. ನಾವು ಅವರಿಗೆ ಹೊಸದಾಗಿ ಭೂಮಿ ಕೊಟ್ಟಿಲ್ಲ. ಈ ಹಿಂದೆ ಕೊಟ್ಟಿದ್ದನ್ನೇ ಪರಿಶೀಲಿಸಿ ಸೇಲ್ ಡೀಡ್ ಮಾಡಿಕೊಟ್ಟಿದ್ದೇವೆ. ಸಾವಿರಾರು ಲಕ್ಷಾಂತರ ಜನ ಕೈಗಾರಿಕೆಗಳಿಗೆ ಅನುಕೂಲ ಮಾಡಿಕೊಟ್ಟಂತೆ ಇಲ್ಲಿಯೂ ಅದನ್ನೇ ಮಾಡಲಾಗಿದೆ. ಬಿಜೆಪಿಯವರು ಮಾಡಿದ್ದನ್ನು ನಾವು ಸರಿ ಮಾಡಿಕೊಟ್ಟಿದ್ದೇವೆ” ಎಂದು ತಿಳಿಸಿದರು.

ಪರಮೇಶ್ವರ್ ಅವರು ಸಹ ದೆಹಲಿಗೆ ಭೇಟಿ ನೀಡುತ್ತಿರುವ ಬಗ್ಗೆ ಕೇಳಿದಾಗ “ಬರುವವರನ್ನು ಬೇಡ ಎನ್ನಲು ಆಗುತ್ತದೆಯೇ? ಅವರದೇ ಇಲಾಖೆ ಕೆಲಸ, ಪಕ್ಷದ ಕೆಲಸ ಇರುತ್ತದೆ. ನಮಗೂ ಸಹ ಎರಡೂ ಕೆಲಸಗಳಿದ್ದು, ಎಲ್ಲರೂ ಒಟ್ಟಿಗೆ ಹೋಗುತ್ತಿದ್ದೇವೆ” ಎಂದು ಹೇಳಿದರು.

ರಾಜ್ಯಪಾಲರ ಜೊತೆ ಸಂಘರ್ಷ: ಸತೀಶ್ ಜಾರಕಿಹೊಳಿ‌

ಹಲವು ರಾಜ್ಯಗಳಲ್ಲಿ ರಾಜ್ಯಪಾಲರು ಮತ್ತು ಸರ್ಕಾರ ನಡುವೆ ಸಂಘರ್ಷ ನಡೆದಿವೆ.‌ ತಮಿಳುನಾಡು, ಪಶ್ಚಿಮ ಬಂಗಾಳ ಸೇರಿ ನಮ್ಮ ರಾಜ್ಯದಲ್ಲೂ ನಡೀತಿದೆ. ರಾಜ್ಯಪಾಲರು ಕೆಲ ಬಿಲ್‌ಗಳನ್ನು ವಾಪಸ್ ಕಳಿಸಿದ್ದಾರೆ. ಅವರಿಗೆ ಬಿಲ್ ಕುರಿತು ಸ್ಪಷ್ಟನೆ ಕೇಳೋಕೆ ಹಕ್ಕಿದೆ. ಅದಕ್ಕೆ ಸರ್ಕಾರ ಕೂಡ ಉತ್ತರ ಕೊಡುತ್ತದೆ ಎಂದು ಸತೀಶ್‌ ಜಾರಕಿಹೊಳಿ (Satish Jarakiholi) ಹೇಳಿದ್ದಾರೆ.

ಸರ್ಕಾರ ಅಸ್ಥಿರ‌ಗೊಳಿಸುವ ಕುರಿತು ವಿಪಕ್ಷಗಳ ಹೇಳಿಕೆ ವಿಚಾರದಲ್ಲಿ, ಸರ್ಕಾರ ಅಸ್ಥಿರಗೊಳಿಸುವ‌ ಹೇಳಿಕೆ ಹಳೆಯದ್ದು. ಹಿಂದೆಯಿಂದಲೂ ಈ ರೀತಿ ಹೇಳಿಕೆ ಕೊಟ್ಟಿದ್ದಾರೆ. ಆದರೆ ಯಾವುದೇ ಬದಲಾವಣೆ ಆಗಲ್ಲ. ಮುಂದಿನ ನಾಲ್ಕು ವರ್ಷಗಳ ಕಾಲ ನಮ್ಮದೇ ಸರ್ಕಾರ ಎಂದವರು ಸ್ಪಷ್ಟಪಡಿಸಿದರು.

ಸಿಎಂ, ಡಿಸಿಎಂ ದೆಹಲಿ ಭೇಟಿ ವಿಚಾರದಲ್ಲಿ, ಈ ವಿಚಾರ ನನಗೇನೂ ಗೊತ್ತಿಲ್ಲ. ಸಾಮಾನ್ಯವಾಗಿ ಇಲ್ಲಿ ನಡೀತಿರುವ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತರುವ ಕೆಲಸ ಆಗ್ತಿದೆ. ಅದೇ ಕಾರಣಕ್ಕೆ ದೆಹಲಿಗೆ ಹೋಗಿದ್ದಾರೆ. ಪ್ರಾಸಿಕ್ಯೂಶನ್ ಅನುಮತಿ ನಂತರ ಹೈಕಮಾಂಡ್ ತೀರ್ಮಾನ ಏನು ಎಂಬ ವಿಚಾರದಲ್ಲಿ ಯಾವುದೇ ಕ್ಲಾರಿಫಿಕೇಷನ್ ಬಂದಿಲ್ಲ. ಕೋರ್ಟ್‌ನಲ್ಲಿ ಆದೇಶ ಬಂದ ಮೇಲೆ ಮುಂದಿನ ತೀರ್ಮಾನ. ಇಂಡಿಯಾ ಒಕ್ಕೂಟ ‌ಏನು ತೀರ್ಮಾನ ಕೈಗೊಳ್ಳುತ್ತದೆ ನೋಡಬಹುದು ಎಂದು ಜಾರಕಿಹೊಳಿ ಹೇಳಿದರು.

ಇದನ್ನೂ ಓದಿ: Water Price Hike: ಬೆಂಗಳೂರಿನಲ್ಲಿ ನೀರಿನ ದರ ಏರಿಕೆಗೆ ವೇಗ; ನಿಮಗೆ ಎಷ್ಟಾಗುತ್ತೆ ಚೆಕ್‌ ಮಾಡಿ

Continue Reading

ಬೆಂಗಳೂರು

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಏತ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿ

Yettinahole Project: ರಾಜ್ಯದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯು ನಿರ್ಣಾಯಕ ಘಟ್ಟ ತಲುಪಿದ್ದು, ಏತ ಕಾಮಗಾರಿಗಳ ಯಶಸ್ವಿ ಪೂರ್ವ ಪರೀಕ್ಷಾರ್ಥ ಕಾರ್ಯಾಚರಣೆ ನಡೆಸಲಾಗಿದೆ.

VISTARANEWS.COM


on

Yettinahole project
Koo

ಬೆಂಗಳೂರು: ಕುಡಿಯುವ ನೀರಿನ ತೀವ್ರ ಅಭಾವ ಎದುರಿಸುತ್ತಿರುವ ರಾಜ್ಯದ ಹಾಸನ, ಚಿಕ್ಕಮಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಂತರ್ಜಲ ಮರುಪೂರಣಕ್ಕಾಗಿ ಕೈಗೆತ್ತಿಕೊಂಡಿರುವ ರಾಜ್ಯದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯು (Yettinahole Project) ನಿರ್ಣಾಯಕ ಘಟ್ಟ ತಲುಪಿದ್ದು, ಮೊದಲನೇ ಹಂತದ ಏತ ಕಾಮಗಾರಿಗಳ ಯಶಸ್ವಿ ಪೂರ್ವ ಪರೀಕ್ಷಾರ್ಥ ಕಾರ್ಯಾಚರಣೆ ನಡೆಸಲಾಗಿದೆ ಎಂದು ಜಲಸಂಪನ್ಮೂಲ ಇಲಾಖೆ ತಿಳಿಸಿದೆ.

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ, ಪಶ್ಚಿಮಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆಹೊಳೆ, ಕೇರಿಹೊಳೆ ಮತ್ತು ಹೊಂಗದಹಳ್ಳದಿಂದ ಮುಂಗಾರು ಮಳೆ ಅವಧಿಯಲ್ಲಿ (139 ದಿನಗಳು) 24.01 ಟಿ.ಎಂ.ಸಿ ಪ್ರಮಾಣದ ಪ್ರವಾಹದ ನೀರನ್ನು 7 ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರಿನ ಬರಪೀಡಿತ 29 ತಾಲೂಕಿನ 38 ಪಟ್ಟಣ ಪ್ರದೇಶದ ಹಾಗೂ 6657 ಗ್ರಾಮಗಳ ಸುಮಾರು 75.59 ಲಕ್ಷ (Projected population for 2023-24) ಜನರಿಗೆ ಮತ್ತು ಜಾನುವಾರುಗಳಿಗೆ 14.056 ಟಿ.ಎಂ.ಸಿ ಕುಡಿಯುವ ನೀರನ್ನು ಒದಗಿಸುವುದು. ಜೊತೆಗೆ 5 ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಹಾಸನ ಹಾಗೂ ತುಮಕೂರು ವ್ಯಾಪ್ತಿಯಲ್ಲಿ ಬರುವ 527 ಕೆರೆಗಳಿಗೆ 9.953 ಟಿ.ಎಂ.ಸಿ ಪ್ರಮಾಣದ ನೀರನ್ನು ಕೆರೆಗಳ ಸಾಮರ್ಥ್ಯದ ಶೇ. 50 ರಷ್ಟು ತುಂಬಿಸಿ ಅಂತರ್ಜಲ ಮರುಪೂರಣ ಮಾಡುವ 23,251.66 ಕೋಟಿ ರೂ. ಮೊತ್ತದ ಉದ್ದೇಶಿತ ರಾಜ್ಯದ ಮಹತ್ವಾಕಾಂಕ್ಷೆಯ ಕುಡಿಯುವ ನೀರಿನ ಯೋಜನೆ ಇದಾಗಿದೆ.

2014ರಲ್ಲಿ ಆರಂಭಗೊಂಡ ಯೋಜನೆಯ ಮೊದಲನೇ ಹಂತದ ಏತ ಮತ್ತು ವಿದ್ಯುತ್ ಪೂರೈಕೆಯ ಕಾಮಗಾರಿಗಳ ಅನುಷ್ಠಾನದಲ್ಲಿ ಬಹುದಿನಗಳಿಂದ ಉದ್ಭವಿಸಿದ್ದ ಅಡಚಣೆಗಳನ್ನು ನಿವಾರಿಸಿಕೊಂಡು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದ್ದು, ಪ್ರಸ್ತುತ ವಿಯರ್-1,4 ಮತ್ತು 5 ರಿಂದ ನೀರನ್ನೆತ್ತಿ (ಒಟ್ಟಾರೆ 35.50 ಕ್ಯುಸೆಕ್) ವಿತರಣಾ ತೊಟ್ಟಿ-3 ರವರೆಗೆ (Delivery Chamber-3) ಪೂರೈಸಿ ತದನಂತರ ವಿತರಣಾ ತೊಟ್ಟಿ-3 ರಿಂದ ನೀರನ್ನೆತ್ತಿ ವಿತರಣಾ ತೊಟ್ಟಿ-4 ರ ಮುಖಾಂತರ ಗುರುತ್ವ ಕಾಲುವೆಗೆ ನೀರನ್ನು ಹರಿಸಲು ಯೋಜಿಸಲಾಗಿದೆ. ಗುರುತ್ವ ಕಾಲುವೆಯು ಒಟ್ಟು 252.61 ಕಿ.ಮೀ ಉದ್ದವಿದ್ದು, ಈ ಪೈಕಿ ಸ:42.00 ಕಿ.ಮೀ ವರಗಿನ ಕಾಮಗಾರಿಗಳು ಪೂರ್ಣಗೊಂಡಿದ್ದು, ನಂತರದ ಕಾಮಗಾರಿಗಳು ಅರಣ್ಯ ಮತ್ತು ಭೂಸ್ವಾಧೀನ ಸಮಸ್ಯೆಯಿಂದಾಗಿ ಪೂರ್ಣಗೊಂಡಿರದ ಕಾರಣ, ಗುರುತ್ವ ಕಾಲುವೆಯ ಸ:32.50 ಕಿ.ಮೀ ನಲ್ಲಿರುವ ನಾಲಾ ಎಸ್ಕೇಪ್ ಮೂಲಕ ಸುಮಾರು 132.50 ಕಿ.ಮೀ ದೂರದಲ್ಲಿರುವ ವಾಣಿ ವಿಲಾಸ ಸಾಗರಕ್ಕೆ ವೇದಾ ವ್ಯಾಲಿಯ ಮುಖಾಂತರ ತಾತ್ಕಾಲಿಕವಾಗಿ ನೀರನ್ನು ಹರಿಸಲು ಕಾರ್ಯಕ್ರಮ ರೂಪಿಸಲಾಗಿದೆ.

ಇದರನ್ವಯ ನವೆಂಬರ್-2023 ರಿಂದಲೇ ಪೂರ್ವ ಪರಿಕ್ಷಾರ್ಥ ಚಾಲನಾ ಚಟುವಟಿಕೆಗಳನ್ನು ಕೈಗೊಳ್ಳಲಾಗಿದ್ದು, ವಿಯರ್-4&5 ರಿಂದ ನೀರನ್ನೆತ್ತಿ ವಿತರಣಾ ತೊಟ್ಟಿ-3 ರವರೆಗೆ ನೀರನ್ನು ಪೂರೈಸಲಾಗಿತ್ತು. ಪ್ರಸ್ತುತ ಇವುಗಳ ಜೊತೆ ವಿಯರ್-1 ರಿಂದಲೂ ಸಹ ನೀರನ್ನೆತ್ತಿ ವಿತರಣಾ ತೊಟ್ಟಿ-4 ರವರೆಗೆ ಪೂರೈಸಿ, ಅಲ್ಲಿಂದ ಗುರುತ್ವ ಕಾಲುವೆಗೆ ಆ.20ರಂದು ಯಶಸ್ವಿಯಾಗಿ ನೀರು ಹರಿಸಲಾಗಿದ್ದು, ಗುರುತ್ವ ಕಾಲುವೆಯಲ್ಲಿನ ನೀರು ಸ:32.50 ಕಿ.ಮೀ ನಲ್ಲಿರುವ ನಾಲಾ ಎಸ್ಕೇಪ್ ಮೂಲಕ ವೇದಾ ವ್ಯಾಲಿಯನ್ನು ಪ್ರವೇಶಿಸಿ ಈಗಾಗಲೇ ಹಳೇಬೀಡು ಮತ್ತು ಬೆಳವಾಡಿ ಕೆರೆಗಳು ತುಂಬಿ ಕೋಡಿ ಬಿದ್ದು, ವಾಣ ವಿಲಾಸ ಸಾಗರದತ್ತ ನೀರು ಹರಿಯುತ್ತಿದೆ.

ಪ್ರಸಕ್ತ ವಿಯರ್-3 ಅನ್ನು ಹೊರತುಪಡಿಸಿ, ಉಳಿದ ಎಲ್ಲಾ ವಿಯರ್‌ಗಳಿಂದ ಸೆಪ್ಟೆಂಬರ್-5ರೊಳಗೆ ಪೂರ್ವ ಪರೀಕ್ಷಾರ್ಥವಾಗಿ ನೀರನ್ನೆತ್ತಿ ಗುರುತ್ವ ಕಾಲುವೆಗೆ ಪೂರೈಸಲು ಯೋಜಿಸಲಾಗಿದೆ. ಪ್ರಸ್ತುತ ಪ್ರಗತಿಯಲ್ಲಿರುವ ಪೂರ್ವ ಪರೀಕ್ಷಾರ್ಥ ಚಟುವಟಿಗಳನ್ನು ಪೂರ್ಣಗೊಳಿಸಿ, ಶೀಘ್ರದಲ್ಲಿಯೇ ಅಧಿಕೃತವಾಗಿ ಮಾನ್ಯ ಮುಖ್ಯಮಂತ್ರಿಗಳ ಹಾಗೂ ಉಪ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಯೋಜನೆಯ ಕಾಮಗಾರಿಗಳಿಗೆ ಪ್ರಾಯೋಗಿಕ ಚಾಲನೆ ನೀಡಿ ರಾಜ್ಯಕ್ಕೆ ಸಮರ್ಪಿಸಲಾಗುತ್ತದೆ.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗಾಗಿ 2024ರ ಜುಲೈ ಅಂತ್ಯದವರೆಗೆ ಒಟ್ಟಾರೆ ಸಂಚಿತ 16,152.05 ಕೋಟಿ ರೂ. ಆರ್ಥಿಕ ಪ್ರಗತಿ ಸಾಧಿಸಲಾಗಿದ್ದು, ಯೋಜನೆಯನ್ನು 2026-27ನೇ ಸಾಲಿನಲ್ಲಿ 2027ರ ಮಾ.31 ಅಂತ್ಯಕ್ಕೆ ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಕಾರ್ಯಕ್ರಮ ರೂಪಿಸಲಾಗಿದೆ.

ಇದನ್ನೂ ಓದಿ | Water Price Hike: ಬೆಂಗಳೂರು ಜಲಮಂಡಳಿಗೆ ₹87 ಕೋಟಿ ಬಾಕಿ ಉಳಿಸಿಕೊಂಡು ಶ್ರೀಸಾಮಾನ್ಯನ ಬೆನ್ನಿಗೆ ಬರೆ ಹಾಕಲು ಮುಂದಾದ ರಾಜ್ಯ ಸರ್ಕಾರ!

ಎತ್ತಿನಹೊಳೆ ಯೋಜನೆಯ ಜಲಾನಯನ ಪ್ರದೇಶದಲ್ಲಿ ನಿರ್ಮಿಸಲಾಗಿರುವ 8 ವಿಯರ್‌ಗಳ ಹತ್ತಿರ ನೀರಿನ ಹರಿವನ್ನು ನಿಖರವಾಗಿ ಅಳೆಯುವ ಉದ್ದೇಶದಿಂದ (Real time discharge measurement) ಜರ್ಮನ್ ತಂತ್ರಜ್ಞಾನವನ್ನೊಳಗೊಂಡ Telemetry ವ್ಯವಸ್ಥೆಯನ್ನು 2018 ರಲ್ಲಿ ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನ ಮುಂಗಾರಿನ ಹಂಗಾಮಿನಲ್ಲಿ ಜೂನ್-1 ರಿಂದ ಆಗಸ್ಟ್-20 ರವರೆಗೆ 13.34 ಟಿ.ಎಂ.ಸಿ ನೀರು ದಾಖಲಾಗಿರುವ ಪೈಕಿ ತಿರುವುಗೊಳಿಸಬಹುದಾದಂತಹ ನೀರಿನ ಪ್ರಮಾಣವು 9.23 ಟಿ.ಎಂ.ಸಿ ಗಳಾಗಿರುತ್ತದೆ ಎಂದು ಜಲಸಂಪನ್ಮೂಲ ಇಲಾಖೆ ಮಾಹಿತಿ ನೀಡಿದೆ.

Continue Reading

ಪ್ರಮುಖ ಸುದ್ದಿ

Water Price Hike: ಬೆಂಗಳೂರು ಜಲಮಂಡಳಿಗೆ ₹87 ಕೋಟಿ ಬಾಕಿ ಉಳಿಸಿಕೊಂಡು ಶ್ರೀಸಾಮಾನ್ಯನ ಬೆನ್ನಿಗೆ ಬರೆ ಹಾಕಲು ಮುಂದಾದ ರಾಜ್ಯ ಸರ್ಕಾರ!

Bwssb water price hike: “ಜಲಮಂಡಳಿಯಲ್ಲಿ ನೌಕಕರಿಗೆ ಸಂಬಳ ನೀಡಲು ಹಣವಿಲ್ಲ” ಎಂದು ಡಿಕೆಶಿ ಹೇಳಿದ್ದರು. ಹಣವಿಲ್ಲ ಯಾಕೆಂದರೆ ಇದೇ ಕಾರಣಕ್ಕೆ! ಇದೀಗ, ಈ ಭಾರವನ್ನೆಲ್ಲ ಶ್ರೀಸಾಮಾನ್ಯನ ತಲೆಯ ಮೇಲೆ ಹಾಕಿ ನಿರಾಳವಾಗಲು ಸರ್ಕಾರ ಚಿಂತನೆ ನಡೆಸಿರುವುದು ಕಂಡುಬಂದಿದೆ.

VISTARANEWS.COM


on

Bwssb water price hike
Koo

ಬೆಂಗಳೂರು: ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಅವರು ಬೆಂಗಳೂರಿಗೆ (Bangalore) ಸದ್ಯದಲ್ಲೇ ಕುಡಿಯುವ ನೀರಿನ (Drinking Water) ಬೆಲೆ ಏರಿಕೆ ಬಿಸಿ (Water Price Hike) ಮುಟ್ಟಿಸುವುದಾಗಿ ಹೇಳಿದ್ದರು. ಬಳಿಕ ನೀರಿನ ದರ ಏರಿಕೆ ಕುರಿತು ಚುರುಕಾಗಿರುವ ಜಲಮಂಡಳಿ (BWSSB), ಏರಿಕೆ ಪ್ರಸ್ತಾವವನ್ನು ಸರ್ಕಾರದ ಮುಂದಿಡಲು ಸಿದ್ಧಪಡಿಸಿದೆ. ಆದರೆ ವಾಸ್ತವ ಏನೆಂದರೆ, ಸ್ವತಃ ಸರ್ಕಾರವೇ ಜಲಮಂಡಳಿಗೆ ಕೋಟಿಗಟ್ಟಲೆ ಬಾಕಿ ಉಳಿಸಿಕೊಂಡಿದೆ! ರಾಜ್ಯ ಸರ್ಕಾರ ಮಾತ್ರವಲ್ಲ, ಕೇಂದ್ರ ಸರ್ಕಾರವೂ ಹಲವು ಕೋಟಿ ಬಾಕಿ ಉಳಿಸಿಕೊಂಡಿದೆ!

ಭಾರತೀಯ ಸೈನ್ಯ ಸೇರಿದಂತೆ ಅನೇಕ ದೊಡ್ಡ ದೊಡ್ಡ ಸರ್ಕಾರಿ ಸಂಸ್ಥೆಗಳು, ವಾಣಿಜ್ಯ ಸಂಸ್ಥೆಗಳು ಕೋಟಿಗಟ್ಟಲೆ ಹಣ ಜಲಮಂಡಳಿಗೆ ಪಾವತಿ ಮಾಡದೆ ಬಾಕಿ ಉಳಿಸಿಕೊಂಡಿವೆ. “ಜಲಮಂಡಳಿಯಲ್ಲಿ ನೌಕಕರಿಗೆ ಸಂಬಳ ನೀಡಲು ಹಣವಿಲ್ಲ” ಎಂದು ಡಿಕೆಶಿ ಹೇಳಿದ್ದರು. ಹಣವಿಲ್ಲ ಯಾಕೆಂದರೆ ಇದೇ ಕಾರಣಕ್ಕೆ! ಇದೀಗ, ಈ ಭಾರವನ್ನೆಲ್ಲ ಶ್ರೀಸಾಮಾನ್ಯನ ತಲೆಯ ಮೇಲೆ ಹಾಕಿ ನಿರಾಳವಾಗಲು ಸರ್ಕಾರ ಚಿಂತನೆ ನಡೆಸಿರುವುದು ಕಂಡುಬಂದಿದೆ.

ಕೋಟಿ ಕೋಟಿ ಕರೆಂಟ್ ಬಿಲ್ ಕಟ್ಟದೇ ಕಂಗಾಲಾದ ಜಲಮಂಡಳಿ ಇದರ ಹೊರೆ ತಪ್ಪಿಸಲು ಶ್ರೀಸಾಮಾನ್ಯರ ಮೇಲೆ ಹೇರಿಕೆ ಮಾಡಲು ಮುಂದಾಗಿರುವುದಂತೂ ಖಚಿತ. ಇದು ಬೆಲೆ ಏರಿಕೆ ಬಿಸಿಯಲ್ಲಿರುವ ಬೆಂಗಳೂರಿಗರಿಗೆ ಇನ್ನೊಂದು ಬಿಗ್ ಶಾಕ್.

ಯಾರ್ಯಾರ ಬಿಲ್‌ ಬಾಕಿ ಎಷ್ಟೆಷ್ಟು?

ಇಲ್ಲಿಯವರೆಗೆ ಜಲಮಂಡಳಿಗೆ ಬರಬೇಕಿರುವ ಬರೋಬ್ಬರಿ ₹663 ಕೋಟಿ ಹಣ ಪಾವತಿಯಾಗಿಲ್ಲ. ಇದರಲ್ಲಿ ರಾಜ್ಯ ಸರ್ಕಾರದ ಪಾಲು ₹87.91 ಕೋಟಿ. ಕೇಂದ್ರ ಸರ್ಕಾರ ₹25.70 ಕೋಟಿ ಹಣ ಉಳಿಸಿಕೊಂಡಿದೆ. ಬಿಬಿಎಂಪಿ ₹23.14 ಕೋಟಿ ಬಿಲ್‌ ಪಾವತಿ ಮಾಡದೆ ಉಳಿಸಿಕೊಂಡಿದೆ. ಭಾರತೀಯ ಸೇನೆ ಇಲಾಖೆ ₹35.99 ಕೋಟಿ ಪಾವತಿ ಮಾಡಿಲ್ಲ. ಸ್ಥಳೀಯ ಸಂಸ್ಥೆಗಳಿಂದ ₹10.48 ಕೋಟಿ ಹಣ ಚುಕ್ತಾ ಆಗಿಲ್ಲ. ಇನ್ನು ಗೃಹ, ವಾಣಿಜ್ಯ, ಕೈಗಾರಿಕೆ ಮತ್ತಿತರೆ ಬಾಕಿ ₹480.07 ಕೋಟಿಯಷ್ಟಿದೆ.

ಈ ಹಿಂದೆ ಎಚ್‌ಡಿ ದೇವೇಗೌಡರು ಸಿಎಂ‌ ಆಗಿದ್ದಾಗ ರಾಜ್ಯ ಸರ್ಕಾರ ₹100 ಕೋಟಿ ಬಿಡುಗಡೆ ಮಾಡಿತ್ತು. ಇದಾದ ಬಳಿಕ ಹಣವನ್ನೇ ನೀಡಿಲ್ಲ. ಇಷ್ಟೊಂದು ಹಣ ಬಾಕಿ ಉಳಿಸಿಕೊಂಡಿರುವವರ ಬಳಿ ವಸೂಲಿ ಮಾಡುವುದು ಬಿಟ್ಟು ನಮ್ಮ ಜೇಬಿಗೆ ಕೈ ಹಾಕುವುದೇಕೆ ಎಂದು ಶ್ರೀಸಾಮಾನ್ಯ ಪ್ರಶ್ನಿಸುತ್ತಿದ್ದಾನೆ. ಬಿಬಿಎಂಪಿ ಇದೀಗ ನೀಡಿರುವ ಆಸ್ತಿ ತೆರಿಗೆ ರಿಯಾಯಿತಿ, ಒನ್‌ ಟೈಮ್‌ ಸೆಟಲ್‌ಮೆಂಟ್‌ ರೀತಿಯಲ್ಲಿಯೇ ಜಲಮಂಡಳಿಯೂ ರಿಯಾಯಿತಿ ಕೊಟ್ಟು ವಸೂಲಿ ಮಾಡಲಿ ಎಂದು ಸಾಮಾನ್ಯ ಜನ ಹೇಳುತ್ತಿದ್ದಾರೆ.

ಎಷ್ಟು ನೀರು ಪೋಲಾಗುತ್ತಿದೆ?

ಬೆಂಗಳೂರು ನಗರಕ್ಕೆ ಪ್ರತಿ‌ದಿನ 1475 ಎಂಎಲ್‌ಡಿ ನೀರು ಪೈಪ್‌ಲೈನ್ ಮೂಲಕ ಪೂರೈಕೆಯಾಗುತ್ತಿದೆ. ಇದರಲ್ಲಿ ಶೇ.30ರಷ್ಟು ಕಾವೇರಿ ನೀರು ಪೋಲಾಗುತ್ತಿದೆ. ಇದರಲ್ಲಿ ಶೇ.13ರಷ್ಟು ಪೋಲು ಕಡಿಮೆ ಮಾಡಲು ಅವಕಾಶವಿದ್ದರೂ ಜಲಮಂಡಳಿ ನಿರ್ಲಕ್ಷ್ಯ ವಹಿಸಿದೆ. ನೀರು ಪೂರೈಕೆಗೆ ಬೆಸ್ಕಾಂನಿಂದ ಪ್ರತಿ ತಿಂಗಳು ₹80-85 ಕೋಟಿ ಕರೆಂಟ್ ಬಿಲ್ ಬರುತ್ತದೆ. ಇದರಲ್ಲಿ ಅನಗತ್ಯವಾಗಿ ಶೇ.20ರಷ್ಟು ವಿದ್ಯುತ್ ಬಳಕೆಯಾಗುತ್ತದೆ.

ನಗರದ 40ಕ್ಕೂ ಹೆಚ್ಚು ಓವರ್ ಹೆಡ್ ಟ್ಯಾಂಕ್‌ಗಳು ಬಳಕೆ ಆಗುತ್ತಿಲ್ಲ. ಇದಕ್ಕಾಗಿ ಅನಗತ್ಯ ಮೋಟರ್ ಬಳಕೆಯಾಗುತ್ತಿದೆ. ಸೋಲಾರ್ ಬಳಕೆಗೆ ಆದ್ಯತೆ ನೀಡಿಲ್ಲ. ಹೀಗೆ ಹಲವು ಕಡೆ ನೀರು, ಕರೆಂಟ್‌ ಬಿಲ್‌ ಉಳಿತಾಯ ಮಾಡುವ ಸಾಧ್ಯತೆ ಇದ್ದರೂ ಅದನ್ನು ಬಳಸಿಕೊಳ್ಳದ ಜಲಮಂಡಳಿ, ಈ ಹೊರೆಯನ್ನು ಸಾಮಾನ್ಯರ ಮೇಲೆ ವರ್ಗಾಯಿಸುತ್ತಿದೆ ಎಂದು ಜನ ಆಕ್ಷೇಪಿಸುತ್ತಿದ್ದಾರೆ.

ಇದನ್ನೂ ಓದಿ: Water Price Hike: ಬೆಂಗಳೂರಿನಲ್ಲಿ ನೀರಿನ ದರ ಏರಿಕೆಗೆ ವೇಗ; ನಿಮಗೆ ಎಷ್ಟಾಗುತ್ತೆ ಚೆಕ್‌ ಮಾಡಿ

Continue Reading

Latest

Sexual Abuse: ಮಹಿಳೆ ಮೇಲೆ ಅತ್ಯಾಚಾರ ಎಸಗಿ ಜನನಾಂಗದೊಳಗೆ ಗನ್ ತೂರಿಸಿದ ತೃಣಮೂಲ ಕಾರ್ಯಕರ್ತ!

Sexual Abuse: ಬಹಿರಿ ಪಂಚಚೋವಾ ಗ್ರಾಮ ಪಂಚಾಯತ್ ಪ್ರದೇಶದ ಕರೀಂಪುರದ ನಿವಾಸಿಯಾದ ಫಿರೋಜ್ ಖಾನ್ ಎಂಬಾತ ವಿವಾಹಿತ ಮಹಿಳೆಯನ್ನು ಬಂದೂಕು ತೋರಿಸಿ ಬಲವಂತವಾಗಿ ಅಪಹರಿಸಿ ದನದ ಕೊಟ್ಟಿಗೆಗೆ ಕರೆದೊಯ್ದು, ಅಲ್ಲಿ ಆಕೆಯ ಕೈ ಮತ್ತು ಕಾಲುಗಳನ್ನು ಕಟ್ಟಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೇ ಆರೋಪಿಯು ಸಂತ್ರಸ್ತೆಯ ಜನನಾಂಗಕ್ಕೆ ಗನ್ ತೂರಿಸುವ ಮೂಲಕ ಚಿತ್ರಹಿಂಸೆ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

VISTARANEWS.COM


on

Sexual Abuse
Koo


ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ (Sexual Abuse)ಮತ್ತು ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ವಿರುದ್ಧ ಬಿರ್ಭುಮ್ ಜಿಲ್ಲೆಯ ಬೋಲ್ಪುರ್ ಪೊಲೀಸ್ ಠಾಣೆಯಲ್ಲಿ ಬುಧವಾರ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿ ಫಿರೋಜ್ ಖಾನ್ ಎಂಬುದಾಗಿ ತಿಳಿದುಬಂದಿದ್ದು, ಘಟನೆಯ ನಂತರ ಆರೋಪಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ.

ಬಹಿರಿ ಪಂಚಚೋವಾ ಗ್ರಾಮ ಪಂಚಾಯತ್ ಪ್ರದೇಶದ ಕರೀಂಪುರದ ನಿವಾಸಿಯಾದ ಫಿರೋಜ್ ಖಾನ್, ವಿವಾಹಿತ ಮಹಿಳೆಯನ್ನು ಗನ್ ತೋರಿಸಿ ಬಲವಂತವಾಗಿ ಅಪಹರಿಸಿ ದನದ ಕೊಟ್ಟಿಗೆಗೆ ಕರೆದೊಯ್ದು, ಅಲ್ಲಿ ಆಕೆಯ ಕೈ ಮತ್ತು ಕಾಲುಗಳನ್ನು ಕಟ್ಟಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೇ ಆರೋಪಿಯು ಸಂತ್ರಸ್ತೆಯ ಜನನಾಂಗಕ್ಕೆ ಗನ್ ತೂರಿಸುವ ಮೂಲಕ ಚಿತ್ರಹಿಂಸೆ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಹಲ್ಲೆಯ ಸಮಯದಲ್ಲಿ ಆತ ಸಂತ್ರಸ್ತೆಯ ಪೋಟೊಗಳನ್ನು ಸಹ ತೆಗೆದುಕೊಂಡಿದ್ದಾನೆ ಎನ್ನಲಾಗಿದೆ. ನಂತರ ಅವಳ ನಾಲ್ಕು ವರ್ಷದ ಮಗ, ತನ್ನ ತಾಯಿಯನ್ನು ಹುಡುಕುತ್ತಾ ದನದ ಕೊಟ್ಟಿಗೆಗೆ ಬಂದಾಗ ತಾಯಿಯನ್ನು ಆ ಸ್ಥಿತಿಯಲ್ಲಿ ನೋಡಿದ ಮಗು ಅಳಲು ಪ್ರಾರಂಭಿಸಿತು. ಆಗ ಆರೋಪಿ ಟಿಎಂಸಿ ಕಾರ್ಯಕರ್ತ ಮಗುವನ್ನು ಬೆದರಿಸಿ ಗೋಣಿ ಚೀಲದಲ್ಲಿ ಕಟ್ಟಿಹಾಕಿದ್ದಾನೆ ಎಂಬುದಾಗಿ ವರದಿಯಾಗಿದೆ.

ಆರೋಪಿ ಫಿರೋಜ್ ಖಾನ್ ಹಲವಾರು ದಿನಗಳಿಂದ ತನಗೆ ಕಿರುಕುಳ ನೀಡುತ್ತಿದ್ದ. ಅವನು ತನ್ನೊಂದಿಗೆ ಅಕ್ರಮ ಸಂಬಂಧ ಹೊಂದುವಂತೆ ಅವಳಿಗೆ ಮುಂಗಡ ಹಣವನ್ನು ನೀಡಿದ್ದ. ಆದರೆ ಅವಳು ಅವನ ಪ್ರಸ್ತಾಪವನ್ನು ತಿರಸ್ಕರಿಸಿದಾಗ, ಅವನು ಅವಳ ತಲೆಗೆ ಗನ್ ಹಿಡಿದು ಕೊಲ್ಲುವುದಾಗ ಬೆದರಿಕೆ ಹಾಕಿದ. ಆನಂತರ ಆಕೆ ನೀರು ತರಲು ಹೋಗಿದಾಗ ಆಕೆ ಒಂಟಿಯಾಗಿರುವುದನ್ನು ತಿಳಿದ ಖಾನ್ ಅವಳನ್ನು ಗನ್‍ಪಾಯಿಂಟ್‌ನಲ್ಲಿ ಬೆದರಿಸಿ ಬಲವಂತವಾಗಿ ಏಕಾಂತ ಸ್ಥಳಕ್ಕೆ ಕರೆದೊಯ್ದನು, ಅಲ್ಲಿ ಅವನು ಅತ್ಯಾಚಾರ ಮಾಡಿದ. ಹಾಗೇ ಆಕೆಯ ಮಗನನ್ನು ಗೋಣಿಚೀಲದಲ್ಲಿ ಕಟ್ಟಿ ಕೊಲ್ಲಲು ಪ್ರಯತ್ನಿಸಿದ. ಘಟನೆಯ ನಂತರ, ಆಕೆ ಆತ್ಮಹತ್ಯೆಗೆ ಪ್ರಯತ್ನಿಸಿದಳು ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾಳೆ. ಹಲ್ಲೆಯ ನಂತರ, ಸಂತ್ರಸ್ತೆಯನ್ನು ಬೋಲ್ಪುರ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:ಶವಾಗಾರದಲ್ಲಿ ಶವಗಳ ಪಕ್ಕದಲ್ಲೇ ಲೈಂಗಿಕ ಕ್ರಿಯೆ! ಸಂಚಲನ ಮೂಡಿಸಿದೆ ಈ ವಿಡಿಯೊ

ಪೊಲೀಸರ ಪ್ರಕಾರ, ಮರ್ಯಾದೆಗೆ ಹೆದರಿ ಸಂತ್ರಸ್ತೆ ಹಲವಾರು ದಿನಗಳವರೆಗೆ ಘಟನೆಯನ್ನು ವರದಿ ಮಾಡಲು ಹಿಂಜರಿಯುತ್ತಿದ್ದಳು. ಅಂತಿಮವಾಗಿ, ಆಕೆಯ ಪತಿ ಆರೋಪಿಗಳ ವಿರುದ್ಧ ದೂರು ದಾಖಲಿಸಲು ಹೇಳಿದ್ದಾರೆ. ಹಾಗಾಗಿ ಸಂತ್ರಸ್ತೆ ಆಕೆಯ ಪತಿಯೊಂದಿಗೆ ನೀಡಿದ ದೂರಿನ ಆಧಾರದ ಮೇಲೆ ಬೋಲ್ಪುರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಆರೋಪಿ ಖಾನ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆಗಸ್ಟ್ 21 ರ ಬುಧವಾರ ಸಂತ್ರಸ್ತೆ ಮತ್ತು ಆಕೆಯ ಪತಿಯ ಹೇಳಿಕೆಯನ್ನು ದಾಖಲಿಸಿದ ನಂತರ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಖಾನ್ ನಿವಾಸ ಮತ್ತು ಇತರ ಅಡಗುತಾಣಗಳ ಮೇಲೆ ಪೊಲೀಸರು ದಾಳಿ ನಡೆಸುತ್ತಿದ್ದಾರೆ. ಈ ಘಟನೆಯು ಬೋಲ್ಪುರದ ಸಾರ್ವಜನಿಕರಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ.

Continue Reading
Advertisement
DK Shivakumar
ಪ್ರಮುಖ ಸುದ್ದಿ10 mins ago

DK Shivakumar: ಬಿಜೆಪಿಯವರ ಮಾತು ಕೇಳಿ 15 ಬಿಲ್ ವಾಪಸ್ ಕಳುಹಿಸಿದ ರಾಜ್ಯಪಾಲರು: ಕಿಡಿಕಾರಿದ ಡಿಕೆಶಿ

Yettinahole project
ಬೆಂಗಳೂರು21 mins ago

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಏತ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿ

Salman Khan
ಸಿನಿಮಾ32 mins ago

Salman Khan: ನಿಮ್ಮ ಚಿತ್ರವನ್ನು ನಾವು ಒಪ್ಪುತ್ತೇವೆ, ಆದರೆ ನಮ್ಮ ಚಿತ್ರವನ್ನು ನೀವು ಒಪ್ಪುವುದಿಲ್ಲವಲ್ಲ? ಚಿರುಗೆ ಸಲ್ಲು ಹೀಗೆ ಹೇಳಿದ್ದೇಕೆ?

Accident case
ಶಿವಮೊಗ್ಗ43 mins ago

Accident Case : ಈಜಲು ಚಂಪಕ ಸರಸು ಕಲ್ಯಾಣಿಗೆ ಜಿಗಿದ ಎಂಜಿನಿಯರ್‌ ಶವವಾಗಿ ಹೊರ ಬಂದ

Shraddha Kapoor- Shreyas Iyer
ಕ್ರೀಡೆ46 mins ago

Shraddha Kapoor- Shreyas Iyer: ಕ್ರಿಕೆಟಿಗ ಅಯ್ಯರ್​ ಜತೆ ಡೇಟಿಂಗ್ ಆರಂಭಿಸಿದ ನಟಿ ಶ್ರದ್ಧಾ ಕಪೂರ್‌; ಫೋಟೊ ವೈರಲ್​

Road Accident
ವಿದೇಶ59 mins ago

ನೇಪಾಳ: ನದಿಗೆ ಉರುಳಿದ ಭಾರತೀಯರು ಸೇರಿ 40 ಮಂದಿ ಪ್ರಯಾಣಿಸುತ್ತಿದ್ದ ಬಸ್‌; 14 ಮಂದಿ ಸಾವು?

Kolkata Doctor Murder Case
ಕ್ರೈಂ1 hour ago

Kolkata Doctor Murder Case: ಮಮತಾ ಬ್ಯಾನರ್ಜಿ ಆಡಳಿತದ ಕರಾಳ ಅಧ್ಯಾಯ ತೆರೆದಿಟ್ಟಿದೆ ಕೋಲ್ಕತಾ ವೈದ್ಯೆ ಕೊಲೆ ಪ್ರಕರಣ

Bwssb water price hike
ಪ್ರಮುಖ ಸುದ್ದಿ1 hour ago

Water Price Hike: ಬೆಂಗಳೂರು ಜಲಮಂಡಳಿಗೆ ₹87 ಕೋಟಿ ಬಾಕಿ ಉಳಿಸಿಕೊಂಡು ಶ್ರೀಸಾಮಾನ್ಯನ ಬೆನ್ನಿಗೆ ಬರೆ ಹಾಕಲು ಮುಂದಾದ ರಾಜ್ಯ ಸರ್ಕಾರ!

Ritika Sajdeh
ಕ್ರೀಡೆ2 hours ago

Ritika Sajdeh: ಜೂನಿಯರ್​ ಹಿಟ್​ಮ್ಯಾನ್​ ನಿರೀಕ್ಷೆಯಲ್ಲಿ ರೋಹಿತ್​; ಪತ್ನಿಯ ಬೇಬಿ ಬಂಪ್‌ ವಿಡಿಯೊ ವೈರಲ್​

Narendra Modi
ವಿದೇಶ2 hours ago

Narendra Modi: ಉಕ್ರೇನ್‌ಗೆ ಬಂದಿಳಿದ ಪ್ರಧಾನಿ ಮೋದಿ; ರಷ್ಯಾ ಜತೆಗಿನ ಸಂಘರ್ಷದ ಚರ್ಚೆ ಸಾಧ್ಯತೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌