Election Results 2024: 2014ರ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್‌ಗೆ 100 ಸೀಟು, ಮತ್ತೆ ಚಿಗುರಿದ ಪುರಾತನ ಪಕ್ಷ! - Vistara News

ಪ್ರಮುಖ ಸುದ್ದಿ

Election Results 2024: 2014ರ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್‌ಗೆ 100 ಸೀಟು, ಮತ್ತೆ ಚಿಗುರಿದ ಪುರಾತನ ಪಕ್ಷ!

Election Results 2024: ಬಿಜೆಪಿ (BJP) ನೇತೃತ್ವದ ಎನ್‌ಡಿಎ (NDA) 280 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಲೋಕಸಭೆಯ 543 ಸ್ಥಾನಗಳಲ್ಲಿ ಲಭ್ಯವಿರುವ ಟ್ರೆಂಡ್‌ ಪ್ರಕಾರ ಎನ್‌ಡಿಎ ಬಹುಮತದ ಅಂಕಿಯನ್ನು ದಾಟಿದೆ. ಆದರೆ ಕಾಂಗ್ರೆಸ್ ಸಹ ಮುನ್ನಡೆಯಲ್ಲಿ 100 ಅಂಕಗಳನ್ನು ದಾಟಿದೆ ಎಂದು ಚುನಾವಣಾ ಆಯೋಗದ ಅಂಕಿಅಂಶಗಳು ತೋರಿಸಿವೆ.

VISTARANEWS.COM


on

election results 2024 Congress party
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಲೋಕಸಭೆ ಚುನಾವಣೆಯ (lok sabha election 2024) ಮತ ಎಣಿಕೆ (Election Results 2024) ಅಂತಿಮ ಹಂತ ಪ್ರವೇಶಿಸುತ್ತಿರುವಂತೆ, ಕಾಂಗ್ರೆಸ್‌ (Congress) 100 ಲೋಕಸಭೆ ಸ್ಥಾನಗಳ ಆಸುಪಾಸಿನಲ್ಲಿದೆ. 2014ರ ನಂತರ ಇದೇ ಮೊದಲ ಬಾರಿಗೆ ಕಾಂಗ್ರೆಸ್‌ ಇಷ್ಟೊಂದು ಸ್ಥಾನಗಳನ್ನು ಪಡೆಯುತ್ತಿದ್ದು, ಪುರಾತನ ಪಕ್ಷ ಮರಳಿ ಚಿಗುರಿಕೊಂಡಂತಾಗಿದೆ.

ಬಿಜೆಪಿ (BJP) ನೇತೃತ್ವದ ಎನ್‌ಡಿಎ (NDA) 280 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಲೋಕಸಭೆಯ 543 ಸ್ಥಾನಗಳಲ್ಲಿ ಲಭ್ಯವಿರುವ ಟ್ರೆಂಡ್‌ ಪ್ರಕಾರ ಎನ್‌ಡಿಎ ಬಹುಮತದ ಅಂಕಿಯನ್ನು ದಾಟಿದೆ. ಆದರೆ ಕಾಂಗ್ರೆಸ್ ಸಹ ಮುನ್ನಡೆಯಲ್ಲಿ 100 ಅಂಕಗಳನ್ನು ದಾಟಿದೆ ಎಂದು ಚುನಾವಣಾ ಆಯೋಗದ ಅಂಕಿಅಂಶಗಳು ತೋರಿಸಿವೆ.

ಬಿಜೆಪಿ ಸದ್ಯ 242 ಸ್ಥಾನಗಳಲ್ಲಿ ಮುಂದಿದ್ದು, ಗುಜರಾತ್‌ನ ಸೂರತ್‌ನಲ್ಲಿ ಅವಿರೋಧವಾಗಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಬಣವು 200 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್‌ ಪಾಲಿಗೆ ಎಕ್ಸಿಟ್ ಪೋಲ್‌ಗಳಲ್ಲಿ ಕಂಡುಬಂದ ಭವಿಷ್ಯಕ್ಕಿಂತ ಉತ್ತಮವಾದ ಫಲಿತಾಂಶವೇ ಕಾಣಿಸಿಕೊಂಡಿದೆ. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷವು 33 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆ ಮಟ್ಟಿಗೆ ಉತ್ತರ ಪ್ರದೇಶದಲ್ಲಿ ಬಿಜೆಪಿ ದೊಡ್ಡ ಸೋಲನ್ನೇ ಅನುಭವಿಸುವ ಹಂತದಲ್ಲಿದೆ.

ನಿರೀಕ್ಷಿತ ಲೀಡ್‌ ಇಲ್ಲದೆ ಎನ್‌ಡಿಎಗೆ ನಿರಾಸೆ

ಲೋಕಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಆರಂಭಿಕ ಟ್ರೆಂಡ್ ಪ್ರಕಾರ ಮೋದಿ ನೇತೃತ್ವದ ಎನ್​ಡಿಎ ಒಕ್ಕೂಟಕ್ಕೆ ನಿರೀಕ್ಷೆ ಮಾಡಿದಷ್ಟು ಫಲಿತಾಂಶ ಮೂಡಿಬರುತ್ತಿಲ್ಲ. ಇದರಿಂದಾಗಿ ಭರ್ಜರಿ ಗೆಲುವಿನ ಅಭಿಲಾಷೆಯಲ್ಲಿದ್ದ ಎನ್​ಡಿಎಗೆ ನಿರಾಸೆಯಾಗಿದೆ. ಆದರೆ ಇದಕ್ಕೆ ಮೂಲಕ ಕಾರಣ ಬಿಜೆಪಿಯ ಭದ್ರಕೋಟೆಯಾಗಿರುವ ಉತ್ತರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ್, ರಾಜಸ್ಥಾನ್​​​ ರಾಜ್ಯಗಳಲ್ಲಿ ಹಿನ್ನಡೆ ಉಂಟಾಗಿರುವುದು. ಜತೆಗೆ ಹರಿಯಾಣ ಹಾಗೂ ಪಂಜಾಬ್​ನಲ್ಲೂ ಬಿಜೆಪಿಗೆ ಯಾವುದೇ ರೀತಿಯಲ್ಲಿ ಲಾಭವಾಗಿಲ್ಲ.

2019ರಲ್ಲಿ ಗುಜರಾತ್​ನಲ್ಲಿ ಬಿಜೆಪಿ 26ಕ್ಕೆ 26 ಕ್ಷೇತ್ರಗಳನ್ನೂ ಗೆದ್ದಿತ್ತು. ಆದರೆ, ಈ ಬಾರಿ ಸುಮಾರು 4 ಸ್ಥಾನಗಳನ್ನು ಕಳೆದುಕೊಳ್ಳುವ ಸಾಧ್ಯತೆಗಳಿವೆ. ಉತ್ತರ ಪ್ರದೇಶದಲ್ಲಿ 2019ರಲ್ಲಿ 62 ಸ್ಥಾನ ಗೆದ್ದಿದ್ದ ಬಿಜೆಪಿ ಈ ಬಾರಿ 43 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಪಡೆದುಕೊಂಡಿದೆ. ಉಳಿದ ಸ್ಥಾನಗಳನ್ನು ಎಸ್​ಪಿಗೆ ಸಿಗಲಿದೆ.

ಮಹಾರಾಷ್ಟ್ರದಲ್ಲಿ ಎನ್​ಡಿಎ 22 ಸ್ಥಾನಗಳನ್ನು ಮಾತ್ರ ಪಡೆದುಕೊಂಡಿದೆ. ಒಟ್ಟು 48ರಲ್ಲಿ 41 ಸ್ಥಾನಗಳನ್ನು 2019ರಲ್ಲಿ ಗೆದ್ದುಕೊಂಡಿತ್ತು. ಪಂಜಾಬ್​ನಲ್ಲಿಯೂ 13 ಸ್ಥಾನಗಳಲ್ಲಿ ಕಾಂಗ್ರೆಸ್​​ 6, ಆಪ್​ 3 ಹಾಗೂ ಎಸ್​ಡಿಎಮ್​ ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಹಿಂದೆ ಇಲ್ಲೂ 2 ಸ್ಥಾನಗಳನ್ನು ಗೆದ್ದುಕೊಂಡಿತ್ತು. ರಾಜಸ್ಥಾನದಲ್ಲಿ ಬಿಜೆಪಿ 14 ಸ್ಥಾನಗಳನ್ನು ಮಾತ್ರ ಪಡೆದುಕೊಂಡಿದ್ದು ಕಾಂಗ್ರೆಸ್ 8 ಹಾಗೂ ಇತರರು 3 ಸ್ಥಾನಗಳನ್ನು ಪಡೆದುಕೊಂಡಿದ್ದಾರೆ. 2019ರಲ್ಲಿ ಅಲ್ಲಿ 25 ಕ್ಷೇತ್ರಗಳನ್ನೂ ಬಿಜೆಪಿ ಗೆದ್ದುಕೊಂಡಿತ್ತು. ಇಲ್ಲೂ ಸಾಕಷ್ಟು ನಷ್ಟವಾಗಿದೆ. ಆದರೆ ಮಧ್ಯಪ್ರದೇಶಲ್ಲಿ ಬಿಜೆಪಿಗೆ ಭರ್ಜರಿ ಲಾಭವಾಗಿದೆ.

ಹರಿಯಾಣದಲ್ಲಿ ಕಾಂಗ್ರೆಸ್​ ಪಕ್ಷವೇ 8 ಸ್ಥಾನ ಮುನ್ನಡೆ ಪಡೆದುಕೊಂಡಿದ್ದು, ಬಿಜೆಪಿ ಕೈಯಲ್ಲಿ ಒಂದು ಸ್ಥಾನ ಮಾತ್ರ ಇದೆ. ಆದರೆ, 2019ರಲ್ಲಿ ಇಲ್ಲಿ ಬಿಜೆಪಿ ಎಲ್ಲ 10 ಸೀಟುಗಳನ್ನು ಗೆದ್ದುಕೊಂಡಿತ್ತು.

ಮೋದಿಗೆ ಮತ್ತೆ ಲೀಡ್​

ದೇಶಕ್ಕೆ ದೇಶವೇ ಕುತೂಹಲದಿಂದ ಕಾಯುತ್ತಿರುವ ಲೋಕಸಭೆ ಚುನಾವಣೆಯ ಮತಎಣಿಕೆ (Election Results 2024) ಆರಂಭವಾಗಿದ್ದು, ಎನ್‌ಡಿಎ ಮೈತ್ರಿಕೂಟವು (NDA) ಆರಂಭದಲ್ಲಿಯೇ ಭರ್ಜರಿ ಮುನ್ನಡೆ ಸಾಧಿಸಿದೆ. ಎನ್‌ಡಿಎಯು 291ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಮುನ್ನಡೆಯಲ್ಲಿಯೇ ಮ್ಯಾಜಿಕ್‌ ನಂಬರ್‌ (272) ದಾಟಿದೆ. ಅತ್ತ, ಇಂಡಿಯಾ ಒಕ್ಕೂಟವೂ (India Bloc) ಎನ್‌ಡಿಎಗೆ ಸ್ಪರ್ಧೆಯೊಡ್ಡುತ್ತಿದ್ದು, 223ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ವಾರಾಣಸಿಯಲ್ಲಿ ಭಾರಿ ಮುನ್ನಡೆಯಾಗಿದೆ.

ಇದನ್ನೂ ಓದಿ: Election Results 2024: ಜಯನಗರ ಮತ ಎಣಿಕೆ ಕೇಂದ್ರದಲ್ಲಿ ಟಿ ಶರ್ಟ್‌ ಕಿರಿಕ್‌; ಕೆಆರ್‌ಎಸ್ ಪಾರ್ಟಿಯ ಅಭ್ಯರ್ಥಿ ಔಟ್‌

ಉತ್ತರ ಪ್ರದೇಶದ ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 33 ಸಾವಿರ ಮತಗಳ ಮುನ್ನಡೆ ಗಳಿಸಿದ್ದರು. ಇದಕ್ಕೂ ಮೊದಲು ಮೋದಿ ಅವರಿಗೆ 6,223 ಮತಗಳ ಹಿನ್ನಡೆಯಾಗಿತ್ತು. ಕಾಂಗ್ರೆಸ್‌ನ ಅಜಯ್‌ ರಾಯ್‌ ಅವರು ಆರಂಭಿಕ ಹಂತದ ಮತಎಣಿಕೆಯಲ್ಲಿ 11,480 ಮತಗಳನ್ನು ಪಡೆದಿದ್ದರೆ, ನರೇಂದ್ರ ಮೋದಿ ಅವರು 5,257 ಮತಗಳನ್ನಷ್ಟೇ ಪಡೆದು ಹಿನ್ನಡೆ ಅನುಭವಿಸಿದ್ದರು. ಆದರೆ, ನಂತರದ ಹಂತಗಳಲ್ಲಿ ಮೋದಿ ಅವರು ಭಾರಿ ಮುನ್ನಡೆ ಸಾಧಿಸಿದರು. ‌

ಇದನ್ನೂ ಓದಿ: Lok Sabha Election Results 2024: ಎರಡೂ ಕಡೆಗಳಲ್ಲಿ ರಾಹುಲ್‌ ಗಾಂಧಿಗೆ ಭರ್ಜರಿ ಮುನ್ನಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಈ ರಾಶಿಯವರು ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವಿರಿ ಈ ದಿನ ಎಚ್ಚರಿಕೆ ಇರಲಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ನವಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhvishya
Koo

ಚಂದ್ರನು ಮೇಷ ರಾಶಿಯಿಂದ ಭಾನುವಾರ ಬೆಳಗ್ಗೆ 08:00ಕ್ಕೆ ವೃಷಭ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ,ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರ ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ವೃಷಭ ರಾಶಿಯವರು ಹಾಸ್ಯಪ್ರಜ್ಞೆಯ ನಡವಳಿಕೆಯಿಂದಾಗಿ ಇತರರನ್ನು ಚುಂಬಕದಂತೆ ಆಕರ್ಷಿಸಿ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿಕೊಳ್ಳುವಿರಿ. ಭೂ ಹಾಗೂ ಹೂಡಿಕೆ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ತೊಡುಗುವುದು ಬೇಡ. ಇದರಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (30-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ನವಮಿ 12:18 ವಾರ: ಭಾನುವಾರ
ನಕ್ಷತ್ರ: ರೇವತಿ 07:33 ಯೋಗ: ಅತಿಗಂಡ 16:13
ಕರಣ: ಗರಜ 12:18 ಅಮೃತಕಾಲ: ರಾತ್ರಿ 11:34ರಿಂದ 01:06ರವರೆಗೆ
ದಿನದ ವಿಶೇಷ: ಲಿಂಗಾನಂದಸ್ವಾಮಿ ಆರಾಧನೆ, ಹಲಾಪುರಕೋಟೇಶ್ವರ ರಥ

ಸೂರ್ಯೋದಯ : 05:57   ಸೂರ್ಯಾಸ್ತ : 06:50

ರಾಹುಕಾಲ: ಸಂಜೆ 05:13 ರಿಂದ 06:50
ಗುಳಿಕಕಾಲ: ಮಧ್ಯಾಹ್ನ 03:37 ರಿಂದ05:13

ಯಮಗಂಡಕಾಲ: ಮಧ್ಯಾಹ್ನ 12:23 ರಿಂದ 02:00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರ ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಹಾಸ್ಯಪ್ರಜ್ಞೆಯ ನಡವಳಿಕೆಯಿಂದಾಗಿ ಇತರರನ್ನು ಚುಂಬಕದಂತೆ ಆಕರ್ಷಿಸಿ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿಕೊಳ್ಳುವಿರಿ. ಭೂ ಹಾಗೂ ಹೂಡಿಕೆ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ತೊಡುಗುವುದು ಬೇಡ. ಇದರಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಉತ್ಸಾಹ ತುಂಬಿದ ವಾತಾವರಣ ಇರಲಿದೆ. ಇಂದು ನೀವು ಚೈತನ್ಯಯುಕ್ತವಾಗಿ ಇರುವಿರಿ. ಅನಾವಶ್ಯಕ ಖರ್ಚು ಮಾಡಿ ಆಮೇಲೆ ದುಃಖಿಸುವುದು ಬೇಡ. ಕುಟುಂಬದ ಯಜಮಾನನ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕಟಕ: ನೀವು ಇತರರನ್ನು ಶ್ಲಾಘಿಸುವ ಮೂಲಕ ಯಶಸ್ಸನ್ನು ಆನಂದಿಸುವ ಸಾಧ್ಯತೆ ಇದೆ. ವ್ಯಾಪಾರ ಹಾಗೂ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಪ್ರೇಮಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಆತ್ಮವಿಶ್ವಾಸದಿಂದ ಮಾಡಿದ ಕೆಲಸ ಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಆಪ್ತರೊಂದಿಗೆ ವಾದಕ್ಕಿಳಿಯುವ ಸಾಧ್ಯತೆ ಇದೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳು ಉಜ್ವಲ ಭವಿಷ್ಯಕ್ಕಾಗಿ ಮನೋರಂಜನೆಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳು ನಿಮಗೆ ಪುಷ್ಟಿ ನೀಡಲಿವೆ. ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಒಂದು ಯಶಸ್ವಿ ದಿನ. ವಿವಾಹ ಅಪೇಕ್ಷಿತರಿಗೆ ಶುಭ ಸೂಚನೆ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸದೃಢವಾಗಿ ಇರುವಿರಿ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಜೀವನದ ಪ್ರಮುಖ ನಿರ್ಧಾರಗಳ ಕುರಿತು ನೀವು ಕುಟುಂಬದೊಂದಿಗೆ ಚರ್ಚಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ : ಹಳೆಯ ಸ್ನೇಹಿತರೊಂದಿಗೆ ಆತ್ಮೀಯ ಮಾತುಕತೆಯಲ್ಲಿ ತೊಡಗುವಿರಿ. ಭವಿಷ್ಯದ ಕುರಿತು ಹೂಡಿಕೆ ಬಗ್ಗೆ ಆಲೋಚನೆ ಮಾಡುವಿರಿ. ಸಂಗಾತಿಯಿಂದ ಸಲಹೆ ಪಡೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅನೇಕ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಕೋರ್ಟ್ ಕಚೇರಿ ವ್ಯಾಜ್ಯಗಳು ವಿಜಯವನ್ನು ತಂದು ಕೊಡಲಿವೆ. ದಿನದ ಕೊನೆಯಲ್ಲಿ ಯಾವುದಾದರೂ ಕಾರಣದಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಕರ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಯಾವುದೋ ಮೂಲದಿಂದ ಆರ್ಥಿಕವಾಗಿ ಬಲಗೊಳ್ಳಲಿದ್ದೀರಿ. ಕುಟುಂಬ ಸದಸ್ಯರ ಅಪಸ್ವರದಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಮಾತಿಗೆ ವಿರಾಮ ನೀಡಿ. ಉದ್ಯೋಗಿಗಳಿಗೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ನಿಮ್ಮ ಕೋಪದ ಮನಸ್ಥಿತಿ ಇತರರ ಮೇಲೆ ಪ್ರಭಾವ ಬೀರಬಹುದು. ಅನಿವಾರ್ಯ ಕಾರಣಗಳಿಂದ ಸ್ನೇಹಿತರ ಸಹಾಯ ಬೇಡುವ ಸಾಧ್ಯತೆ ಇದೆ. ನಿಮ್ಮ ಕೆಲಸದ ಮೇಲೆ ಗಮನ ಹರಿಸಿದಲ್ಲಿ ಯಶಸ್ಸು ಮತ್ತು ಮನ್ನಣೆ ನಿಮ್ಮದಾಗುತ್ತದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಹೊಂದಲಿದ್ದೀರಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮೀನ: ಅನಿವಾರ್ಯ ಕಾರಣಗಳಿಂದ ಕುಟುಂಬದ ಸದಸ್ಯರೊಂದಿಗೆ ಮನಸ್ತಾಪ ,ಆದಾಗ್ಯೂ ನೀವು ನಿಮ್ಮ ಶಾಂತ ಸ್ವಭಾವದಿಂದ ಎಲ್ಲವನ್ನು ಸರಿಗೊಳಿಸಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

Suryakumar Yadav : ಭಾರತ ಕ್ರಿಕೆಟ್ ಇತಿಹಾಸದಲ್ಲಿ ಅದ್ಬುತ ಕ್ಯಾಚ್ ಹಿಡಿದ ಸೂರ್ಯಕುಮಾರ್​; ವಿಶ್ವ ಕಪ್​ ಗೆಲ್ಲಲು ಭಾರತಕ್ಕೆ ನೆರವಾಗಿದ್ದೂ ಇದೇ ಕ್ಯಾಚ್​​

Suryakumar Yadav :

VISTARANEWS.COM


on

Suryakumar Yadav
Koo

ನವದೆಹಲಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐಸಿಸಿ ಟಿ 20 ವಿಶ್ವಕಪ್ ಫೈನಲ್ 2024 ರ ಫೈನಲ್​ ಪಂದ್ಯದಲ್ಲಿ ಬೌಂಡರಿ ಲೈನ್​ನಲ್ಲಿದ್ದ ಫೀಲ್ಡರ್​ ಸೂರ್ಯಕುಮಾರ್ ಯಾದವ್ (Suryakumar Yadav ) ಆಕರ್ಷಕ ಜಗ್ಲಿಂಗ್ ಕ್ಯಾಚ್​ ಹಿಡಿದಿದ್ದಾರೆ. ಇದು ಭಾರತದ ಕ್ರಿಕೆಟ್​ ಇತಿಹಾಸ ಸ್ಮರಣೀಯ ಕ್ಯಾಚ್​ ಆಗಿ ಇತಿಹಾಸ ಪುಸ್ತಕ ಸೇರಲಿದೆ. ಯಾಕೆಂದರೆ ಅದೇ ಕ್ಯಾಚ್​ನಿಂದ ಭಾರತ ತಂಡ ಗೆಲುವು ಸಾಧಿಸಿದೆ ಎಂದೂ ಹೇಳಬಹುದು. ಯಾಕೆಂದರೆ ಅವರು ಔಟ್ ಮಾಡಿದ್ದು 19.1 ಓವರ್​ನಲ್ಲಿ ಹೊಡೆಬಡಿಯ ಬ್ಯಾಟರ್​​ ಡೇವಿಡ್​ ಮಿಲ್ಲರ್ ಅವರನ್ನು. ಅದೇನಾದರು ಸಿಕ್ಸರ್ ಹೋಗಿದ್ದರೆ ಭಾರತಕ್ಕೆ ಸೋಲಾಗುತ್ತಿತ್ತು.

ಅದಕ್ಕಿಂತ ಮೊದಲು ಹೆನ್ರಿಚ್​ ಕ್ಲಾಸೆನ್ ಅಮೋಘ 52 ರನ್ ಗಳಿಸಿ ಭಾರತದ ಗೆಲುವು ಕಸಿಯಲು ಯತ್ನಿಸಿದ್ದರು. ಆದರೆ, ಹಾರ್ದಿಕ್ ಪಾಂಡ್ಯ 17ನೇ ಓವರ್​ನಲ್ಲಿ ಕ್ಲಾಸೆನ್ ಅವರನ್ನು ಔಟ್ ಮಾಡುವ ಮೂಲಕ ಪಂದ್ಯವನ್ನು ತಮ್ಮ ಕಡೆಗೆ ತಿರುಗಿಸಿದರು. ಕೊನೆಯ ಎರಡು ಓವರ್​ಗಳಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 20 ರನ್​ಗಳ ಅವಶ್ಯಕತೆಯಿತ್ತು.

ನಂತರ ಅರ್ಶ್​ದೀಪ್​ ಸಿಂಗ್ 19ನೇ ಓವರ್​ನಲ್ಲಿ ಕೇವಲ 4 ರನ್ ನೀಡಿ ಮಿಂಚಿದರು. ಅಂತಿಮ ಓವರ್​ನಲ್ಲಿ ದಕ್ಷಿಣ ಆಫ್ರಿಕಾಕ್ಕೆ 16 ರನ್​ಗಳ ಅವಶ್ಯಕತೆಯಿತ್ತು. ಮೊದಲ ಎಸೆತಕ್ಕೆ ಡೇವಿಡ್ ಮಿಲ್ಲರ್ ಹಾರ್ದಿಕ್ ಪಾಂಡ್ಯ ಅವರನ್ನು ಎದುರಿಸಿದರು. ಮಿಲ್ಲರ್ ದಕ್ಷಿಣ ಆಫ್ರಿಕಾದ ಕೊನೆಯ ಬಲಾಢ್ಯ ಬ್ಯಾಟ್ಸ್ಮನ್ ಆಗಿದ್ದರು. ಅವರಿಗೆ ತಂಡವನ್ನು ಗೆಲ್ಲಿಸುವ ಜವಾಬ್ದಾರಿ ಇತ್ತು. ಮತ್ತೊಂದೆಡೆ, ಮಿಲ್ಲರ್ ಅವರ ವಿಕೆಟ್ ಭಾರತಕ್ಕೆ ಪಂದ್ಯವನ್ನು ಗೆಲ್ಲಲು ನಿರ್ಣಾಯಕವಾಗಿತ್ತು.

ಸೂರ್ಯಕುಮಾರ್ ಯಾದವ್ ಅವರ ಅದ್ಭುತ ಪ್ರಯತ್ನದಿಂದಾಗಿ ಪಂದ್ಯ ಫಲಿತಾಂಶವನ್ನು ಮೊದಲ ಎಸೆತದಲ್ಲೇ ನಿರ್ಧರಿಸಲಾಯಿತು. ಪಾಂಡ್ಯ ವೈಡ್​ ಕಡೆಗೆ ಲೊ ಫುಲ್ ಟಾಸ್ ಎಸೆದರು. ಮಿಲ್ಲರ್ ಅದನ್ನು ಲಾಂಗ್ ಆಫ್ ಕಡೆಗೆ ಹೊಡೆದರು. ಚೆಂಡು ಬೌಂಡರಿ ಹಗ್ಗವನ್ನು ದಾಟಲು ಸಿದ್ಧವಾಗಿತ್ತು ಆದರೆ ಸೂರ್ಯಕುಮಾರ್ ಯಾದವ್ ಚುರುಕಾದರು.

ಭಾರತದ ಸ್ಟಾರ್ ಫೀಲ್ಡರ್​ ಓಡಿ ಬಂದರು. ಚೆಂಡನ್ನು ಹಿಡಿದು ಗಾಳಿಯಲ್ಲಿ ಎಸೆದು ಬೌಂಡರಿ ಲೈನ್ ದಾಟಿ ಮತ್ತೆ ಬಂದು ಹಿಡಿದರು. ಇದು ಈ ದಶಕದ ಅಮೋಘ ಕ್ಯಾಚ್ ಎಂದರೂ ಕಡಿಮೆಯೇ. ಯಾಕೆಂದರೆ ಇದು ನಿರ್ಣಾಯಕ ಕ್ಯಾಚ್ ಅಗಿತ್ತು. ಮಿಲ್ಲರ್ ಅವರ ಔಟ್ ನಿಂದಾಗಿ ಭಾರತ 7 ರನ್ ಗಳಿಂದ ಪಂದ್ಯವನ್ನು ಗೆದ್ದು 17 ವರ್ಷಗಳ ನಂತರ ಟಿ 20 ವಿಶ್ವಕಪ್ ಅನ್ನು ಗೆದ್ದುಕೊಂಡಿತು. 2007ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ ಕೊನೆಯ ಬಾರಿಗೆ ಟಿ20 ವಿಶ್ವಕಪ್ ಗೆದ್ದಿತ್ತು. ಈ ಮೂಲಕ ಎರಡು ಬಾರಿ ಪ್ರಶಸ್ತಿ ಗೆದ್ದ ಏಷ್ಯಾದ ಮೊದಲ ಹಾಗೂ ಒಟ್ಟಾರೆ ಮೂರನೇ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.

ಇದನ್ನೂ ಓದಿ: Virat Kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ ವಿರಾಟ್​​ ಕೊಹ್ಲಿ

ಕ್ಲಾಸೆನ್ 27 ಎಸೆತಗಳಲ್ಲಿ 52 ರನ್ ಗಳಿಸುವುದರೊಂದಿಗೆ ದಕ್ಷಿಣ ಆಫ್ರಿಕಾ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿತು. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ 76 ರನ್ ಬಾರಿಸುವುದರೊಂದಿಗೆ ಭಾರತ 7 ವಿಕೆಟ್ ನಷ್ಟಕ್ಕೆ 176 ರನ್ ಪೇರಿಸಿತ್ತು.

Continue Reading

ಪ್ರಮುಖ ಸುದ್ದಿ

Rohit Sharma : ಕೊಹ್ಲಿ ಹಾದಿ ತುಳಿದ ರೋಹಿತ್​, ಟಿ20 ಐ ಕ್ರಿಕೆಟ್​​ಗೆ ವಿದಾಯ ಹೇಳಿದ ಟೀಮ್ ಇಂಡಿಯಾ ನಾಯಕ

Rohit Sharma : ನಾನು ಈ ಮಾದರಿಯ ಪ್ರತಿಯೊಂದು ಕ್ಷಣವನ್ನು ಪ್ರೀತಿಸುತ್ತೇನೆ. ನಾನು ಈ ಸ್ವರೂಪದಲ್ಲಿ ಆಡುವ ಮೂಲಕ ನನ್ನ ಭಾರತ ವೃತ್ತಿಜೀವನವನ್ನು ಪ್ರಾರಂಭಿಸಿದೆ. ನಾನು ಈಗ ಏನು ಮಾಡಿದ್ದೇನೋ ಅದನ್ನೇ ಮಾಡಲು ಬಯಸಿದ್ದೆ. ಕಪ್ ಗೆದ್ದು ವಿದಾಯ ಹೇಳಿದೆ ಎಂದು ಬಾರ್ಬಡೋಸ್​ನಲ್ಲಿ ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

VISTARANEWS.COM


on

Rohit Sharma
Koo

ಬೆಂಗಳೂರು: ಭಾರತ ತಂಡದ ನಾಯಕ ಹಾಗೂ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ (Rohit Sharma) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ್ದಾರೆ. ಈ ಮೂಲಕ ಅವರು ತಮ್ಮ ಸಹ ಆಟಗಾರ ವಿರಾಟ್ ಕೊಹ್ಲಿಯ ಹಾದಿಯನ್ನೇ ತುಳಿದಿದ್ದಾರೆ. ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಸ್ವೀಕರಿಸುವ ವೇಳೆ ತಮ್ಮ ನಿವೃತ್ತಿಯ ವಿಷಯವನ್ನು ಘೋಷಿಸಿದರೆ ರೋಹಿತ್ ಶರ್ಮಾ ಗೆಲುವಿನ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಅದು ನನ್ನ ಕೊನೆಯ ಪಂದ್ಯವೂ ಆಗಿತ್ತು. ಪ್ರಾಮಾಣಿಕವಾಗಿ, ನಾನು ಈ ಸ್ವರೂಪವನ್ನು ಆಡಲು ಪ್ರಾರಂಭಿಸಿದ ಸಮಯದಿಂದ ನಾನು ಸಿಕ್ಕಾಪಟ್ಟೆ ಖುಷಿಯಲ್ಲಿದ್ದೆ. ಈ ಸ್ವರೂಪಕ್ಕೆ ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ. ನಾನು ಈ ಮಾದರಿಯ ಪ್ರತಿಯೊಂದು ಕ್ಷಣವನ್ನು ಪ್ರೀತಿಸುತ್ತೇನೆ. ನಾನು ಈ ಸ್ವರೂಪದಲ್ಲಿ ಆಡುವ ಮೂಲಕ ನನ್ನ ಭಾರತ ವೃತ್ತಿಜೀವನವನ್ನು ಪ್ರಾರಂಭಿಸಿದೆ. ನಾನು ಈಗ ಏನು ಮಾಡಿದ್ದೇನೋ ಅದನ್ನೇ ಮಾಡಲು ಬಯಸಿದ್ದೆ. ಕಪ್ ಗೆದ್ದು ವಿದಾಯ ಹೇಳಿದೆ ಎಂದು ಬಾರ್ಬಡೋಸ್​ನಲ್ಲಿ ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

ಇದನ್ನೂ ಓದಿ: T20 World Cup 2024 : 13 ವರ್ಷಗಳ ಕಾಯುವಿಕೆ ಅಂತ್ಯ, ಕೊನೆಗೂ ವಿಶ್ವ ಕಪ್​ ಗೆದ್ದ ಭಾರತ

ಟೆಸ್ಟ್ ಮತ್ತು ಏಕದಿನ ಸ್ವರೂಪಗಳಲ್ಲಿ ಭಾರತಕ್ಕಾಗಿ ಮುಂದುವರಿಯುವುದಾಗಿ ರೋಹಿತ್ ಹೇಳಿದರು, ಆದರೆ ಅವರು ಕಡಿಮೆ ಫಾರ್ಮ್ನಿಂದ ಹಿಂದೆ ಸರಿಯುತ್ತಿದ್ದಾರೆ ಎಂದು ಹೇಳಿದರು.

ವಿರಾಟ್ ಕೊಹ್ಲಿ ಮೊದಲ ವಿದಾಯ ಹೇಳಿದ್ದರು

ಬೆಂಗಳೂರು: ಆಧುನಿಕ ಯುಗದ ಅತ್ಯಂತ ಪ್ರಭಾವಿ ಕ್ರಿಕೆಟಿಗ, ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್​ ಕೊಹ್ಲಿ (Virat Kohli) ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದಾರೆ. ಟಿ20 ವಿಶ್ವ ಕಪ್​ನ ಫೈನಲ್​​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್ ಬಾರಿಸಿ ಗೆಲುವಿನ ಸೂತ್ರಧಾರ ಎನಿಸಿಕೊಳ್ಳುವ ಜತೆಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಅವರು ಈ ಘೋಷಣೆಯನ್ನು ಮಾಡಿದರು. ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡ ಬಳಿಕ ಮಾತನಾಡಿದ ಅವರು ಇದು ನನ್ನ ಕೊನೆಯ ಟಿ20 ಅಂತಾರಾಷ್ಟ್ರೀಯ ಪಂದ್ಯ ಹಾಗೂ ಕೊನೇ ಟಿ20 ವಿಶ್ವ ಕಪ್ ಎಂದು ಹೇಳಿದರು. ಈ ಮೂಲಕ ಅವರು ದೀರ್ಘ ಕಾಲದ ಟಿ20 ಅಂತಾರಾಷ್ಟ್ರೀಯ ಅಭಿಯಾನವನ್ನು ಕೊನೆಗೊಳಿಸಿದ್ದಾರೆ.

ವಿರಾಟ್​ ಕೊಹ್ಲಿ ಕೇವಲ ಟಿ20 ಮಾತ್ರ ಎಂದು ಹೇಳಿರುವ ಕಾರಣ ಅವರು ಏಕ ದಿನ ಹಾಗೂ ಟೆಸ್ಟ್​ ಪಂದ್ಯಗಳಲ್ಲಿ ಆಡಲಿದ್ದಾರೆ. ಅದೇ ರೀತಿ ಅವರು ಅತಿ ಹೆಚ್ಚು ಆರಾಧಿಸಲ್ಪಡುವ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ತಮ್ಮ ಸೇವೆ ಮುಂದುವರಿಸಲಿದ್ದಾರೆ.

ಇದು ನನ್ನ ಕೊನೇ ಟಿ20 ಅಂತಾರಾಷ್ಟ್ರಿಯ ಪಂದ್ಯ. ಅದೇ ರೀತಿ ನನ್ನ ಟಿ20 ಅಂತಾರಾಷ್ಟ್ರೀಯ ಪಂದ್ಯ. ಇದು ಎಲ್ಲರಿಗೂ ಗೊತ್ತಿದ್ದ ಗುಟ್ಟಾಗಿತ್ತು. ನಾನು ಈ ಪಂದ್ಯದಲ್ಲಿ ಸೋತು ಟ್ರೋಫಿ ಗೆಲ್ಲದೇ ಹೋಗಿದ್ದರೂ ಕೊನೇ ಅಂತಾರಾಷ್ಟ್ರೀಯ ಪಂದ್ಯವಾಗಿತ್ತು. ಆದರೆ ಈ ಗೆದ್ದಿದ್ದೇನೆ . ಈ ಸಂತೋಷಕ್ಕೆ ಪಾರವೇ ಇಲ್ಲ. ಹೊಸ ಪೀಳಿಗೆಯ ಆಟಗಾರರಿಗೆ ನಾನು ಸ್ಥಳಾವಕಾಶ ಮಾಡಿಕೊಡಲೇಬೇಕು ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Virat Kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ ವಿರಾಟ್​​ ಕೊಹ್ಲಿ

VIrat Kohli: ವಿರಾಟ್​ ಕೊಹ್ಲಿ ಕೇವಲ ಟಿ20 ಮಾತ್ರ ಎಂದು ಹೇಳಿರುವ ಕಾರಣ ಅವರು ಏಕ ದಿನ ಹಾಗೂ ಟೆಸ್ಟ್​ ಪಂದ್ಯಗಳಲ್ಲಿ ಆಡಲಿದ್ದಾರೆ. ಅದೇ ರೀತಿ ಅವರು ಅತಿ ಹೆಚ್ಚು ಆರಾಧಿಸಲ್ಪಡುವ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ತಮ್ಮ ಸೇವೆ ಮುಂದುವರಿಸಲಿದ್ದಾರೆ.

VISTARANEWS.COM


on

Virat Kohli
Koo

ಬೆಂಗಳೂರು: ಆಧುನಿಕ ಯುಗದ ಅತ್ಯಂತ ಪ್ರಭಾವಿ ಕ್ರಿಕೆಟಿಗ, ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್​ ಕೊಹ್ಲಿ (Virat Kohli) ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದಾರೆ. ಟಿ20 ವಿಶ್ವ ಕಪ್​ನ ಫೈನಲ್​​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್ ಬಾರಿಸಿ ಗೆಲುವಿನ ಸೂತ್ರಧಾರ ಎನಿಸಿಕೊಳ್ಳುವ ಜತೆಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಅವರು ಈ ಘೋಷಣೆಯನ್ನು ಮಾಡಿದರು. ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡ ಬಳಿಕ ಮಾತನಾಡಿದ ಅವರು ಇದು ನನ್ನ ಕೊನೆಯ ಟಿ20 ಅಂತಾರಾಷ್ಟ್ರೀಯ ಪಂದ್ಯ ಹಾಗೂ ಕೊನೇ ಟಿ20 ವಿಶ್ವ ಕಪ್ ಎಂದು ಹೇಳಿದರು. ಈ ಮೂಲಕ ಅವರು ದೀರ್ಘ ಕಾಲದ ಟಿ20 ಅಂತಾರಾಷ್ಟ್ರೀಯ ಅಭಿಯಾನವನ್ನು ಕೊನೆಗೊಳಿಸಿದ್ದಾರೆ.

ವಿರಾಟ್​ ಕೊಹ್ಲಿ ಕೇವಲ ಟಿ20 ಮಾತ್ರ ಎಂದು ಹೇಳಿರುವ ಕಾರಣ ಅವರು ಏಕ ದಿನ ಹಾಗೂ ಟೆಸ್ಟ್​ ಪಂದ್ಯಗಳಲ್ಲಿ ಆಡಲಿದ್ದಾರೆ. ಅದೇ ರೀತಿ ಅವರು ಅತಿ ಹೆಚ್ಚು ಆರಾಧಿಸಲ್ಪಡುವ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ತಮ್ಮ ಸೇವೆ ಮುಂದುವರಿಸಲಿದ್ದಾರೆ.

ಇದು ನನ್ನ ಕೊನೇ ಟಿ20 ಅಂತಾರಾಷ್ಟ್ರಿಯ ಪಂದ್ಯ. ಅದೇ ರೀತಿ ನನ್ನ ಟಿ20 ಅಂತಾರಾಷ್ಟ್ರೀಯ ಪಂದ್ಯ. ಇದು ಎಲ್ಲರಿಗೂ ಗೊತ್ತಿದ್ದ ಗುಟ್ಟಾಗಿತ್ತು. ನಾನು ಈ ಪಂದ್ಯದಲ್ಲಿ ಸೋತು ಟ್ರೋಫಿ ಗೆಲ್ಲದೇ ಹೋಗಿದ್ದರೂ ಕೊನೇ ಅಂತಾರಾಷ್ಟ್ರೀಯ ಪಂದ್ಯವಾಗಿತ್ತು. ಆದರೆ ಈ ಗೆದ್ದಿದ್ದೇನೆ . ಈ ಸಂತೋಷಕ್ಕೆ ಪಾರವೇ ಇಲ್ಲ. ಹೊಸ ಪೀಳಿಗೆಯ ಆಟಗಾರರಿಗೆ ನಾನು ಸ್ಥಳಾವಕಾಶ ಮಾಡಿಕೊಡಲೇಬೇಕು ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

ಇದು ನನ್ನ ಕೊನೆಯ ಟಿ 20 ವಿಶ್ವಕಪ್, ಇದನ್ನು ನಾವು ಸಾಧಿಸಲು ಬಯಸಿದ್ದೆವು. ದೇವರು ದೊಡ್ಡವನು. ಕೇವಲ ಭಾರತಕ್ಕಾಗಿ ಆಡುವ ನನ್ನ ಕೊನೆಯ ಟಿ 20 ಪಂದ್ಯವಾಗಿತ್ತು. ನಾವು ಆ ಕಪ್ ಅನ್ನು ಎತ್ತಲು ಬಯಸಿದ್ದೆವು. ಹೌದು, ಇದು ಬಹಿರಂಗ ರಹಸ್ಯವಾಗಿತ್ತು ಎಂದು ಕೊಹ್ಲಿ ಹೇಳಿದ್ದಾರೆ.

ನಾವು ಸೋತರೂ ನಾನು ಅದನ್ನು ಘೋಷಿಸಲು ಹೋಗುತ್ತಿರಲಿಲ್ಲ. ಮುಂದಿನ ಪೀಳಿಗೆಯು ಟಿ 20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ. ಐಸಿಸಿ ಪಂದ್ಯಾವಳಿಯನ್ನು ಗೆಲ್ಲಲು ಕಾಯುತ್ತಿರುವ ನಮಗೆ ಇದು ಬಹಳ ಸಮಯದ ಕಾಯುವಿಕೆಯಾಗಿತ್ತು. ನೀವು ರೋಹಿತ್ ಅವರನ್ನು ನೋಡಿ. ಅವರು 9 ಟಿ 20 ವಿಶ್ವಕಪ್​ಗಳನ್ನು ಆಡಿದ್ದಾರೆ ಮತ್ತು ಇದು ನನ್ನ ಆರನೇ ಪಂದ್ಯವಾಗಿದೆ. ಟ್ರೋಫಿಗೆ ಅವರು ಅರ್ಹರು. ಭಾವನೆಗಳನ್ನು ತಡೆಹಿಡಿಯುವುದು ಕಷ್ಟ ಎಂದು ನಾನು ಭಾವಿಸುತ್ತೇನೆ. ಇದು ಅದ್ಭುತ ದಿನ ಮತ್ತು ನಾನು ಕೃತಜ್ಞನಾಗಿದ್ದೇನೆ ಎಂದು ಕೊಹ್ಲಿ ಹೇಳಿದ್ದಾರೆ.

ಕೊಹ್ಲಿಯ ಭರ್ಜರಿ ಬ್ಯಾಟಿಂಗ್​

ಫೈನಲ್ ಪಂದ್ಯದಲ್ಲ ವಿರಾಟ್ ಕೊಹ್ಲಿ ಭಾರತ ತಂಡಕ್ಕೆ ಆಧಾರವಾಗಿದ್ದರು. ಈ ಮೂಲಕ ಅವರು ಕೊನೇ ಪಂದ್ಯವನ್ನು ಸ್ಮರಣೀಯಗೊಳಿಸಿದರು. ಇಡೀ ಟೂರ್ನಿಯಲ್ಲಿ ವೈಫಲ್ಯ ಕಂಡಿದ್ದ ಅವರು ಫೈನಲ್​ನಲ್ಲಿ 59 ಎಸೆತಕ್ಕೆ 76 ರನ್ ಮಿಂಚಿದರು. ಅವರ ಕೊಡುಗೆಯಿಂದಾಗಿ ಭಾರತ 176 ರನ್​ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿತು ಹಾಗೂ ಕೊನೇ ಹಂತದ ಬೌಲರ್​ಗಳ ಹೋರಾಟದಿಂದ ಗೆದ್ದಿತು.

Continue Reading
Advertisement
Suryakumar Yadav
ಪ್ರಮುಖ ಸುದ್ದಿ7 mins ago

Suryakumar Yadav : ಭಾರತ ಕ್ರಿಕೆಟ್ ಇತಿಹಾಸದಲ್ಲಿ ಅದ್ಬುತ ಕ್ಯಾಚ್ ಹಿಡಿದ ಸೂರ್ಯಕುಮಾರ್​; ವಿಶ್ವ ಕಪ್​ ಗೆಲ್ಲಲು ಭಾರತಕ್ಕೆ ನೆರವಾಗಿದ್ದೂ ಇದೇ ಕ್ಯಾಚ್​​

Dina Bhvishya
ಭವಿಷ್ಯ7 mins ago

Dina Bhavishya : ಈ ರಾಶಿಯವರು ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವಿರಿ ಈ ದಿನ ಎಚ್ಚರಿಕೆ ಇರಲಿ

Rohit Sharma
ಪ್ರಮುಖ ಸುದ್ದಿ3 hours ago

Rohit Sharma : ಕೊಹ್ಲಿ ಹಾದಿ ತುಳಿದ ರೋಹಿತ್​, ಟಿ20 ಐ ಕ್ರಿಕೆಟ್​​ಗೆ ವಿದಾಯ ಹೇಳಿದ ಟೀಮ್ ಇಂಡಿಯಾ ನಾಯಕ

Virat Kohli
ಪ್ರಮುಖ ಸುದ್ದಿ5 hours ago

Virat Kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ ವಿರಾಟ್​​ ಕೊಹ್ಲಿ

T20 World Cup
ಪ್ರಮುಖ ಸುದ್ದಿ6 hours ago

T20 World Cup 2024 : 13 ವರ್ಷಗಳ ಕಾಯುವಿಕೆ ಅಂತ್ಯ, ಕೊನೆಗೂ ವಿಶ್ವ ಕಪ್​ ಗೆದ್ದ ಭಾರತ

Progress review meeting at Karwar ZP office
ಉತ್ತರ ಕನ್ನಡ6 hours ago

Uttara Kannada News: ಕೂಸಿನ ಮನೆ ಯೋಜನೆ ಯಶಸ್ವಿಗೊಳಿಸಿ: ಉಮಾ ಮಹಾದೇವನ್

Tupolev fighter jet INS Chapel warship open for public viewing
ಉತ್ತರ ಕನ್ನಡ6 hours ago

Uttara Kannada News: ಟುಪಲೇವ್ ಯುದ್ಧ ವಿಮಾನ, ಐ.ಎನ್.ಎಸ್.ಚಾಪೆಲ್ ಯುದ್ಧನೌಕೆ ಸಾರ್ವಜನಿಕ ವೀಕ್ಷಣೆಗೆ ಮುಕ್ತ

narendra modi dk shivakumar siddaramaiah
ಪ್ರಮುಖ ಸುದ್ದಿ6 hours ago

DK Shivakumar: ರಾಜ್ಯಕ್ಕೊಂದು ಗಿಫ್ಟ್‌ ಸಿಟಿಗೆ ಪ್ರಧಾನಿ ಮುಂದೆ ಬೇಡಿಕೆ: ಡಿಸಿಎಂ ಡಿ‌.ಕೆ.ಶಿವಕುಮಾರ್

T20 World Cup
ಪ್ರಮುಖ ಸುದ್ದಿ7 hours ago

T20 World Cup : ಘರ್ಜಿಸಿದ ಕಿಂಗ್ ಕೊಹ್ಲಿ, 176 ರನ್ ಬಾರಿಸಿದ ಭಾರತ, ಇದು ವಿಶ್ವ ಕಪ್​ ಫೈನಲ್​ನಲ್ಲಿ ಗರಿಷ್ಠ ಸ್ಕೋರ್​

cm siddaramaiah T20 World Cup Final
ಪ್ರಮುಖ ಸುದ್ದಿ7 hours ago

T20 World Cup Final: ವಿಮಾನ ನಿಲ್ದಾಣದಲ್ಲೂ ಸಿದ್ದರಾಮಯ್ಯಗೆ ವಿಶ್ವಕಪ್‌ ಕ್ರಿಕೆಟ್‌ ಧ್ಯಾನ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ12 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ18 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ1 day ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌