ಪ್ರಮುಖ ಸುದ್ದಿ
ವಿಸ್ತಾರ ಸಂಪಾದಕೀಯ | ಮಕ್ಕಳ ಶಾಲಾ ಪ್ರವಾಸ ಸುರಕ್ಷಿತವಾಗಿರಲಿ
ಕೊರೊನಾದಿಂದಾಗಿ ಎರಡು ವರ್ಷಗಳಿಂದ ಸ್ಥಗಿತವಾಗಿದ್ದ ಶಾಲಾ ಪ್ರವಾಸಗಳನ್ನು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮತ್ತೆ ಆರಂಭಿಸಲಾಗಿದೆ. ಆದರೆ, ಅನೇಕ ಕಡೆ ಪ್ರವಾಸಕ್ಕೆ ತೆರಳಿದ ವಾಹನಗಳು ಅಪಘಾತಕ್ಕೀಡಾಗಿ, ಮಕ್ಕಳ ದುರ್ಮರಣಗಳಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಪ್ರವಾಸದ ವೇಳೆ ಮಕ್ಕಳ ಸುರಕ್ಷತೆಗೆ ಗರಿಷ್ಠ ಆದ್ಯತೆ ನೀಡಬೇಕಿದೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೊಳಗಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಮೃತಪಟ್ಟು, 25 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪ್ರವಾಸಕ್ಕಾಗಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಟ್ರ್ಯಾಕ್ಟರ್‌ನಲ್ಲಿ ಕರೆದುಕೊಂಡು ಹೋಗಲಾಗುತ್ತಿತ್ತು ಎನ್ನುವುದೇ ನಂಬಲಸಾಧ್ಯ ಸಂಗತಿಯಾಗಿದೆ! ಅತಿ ವೇಗದ ಚಾಲನೆಯಿಂದಾಗಿ ಟ್ರ್ಯಾಕ್ಟರ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. 8 ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ. ಕಳೆದ ಎರಡು ತಿಂಗಳಲ್ಲಿ 20ಕ್ಕೂ ಅಧಿಕ ಶಾಲಾ ಪ್ರವಾಸ ವಾಹನಗಳು ಅಪಘಾತಕ್ಕೀಡಾಗಿವೆ. ಐವರು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ, ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಬಹುತೇಕ ಅಪಘಾತಗಳಿಗೆ ಚಾಲಕರ ಬೇಜವಾಬ್ದಾರಿಯೇ ಕಾರಣವಾಗಿದೆ. ಈ ಅಪಘಾತಗಳು ಮಕ್ಕಳ ಸುರಕ್ಷತೆಯ ಕುರಿತು ಗಂಭೀರ ಪ್ರಶ್ನೆಯನ್ನು ಹುಟ್ಟು ಹಾಕಿವೆ. ಪೋಷಕರಲ್ಲಿ ಆತಂಕ ಮೂಡಿಸಿದೆ.
ಶಾಲಾ ಪ್ರವಾಸವು ಮಕ್ಕಳ ಶೈಕ್ಷಣಿಕ ಪ್ರಮುಖ ಅಗತ್ಯಗಳಲ್ಲಿ ಒಂದು. ಆದರೆ, ಕಳೆದ ಎರಡು ವರ್ಷಗಳಲ್ಲಿ ಕೊರೊನಾ ಸಾಂಕ್ರಾಮಿಕದಿಂದಾಗಿ ಶಾಲೆಗಳು ಬಾಗಿಲು ಹಾಕಿದ್ದವು. ಮಕ್ಕಳ ಕಲಿಕೆಯ ಜತೆಗೆ ಇತರ ಚಟುವಟಿಕೆಗಳಿಗೂ ತಡೆ ಬಿದ್ದಿತ್ತು. ಪ್ರವಾಸ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಈ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ಶುರುವಾಗಿ, ಎಂದಿನ ಶೈಕ್ಷಣಿಕ ಚಟುವಟಿಕೆಗಳು ನಡೆಯುತ್ತಿವೆ. ಅದರ ಭಾಗವಾಗಿಯೇ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪದವಿ ಪೂರ್ವ ತರಗತಿ ವಿದ್ಯಾರ್ಥಿಗಳನ್ನು ಶಾಲಾ ಪ್ರವಾಸಕ್ಕೆ ಕರೆದೊಯ್ಯಲಾಗುತ್ತದೆ. ವಿದ್ಯಾರ್ಥಿಗಳ ಪ್ರಾಯೋಗಿಕ ಜ್ಞಾನ, ಅವರ ಕಲಿಕೆಯ ಅನುಭವವನ್ನು ಹೆಚ್ಚಿಸಲು ಈ ರೀತಿಯ ಪ್ರವಾಸಗಳು ಸಹಕಾರಿಯಾಗುತ್ತವೆ ಎನ್ನುವುದು ವೈಜ್ಞಾನಿಕ ಅಧ್ಯಯನದಿಂದ ಸಾಬೀತಾಗಿದೆ. ಆದರೆ, ಅಪಘಾತಗಳಿಂದಾಗಿ ಈ ಶಾಲಾ ಪ್ರವಾಸಗಳು ದುಃಖದ ಮೂಲಗಳಾಗಿ ಬದಲಾಗುತ್ತಿರುವುದು ಮಾತ್ರ ವಿಷಾದಕರ. ಮಕ್ಕಳನ್ನು ಪ್ರವಾಸಕ್ಕೆ ಕಳುಹಿಸಿಕೊಡಲು ಹಿಂಜರಿಯುವ ಪೋಷಕರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಹೀಗಿರುವಾಗ ಅಂಥ ಪೋಷಕರ ಸಾಲಿಗೆ ಇನ್ನಷ್ಟು ಪೋಷಕರನ್ನು ಸೇರ್ಪಡೆಯಾಗುವಂತೆ ಮಾಡುತ್ತಿವೆ ಈ ಅಪಘಾತಗಳು.
ಶೈಕ್ಷಣಿಕ ಪ್ರವಾಸಗಳನ್ನು ಯಾವ ರೀತಿ ಕೈಗೊಳ್ಳಬೇಕು ಎಂಬ ಸ್ಪಷ್ಟ ಮಾರ್ಗದರ್ಶಿ ಸೂತ್ರಗಳನ್ನು ನೀಡಲಾಗಿರುತ್ತದೆ. ಅದರ ಪ್ರಕಾರವೇ, ಸ್ಕೂಲ್ ಟ್ರಿಪ್‌ಗಳನ್ನು ಆಯೋಜಿಸಬೇಕು. ಮಕ್ಕಳ ಸುರಕ್ಷತೆಯ ಕಡೆಗೆ ಗರಿಷ್ಠ ಆದ್ಯತೆ ನೀಡಬೇಕು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಥವಾ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖಾ ವಾಹನಗಳಲ್ಲೇ ಕಡ್ಡಾಯವಾಗಿ ಶೈಕ್ಷಣಿಕ ಪ್ರವಾಸವನ್ನು ಕೈಗೊಳ್ಳಬೇಕು. ಟೆಂಪೋ, ಮ್ಯಾಕ್ಸಿ ಕ್ಯಾಬ್, ಜೀಪ್ ಇತ್ಯಾದಿ ಖಾಸಗಿ ವಾಹನಗಳಲ್ಲಿ ಶಾಲಾ ಪ್ರವಾಸ ಕೈಗೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪ್ರವಾಸ ಕೈಗೊಂಡಿರುವ ವಿದ್ಯಾರ್ಥಿನಿಯರ ಮೇಲ್ವಿಚಾರಣೆಯನ್ನು ಪ್ರವಾಸಕ್ಕೆ ನಿಯೋಜಿತ ಮಹಿಳಾ ಶಿಕ್ಷಕರೇ ಕಡ್ಡಾಯವಾಗಿ ನೋಡಿಕೊಳ್ಳಬೇಕು. ಈ ರೀತಿಯಾಗಿ ಸ್ಪಷ್ಟ ನಿಯಮಗಳಿದ್ದರೂ ಟ್ರ್ಯಾಕ್ಟರ್‌ಗಳಲ್ಲಿ ಮಕ್ಕಳನ್ನು ಶಾಲೆ, ಕಾಲೇಜು ಪ್ರವಾಸಕ್ಕೆ ಕರೆದುಕೊಂಡು ಹೋಗಲಾಗುತ್ತಿದೆ ಎನ್ನುವುದು ಸೋಜಿಗದ ವಿಷಯವಾಗಿದೆ. ಮಕ್ಕಳ ಸುರಕ್ಷತೆಯೊಂದಿಗೆ ರಾಜಿ ಮಾಡಿಕೊಂಡು, ಸ್ಕೂಲ್ ಟ್ರಿಪ್‌ಗಳನ್ನು ಪೂರ್ಣಗೊಳಿಸುತ್ತಿರುವುದು ಕಂಡು ಬರುತ್ತಿದೆ. ಕಳೆದ ಒಂದೆರಡು ತಿಂಗಳಲ್ಲಿ ಸಂಭವಿಸಿದ ಅಪಘಾತಗಳು, ಬಳಸಿದ ವಾಹನಗಳನ್ನು ಗಮನಿಸಿದರೆ ಇದು ವೇದ್ಯವಾಗುತ್ತಿದೆ. ಮಾರ್ಗದರ್ಶಿ ಸೂತ್ರಗಳನ್ನು ಉಲ್ಲಂಘಿಸಿ ಮಕ್ಕಳ ಜೀವಕ್ಕೆ ಸಂಚಾರ ತರುತ್ತಿರುವುದು ಅಕ್ಷಮ್ಯ.
ಪ್ರವಾಸ ಎಂಬುದು ಸಂತೋಷವನ್ನು ತರುವಂಥ, ಮನಸ್ಸನ್ನು ಉಲ್ಲಾಸಗೊಳಿಸುವಂಥ ಸಂಗತಿ. ಶೈಕ್ಷಣಿಕ ಪ್ರವಾಸವಾದರೆ, ಜ್ಞಾನದ ಹರಿವು ಹೆಚ್ಚಿಸುವ ಮಹತ್ವದ ಸಾಧನವೂ ಹೌದು. ಹಾಗಾಗಿ, ಮಕ್ಕಳು ಮತ್ತು ಪೋಷಕರಿಬ್ಬರೂ ಇದರಿಂದ ಸಂತೋಷವನ್ನು ಅನುಭವಿಸುವಂತಾಗಬೇಕು. ಅದರೆ ಅದೇ ಪ್ರವಾಸ ಅವರು ಕಣ್ಣೀರಿನಲ್ಲಿ ಕೈತೊಳೆಯುವಂತಾಗಬಾರದು. ಹಾಗಾಗಿ, ಶಾಲೆ – ಕಾಲೇಜುಗಳು ಸರ್ಕಾರ ಸೂಚಿಸಿರುವ ಸ್ಪಷ್ಟ ಮಾರ್ಗದರ್ಶಿ ಸೂತ್ರಗಳ ಅನ್ವಯವೇ ಪ್ರವಾಸಗಳನ್ನು ಆಯೋಜಿಸಬೇಕು. ಯಾವುದೇ ಕಾರಣಕ್ಕೂ ಮಕ್ಕಳ ಸುರಕ್ಷತೆಯೊಂದಿಗೆ ರಾಜಿ ಮಾಡಿಕೊಳ್ಳಲೇಬಾರದು. ಒಂದೊಮ್ಮೆ, ನಿಯಮಗಳನ್ನು ಉಲ್ಲಂಘಿಸಿದರೆ ಅಂಥವರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಬೇಕು. ಪ್ರವಾಸಕ್ಕೆ ಹೋಗುವ ಮಕ್ಕಳ ಸುರಕ್ಷತೆಯನ್ನು ಖಾತ್ರಿಪಡಿಸುವ ಇನ್ನಷ್ಟು ನಿಯಮಗಳನ್ನು ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಸರ್ಕಾರ ಜಾರಿಗೆ ತರಬೇಕು. ಶಾಲಾ ಪ್ರವಾಸಕ್ಕೆ ಗೊತ್ತುಪಡಿಸುವ ಕೆ ಎಸ್ ಆರ್ ಟಿ ಸಿ ಬಸ್ ದರದಲ್ಲಿ ಸರ್ಕಾರ ಮತ್ತಷ್ಟು ವಿನಾಯಿತಿ ಪ್ರಕಟಿಸಬೇಕು.
ಇದನ್ನೂ ಓದಿ | ವಿಸ್ತಾರ ಸಂಪಾದಕೀಯ | ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ನಿರ್ಮಾಣದ ಫಲ ಸ್ಥಳೀಯರಿಗೂ ಸಿಗಲಿ
ಕ್ರಿಕೆಟ್
Babar Azam: ಆಡಿ ಕಾರ್ ಓವರ್‌ಸ್ಪೀಡ್ ಓಡಿಸಿ, ದಂಡ ಕಟ್ಟಿದ ಪಾಕ್ ಕ್ರಿಕೆಟ್ ಟೀಂ ನಾಯಕ ಬಾಬರ್ ಅಜಮ್!
Babaz Azam: ಪಾಕಿಸ್ತಾನ ಕ್ರಿಕೆಟ್ ನಾಯಕ ಅಜಮ್ ಟ್ರಾಫಿಕ್ ರೂಲ್ಸ್ ಉಲ್ಲಂಘನೆ ಮಾಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಇಂಥ ಪ್ರಕರಣ ನಡೆದಿದೆ.
ನವದೆಹಲಿ: ಕ್ರಿಕೆಟ್ ಜಗತ್ತಿನಲ್ಲಿ ಸದ್ಯ ಟಾಪ್ ಬ್ಯಾಟರ್‌ಗಳಲ್ಲಿ ಒಬ್ಬರಾಗಿರುವ ಹಾಗೂ ಪಾಕಿಸ್ತಾನದ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್ (Pakistan Cricket Team Skipper Babar Azam) ಅತಿ ವೇಗದ ಕಾರ್ (Audi Car) ಚಾಲನೆಗಾಗಿ ದಂಡ ಕಟ್ಟಿದ್ದಾರೆ. ಟೈಮ್ಸ್ ಆಫ್ ಕರಾಚಿ ಪತ್ರಿಕೆಯ ಪ್ರಕಾರ, ಪ್ರಕಾರ ವೇಗದ ಮಿತಿಯನ್ನು ಮೀರಿದ್ದಕ್ಕಾಗಿ ಅಜಮ್ ಅವರಿಗೆ ಪಂಜಾಬ್ ಮೋಟರ್‌ವೇ ಪೊಲೀಸರು (Punjab Motarway Police) ದಂಡ ವಿಧಿಸಿದ್ದಾರೆ. ಟ್ರಾಫಿಕ್ ರೂಲ್ಸ್ ಉಲ್ಲಂಘನೆಗಾಗಿ ಬಾಬರ್ ಅಜಮ್ ದಂಡ ಕಟ್ಟುತ್ತಿರುವುದು ಇದೇ ಮೊದಲೇನಲ್ಲ!
ಪಾಕಿಸ್ತಾನದ ಕ್ರಿಕೆಟ್ ತಂಡದ ನಾಯಕರಾಗಿರುವ ಬಾಬರ್ ಅಜಮ್ ನಿಯಮ ಪಾಲನೆಯಲ್ಲಿ ಮೇಲ್ಪಂಕ್ತಿ ಹಾಕಬೇಕಿತ್ತು. ಆದರೆ, ಪೊಲೀಸರು ಬಾಬರ್ ಅಜಂ ಕಾರನ್ನು ತಡೆದು ನಿಲ್ಲಿಸಿರುವುದು ಇದೇ ಮೊದಲಲ್ಲ. ವರ್ಷದ ಆರಂಭದಲ್ಲಿ, ಸರಿಯಾದ ನಂಬರ್ ಪ್ಲೇಟ್ ಇಲ್ಲದಿದ್ದಕ್ಕಾಗಿ ಅವರು ಸಿಕ್ಕಿಬಿದ್ದರು. ಆದರೆ ಯಾವುದೇ ಮೊತ್ತವನ್ನು ದಂಡ ವಿಧಿಸಲಿಲ್ಲ. ಆದರೆ, ಈಗ ಹೆದ್ದಾರಿಯಲ್ಲಿ ಆಡಿ ಕಾರ್ ಚಾಲನೆ ಮಾಡುವಾಗ ಬಾಬರ್ ಅವರು ವೇಗದ ಮಿತಿಯನ್ನು ಮೀರಿದ್ದರು. ಅಂತಿಮವಾಗಿ ಪೊಲೀಸರು ಮಧ್ಯಪ್ರವೇಶಿಸಬೇಕಾಯಿತು. ದಂಡವನ್ನೂ ವಿಧಿಸಿದ್ದಾರೆ. ಆದರೆ ದಂಡದ ಮೊತ್ತವನ್ನು ಪೊಲೀಸರು ಬಹಿರಂಗ ಪಡಿಸಿಲ್ಲ.
ಏತನ್ಮಧ್ಯೆ, ಅದೇ ದಿನ ಪಾಕಿಸ್ತಾನ ಕ್ರಿಕೆಟಿಗರಿಗೆ ಮುಂಬರುವ ಒಂದು ದಿನದ ವಿಶ್ವಕಪ್‌ಗಾಗಿ ಭಾರತಕ್ಕೆ ಪ್ರಯಾಣಿಸಲು ವೀಸಾ ನೀಡಲಾಗುತ್ತಿದೆ. ವಿಶ್ವಕಪ್ ಪಂದ್ಯಾವಳಿಯು ಅಭಿಯಾನವು ಅಕ್ಟೋಬರ್ 5 ರಂದು ಪ್ರಾರಂಭವಾಗಲಿದೆ. ತಂಡವು ಸೆಪ್ಟೆಂಬರ್ 27ರ ಮುಂಜಾನೆ ಮತ್ತು ಸಂಜೆ ದುಬೈಗೆ ಪ್ರಯಾಣಿಸಲಿದೆ. ಅಲ್ಲಿಂದ ಅವರು ಹೈದರಾಬಾದ್ ತಲುಪುತ್ತಾರೆ ಮತ್ತು ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಅಭ್ಯಾಸ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೆಣಸಲಿದ್ದಾರೆ.
ಈ ಸುದ್ದಿಯನ್ನೂ ಓದಿ: Babar Azam | ಲೀಕ್ ಆಗಿರುವ ವಿಡಿಯೊ ನನ್ನದಲ್ಲ, ನಾನವನಲ್ಲ ಎಂದ ಪಾಕ್ ತಂಡದ ನಾಯಕ ಬಾಬರ್ ಅಜಮ್
ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈ ಹಿಂದೆ ವೀಸಾ ನೀಡಿಕೆ ವಿಳಂಬವಾಗುತ್ತಿರುವ ಬಗ್ಗೆ ನಿರಾಶೆಯನ್ನು ವ್ಯಕ್ತಪಡಿಸಿತ್ತು. ಅಲ್ಲದೇ, ಪರಿಸ್ಥಿತಿಯನ್ನು ಪರಿಹರಿಸುವ ಸಲುವಾಗಿ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಯೊಂದಿಗೆ ನಿರಂತರ ಸಂಪರ್ಕದಲ್ಲಿತ್ತು. ಆ ನಂತರ ಅವರು ವೀಸಾಗಳನ್ನು ಪಡೆಯಲು ಸಾಧ್ಯವಾಯಿತು. ಅಂತಿಮವಾಗಿ ಭಾರತಕ್ಕೆ ಪ್ರಯಾಣಿಸಲು ಅನುಮತಿ ನೀಡಲಾಗಿದೆ. ವಿಶೇಷ ಎಂದರೆ, ಪಾಕಿಸ್ತಾನಕ್ಕಿಂತ ಮೊದಲೇ ಆಫ್ಘಾನಿಸ್ತಾನಕ್ಕೆ ವೀಸಾ ದೊರೆತಿದೆ. ಸೆಪ್ಟೆಂಬರ್ 25ಕ್ಕಿಂತ ಮುಂಚೆಯೇ ಆಫ್ಘನ್ ಆಟಗಾರರಿಗೆ ವೀಸಾ ನೀಡಲಾಗಿದೆ.
ದೇಶ
Lawyer Sara Sunny: ಸುಪ್ರೀಂ ಕೋರ್ಟ್‌ನಲ್ಲಿ ಮೊದಲ ಬಾರಿಗೆ ಸಂಜ್ಞೆ ಭಾಷೆಯಲ್ಲಿ ವಾದ ಮಂಡನೆ! ಇತಿಹಾಸ ಸೃಷ್ಟಿಸಿದ ಸಾರಾ
Lawyer Sara Sunny: ಕಿವುಡ ನ್ಯಾಯವಾದಿ ಸಾರಾ ಸನ್ನಿ ಅವರು ಸಂಜ್ಞೆ ಭಾಷೆಯ ಮೂಲಕ ವಾದ ಮಂಡಿಸಿ, ಸುಪ್ರೀಂ ಕೋರ್ಟ್‌ನಲ್ಲಿ ಇತಿಹಾಸ ಸೃಷ್ಟಿಸಿದರು.
ನವದೆಹಲಿ: ಭಾರತದ ಸುಪ್ರೀಂ ಕೋರ್ಟ್ (Supreme Court of India) ಸೋಮವಾರ ವಿಶಿಷ್ಟ ವಕೀಲರ ಕಲಾಪಕ್ಕೆ ಸಾಕ್ಷಿಯಾಯಿತು. ಕಿವುಡ ವಕೀಲೆ ಸಾರಾ ಸನ್ನಿ (Lawyer Sara Sunny) ಇಂಟರ್‌ರ್ಪ್ರಿಟರ್ ಮೂಲಕ ಸಂಜ್ಞೆ ಭಾಷೆ ಬಳಸಿ ವಾದಿಸಿದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮೊದಲ ಬಾರಿಗೆ ಆಲಿಸಿತು.
ವರ್ಚುವಲ್ ಪ್ರೊಸೀಡಿಂಗ್ಸ್ ನಿರ್ವಹಿಸುತ್ತಿದ್ದ ಕಂಟ್ರೋಲ್ ರೂಂ, ಮೊದಲಿಗೆ ಕಿವುಡ ನ್ಯಾಯವಾದಿ ಸಾರಾ ಸನ್ನಿಗೆ ಸ್ಕ್ರೀನ್ ಸ್ಪೇಸ್ ನೀಡಲು ನಿರಾಕರಿಸಿತ್ತು. ಆದರೆ, ಶೀಘ್ರದಲ್ಲೇ ಅವರ ವಿಚಾರಣೆಯ ಸರದಿ ಬಂದಾಗ ಆಕೆಯ ಇಂಟರ್‌ರ್ಪ್ರಿಟರ್ ಸೌರಭ್ ರಾಯ್ ಚೌಧರಿ ಪರದೆಯ ಮೇಲೆ ಕಾಣಿಸಿಕೊಂಡರು. ಚೌಧರಿ ಅವರು, ಸಾರಾ ಸನ್ನಿ ಅವರ ಸಂಕೇತ ಭಾಷೆಯನ್ನು ಅನುವಾದಿಸಿ, ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಮುಂದೆ ತಮ್ಮ ವಾದವನ್ನು ಮಂಡಿಸಿದರು.
ನಂತರ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು ಸನ್ನಿಗೆ ಸ್ಕ್ರೀನ್ ಸ್ಪೇಸ್ ನೀಡುವಂತೆ ನಿಯಂತ್ರಣ ಕೊಠಡಿ ಮತ್ತು ಇಂಟರ್ಪ್ರಿಟರ್‌ಗೆ ಸೂಚನೆ ನೀಡಿದರು. ಇದಾದ ಬಳಿಕ ಇಬ್ಬರೂ ತೆರೆ ಮೇಲೆ ಕಾಣಿಸಿಕೊಂಡು ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ವಾದ ಮಂಡಿಸಿದರು. ಸನ್ನಿ ಅವರು ಕಲಾಪದಲ್ಲಿ ಪಾಲ್ಗೊಳ್ಳಲು ನ್ಯಾಯವಾದಿ ಸಂಚಿತ್ ಐನ್ ಅವರು ಅರೆಂಜ್ ಮಾಡಿದ್ದರು.
ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು ಎಲ್ಲರಿಗೂ ಸಮಾನ ನ್ಯಾಯ ದೊರೆಯಬೇಕು ಎಂದು ಪ್ರತಿಪಾದಿಸುತ್ತಾರೆ. ಕಳೆದ ವರ್ಷ, ದೈಹಿಕವಾಗಿ ಅಸಮರ್ಥರಾದವರು ಸುಪ್ರೀಂ ಕೋರ್ಟ್ ಸಂಕೀರ್ಣಕ್ಕೆ ಬಂದಾಗ ಎದುರಿಸುವ ಸಮಸ್ಯೆಗಳು ಹಾಗೂ ಎಲ್ಲರಿಗೂ ನ್ಯಾಯ ವ್ಯವಸ್ಥೆ ದೊರೆಯುವಂತೆ ಮಾಡಲು ಏನೇನು ಕ್ರಮ ಕೈಗೊಳ್ಳಬೇಕು ಎಂಬ ಕುರಿತು ಸೂಚಿಸುವಂತೆ ಸೂಚಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ವಿಶೇಷ ಎಂದರೆ, ಸಿಜೆಐ ಚಂದ್ರಚೂಡ್ ಅವರೂ ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ತೆಗೆದುಕೊಂಡು ಸಾಕುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ: Supreme Court : ಪಿಎಂ ಕೇರ್ಸ್ ಎಲ್ಲ ಅನಾಥ ಮಕ್ಕಳಿಗೂ ಮೀಸಲಾಗಲಿ; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಹೇಳಿದ್ಯಾಕೆ?
ಸಂಜ್ಞೆ ಭಾಷೆಯ ಮೂಲಕ ವಾದ ಮಾಡಿದ ಸಂಚಿತಾ ಐನ್ ಅವರು, ಈ ಕ್ಷಣದ ಮಹತ್ವವು ಭಾರತೀಯ ಕಾನೂನು ವ್ಯವಸ್ಥೆಯಲ್ಲಿ ನಿಜವಾದ ಒಳಗೊಳ್ಳುವಿಕೆ ಮತ್ತು ನ್ಯಾಯ ಪ್ರವೇಶದ ಹಾದಿಯಲ್ಲಿ ಉಳಿದಿರುವ ಸವಾಲುಗಳೊಂದಿಗೆ ಸಂಬಂಧ ಹೊಂದಿದೆ ಎಂದು ಮಾಧ್ಯಮಗಳಿಗೆ ತಿಳಿಸಿದರು. ಸಂಜ್ಞೆ ಭಾಷೆಯ ವ್ಯಾಪ್ತಿಯನ್ನು ಹೆಚ್ಚಿಸುವಲ್ಲಿ ಆಡಳಿತ ವ್ಯವಸ್ಥೆಯು ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದೆ ಎಂದು ಅವರು ಹೇಳಿದರು.
ಭಾನುವಾರ, ಸುಪ್ರೀಂ ಕೋರ್ಟ್ ಸಹ ಮೊದಲ ಬಾರಿಗೆ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ತನ್ನ ಎರಡು ದಿನಗಳ ರಾಷ್ಟ್ರೀಯ ಮಧ್ಯಸ್ಥಗಾರರ ಸಮಾಲೋಚನೆಯಲ್ಲಿ ಸಂಜ್ಞೆ ಭಾಷಾ ವ್ಯಾಖ್ಯಾನಕಾರರನ್ನು ಬಳಸಿತು.
ಕರ್ನಾಟಕ
Bangalore rain : ಮನೆ ಮುಂದೆ ವಾಕ್ ಮಾಡುತ್ತಿದ್ದಾಗ ಉರುಳಿದ ಮರ; ತಾಯಿ ಮೃತ್ಯು, 5 ವರ್ಷದ ಮಗು ಗಂಭೀರ
Bangalore rain: ಬೆಂಗಳೂರಿನಲ್ಲಿ ಸಂಭವಿಸಿದ ಮಳೆ ದುರಂತದಲ್ಲಿ ತಾಯಿ ಮೃತಪಟ್ಟು, ಪುಟ್ಟ ಕಂದಮ್ಮ ಗಾಯಗೊಂಡಿದ್ದಾಳೆ. ಮರ ಬಿದ್ದು ಈ ದುರಂತ ಸಂಭವಿಸಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಸೋಮವಾರ ಸಂಜೆ ಸುರಿದ ಮಳೆಗೆ (Bangalore rain) ಮರವೊಂದು ಧರೆಗುರುಳಿ (Tree Falls on mother and daughter) ವಾಕ್ ಮಾಡುತ್ತಿದ್ದ ತಾಯಿ ಮತ್ತು ಮಗುವನ್ನು ಗಾಯಗೊಳಿಸಿದೆ. ತಾಯಿ ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟರೆ (Mothrer dead at Hospital), ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ವಿಲ್ಸನ್ ಗಾರ್ಡನ್ 7 ಕ್ರಾಸ್ ನಲ್ಲಿ ಸಂಜೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟವರನ್ನು ವಿಲ್ಸನ್ ಗಾರ್ಡನ್ (Wilson garden) ನಿವಾಸಿ ಹೇಮಾವತಿ (35) ಎಂದು ಗುರುತಿಸಲಾಗಿದೆ. ಅವರ ಪುಟ್ಟ ಕಂದಮ್ಮ ಐದು ವರ್ಷದ ರಚಿತಾ ಗಂಭೀರವಾಗಿ ಗಾಯಗೊಂಡಿದ್ದಾಳೆ.
ಹೇಮಾವತಿ ಮತ್ತು ಮಗಳು ರಚಿತಾ ಸಂಜೆಯ ಹೊತ್ತು ಮನೆಯ ಮುಂದೆ ಪುಟ್ ಪಾತ್ ಮೇಲೆ ತಾಯಿ ಮಗಳು ವಾಕ್ ಮಾಡುತ್ತಿದ್ದಾಗ ಬೃಹತ್ ಮರ ಉರುಳಿದೆ. ಒಂದು ಕಡೆ ಮರದ ಕೊಂಬೆ ಇನ್ನೊಂದು ಕಡೆ ವಿದ್ಯುತ್ ಕಂಬವೂ ಅವರ ಮೇಲೆ ಬಿದ್ದಿದೆ.
ಕೂಡಲೇ ಹೇಮಾವತಿ ಅವರನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ಒಯ್ಯಲಾಯಿತು. ರಚಿತಾಗೆ ತಲೆಗೆ ಗಾಯವಾಗಿದ್ದು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಯಿತು.
ಈ ನಡುವೆ, ಚಿಕಿತ್ಸೆ ಫಲಕಾರಿಯಾಗದೇ ತಾಯಿ ಹೇಮಾವತಿ ನಿಧನರಾಗಿದ್ದಾರೆ. ಅವರು ಸಂಜಯಗಾಂಧಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಬೆಳಗ್ಗೆ ಮರಣೋತ್ತರ ಪರೀಕ್ಷೆ ನಂತರ ಮೃತದೇಹ ಕುಟುಂಬಕ್ಕೆ ಹಸ್ತಾಂತರ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರ ಸಾವು
ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಬಳಿ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರಾಗಿದ್ದು, ಮೃತರಾದವರ ಗುರುತು ಪತ್ತೆಯಾಗಿಲ್ಲ.
ಮೈಸೂರು ಕಡೆಗೆ ಹೋಗುತ್ತಿದ್ದ ಫಾರ್ಚುನರ್ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಬೆಂಗಳೂರು ಕಡೆಗೆ ಬರುವ ರಸ್ತೆಗೆ ನುಗ್ಗಿ ಸ್ಯಾಂಟ್ರೋ ಕಾರು ಮತ್ತು ಇತರ ಮೂರು ವಾಹನಗಳಿಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಸ್ಯಾಂಟ್ರೋ ಚಲಾಯಿಸುತ್ತಿದ್ದ ವ್ಯಕ್ತಿ ಮತ್ತು ಅವರ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಮಹಿಳೆಗೂ ಗಂಭೀರ ಗಾಯಗಳಾಗಿದ್ದು ಅವರು ಆಸ್ಪತ್ರೆಗೆ ಸಾಗಿಸುವ ಪ್ರಾಣ ಕಳೆದುಕೊಂಡರು.
ಸಂಜೆ ಸುಮಾರು 5.30ರ ಹೊತ್ತಿಗೆ ಅಪಘಾತ ಸಂಭವಿಸಿದ್ದು, ಮೃತರು ಹಾಸನ ಮೂಲದವರೆಂದು ಹೇಳಲಾಗುತ್ತಿದೆ. ಎರಡೂ ಕಾರುಗಳ ಮುಂಭಾಗ ನಜ್ಜುಗುಜ್ಜಾಗಿದೆ. ಇತರ ವಾಹನಗಳಿಗೂ ಹಾನಿಯಾಗಿದೆ.
ಅಪಘಾತದಿಂದಾಗಿ ಹೆದ್ದಾರಿಯಲ್ಲಿ ತುಂಬಾ ಹೊತ್ತು ಟ್ರಾಫಿಕ್ ಜಾಮ್ ಆಗಿತ್ತು.
ದೇಶ
MP Assembly Election: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್, ಮೂವರು ಕೇಂದ್ರ ಸಚಿವರು, ಹಲವು ಸಂಸದರು ಕಣಕ್ಕೆ!
MP Assembly Election: ವರ್ಷಾಂತ್ಯಕ್ಕೆ ನಡೆಯಲಿರುವ ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್ ಆಗಿದೆ. ಕಳೆದ ಆಗಸ್ಟ್‌ನಲ್ಲಿ ಮೊದಲನೇ ಪಟ್ಟಿ ಬಿಡುಗಡೆಯಾಗಿತ್ತು.
ನವದೆಹಲಿ: ಈ ವರ್ಷಾಂತ್ಯಕ್ಕೆ ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆ(MP Assembly Election) ನಡೆಯಲಿದ್ದು, ಭಾರತೀಯ ಜನತಾ ಪಾರ್ಟಿಯು (BJP) ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು (Candidates List) ಸೋಮವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಮೂವರು ಕೇಂದ್ರ ಸಚಿವರು (Union Ministers) ಹಾಗೂ ಹಲವು ಸಂಸದರಿಗೆ (Members of Parliament) ವಿಧಾನಸಭೆಗೆ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ. ಚುನಾವಣಾ ವೇಳಾಪಟ್ಟಿ ಇನ್ನೂ ಪ್ರಕಟವಾಗಿಲ್ಲ. ಹಾಗಿದ್ದರೂ ಬಿಜೆಪಿಯು, ಕಳೆದ ಆಗಸ್ಟ್‌ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿ, ಎಲ್ಲ ರಾಜಕೀಯ ಪಕ್ಷಗಳಿಗೆ ಶಾಕ್ ನೀಡಿತ್ತು. ಇದೀಗ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಎರಡನೇ ಪಟ್ಟಿಯಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಆಹಾರ ಸಂಸ್ಕರಣೆ ರಾಜ್ಯ ಸಚಿವ ಪ್ರಹ್ಲಾದ್ ಪಟೇಲ್ ಸೇರಿ ಮೂವರು ಸಚಿವರಿಗೆ ಟಿಕೆಟ್ ನೀಡಿದೆ. ಜತೆಗೆ ಹಲವು ಸಂಸದರಿಗೂ ಸ್ಪರ್ಧಿಸಲು ಸೂಚಿಸಲಾಗಿದೆ. ಸಚಿವ ತೋಮರ್ ಅವರು ದಿಮಾನಿ ಹಾಗೂ ಪಟೇಲ್ ಅವರು ನರಸಿಂಗಪುರ ವಿಧಾನಸಭೆ ಕ್ಷೇತ್ರಗಳಿಂದ ಕಣಕ್ಕಿಳಿಯಲಿದ್ದಾರೆ.
ಕೇಂದ್ರದ ಸಚಿವ ಸಂಪುಟದಲ್ಲಿ ಸಚಿವರಾಗಿರುವ ಹಿರಿಯ ನಾಯಕರನ್ನು ಕಣಕ್ಕಿಳಿಸುವ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ತೆಗೆದುಕೊಂಡಿದ್ದು, ಇದರಿಂದ ಗೆಲ್ಲುವ ಅವಕಾಶ ಪಕ್ಷಕ್ಕೆ ಹೆಚ್ಚಾಗುತ್ತದೆ ಎಂದು ಪಕ್ಷದ ಪದಾಧಿಕಾರಿಗಳು ಭಾವಿಸಿದ್ದಾರೆ. ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯ ರಾಜ್ಯ ಸಚಿವ ಫಗ್ಗನ್ ಸಿಂಕ್ ಕುಲಸ್ತೆ ಅವರು ನಿವಾಸ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಇದು ಎಸ್‌ಟಿ ಮೀಸಲು ಕ್ಷೇತ್ರವಾಗಿದೆ.
ಸಂಸದರಾದ ಗಣೇಸ್ ಸಿಂಗ್, ರಾಕೇಶ್ ಸಿಂಗ್, ರಿತಿ ಪಾಠಕ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಅವರಿಗೂ ಟಿಕೆಟ್ ನೀಡಲಾಗಿದೆ. ಹಾಗೆಯೇ, ಹೋಶಂಗಾಬಾದ್ ಸಂಸದ ಉದಯ ಪ್ರತಾಪ್ ಸಿಂಗ್ ಅವರು ಗದರವಾರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಈ ಸುದ್ದಿಯನ್ನೂ ಓದಿ: MP Election 2023: ಮಧ್ಯಪ್ರದೇಶದಲ್ಲಿ ಸಿಲಿಂಡರ್ ಬೆಲೆ 450 ರೂ.! ಎಲೆಕ್ಷನ್ ಗೆಲ್ಲಲು ಉಚಿತ ಕೊಡುಗೆ
ಎರಡನೇ ಪಟ್ಟಿಯಲ್ಲಿ ಒಟ್ಟು 39 ಅಭ್ಯರ್ಥಿಗಳಿದ್ದು, ಈ ಪೈಕಿ 6 ಮಹಿಳೆಯರಿದ್ದಾರೆ. ಜತೆಗೆ 5 ಕ್ಷೇತ್ರಗಳು ಎಸ್ ಸಿ ಮತ್ತು 10 ಕ್ಷೇತ್ರಗಳು ಎಸ್‌ಟಿ ಮೀಸಲಾಗಿವೆ. ಬಿಜೆಪಿಯು 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಳೆದ ಆಗಸ್ಟ್ ತಿಂಗಳಲ್ಲಿ ಘೋಷಣೆ ಮಾಡಿತ್ತು. ಮಧ್ಯ ಪ್ರದೇಶ ಮಾತ್ರವಲ್ಲದೇ, ರಾಜಸ್ಥಾನ, ತೇಲಂಗಾಣ, ಛತ್ತೀಸ್‌ಗಢ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆಗೆ ವರ್ಷಾಂತ್ಯಕ್ಕೆ ಚುನಾವಣೆ ನಡೆಯಲಿದೆ.
ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
-
ವಿದೇಶ11 hours ago
Akshardham : ವಿದೇಶದಲ್ಲಿನ ಅತೀ ದೊಡ್ಡ ದೇವಾಲಯ ಉದ್ಘಾಟನೆಗೆ ಸಜ್ಜು; ಏನಿದರ ವಿಶೇಷ?
-
ಸುವಚನ21 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕರ್ನಾಟಕ9 hours ago
PSI Scam : ಪಿಎಸ್ಐ ನೇಮಕಾತಿ ಅಕ್ರಮ; ಕೊನೆಗೂ ಅಮೃತ್ ಪಾಲ್ಗೆ ಜಾಮೀನು
-
ಅಂಕಣ12 hours ago
ವಿಧಾನಸೌಧ ರೌಂಡ್ಸ್: ಜೆಡಿಎಸ್ಗೆ ಸಂಜೀವಿನಿಯಾದ ಬಿಜೆಪಿ ಮೈತ್ರಿ; ಬೆಂಗಳೂರು ದಕ್ಷಿಣದಿಂದ ಕಾಂಗ್ರೆಸ್ ಅಚ್ಚರಿ ಅಭ್ಯರ್ಥಿ?
-
ದೇಶ10 hours ago
Army Jawan: ಯೋಧನ ಮೇಲೆ ಹಲ್ಲೆ ನಡೆಸಿ, ಬೆನ್ನಿನ ಮೇಲೆ ‘ಪಿಎಫ್ಐ’ ಎಂದು ಬರೆದ ದುರುಳರು!
-
ಕರ್ನಾಟಕ5 hours ago
Weather Update: ಭಾರತದಲ್ಲಿ ಮುಗೀತು ಮಳೆಗಾಲ! ಎಷ್ಟು ಮಳೆ ಕೊರತೆ, ಬರಗಾಲ ಪಕ್ಕಾ?
-
ದೇಶ4 hours ago
Swara Bhasker: ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸ್ವರಾ ಭಾಸ್ಕರ್, ಮಗಳ ಹೆಸರು ‘ರಾಬಿಯಾ’
-
South Cinema8 hours ago
Darshan Thoogudeepa: ನಟ ದರ್ಶನ್ ವಿರುದ್ಧ ಮಂಡ್ಯದಲ್ಲಿ ರೈತರ ಆಕ್ರೋಶ; ಕ್ಷಮೆಗೆ ಆಗ್ರಹ