Site icon Vistara News

Exit Poll 2024 : ಆ್ಯಕ್ಸಿಸ್​ ಮೈ ಇಂಡಿಯಾ ಪ್ರಕಾರ ಎನ್​ಡಿಎಗೆ 401 ಸೀಟು

Exit Poll

ಬೆಂಗಳೂರು : ಲೋಕಸಭಾ ಚುನಾವಣಾ ಫಲಿತಾಂಶಕ್ಕೆ (Lok Sabha Election) ಮುಂಚಿತವಾಗಿ ಪ್ರಕಟಗೊಂಡಿರುವ ಮತಗಟ್ಟೆ ಸಮೀಕ್ಷೆಯ ಪ್ರಕಾರ (Exit Poll 2024) ನರೇಂದ್ರ ಮೋದಿ ನಿರೀಕ್ಷಿಸಿದ ರೀತಿಯಂತೆಯೇ 400ಕ್ಕೂ ಅಧಿಕ ಸೀಟ್​​ಗಳನ್ನು ಗೆಲ್ಲಲಿದೆ. ಆಕ್ಸಿಸ್ ಮೈ ಇಂಡಿಯಾ ನಡೆಸಿರು ಸಮೀಕ್ಷೆಯಂತೆ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್ಡಿಎ ಭರ್ಜರಿ ಗೆಲುವು ಸಾಧಿಸಲಿದೆ. ಈ ಸಂಸ್ಥೆಯ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಒಟ್ಟು 543 ಸಂಸದೀಯ ಸ್ಥಾನಗಳಲ್ಲಿ ಎನ್ಡಿಎ 361 ರಿಂದ 401 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ.

ಬಿಜೆಪಿಯ ಬಲವಾದ ಚುನಾವಣಾ ಕಾರ್ಯತಂತ್ರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಮೂಲಕ ಎನ್​ಡಿಎಗೆ ಭರ್ಜರಿ ಗೆಲುವು ಸಿಗಲಿದೆ ಎಂದು ಸಮೀಕ್ಷೆಗಳು ಸೂಚಿಸಿವೆ. ಈ ಅಂದಾಜುಗಳು ನಿಜವಾಗಿದ್ದರೆ ಇದು 2014 ರ ಸಾರ್ವತ್ರಿಕ ಚುನಾವಣೆಯಲ್ಲಿ ಅದರ ಹಿಂದಿನ ಸಾಧನೆಯನ್ನು ಮೀರಿಸಲಿದೆ.

ಏಳು ಹಂತಗಳ ಚುನಾವಣೆ ಶನಿವಾರ ಮುಕ್ತಾಯ

ಏಳನೇ ಹಂತದ ಮತದಾನದ ಪ್ರಚಾರದ ಮುಕ್ತಾಯದ ನಂತರ ಪ್ರಧಾನಿ ಮೋದಿ ಕನ್ಯಾಕುಮಾರಿಯ ವಿವೇಕಾನಂದ ಬಂಡೆ ಬಳಿ ತೆರಳಿ ಧ್ಯಾನ ಮಾಡಿದ್ದರು. ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಎನ್​ಡಿಎಗೆ ಸುಲಭ ನಿರಾಯಾಸ ಗೆಲುವು ನೀಡುತ್ತದೆ ಎಂದು ಭವಿಷ್ಯ ನುಡಿದಿವೆ. ಆಡಳಿತಾರೂಢ ಪಕ್ಷವು ಬಹುಮತದ ಕೊರತೆ ಅನುಭವಿಸಬಹುದು ಎಂಬ ಇಂಡಿಯಾ ಬಣದ ಭವಿಷ್ಯವಾಣಿಗೆ ವ್ಯತಿರಿಕ್ತವಾಗಿ, ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಪರ ವಾಲಿವೆ. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ 353 ಸ್ಥಾನಗಳನ್ನು ಗೆದ್ದಿತ್ತು.

ಇದನ್ನೂ ಓದಿ: Exit Poll 2024 : ಟಿಎಂಸಿಯ ಭದ್ರಕೋಟೆಗೆ ಕಮಲ ಪಕ್ಷದ ಲಗ್ಗೆ; ಮಮತಾ ಬ್ಯಾನರ್ಜಿಗೆ ಮುಖಭಂಗ?

ಜೂನ್ 4ರಂದು ಚುನಾವಣೋತ್ತರ ಸಮೀಕ್ಷೆಗಳು ನಿಜವೆಂದು ಸಾಬೀತಾದರೆ, ಇದು ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅತಿದೊಡ್ಡ ವಿಜಯವಾಗಲಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ, ಜವಾಹರಲಾಲ್ ನೆಹರೂ ನಂತರ ನರೇಂದ್ರ ಮೋದಿ ಮೂರು ಬಾರಿ ದೇಶದ ಪ್ರಧಾನಿಯಾದ ಏಕೈಕ ವ್ಯಕ್ತಿಯಾಗಲಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 2004 ರಿಂದ 2014 ರವರೆಗೆ ಎರಡು ಬಾರಿ ಪ್ರಧಾನಿಯಾಗಿದ್ದರು.

ಧನ್ಯವಾದ ತಿಳಿಸಿದ ಮೋದಿ

ಲೋಕಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಮತದಾನ ಮಾಡಿದ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಧನ್ಯವಾದ ಅರ್ಪಿಸಿದ್ದಾರೆ. ಮತದಾರರ ಬದ್ಧತೆ ಮತ್ತು ಸಮರ್ಪಣೆ ಭಾರತದ ಪ್ರಜಾಪ್ರಭುತ್ವದ ಮೌಲ್ಯವನ್ನು ಹೆಚ್ಚಿಸುತ್ತದೆ ಎಂದು ಪಿಎಂ ಮೋದಿ ಹೇಳಿದ್ದಾರೆ. ಮತಗಟ್ಟೆ ಸಮೀಕ್ಷೆಗಳು(Exit Poll 2024 ) ಪ್ರಕಟಗೊಂಡು ಮೋದಿ ನೇತೃತ್ವದ ಎನ್​ಡಿಎಗೆ ಭರ್ಜರಿ ಜಯ ಸಿಗುತ್ತದೆ ಎಂದು ಗೊತ್ತಾದ ತಕ್ಷಣವೇ ಅವರು ಈ ಹೇಳಿಕೆ ನೀಡಿದ್ದಾರೆ. ಈ ವೇಳೆ ಅವರು ಪ್ರಜಾಪ್ರಭುತ್ವಕ್ಕೆ ಚೈತನ್ಯ ತಂಡ ದೇಶದ ಮಹಿಳೆಯರು ಮತ್ತು ಯುವಕರಿಗೆ ಪ್ರಧಾನಿ ಮೋದಿ ಧನ್ಯವಾದ ಅರ್ಪಿಸಿದ್ದಾರೆ.

ಭಾರತ ಮತ ಚಲಾಯಿಸಿದೆ! ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು. ಅವರ ಸಕ್ರಿಯ ಭಾಗವಹಿಸುವಿಕೆ ನಮ್ಮ ಪ್ರಜಾಪ್ರಭುತ್ವದ ಬುನಾದಿ. ಅವರ ಬದ್ಧತೆ ಮತ್ತು ಸಮರ್ಪಣೆ ನಮ್ಮ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವದ ಮನೋಭಾವವು ಬೆಳೆಸಿದೆ ಎಂದು ಖಚಿತಪಡಿಸುತ್ತೇವೆ. ಭಾರತದ ನಾರಿ ಶಕ್ತಿ ಮತ್ತು ಯುವ ಶಕ್ತಿಯನ್ನು ನಾನು ವಿಶೇಷವಾಗಿ ಪ್ರಶಂಸಿಸಲು ಬಯಸುತ್ತೇವೆ. ಚುನಾವಣೆಯಲ್ಲಿ ಅವರ ಬಲವಾದ ಉಪಸ್ಥಿತಿಯು ಬಹಳ ಪ್ರೋತ್ಸಾಹದಾಯಕ” ಎಂದು ಅವರು ಎಕ್ಸ್​ನಲ್ಲಿ ಬರೆದಿದ್ದಾರೆ.

Exit mobile version