Site icon Vistara News

Fact Check: 2nd PUC Result: ದ್ವಿತೀಯ ಪಿಯುಸಿ ಫಲಿತಾಂಶ ಇಂದಲ್ಲ; ಮತ್ಯಾವಾಗ?

2nd PUC Result 2023 Supplementary Exams Fee and Other Details in kannada

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿರುವ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (2nd PUC result) ಇಂದು (ಮಾರ್ಚ್‌ 3) ಪ್ರಕಟಿಸಲಾಗುವುದಿಲ್ಲ ಎಂದು ಗೊತ್ತಾಗಿದೆ. ಫಲಿತಾಂಶವನ್ನು ಏಪ್ರಿಲ್ 3ರಂದು ಪ್ರಕಟಿಸಲಾಗುವುದು ಎಂಬ ಕೆಲವು ಹೇಳಿಕೆಗಳು ಅನಧಿಕೃತ ಎಂದು ಮಂಡಳಿ ತಿಳಿಸಿದೆ.

“ಬೋರ್ಡ್ ಹೆಸರಿನಲ್ಲಿ ನಕಲಿ’ ಪತ್ರಿಕಾ ಹೇಳಿಕೆ ನೀಡಿರುವುದು ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದೆ. ಪ್ರಸ್ತುತ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ನಡೆಯುತ್ತಿದೆ. ಪ್ರಕ್ರಿಯೆ ಪೂರ್ಣಗೊಂಡ ನಂತರ, ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆಗೆ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಲಾಗುವುದು” ಎಂದು ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ತಪ್ಪು ದಾರಿಗೆಳೆಯುವ ಹಾಗೂ ಅನಧಿಕೃತ ಮಾಹಿತಿಗಳಿಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಮರುಳಾಗಬಾರದು ಎಂದು ಅವರು ಸಲಹೆ ನೀಡಿದ್ದಾರೆ. 2ನೇ ಪಿಯುಸಿ ಫಲಿತಾಂಶ ದಿನಾಂಕ ಮತ್ತು ಪರೀಕ್ಷೆಗೆ ಸಂಬಂಧಿಸಿದ ವಿವರಗಳ ಬಗ್ಗೆ ಅಧಿಕೃತ ಮಾಹಿತಿಗಾಗಿ ಮಂಡಳಿಯ ಅಧಿಕೃತ ವೆಬ್‌ಸೈಟ್ kseab.karnataka.gov.in ಗೆ ಭೇಟಿ ನೀಡುವಂತೆ ಸಲಹೆ ನೀಡಿದರು.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಕಳೆದ ಮಾರ್ಚ್ 1ರಿಂದ 22ರವರೆಗೆ ರಾಜ್ಯದ 1120ಕ್ಕೂ ಹೆಚ್ಚು ಕೇಂದ್ರಗಳಲ್ಲಿ ದ್ವಿತೀಯ ಪಿಯು ಪರೀಕ್ಷೆಗಳನ್ನು ನಡೆಸಿದೆ. ಸುಮಾರು 7 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ.

ಮಾ.25ರಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಲಾಗಿತ್ತು. ಮಂಡಳಿಯ ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಬಹುತೇಕ ಮೌಲ್ಯಮಾಪನ ಕಾರ್ಯ ಅಂತಿಮ ಘಟ್ಟಕ್ಕೆ ತಲುಪಿದೆ. ಇನ್ನೊಂದು ವಾರದೊಳಗೆ ಮೌಲ್ಯಮಾಪನ ಪೂರ್ಣ ಮುಗಿದು ಅಂಕಗಳನ್ನು ಕಂಪ್ಯೂಟರೀಕರಣಗೊಳಿಸುವ ಕಾರ್ಯವೂ ಪೂರ್ಣಗೊಳ್ಳಲಿದೆ.

ಹೀಗಾಗಿ ಎಲ್ಲ ಅಂದುಕೊಂಡಂತೆ ನಡೆದರೆ ಏಪ್ರಿಲ್ ಎರಡನೇ ವಾರದಲ್ಲಿ ಫಲಿತಾಂಶ ಪ್ರ ಕಟಿಸಲು ಚಿಂತನೆ ನಡೆದಿದೆ ಎಂದು ಇಲಾಖೆ ಹೇಳಿದೆ. ಏ.10 ಅಥವಾ ನಂತರದ ಒಂದೆರಡು ದಿನಗಳಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.

ಪ್ರಥಮ ಪಿಯುಸಿ ಪರೀಕ್ಷೆಯ ಫಲಿತಾಂಶ ಈಗಾಗಲೇ ಪ್ರಕಟವಾಗಿದೆ. KSEAB ಇದನ್ನು ಫೆಬ್ರವರಿ 12ರಿಂದ ಫೆಬ್ರವರಿ 27ರವರೆಗೆ ನಡೆಸಿದ್ದು, ಮಾರ್ಚ್ 30ರಂದು ಫಲಿತಾಂಶಗಳನ್ನು ಪ್ರಕಟಿಸಲಾಯಿತು.

ದ್ವಿತೀಯ PUC ಫಲಿತಾಂಶಗಳು karresults.nic.in ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು:

ಇದನ್ನೂ ಓದಿ: 2nd PUC Result: ಏ.10ರ ಹೊತ್ತಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

Exit mobile version