Site icon Vistara News

Wild Elephant Attack : ನಾಡಿಗೆ ಬಂದ ಕಾಡಾನೆಯಿಂದ ರೈತನ ಮೇಲೆ ದಾಳಿ, ಕಾಲು ಮುರಿತ

wild elephant attack

ಹಾಸನ: ಕೂಲಿ ಕೆಲಸಕ್ಕೆ ಹೋಗುತ್ತಿದ್ದವನ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವಾಟೆಹಳ್ಳ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ರೈತನ ಕಾಲು ಮುರಿತವಾಗಿದೆ. ಬೆಳಗ್ಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಆನೆ ದಾಳಿ (Wild Elephant Attack) ಮಾಡಿತ್ತು. 60 ವರ್ಷದ ದಿವಾಕರ್ ಶೆಟ್ಟಿ ಗಾಯಗೊಂಡವರು.

ದಿವಾಕರ್​ ಅವರು ಬೆಳಗ್ಗೆ ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಕಾಡಿನಿಂದ ಬಂದಿದ್ದ ಒಂಟಿ ಸಲಗವು ದಾಳಿ ಮಾಡಿದೆ. ದಿವಾಕರ್ ಅವರನ್ನು ಅಟ್ಟಿಸಿಕೊಂಡು ಬಂದು ಕಾಲಿನ ಮೇಲೆ ತುಳಿದಿದೆ. ಅವರ ಬಲಗಾಲು ಮುರಿದಿದೆ. ಅವರ ಕಿರುಚಾಟಕ್ಕೆ ಹೆದರಿದ ಆನೆ ಕಾಫಿ ತೋಟದ ಮೂಲಕ ವಾಪಸ್​ ಹೋಗಿದೆ. ಹೀಗಾಗಿ ಅವರ ಪ್ರಾಣ ಉಳಿದಿದೆ. ಅವರಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಇಟಿಎಫ್ ತಂಡ ಭೇಟಿ, ಪರಿಶೀಲನೆ

ಕಾಫಿ ತೋಟದಲ್ಲಿ ಬೀಡುಬಿಟ್ಟಿರುವ ಕಾಡಾನೆ

ಕಾಡಿನಿಂದ ನಾಡಿಗೆ ಮುಖ ಮಾಡಿರುವ ಆನೆಗಳು ಕಾಫಿ ತೋಟಗಳ ನಡುವೆ ನಿಂತಿವೆ. ಹೀಗಾಗಿ ಜೀವ ಭಯದಿಂದ ಕಾಫಿ ತೋಟದ ಕೆಲಸಕ್ಕೆ ಬರಲು ಕೂಲಿ ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ. ಆನೆಗಳು ಮತ್ತು ಮಾನವನ ಸಂಘರ್ಷ ಹಲವಾರು ಸಮಯದಿಂದ ಈ ಪ್ರದೇಶದಲ್ಲಿ ನಡೆಯುತ್ತಿದೆ. ಅದಕ್ಕೊಂದು ಪರಿಹಾರ ಸಿಗುತ್ತಿಲ್ಲ. ಕಾಫಿ ತೋಟಗಳಿಗೆ ಆನೆಗಳು ಲಗ್ಗೆ ಇಡುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಆನೆಗಳ ದಾಳಿಯಿಂದಾಗಿ ಹಲವಾರು ಕಾರ್ಮಿಕರು ಜರ್ಜರಿತರಾಗಿದ್ದಾರೆ. ಹೀಗಾಗಿ ಇದಕ್ಕೊಂದು ಪರಿಹಾರ ಇಲ್ಲ ಎನ್ನುವಂತಾಗಿದೆ.

ಇದನ್ನೂ ಓದಿ: Dengue Fever : ಡೆಂಗ್ಯೂ ಜ್ವರಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ಬಲಿ

ಹಂಪಿಗೆ ಬಂದ ಕರಡಿ

ಹಂಪಿ ಪರಿಸರದಲ್ಲಿ ಮತ್ತೆ ಕರಡಿ ಪ್ರತ್ಯಕ್ಷಗೊಂಡಿದ್ದು, ಇಲ್ಲಿನ ಪರಿಸರದ ಜನರಿಗೆ ಕರಡಿ ದಾಳಿಯ ಭಯ ಶುರುವಾಗಿದೆ. ಅಕ್ಕ – ತಂಗಿಯರ ಗುಡ್ಡದಿಂದ ಕಡ್ಡಿರಾಂಪುರಕ್ಕೆ ಹೋಗುವ ರಸ್ತೆಯಲ್ಲಿ ಕರಡಿಯೊಂದು ಕಂಡು ಬಂದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಹಂಪಿ- ಕಡ್ಡಿರಾಂಪುರ ರಸ್ತೆಯಿದ್ದು ಕಾಡು ಪ್ರಾಣಿಯ ದಾಳಿಯ ಭಯ ಹೆಚ್ಚಾಗಿದೆ. ಸೋಮವಾರ ಸಂಜೆ ವೇಳೆ ವಿಜಯ ವಿಠ್ಠಲ ಬಜಾರ್ ನಲ್ಲಿ ಕರಡಿ ಪ್ರತ್ಯಕ್ಷ ಆಗಿತ್ತು. ಇದೀಗ ಕಡ್ಡಿರಾಂಪೂರ ಗ್ರಾಮದ ರಸ್ತೆಯಲ್ಲಿ ಕರಡಿ ಪ್ರತ್ಯಕ್ಷವಾಗಿದೆ ಕರಡಿ ಪದೇ ಪದೇ ಬರುತ್ತಿರುವ ಕಾರಣ ಹೊಲ, ಗದ್ದೆಗಳಿಗೆ ಹೋಗುವ ರೈತರಲ್ಲಿ ಹೆಚ್ಚಿದ ಆತಂಕ ಶುರುವಾಗಿದೆ.

Exit mobile version