ನವದೆಹಲಿ: ಜನಪ್ರಿಯ ಫ್ಯಾಷನ್ ಐಕಾನ್ ಸುರಭಿ ಜೈನ್ ಕ್ಯಾನ್ಸರ್ನೊಂದಿಗಿನ ದೀರ್ಘಕಾಲದ ಹೋರಾಟದ ನಂತರ ನಿಧನ ಹೊಂದಿದ್ದಾರೆ ಎಂದು ಅವರ ಕುಟುಂಬವು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ. ಅವರಿಗೆ 30 ವರ್ಷ ವಯಸ್ಸಾಗಿತ್ತು. ಇನ್ಸ್ಟಾಗ್ರಾಮ್ನಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದರೆ. ಜೈನ್ ಅಂಡಾಶಯದ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿದ್ದರು. ಎಂಟು ವಾರಗಳ ಹಿಂದೆ ಇನ್ಸ್ಟಾಗ್ರಾಮ್ನಲ್ಲಿ ಹಾಕಿದ ತನ್ನ ಕೊನೆಯ ಪೋಸ್ಟ್ನಲ್ಲಿ ಸುರಭಿ ಜೈನ್ ಆಸ್ಪತ್ರೆಯಲ್ಲಿ ತನ್ನ ಚಿತ್ರ ಹಂಚಿಕೊಂಡಿದ್ದರು.
“ನನ್ನ ಆರೋಗ್ಯದ ಬಗ್ಗೆ ನಾನು ನಿಮಗೆ ಅಪ್ಡೇಟ್ ಮಾಡಿಲ್ಲ ಎಂದು ನನಗೆ ತಿಳಿದಿದೆ. ಅದರ ಬಗ್ಗೆ ನಾನು ಪ್ರತಿದಿನ ಪಡೆಯುತ್ತಿರುವ ಸಂದೇಶಗಳ ಸಂಖ್ಯೆಯನ್ನು ನೋಡಿದರೆ ಭಯವಾಗುತ್ತಿದೆ. ವಿಷಯಗಳು ಉತ್ತಮವಾಗಿ ನಡೆಯುತ್ತಿಲ್ಲ. ಆದ್ದರಿಂದ ಹಂಚಿಕೊಳ್ಳಲು ಹೆಚ್ಚು ಇಲ್ಲ. ಕಳೆದ 2 ತಿಂಗಳುಗಳಲ್ಲಿ ನಾನು ಹೆಚ್ಚಾಗಿ ಆಸ್ಪತ್ರೆಯಲ್ಲಿ ಕಳೆದಿದ್ದೇನೆ. ಚಿಕಿತ್ಸೆ ನಡೆಯುತ್ತಿದೆ. ಕಷ್ಟ ಮತ್ತು ಇದೆಲ್ಲವೂ ಕೊನೆಗೊಳ್ಳಬೇಕೆಂದು ನಾನು ಬಯಸುತ್ತೇನೆ” ಎಂದು ಅವರು ಬರೆದುಕೊಂಡಿದ್ದರು.
ಇದನ್ನೂ ಓದಿ: Gut Health: ನಿಮ್ಮ ಕರುಳಿನ ಆರೋಗ್ಯಕ್ಕಾಗಿ ಬೇಸಿಗೆಯಲ್ಲಿ ಈ ಡ್ರಿಂಕ್ಸ್ ಸೇವಿಸಿ
ಅವರ ಸಾವಿನ ಸುದ್ದಿಯನ್ನು ಅವರ ಕುಟುಂಬವು ಅವರ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದೆ. ಅವರು ಗುರುವಾರ ನಿಧನರಾದರು ಮತ್ತು ಏಪ್ರಿಲ್ 19 ರಂದು ಗಾಜಿಯಾಬಾದ್ನಲ್ಲಿ ಅಂತ್ಯಕ್ರಿಯೆ ಮಾಡಲಾಯಿತು ಎಂದು ಅವರು ಹೇಳಿದರು.
ಸುರಭಿ ಜೈನ್ ಅವರಿಗೆ ಕ್ಯಾನ್ಸರ್ ಗಾಗಿ ಚಿಕಿತ್ಸೆ ಪಡೆಯುತ್ತಿರುವುದು ಇದು ಎರಡನೇ ಬಾರಿ. 27 ನೇ ವಯಸ್ಸಿನಲ್ಲಿ, ಅವರು ತಮ್ಮ ಮೊದಲ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. “ಶಸ್ತ್ರಚಿಕಿತ್ಸೆಯಿಂದ ನನಗೆ 149 ಹೊಲಿಗೆಗಳು ಮತ್ತು ಸಾಕಷ್ಟು ನೋವು ಕಾಣಿಸಿಕೊಂಡಿತು. ನಾನು ಹೆಚ್ಚು ಚಟವಟಿಕೆಯಿಂದ ಇರಲು ಹಾಗೂ ನಗು ಮೂಡಿಸಲು ಶ್ರಮ ವಹಿಸುತ್ತಿದ್ದೇನೆ ಎಂದು ಅವರು ಆ ವೇಳೆ ಬರೆದುಕೊಂಡಿದ್ದರು.
ಅಂಡಾಶಯದ ಕ್ಯಾನ್ಸರ್ ಅಂಡಾಶಯಗಳಲ್ಲಿ ಹುಟ್ಟುತ್ತದೆ ಮತ್ತು ಇದು ಮಹಿಳೆಯರಿಗೆ ಗಮನಾರ್ಹ ಆರೋಗ್ಯ ಕಾಳಜಿಯಾಗಿದೆ. ಈ ರೋಗವು ಅಂಡಾಶಯಗಳಲ್ಲಿ ಮಾರಣಾಂತಿಕ ಗೆಡ್ಡೆಯಿಂದ ಆರಂಭವಾಗುತ್ತದೆ. ಇದು ಆರೋಗ್ಯಕರ ಅಂಗಾಂಶಗಳನ್ನು ನಾಶಪಡಿಸುತ್ತದೆ. ಇದು ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ನಂತರ ಭಾರತದಲ್ಲಿ ಮಹಿಳೆಯರಲ್ಲಿ ಮೂರನೇ ಅತ್ಯಂತ ಸಾಮಾನ್ಯ ಕ್ಯಾನ್ಸರ್ ಆಗಿದೆ.