Site icon Vistara News

R K S Bhadauria : ವಾಯುಪಡೆಯ ಮಾಜಿ ಮುಖ್ಯಸ್ಥ ಆರ್.ಕೆ.ಎಸ್. ಬದೌರಿಯಾ ಬಿಜೆಪಿಗೆ ಸೇರ್ಪಡೆ

Bhadauria

ನವದೆಹಲಿ: ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಆರ್​ಕೆಎಸ್​ ಬದೌರಿಯಾ (R K S Bhadauria) ಭಾನುವಾರ ಬಿಜೆಪಿಗೆ ಸೇರಿದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ (Vinod Thavde) ಅವರು ಭಾರತೀಯ ವಾಯುಪಡೆಯಲ್ಲಿ (IAF) ಬದೌರಿಯಾ ಅವರ ಸುದೀರ್ಘ ಸೇವೆಯನ್ನು ಶ್ಲಾಘಿಸಿ ಪಕ್ಷಕ್ಕೆ ಬರ ಮಾಡಿಕೊಂಡರು. ರಕ್ಷಣಾ ಪಡೆಗಳಲ್ಲಿ ಸಕ್ರಿಯ ಪಾತ್ರ ವಹಿಸಿದ ನಂತರ ಅವರು ಈಗ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ಕೊಡುಗೆ ನೀಡುತ್ತಾರೆ ಎಂಬ ವಿಶ್ವಾಸವನ್ನು ತಾವ್ಡೆ ವ್ಯಕ್ತಪಡಿಸಿದ್ದಾರೆ.

ಬದೌರಿಯಾ ಅವರು ಐಎಎಫ್​ನಲ್ಲಿ ಸುಮಾರು 40 ವರ್ಷ ಸೇವೆ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತ್ ಕಾರ್ಯಕ್ರಮಕ್ಕೆ ತಮ್ಮ ಕೊಡುಗೆ ನೀಡಿದ್ದಾರೆ ಎಂದು ಬಿಜೆಪಿ ನಾಯಕ ಹೇಳಿದ್ದಾರೆ. ಆರ್ಕೆಎಸ್ ಭದೌರಿಯಾ ಉತ್ತರ ಪ್ರದೇಶದವರಾಗಿದ್ದಾರೆ. ಅಂತೆಯೇ ಅಲ್ಲಿನ ಲೋಕಸಭಾ ಚುನಾವಣೆಗೆ ರಾಜ್ಯದ ಹಲವಾರು ಸ್ಥಾನಗಳಿಂದ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಇನ್ನೂ ಹೆಸರಿಸಿಲ್ಲ. ಹೀಗಾಗಿ ಬದೌರಿಯಾ ಅವರು ಅಲ್ಲಿ ಚುನಾವಣೆಗೆ ನಿಲ್ಲಬಹುದು ಎಂದು ಹೇಳಲಾಗಿದೆ.

ರಾಜ್ಯದ 5 ಕ್ಷೇತ್ರ ಸೇರಿದಂತೆ ಬಿಜೆಪಿ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಇಂದು ಪ್ರಕಟ ಸಾಧ್ಯತೆ

ಲೋಕಸಭಾ ಚುನಾವಣೆಗೆ (Lok Sabha Election) ಬಿಜೆಪಿ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಭಾನುವಾರ ಪ್ರಕಟಗೊಳ್ಳುವ ಸಾಧ್ಯತೆ ಇದ್ದು, ಕರ್ನಾಟಕದ ಐದು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಈ ಪಟ್ಟಿಯಲ್ಲಿ ಘೋಷಿಸಬಹುದು ಎನ್ನಲಾಗಿದೆ. ಮೈತ್ರಿ ಪಕ್ಷ ಜೆಡಿಎಸ್​ಗೆ ಬಿಟ್ಟುಕೊಟ್ಟಿರುವ ಹಾಸನ, ಮಂಡ್ಯ ಹಾಗೂ ಕೋಲಾರ ಹೊರತುಪಡಿಸಿ ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ಚಿತ್ರದುರ್ಗ, ರಾಯಚೂರು, ಬೆಳಗಾವಿ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಯಾರೆಂಬುದು ಈ ಪಟ್ಟಿಯಲ್ಲಿ ಗೊತ್ತಾಗಬಹುದು.

ಇದನ್ನೂ ಓದಿ : Udhayanidhi Stalin : 28 ಪೈಸೆ ಪಿಎಂ; ಮೋದಿಯನ್ನು ಹೀಗೆಳೆದ ಉದಯನಿಧಿ ಸ್ಟಾಲಿನ್​

ಬಿಜೆಪಿ ನಾಲ್ಕನೇ ಪಟ್ಟಿಯಲ್ಲಿ ಕರ್ನಾಟಕವಲ್ಲದೆ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ರಾಜಸ್ಥಾನ, ಒಡಿಶಾ ಮತ್ತು ಆಂಧ್ರಪ್ರದೇಶದ ಅಭ್ಯರ್ಥಿಗಳ ಹೆಸರು ಪ್ರಕಟಗೊಳ್ಳಬಹುದು. ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯ ಸಭೆ ಶನಿವಾರ ನಡೆದಿದ್ದು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಭಾನುವಾರ ಪ್ರಕಟವಾಗುವ ನಿರೀಕ್ಷೆಯಿರುವ ಪಟ್ಟಿಯ ಕುರಿತು ಬಿಜೆಪಿಯ ಪ್ರಮುಖ ನಾಯಕರು ಮೂರು ಗಂಟೆಗಳ ಚರ್ಚೆ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಬ್ರಿಜೇಶ್ ಪಾಠಕ್, ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಸಭೆಯಲ್ಲಿ ಭಾಗವಹಿಸಿದ್ದರು.

Exit mobile version