ಬೆಂಗಳೂರು: ರಾಜ್ಯಸಭಾ ಚುನಾವಣೆಯ (Rajya Sabha Election) ಫಲಿತಾಂಶ ಪ್ರಕಟಗೊಂಡ ವೇಳೆ ಕಾಂಗ್ರೆಸ್‌ನ ಮೂವರು ಸದಸ್ಯರ ಪೈಕಿ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಜೈಕಾರ ಕೂಗಿದ್ದಾರೆ ಎಂಬ ಪ್ರಕರಣದ ಕುರಿತು ವಿಧಿ ವಿಜ್ಞಾನ ಪ್ರಯೋಗಾಲಯದ (FSL Report) ವರದಿ ಸಿದ್ಧಗೊಂಡಿದೆ. ಘಟನೆ ನಡೆದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರುಎರಡು ದಿನಗಳ ಎಫ್ಎಸ್ಎಲ್ ರಿಪೋರ್ಟ್ ಕೊಡುವಂತೆ ಸೂಚಿಸಿದ್ದ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದರು. ಅಂತೆಯೇ ವರದಿ ಸಿದ್ದಗೊಂಡಿದ್ದು ಗೃಹ ಇಲಾಖೆಗೆ ವರದಿ ಸಲ್ಲಿಕೆಯಾಗಿದೆ.
ಭಾರತದ ಸೌರ್ವಭೌಮತ್ವವನ್ನು ಧಿಕ್ಕರಿಸಿ ಪಾಕ್ ಪರ ಘೋಷಣೆ ಕೂಗಿರುವ ಬಗ್ಗೆ ರಾಜ್ಯ ಸೇರಿ ದೇಶಾದ್ಯಂತ ಭಾರಿ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇಂಥದ್ದೊಂದು ಪಾಪಿ ಕೃತ್ಯ, ಅಕ್ಷಮ್ಯ ಅಪರಾಧವನ್ನು ವಿಧಾನಸೌಧದೊಳಗೆ ಮಾಡಿರುವುದು ಮತ್ತೊಂದು ದುರಂತವಾಗಿದೆ ಎಂಬ ಆರೋಪಗಳನ್ನು ವಿಪಕ್ಷಗಳು ಮಾಡಿದ್ದವು.
ಇದನ್ನೂ ಓದಿ : Budget Session : ಬಿಜೆಪಿಯ ಜೈ ಶ್ರೀರಾಮ್ VS ಸಿದ್ದರಾಮಯ್ಯರ ಜೈ ಸೀತಾರಾಮ್!
ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ಒಬ್ಬರು ಗೆಲುವು ಸಾಧಿಸಿದ್ದಾರೆ ಎಂದು ಘೋಷಣೆಯಾಯಿತು. ಆಗ ನೂತನ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರನ್ನು ಕಾಂಗ್ರೆಸ್ ಬೆಂಬಲಿಗರು ಎತ್ತಿ ಖುಷಿಪಟ್ಟಿದ್ದಾರೆ. ಹಾರವನ್ನು ಹಾಕಿ ಸಂಭ್ರಮಿಸಿದ್ದಾರೆ. ಇದೇ ವೇಳೆ, ಕೆಲವು ಪಾಪಿಗಳು “ಪಾಕಿಸ್ತಾನ್ ಜಿಂದಾಬಾದ್” ಎಂದು ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ. ಅದರ ವಿಡಿಯೊ ಎಲ್ಲೆಡೆ ವೈರಲ್ ಆಗಿದ್ದವು.
ಇದು ಅತ್ಯಂತ ನಾಚಿಕೆಗೇಡಿನ ಸಂಗತಿ
ಈ ಬಗ್ಗೆ ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಪ್ರತಿಕ್ರಿಯೆ ನೀಡಿ, ಇದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ. ಇದಕ್ಕೆ ಸುಮೋಟೋ ಕೇಸ್ ಅನ್ನು ದಾಖಲು ಮಾಡಬೇಕು. ತಕ್ಷಣವೇ ತಪ್ಪಿತಸ್ಥರನ್ನು ಬಂಧಿಸಬೇಕು. ಇದು ದೇಶದ್ರೋಹದ ಕೆಲಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಕೂಡಲೇ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ನಾನು ಆಗ್ರಹಿಸುತ್ತೇನೆ ಎಂದು ಹೇಳಿದ್ದರು.
ಈ ಕೂಡಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಕೂಡಲೇ ಈ ಬಗ್ಗೆ ತಮ್ಮ ಹೇಳಿಕೆಯನ್ನು ನೀಡಬೇಕು. ಇದು ಅಕ್ಷಮ್ಯವಾಗಿದೆ. ಈ ಸರ್ಕಾರ ಏನು ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂಬುದನ್ನು ನಾವು ಕಾದು ನೋಡುತ್ತೇವೆ ಎಂದು ರವಿಕುಮಾರ್ ಒತ್ತಾಯಿಸಿದ್ದರು.
ಕಾಂಗ್ರೆಸ್‌ನ ಗೆಲುವು ದೇಶದ್ರೋಹಿಗಳ ಗೆಲುವಾ?
ಇದೊಂದು ಅಕ್ಷಮ್ಯ ಅಪರಾಧವಾಗಿದೆ. ಇದು ಪಾಕಿಸ್ತಾನ ಚುನಾವಣೆಯಾ? ಭಾರತದ ಚುನಾವಣೆಯಾ? ಇದು ಕಾಂಗ್ರೆಸ್‌ನ ಮಾನಸಿಕತನವನ್ನು ತೋರಿಸುತ್ತದೆ. ಕಾಂಗ್ರೆಸ್ ಗೆಲುವು ಸಾಧಿಸಿದ ಮೇಲೆ ಇಂಥ ವಿಧ್ವಂಸಕ ಕೃತ್ಯ ಎಸಗುವವರಿಗೆ ಬಲ ಸಿಕ್ಕಂತೆ ಆಗಿದೆ. ಇವರೇನು ಪಾಕಿಸ್ತಾನದ ಏಜೆಂಟರಾ? ಇದರ ವಿರುದ್ಧ ಈ ಸರ್ಕಾರ ಕ್ರಮವನ್ನು ಕೈಗೊಳ್ಳಬೇಕು. ಈ ದೇಶದ ಅನ್ನ ತಿಂದು, ಸೌಲಭ್ಯವನ್ನು ಪಡೆದು ಪಾಕಿಸ್ತಾನದ ಪರ ಘೋಷಣೆ ಕೂಗುತ್ತಾರಲ್ಲವೇ? ಇವರು ಹೊಟ್ಟೆಗೆ ಏನನ್ನು ತಿನ್ನುತ್ತಾರೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದ್ದರು.