Karnataka Budget 2024: 30 ಲಕ್ಷ ಉದ್ಯೋಗ, ಇ-ಆಫೀಸ್‌, ರಸ್ತೆ; ಗ್ರಾಮೀಣಾಭಿವೃದ್ಧಿಗೆ ಸಿಕ್ಕಿದ್ದೇನು? - Vistara News

ಪ್ರಮುಖ ಸುದ್ದಿ

Karnataka Budget 2024: 30 ಲಕ್ಷ ಉದ್ಯೋಗ, ಇ-ಆಫೀಸ್‌, ರಸ್ತೆ; ಗ್ರಾಮೀಣಾಭಿವೃದ್ಧಿಗೆ ಸಿಕ್ಕಿದ್ದೇನು?

Karnataka Budget 2024: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಏನೆಲ್ಲ ಘೋಷಿಸಲಾಗಿದೆ ಎಂಬುದರ ವಿವರ ಇಲ್ಲಿದೆ.

VISTARANEWS.COM


on

Siddaramaiah Budget
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ (Karnataka Budget 2024) ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ಗೂ (Rural Development And Panchayat Raj) ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಗ್ರಾಮೀಣ ರಸ್ತೆ, ಆರೋಗ್ಯ, ಗ್ರಂಥಾಲಯ ಸೇರಿ ಹಲವು ಘೋಷಣೆ, ಹೆಚ್ಚಿನ ಅನುದಾನ ಮೀಸಲಿಡಲಾಗಿದೆ. ಕಲ್ಯಾಣ ಕರ್ನಾಟಕಕ್ಕೂ ಸಿದ್ದರಾಮಯ್ಯ ಆದ್ಯತೆ ನೀಡಿದ್ದಾರೆ. ಹಾಗಾದರೆ, ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ಗೆ ಏನೆಲ್ಲ ಸಿಕ್ಕಿದೆ? ಇಲ್ಲಿದೆ ಮಾಹಿತಿ.

ಕಲ್ಯಾಣ ಕರ್ನಾಟಕಕ್ಕೆ ರಸ್ತೆ ಭಾಗ್ಯ

ರಾಜ್ಯದಲ್ಲಿ ಸುಮಾರು 5,200 ಕೋಟಿ ರೂ. ವೆಚ್ಚದಲ್ಲಿ 9,450 ಕಿಲೋಮೀಟರ್‌ ರಸ್ತೆ ನಿರ್ಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. ಪ್ರಗತಿ ಪಥ ಯೋಜನೆ ಅಡಿಯಲ್ಲಿ 189 ಗ್ರಾಮೀಣ ವಿಧಾನ ಸಭಾ ಕ್ಷೇತ್ರಗಳಲ್ಲಿ ತಲಾ 50 ಕಿ.ಮೀ ಉದ್ದದ ರಸ್ತೆ ನಿರ್ಮಿಸಲಾಗುತ್ತದೆ. ಹಾಗೆಯೇ, ಕಲ್ಯಾಣ ಪಥ ಯೋಜನೆಯಡಿ ಕಲ್ಯಾಣ ಕರ್ನಾಟಕದ 38 ಗ್ರಾಮೀಣ ವಿಧಾನ ಸಭಾ ಕ್ಷೇತ್ರಗಳಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆ ಮಾದರಿಯಲ್ಲಿ ಒಟ್ಟು 1,150 ಕಿ.ಮೀ. ರಸ್ತೆಗಳನ್ನು 1,000 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

30 ಲಕ್ಷ ಕುಟುಂಬಗಳಿಗೆ ಉದ್ಯೋಗ

ರಾಜ್ಯವು ಎಂದಿನಂತೆ ನರೇಗಾ ಯೋಜನೆಯ ಅನುಷ್ಠಾನದಲ್ಲಿ ಮುಂಚೂಣಿಯಲ್ಲಿದೆ. 2024-25ನೇ ಸಾಲಿನಲ್ಲಿ 16 ಕೋಟಿ ಮಾನವ-ದಿನಗಳನ್ನು ಸೃಜಿಸಿ, ಸುಮಾರು 30 ಲಕ್ಷ ಕುಟುಂಬಗಳಿಗೆ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ. ಪ್ರಮುಖವಾಗಿ ಜಲಾನಯನ ಇಲಾಖೆಯ ಒಗ್ಗೂಡಿಸುವಿಕೆಯೊಂದಿಗೆ 5,000 ಎಕರೆ ಸವಳು-ಜವಳು ಭೂಮಿಯನ್ನು ಸುಧಾರಿಸುವ ಮತ್ತು ಪ್ರತಿ ತಾಲೂಕಿಗೆ ಕನಿಷ್ಠ 2ರಂತೆ ಬೂದು ನೀರು ಸಂಸ್ಕರಣಾ ಘಟಕಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಪ್ರಮುಖ ಅಂಶಗಳು

  • ಅರಿವು ಕೇಂದ್ರಗಳನ್ನು ಬಲಪಡಿಸುವ ದೃಷ್ಠಿಯಿಂದ 132 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗುವುದು ಮತ್ತು ಪುಸ್ತಕಗಳು, ಡಿಜಿಟಲ್‌ ಉಪಕರಣಗಳು ಹಾಗೂ ವಿಕಲಚೇತನ ಸ್ನೇಹಿ ಉಪಕರಣಗಳನ್ನು ಖರೀದಿಸಲಾಗುವುದು.
  • ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಇ-ಆಫೀಸ್‌ ಅನ್ನು ಪ್ರಾರಂಭಿಸಲಾಗುವುದು. ಸೇವಾ ಸಿಂಧು ಪೋರ್ಟಲ್‌ ಮೂಲಕ ಒದಗಿಸಲಾಗುತ್ತಿರುವ ಎಲ್ಲ ಸೇವೆಗಳನ್ನು ಈ ವರ್ಷದಿಂದ ಬಾಪೂಜಿ ಸೇವಾ ಕೇಂದ್ರಗಳಲ್ಲೂ ಪ್ರಾರಂಭಿಸಲಾಗುವುದು.
  • ಗ್ರಾಮ ಪಂಚಾಯಿತಿಗಳ ಸಭೆಗಳು ಮತ್ತು ಗ್ರಾಮ ಸಭೆಗಳ ಕಾರ್ಯಕಲಾಪಗಳ ನೇರ ಪ್ರಸಾರ ಮಾಡಲಾಗುವುದು.
  • 50 ಗ್ರಾಮ ಪಂಚಾಯಿತಿಗಳಲ್ಲಿ ಹೊಂಬೆಳಕು ಕಾರ್ಯಕ್ರಮದಡಿ 25 ಕೋಟಿ ರೂ.ಗಳ ವೆಚ್ಚದಲ್ಲಿ ಸೋಲಾರ್ ದೀಪಗಳನ್ನು ಅಳವಡಿಸಲಾಗುವುದು
  • ಪ್ರಸಕ್ತ ಸಾಲಿನಿಂದ ಆಯ್ದ 100 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮಸ್ಥರ ಸಹಭಾಗಿತ್ವದೊಂದಿಗೆ ಹಿರಿಯ ನಾಗರಿಕರ ಆರೈಕೆ ಮತ್ತು ಚಿಕಿತ್ಸೆಯನ್ನು ನಿರ್ವಹಿಸಲು ಆರೈಕೆ–ಉಪಶಮನ (Palliative Care) ಕೇಂದ್ರಗಳನ್ನು ಪ್ರಾರಂಭಿಸಲಾಗುವುದು.
  • ಪ್ರೇರಣಾ ಕಾರ್ಯಕ್ರಮದಡಿ ಸ್ವಸಹಾಯ ಗುಂಪುಗಳ ಮಹಿಳೆಯರು, ಗ್ರಾಮ ಪಂಚಾಯಿತಿಗಳ ಮಹಿಳಾ ಸದಸ್ಯರು ಹಾಗೂ ಗ್ರಾಮೀಣ ಪ್ರದೇಶದ ಮುಂಚೂಣಿಯ ಕಾರ್ಯಕರ್ತೆಯರಲ್ಲಿ ಮೆನ್ಸ್ಟ್ರುವಲ್‌ ಕಪ್‌ಗಳ (Menstrual Cup) ಬಳಕೆಯನ್ನು ಪ್ರೋತ್ಸಾಹಿಸಲಾಗುವುದು. ಇದರ ಮೂಲಕ ಗ್ರಾಮದ ಇತರೆ ಮಹಿಳೆಯರನ್ನು ಇವುಗಳನ್ನು ಬಳಕೆ ಮಾಡಲು ಪ್ರೇರೇಪಿಸಲಾಗುವುದು.
  • ರಾಜ್ಯದ 100 ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡಲು ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ಪ್ರಾರಂಭಿಸಲಾಗುವುದು. ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ತಲಾ ಒಂದು ಲಕ್ಷ ರೂ. ನೆರವಿನೊಂದಿಗೆ ಎಸ್.ಹೆಚ್.ಜಿ.ಗಳ ಸಹಯೋಗದೊಂದಿಗೆ ಎಣ್ಣೆ ಗಾಣವನ್ನು ಸ್ಥಾಪಿಸಲಾಗುವುದು.
  • ಜೀತ ಕಾರ್ಮಿಕ ಪದ್ಧತಿಯಿಂದ ಬಿಡುಗಡೆಗೊಂಡ ಕಾರ್ಮಿಕರ ಪುನರ್ವಸತಿಗಾಗಿ ನೀಡುವ ಮಾಸಿಕ ಪ್ರೋತ್ಸಾಹಧನವನ್ನು 2,000 ರೂ.ಗಳಿಗೆ ಹೆಚ್ಚಿಸಲಾಗುವುದು. ಈ ಪಿಡುಗಿನ ಪರಿಣಾಮಕಾರಿ ನಿರ್ಮೂಲನೆಗೆ ಪೂರಕವಾಗಿ ಸಂಬಂಧಪಟ್ಟ ಇಲಾಖೆಗಳ ಕ್ಷೇತ್ರಮಟ್ಟದ ಅಧಿಕಾರಿಗಳನ್ನು ಜೀತ ಕಾರ್ಮಿಕ ನಿಷೇಧ ಅಧಿಕಾರಿಗಳಾಗಿ ಅಧಿಸೂಚಿಸಲಾಗುವುದು.
  • ಕಲ್ಯಾಣ ಕರ್ನಾಟಕ ಭಾಗದ ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸರ್ಕಾರದ ಮಾನ್ಯತೆಯುಳ್ಳ ದಾಖಲೆಗಳನ್ನು ಡಿಜಿಲಾಕರ್‌ ಆಪ್‌ನಲ್ಲಿ ಸುರಕ್ಷಿತವಾಗಿರಿಸುವ ಸಲುವಾಗಿ ನನ್ನ ಗುರುತು ಅಭಿಯಾನವನ್ನು ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ 1,000 ಗ್ರಾಮ ಪಂಚಾಯಿತಿಗಳಲ್ಲಿ ಹಮ್ಮಿಕೊಳ್ಳಲಾಗುವುದು.

ಇದನ್ನೂ ಓದಿ: Karnataka Budget Session 2024: ಡಾಲಿ ಧನಂಜಯ್‌ ಬರೆದ ಸಾಲುಗಳು ಬಜೆಟ್‌ನಲ್ಲಿ ಹೈಲೈಟ್‌!

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಆಗಸ್ಟ್‌ 31ರ ಒಳಗೆ GBA ಚುನಾವಣೆ ನಡೆಸಿ- ಸುಪ್ರೀಂ ಕೋರ್ಟ್‌

VISTARANEWS.COM


on

ಆಗಸ್ಟ್‌ 31ರ ಒಳಗೆ ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದೆ. ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗದ ಮನವಿಯನ್ನು ಪರಿಗಣಿಸಿದ ಸುಪ್ರೀಂಕೋರ್ಟ್‌, ಆಗಸ್ಟ್‌ 31ರವರೆಗೆ ಕಾಲಾವಕಾಶ ನೀಡಿದೆ. ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಇನ್ನೂ ಮೂರು ತಿಂಗಳ ಗಡುವು ವಿಸ್ತರಣೆ ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು.

ಈ ಹಿಂದೆ ಜೂನ್‌ 30ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿತ್ತು. ಆದರೆ ಇದೀಗ ಸರ್ಕಾರದ ಮನವಿ ಮೇರೆಗೆ ಚುನಾವಣಾ ಗಡುವನ್ನು ಆಗಸ್ಟ್‌ ಅಂತ್ಯದವರೆಗೆ ವಿಸ್ತರಿಸಲಾಗಿದೆ.

ಸೆಪ್ಟೆಂಬರ್‌ ಅಂತ್ಯದವರೆಗೆ ಕಾಲಾವಕಾಶ ನೀಡಬೇಕೆಂದು ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗದ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದವು. ಮನವಿಯನ್ನು ಆಲಿಸಿದ ಸಿಜೆಐ ಅವರನ್ನು ಒಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳಲ್ಲಿ, ರಾಜ್ಯದಲ್ಲಿ ಚುನಾವಣಾ ಸಿಬ್ಬಂದಿ ವರ್ಗ ಜನಗಣತಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ, ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಗಳಲ್ಲಿ ನಿರತರಾಗಿದ್ದಾರೆ. ಹೀಗಾಗಿ ಜಿಬಿಎ ಚುನಾವಣೆ ನಡೆಸಲು ಮೂರು ತಿಂಗಳ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದವು.

Continue Reading

Latest

ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ ಬಂದ್‌

VISTARANEWS.COM


on

ಇ-ಫಾರ್ಮಸಿ ಹಾಗೂ ಆನ್‌ಲೈನ್‌ ಮೂಲಕ ಔಷಧ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ಗಳು ಬಂದ್‌ ಆಗಿವೆ. ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಕರೆ ಮೇರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಮೆಡಿಕಲ್‌ ಸ್ಟೋರ್‌ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಆನ್‌ಲೈನ್‌ ಔಷಧ ವ್ಯಾಪಾರಕ್ಕೆ ಕಟ್ಟುನಿಟ್ಟಾದ ನಿಯಮ ಜಾರಿಗೊಳಿಸಬೇಕು, ಕಾರ್ಪೊರೇಟ್‌ ಸಂಸ್ಥೆಗಳ ಭಾರಿ ರಿಯಾಯಿತಿ ದರ ಸಮರಕ್ಕೆ ಬ್ರೇಕ್‌ ಹಾಕಬೇಕು ಹಾಗೂ ಎಲ್ಲಾ ವ್ಯಾಪಾರಿಗಳಿಗೆ ಸಮಾನ ಮುಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು ಎಂಬ ಬೇಡಿಕೆಗಳನ್ನು ಅಖಿಲ ಭಾರತ ಕೆಮಿಸ್ಟ್‌ ಮತ್ತು ಡ್ರಗ್ಗಿಸ್ಟ್‌ ಸಂಘ ಮುಂದಿಟ್ಟಿದೆ.

ಈ ಬಂದ್‌ನಿಂದ ಅನೇಕ ಕಡೆಗಳಲ್ಲಿ ಔಷಧ ಖರೀದಿಗೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ತುರ್ತು ಸೇವೆಗಳಿಗಾಗಿ ಕೆಲವು ಮೆಡಿಕಲ್‌ ಸ್ಟೋರ್‌ಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ.

Continue Reading

Latest

ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ ಬಂದ್‌

VISTARANEWS.COM


on

ಆನ್‌ಲೈನ್‌ನಲ್ಲಿ ಔಷಧ ಮಾರಾಟವನ್ನು ವಿರೋಧಿಸಿ ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳ ಬಂದ್‌ಗೆ ಕರೆ ನೀಡಲಾಗಿದೆ. ದೇಶದಾದ್ಯಂತ ಸುಮಾರು 9 ಲಕ್ಷ ಔಷಧ ಅಂಗಡಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.
ಕರ್ನಾಟಕದಲ್ಲೂ ಸುಮಾರು 26 ಸಾವಿರಕ್ಕೂ ಹೆಚ್ಚು ಮೆಡಿಕಲ್ ಶಾಪ್‌ಗಳು ಬಂದ್ ಆಗುವ ಸಾಧ್ಯತೆ ಇದ್ದು, ಗ್ರಾಹಕರು ಅಗತ್ಯ ಔಷಧಿಗಳನ್ನು ಮುಂಚಿತವಾಗಿ ಖರೀದಿಸಿಕೊಳ್ಳುವಂತೆ ಸಂಘಟನೆಗಳು ಮನವಿ ಮಾಡಿವೆ.

ಇ-ಫಾರ್ಮಸಿ ವೇದಿಕೆಗಳ ಮೂಲಕ ಭಾರಿ ರಿಯಾಯಿತಿಯಲ್ಲಿ ಔಷಧ ಮಾರಾಟವಾಗುತ್ತಿರುವುದು ಸಣ್ಣ ಹಾಗೂ ಮಧ್ಯಮ ಮಟ್ಟದ ಮೆಡಿಕಲ್ ಅಂಗಡಿಗಳಿಗೆ ಹೊಡೆತ ನೀಡುತ್ತಿದೆ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ. ಜೊತೆಗೆ ಆನ್‌ಲೈನ್ ಮೂಲಕ ನಿಯಂತ್ರಣವಿಲ್ಲದೆ ಔಷಧ ವಿತರಣೆ ನಡೆಯುತ್ತಿರುವುದರಿಂದ ರೋಗಿಗಳ ಆರೋಗ್ಯಕ್ಕೂ ಅಪಾಯ ಉಂಟಾಗಬಹುದು ಎಂದು ಎಚ್ಚರಿಸಿದ್ದಾರೆ.
ಆನ್‌ಲೈನ್ ಮೂಲಕ ಔಷಧ ಖರೀದಿ ವ್ಯವಸ್ಥೆಯನ್ನು ನಿಯಂತ್ರಿಸುವುದು ಹಾಗೂ ಇ-ಫಾರ್ಮಸಿ ಕಂಪನಿಗಳ ವಿರುದ್ಧ ಕಠಿಣ ನಿಯಮ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ.

Continue Reading

Latest

ಸಾರಿಗೆ ಮಷ್ಕರಕ್ಕೆ ಹೈಕೋರ್ಟ್‌ ಬ್ರೇಕ್‌

VISTARANEWS.COM


on

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್‌ ನಿರ್ಬಂಧ ವಿಧಿಸಿದೆ. ಸಾರಿಗೆ ನೌಕರರು ಮುಷ್ಕರವನ್ನು ನಡೆಸಬಾರದು ಎಂದು ಸಾರಿಗೆ ಸಂಘಟನೆಗಳಿಗೆ ಹೈಕೋರ್ಟ್‌ ಸೂಚನೆ ನೀಡಿದ್ದು, ಸರ್ಕಾರವು ಕೂಡಲೇ ಸಂಘಟನೆಗಳೊಂದಿಗೆ ಮಾತುಕತೆ ನಡೆಸಬೇಕು ಎಂದು ನಿರ್ದೇಶಿಸಿದೆ.

ಮೇ.20 ರಿಂದ ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದರು. ಮುಷ್ಕರಕ್ಕೆ ನಿರ್ಬಂಧ ವಿಧಿಸಿರುವ ಹೈಕೋರ್ಟ್‌, ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಸೂಚಿಸಿದೆ. ಇದೇ ವೇಳೆ ಸಾರಿಗೆ ಸಚಿವರೊಂದಿಗೆ ಸಂಘಟನೆಗಳು ಮಾತುಕತೆ ನಡೆಸುವಂತೆ ಸಲಹೆ ನೀಡಿದೆ.

ಈ ಸಂಬಂಧ ಸಾರಿಗೆ ಸಂಘಟನೆಗಳು, ರಾಜ್ಯ ಸರ್ಕಾರ ಹಾಗೂ ಸಾರಿಗೆ ಸಚಿವರಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಸಾರ್ವಜನಿಕರ ಸಂಚಾರಕ್ಕೆ ಯಾವುದೇ ಅಡಚಣೆ ಆಗದಂತೆ ತಕ್ಷಣ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಲಾಗಿದೆ.

Continue Reading
Advertisement
galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌