Site icon Vistara News

Mukhtar Ansari : ಗ್ಯಾಂಗ್​ಸ್ಟರ್​ ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ

Mukthar Ansari

ನವದೆಹಲಿ: ಕ್ರಿಮಿನಲ್ ಪ್ರಕರಣಗಳಲ್ಲಿ ಜೈಲು ಸೇರಿದ್ದ ಗ್ಯಾಂಗ್​ಸ್ಟರ್​ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ (Mukhtar Ansari ) ಗುರುವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾನೆ. ಬಾಂಡಾ ಜೈಲಿನಲ್ಲಿದ್ದ ಅನ್ಸಾರಿಗೆ ಹೃದಯಾಘಾತವಾಗಿ ಬ್ಯಾರಕ್ ನಲ್ಲಿ ಬಿದ್ದಿದ್ದ ಎಂದು ಮೂಲಗಳು ತಿಳಿಸಿವೆ. ಆತನನ್ನು ಅಲ್ಲಿಂದ ಬಾಂಡಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದಾಗ್ಯೂ ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟಿದ್ದಾನೆ. ಸಾವಿನ ಹಿನ್ನೆಯಲ್ಲಿ ಲಖನೌ ಮತ್ತು ಮೌ ಸದರ್​ ಮತ್ತು ಗಾಜಿಪುರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಎರಡು ದಿನಗಳಲ್ಲಿ ಎರಡನೇ ಬಾರಿಗೆ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅನ್ಸಾರಿಯನ್ನು ಮಂಗಳವಾರ ಬಾಂಡಾದಲ್ಲಿ ಸುಮಾರು 14 ಗಂಟೆಗಳ ಕಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಆತನನ್ನು ಬಿಡುಗಡೆ ಮಾಡಲಾಗಿತ್ತು. ಏತನ್ಮಧ್ಯೆ. ತನ್ನ ಸಹೋದರನಿಗೆ ಜೈಲಿನಲ್ಲಿ ವಿಷಪ್ರಾಷನ ಮಾಡಲಾಗುತ್ತಿದೆ ಎಂದು ಮುಖ್ತಾರ್ ಸಹೋದರ ಅಫ್ಜಲ್ ಅನ್ಸಾರಿ ಅರೋಪಿಸಿದ್ದಾರೆ.

60 ಹೆಚ್ಚು ಪ್ರಕರಣಗಳ ಆರೋಪಿ, ಎಂಟರಲ್ಲಿ ಅಪರಾಧಿ

ಮೌ ಸದರ್ ಕ್ಷೇತ್ರದಿಂದ ಐದು ಬಾರಿ ಶಾಸಕನಾಗಿದ್ದ ಮುಖ್ತಾರ್ ಅನ್ಸಾರಿ 2005ರಿಂದ ಉತ್ತರ ಪ್ರದೇಶ ಮತ್ತು ಪಂಜಾಬ್ ನಲ್ಲಿ ಜೈಲಿನಲ್ಲಿದ್ದ. ಆತನ ವಿರುದ್ಧ 60ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಸೆಪ್ಟೆಂಬರ್ 2022 ರಿಂದ ಯುಪಿಯ ವಿವಿಧ ನ್ಯಾಯಾಲಯಗಳು ಎಂಟು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಿದ್ದು, ಅವರನ್ನು ಬಾಂಡಾ ಜೈಲಿನಲ್ಲಿರಿಸಲಾಗಿತ್ತು.

ಕಳೆದ ವರ್ಷ ಉತ್ತರ ಪ್ರದೇಶ ಪೊಲೀಸರು ಬಿಡುಗಡೆ ಮಾಡಿದ 66 ದರೋಡೆಕೋರರ ಪಟ್ಟಿಯಲ್ಲಿ ಅನ್ಸಾರಿ ಹೆಸರು ಇತ್ತು. ಮುಖ್ತಾರ್ ಅನ್ಸಾರಿಯನ್ನು ನಕಲಿ ಎನ್​ಕೌಂಟರ್ ಮೂಲಕ ಕೊಲ್ಲಬಹುದು ಎಂದು ಅವರ ಕುಟುಂಬ ಸದಸ್ಯರು ಈ ಹಿಂದೆ ಆತಂಕ ವ್ಯಕ್ತಪಡಿಸಿದ್ದರು.

ಎರಡನೇ ಬಾರಿ ಅನಾರೋಗ್ಯ

ಅಫ್ಜಲ್ ಅನ್ಸಾರಿ ಮಂಗಳವಾರ ಹೇಳಿಕೊಂಡಿದ್ದು, “ಜೈಲಿನಲ್ಲಿ ಆಹಾರದಲ್ಲಿ ವಿಷಕಾರಿ ವಸ್ತುವನ್ನು ನೀಡಲಾಗಿದೆ ಎಂದು ಮುಖ್ತಾರ್ ಹೇಳಿದ್ದಾರೆ. ಇದು ಎರಡನೇ ಬಾರಿಗೆ ಸಂಭವಿಸಿದೆ. ಸುಮಾರು 40 ದಿನಗಳ ಹಿಂದೆಯೂ ಅವರಿಗೆ ವಿಷ ನೀಡಲಾಯಿತು. ಮಾರ್ಚ್ 19 ರಂದು ಮಾರ್ಚ್ 22 ರಂದು, ಅವರಿಗೆ ಮತ್ತೆ ಈ (ವಿಷ) ನೀಡಲಾಗಿತ್ತು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ :Women Slapped : ಪಿಟಿಐ ಪತ್ರಕರ್ತೆಯ ಕಪಾಳಕ್ಕೆ ಬಾರಿಸಿದ ಎಎನ್​ಐ ವರದಿಗಾರ; ಇಲ್ಲಿದೆ ಆತಂಕಕಾರಿ ವಿಡಿಯೊ

ಮಾರ್ಚ್ 21 ರಂದು ಬಾರಾಬಂಕಿ ನ್ಯಾಯಾಲಯದಲ್ಲಿ ನಡೆದ ಪ್ರಕರಣದ ವರ್ಚುವಲ್ ವಿಚಾರಣೆಯ ಸಮಯದಲ್ಲಿ, ಮುಖ್ತಾರ್​ನ ವಕೀಲರು ತಮ್ಮ ಕಕ್ಷಿದಾರರಿಗೆ ಜೈಲಿನಲ್ಲಿ “ನಿಧಾನ ವಿಷ” ನೀಡಲಾಗುತ್ತಿದೆ ಎಂದು ಆರೋಪಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

1963 ರಲ್ಲಿ ಜನಿಸಿದ ಅನ್ಸಾರಿ ಅವರು ಮೌ ಕ್ಷೇತ್ರದಿಂದ ಐದು ಬಾರಿ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದರು. ಕೊನೆಯ ಬಾರಿಗೆ ೨೦೧೭ ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ.

Exit mobile version