ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಚಿನ್ನದ ಬೆಲೆಯು (Gold Rate Today) ಶನಿವಾರ (ಜೂನ್ 29) ತುಸು ಏರಿಕೆ ಕಂಡಿದೆ. ಸಿಲಿಕಾನ್ ಸಿಟಿಯಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 1 ರೂ. ಏರಿಕೆಯಾದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲೂ ಇಷ್ಟೇ ಏರಿಕೆಯಾಗಿದೆ. ಇದರಿಂದಾಗಿ ವೀಕೆಂಡ್‌ನಲ್ಲಿ ಚಿನ್ನದ ಖರೀದಿಸಲು ಮುಂದಾದವರಿಗೆ ಅಷ್ಟೇನೂ ಹೊರೆಯಾಗುವುದಿಲ್ಲ.
ಇದರೊಂದಿಗೆ ನಗರದಲ್ಲಿ ಶನಿವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 6,616 ರೂ. ಆದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು 7,217 ರೂ. ಆಗಿದೆ. ರಾಜ್ಯ ರಾಜಧಾನಿಯಲ್ಲಿ ಶುಕ್ರವಾರ (ಜೂನ್ 28) ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗಿತ್ತು. 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 40 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 43 ರೂ. ಏರಿಕೆ ಏರಿಕೆಯಾಗಿತ್ತು. ಇನ್ನು ಬೆಳ್ಳಿಯ ಬೆಲೆಯಲ್ಲಿ ತುಸು ಅಂದರೆ 0.10 ರೂ. ಇಳಿಕೆಯಾಗಿದ್ದು, ಒಂದು ಗ್ರಾಂ ಬೆಳ್ಳಿಗೆ 89.40 ರೂ. ಇದೆ.
ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು
ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.
ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.
ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.
ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.
ಇದನ್ನೂ ಓದಿ: Attica Babu: ಕದ್ದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ