Site icon Vistara News

Gold Rate Today: ಸತತ ಏರಿಕೆ ಬಳಿಕ ಇಂದು ಚಿನ್ನದ ಬೆಲೆ ಯಥಾಸ್ಥಿತಿ; ಇಷ್ಟಿದೆ ದರ

Shilpa Shetty

Gold Rate Remains Unchanged In Bengaluru Today

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ (Bengaluru) ಸತತ ಐದು ದಿನಗಳಿಂದ ಏರಿಕೆ ಕಂಡಿದ್ದ ಬಂಗಾರದ ಬೆಲೆಯಲ್ಲಿ (Gold Rate Today) ಭಾನುವಾರ (ಮಾರ್ಚ್‌ 10) ಯಾವುದೇ ಏರಿಳಿತ ಉಂಟಾಗಿಲ್ಲ. ಇದರಿಂದಾಗಿ ವೀಕೆಂಡ್‌ನಲ್ಲಿ ಚಿನ್ನ ಖರೀದಿಸುವವರು ತುಸು ನಿರಾಳರಾಗಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ 22 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 6,075 ರೂ. ಇದ್ದರೆ, 24 ಕ್ಯಾರೆಟ್‌ಗೆ 6,627 ರೂ. ಇದೆ.

22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಬೆಲೆಯು ಶನಿವಾರ (ಮಾರ್ಚ್‌ 9) ಕ್ರಮವಾಗಿ 50 ರೂ. ಹಾಗೂ 54 ರೂ. ಹೆಚ್ಚಳವಾಗಿತ್ತು. ಮಂಗಳವಾರದಿಂದ ಶನಿವಾರದವರೆಗೆ ಚಿನ್ನದ ಬೆಲೆಯು ಸತತವಾಗಿ ಏರಿಕೆ ಕಂಡಿತ್ತು. ಇದರಿಂದ ಗ್ರಾಹಕರ ಜೇಬಿಗೆ ಭಾರಿ ಹೊರೆಯಾಗಿತ್ತು.

ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ

ನಗರ22 ಕ್ಯಾರಟ್24 ಕ್ಯಾರಟ್
ದೆಹಲಿ60,90066,420
ಮುಂಬೈ60,75066,270
ಬೆಂಗಳೂರು60,75066,270
ಚೆನ್ನೈ61,50067,100

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

ಇದನ್ನೂ ಓದಿ: Ram Mandir: 25 ಕೆಜಿ ಬೆಳ್ಳಿ, 10 ಕೆಜಿ ಚಿನ್ನ; 1 ತಿಂಗಳಿನಲ್ಲಿ ರಾಮ ಮಂದಿರದಲ್ಲಿ ಸಂಗ್ರಹವಾಗಿದ್ದು ಎಷ್ಟು ಕೋಟಿ ರೂ.?

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version