ಬೆಂಗಳೂರು: ಶಿಕ್ಷಕ, ಬೋಧಕ (Teachers) ಹುದ್ದೆಗಳ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ (good news) ದೊರೆತಿದೆ. ದಿನಾಂಕ 1-1-2016ರಿಂದ 31.12 2020 ರ ವರೆಗೆ ಅನುದಾನಿತ ಶಾಲೆಗಳಲ್ಲಿ (Aided Schools) ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ ಇರುವ ಬೋಧಕ ಹುದ್ದೆಗಳನ್ನು ತುಂಬಲು ಸರ್ಕಾರ ಅಧಿಕೃತ ಆದೇಶ ನೀಡಿದೆ.
ರಾಜ್ಯದಲ್ಲಿ 1994-95ರ ಶೈಕ್ಷಣಿಕ ಅವಧಿಗೆ ಪೂರ್ವದಲ್ಲಿ ಆರಂಭಗೊಂಡು ಈಗಾಗಲೇ ವೇತನುದಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆ, ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ 2016ರಿಂದ 2020ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಅನುಮೋದನೆ ನೀಡಿದೆ.
ಈ ಮೊದಲು 1987ರಿಂದ 1994-95ರ ಅವಧಿಯಲ್ಲಿ ಆರಂಭವಾದ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಹಣಕಾಸು ಇಲಾಖೆಯು ಅನುಮತಿ ನೀಡಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆದೇಶವನ್ನು ಮಾರ್ಪಡಿಸಿರುವ ಶಿಕ್ಷಣ ಇಲಾಖೆಯು, 1994-95ರ ಶೈಕ್ಷಣಿಕ ಅವಧಿಗೆ ಪೂರ್ವದಲ್ಲಿ ಆರಂಭಗೊಂಡ ಎಲ್ಲ ಸಂಸ್ಥೆಗಳಿಗೂ ಅನುಮತಿ ನೀಡಿ ಆದೇಶ ಹೊರಡಿಸಿದೆ.
ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಾಗ ನಿಯಮಾನುಸಾರ ರೋಸ್ಟರ್ ಬಿಂದು ಮತ್ತು ಕಲ್ಯಾಣ ಕರ್ನಾಟಕದ ಮೀಸಲಾತಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. 2016-17ರಿಂದ 2023-24ನೇ ಸಾಲಿನವರೆಗೆ ವಿದ್ಯಾರ್ಥಿಗಳ ದಾಖಲಾತಿ, ಪರೀಕ್ಷಾ ಲಿತಾಂಶ ಮತ್ತು ಮೂಲಭೂತ ಸೌಕರ್ಯಗಳು ಉತ್ತಮವಾಗಿರುವುದನ್ನು ಖಚಿತಪಡಿಸಿಕೊಳ್ಳುವುದು. ಹುದ್ದೆ ಭರ್ತಿ ಮಾಡಿಕೊಳ್ಳುವ ಶಾಲಾ, ಕಾಲೇಜುಗಳು ಆರಂಭವಾದ ಅಂದಿನಿಂದ ನಿರಂತರವಾಗಿ ನಡೆಯುತ್ತಿರುವುದನ್ನು ಖಚಿತಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಕನ್ನಡಿಗರಿಗೆ ಉದ್ಯೋಗ ಕಡ್ಡಾಯಕ್ಕೆ ಕಾನೂನು ಸಮಸ್ಯೆ
ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಖಾಸಗಿ ಉದ್ಯಮಗಳಲ್ಲಿ ಮೀಸಲು (Karnataka Jobs Reservation) ಕಡ್ಡಾಯ ಮಾಡುವ ಕುರಿತು ರಾಜ್ಯ ಸರ್ಕಾರದ (Karnataka Government) ನಿಲುವಿನಿಂದಾಗಿ ಸೃಷ್ಟಿಯಾದ ಗೊಂದಲದ ನಡುವೆ, ನಾಲ್ವರು ಸಚಿವರು ಇಂದು ವಿಧಾನಸಭೆಯಲ್ಲಿ (Vidhan sabha) ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು. ಈ ವಿಚಾರದಲ್ಲಿ ಕಾನೂನಾತ್ಮಕ ಸಮಸ್ಯೆ ಇದ್ದು, ಇದರ ಬಗ್ಗೆ ಇನ್ನಷ್ಟು ಚರ್ಚೆ ನಡೆಯಬೇಕಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ.
ಖಾಸಗಿ ಕ್ಷೇತ್ರದ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಮಂಗಳವಾರ (ಜು.16) ಅನುಮೋದನೆ ನೀಡಿತ್ತು. ಇದಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈ ಸೇರಿದಂತೆ ಇನ್ನೂ ಅನೇಕ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಮಸೂದೆಗೆ ಉದ್ಯಮಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ಮುಜುಗರಕ್ಕೆ ಒಳಗಾದ ಸರಕಾರ, ವಿಧೇಯಕ ಜಾರಿಗೆ ಹಿಂದೇಟು ಹಾಕಿದೆ. ಈ ಹಿನ್ನೆಲೆಯಲ್ಲಿ ಇಂದು (ಜು.18) ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಾಲ್ವರು ಸಚಿವರು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಸಚಿವರಾದ ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡರು.
ಇದನ್ನೂ ಓದಿ: Karnataka Jobs Reservation: ಉದ್ಯೋಗ ವಿಚಾರದಲ್ಲಿ ಕನ್ನಡಿಗರೊಂದಿಗೆ ಸರ್ಕಾರ ಚೆಲ್ಲಾಟ: ವಿಜಯೇಂದ್ರ ಆಕ್ರೋಶ