ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯು ನಗರ ಸ್ಥಳೀಯ ಸಂಸ್ಥೆಗಳಾದ (Urban local bodies) ನಗರಸಭೆ, ಪುರಸಭೆ, ಪಟ್ಟಣಸಭೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ (CMC, TMC, TP) ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಗೆ 2022ರ ಸೆ.12ರಂದು ರಾಜ್ಯ ಸರ್ಕಾರವು ಅಫಿಡವಿಟ್ ಮೂಲಕ ಸುಪ್ರೀಂ ಕೋರ್ಟ್‌ಗೆ ಮೀಸಲಾತಿ ಪಟ್ಟಿಯನ್ನು ಸಲ್ಲಿಸಿತ್ತು. ಈಗ, ಅದೇ ಪಟ್ಟಿಯ ಪ್ರಕಾರ ಮೀಸಲಾತಿಯನ್ನು ಸರ್ಕಾರವು ಹಂಚಿಕೆ ಮಾಡಿದೆ.
ನಗರಸಭೆ, ಪುರಸಭೆ, ಪಟ್ಟಣಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪಟ್ಟಿಯನ್ನು ಪ್ರತ್ಯೇಕವಾಗಿ ಪ್ರಕಟಿಸಲಾಗಿದೆ. 61 ನಗರಸಭೆ, 123 ಪುರಸಭೆ, 117 ಪಟ್ಟಣ ಪಂಚಾಯಿತಿಗಳಿಗೆ ಮೀಸಲಾತಿ ಪ್ರಕಟಿಸಿದ್ದು, ಯಾವ ನಗರ ಸ್ಥಳೀಯ ಸಂಸ್ಥೆಯಲ್ಲಿ ಯಾರಿಗೆ ಮೀಸಲಾತಿ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ.
ನಗರಸಭೆ ಮೀಸಲಾತಿ ಪಟ್ಟಿ
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದ್ದು, ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಇಲ್ಲಿದೆ. pic.twitter.com/3q3r7QgK04
— Vistara News (@VistaraNews) August 5, 2024
ಪುರಸಭೆ ಮೀಸಲಾತಿ ಪಟ್ಟಿ
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದ್ದು, ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಇಲ್ಲಿದೆ.#vistaranews #Urbanlocalbodies pic.twitter.com/8Jdsz3JPGn
— Vistara News (@VistaraNews) August 5, 2024
ಪಟ್ಟಣ ಪಂಚಾಯಿತಿ ಮೀಸಲಾತಿ ಪಟ್ಟಿ
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದ್ದು, ಪಟ್ಟಣ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಇಲ್ಲಿದೆ.#vistaranews #Urbanlocalbodies pic.twitter.com/uw5G8OzWZA
— Vistara News (@VistaraNews) August 5, 2024
ಇದನ್ನೂ ಓದಿ | Bangla Protest Explainer: ಬಾಂಗ್ಲಾದಲ್ಲಿ ಹಿಂಸೆ ಭುಗಿಲೆದ್ದಿದ್ದೇಕೆ? ಶೇಖ್ ಹಸೀನಾ ಭಾರತಕ್ಕೆ ಪರಾರಿಯಾಗಿದ್ದೇಕೆ? ಮುಂದೇನು?