Gruha Lakshmi Scheme: ಮಹಿಳೆಯರಿಗೆ ಗುಡ್‌ ನ್ಯೂಸ್‌; ಇಂದಿನಿಂದಲೇ 2 ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಖಾತೆಗೆ ಜಮೆ - Vistara News

ಪ್ರಮುಖ ಸುದ್ದಿ

Gruha Lakshmi Scheme: ಮಹಿಳೆಯರಿಗೆ ಗುಡ್‌ ನ್ಯೂಸ್‌; ಇಂದಿನಿಂದಲೇ 2 ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಖಾತೆಗೆ ಜಮೆ

Gruha Lakshmi Scheme: ಇವತ್ತಿನಿಂದ ಗೃಹಲಕ್ಷ್ಮೀ ಯೋಜನೆಯ 2000 ರೂ. ಸಹಾಯಧನ ಖಾತೆಗೆ ಜಮೆಯಾಗಲಿದೆ. ತಾಂತ್ರಿಕ ಕಾರಣದಿಂದ ಎರಡು ತಿಂಗಳ ಹಣ ಜಮೆ ಆಗಿರಲಿಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

VISTARANEWS.COM


on

Gruha Lakshmi Scheme
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವರಲಕ್ಷ್ಮೀ ಹಬ್ಬಕ್ಕೆ ರಾಜ್ಯ ಮಹಿಳೆಯರಿಗೆ ಕಾಂಗ್ರೆಸ್‌ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಹಣ ಖಾತೆಗೆ ಬಾರದಿರುವುದಕ್ಕೆ ಮಹಿಳೆಯರು ಅಸಮಾಧಾನ ಹೊರಹಾಕುತ್ತಿದ್ದರು. ಆದರೆ, ಇದೀಗ ಕಳೆದ ಎರಡು ತಿಂಗಳ ಹಣವನ್ನು ಒಮ್ಮೆಲೆ ಜಮೆ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಈ ಬಗ್ಗೆ ಮಂಡ್ಯದಲ್ಲಿ ಆಯೋಜಿಸಿರುವ ಕಾಂಗ್ರೆಸ್‌ ಜನಾಂದೋಲನ ಸಮಾವೇಶದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಮಾಹಿತಿ ನೀಡಿದ್ದಾರೆ. ಇವತ್ತಿನಿಂದ ಗೃಹಲಕ್ಷ್ಮೀ ಯೋಜನೆಯ 2000 ರೂ. ಸಹಾಯಧನ ಖಾತೆಗೆ ಜಮೆಯಾಗಲಿದೆ. ತಾಂತ್ರಿಕ ಕಾರಣದಿಂದ ಎರಡು ತಿಂಗಳ ಹಣ ಜಮೆ ಆಗಿರಲಿಲ್ಲ. ಇವತ್ತಿನಿಂದ ಜೂನ್, ಜುಲೈ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ ಎಂದು ಘೋಷಿಸಿದ್ದಾರೆ.

ಕಳೆದ ಎರಡು ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿರಲಿಲ್ಲ. ಈಗ ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಬಿಡುಗಡೆ ಪ್ರಕ್ರಿಯೆ ಆರಂಭವಾಗಿದ್ದು, ನಾಳೆಯೊಳಗೆ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ ಎನ್ನಲಾಗಿದೆ. ಮೊದಲ ಹಂತದಲ್ಲಿ 533 ಕೋಟಿ ರೂ. ಪಾವತಿಯಾಗಲಿದೆ. ಮೊದಲ ಹಂತದಲ್ಲಿ ಬೆಳಗಾವಿ, ಕಲಬುರ್ಗಿ, ಬೀದರ್, ವಿಜಯಪುರ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.

ಗೃಹಲಕ್ಷ್ಮಿ ಹಣಹಣ ಬಿಡುಗಡೆ ಮಾಡದೇ ಇರುವುದಕ್ಕೆ ವಿಪಕ್ಷಗಳು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದವು. ಉಚಿತ ಭರವಸೆಗಳನ್ನು ಈಡೇರಿಸಲು ಹೋಗಿ ಸರ್ಕಾರ ದಿವಾಳಿಯಾಗಿದ್ದು, ಯೋಜನೆಗಳನ್ನು ಮುಂದುವರೆಸುವುದು ಸಾಧ್ಯವಾಗುತ್ತಿಲ್ಲ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕೈ ನಾಯಕರು, ಏನೇ ಆದರೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಸರ್ಕಾರ ಇದಕ್ಕೆ ಹಣವನ್ನು ಹೊಂದಿಸುತ್ತದೆ. ಎರಡು ತಿಂಗಳ ಹಣ ಗೃಹಲಕ್ಷ್ಮಿಯರ ಖಾತೆಗೆ ಬರಲಿದೆ ಎಂದು ಇತ್ತೀಚೆಗೆ ತಿಳಿಸಿದ್ದರು.

ಇದನ್ನೂ ಓದಿ | Sharan Prakash Patil: ಮೆಡಿಕಲ್‌ ಕಾಲೇಜುಗಳಲ್ಲಿ ವ್ಯಾಸ್ಕ್ಯುಲಾರ್‌ ವಿಭಾಗ ಪ್ರಾರಂಭ : ಸಚಿವ ಶರಣಪ್ರಕಾಶ್‌ ಪಾಟೀಲ್‌

ಈ ಬಗ್ಗೆ ಕಳೆದ ತಿಂಗಳು ಸ್ಪಷ್ಟನೆ ನೀಡಿದ್ದ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು, ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಕಂತಿನ ಹಣ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್‌ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ ಎಂದು ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವಿದೇಶ

Bangladesh Unrest: ಬಾಂಗ್ಲಾ ಸಂಸತ್‌ ವಿಸರ್ಜನೆ; ಮಾಜಿ ಪ್ರಧಾನಿ ಖಲೀದಾ ಜಿಯಾ ಜೈಲಿನಿಂದ ರಿಲೀಸ್‌

Bangladesh Unrest: ಶೇಖ್‌ ಹಸೀನಾ ಅವರ ಬದ್ಧ ವಿರೋಧಿ ಜೈಲಿನಲ್ಲಿದ್ದ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರನ್ನೂ ಇಂದು ಬಿಡುಗಡೆಗೊಳಿಸಲಾಗಿದೆ. ಜಿಯಾರನ್ನು 2018ರಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ಅರೆಸ್ಟ್‌ ಮಾಡಲಾಗಿತ್ತು. ಶಹಾಬುದ್ದೀನ್ ನೇತೃತ್ವದ ಸಭೆಯಲ್ಲಿ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ) ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಅವರನ್ನು ತಕ್ಷಣವೇ ಬಿಡುಗಡೆ ಮಾಡಲು ಸರ್ವಾನುಮತದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅಧ್ಯಕ್ಷರ ಪತ್ರಿಕಾ ತಂಡವು ಹೇಳಿಕೆಯಲ್ಲಿ ತಿಳಿಸಿದೆ.

VISTARANEWS.COM


on

Bangladesh unrest
Koo

ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಲಿನ ಸರ್ಕಾರದ ವಿರುದ್ಧ ನಡೆಯುತ್ತಿದ್ದ (Bangladesh Unrest) ಪ್ರತಿಭಟನೆ ಪ್ರತಿಭಟನೆ ಸೇನಾ ದಂಗೆಯಾಗಿ ಮಾರ್ಪಟ್ಟಿದೆ. ಇದರ ಬೆನ್ನಲ್ಲೇ ಶೇಖ್ ಹಸೀನಾ (Sheikh Hasina) ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶವನ್ನು ತೊರೆದಿದ್ದರು. ಇದೀಗ ಬಾಂಗ್ಲಾದೇಶ ರಾಷ್ಟ್ರಪತಿ ಮೊಹಮ್ಮದ್‌ ಶಹಬುದ್ದೀನ್‌ ಇಂದು ಸಂಸತ್ತನ್ನು ವಿಸರ್ಜಿಸಿದ್ದಾರೆ.

ಮೂರು ಸೇನೆಯ ಮುಖ್ಯಸ್ಥರು, ವಿವಿಧ ಪಕ್ಷಗಳ ಮುಖಂಡರು, ನಾಗರಿಕ ಸಮಾಜದ ಮುಖಂಡರು ಹಾಗೂ ತಾರತಮ್ಯ ವಿರೋಧಿ ವಿದ್ಯಾರ್ಥಿಗಳ ಸಂಘಟನೆ ಮುಖಂಡರ ಜೊತೆ ಚರ್ಚೆ ನಡೆಸಿದ ಬಳಿಕ ರಾಷ್ಟ್ರಪತಿಯವರು ಈ ನಿರ್ಧಾರವನ್ನು ಘೋಷಿಸಿದ್ದಾರೆ. ಈ ಬಗ್ಗೆ ಅಧಿಕೃತ ಪ್ರಕಟಣೆಯನ್ನೂ ಹೊರಹಾಕಿದ್ದಾರೆ.

ಖಲೀದಾ ಜಿಯಾ ರಿಲೀಸ್‌

ಮತ್ತೊಂದೆಡೆ ಶೇಖ್‌ ಹಸೀನಾ ಅವರ ಬದ್ಧ ವಿರೋಧಿ ಜೈಲಿನಲ್ಲಿದ್ದ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರನ್ನೂ ಇಂದು ಬಿಡುಗಡೆಗೊಳಿಸಲಾಗಿದೆ. ಜಿಯಾರನ್ನು 2018ರಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ಅರೆಸ್ಟ್‌ ಮಾಡಲಾಗಿತ್ತು. ಶಹಾಬುದ್ದೀನ್ ನೇತೃತ್ವದ ಸಭೆಯಲ್ಲಿ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ) ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಅವರನ್ನು ತಕ್ಷಣವೇ ಬಿಡುಗಡೆ ಮಾಡಲು ಸರ್ವಾನುಮತದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅಧ್ಯಕ್ಷರ ಪತ್ರಿಕಾ ತಂಡವು ಹೇಳಿಕೆಯಲ್ಲಿ ತಿಳಿಸಿದೆ. ಸಭೆಯಲ್ಲಿ ಸೇನಾ ಮುಖ್ಯಸ್ಥ ಜನರಲ್ ವಕಾರ್ ಉಜ್ ಜಮಾನ್, ನೌಕಾಪಡೆ ಮತ್ತು ವಾಯುಪಡೆ ಮುಖ್ಯಸ್ಥರು ಮತ್ತು ಬಿಎನ್‌ಪಿ, ಜಮಾತ್-ಎ-ಇಸ್ಲಾಮಿ ಪಾರ್ಟಿ ಸೇರಿದಂತೆ ಹಲವು ವಿರೋಧ ಪಕ್ಷಗಳ ಉನ್ನತ ನಾಯಕರು ಉಪಸ್ಥಿತರಿದ್ದರು.

ಇನ್ನು ದಂಗೆ ಪ್ರಾರಂಭವಾದಗಿನಿಂದ ಆ.5ರವರೆಗೆ ಅರೆಸ್ಟ್‌ ಮಾಡಿರುವ ಜನರನ್ನು ಬಿಡುಗಡೆಗೊಳಿಸಲಾಗಿದೆ. ಮತ್ತೊಂದೆಡೆ ಜಮಾತ್‌ ಎ ಇಸ್ಲಾಮಿ ಮುಖ್ಯಸ್ಥ ಡಾ. ಶಾಫಿಖರ್‌ ರೆಹ್ಮಾನ್‌ ಪತ್ರಿಕಾಗೋಷ್ಠಿ ಕರೆದು ಬಾಂಗ್ಲಾದ ಪ್ರಸ್ತುತ ಸ್ಥಿತಿಗತಿ ಬಗ್ಗೆ ವಿವರಿಸಿದ್ದಾರೆ.

ಶೇಖ್ ಹಸೀನಾ (Sheikh Hasina) ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶವನ್ನು ತೊರೆದಿದ್ದರು. ಹಸೀನಾ ಬಾಂಗ್ಲಾದೇಶದಿಂದ ಮಿಲಿಟರಿ ವಿಮಾನದಲ್ಲಿ ಪಲಾಯನ ಮಾಡಿದ್ದಾರೆ ಎಂಬ ಸುದ್ದಿ ಹರಡುತ್ತಿದ್ದಂತೆ, ಪ್ರತಿಭಟನಾಕಾರರು ಮಾಜಿ ಪ್ರಧಾನಿಯ ನಿವಾಸಕ್ಕೆ ನುಗ್ಗಿ ಮಾಜಿ ಅವರ ಬ್ರಾಗಳನ್ನೂ ಬಿಡಿದೇ ದೋಚಿದ್ದಾರೆ. ಇದರ ವಿಡಿಯೊ ಹಾಗೂ ಚಿತ್ರಗಳು ವೈರಲ್​ ಆಗಿವೆ. ಅಲ್ಲಿನ ಪ್ರತಿಭಟನಾಕಾರರ ಮನಸ್ಥಿತಿಯ ಬಗ್ಗೆ ಜಾಗತಿಕವಾಗಿ ಟೀಕೆಗಳು ಕೇಳಿ ಬಂದಿವೆ.

ಪ್ರತಿಭಟನಾಕಾರರು ಸೀರೆಗಳು ಸೇರಿದಂತೆ ತಮ್ಮಿಂದ ಸಾಧ್ಯವಾದದ್ದನ್ನು ನಿರಂತರವಾಗಿ ಲೂಟಿ ಮಾಡಿದ್ದರು. ವೈರಲ್ ವೀಡಿಯೊಗಳು ಮತ್ತು ಚಿತ್ರಗಳು ಪ್ರತಿಭಟನಾಕಾರರೊಬ್ಬರು ನಾಚಿಕೆಯಿಲ್ಲದೆ ಕೈಯಲ್ಲಿ ಬ್ರಾಗಳನ್ನು ಹಿಡಿದುಕೊಂಡು ಮಾಜಿ ಪ್ರಧಾನಿಯ ಅಧಿಕೃತ ನಿವಾಸದಿಂದ ಲೂಟಿ ಮಾಡಿರುವುದನ್ನು ತೋರಿಸಿದೆ. ಇದು ಪ್ರತಿಭಟನೆಯಲ್ಲ ಕೇವಲ ದೊಂಬಿ ಎಂಬುದನ್ನು ಸಾಬೀತು ಮಾಡಿದೆ.

ಇದನ್ನೂ ಓದಿ: Bangladesh Protest: ಬಾಂಗ್ಲಾದೇಶದಲ್ಲಿನ ಹಿಂಸಾಚಾರದ ಹಿಂದೆ ಬೇರೆ ದೇಶಗಳ ಕೈವಾಡವಿದೆಯೇ?; ರಾಹುಲ್‌ ಗಾಂಧಿ ಪ್ರಶ್ನೆ

Continue Reading

ಉದ್ಯೋಗ

SSC Recruitment 2024: ಗುಡ್‌ನ್ಯೂಸ್‌; 2,006 ಸ್ಟೆನೋಗ್ರಾಫರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

SSC Recruitment 2024: ಭಾರತ ಸರ್ಕಾರದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ಖಾಲಿ ಇರುವ ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಬರೋಬ್ಬರಿ 2,006 ಹುದ್ದೆ ಖಾಲಿ ಇದ್ದು, 12ನೇ ತರಗತಿ (ದ್ವಿತೀಯ ಪಿಯುಸಿ) ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್‌ 17.

VISTARANEWS.COM


on

SSC Recruitment 2024
Koo

ನವದೆಹಲಿ: ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತ ಸರ್ಕಾರದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) ಖಾಲಿ ಇರುವ ಸ್ಟೆನೋಗ್ರಾಫರ್ (Stenographer) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SSC Recruitment 2024). ದೇಶಾದ್ಯಂತ ಬರೋಬ್ಬರಿ 2,006 ಹುದ್ದೆ ಖಾಲಿ ಇದ್ದು, 12ನೇ ತರಗತಿ (ದ್ವಿತೀಯ ಪಿಯುಸಿ) ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್‌ 17 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆ ಇದಾಗಿದ್ದು, ಆಯ್ಕೆಯಾದವರನ್ನು ಸ್ಟಾಫ್‌ ಸೆಲೆಕ್ಷನ್ ಕಮಿಷನ್ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು, ಸಚಿವಾಲಯಗಳು, ಕಚೇರಿಗಳಿಗೆ ನೇಮಕ ಮಾಡಿಕೊಳ್ಳಲಿದೆ. ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಎಸ್‌ಎಸ್‌ಸಿ ಸ್ಟೆನೋಗ್ರಾಫರ್‌ ಗ್ರೂಪ್‌ ಸಿ ಮತ್ತು ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು.

ವಯೋಮಿತಿ

ಸ್ಟೆನೋಗ್ರಾಫರ್ ಗ್ರೇಡ್ ಸಿ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯಸ್ಸು 18-30 ವರ್ಷದೊಳಗಿರಬೇಕು ಮತ್ತು ಸ್ಟೆನೋಗ್ರಾಫರ್ ಗ್ರೇಡ್ ಸಿ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯಸ್ಸು 18-27 ವರ್ಷದೊಳಗಿರಬೇಕು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಡಿ (ಎಸ್‌ಸಿ / ಎಸ್‌ಟಿ ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಸಾಮಾನ್ಯ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ಆನ್‌ಲೈನ್‌ ಮೂಲಕ 100 ರೂ. ಪಾವತಿಸಬೇಕು. ಎಸ್‌ಸಿ / ಎಸ್‌ಟಿ, ಮಹಿಳಾ, ಮಾಜಿ ಸೈನಿಕ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕಂಪ್ಯೂಟರ್ ಆಧಾರಿತ ಆನ್‌ಲೈನ್‌ ಪರೀಕ್ಷೆ ಜತೆಗೆ ಸ್ಟೆನೋಗ್ರಾಫಿ ಸ್ಕಿಲ್‌ ಟೆಸ್ಟ್‌ ಇರುತ್ತದೆ. ಈ ಎರಡು ಪರೀಕ್ಷೆಗಳಲ್ಲಿ ಅರ್ಹತೆ ಪಡೆದವರ ಮೂಲ ದಾಖಲೆಗಳ ಪರಿಶೀಲಿಸಲಾಗುತ್ತದೆ. ಕೊನೆಗೆ ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದವರಿಗೆ 30,000 ರೂ. – 39, 995 ರೂ. ಮಾಸಿಕ ವೇತನ ದೊರೆಯಲಿದೆ.

SSC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://ssc.gov.in/login)
  • ವೈಯಕ್ತಿಕ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: RRB Recruitment 2024: ರೈಲ್ವೇ ಇಲಾಖೆಯಲ್ಲಿದೆ ಬರೋಬ್ಬರಿ 7,951 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Continue Reading

ಕ್ರೀಡೆ

Paris Olympics: ಸೆಮಿ ಫೈನಲ್​ ಪ್ರವೇಶಿಸಿದ ವಿನೇಶ್ ಫೋಗಟ್

Paris Olympics: ಪ್ಯಾರಿರ್ಸ್​ ಒಲಿಂಪಿಕ್ಸ್​ ಆರಂಭಕ್ಕೇ ಕೆಲವೇ ದಿನ ಬಾಕಿ ಇರುವಾಗ ಮ್ಯಾಡ್ರಿಡ್​ನಲ್ಲಿ ನಡೆದಿದ್ದ ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್(Grand Prix) ಕುಸ್ತಿ ಟೂರ್ನಿಯಲ್ಲಿ ವಿನೇಶ್ ಫೋಗಟ್ ಚಿನ್ನದ ಪದಕ ಗೆದ್ದು ಬೀಗಿದ್ದರು.

VISTARANEWS.COM


on

Paris Olympics
Koo

ಪ್ಯಾರಿಸ್​: ಭಾರತೀಯ ಕುಸ್ತಿ ಒಕ್ಕೂಟದ ವಿರುದ್ಧ ತೊಡೆತಟ್ಟಿ ದೇಶದ ಪರಮೋಚ್ಚ ಕ್ರೀಡಾ ಪ್ರಶಸ್ತಿಯಾದ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದ(Kartavya Path) ಪಾದಚಾರಿ ಮಾರ್ಗದಲ್ಲಿಟ್ಟು ತೊರೆದಿದ್ದ ಕುಸ್ತಿಪಟು ವಿನೇಶ್ ಫೋಗಟ್(Vinesh Phogat), ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ 50 ಕೆಜಿ ಮಹಿಳಾ ಸಿಂಗಲ್ಸ್​ ವಿಭಾಗದಲ್ಲಿ ಸೆಮಿಫೈನಲ್​ ಪ್ರವೇಶಿಸಿಸಿದ್ದಾರೆ. ಈ ಮೂಲಕ ಪದಕ ಭರವಸೆಯೊಂದನ್ನು ಮೂಡಿಸಿದ್ದಾರೆ.

ಮಂಗಳವಾರ ನಡೆದ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಮೂರು ಬಾರಿಯ ಕಾಮನ್​ವೆಲ್ತ್​ ಚಿನ್ನದ ಪದಕ ವಿಜೇತೆ ಉಕ್ರೇನ್​ನ ಒಕ್ಸಾನಾ ಲಿವಾಚ್ ವಿರುದ್ಧ 7-5 ಅಂತರದ ರೋಚಕ ಗೆಲುವು ಸಾಧಿಸಿ ಸೆಮಿ ಫೈನಲ್​ ಪ್ರವೇಶಿಸಿದರು. ಇದಕ್ಕೂ ಮುನ್ನ ನಡೆದಿದ್ದ ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ವಿನೇಶ್ ಟೋಕಿಯೊ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ ಜಪಾನ್‌ನ ಯುಯಿ ಸುಸಾಕಿ ಅವರನ್ನು 3-2 ಅಂತರದಿಂದ ಮಣಿಸಿ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ್ದರು. ಈ ಗೆಲುವು ಕಂಡಾಗಲೇ ವಿನೇಶ್​ ಈ ಬಾರಿ ಪದಕ ಗೆಲ್ಲುವುದು ಖಚಿತ ಎಂದು ನಿರ್ಧರಿಸಲಾಗಿತ್ತು. ಇದೀಗ ಸೆಮಿ ಹಂತಕ್ಕೇರಿರುವ ಅವರು ಪದಕವೊಂದನ್ನು ಖಾತ್ರಿ ಪಡಿಸಿದ್ದಾರೆ.ಪ್ಯಾರಿರ್ಸ್​ ಒಲಿಂಪಿಕ್ಸ್​ ಆರಂಭಕ್ಕೇ ಕೆಲವೇ ದಿನ ಬಾಕಿ ಇರುವಾಗ ಮ್ಯಾಡ್ರಿಡ್​ನಲ್ಲಿ ನಡೆದಿದ್ದ ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್(Grand Prix) ಕುಸ್ತಿ ಟೂರ್ನಿಯಲ್ಲಿ ಚಿನ್ನದ ಪದಕ ಗೆದ್ದು ಬೀಗಿದ್ದರು.

ಆರು ಬಾರಿ ಬಿಜೆಪಿ ಸಂಸದರಾಗಿದ್ದ ಬ್ರಿಜ್ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಾಕ್ಷಿ ಮಲಿಕ್ ಸೇರಿದಂತೆ ದೇಶದ ಉನ್ನತ ಕುಸ್ತಿಪಟುಗಳು ಆರೋಪಿಸಿದ ನಂತರ ಅವರು ರಾಜೀನಾಮೆ ನೀಡಬೇಕಾಯಿತು. ಒಲಿಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಸೇರಿದಂತೆ ಅಗ್ರ ಕುಸ್ತಿಪಟುಗಳು ಕಳೆದ ವರ್ಷ ಜನವರಿಯಲ್ಲಿ ಬಿಜೆಪಿ ಸಂಸದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬೀದಿಗಿಳಿದಿದ್ದರು. ಈ ಪ್ರತಿಭಟನೆಯ ಪ್ರಮುಖ ರುವಾರಿ ಕೂಡ ವಿನೇಶ್​ ಅವರೇ ಆಗಿದ್ದರು.

Continue Reading

ಕ್ರೀಡೆ

Paris Olympics: ಫೈನಲ್​ ಪ್ರವೇಶಿಸಿದ ನೀರಜ್​ ಚೋಪ್ರಾ; ಕುಸ್ತಿಯಲ್ಲಿ ವಿನೇಶ್ ಕ್ವಾರ್ಟರ್​ ಫೈನಲ್​ಗೆ

Paris Olympics: ‘ಬಿ’ ವಿಭಾಗದ ಅರ್ಹತಾ ಸುತ್ತಿನಲ್ಲಿ ಕಣಕ್ಕಿಳಿದ ನೀರಜ್​ ತಮ್ಮ ಮೊದಲ ಎಸೆತವನ್ನೇ 89.34 ಮೀ. ದೂರ ಎಸೆದು ನೇರವಾಗಿ ಫೈನಲ್​ ಪ್ರವೇಶಿಸಿದರು. ಇವರ ಜತೆ ಪಾಕಿಸ್ತಾನದ ಅರ್ಷದ್ ನದೀಮ್ 86.59 ಮೀ. ಸಾಧನೆಯೊಂದಿಗೆ ಫೈನಲ್​ ಟಿಕೆಟ್​ ಪಡೆದರು.

VISTARANEWS.COM


on

Paris Olympics
Koo

ಪ್ಯಾರಿಸ್​: ಟೋಕಿಯೊ ಒಲಿಂಪಿಕ್ಸ್​ ಚಿನ್ನದ ಪದಕ ವಿಜೇತ ನೀರಜ್​ ಚೋಪ್ರಾ(Neeraj Chopra) ಅವರು ಪ್ಯಾರಿಸ್​ ಒಲಿಂಪಿಕ್ಸ್​(Paris Olympics) ಟೂರ್ನಿಯಲ್ಲಿ ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ. ಇಂದು(ಮಂಗಳವಾರ) ನಡೆದ ಜಾವೆಲಿನ್​ ಅರ್ಹತಾ ಸುತ್ತಿನ ಪಂದ್ಯದಲ್ಲಿ 89.34 ಮೀ. ದೂರ ಜಾವೆಲಿನ್​ ಎಸೆದು ಫೈನಲ್​ ಪ್ರವೇಶಿಸಿದ್ದಾರೆ. ಆದರೆ ಭಾರತದ ಮತ್ತೋರ್ವ ಜಾವೆಲಿನ್‌ ಎಸೆತಗಾರ ಕಿಶೋರ್‌ ಜೇನಾ 9ನೇ ಸ್ಥಾನಿಯಾಗಿ ನಿರಾಸೆ ಮೂಡಿಸಿದರು.

‘ಬಿ’ ವಿಭಾಗದ ಅರ್ಹತಾ ಸುತ್ತಿನಲ್ಲಿ ಕಣಕ್ಕಿಳಿದ ನೀರಜ್​ ತಮ್ಮ ಮೊದಲ ಎಸೆತವನ್ನೇ 89.34 ಮೀ. ದೂರ ಎಸೆದು ನೇರವಾಗಿ ಫೈನಲ್​ ಪ್ರವೇಶಿಸಿದರು. ಇವರ ಜತೆ ಪಾಕಿಸ್ತಾನದ ಅರ್ಷದ್ ನದೀಮ್ 86.59 ಮೀ. ಸಾಧನೆಯೊಂದಿಗೆ ಫೈನಲ್​ ಟಿಕೆಟ್​ ಪಡೆದರು.

89.34 ಮೀ. ದೂರ ಜಾವೆಲಿನ್​ ಎಸೆದದ್ದು ನೀರಜ್​ ಅವರ 2ನೇ ಶ್ರೇಷ್ಠ ಸಾಧನೆಯಾಗಿದೆ. ಅವರ ಶ್ರೇಷ್ಠ ನಿರ್ವಹಣೆ 89.94 ಮೀ. ದೂರ ಎಸೆದಿರುವುದು. ಈ ಎಸೆತವನ್ನು 2022ರ ಸ್ಟಾಕ್​ಹೋಮ್​ ಡೈಮಂಡ್​ ಲೀಗ್​ನಲ್ಲಿ ಎಸೆದಿದ್ದರು. ಟೋಕಿಯೊದಲ್ಲಿ 87.58 ಮೀ. ಸಾಧನೆಯೊಂದಿಗೆ ಚಿನ್ನ ಗೆದ್ದಿದ್ದರು. ಆಗಸ್ಟ್​ 8ರಂದು ನಡೆಯುವ ಫೈನಲ್​ ಪಂದ್ಯದಲ್ಲಿ ನೀರಜ್​ ಚೋಪ್ರಾ ಚಿನ್ನದ ಪದಕ ಇರಾದೆಯೊಂದಿಗೆ ಕಣಕ್ಕಿಳಿಯಲಿದ್ದಾರೆ. ‘ಎ’ ವಿಭಾಗದಲ್ಲಿ ಜರ್ಮನಿಯ ಜೂಲಿಯನ್ ವೆಬರ್ 87.76 ಮೀ. ದೂರ ಎಸೆದು ಮೊದಲ ಸ್ಥಾನದೊಂದಿಗೆ ಫೈನಲ್​ ಪ್ರವೇಶಿಸಿದ್ದರು.

ಕಾಶಿನಾಥ್ ನಾಯ್ಕ್ ಅವರು ನೀರಜ್ ಪ್ಯಾರಿಸ್​ನಲ್ಲಿ ನಡೆಯುವ ಒಲಿಂಪಿಕ್ಸ್​ನಲ್ಲಿಯೂ(neeraj chopra paris olympics) ಚಿನ್ನದ ಪದಕ ಗೆಲ್ಲಲಿದ್ದಾರೆ ಎಂದು ಆತ್ಮವಿಶ್ವಾಸದಿಂದ ಈ ಮಾತನ್ನು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಕಾಶಿನಾಥ್, “ನಾನು 2015 ರಿಂದ ನೀರಜ್​ ಜತೆ ಕೆಲಸ ಮಾಡುತ್ತಿದ್ದೇನೆ. ಅವರ ಛಲವನ್ನು ಮೆಚ್ಚಲೇ ಬೇಕು.​ ಸಾಧಿಸುವ ಛಲವೇ ಅವರನ್ನು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ಅತ್ಯಂತ ಶಿಸ್ತಿನ ಕ್ರೀಡಾಪಟು ಕೂಡ ಆಗಿದ್ದಾರೆ. 90 ಮೀ. ದೂರ ಜಾವೆಲಿನ್​ ಎಸೆಯುವದು ಪ್ರಮುಖ ಗುರಿ ಎಂದು ನೀರಜ್​ ಈಗಾಗಲೇ ಹೇಳಿದ್ದಾರೆ. ಹೇಳಿದಂತೆ ಅವರು ಈ ದೂರವನ್ನು ಕ್ರಮಿಸುವ ವಿಶ್ವಾಸ ನನ್ನಲ್ಲಿದೆ” ಎಂದು ಹೇಳಿದ್ದಾರೆ.

ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ವಿನೇಶ್​


ಭಾರತ ಮಹಿಳಾ ಕುಸ್ತಿಪಟು ವಿನೇಶ್​ ಪೋಗಟ್​ 50 ಕೆಜಿ ವಿಭಾಗದಲ್ಲಿ ಇಂದು ನಡೆದ ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಟೋಕಿಯೊ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ ಜಪಾನ್‌ನ ಯುಯಿ ಸುಸಾಕಿ ಅವರನ್ನು 3-2 ಅಂತರದಿಂದ ಮಣಿಸಿ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ್ದಾರೆ. ಇಂದೇ ನಡೆಯುವ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ವಿನೇಶ್​ ಉಕ್ರೇನ್​ನ ಒಕ್ಸಾನಾ ಲಿವಾಚ್ ವಿರುದ್ಧ ಸೆಣಸಾಡಲಿದ್ದಾರೆ.

Continue Reading
Advertisement
Karnataka Weather Forecast
ಮಳೆ21 seconds ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

Bangladesh unrest
ವಿದೇಶ3 mins ago

Bangladesh Unrest: ಬಾಂಗ್ಲಾ ಸಂಸತ್‌ ವಿಸರ್ಜನೆ; ಮಾಜಿ ಪ್ರಧಾನಿ ಖಲೀದಾ ಜಿಯಾ ಜೈಲಿನಿಂದ ರಿಲೀಸ್‌

SSC Recruitment 2024
ಉದ್ಯೋಗ24 mins ago

SSC Recruitment 2024: ಗುಡ್‌ನ್ಯೂಸ್‌; 2,006 ಸ್ಟೆನೋಗ್ರಾಫರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

Paris Olympics
ಕ್ರೀಡೆ35 mins ago

Paris Olympics: ಸೆಮಿ ಫೈನಲ್​ ಪ್ರವೇಶಿಸಿದ ವಿನೇಶ್ ಫೋಗಟ್

Money Guide
ಮನಿ-ಗೈಡ್48 mins ago

Money Guide: ಆನ್‌ಲೈನ್‌ ಶಾಪಿಂಗ್‌ ವೇಳೆ ಮೋಸ ಹೋಗದಿರಲು ಈ ಟಿಪ್ಸ್‌ ಪಾಲೋ ಮಾಡಿ

Lalbagh Flower Show
ಕರ್ನಾಟಕ52 mins ago

Lalbagh Flower Show: ಆ.8ರಿಂದ 19ವರೆಗೆ ಲಾಲ್‌ಬಾಗ್‌ ಫ್ಲವರ್‌ ಶೋ; ಅನಾವರಣವಾಗಲಿದೆ ಭೀಮ ಸಂದೇಶ

Physical Abuse
ಬೆಂಗಳೂರು55 mins ago

Physical Abuse : ಬೆಂಗಳೂರಿನಲ್ಲಿ ಶಾಲಾ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗಿದ ಯುವಕ

Paris Olympics
ಕ್ರೀಡೆ1 hour ago

Paris Olympics: ಫೈನಲ್​ ಪ್ರವೇಶಿಸಿದ ನೀರಜ್​ ಚೋಪ್ರಾ; ಕುಸ್ತಿಯಲ್ಲಿ ವಿನೇಶ್ ಕ್ವಾರ್ಟರ್​ ಫೈನಲ್​ಗೆ

LK advani
ದೇಶ1 hour ago

L K Advani: ಬಿಜೆಪಿ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು

women PG bangalore
ಪ್ರಮುಖ ಸುದ್ದಿ2 hours ago

Women PG: ಬೆಂಗಳೂರಿನಲ್ಲಿ ಮಹಿಳಾ ಪಿಜಿಗಳಿಗೆ ಇನ್ನು ಮುಂದೆ ಕಟ್ಟುನಿಟ್ಟಿನ ರೂಲ್ಸ್! ಫಾಲೋ ಮಾಡದಿದ್ದರೆ ಕೇಸ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Karnataka Weather Forecast
ಮಳೆ23 seconds ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ7 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 week ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

ಟ್ರೆಂಡಿಂಗ್‌