Site icon Vistara News

Gyanvapi Case: ಜ್ಞಾನವಾಪಿಯ ನೆಲಮಾಳಿಗೆಯಲ್ಲಿ ಪ್ರಾರ್ಥನೆ: ಇಂದು ಅಲಹಾಬಾದ್‌ ಹೈಕೋರ್ಟ್‌ ತೀರ್ಪು

Gyanvapi Case, What is Vyas ji Ka Tehkhana where hindus allowed to worship?

ಲಖನೌ: ಜ್ಞಾನವಾಪಿ ಸಂಕೀರ್ಣದಲ್ಲಿರುವ (Gyanvapi masjid) ವ್ಯಾಸ ತೆಹ್ಖಾನಾದಲ್ಲಿ (Vyas Tehkhana) ಹಿಂದೂಗಳಿಗೆ ಪ್ರಾರ್ಥನೆಗೆ (Hindu prayer) ಅವಕಾಶ ನೀಡುವ ವಾರಣಾಸಿ ಜಿಲ್ಲಾ ನ್ಯಾಯಾಲಯದ (Varanasi Court) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ಕುರಿತು ಅಲಹಾಬಾದ್ ಹೈಕೋರ್ಟ್ (Allahabad High court) ಸೋಮವಾರ ತನ್ನ ತೀರ್ಪು (Gyanvapi Case) ಪ್ರಕಟಿಸಲಿದೆ.

31 ವರ್ಷಗಳ ನಂತರ ಇದೇ ತಿಂಗಳ ಆರಂಭದಲ್ಲಿ ಜ್ಞಾನವಾಪಿ ಮಸೀದಿ ಆವರಣದಲ್ಲಿ ಪ್ರಥಮ ಬಾರಿಗೆ ಪೂಜೆ ನೆರವೇರಿಸಲಾಗಿತ್ತು. ಮಸೀದಿಯು ನಾಲ್ಕು ʼತೆಹ್ಖಾನಾಗಳು’ ಅಥವಾ ನೆಲಮಾಳಿಗೆಗಳನ್ನು ಹೊಂದಿದೆ.

ವಾರಣಾಸಿ ಜಿಲ್ಲಾ ನ್ಯಾಯಾಧೀಶರು ಜನವರಿ 31ರ ಆದೇಶದಲ್ಲಿ ಜ್ಞಾನವಾಪಿ ಮಸೀದಿಯ ದಕ್ಷಿಣ ಭಾಗದಲ್ಲಿರುವ ನೆಲಮಾಳಿಗೆಯಲ್ಲಿ ಪೂಜೆಗೆ ಅನುಮತಿ ನೀಡಿದ್ದರು. ನಂತರ, ಫಿರ್ಯಾದಿ ಶೈಲೇಂದ್ರ ಕುಮಾರ್ ಪಾಠಕ್ ವ್ಯಾಸ್ ಮತ್ತು ಶ್ರೀಗಳು ಸೂಚಿಸಿದ ಅರ್ಚಕರಿಂದ ಏಳು ದಿನಗಳಲ್ಲಿ ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ ಮೂಲಕ ವಿಗ್ರಹಗಳ ಪೂಜೆಗೆ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.

ಜ್ಞಾನವಾಪಿ ಮಸೀದಿಯನ್ನು ನಿರ್ವಹಿಸುವ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯ ವಿರುದ್ಧ ಶೈಲೇಂದ್ರ ಕುಮಾರ್ ಪಾಠಕ್ ವ್ಯಾಸ್ ಅವರು ಸಲ್ಲಿಸಿದ ಅರ್ಜಿಯನ್ನು ಅನುಸರಿಸಿ ನ್ಯಾಯಾಲಯದ ಆದೇಶ ನೀಡಿತ್ತು.

ಮೊಕದ್ದಮೆಯ ಪ್ರಕಾರ, ಅರ್ಚಕ ಸೋಮನಾಥ ವ್ಯಾಸ್ ಅವರು 1993ರವರೆಗೆ ಅಧಿಕಾರಿಗಳು ನೆಲಮಾಳಿಗೆಯನ್ನು ಮುಚ್ಚುವವರೆಗೂ ಅಲ್ಲಿ ಪ್ರಾರ್ಥನೆಗಳನ್ನು ಮಾಡುತ್ತಿದ್ದರು. ಶೈಲೇಂದ್ರ ಕುಮಾರ್ ಪಾಠಕ್ ಅವರು ಸೋಮನಾಥ ವ್ಯಾಸ್ ಅವರ ಮಗಳ ಮಗ.

ವಾರಣಾಸಿ ನ್ಯಾಯಾಲಯದ ಜನವರಿ 31ರ ಆದೇಶವನ್ನು ತಡೆಹಿಡಿಯಲು ಕೋರಿ ಮುಸ್ಲಿಮರು ಸಲ್ಲಿಸಿದ್ದ ಮನವಿಯನ್ನು ಫೆಬ್ರುವರಿ 2ರಂದು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿತ್ತು. ಹಿಂದೂ ಕಡೆಯವರು ಜ್ಞಾನವಾಪಿ ಮಸೀದಿಯ ದಕ್ಷಿಣದ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿತ್ತು. ಜನವರಿ 31ರ ಆದೇಶವನ್ನು ಅಂಗೀಕರಿಸಿದ ಪರಿಣಾಮವಾಗಿ ಜನವರಿ 17ರ ಆದೇಶವನ್ನು ಪ್ರಶ್ನಿಸಲು ಮಸೀದಿ ಸಮಿತಿಯು ತನ್ನ ಮನವಿಯಲ್ಲಿ ತಿದ್ದುಪಡಿ ಮಾಡಲು ಫೆಬ್ರವರಿ 6ರವರೆಗೆ ಕಾಲಾವಕಾಶವನ್ನು ಹೈಕೋರ್ಟ್ ನೀಡಿತ್ತು.

ಫೆಬ್ರುವರಿ 12ರಂದು ನ್ಯಾಯಾಲಯವು ವಾರಣಾಸಿ ಜಿಲ್ಲಾ ನ್ಯಾಯಾಲಯದ, ಮಸೀದಿಯ ದಕ್ಷಿಣದ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಮಾಡಲು ಅವಕಾಶ ನೀಡಿದ ಜನವರಿ 31ರ ಆದೇಶವನ್ನು ಪ್ರಶ್ನಿಸಿ ಅಂಜುಮನ್ ಇಂತಜಾಮಿಯಾ ಮಸೀದಿ ಸಮಿತಿಯು ಸಲ್ಲಿಸಿದ ಮೇಲ್ಮನವಿಯನ್ನು ವಿಚಾರಣೆ ನಡೆಸಿತ್ತು.

ಇದನ್ನೂ ಓದಿ: Gyanvapi Case: ಜ್ಞಾನವಾಪಿ ಮಸೀದಿಯಲ್ಲಿ ಯೋಗಿ ಆದಿತ್ಯನಾಥ್‌ ಪೂಜೆ; ವಿಡಿಯೊ ಇಲ್ಲಿದೆ

Exit mobile version