1. ರಾಜ್ಯಾದ್ಯಂತ ಹರಡಿದ ಹನುಮ ಧ್ವಜದ ಕಿಚ್ಚು; ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಸರಿ ಪಡೆ ಆಕ್ರೋಶ
ಬೆಂಗಳೂರು: ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ದಂಗಲ್ ಕಿಚ್ಚು ರಾಜ್ಯಾದ್ಯಂತ ವ್ಯಾಪಿಸಿದ್ದು, ಹಲವು ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಹಾಗೂ ಹಿಂದು ಸಂಘಟನೆಗಳ ಕಾರ್ಯಕರ್ತರು ರಸ್ತೆಗಳಿದು ಸೋಮವಾರ ಪ್ರತಿಭಟನೆ ನಡೆಸಿದ್ದಾರೆ. ಕೆರಗೋಡು ಗ್ರಾಮದಲ್ಲಿ ಪೊಲೀಸರು ಹನುಮ ಧ್ವಜ ತೆರವು ಮಾಡಿರುವುದು ಖಂಡನೀಯ. ಕಾಂಗ್ರೆಸ್ ಸರ್ಕಾರವು ಹಿಂದುಗಳ ಭಾವನೆಗೆ ಧಕ್ಕೆ ತಂದು, ಹಿಂದು ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ : Hanuman Flag : ಮಂಡ್ಯದಲ್ಲಿ ಹಿಂಸಾತಾಂಡವ; ಜನಾಕ್ರೋಶಕ್ಕೆ ಗುರಿಯಾದ ಕಾಂಗ್ರೆಸ್ ಶಾಸಕ ರವಿ ಗಣಿಗ
ಈ ಸುದ್ದಿಯನ್ನೂ ಓದಿ : Hanuman Flag : ಕೆರಗೋಡು ಹನುಮ ವಿವಾದ; ಫೆ. 9ರಂದು ಮಂಡ್ಯ ಬಂದ್‌ಗೆ ಬಿಜೆಪಿ ಕರೆ
ಇದನ್ನೂ ಓದಿ : CM Siddaramaiah: ಬಿಜೆಪಿ-ಆರ್‌ಎಸ್‌ಎಸ್‌ನವರು ಸುಳ್ಳೋತ್ಪಾದಕರು; ಸಿಎಂ ಸಿದ್ದರಾಮಯ್ಯ ಕಿಡಿ
2. ದೇಶಾದ್ಯಂತ ಒಂದೇ ವಾರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ; ಕೇಂದ್ರ ಮಹತ್ವದ ಘೋಷಣೆ
ಕೋಲ್ಕೊತಾ: ಲೋಕಸಭೆ ಚುನಾವಣೆಯ (Lok Sabha Election 2024) ನಂತರವೇ ಕೇಂದ್ರ ಸರ್ಕಾರವು (Central Government) ಪೌರತ್ವ ತಿದ್ದುಪಡಿ ಕಾಯ್ದೆ (Citizenship (Amendment) Act) ಜಾರಿಗೊಳಿಸುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರ ಮಧ್ಯೆಯೇ ಕೇಂದ್ರ ಸಚಿವ ಶಂತನು ಠಾಕೂರ್ (Shantanu Thakur) ಅವರು ಮಹತ್ವದ ಘೋಷಣೆ ಮಾಡಿದ್ದಾರೆ. “ದೇಶಾದ್ಯಂತ 7 ದಿನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (CAA Implementation) ಜಾರಿಗೆ ಬರಲಿದೆ” ಎಂದು ಹೇಳಿದ್ದಾರೆ. ಇವರ ಹೇಳಿಕೆ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
3. ಇನ್ನು 15 ದಿನದಲ್ಲಿ ಜಾತಿ ಗಣತಿ ವರದಿ ಸಲ್ಲಿಕೆ? ಅವಧಿ ವಿಸ್ತರಣೆಗೆ ಹಿಂದುಳಿದ ಆಯೋಗ ಮನವಿ
ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ (Backward Classes Commission) ಅಧ್ಯಕ್ಷ ಮತ್ತು ಸದಸ್ಯರ ಅವಧಿ ಮತ್ತೆ ವಿಸ್ತರಣೆಯಾಗುವ ಸಾಧ್ಯತೆ ಇದೆ. ಹದಿನೈದು ದಿನಗಳ ಕಾಲ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ ಎಂದು ಹೇಳಲಾಗುತ್ತಿದೆ. ಕಾರಣ, ಅಷ್ಟರಲ್ಲಿ ಜಾತಿ ಗಣತಿ ವರದಿಯನ್ನು (Caste Census Report) ಸರ್ಕಾರ ಸ್ವೀಕಾರ ಮಾಡಿ ಬಹಿರಂಗಪಡಿಸಲು ಹೆಚ್ಚಿನ ಆಸಕ್ತಿಯನ್ನು ತೋರಿದೆ. ಹೀಗಾಗಿ ಇನ್ನು 15 ದಿನದಲ್ಲಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆ ಇದೆ ಎಂದೇ ಹೇಳಲಾಗುತ್ತಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
4. ಮಕ್ಕಳ ಭವಿಷ್ಯ; ಪೋಷಕರಿಗೆ ಮೋದಿ ಹೇಳಿದ 10 ಕಿವಿಮಾತುಗಳೇನು?
ನವದೆಹಲಿ: ನರೇಂದ್ರ ಮೋದಿ ಅವರು (Narendra Modi) ಪರೀಕ್ಷಾ ಪೇ ಚರ್ಚಾ (Pariksha Pe Charcha 2024) ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧರಾಗುವುದು ಹೇಗೆ, ಆತ್ಮವಿಶ್ವಾಸದಿಂದ ಬರೆಯುವುದು ಹೇಗೆ ಎಂಬುದರ ಕುರಿತು ಸಲಹೆ ನೀಡುವ ಜತೆಗೆ ಪೋಷಕರಿಗೂ (Parents) ಕಿವಿಮಾತುಗಳನ್ನು ಹೇಳಿದರು. ಮಕ್ಕಳು ಪರೀಕ್ಷೆಯಲ್ಲಿ ಯಶಸ್ವಿಯಾಗಲು ಪೋಷಕರ ಪಾತ್ರ ಎಷ್ಟು ಮಹತ್ವ ಎಂಬುದನ್ನು ಕೂಡ ತಿಳಿಸಿದರು. ಮೋದಿ ಹೇಳಿದ ಟಾಪ್ 10 ಕಿವಿಮಾತುಗಳು ಇಲ್ಲಿವೆ. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ : Pariksha Pe Charcha 2024: ಪರೀಕ್ಷೆಗೆ ಮುನ್ನ 10 ನಿಮಿಷ ನಕ್ಕುಬಿಡಿ, ಜೋಕ್ ಮಾಡಿ: ಮಕ್ಕಳಿಗೆ ಪ್ರಧಾನಿ ಮೋದಿ ಕಿವಿಮಾತು
5. ಕರ್ನಾಟಕದ 4 ಸೇರಿ ರಾಜ್ಯಸಭೆ 56 ಸ್ಥಾನಗಳಿಗೆ ಫೆ.27ಕ್ಕೆ ಚುನಾವಣೆ
ನವದೆಹಲಿ: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಮಧ್ಯೆಯೇ ಚುನಾವಣೆ ಆಯೋಗವು ರಾಜ್ಯಸಭೆ ಚುನಾವಣೆ (Rajya Sabha Election) ದಿನಾಂಕ ಘೋಷಿಸಿದೆ. 15 ರಾಜ್ಯಗಳ 56 ರಾಜ್ಯಸಭೆ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಸಲು ಆಯೋಗವು (Election Commission Of India) ತೀರ್ಮಾನಿಸಿದೆ. ಫೆಬ್ರವರಿ 27ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ (Voting) ನಡೆಯಲಿದೆ ಎಂದು ಚುನಾವಣೆ ಆಯೋಗವು ಮಾಹಿತಿ ನೀಡಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
ಇದನ್ನೂ ಓದಿ : Rajya Sabha Election: ಕಾಂಗ್ರೆಸ್‌ನ 3, ಬಿಜೆಪಿಯ 1 ರಾಜ್ಯಸಭಾ ಸ್ಥಾನಕ್ಕೆ ಫೆ.27ಕ್ಕೆ ಚುನಾವಣೆ: ಶುರುವಾಗಿದೆ ರಾಜಕೀಯ ಲೆಕ್ಕಾಚಾರ!
6. ರಾಮಮಂದಿರ, ನಿತೀಶ್ ವಾಪಸ್; ‘ಹಿಂದಿ’ ರಾಜ್ಯಗಳಲ್ಲಿ ಹೆಚ್ಚಿದ ಬಿಜೆಪಿ ಪ್ರಾಬಲ್ಯ, ‘ಲೋಕ’ ಸಮರಕ್ಕೆ ಬಲ
ನವದೆಹಲಿ: ಲೋಕಸಭೆ ಚುನಾವಣೆಗೆ (Lok Sabha Election 2024) ರಣಾಂಗಣ ಸಿದ್ಧವಾಗುತ್ತಿದೆ. ಎಲ್ಲ ಪಕ್ಷಗಳು, ಮೈತ್ರಿಕೂಟಗಳು, ನಾಯಕರು ಇನ್ನಿಲ್ಲದ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಇದರ ಮಧ್ಯೆಯೇ, ಬಿಹಾರದಲ್ಲಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಎನ್‌ಡಿಎ ಮೈತ್ರಿಕೂಟ (NDA Alliance) ಸೇರಿದ್ದಾರೆ. ಇತ್ತೀಚೆಗೆ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯ ಗೆಲುವು, ನಿತೀಶ್ ಕುಮಾರ್ (Nitish Kumar) ಅವರು ‘ಘರ್ ವಾಪ್ಸಿ’ ಆಗಿರುವುದು ಹಿಂದಿ ಭಾಷಿಕ ರಾಜ್ಯಗಳಲ್ಲಿ ಬಿಜೆಪಿ ಪ್ರಾಬಲ್ಯವನ್ನು ಇಮ್ಮಡಿಗೊಳಿಸಿವೆ. ಸಹಜವಾಗಿಯೇ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು (BJP) ಇದರ ಲಾಭ ಪಡೆಯುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
7. ಮಹಿಳಾ ಉದ್ಯೋಗಿಗಳಿಗೆ ಇನ್ನಷ್ಟು ಸಂಬಳಸಹಿತ ರಜೆ; ಬಜೆಟ್‌ನಲ್ಲಿ ಏನಿದೆ ನಿರ್ಮಲಾ ಕೊಡುಗೆ?
ಹೊಸದಿಲ್ಲಿ: ಮಹಿಳಾ ಉದ್ಯೋಗಿಗಳಿಗೆ ಇನ್ನಷ್ಟು ಸಂಬಳಸಹಿತ ರಜೆ (Paid Leave), ಮಹಿಳಾ ಉದ್ಯಮಿಗಳಿಗೆ (women Entrepreneurs) ತೆರಿಗೆ ಸಡಿಲಿಕೆಗಳು ಸೇರಿದಂತೆ ಧಮಾಕಾ ಘೋಷಣೆಗಳನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Finance minister Nirmala Sitharaman) ಅವರು ಈ ಸಲದ ಕೇಂದ್ರ ಬಜೆಟ್‌ನಲ್ಲಿ (Budget 2024) ಮಾಡುವ ಸಾಧ್ಯತೆ ಇದೆ. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
8. ಎರಡನೇ ಟೆಸ್ಟ್ಗೆ ನಾಲ್ಕು ಬಲಿಷ್ಠ ಆಟಗಾರರೇ ಇಲ್ಲ, ಭಾರತ ತಂಡ ಗೆಲ್ಲುವುದು ಹೇಗೆ?
ಬೆಂಗಳೂರು: ಭಾರತ ಕ್ರಿಕೆಟ್ ತಂಡ ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ (ind vs eng) 28 ಸೋಲಿಗೆ ಒಳಗಾಗಿದೆ. 198 ರನ್ಗಳ ಮುನ್ನಡೆಯನ್ನು ಪಡೆದುಕೊಂಡಿದ್ದ ಹೊರತಾಗಿಯೂ ಎರಡನೇ ಇನಿಂಗ್ಸ್ನಲ್ಲಿ ಅಗ್ರ ಕ್ರಮಾಂಕದ ಬ್ಯಾಟರ್ಗಳ ವೈಫಲ್ಯದಿಂದಾಗಿ ಭಾರತ ತಂಡ ಮುಖಭಂಗ ಅನುಭವಿಸಿದೆ. ಭಾರತ ತಂಡಕ್ಕೆ ಸರಣಿಯಲ್ಲಿ ಇನ್ನು ನಾಲ್ಕು ಪಂದ್ಯಗಳು ಬಾಕಿ ಇವೆ. ಹೀಗಾಗಿ ಸರಣಿ ಗೆಲ್ಲಬೇಕಾದರೆ ಅದರಲ್ಲಿ ಕನಿಷ್ಠ ಪಕ್ಷ ಮೂರು ಪಂದ್ಯಗಳನ್ನು ಗೆಲ್ಲಬೇಕಾಗಿದೆ. ಆದರೆ, ಭಾರತ ತಂಡಕ್ಕೆ ಸೋಲಿನ ನಡುವೆ ಇನ್ನೊಂದು ಆಘಾತಕಾರಿ ಸುದ್ದಿ ಬಂದಿದೆ. ಮುಂದಿನದ ಪಂದ್ಯದಲ್ಲಿ ಭಾರತ ತಂಡದಲ್ಲಿ ಪ್ರಮುಖ ನಾಲ್ವರು ಆಟಗಾರರು ಇರುವುದಿಲ್ಲ. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
ಇದನ್ನೂ ಓದಿ : ಹಣ್ಣು ಎಸೆದು ಬೌಲಿಂಗ್ ಮಾಡುತ್ತಿದ್ದ ಜೋಸೆಫ್ ಈಗ ವಿಶ್ವದ ಡೆಡ್ಲಿ ಬೌಲರ್; ಇಲ್ಲಿದೆ ರೋಚಕ ಕಥೆ
9. 69ನೇ ಫಿಲ್ಮ್ಫೇರ್ ಪ್ರಶಸ್ತಿ ಪ್ರದಾನ: ರಣಬೀರ್ ಅತ್ಯುತ್ತಮ ನಟ, ಆಲಿಯಾ ಅತ್ಯುತ್ತಮ ನಟಿ!
ನವದೆಹಲಿ: ‘ಗುಜರಾತ್ ಪ್ರವಾಸೋದ್ಯಮ ಇಲಾಖೆ’ (Gujarat Tourism) ಸಹಯೋಗದೊಂದಿಗೆ 69ನೇ ಫಿಲ್ಮ್ಫೇರ್ ಪ್ರಶಸ್ತಿ ಪ್ರದಾನ (69th Filmfare Awards) ಕಾರ್ಯಕ್ರಮ ಗುಜರಾತ್ನ ಗಾಂಧಿನಗರದ ಮಹಾತ್ಮ ಮಂದಿರ್ ಕನ್ವೆನ್ಷನ್ ಮತ್ತು ಎಕ್ಸಿಬ್ಯುಷನ್ ಸೆಂಟರ್ನಲ್ಲಿ ಜ.27 ಹಾಹೂ ಜ.28ರಂದು ಅದ್ಧೂರಿಯಾಗಿ ನಡೆದಿದೆ. ಜನವರಿ 27ರಂದು ಬಾಲಿವುಡ್ (Bollywood) ಸಿನಿಮಾಗಳ ಹಲವು ತಾಂತ್ರಿಕ ವಿಭಾಗಗಳಿಗೆ ಪ್ರಶಸ್ತಿ ನೀಡಲಾಗಿತ್ತು. ಜ.28ರಂದು ಉಳಿದ ವಿಭಾಗಗಳಿಗೆ ಪ್ರಶಸ್ತಿ ನೀಡಲಾಯಿತು. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
10. 49 ವರ್ಷದ ಮಹಿಳೆ ಜತೆ 103 ವರ್ಷದ ಸ್ವಾತಂತ್ರ್ಯ ಹೋರಾಟಗಾರ ಮದುವೆ; ಹುಣಸೆ ಮುಪ್ಪಾದರೆ!
ಭೋಪಾಲ್: ಪ್ರೀತಿಗೆ ವಯಸ್ಸಿನ ಹಂಗಿಲ್ಲ ಎಂಬ ಮಾತಿದೆ. ಆಧುನಿಕ ಕಾಲಘಟ್ಟದಲ್ಲಿ ಮದುವೆಯಾಗಲು ಕೂಡ ವಯಸ್ಸಿನ ಹಂಗಿಲ್ಲ ಎಂಬಂತಾಗಿದೆ. 60 ವರ್ಷ ದಾಟಿದವರೂ ಇತ್ತೀಚೆಗೆ ಮದುವೆಯಾಗುತ್ತಿದ್ದಾರೆ. ಆದರೆ, ಮಧ್ಯಪ್ರದೇಶದಲ್ಲಿ (Madhya Pradesh) ಸ್ವಾತಂತ್ರ್ಯ ಹೋರಾಟಗಾರರೊಬ್ಬರು (Freedom Fighter) ತಮ್ಮ 103ನೇ ವಯಸ್ಸಿನಲ್ಲಿ ಮದುವೆಯಾಗುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ. 103 ವರ್ಷದ ಹಬೀಬ್ ನಜರ್ (Habib Nazar) ಅವರು 49 ವರ್ಷದ ಫಿರೋಜ್ ಜಹಾನ್ (Firoz Jahan) ಎಂಬುವರನ್ನು ವರಿಸಿದ್ದಾರೆ. ಇವರ ಮದುವೆಯ ಫೋಟೊಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ