Hassan Election Result 2024 : ಅತ್ಯಾಚಾರ ಆರೋಪಿ ಪ್ರಜ್ವಲ್​​ಗೆ ಹಾಸನ ಮತದಾರರಿಂದ ಶಿಕ್ಷೆ; ಹೀನಾಯ ಸೋಲು! - Vistara News

ಪ್ರಮುಖ ಸುದ್ದಿ

Hassan Election Result 2024 : ಅತ್ಯಾಚಾರ ಆರೋಪಿ ಪ್ರಜ್ವಲ್​​ಗೆ ಹಾಸನ ಮತದಾರರಿಂದ ಶಿಕ್ಷೆ; ಹೀನಾಯ ಸೋಲು!

Hassan Election Result 2024 : 2019ರ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ 6,76,606 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿಯ ಎ.ಮಂಜು 5,35,382 ಮತಗಳನ್ನು ಪಡೆದು ಎರಡನೇ ಸ್ಥಾನ ಪಡೆದಿದ್ದರು. ಬಿಎಸ್ಪಿಯ ವಿನೋದ್ ರಾಜ್ ಕೆ.ಎಚ್ 38,761 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದುಕೊಂಡಿದ್ದರು..

VISTARANEWS.COM


on

Hassan Election Result 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದೇಶದ ಜನತೆಗೆ ಕೌತುಕ ಮೂಡಿಸಿರುವ ಹಾಗೂ ಸಾವಿರಾರು ಮಹಿಳೆಯರನ್ನು ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿದ ಹಗರಣ ಕೇಂದ್ರ ಸ್ಥಾನವಾಗಿದ್ದ ಹಾಸನ ಲೋಕ ಸಭಾ ಕ್ಷೇತ್ರದಲ್ಲಿ (Hassan Election Result 2024) ಕಾಂಗ್ರೆಸ್​ ಪಕ್ಷದ ಶ್ರೇಯಸ್​ ಪಟೇಲ್​ (6,72,988 ಮತಗಳು) ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಸದ್ಯ ಎಸ್​ಐಟಿ ಕಸ್ಟಡಿಯಲ್ಲಿರುವ ಪ್ರಜ್ವಲ್​ ರೇವಣ್ಣ (6,30,339 ಮತಗಳು) ವಿರುದ್ಧ 42,649 ಮತಗಳ ಅಂತರದ ಮತಗಳಿಂದ ಗೆಲವು ಸಾಧಿಸಿದ್ದಾರೆ. ಈ ಮೂಲಕ ಕ್ಷೇತ್ರದ ಜನತೆ ಪ್ರಜ್ವಲ್​ಗೆ ತಕ್ಕ ಶಿಕ್ಷೆ ಕೊಟ್ಟಿದ್ದಾರೆ. ಈ ಮೂಲಕ 25 ವರ್ಷಗಳ ಬಳಿಕ ಹಾಸನದಲ್ಲಿ ಕಾಂಗ್ರೆಸ್​​ ಪಕ್ಷ ಗೆಲುವು ಸಾಧಿಸಿದೆ. ದೇವೇಗೌಡರ ಕುಟುಂಬದ ಬಿಗಿ ಹಿಡಿತದಿಂದ ಹಾಸನ ಕ್ಷೇತ್ರ ಕೈತಪ್ಪಿದೆ.

  • ಶ್ರೇಯಸ್​ ಪಟೇಲ್​ (ಕಾಂಗ್ರೆಸ್​)- 6,72,988 ಮತಗಳು
  • ಪ್ರಜ್ವಲ್​ ರೇವಣ್ಣ (ಜೆಡಿಎಸ್​​)- 6,30,339 ಮತಗಳು
  • ಗೆಲುವಿನ ಅಂತರ- 42,649 ಮತಗಳು

2019ರ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ 6,76,606 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿಯ ಎ.ಮಂಜು 5,35,382 ಮತಗಳನ್ನು ಪಡೆದು ಎರಡನೇ ಸ್ಥಾನ ಪಡೆದಿದ್ದರು. ಬಿಎಸ್ಪಿಯ ವಿನೋದ್ ರಾಜ್ ಕೆ.ಎಚ್ 38,761 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದುಕೊಂಡಿದ್ದರು..2019ರ ಚುನಾವಣೆಯಲ್ಲಿ ಜೆಡಿಎಸ್ ಶೇ.52.92ರಷ್ಟು ಮತಗಳನ್ನು ಪಡೆದಿತ್ತು.

2014ರ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು 5,09,841 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್ ನ ಎ.ಮಂಜು 4,09,378 ಮತಗಳನ್ನು ಪಡೆದು ಎರಡನೇ ಸ್ಥಾನ ಪಡೆದುಕೊಂಡಿದ್ದರು. ಬಿಜೆಪಿಯ ಸಿ.ಎಚ್.ವಿಜಯಶಂಕರ್ 1,65,688 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದಿದ್ದರು. ಜೆಡಿಎಸ್ ಶೇ.44.44ರಷ್ಟು ಮತಗಳನ್ನು ಪಡೆದಿತ್ತು.

ಪ್ರಮುಖ ಕ್ಷೇತ್ರ ಹಾಸನ

ಹಾಸನ ಲೋಕಸಭಾ ಕ್ಷೇತ್ರವು ಆರಂಭದಲ್ಲಿ ಮೈಸೂರು ರಾಜ್ಯದ ಭಾಗವಾಗಿತ್ತು. 1957ರಲ್ಲಿ ಈ ಕ್ಷೇತ್ರವನ್ನು ಹಾಸನ ಎಂದು ಗುರುತಿಸಲಾಯಿತು. 1974 ರಲ್ಲಿ, ಹಾಸನ ಕ್ಷೇತ್ರವು ಕರ್ನಾಟಕದ ಭಾಗವಾಯಿತು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಈ ಲೋಕಸಭಾ ಕ್ಷೇತ್ರದಲ್ಲಿ ಐದು ಬಾರಿ ಗೆಲುವು ಸಾಧಿಸಿದ್ದಾರೆ. ಎರಡು ಬಾರಿ ಜನತಾದಳದಿಂದ ಹಾಗೂ ಮೂರು ಬಾರಿ ಜೆಡಿಎಸ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

ಬೆಂಗಳೂರಿನಿಂದ 200 ಕಿಲೋಮೀಟರ್ ದೂರದಲ್ಲಿರುವ ಈ ನಗರವು ಹೊಯ್ಸಳ ರಾಜರ ಪ್ರಾಚೀನ ತಾಣಗಳಿಗೆ ನೆಲೆಯಾಗಿದೆ. ಹಾಸನ ಲೋಕಸಭಾ ಕ್ಷೇತ್ರದ ಒಟ್ಟು ಜನಸಂಖ್ಯೆ ಸುಮಾರು 2,016,000. ಈ ಪೈಕಿ 1,561,000 ಮತದಾರರಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರದ ಜನಸಂಖ್ಯೆಯ ಸುಮಾರು 78% ರಷ್ಟು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿದ್ದರೆ, 22% ರಷ್ಟು ನಗರ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರವು ಎಂಟು ವಿಧಾನಸಭಾ ಸ್ಥಾನಗಳನ್ನು ಒಳಗೊಂಡಿದೆ.

ಹಾಸನ ಲೋಕಸಭೆ ಕ್ಷೇತ್ರ ಸಾಮಾನ್ಯ ವರ್ಗದ ಸಂಸತ್ ಸ್ಥಾನವಾಗಿದೆ. ಇದು ಇಡೀ ಹಾಸನ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಯ ಭಾಗವನ್ನು ಒಳಗೊಂಡಿದೆ. ಹಾಸನ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಡೂರು, ಶ್ರವಣಬೆಳಗೊಳ, ಅರಸೀಕೆರೆ, ಬೇಲೂರು, ಹಾಸನ, ಹೊಳೆನರಸೀಪುರ, ಅರಕಲಗೂಡು ಮತ್ತು ಸಕಲೇಶಪುರ ವಿಧಾನಸಭಾ ಕ್ಷೇತ್ರಗಳಿವೆ. ಜೆಡಿಎಸ್ 4, ಕಾಂಗ್ರೆಸ್ 2, ಬಿಜೆಪಿ 2 ಸ್ಥಾನಗಳನ್ನು ಹೊಂದಿವೆ.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಎಚ್.ಡಿ.ದೇವೇಗೌಡ ಅವರು ಬಿಜೆಪಿಯ ಕೆ.ಎಚ್.ಹನುಮೇಗೌಡ ಅವರನ್ನು 2,91,113 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಜೆಡಿಎಸ್ ಶೇ.50.63ರಷ್ಟು ಮತಗಳನ್ನು ಪಡೆದಿತ್ತು.

ದೇವೇಗೌಡ ಕುಟುಂಬದ ಭದ್ರಕೋಟೆ

ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಹಾಸನ ಲೋಕಸಭಾ ಕ್ಷೇತ್ರವನ್ನು ಪಕ್ಷ ಮತ್ತು ಕುಟುಂಬದ ಭದ್ರಕೋಟೆಯಾಗಿ ಪರಿವರ್ತಿಸಿದ್ದಾರೆ. 1991ರಲ್ಲಿ ಅವರ ಮೊದಲ ವಿಜಯದ ನಂತರ, ಅವರು 1998, 2004, 2009 ಮತ್ತು 2014 ರಲ್ಲಿ ಮರು ಆಯ್ಕೆಯಾದರು.

ಹಾಸನ ಲೋಕಸಭಾ ಕ್ಷೇತ್ರದ ಒಟ್ಟು ಜನಸಂಖ್ಯೆ ಸುಮಾರು 2016000. 2011 ರ ಜನಗಣತಿಯ ಅಂಕಿಅಂಶಗಳ ಪ್ರಕಾರ ಸರಾಸರಿ ಸಾಕ್ಷರತಾ ಪ್ರಮಾಣವು ಸುಮಾರು 69.34% ರಷ್ಟಿತ್ತು. ಎಸ್ಸಿ ಮತದಾರರು ಸುಮಾರು 19.5% ರಷ್ಟಿದ್ದರೆ, ಎಸ್ಟಿ ಮತದಾರರು ಸುಮಾರು 1.8% ರಷ್ಟಿದ್ದಾರೆ. ಸುಮಾರು 1294690 ಗ್ರಾಮೀಣ ಮತದಾರರು 78.4% ರಷ್ಟಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karave Protest: ಕನ್ನಡಿಗರಿಗೆ ಉದ್ಯೋಗ ನೀಡಿ, ಇಲ್ಲವೇ ರಾಜ್ಯ ಬಿಟ್ಟು ತೊಲಗಿ: ಕರವೇ ಕಾರ್ಯಕರ್ತರ ಆಕ್ರೋಶ

Karave Protest: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಕರವೇ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

VISTARANEWS.COM


on

Karave Protest
Koo

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಲು (Jobs For Kannadigas) ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಬೆಂಗಳೂರು ಸೇರಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವೇದಿಕೆಯಿಂದ (Karave Protest) ಸೋಮವಾರ ಬೆಳಗ್ಗೆ ಪ್ರತಿಭಟನೆಗಳು ಆರಂಭವಾಗಿವೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಕರವೇ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಳಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್‌ ಬಳಿ ಕುವೆಂಪು ಪುತ್ಥಳಿಗೆ ಟಿ.ಎ. ನಾರಾಯಣ ಗೌಡರು ಮಾಲಾರ್ಪಣೆ ಮಾಡುವ ಮೂಲಕ ಹೋರಾಟಕ್ಕೆ ಚಾಲನೆ ನೀಡಿದರು. ಗಾಂಧಿನಗರದ ಕರವೇ ಕೇಂದ್ರ ಕಚೇರಿಯಿಂದ ಸಾವಿರಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಮೂಲಕ ಫ್ರೀಡಂ ಪಾರ್ಕ್‌ ಸೇರಿದರು. ನಂತರ ಅಲ್ಲಿ ಹೋರಾಟ ಆರಂಭಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ಪೊಲೀಸ್ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ಮೆಟ್ರೋ ಸ್ಟೇಷನ್‌, ಬಸ್‌ ನಿಲ್ದಾಣ, ಮಾಲ್‌ಗಳ ಬಳಿ ಕೂಡ ಬಂದೋಬಸ್ತ್‌ ಮಾಡಲಾಗಿದೆ.

ಪೋಲಿಸರು ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡಿದರೆ ಪ್ರತಿಭಟನೆ ಉಗ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ. ಈಗಾಗಲೇ ಈ ಬಗ್ಗೆ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರು ಎಚ್ಚರಿಕೆ ಕೊಟ್ಟಿದ್ದಾರೆ. ನಾವು ಫ್ರೀಡಂ ಪಾರ್ಕಿನಲ್ಲಿ ಧರಣಿ ಬಿಟ್ಟು ಬೇರೆ ಯೋಜನೆ ಮಾಡಿಲ್ಲ. ಹೋರಾಟಗಳಲ್ಲಿ ಎರಡು ವಿಧ, ಒಂದು ಶಾಂತಿ, ಮತ್ತೊಂದು ಕ್ರಾಂತಿ. ಇಂದು ನಾವು ಶಾಂತಿಯುತವಾಗಿ ಹೋರಾಟ ಮಾಡಲು ಕರೆ ಕೊಟ್ಟಿದ್ದೇವೆ. ಒಂದು ತಿಂಗಳೊಳಗೆ ಸರೋಜಿನಿ ಮಹಿಷಿ ವರದಿ ಅನುಷ್ಠಾನ ಮಾಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಯಲಿದೆ. ಈ ಸಂಬಂಧ ಸಿಎಂ ಭೇಟಿಗೆ ಮನವಿ ಮಾಡಿದ್ದೇವೆ. ರ‍್ಯಾಲಿ, ಮೆರವಣಿಗೆ ಮಾಡಬಾರದು ಎಂತಲೂ ಕಾರ್ಯಕರ್ತರಿಗೆ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.

ಇನ್ನು ಕರವೇ ಪ್ರತಿಭಟನೆಗೆ ಸ್ಯಾಂಡಲ್‌ವುಡ್ ಸಾಥ್ ನೀಡಿದೆ. ಸ್ಯಾಂಡಲ್‌ವುಡ್ ನಟ ಪ್ರೇಮ್, ನಟಿ ಪೂಜಾಗಾಂಧಿ ಮತ್ತಿತರರು ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ.

ಎಲ್ಲ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ.100 ರಷ್ಟು ಹುದ್ದೆಗಳು ಕನ್ನಡಿಗರಿಗೆ ಮೀಸಲಿಡಬೇಕು. ಇತರ ಹುದ್ದೆಗಳಲ್ಲಿ ಶೇ. 80ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು. ಹಾಗೆಯೇ ರಾಜ್ಯ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ 100 ಪ್ರತಿಶತ ಮೀಸಲಾತಿ ನೀಡಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಇದನ್ನೂ ಓದಿ | Dengue Fever: ರಾಜಧಾನಿಯಲ್ಲಿ ಡೆಂಗ್ಯು ಜ್ವರಕ್ಕೆ ಒಂದು ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಬೆಳಗಾವಿಯಲ್ಲಿ ಸರ್ಕಾರದ ವಿರುದ್ಧ ಕರವೇ ರಣಕಹಳೆ

ಬೆಳಗಾವಿ: ಬೆಳಗಾವಿಯಲ್ಲೂ ಸರ್ಕಾರದ ವಿರುದ್ಧ ಕರವೇ ರಣಕಹಳೆ ಮೊಳಗಿದೆ. ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿಯವರೆಗೆ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಮೂಲ ತೆರಳಿ ಹೋರಾಟ ನಡೆಸಿದರು.

ಡಾ, ಸರೋಜನಿ ಮಹಿಷಿ ವರದಿ ಜಾರಿ ಮಾಡುವಂತೆ ಸರ್ಕಾರವನ್ನು ಆಗ್ರಹಿಸಿದ ಕಾರ್ಯಕರ್ತರು, ಡಿಸಿ ಮುಖೇನ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪರರಾಜ್ಯದವರ ಹಾವಳಿ ತಡೆಯುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಕನ್ನಡಿಗರಿಗೆ ಮಾತ್ರ ಶೇ.100 ಉದ್ಯೋಗ ನೀಡುವಂತೆ ಒತ್ತಾಯಿಸಲಾಗಿದೆ.

ಕೋಟೆ ನಾಡಿನಲ್ಲಿ ಸಿಡಿದೆದ್ದ ಕರವೇ

ಚಿತ್ರದುರ್ಗ: ಸರ್ಕಾರದ ವಿರುದ್ಧ ಕೋಟೆ ನಾಡಿನಲ್ಲಿ ಕರವೇ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ನಗರದ ಡಿಸಿ ವೃತ್ತದಲ್ಲಿ ನಾರಾಯಣಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕಾರ್ಪೊರೇಟ್ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಕ್ಕೆ ಆಗ್ರಹಿಸಿದರು. ರಾಜ್ಯದ ನಿರುದ್ಯೋಗಿ ಯುವಕರಿಗೆ ಕಂಪನಿಗಳಲ್ಲಿ ಉದ್ಯೋಗ ನೀಡಬೇಕು, ನಮಗೆ ಉದ್ಯೋಗಿ ಕೊಡಿ, ಇಲ್ಲವೇ ರಾಜ್ಯ ಬಿಟ್ಟು ತೊಲಗಿ ಎಂದು ಘೋಷಣೆ ಕೂಗಿದರು.

ಹಾವೇರಿಯಲ್ಲಿ ಕರವೇ ಪ್ರತಿಭಟನೆ

ಹಾವೇರಿ: ಹಾವೇರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರವೇಯಿಂದ ಪ್ರತಿಭಟನೆ ನಡೆಯಿತು. ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕನ್ನಡಿಗರಿಗೆ ಉದ್ಯೋಗ ನೀಡುವ ಕಾಯ್ದೆ ರೂಪಿಸಲು ಒತ್ತಾಯಿಸಿ, ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿ

ಯಾದಗಿರಿ: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಕರವೇಯಿಂದ ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.

ಕರವೇ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ಡಾ.ಸರೋಜಿನಿ ಮಹಿಷಿ ವರದಿ ಜಾರಿ ಮಾಡಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.

ಇದನ್ನೂ ಓದಿ : Dengue Fever: ರಾಜಧಾನಿಯಲ್ಲಿ ಡೆಂಗ್ಯು ಜ್ವರಕ್ಕೆ ಒಂದು ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ

ಧಾರವಾಡ: ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಆಗ್ರಹಿಸಿ ಧಾರವಾಡದ ಡಿಸಿ ಕಚೇರಿ ಎದುರು ಕರವೇ ಬಣದಿಂದ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರ್ಕಾರ ಈ ಕೂಡಲೇ ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Continue Reading

ಪ್ರಮುಖ ಸುದ್ದಿ

Hurricane Beryl : ವೆಸ್ಟ್​ ಇಂಡೀಸ್​ನಲ್ಲಿ ಚಂಡಮಾರುತ, ಸಂಕಷ್ಟದಲ್ಲಿ ಸಿಲುಕಿದ ಚಾಂಪಿಯನ್ ಭಾರತ ತಂಡ

Hurricane Beryl : ವಿಮಾನ ನಿಲ್ದಾಣ ಮಾತ್ರವಲ್ಲ, ಬಾರ್ಬಡೋಸ್​​ನ ಎಲ್ಲಾ ಹೋಟೆಲ್​​, ರೆಸ್ಟೋರೆಂಟ್​ಗಳು ಮತ್ತು ಅಂಗಡಿಗಳನ್ನು ಸಹ ಮುಚ್ಚಲಾಗಿದೆ. ದೇಶದಲ್ಲಿ ತುರ್ತು ಪರಿಸ್ಥಿತಿಯಿಂದಾಗಿ ಭಾರತೀಯ ತಂಡ ಉಳಿದುಕೊಂಡಿರುವ ಹೋಟೆಲ್ ಪ್ರಸ್ತುತ ಸೀಮಿತ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ನಂಬಲಾಗಿದೆ. ಹೀಗಾಗಿ ಭಾರತ ತಂಡದ ಆಟಗಾರರಿಗೆ ಅತ್ಯ ಸೌಕರ್ಯಗಳು ಸಿಗುತ್ತಿಲ್ಲ.

VISTARANEWS.COM


on

Hurricane Beryl
Koo

ಬೆಂಗಳೂರು: ವೆಸ್ಟ್​ ಇಂಡೀಸ್​ನಲ್ಲಿ ಬಾರ್ಬಡೋಸ್​ಗೆ ಬೆರಿಲ್ ಚಂಡಮಾರುತದಿಂದಾಗಿ (Hurricane Beryl) ಅಪ್ಪಳಿಸಿದೆ. ವಿಶ್ವ ಕಪ್​ ಫೈನಲ್ ಪಂದ್ಯ ಮುಗಿದ ಮರುದಿನದೇ ಈ ಪಾಕೃತಿಕ ವಿಕೋಪ ಸಂಭವಿಸಿದೆ. ಹೀಗಾಗಿ ವಿಶ್ವ ಕಪ್​ ಗೆದ್ದು ಸಂಭ್ರಮದಲ್ಲಿರುವ ಭಾರತ ತಂಡ ಸಂಕಷ್ಟಕ್ಕೆ ಸಿಲುಕಿದೆ. ತವರಿಗೆ ಮರಳಲು ಸಾಧ್ಯವಾಗದೇ, ಅಲ್ಲಿಯೂ ಸೂಕ್ತ ವ್ಯವಸ್ಥೆ ಇಲ್ಲದೆ ನಲುಗುವಂತಾಗಿದೆ. ಭಾರತೀಯ ತಂಡದ ಬಗ್ಗೆ ಬಿಸಿಸಿಐ ಹೊಸ ಅಪ್​​ಡೇಟ್​ ನೀಡಿದ್ದು, ಟಿ 20 ವಿಶ್ವಕಪ್ 2024 ರ ಗೆಲುವಿನ ನಂತರ ಭಾರತಕ್ಕೆ ತೆರಳಬೇಕಿದ್ದ ಟೀಮ್ ಇಂಡಿಯಾ, ಚಂಡಮಾರುತದಿಂದಾಗಿ ಬಾರ್ಬಡೋಸ್​ನಲ್ಲಿ ಸಿಲುಕಿಕೊಂಡಿದೆ ಎಂದು ಬರೆದುಕೊಂಡಿದೆ. ಎಲ್ಲಾ ಹೊರಹೋಗುವ ವಿಮಾನಗಳನ್ನು ರದ್ದುಪಡಿಸಲಾಗಿತ್ತು ಮತ್ತು ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ ಎಂದು ಹೇಳಿದೆ. ಅದರ ನಡುವೆಯೂ ಅಲ್ಲಿರುವ ಆಟಗಾರರು ಸೌಲಭ್ಯಗಳ ಕೊರತೆ ಎದುರಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಮಾನ ನಿಲ್ದಾಣ ಮಾತ್ರವಲ್ಲ, ಬಾರ್ಬಡೋಸ್​​ನ ಎಲ್ಲಾ ಹೋಟೆಲ್​​, ರೆಸ್ಟೋರೆಂಟ್​ಗಳು ಮತ್ತು ಅಂಗಡಿಗಳನ್ನು ಸಹ ಮುಚ್ಚಲಾಗಿದೆ. ದೇಶದಲ್ಲಿ ತುರ್ತು ಪರಿಸ್ಥಿತಿಯಿಂದಾಗಿ ಭಾರತೀಯ ತಂಡ ಉಳಿದುಕೊಂಡಿರುವ ಹೋಟೆಲ್ ಪ್ರಸ್ತುತ ಸೀಮಿತ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ನಂಬಲಾಗಿದೆ. ಹೀಗಾಗಿ ಭಾರತ ತಂಡದ ಆಟಗಾರರಿಗೆ ಅತ್ಯ ಸೌಕರ್ಯಗಳು ಸಿಗುತ್ತಿಲ್ಲ.

ಟೀಮ್ ಇಂಡಿಯಾಗೆ ಬಿಸಿಸಿಐ ಭರವಸೆ

ಚಂಡಮಾರುತವು ಕಡಿಮೆಯಾದ ನಂತರ ಬಾರ್ಬಡೋಸ್​ನಿಂದ ಹೊರಬರಲು ಟೀಮ್ ಇಂಡಿಯಾ, ಸಹಾಯಕ ಸಿಬ್ಬಂದಿ ಮತ್ತು ಮಾಧ್ಯಮ ತಂಡಕ್ಕೆ ಸಹಾಯ ಮಾಡುವುದಾಗಿ ಬಿಸಿಸಿಐ ಭರವಸೆ ನೀಡಿದೆ. ಖ್ಯಾತ ಪತ್ರಕರ್ತ ಬೋರಿಯಾ ಮಜುಂದಾರ್ ಅವರ ವರದಿಗಳ ಪ್ರಕಾರ, ಹೋಟೆಲ್​​ನಲ್ಲಿ ಸೀಮಿತ ಸಿಬ್ಬಂದಿಯಿಂದಾಗಿ ಭಾರತೀಯ ತಂಡವು ಸರದಿಯಲ್ಲಿ ನಿಂತಿ ಕಾಗದದ ತಟ್ಟೆಗಳಲ್ಲಿ ಊಟ ಮಾಡುತ್ತಿದೆ.

ಇದನ್ನೂ ಓದಿ: ICC Team of the Tournament : ಐಸಿಸಿ ಟೀಮ್​ ಆಫ್​​ ದಿ ಟೂರ್ನಮೆಂಟ್​ನಲ್ಲಿ ಆರು

ವರದಿಗಳ ಪ್ರಕಾರ, ಕ್ರಿಕೆಟ್ ದಕ್ಷಿಣ ಆಫ್ರಿಕಾ (ಸಿಎಸ್ಎ) ತಂಡ ಮತ್ತು ಸಹಾಯಕ ಸಿಬ್ಬಂದಿ ಚಾರ್ಟರ್ ವಿಮಾನದ ಮೂಲಕ ವಾಪಸ್ ತೆರಳಿದೆ. ಹೀಗಾಗಿ ದಕ್ಷಿಣ ಆಫ್ರಿಕಾ ತಂಡವು ಬಾರ್ಬಡೋಸ್ನಿಂದ ಹೊರಟಿದೆ. ಇದು ದಕ್ಷಿಣ ಆಫ್ರಿಕಾ ತಂಡಕ್ಕೆ ದೊಡ್ಡ ಪರಿಹಾರವಾಗಿದೆ ಆದರೆ ಭಾರತೀಯ ತಂಡವು ದ್ವೀಪ ರಾಷ್ಟ್ರವನ್ನು ಇನ್ನೂ ತೊರೆದಿಲ್ಲ. ಅವರಿಗೆ ತಕ್ಷಣದ ಪರಿಹಾರ ಸಿಕ್ಕಿಲ್ಲ.

ಭಾರತ ತಂಡವು ಜುಲೈ 1 ರಂದು ಹೊರಡಬೇಕಿತ್ತು. ಆದರೆ ಚಂಡಮಾರುತದಿಂದಾಗಿ ಬಾರ್ಬಡೋಸ್ ನ ಆಡಳಿತ ಹೆಚ್ಚಿನ ಎಚ್ಚರಿಕೆ ವಹಿಸಿದೆ. ವಿಮಾನ ನಿಲ್ದಾಣವನ್ನು ಸೋಮವಾರ ಮಧ್ಯಾಹ್ನದವರೆಗೆ (ಬಿಎಸ್ಟಿ) ಮುಚ್ಚಲಾಗುವುದು ಮತ್ತು ಚಂಡಮಾರುತ ಕಡಿಮೆಯಾದ ನಂತರವೇ ಅದನ್ನು ಮತ್ತೆ ತೆರೆಯಲಾಗುತ್ತದೆ. ಎಲ್ಲವೂ ಸುಧಾರಿಸಿಕೊಂಡ ನಂತರ ಭಾರತ ತಂಡ ಅಲ್ಲಿಂದ ಹೊರಡಬೇಕಾಗಿದೆ.

ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ಭಾನುವಾರ ಬೆಳಿಗ್ಗೆ ಗ್ರೇಡ್​ 3 ಚಂಡಮಾರುತವಾಗಿ ಪರಿವರ್ತನೆಗೊಂಡಿದೆ ಭಾನುವಾರ ಬೆಳಿಗ್ಗೆಯೇ ಮಾರುತದ ಗಂಟೆಗೆ 120 ಕಿಲೋಮೀಟರ್​ನಷ್ಟಿತ್ತು. ಚಂಡಮಾರುತವು ಕ್ಷಣದಿಂದ ಕ್ಷಣಕ್ಕೆ ಬಲಗೊಳ್ಳುತ್ತಿದೆ.

ಪೋರ್ಟೊ ರಿಕೊದ ಆಗ್ನೇಯ ಮತ್ತು ವೆನೆಜುವೆಲಾದ ಉತ್ತರಕ್ಕೆ ವಿಂಡ್ವರ್ಡ್ ದ್ವೀಪಗಳಿಗೆ ಬೆರಿಲ್ ಚಂಡಮಾರುತ ಅಪ್ಪಳಿಸಲಿದೆ ನಿರೀಕ್ಷೆಯಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ರಾತ್ರಿ 8:30 ರ ಹೊತ್ತಿಗೆ ಬೆರಿಲ್ ಬಾರ್ಬಡೋಸ್​​ನ ಪೂರ್ವ-ಆಗ್ನೇಯಕ್ಕೆ ಸುಮಾರು 355 ಮೈಲಿ ದೂರದಲ್ಲಿ ಸಾಗಲಿದೆ. ಮುಂಬರುವ ಗಂಟೆಗಳಲ್ಲಿ ಪರಿಸ್ಥಿತಿ ತೀವ್ರವಾಗಬಹುದು ಎಂದು ವರದಿಯಾಗಿದೆ.

Continue Reading

ದೇಶ

NEET UG 2024 Re-Test Result: ನೀಟ್‌ ಮರುಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

NEET UG 2024 Re-Test Result: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಫಲಿತಾಂಶವನ್ನು ಸೋಮವಾರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪ್ರಕಟಿಸಿದೆ. ಮೇಯಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಕೃಪಾಂಕ ಪಡೆದ 1,563 ವಿದ್ಯಾರ್ಥಿಗಳಿಗೆ ಜೂನ್ 23ರಂದು ಮರುಪರೀಕ್ಷೆ ನಡೆಲಾಗಿತ್ತು.

VISTARANEWS.COM


on

NEET UG 2024 Re-Test Result
Koo

ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ (Re-Test) ಫಲಿತಾಂಶವನ್ನು ಸೋಮವಾರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪ್ರಕಟಿಸಿದೆ (NEET UG 2024 Re-Test Result). ಮೇಯಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಕೃಪಾಂಕ ಪಡೆದ 1,563 ವಿದ್ಯಾರ್ಥಿಗಳಿಗೆ ಜೂನ್ 23ರಂದು ಮರುಪರೀಕ್ಷೆ ನಡೆಲಾಗಿತ್ತು. ಈ ಪೈಕಿ 813 ಅಭ್ಯರ್ಥಿಗಳು ಮಾತ್ರ ಹಾಜರಾಗಿದ್ದರು. ಶನಿವಾರ ಆನ್ಸರ್‌ ಕೀ ಪ್ರಕಟಿಸಲಾಗಿತ್ತು.

ಚಂಡೀಗಢ, ಗುಜರಾತ್‌, ಹರಿಯಾಣ, ಮೇಘಾಲಯ ಸೇರಿ ಆರು ರಾಜ್ಯಗಳ ನಗರಗಳಲ್ಲಿ ಮರು ಪರೀಕ್ಷೆ ನಡೆದಿತ್ತು. ಈ ಪೈಕಿ ಛತ್ತೀಸ್‌ಗಢದಲ್ಲಿ 602 ಅಭ್ಯರ್ಥಿಗಳ ಪೈಕಿ 291 ವಿದ್ಯಾರ್ಥಿಗಳು ಹಾಜರಾದರೆ, ಹರಿಯಾಣದಲ್ಲಿ 494 ಅಭ್ಯರ್ಥಿಗಳ ಪೈಕಿ 287, ಮೇಘಾಲಯದಲ್ಲಿ 464 ವಿದ್ಯಾರ್ಥಿಗಳ ಪೈಕಿ 234 ಅಭ್ಯರ್ಥಿಗಳು ಮಾತ್ರ ಹಾಜರಾಗಿದ್ದರು. ಗುಜರಾತ್‌ ಕೇಂದ್ರದಲ್ಲಿ ಒಬ್ಬ ವಿದ್ಯಾರ್ಥಿ ಮಾತ್ರ ಮರು ಪರೀಕ್ಷೆ ಬರೆದಿದ್ದರು.

“ಜೂನ್ 23ರಂದು ಮರು ಪರೀಕ್ಷೆಗೆ ಹಾಜರಾದ ನೀಟ್ (ಯುಜಿ) 2024ರ ಎಲ್ಲ ಅಭ್ಯರ್ಥಿಗಳ ಪರಿಷ್ಕೃತ ಸ್ಕೋರ್‌ ಕಾರ್ಡ್‌ಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಲಾಗಿನ್‌ ಆಗಿ ಪರಿಷ್ಕೃತ ಸ್ಕೋರ್‌ ಕಾರ್ಡ್‌ಗಳನ್ನು ಡೌನ್‌ಲೋಡ್‌ ಮಾಡಬಹುದು” ಎಂದು ಎನ್‌ಟಿಎ ತಿಳಿಸಿದೆ.

ಫಲಿತಾಂಶ ಹೀಗೆ ಚೆಕ್‌ ಮಾಡಿ

ನೀಟ್‌ ಪರೀಕ್ಷೆ ವೇಳೆ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಮತ್ತು ಕೇಂದ್ರ ಶಿಕ್ಷಣ ಸಚಿವಾಲಯದ ಅಧಿಕಾರಿಗಳು ಹಾಜರಿದ್ದು, ಮರುಪರೀಕ್ಷೆಯ ಮೇಲ್ವಿಚಾರಣೆ ನಡೆಸಿದರು.

ಯಾಕಾಗಿ ಮರು ಪರೀಕ್ಷೆ?

2024ರ ಮೇ 5ರಂದು 14 ಅಂತಾರಾಷ್ಟ್ರೀಯ ಸ್ಥಳಗಳು ಸೇರಿದಂತೆ 571 ನಗರಗಳಲ್ಲಿ, 4,750 ಕೇಂದ್ರಗಳಲ್ಲಿ 24 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಿದ್ದರು. ಜೂನ್ 4ರಂದು ಫಲಿತಾಂಶವನ್ನು ಪ್ರಕಟಿಸಲಾಯಿತು. ಬಳಿಕ 1,563 ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳು ದೊರೆತಿರುವುದು ಭಾರಿ ಸುದ್ದಿ ಆಯಿತು. ಸದ್ಯ ಪ್ರಕರಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಗ್ರೇಸ್ ಅಂಕದ ವಿವಾದ ದೇಶಾದ್ಯಂತ ಹರಡುತ್ತಿದ್ದಂತೆ ಕೇಂದ್ರ ಸರ್ಕಾರ ಗ್ರೇಸ್ ಅಂಕಗಳನ್ನು ಪಡೆದ 1,563 ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸುವುದಾಗಿ ಸುಪ್ರೀಂ ಕೋರ್ಟ್‌ಗೆ ಹೇಳಿತ್ತು. 1,563 ಅಭ್ಯರ್ಥಿಗಳಲ್ಲಿ ಯಾರಾದರೂ ಮರುಪರೀಕ್ಷೆಯಿಂದ ಹೊರಗುಳಿದಿದ್ದರೆ ಗ್ರೇಸ್ ಅಂಕಗಳಿಲ್ಲದ ಅವರ ಹಿಂದಿನ ಅಂಕಗಳನ್ನು ಫಲಿತಾಂಶಗಳಿಗಾಗಿ ಬಳಸಲಾಗುತ್ತದೆ ಎಂದೂ ಕೇಂದ್ರ ಕೋರ್ಟ್‌ಗೆ ತಿಳಿಸಿತ್ತು. ಅದರಂತೆ ಮರುಪರೀಕ್ಷೆ ನಡೆಸಲಾಗಿತ್ತು.

Continue Reading

ಪ್ರಮುಖ ಸುದ್ದಿ

ICC Team of the Tournament : ಐಸಿಸಿ ಟೀಮ್​ ಆಫ್​​ ದಿ ಟೂರ್ನಮೆಂಟ್​ನಲ್ಲಿ ಆರು ಭಾರತೀಯರು​; ಕೊಹ್ಲಿಗಿಲ್ಲ ಚಾನ್ಸ್​

ICC Team of the Tournament : ಫೈನಲ್ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 7 ರನ್ ಗಳಿಂದ ಬಗ್ಗು ಬಡಿದಿತ್ತು. ಇದರೊಂದಿಗೆ ಎಂ.ಎಸ್.ಧೋನಿ ಬಳಿಕ ಟಿ20 ವಿಶ್ವಕಪ್ ಗೆದ್ದ ಭಾರತದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. 2007ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಉದ್ಘಾಟನಾ ಆವೃತ್ತಿಯಲ್ಲಿ ಧೋನಿನೇತೃತ್ವದಲ್ಲಿ ಭಾರತ ಟ್ರೋಫಿ ಗೆದ್ದಿತ್ತು.

VISTARANEWS.COM


on

ICC Team of the Tournament
Koo

ಬೆಂಗಳೂರು: ಜೂನ್ 29 ರಂದು ವೆಸ್ಟ್​ ಇಂಡೀಸ್​ನ ಬಾರ್ಬಡೋಸ್​ನಲ್ಲಿ ನಡೆದ ಐಸಿಸಿ ಟಿ20 ವಿಶ್ವ ಕಪ್​ 2024ರ (ICC T20 World Cup 2024) ಫೈನಲ್​ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಟ್ರೋಫಿ ಗೆದ್ದಿತು. ಅಲ್ಲಿಗೆ ದೊಡ್ಡ ಅಧ್ಯಾಯವೊಂದು ಮುಗಿಯಿತು. ಇಡೀ ಟೂರ್ನಿಯಲ್ಲಿ ರೋಚಕ ಪಂದ್ಯಗಳು ಮತ್ತು ಅತ್ಯುತ್ತಮ ಪ್ರದರ್ಶನಗಳನ್ನು ಕಂಡವು. ಅವೆಲ್ಲವನ್ನೂ ಪರಿಗಣಿಸಿರುವ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ , ಫೈನಲ್ ಪಂದ್ಯದ ನಂತರ ಟೀಮ್ ಆಫ್​ ದಿ ಟೂರ್ನಮೆಂಟ್​ (ICC Team of the Tournament- ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 11 ಆಟಗಾರರ ತಂಡ) ಪ್ರಕಟಿಸಿದೆ. ಇದರಲ್ಲಿ 6 ಭಾರತೀಯ ಆಟಗಾರರು ಅವಕಾಶ ಪಡೆದಿದ್ದಾರೆ. ಆದರೆ ಸ್ಟಾರ್ ಬ್ಯಾಟರ್​ ವಿರಾಟ್ ಕೊಹ್ಲಿಗೆ ಚಾನ್ಸ್ ಸಿಕ್ಕಿಲ್ಲ.

ಫೈನಲ್ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 7 ರನ್ ಗಳಿಂದ ಬಗ್ಗು ಬಡಿದಿತ್ತು. ಇದರೊಂದಿಗೆ ಎಂ.ಎಸ್.ಧೋನಿ ಬಳಿಕ ಟಿ20 ವಿಶ್ವಕಪ್ ಗೆದ್ದ ಭಾರತದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. 2007ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಉದ್ಘಾಟನಾ ಆವೃತ್ತಿಯಲ್ಲಿ ಧೋನಿನೇತೃತ್ವದಲ್ಲಿ ಭಾರತ ಟ್ರೋಫಿ ಗೆದ್ದಿತ್ತು. ಹಾಗೆಯ ಐಸಿಸಿ ಟೀಮ್ ಆಫ್​ ದಿ ಟೂರ್ನಮೆಂಟ್​​ನಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ಜಸ್ಪ್ರೀತ್ ಬುಮ್ರಾ ಸೇರಿದಂತೆ ಭಾರತ ತಂಡದ ಆರು ಆಟಗಾರರು ಇದ್ದಾರೆ. ಆದರೆ, ರನ್ನರ್ ಅಪ್ ಸ್ಥಾನ ಪಡೆದರೂ ದಕ್ಷಿಣ ಆಫ್ರಿಕಾದ ಯಾವುದೇ ಆಟಗಾರರ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆದಿಲ್ಲ

ಸೆಮಿಫೈನಲ್ ತಲುಪಿದ ನಂತರ ಅಫ್ಘಾನಿಸ್ತಾನದ ಮೂವರು ಆಟಗಾರರು 11ರ ಬಳಗದಲ್ಲಿರುವುದು ವಿಶೇಷ. ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾದ ತಲಾ ಒಬ್ಬ ಆಟಗಾರ ಸ್ಥಾನ ಕಂಡುಕೊಂಡಿದ್ದಾರೆ. ಆಯ್ಕೆ ಸಮಿತಿಯಲ್ಲಿ ವೀಕ್ಷಕವಿವರಣೆಗಾರರಾದ ಹರ್ಷ ಭೋಗ್ಲೆ, ಇಯಾನ್ ಬಿಷಪ್, ಕಾಸ್ ನೈದೂ ಮತ್ತು ಐಸಿಸಿ ಕ್ರಿಕೆಟ್ ಜನರಲ್ ಮ್ಯಾನೇಜರ್ ವಾಸಿಮ್ ಖಾನ್ ಇದ್ದರು.

ರೋಹಿತ್ ಶರ್ಮಾ ತಂಡದ ನಾಯಕ

ಭಾರತವನ್ನು ಪ್ರಶಸ್ತಿಗೆ ಮುನ್ನಡೆಸಿದ ನಂತರ ರೋಹಿತ್ ಶರ್ಮಾ ಐಸಿಸಿ ಟೀಮ್ ಆಫ್​ ದಿ ಟೂರ್ನಮೆಂಟ್​ಗೂ ನಾಯಕ. ರೋಹಿತ್ 8 ಇನ್ನಿಂಗ್ಸ್​ಗಳಲ್ಲಿ 257 ರನ್ ಗಳಿಸಿ ಎರಡನೇ ಗರಿಷ್ಠ ರನ್ ಸ್ಕೋರರ್ ಆಗಿದ್ದರು. 281 ರನ್ ಗಳಿಸಿರುವ ರಹಮಾನುಲ್ಲಾ ಗುರ್ಬಾಜ್ ಇತ್ತೀಚೆಗೆ ಮುಕ್ತಾಯಗೊಂಡ ಟಿ 20 ಪಂದ್ಯಾವಳಿಯಲ್ಲಿ ರೋಹಿತ್ ಅವರಿಗಿಂತ ಮುಂದಿದ್ದರು. ಅವರು ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಮಧ್ಯಮ ಕ್ರಮಾಂಕದಲ್ಲಿ ವಿಂಡೀಸ್​ನ ನಿಕೋಲಸ್ ಪೂರನ್ ಹಾಗೂ ಮಾರ್ಕಸ್ ಸ್ಟೊಯಿನಿಸ್ ಇದ್ದಾರೆ. ಪೂರನ್ ಅಫ್ಘಾನಿಸ್ತಾನ ವಿರುದ್ಧ 53 ಎಸೆತಗಳಲ್ಲಿ 98 ರನ್ ಸೇರಿದಂತೆ 38 ಸರಾಸರಿಯಲ್ಲಿ 228 ರನ್ ಗಳಿಸಿದ್ದರು. ಸ್ಟೋಯ್ನಿಸ್ 40 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 169 ರನ್ ಗಳಿಸಿದ್ದಾರೆ. ಅವರು 160 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಸ್ಪರ್ಧೆಯ ಸಮಯದಲ್ಲಿ ಅವರು ಬೌಲಿಂಗ್​ನಲ್ಲಿ 10 ವಿಕೆಟ್ ಗಳನ್ನು ಪಡೆದಿದ್ದಾರೆ.

ಯುಎಸ್ಎ, ಅಫ್ಘಾನಿಸ್ತಾನ ಮತ್ತು ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್​ನಲ್ಲಿ ಕೊಡುಗೆ ನೀಡಿದರು. ವಿಶ್ವಕಪ್ ಫೈನಲ್​​ನ ಅಂತಿಮ ಓವರ್​ನಲ್ಲಿ ಸೂರ್ಯಕುಮಾರ್ ಡೇವಿಡ್ ಮಿಲ್ಲರ್ ಅವರ ಕ್ಯಾಚ್ ಪಡೆದು ಮಿಂಚಿದ್ದಾರೆ. ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ಈ ತಂಡದಲ್ಲಿದ್ದಾರೆ.

ಇದನ್ನೂ ಓದಿ: Dinesh Karthik : ಆರ್​​ಸಿಬಿ ಬ್ಯಾಟಿಂಗ್ ಕೋಚ್​, ಮಾರ್ಗದರ್ಶಕರಾಗಿ ದಿನೇಶ್​ ಕಾರ್ತಿಕ್ ನೇಮಕ

ಅಫ್ಘಾನಿಸ್ತಾನದ ನಾಯಕ ರಶೀದ್ ಖಾನ್ ಬೌಲಿಂಗ್ ಆಲ್ರೌಂಡರ್ ಆಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವೇಗದ ದಾಳಿಯಲ್ಲಿ ಜಸ್ಪ್ರೀತ್ ಬುಮ್ರಾ, ಅರ್ಷ್ದೀಪ್ ಸಿಂಗ್ ಮತ್ತು ಫಜಲ್ಹಾಕ್ ಫಾರೂಕಿ ಇದ್ದಾರೆ. ಟೂರ್ನಿಯಲ್ಲಿ 15 ವಿಕೆಟ್ ಪಡೆದ ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಅನ್ರಿಚ್ ನಾರ್ಟ್ಜೆ 12ನೇ ಆಟಗಾರನಾಗಿ ಆಯ್ಕೆಯಾಗಿದ್ದಾರೆ.

ಐಸಿಸಿ ಟಿ20 ವಿಶ್ವಕಪ್ ತಂಡ ಈ ರೀತಿ ಇದೆ

ರೋಹಿತ್ ಶರ್ಮಾ (ನಾಯಕ- ಭಾರತ), ರಹಮಾನುಲ್ಲಾ ಗುರ್ಬಾಜ್ (ಅಫ್ಘಾನಿಸ್ತಾನ), ನಿಕೋಲಸ್ ಪೂರನ್ (ವೆಸ್ಟ್ ಇಂಡೀಸ್), ಸೂರ್ಯಕುಮಾರ್ ಯಾದವ್ (ಭಾರತ), ಮಾರ್ಕಸ್ ಸ್ಟೊಯಿನಿಸ್ (ಆಸ್ಟ್ರೇಲಿಯಾ), ಹಾರ್ದಿಕ್ ಪಾಂಡ್ಯ (ಭಾರತ), ಅಕ್ಷರ್ ಪಟೇಲ್ (ಭಾರತ), ರಶೀದ್ ಖಾನ್ (ಅಫ್ಘಾನಿಸ್ತಾನ), ಜಸ್ಪ್ರೀತ್ ಬುಮ್ರಾ (ಭಾರತ), ಅರ್ಷ್ದೀಪ್ ಸಿಂಘಾ (ಭಾರತ), ಫಜಲ್ಹಾಕ್ ಫಾರೂಕಿ (ಅಫ್ಘಾನಿಸ್ತಾನ).

Continue Reading
Advertisement
Karave Protest
ಪ್ರಮುಖ ಸುದ್ದಿ4 mins ago

Karave Protest: ಕನ್ನಡಿಗರಿಗೆ ಉದ್ಯೋಗ ನೀಡಿ, ಇಲ್ಲವೇ ರಾಜ್ಯ ಬಿಟ್ಟು ತೊಲಗಿ: ಕರವೇ ಕಾರ್ಯಕರ್ತರ ಆಕ್ರೋಶ

Actor Darshan grandmother came running distant town to see and not punish him
ಸ್ಯಾಂಡಲ್ ವುಡ್24 mins ago

Actor Darshan: ದರ್ಶನ್‌ ತಪ್ಪು ಮಾಡಿದ್ದಾನೆ ಆದರೆ ಶಿಕ್ಷೆ ಕೊಡಬೇಡಿ ಎಂದು ದೂರದ ಊರಿಂದ ಓಡೋಡಿ ಬಂದ ಅಜ್ಜಿ!

ಚಿಕ್ಕಬಳ್ಳಾಪುರ25 mins ago

Dead Body Found : ಮರದಲ್ಲಿ ನೇತಾಡುತ್ತಿತ್ತು ಅಪರಿಚಿತನ ಶವ; ಸತ್ತವನ ಕೈ ಮೇಲಿತ್ತು ಲಕ್ಷ್ಮಿ ಹೆಸರಿನ ಹಚ್ಚೆ

Hurricane Beryl
ಪ್ರಮುಖ ಸುದ್ದಿ29 mins ago

Hurricane Beryl : ವೆಸ್ಟ್​ ಇಂಡೀಸ್​ನಲ್ಲಿ ಚಂಡಮಾರುತ, ಸಂಕಷ್ಟದಲ್ಲಿ ಸಿಲುಕಿದ ಚಾಂಪಿಯನ್ ಭಾರತ ತಂಡ

NEET UG 2024 Re-Test Result
ದೇಶ39 mins ago

NEET UG 2024 Re-Test Result: ನೀಟ್‌ ಮರುಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

National Doctor’s Day
ಆರೋಗ್ಯ43 mins ago

National Doctor’s Day: ಇಂದು ರಾಷ್ಟ್ರೀಯ ವೈದ್ಯರ ದಿನ; ಕಾಳಜಿಯ ಕೈಗಳಿಗೆ ಕೃತಜ್ಞತೆ ಹೇಳುವ ದಿನ

hassan murder case
ಕ್ರೈಂ52 mins ago

Murder Case: ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

Golden Star Ganesh Birthday Not Celebrating His Birthday This Year
ಸ್ಯಾಂಡಲ್ ವುಡ್52 mins ago

Golden Star Ganesh Birthday:  ಈ ವರ್ಷವೂ ಬರ್ತ್​ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ ಗೋಲ್ಡನ್ ಸ್ಟಾರ್ ಗಣೇಶ್

ICC Team of the Tournament
ಪ್ರಮುಖ ಸುದ್ದಿ55 mins ago

ICC Team of the Tournament : ಐಸಿಸಿ ಟೀಮ್​ ಆಫ್​​ ದಿ ಟೂರ್ನಮೆಂಟ್​ನಲ್ಲಿ ಆರು ಭಾರತೀಯರು​; ಕೊಹ್ಲಿಗಿಲ್ಲ ಚಾನ್ಸ್​

Job Alert
ಉದ್ಯೋಗ1 hour ago

Job Alert: HCLನಲ್ಲಿ ಖಾಲಿ ಇರುವ 56 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ 1 ಲಕ್ಷ ರೂ.ವರೆಗೆ: ಇಂದೇ ಅಪ್ಲೈ ಮಾಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ19 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌