Site icon Vistara News

Hassan Lok Sabha Constituency : ಅತ್ಯಾಚಾರ ಆರೋಪಿ ಪ್ರಜ್ವಲ್​ ರೇವಣ್ಣ ಹಾಸನದಲ್ಲಿ ಮತ್ತೆ ಗೆಲ್ಲುವರೇ?

Hassan Lok Sabha Constituency

ಹಾಸನ ಲೋಕಸಭಾ ಕ್ಷೇತ್ರವು ಆರಂಭದಲ್ಲಿ ಮೈಸೂರು ರಾಜ್ಯದ ಭಾಗವಾಗಿತ್ತು. 1957ರಲ್ಲಿ ಈ ಕ್ಷೇತ್ರವನ್ನು ಹಾಸನ ಎಂದು ಗುರುತಿಸಲಾಯಿತು. 1974 ರಲ್ಲಿ, ಹಾಸನ ಕ್ಷೇತ್ರವು ಕರ್ನಾಟಕದ ಭಾಗವಾಯಿತು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಈ ಲೋಕಸಭಾ ಕ್ಷೇತ್ರದಲ್ಲಿ ಐದು ಬಾರಿ ಗೆಲುವು ಸಾಧಿಸಿದ್ದಾರೆ. ಎರಡು ಬಾರಿ ಜನತಾದಳದಿಂದ ಹಾಗೂ ಮೂರು ಬಾರಿ ಜೆಡಿಎಸ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಈ ಬಾರಿ ಪ್ರಜ್ವಲ್ ರೇವಣ್ಣ ಅವರನ್ನು ಕಣಕ್ಕಿಳಿಸಿದೆ. 1999ರಲ್ಲಿ ದೇವೇಗೌಡರನ್ನು ಸೋಲಿಸಿದ್ದ ಮಾಜಿ ಸಂಸದ ದಿವಂಗತ ಜಿ.ಪುಟ್ಟಸ್ವಾಮಿಗೌಡ ಅವರ ಮೊಮ್ಮಗ ಶ್ರೇಯಸ್ ಎಂ.ಪಟೇಲ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸುವ ಮೂಲಕ ದಶಕಗಳ ಹಿಂದಿನ ರಾಜಕೀಯ ಹೋರಾಟಕ್ಕೆ ಮತ್ತೆ ಚಾಲನೆ ಸಿಕ್ಕಿದೆ.

ಬೆಂಗಳೂರಿನಿಂದ 200 ಕಿಲೋಮೀಟರ್ ದೂರದಲ್ಲಿರುವ ಈ ನಗರವು ಹೊಯ್ಸಳ ರಾಜರ ಪ್ರಾಚೀನ ತಾಣಗಳಿಗೆ ನೆಲೆಯಾಗಿದೆ. ಹಾಸನ ಲೋಕಸಭಾ ಕ್ಷೇತ್ರದ ಒಟ್ಟು ಜನಸಂಖ್ಯೆ ಸುಮಾರು 2,016,000. ಈ ಪೈಕಿ 1,561,000 ಮತದಾರರಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರದ ಜನಸಂಖ್ಯೆಯ ಸುಮಾರು 78% ರಷ್ಟು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿದ್ದರೆ, 22% ರಷ್ಟು ನಗರ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರವು ಎಂಟು ವಿಧಾನಸಭಾ ಸ್ಥಾನಗಳನ್ನು ಒಳಗೊಂಡಿದೆ.

ಹಾಸನ ಲೋಕಸಭೆ ಕ್ಷೇತ್ರ ಸಾಮಾನ್ಯ ವರ್ಗದ ಸಂಸತ್ ಸ್ಥಾನವಾಗಿದೆ. ಇದು ಇಡೀ ಹಾಸನ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಯ ಭಾಗವನ್ನು ಒಳಗೊಂಡಿದೆ. ಹಾಸನ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಡೂರು, ಶ್ರವಣಬೆಳಗೊಳ, ಅರಸೀಕೆರೆ, ಬೇಲೂರು, ಹಾಸನ, ಹೊಳೆನರಸೀಪುರ, ಅರಕಲಗೂಡು ಮತ್ತು ಸಕಲೇಶಪುರ ವಿಧಾನಸಭಾ ಕ್ಷೇತ್ರಗಳಿವೆ. ಜೆಡಿಎಸ್ 4, ಕಾಂಗ್ರೆಸ್ 2, ಬಿಜೆಪಿ 2 ಸ್ಥಾನಗಳನ್ನು ಹೊಂದಿವೆ.

ಹಿಂದಿನ ಫಲಿತಾಂಶಗಳು

2019ರ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ 6,76,606 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿಯ ಎ.ಮಂಜು 5,35,382 ಮತಗಳನ್ನು ಪಡೆದು ಎರಡನೇ ಸ್ಥಾನ ಪಡೆದರು. ಬಿಎಸ್ಪಿಯ ವಿನೋದ್ ರಾಜ್ ಕೆ.ಎಚ್ 38,761 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದುಕೊಂಡಿದ್ದರು.2019ರ ಚುನಾವಣೆಯಲ್ಲಿ ಜೆಡಿಎಸ್ ಶೇ.52.92ರಷ್ಟು ಮತಗಳನ್ನು ಪಡೆದಿತ್ತು.

2014ರ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು 5,09,841 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್ ನ ಎ.ಮಂಜು 4,09,378 ಮತಗಳನ್ನು ಪಡೆದು ಎರಡನೇ ಸ್ಥಾನ ಪಡೆದರು. ಬಿಜೆಪಿಯ ಸಿ.ಎಚ್.ವಿಜಯಶಂಕರ್ 1,65,688 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದರು. ಜೆಡಿಎಸ್ ಶೇ.44.44ರಷ್ಟು ಮತಗಳನ್ನು ಪಡೆದಿದೆ.

ಇದನ್ನೂ ಓದಿ: Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಎಚ್.ಡಿ.ದೇವೇಗೌಡ ಅವರು ಬಿಜೆಪಿಯ ಕೆ.ಎಚ್.ಹನುಮೇಗೌಡ ಅವರನ್ನು 2,91,113 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಜೆಡಿಎಸ್ ಶೇ.50.63ರಷ್ಟು ಮತಗಳನ್ನು ಪಡೆದಿತ್ತು.

ದೇವೇಗೌಡ ಕುಟುಂಬದ ಭದ್ರಕೋಟೆ

ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಹಾಸನ ಲೋಕಸಭಾ ಕ್ಷೇತ್ರವನ್ನು ಪಕ್ಷ ಮತ್ತು ಕುಟುಂಬದ ಭದ್ರಕೋಟೆಯಾಗಿ ಪರಿವರ್ತಿಸಿದ್ದಾರೆ. 1991ರಲ್ಲಿ ಅವರ ಮೊದಲ ವಿಜಯದ ನಂತರ, ಅವರು 1998, 2004, 2009 ಮತ್ತು 2014 ರಲ್ಲಿ ಮರು ಆಯ್ಕೆಯಾದರು.

ಹಾಸನ ಲೋಕಸಭಾ ಕ್ಷೇತ್ರದ ಒಟ್ಟು ಜನಸಂಖ್ಯೆ ಸುಮಾರು 2016000. 2011 ರ ಜನಗಣತಿಯ ಅಂಕಿಅಂಶಗಳ ಪ್ರಕಾರ ಸರಾಸರಿ ಸಾಕ್ಷರತಾ ಪ್ರಮಾಣವು ಸುಮಾರು 69.34% ರಷ್ಟಿತ್ತು. ಎಸ್ಸಿ ಮತದಾರರು ಸುಮಾರು 19.5% ರಷ್ಟಿದ್ದರೆ, ಎಸ್ಟಿ ಮತದಾರರು ಸುಮಾರು 1.8% ರಷ್ಟಿದ್ದಾರೆ. ಸುಮಾರು 1294690 ಗ್ರಾಮೀಣ ಮತದಾರರು 78.4% ರಷ್ಟಿದ್ದಾರೆ.

Exit mobile version