Hassan Pen Drive Case: ಪೆನ್‌ಡ್ರೈವ್‌ನಲ್ಲಿ ಅಶ್ಲೀಲ ವಿಡಿಯೊ ಅಪ್‌ಲೋಡ್‌ ಆಗಿದ್ದು ವಿದೇಶದಲ್ಲಿ! ದುಬೈನಲ್ಲಿ ನಡೆದಿದ್ದೇನು? - Vistara News

ಪ್ರಮುಖ ಸುದ್ದಿ

Hassan Pen Drive Case: ಪೆನ್‌ಡ್ರೈವ್‌ನಲ್ಲಿ ಅಶ್ಲೀಲ ವಿಡಿಯೊ ಅಪ್‌ಲೋಡ್‌ ಆಗಿದ್ದು ವಿದೇಶದಲ್ಲಿ! ದುಬೈನಲ್ಲಿ ನಡೆದಿದ್ದೇನು?

Hassan Pen Drive Case: ಅಶ್ಲೀಲ ವಿಡಿಯೊ ಹಂಚಿಕೆ ಹಿಂದೆ ಮಹಾ ಸಂಚು ನಡೆದಿದೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಸ್ಫೋಟಕ ಮಾಹಿತಿ ಹೊರಹಾಕಿದ್ದು, ವಿಡಿಯೊಗಳು ಅಪ್‌ಲೋಡ್‌ ಆಗಿದ್ದೆಲ್ಲಿ ಎಂಬ ಬಗ್ಗೆ ತಿಳಿಸಿದ್ದಾರೆ.

VISTARANEWS.COM


on

Hassan Pen drive Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಹುಬ್ಬಳ್ಳಿ: ಹಾಸನ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ (Hassan Pen Drive Case) ಸಂಸದ ಪ್ರಜ್ವಲ್‌ ರೇವಣ್ಣಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಹೊಸ ಬಾಂಬ್‌ ಸಿಡಿಸಿದ್ದು, ಅಶ್ಲೀಲ ವಿಡಿಯೊ ಹಂಚಿಕೆ ಹಿಂದೆ ಮಹಾ ಸಂಚು ನಡೆದಿದೆ ಎಂದು ಆರೋಪಿಸಿದ್ದಾರೆ. ಇನ್ನು ಪೆನ್‌ಡ್ರೈವ್‌ನಲ್ಲಿ ವಿಡಿಯೊಗಳು ಅಪ್‌ಲೋಡ್‌ ಆಗಿದ್ದೆಲ್ಲಿ ಎಂಬ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಈ ಪ್ರಕರಣದಲ್ಲಿ ಏ.21ರಂದು ರಾತ್ರಿ ಪೆನ್‌ಡ್ರೈವ್‌ ಮೂಲಕ ಅಶ್ಲೀಲ ವಿಡಿಯೊಗಳನ್ನು ವಾಟ್ಸ್ಆ್ಯಪ್‌ ಸೇರಿ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಕೋಡ್‌ ಮಾಡಿದ್ದಾರೆ. ಸಿಕ್ಕಸಿಕ್ಕಲ್ಲಿ ವಿಡಿಯೊಗಳನ್ನು ಅಪ್‌ಲೋಡ್‌ ಮಾಡಲು ಸಾಮಾನ್ಯರಿಂದ ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

ನನಗೆ ಬಂದಿರುವ ಮಾಹಿತಿ ಪ್ರಕಾರ, ಜಗತ್ತಿನಾದ್ಯಂತ ಈ ವಿಡಿಯೊಗಳಲ್ಲಿ ಹರಿಬಿಡಲು ದುಬೈನಲ್ಲಿ ಪ್ರಯತ್ನಿಸಲಾಗಿದೆ. ಅಲ್ಲಿಂದ ನೇರವಾಗಿ ಇಡೀ ದೇಶ, ವಿದೇಶಗಳಿಗೆ ವಿಡಿಯೊ ಹರಿಬಿಡಲು ಹೋಗಿದ್ದಾರೆ. ಆದರೆ, ಅವರ ಪ್ಲ್ಯಾನ್‌ ವಿಫಲವಾಗಿದೆ. ಹೀಗಾಗಿ ರಾಜ್ಯಕ್ಕೆ ಬಂದು, ಇಲ್ಲಿ ಪೆನ್‌ಡ್ರೈವ್‌, ವಾಟ್ಸ್ಆ್ಯಪ್‌ ಮೂಲಕ ಹಂಚಿಕೊಂಡಿದ್ದಾರೆ. ಫೋಟೊ, ವಿಡಿಯೊಗಳಲ್ಲಿ ಹೆಣ್ಣು ಮಕ್ಕಳ ಫೋಟೊ, ಮುಖಗಳನ್ನು ಬ್ಲರ್‌ ಮಾಡಬಹುದಿತ್ತು. ಆದರೆ, ಮಾಡಿಲ್ಲ. ಇದರಿಂದ ಆ ಕುಟುಂಬಗಳ ಪರಿಸ್ಥಿತಿ ಏನಾಗಬಹುದು. ಇದರಲ್ಲಿ ತಪ್ಪು ಮಾಡಿದ್ದವರ ಹಿನ್ನೆಲೆ ಬಹಿರಂಗಪಡಿಸಿಲ್ಲ. ಆದರೆ, ಮಹಿಳೆಯರ ಗೌರವ ಹಾಳು ಮಾಡಿದ್ದಾರೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಆರೋಪಿಸಿದ್ದಾರೆ.

ಇನ್ನು ಪ್ರಕರಣದ ಬಗ್ಗೆ ವಕೀಲ ದೇವರಾಜೇಗೌಡ ಬಗ್ಗೆ ಸಂದರ್ಶನ ನಡೆದಿದೆ. ಅವರ ಹಿನ್ನೆಲೆ ಏನು ಎಂದು ತಿಳಿಯಬೇಕು. 2019ರ ಚುನಾವಣೆಯಲ್ಲಿ ಪ್ರಜ್ವಲ್‌ ರೇವಣ್ಣ ಸ್ಪರ್ಧೆ ಮಾಡಿದಾಗ ಅಕ್ರಮ ಆಸ್ತಿ ಮಾಹಿತಿ ಮುಚ್ಚಿಟ್ಟಿದ್ದಾರೆ ಎಂದು ದೇವರಾಜೇಗೌಡ ನ್ಯಾಯಾಂಗ ಹೋರಾಟ ಮಾಡುತ್ತಿದ್ದಾರೆ. ಈಗ ಕಾರ್ತಿಕ್‌ ಎಂಬಾತನಿಂದ ಕಾಂಗ್ರೆಸ್‌ನ ಯಾರಿಗೂ ಕ್ಯಾಸೆಟ್‌ ಕೊಟ್ಟಿರಲಿಲ್ಲ ಎಂದು ಹೇಳಿಸಿದ್ದಾರೆ. ಆದರೆ, ಕಾರ್ತಿಕ್‌ ತನಗೆ ಕ್ಯಾಸೆಟ್‌ ನೀಡಿದ್ದ, ಈ ಮೊದಲು ಯಾರಿಗೆ ನೀಡಿದ್ದನೋ ಗೊತ್ತಿಲ್ಲ, ಆತನಿಗೆ ವಿಡಿಯೊ ಯಾರು ಕೊಟ್ಟರೋ ತಿಳಿಯದು ಎಂದು ದೇವರಾಜೇಗೌಡ ಹೇಳಿದ್ದಾರೆ. ಇದರಿಂದಲೇ ಗೊತ್ತಾಗುತ್ತದೆ, ಈ ಪ್ರಕರಣದ ಹಿಂದೆ ಯಾರಿದ್ದಾರೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಪ್ರಜ್ವಲ್‌ಗೆ ಕಾಂಗ್ರೆಸ್‌ ಸರ್ಕಾರದಿಂದಲೇ ಖೆಡ್ಡಾ? ಏನಿದು ಹಕೀಕತ್ತು? ಮಾಜಿ ಸಿಎಂ ಗರಂ ಆಗಿದ್ದೇಕೆ?

ಹುಬ್ಬಳ್ಳಿ: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ರಾಜ್ಯ ಸರ್ಕಾರದಿಂದಲೇ ಖೆಡ್ಡಾ ತೋಡಲಾಗಿದೆ. ಇದರ ಹಿಂದೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಇದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಈ ಸಂಬಂಧ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಈ ಪ್ರಕರಣದಲ್ಲಿ ವಿಡಿಯೊದಲ್ಲಿದ್ದ ಯಾವೊಬ್ಬ ಸಂತ್ರಸ್ತೆ ಸಹ ಸರ್ಕಾರದ ಬಳಿ ಬಂದು ದೂರು ಕೊಟ್ಟಿಲ್ಲ. ಮಹಿಳಾ ಆಯೋಗವು ನೀಡಿದ ವಿಡಿಯೊ ಸಾಕ್ಷ್ಯವನ್ನು ಇಟ್ಟುಕೊಂಡು ಕ್ರಮ ಕೈಗೊಂಡಿದೆ. ಇದಕ್ಕಿಂತ ಮೊದಲು ಮಹಿಳಾ ಆಯೋಗದ ಅಧ್ಯಕ್ಷರು ಸಿಎಂ ಸಿದ್ದರಾಮಯ್ಯ ಅವರಿಗೆ ಏಪ್ರಿಲ್‌ 25ರಂದು ಪತ್ರ ಬರೆಯುತ್ತಾರೆ. ಕೊನೆಗೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಎಸ್‌ಐಟಿ ತನಿಖೆಗೆ ಪ್ರಕರಣವನ್ನು ಕೊಡಲಾಗುತ್ತದೆ ಎಂದು ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಏಪ್ರಿಲ್‌ 28ರಂದು ಬೆಂಗಳೂರಿನಲ್ಲಿ ಕುಳಿತುಕೊಂಡು ಮಹಿಳೆಯೊಬ್ಬಳಿಂದ ದೂರನ್ನು ಬರೆಸಿಕೊಂಡು ಟೈಪ್‌ ಮಾಡಿಸಿಕೊಂಡು ಆ ಪ್ರಕರಣವನ್ನು ಹೊಳೆನರಸೀಪುರ ಪೊಲೀಸ್‌ ಠಾಣೆಗೆ ವರ್ಗಾವಣೆ ಮಾಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪವನ್ನು ಮಾಡಿದರು.

ಆ ಸಂತ್ರಸ್ತೆಯನ್ನು ಯಾರು ಬೆಂಗಳೂರಿಗೆ ಕರೆದುಕೊಂಡು ಬಂದರು? ಇನ್ನು ದೂರಿನ ಅನ್ವಯ ನೋಡುವುದಾದರೆ ಆ ಹೆಣ್ಣು ಮಗಳು 2012-13 ರಲ್ಲಿ ರೇವಣ್ಣ ಮನೆಯಲ್ಲಿ ಕೆಲಸಕ್ಕೆ ಇದ್ದಳು. ಜತೆಗೆ ಆಕೆ ಸಂಬಂಧಿ ಸಹ ಆಗಿದ್ದಳು ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ. ಈ ಘಟನೆ ನಡೆದಿರುವುದು 5 – 6 ವರ್ಷಗಳ ಹಿಂದೆ ನಡೆದಿರುವುದು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಾಗಾದರೆ, ಈ ಐದಾರು ವರ್ಷ ಕಂಪ್ಲೇಂಟ್‌ ಕೊಡದೆ ದೂರುದಾರರು ಏನು ಮಾಡುತ್ತಿದ್ದರು? ಈಗ ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೆ 5 ದಿನ ಬಾಕಿ ಇರುವಾಗ ಬಿಡುಗಡೆ ಮಾಡಿದ್ದರ ಹಿಂದಿನ ಉದ್ದೇಶ ಏನು? ಇದರ ಹಿಂದೆ ಯಾವ ಮಹಾನ್‌ ನಾಯಕರು ಇದ್ದಾರೆ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಹಾಗಂತ ಈ ಪೆನ್‌‌ ಡ್ರೈವ್ ಬಿಡುಗಡೆಯಾದ ಬಳಿಕ ಯಾರೂ ಎಲ್ಲಿಯೂ ಪ್ರತಿಭಟನೆಯನ್ನು ಮಾಡಿಸಲಿಲ್ಲ. ಬದಲಾಗಿ ನಮ್ಮ ಬಿಜೆಪಿ – ಜೆಡಿಎಸ್‌ ಮೈತ್ರಿಗೆ ಹಿನ್ನಡೆ ತರಲು ಕಸರತ್ತು ಮಾಡಿದ್ದಾರೆ. ಚುನಾವಣೆ ಮುಗಿದ ಮೇಲೆ ಅಂದರೆ ಏಪ್ರಿಲ್‌ 28ರ ಬಳಿಕ 2012-13ರ ಪ್ರಕರಣದ ಕಂಪ್ಲೇಂಟ್‌ ಪಡೆದು, ಎಫ್‌ಐಆರ್‌ ಮಾಡಿ, ಬಳಿಕ ಎಸ್‌ಐಟಿಗೆ ಈಗ ವರ್ಗಾವಣೆ ಮಾಡಿದ್ದಾರೆ. ವಿಪರ್ಯಾಸವೆಂದರೆ ಸಾರ್ವಜನಿಕರಿಂದ ಯಾವುದೇ ದೂರು ಬರದೇ ಎಸ್‌ಐಟಿಯನ್ನು ರಚನೆ ಮಾಡಿದ್ದಾಗಿ ಸಿಎಂ ಸಿದ್ದರಾಮಯ್ಯ ಅವರು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ನಮ್ಮ ಕುಟುಂಬದ ತೇಜೋವಧೆಯೇ ಇದರ ಉದ್ದೇಶ!

ಈ ಪ್ರಕರಣವನ್ನು ಗಮನಿಸಿದಾಗ ಸರ್ಕಾರಕ್ಕೆ ನಮ್ಮ ಕುಟುಂಬದ ವರ್ಚಸ್ಸನ್ನು ಸಂಪೂರ್ಣವಾಗಿ ನಾಶ ಮಾಡಬೇಕು ಎಂದಿದೆ ಎಂಬುದು ಗೊತ್ತಾಗುತ್ತದೆ. ಇಲ್ಲಿ ಇವರಿಗೆ ಮಹಿಳೆಯರನ್ನು ರಕ್ಷಣೆ ಮಾಡುವುದು ಬೇಕಾಗಿಲ್ಲ. ಈ ಪ್ರಕರಣವನ್ನು ಬಳಸಿಕೊಂಡು ದೇವೇಗೌಡರ ಹಾಗೂ ಕುಮಾರಸ್ವಾಮಿ ಅವರನ್ನು ತೇಜೋವಧೆ ಮಾಡುವ ಕೆಲಸವನ್ನು ಮಾಡಲಾಗುತ್ತಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಪ್ರಜ್ವಲ್‌ ರೇವಣ್ಣ ಅವರ ಫೋಟೊವನ್ನು ಸೇರಿಸಿ ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಲಾಗುತ್ತಿದೆ. ಈ ಪ್ರಕರಣ ಸಂಬಂಧ ಮೋದಿ ಅವರು ಉತ್ತರ ಕೊಡಬೇಕು ಎಂದು ಅಭಿಯಾನ ಮಾಡಲಾಗುತ್ತಿದೆ. ಮೋದಿಗೂ ಈ ಕೇಸ್‌ಗೂ ಏನು ಸಂಬಂಧ ಇದೆ? ಅವರ ಪಾತ್ರ ಇದರಲ್ಲೇನಿದೆ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ರಾಜ್ಯ ಸರ್ಕಾರದ ವಿರುದ್ಧ ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ; ಇಲ್ಲಿದೆ ಕಂಪ್ಲೀಟ್‌ ವಿಡಿಯೊ!

ಈ ಪ್ರಕರಣ ಹೊರಗೆ ಬಂದಾಗ ಸರ್ಕಾರದ ಭಾಗವಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ನನ್ನ ಮೇಲೆ ನಿರಂತರವಾಗಿ ವಾಗ್ದಾಳಿ ಮಾಡುತ್ತಲೇ ಬಂದಿದ್ದಾರೆ. ನಾನು ಈ ಹಿಂದೆ ಹೇಳಿದ್ದ ಪೆನ್‌ಡ್ರೈವ್‌ ಇದೇನಾ ಎಂದು ವ್ಯಂಗ್ಯವಾಗಿ ಕೇಳಿದ್ದಾರೆ. ಆ ಪೆನ್‌ಡ್ರೈವ್‌ ನನ್ನ ಬಳಿ ಇದೆ. ಅದನ್ನು ಯಾವಾಗ ಬಿಡುಗಡೆ ಮಾಡಬೇಕೋ ಆಗ ಮಾಡುತ್ತೇನೆ. ನಾನು ನನ್ನ ಜೀವನದಲ್ಲಿ ಇಂಥ ಪೆನ್‌ಡ್ರೈವ್‌ಗಳನ್ನು ಮಾಡಿಲ್ಲ. ಇಂಥ ಪೆನ್‌ಡ್ರೈವ್‌ಗಳನ್ನು ಮಾಡುವುದು ಅವರ ಸಂಪ್ರದಾಯ. ಅವರು ಈ ಹಿಂದೆ ಇದನ್ನೇ ಮಾಡಿಕೊಂಡು ಬಂದಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ಹೆಣ್ಣು ಮಕ್ಕಳನ್ನು ಕೂಡಿ ಹಾಕಿಕೊಂಡು ಕೇಸ್‌ ಮಾಡಿದ್ದರಲ್ಲ ಎಂದು ಡಿ.ಕೆ. ಶಿವಕುಮಾರ್‌ ವಿರುದ್ಧ ಕಿಡಿಕಾರಿದರು.

ರಾಕೇಶ್‌ ಸಿದ್ದರಾಮಯ್ಯ ಸಾವಿನ ವೇಳೆ ಏನಾಗಿತ್ತು ಎಂದೂ ಹೇಳುತ್ತೇನೆ: ಎಚ್‌.ಡಿ. ಕುಮಾರಸ್ವಾಮಿ

ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅವರ ಮನೆಯಲ್ಲಿ ನಡೆದಿದ್ದ ವಿಚಾರವನ್ನು ಹೊರಗಡೆ ತರುತ್ತೇನೆ ಎಂದು ರಾಕೇಶ್ ಸಿದ್ದರಾಮಯ್ಯ (Rakesh Siddaramaiah) ಸಾವಿನ ಸಂದರ್ಭದಲ್ಲಿ ನಡೆದ ವಿಚಾರವನ್ನು ಎಚ್‌ಡಿಕೆ ಎಳೆದು ತಂದಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದಲ್ಲಿ ನಡೆದಿದ್ದ ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಅವರು ಯಾವ ರೀತಿ ಸಹಾಯ ಮಾಡಿದ್ದಾರೆ ಎಂಬುದನ್ನು ಮರೆತಿದ್ದೀರಿ. ಎಲ್ಲ ದಾಖಲೆಗಳನ್ನು ನಾವು ಹೊರಗಡೆ ತರುತ್ತೇವೆ. ನಿಮ್ಮ ಕುಟುಂಬದಲ್ಲಿ ನಡೆದ ಘಟನೆ ಏನೇನಾಯಿತು ಎಲ್ಲವೂ ಹೊರಗೆ ಬರಲಿದೆ ಎಂದು ಎಚ್ಚರಿಕೆ ನೀಡಿದರು.

ನಮ್ಮ ಮನೆಯ ಎದುರು ಏಕೆ ಪ್ರತಿಭಟನೆ ಮಾಡುತ್ತೀರಿ. ಇದನ್ನು ಇಷ್ಟಕ್ಕೆ ಬಿಡಲ್ಲ. ಎಲ್ಲ ವಿಷಯವೂ ತನಿಖೆಯಾಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ‌ಎಚ್‌.ಡಿ. ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಕಾಂಗ್ರೆಸ್‌ನವರು ನಮ್ಮ ಮನೆ ಬಳಿ ಬಂದು ಪ್ರತಿಭಟಿಸುತ್ತಿದ್ದಾರೆ. ಮಹಾನುಭಾವನ ಮನೆ ಮುಂದೆ ಹೋಗಿ ಪ್ರತಿಭಟನೆ ಮಾಡಿ. ಡಿಸಿಎಂ ಡಿ.ಕೆ. ಶಿವಕುಮಾರ್‌ ಮನೆ ಬಳಿ ಹೋಗಿ ಪ್ರತಿಭಟನೆ ಮಾಡಿ. ಎಚ್‌.ಡಿ. ರೇವಣ್ಣ ಕುಟುಂಬದ ಬಗ್ಗೆ ವಿಷಯವನ್ನು ಕೆದಕಿದ್ದಾರೆ. ನಾನು ಚರ್ಚೆ ಮಾಡಲು ಸಿದ್ಧ. ಪಲಾಯಾನ ಮಾಡುವುದಿಲ್ಲ. ಕಾಂಗ್ರೆಸ್‌ ನಾಯಕ ಮಹಾಪರಾಧ ಮಾಡಿದ್ದಾನೆ. ಎಷ್ಟು ತಿಂಗಳ ಹಿಂದೆ ಆ ಮಹಾನ್‌ ನಾಯಕನಿಗೆ ಗೊತ್ತಿತ್ತು. ಪೆನ್‌ಡ್ರೈವ್‌ ಯಾರು ಸರಬರಾಜು ಮಾಡಿದರು ಎಲ್ಲವೂ ಗೊತ್ತಿದೆ. ಈ ಮಹಾನ್‌ ನಾಯಕನ ನಡವಳಿಕೆಯ ಬಗ್ಗೆಯೂ ಚರ್ಚಿಸೋಣ. ನಿನ್ನೆ ಹಾಸನ ಜಿಲ್ಲಾಧಿಕಾರಿ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಸರ್ಕಾರದ ಹುನ್ನಾರ ಅಡಗಿದೆ ಎಂದು ಕಿಡಿಕಾರಿದರು.

ಹಲವು ವಿಷಯಗಳಿವೆ, ಎಲ್ಲವನ್ನೂ ಹೇಳುವೆ

ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಸಂಬಂಧ ಹಲವು ವಿಷಯಗಳಿವೆ. ಅದನ್ನು ನಾನು ಹೇಳುತ್ತೇನೆ. ಮಹಾನ್‌ ನಾಯಕ ಮಹಿಳೆಯರ ಬದುಕನ್ನು ಬೀದಿಗೆ ತಂದಿದ್ದಾನೆ. ಇದರ ಬಗ್ಗೆಯೂ ನಾವು ಚರ್ಚೆ ಮಾಡಬೇಕಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಗುಡುಗಿದರು.

ಮಾತೃ ಶಕ್ತಿ ಪರ ನಿಲ್ಲುವುದಾಗಿ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಮಿತ್‌ ಶಾ ಅವರು ಪ್ರಜ್ವಲ್‌ ರೇವಣ್ಣ ಬಗ್ಗೆ ಚರ್ಚೆ ಮಾಡಿಲ್ಲ. ಪ್ರಜ್ವಲ್‌ ವಿರುದ್ಧದ ಕ್ರಮ ತೆಗೆದುಕೊಳ್ಳುವ ವಿಷಯವನ್ನು ನಮಗೆ ಬಿಟ್ಟಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್ ಪ್ರಕರಣದಲ್ಲಿ ರೇವಣ್ಣ-ಸಿದ್ದರಾಮಯ್ಯ ಒಪ್ಪಂದ; ಪ್ರಲ್ಹಾದ್ ಜೋಶಿ ಹೇಳಿದ್ದೇನು?

ನಿಮ್ಮ ಜತೆ ನಾವಿದ್ದೇವೆ

ತಪ್ಪಾಗಿದ್ದರೆ ಶಿಕ್ಷೆಯಾಗಬೇಕೆಂದು ನಾನೇ ಹೇಳಿದ್ದೇನೆ. ಕಾನೂನು ವ್ಯಾಪ್ತಿಯಲ್ಲಿ ಏನಾಗಬೇಕೆಂದು ಚರ್ಚಿಸುತ್ತೇವೆ. ಈ ಬಗ್ಗೆ ಯಾರೂ ಗಾಬರಿಯಾಗಬೇಡಿ, ಆತಂಕ ಬೇಡ. ಯಾವುದೇ ಮಹಿಳೆಯರಿಗೆ ಅನ್ಯಾಯವಾದರೂ ಧ್ವನಿ ಎತ್ತುತ್ತೇವೆ. ನಿಮ್ಮ ಜತೆ ಎಚ್.ಡಿ. ದೇವೇಗೌಡ ಹಾಗೂ ನಾವು ಇದ್ದೇವೆ ಎಂದು ಎಚ್.ಡಿ. ಕುಮಾರಸ್ವಾಮಿ ಅಭಯ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

VISTARANEWS.COM


on

ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ ಪದಗ್ರಹಣದ ಬಳಿಕ ತಮ್ಮ ಮೊದಲ ಭಾಷಣದಲ್ಲಿ ಜನತೆಗೆ ತಾನು ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುವುದಾಗಿ ಸ್ಪಷ್ಟಪಡಿಸಿದರು.

“ನಾನು ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇನೆ. ತಮಿಳುನಾಡಿನ 8 ಕೋಟಿ ಜನರೂ ನನ್ನವರೇ. ನಾನು ನಿಮ್ಮಲ್ಲೊಬ್ಬ., ನಿಮ್ಮ ಕುಟುಂಬದ ಸದಸ್ಯ, ನಿಮ್ಮ ಮನೆ ಮಗನಾಗಿ ಕೆಲಸ ಮಾಡುತ್ತೇನೆ” ಎಂದು ವಿಜಯ್‌ ಹೇಳಿದರು.

“ಇಲ್ಲಿರುವುದು ಒಂದೇ ಪವರ್‌ ಸೆಂಟರ್‌. ಆ ಕಡೆ ಒಂದು, ಈ ಕಡೆ ಒಂದು ಪವರ್‌ ಸೆಂಟರ್‌ ಇಲ್ಲ. ತಮಿಳುನಾಡಿನಲ್ಲಿ ಹೊಸ ಯುಗಾರಂಭ ಆಗಿದೆ” ಎಂದು ಅವರು ಘೋಷಿಸಿದರು.

ಹಿಂದೂ, ಕ್ರೈಸ್ತ ಹಾಗೂ ಮುಸ್ಲಿಂ ಸೇರಿದಂತೆ ಎಲ್ಲ ಧರ್ಮಗಳ ಜನರ ಹಿತ ಕಾಪಾಡುವುದಾಗಿ ಹೇಳಿದ ವಿಜಯ್‌, “ನಿಜವಾದ ಜಾತ್ಯಾತೀತ ಹಾಗೂ ಸಮಾಜವಾದಿ ಆಡಳಿತ ಆರಂಭವಾಗಿದೆ” ಎಂದು ತಿಳಿಸಿದರು.

ತಮ್ಮ ಸರ್ಕಾರ ರಚನೆಗೆ ಬೆಂಬಲ ನೀಡಿದ ಕಾಂಗ್ರೆಸ್‌, ವಿಸಿಕೆ ಹಾಗೂ ಎಡಪಕ್ಷಗಳಿಗೆ ಧನ್ಯವಾದ ಅರ್ಪಿಸಿದ ವಿಜಯ್‌, “ನನ್ನ ಸಹೋದರ ರಾಹುಲ್‌ ಗಾಂಧಿಗೆ ವಿಶೇಷ ಧನ್ಯವಾದ” ಎಂದರು.

“ನನ್ನ ಜನರ ಹಣ ಲೂಟಿ ಮಾಡಲು ನಾನು ಬಿಡುವುದಿಲ್ಲ” ಎಂದು ಭ್ರಷ್ಟಾಚಾರ ವಿರುದ್ಧ ಕಠಿಣ ನಿಲುವು ತಾಳುವುದಾಗಿ ಸಿಎಂ ವಿಜಯ್‌ ಸ್ಪಷ್ಟಪಡಿಸಿದರು.

Continue Reading

Latest

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

VISTARANEWS.COM


on

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಜೋಸೆಫ್‌ ವಿಜಯ್‌ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಚೆನ್ನೈನ ನೆಹರೂ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ದೇವರ ಹೆಸರಿನಲ್ಲಿ ವಿಜಯ್‌ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಮಾಡಿದರು.

ಟಿವಿಕೆ ಪಕ್ಷ ಕಾಂಗ್ರೆಸ್‌, ವಿಸಿಕೆ ಮತ್ತು ಎಡಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಿದೆ. ಸಚಿವ ಸಂಪುಟದಲ್ಲಿ ಎನ್‌. ಆನಂದ್‌, ಆಥವ್‌ ಅರ್ಜುನ್‌, ಡಾ. ಅರುಣ್‌ ರಾಜ್‌, ಕೆ.ಎ. ಸೆಂಗೋಟ್ಟಿಯ್ಯನ್‌, ಪಿ. ವೆಂಕಟರಮಣನ್‌, ಆರ್‌. ನಿರ್ಮಲ್‌ ಕುಮಾರ್‌, ಎ.ರಾಜ್‌ ಮೋಹನ್‌, ಟಿ.ಕೆ. ಪ್ರಭು, ಸೆಲ್ವಿ ಎಸ್‌. ಕೀರ್ತನಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಚಿತ್ರನಟಿ ತ್ರಿಶಾ, ವಿಜಯ್‌ ತಂದೆತಾಯಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ವಿಜಯ್‌ ಪದಗ್ರಹಣ ಸಮಾರಂಭಕ್ಕೆ ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು.

Continue Reading

ಪ್ರಮುಖ ಸುದ್ದಿ

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

VISTARANEWS.COM


on

ವಿಜಯ್ ನೇತೃತ್ವದ ಟಿವಿಕೆ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ. ಇಂದು ಸಂಜೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್‌, ತಮಗೆ ಒಟ್ಟು 120 ಶಾಸಕರ ಬೆಂಬಲವಿರುವುದಾಗಿ ತಿಳಿಸಿದ್ದಾರೆ.

ಟಿವಿಕೆ ಮೈತ್ರಿಗೆ ದೊರೆತ ಶಾಸಕರ ಬೆಂಬಲ ಹೀಗಿದೆ:

  • ಟಿವಿಕೆ – 107
  • ಕಾಂಗ್ರೆಸ್‌ – 5
  • ಸಿಪಿಐ – 2
  • ಸಿಪಿಎಂ – 2
  • ವಿಸಿಕೆ – 2
  • ಐಯುಎಂಎಲ್‌ – 2

ಒಟ್ಟು 120 ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚನೆಗೆ ಟಿವಿಕೆ ಮುಂದಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ನಾಲ್ಕನೇ ಬಾರಿಗೆ ವಿಜಯ್‌ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ನಾಳೆ ಭಾನುವಾರ ಮಧ್ಯಾಹ್ನ 3 ಗಂಟೆಗೆ ವಿಜಯ್‌ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಚೆನ್ನೈ ನ ನೆಹರೂ ಮೈದಾನದಲ್ಲಿ ವಿಜಯ್‌ ಪದಗ್ರಹಣ ನಡೆಯುವ ನಿರೀಕ್ಷೆಯಿದೆ.

ಟಿವಿಕೆ ಬೆಂಬಲಿಗರಲ್ಲಿ ಈಗಾಗಲೇ ಸಂಭ್ರಮ ಮನೆಮಾಡಿದ್ದು, ಸಿಎಂ ಆಗಿ ವಿಜಯ್‌ ಪದಗ್ರಹಣದೊಂದಿಗೆ ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ.

Continue Reading

Latest

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

VISTARANEWS.COM


on

ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ವಿಜಯ್‌ ನೇತೃತ್ವದ ಟಿವಿಕೆ ಸರ್ಕಾರ ರಚನೆಗೆ ಸಂಖ್ಯಾಬಲ ಹೆಚ್ಚಿಸಿಕೊಳ್ಳುವ ಪ್ರಯತ್ನ ಮುಂದುವರಿಸಿದೆ. ವಿಸಿಕೆ ಬೆಂಬಲ ಪಡೆಯುವಲ್ಲಿ ವಿಜಯ್ ಪಡೆ ಬಹುತೇಕ ಯಶಸ್ವಿಯಾಗಿದೆ ಎನ್ನಲಾಗುತ್ತಿದೆ. ಚೆನ್ನೈನ ಮಾಮಲ್ಲಪುರಂನ ಖಾಸಗಿ ಹೋಟೆಲ್‌ನಲ್ಲಿ ಮಧ್ಯಾಹ್ನ ಟಿವಿಕೆ ಶಾಸಕರ ಸಭೆ ನಡೆಯಲಿದೆ.
ಇಂದು ಸಂಜೆ 4 ಗಂಟೆಗೆ ವಿಸಿಕೆ ಸುದ್ದಿಗೋಷ್ಠಿ ನಡೆಸಲಿದ್ದು, ಬೆಂಬಲ ಘೋಷಣೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ಕಾಂಗ್ರೆಸ್‌ ಹಾಗೂ ಎಡಪಕ್ಷಗಳು ಟಿವಿಕೆಗೆ ಬೆಂಬಲ ಸೂಚಿಸಿವೆ.
ಸದ್ಯ ವಿಜಯ್ ನೇತೃತ್ವದ ಮೈತ್ರಿಗೆ 116 ಶಾಸಕರ ಬೆಂಬಲವಿದೆ. ವಿಸಿಕೆ ಯ ಇಬ್ಬರು ಶಾಸಕರು ಬೆಂಬಲ ನೀಡಿದರೆ ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲ ಸಿಗಲಿದೆ.
ಇಂದು ಸಂಜೆ ವಿಜಯ್‌ ಅವರು ತಮಿಳುನಾಡು ರಾಜ್ಯಪಾಲ ರಾಜೇಂದ್ರ ಅರ್ಲೇಕರ್‌ ಅವರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸುವ ಸಾಧ್ಯತೆಯಿದೆ.
ಸಂಖ್ಯಾಬಲ ಹೀಗಿದೆ:
ಟಿವಿಕೆ – 107
ಕಾಂಗ್ರೆಸ್‌ – 5
ಎಡಪಕ್ಷಗಳು – 4
ವಿಸಿಕೆ – 2

Continue Reading
Advertisement
Latest18 hours ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ20 hours ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest21 hours ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest22 hours ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

ಪ್ರಮುಖ ಸುದ್ದಿ2 days ago

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

Latest2 days ago

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

Latest2 days ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ3 days ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ3 days ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ3 days ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌