Site icon Vistara News

Hathras Stampede : ಹತ್ರಾಸ್​ ಸತ್ಸಂಗದಲ್ಲಿ ಕಾಲ್ತುಳಿತಕ್ಕೆ ಮೃತಪಟ್ಟವರ ಸಂಖ್ಯೆ 107 ಕ್ಕೆ ಏರಿಕೆ

Hathras Stampede

Crowd of over 2.5 lakh and a rush to touch baba's feet: What led to Hathras stampede

ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್​​ನಲ್ಲಿ ಮಂಗಳವಾರ ಸತ್ಸಂಗ ನಡೆಯುತ್ತಿದ್ದ ವೇಳೆ ಉಂಟಾದ ಕಾಲ್ತುಳಿತಕ್ಕೆ 107 ಜನರು (Hathras Stampede) ಮೃತಪಟ್ಟಿದ್ದಾರೆ. ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು. ಮೃತರನ್ನು ಹತ್ರಾಸ್ ಮತ್ತು ನೆರೆಯ ಇಟಾ ಜಿಲ್ಲೆಯ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಅಲಿಗಢದ ಕಮಿಷನರ್ ಚೈತ್ರಾ ವಿ ಅವರು 107 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ್ದಾರೆ. ಅದರಲ್ಲಿ 27 ಜನರು ಇಟಾ ಜಿಲ್ಲೆಯವರು. ಕಾಲ್ತುಳಿತಕ್ಕೆ ಸುಮಾರು 18 ಜನರು ಗಾಯಗೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಹಿರಿಯ ಪೊಲೀಸ್ ಅಧಿಕಾರಿ ರಾಜೇಶ್ ಕುಮಾರ್ ಸಿಂಗ್, ಹತ್ರಾಸ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆಯುತ್ತಿದ್ದ ಸತ್ಸಂಗದಲ್ಲಿ ಕಾಲ್ತುಳಿತ ಸಂಭವಿಸಿದೆ ಎಂದು ಮಾಹಿತಿ ನೀಡಿದ್ದಾರೆ. ‘ಸಕರ್ ವಿಶ್ವ ಹರಿ’ ಅಥವಾ ‘ಭೋಲೆ ಬಾಬಾ’ ಎಂದೂ ಕರೆಯಲ್ಪಡುವ ಸ್ವಯಂ ಘೋಷಿತ ದೇವಮಾನವ ನಾರಾಯಣ್ ಸಕರ್ ಹರಿ ಅವರಿಗೆ ಸೇರಿದ “ಮಾನವ್ ಮಂಗಲ್ ಮಿಲನ್ ಸದ್ಭಾವನಾ ಸಮಾಗಮ್’ ಸಮಿತಿ ಸತ್ಸಂಗ ಆಯೋಜಿಸಿತ್ತು.

ನಜ್ಜುಗುಜ್ಜಾದ ಜನ


ಈ ಭಯಾನಕ ಘಟನೆಯ ಪ್ರತ್ಯಕ್ಷದರ್ಶಿಯೊಬ್ಬರು “ನಾವು ಸತ್ಸಂಗಕ್ಕಾಗಿ ಬಂದಿದ್ದೆವು. ದೊಡ್ಡ ಜನಸಮೂಹವಿತ್ತು. ಸತ್ಸಂಗ ಮುಗಿದ ನಂತರ ನಾವು ಹೊರಡಲು ಪ್ರಾರಂಭಿಸಿದೆವು. ನಿರ್ಗಮನ ದ್ವಾರ ಕಿರಿದಾಗಿತ್ತು. ನಾವು ಮೈದಾನದ ಕಡೆಗೆ ನಿರ್ಗಮಿಸಲು ಪ್ರಯತ್ನಿಸಿದಾಗ, ಇದ್ದಕ್ಕಿದ್ದಂತೆ, ಗದ್ದಲ ಪ್ರಾರಂಭವಾಯಿತು ಎಂದು ಹೇಳಿದ್ದಾರೆ.

ನಿಧನಕ್ಕೆ ರಾಷ್ಟ್ರೀಯ ನಾಯಕರ ಸಂತಾಪ

ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ ಅಧ್ಯಕ್ಷ ದ್ರೌಪದಿ ಮುರ್ಮು, ಈ ಘಟನೆ ಹೃದಯ ದುಃಖಕರ ಎಂದು ಹೇಳಿದ್ದಾರೆ. “ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಅನೇಕ ಭಕ್ತರು ಸಾವನ್ನಪ್ಪಿದ ಸುದ್ದಿ ಆಘಾತ ತಂದಿದೆ. ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಅವರು ತಮ್ಮ ಅಧಿಕೃತ ಎಕ್ಸ್ ಹ್ಯಾಂಡಲ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Pune Porsche Crash : ಪೋರ್ಶೆ ಕಾರು ಗುದ್ದಿಸಿ ಇಬ್ಬರ ಸಾವಿಗೆ ಕಾರಣನಾದ ಬಾಲಕನ ಅಪ್ಪ, ಅಜ್ಜನಿಗೆ ಜಾಮೀನು

ಲೋಕಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಹತ್ರಾಸ್​​ ದುರಂತದಲ್ಲಿ ಪ್ರಾಣ ಕಳೆದುಕೊಂಡವರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ರಾಜ್ಯ ಸರ್ಕಾರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಕೇಂದ್ರ ಸರ್ಕಾರ ಸಂಪರ್ಕದಲ್ಲಿದೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುವುದು” ಎಂದು ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಎಕ್ಸ್​ ಪೋಸ್ಟ್​​ ಮಾಡಿ, ದುರಂತದಿಂದ ನನಗೆ ತೀವ್ರ ದುಃಖವಾಗಿದೆ. ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪ ಸೂಚಿಸುತ್ತೇನೆ. ಈ ನೋವನ್ನು ಭರಿಸುವ ಶಕ್ತಿಯಷನ್ನು ದೇವರು ಅವರಿಗೆ ನೀಡಲಿ. ಸ್ಥಳೀಯ ಆಡಳಿತವು ಪರಿಹಾರ ಕಾರ್ಯದಲ್ಲಿ ತೊಡಗಿದೆ ಎಂದು ಹೇಳಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿನಾಥ, ತಕ್ಷಣವೇ ಸ್ಥಳಕ್ಕೆ ತಲುಪಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಮುಖ್ಯಮಂತ್ರಿಗಳು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಆದಿತ್ಯನಾಥ್ ಅವರು ಪೊಲೀಸ್ ಮಹಾನಿರ್ದೇಶಕರು, ಇಬ್ಬರು ಹಿರಿಯ ಸಚಿವರು ಮತ್ತು ಮುಖ್ಯ ಕಾರ್ಯದರ್ಶಿಯನ್ನು ಸ್ಥಳಕ್ಕೆ ಕಳುಹಿಸಿದ್ದಾರೆ.

ಇದೊಂದು ಅತ್ಯಂತ ನೋವಿನ ಘಟನೆ ಎಂದು ಹೇಳಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ” ದುಃಖಿತ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ/ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Exit mobile version